Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಳೆದ ಬಿಗ್ ಬಾಸ್ ಸೀಸನ್ 11 ರಲ್ಲಿ ಇದೇ ನನ್ನ ಕೊನೆಯ ಬಿಗ್ ಬಾಸ್ ಎಂದು ನಟ ಕಿಚ್ಚ ಸುದೀಪ್ ಹೇಳಿ ಎಲ್ಲರಿಗೂ ಶಾಕ್ ನೀಡಿದ್ದರು. ಆದರೆ ಇದೀಗ ಬಿಗ್ ಬಾಸ್ ಸೀಸನ್ 12 ಸೆಪ್ಟೆಂಬರ್ 28 ರಿಂದ ಗ್ರಾಂಡ್ ಓಪನಿಂಗ್ ಆಗಲಿದ್ದು ಇದಕ್ಕೆ ಇದೀಗ ಮತ್ತೆ ಕಿಚ್ಚ ಸುದೀಪ್ ಅವರೇ ನಿರೂಪಣೆ ಮಾಡಲಿದ್ದಾರೆ. ಹೌದು ಈಗಾಗಲೇ ಕನ್ನಡದಲ್ಲಿ 11 ಸೀಸನ್ಗಳು ಯಶಸ್ವಿಯಾಗಿ ಮುಗಿದಿವೆ. ಈಗ 12ನೇ ಸೀಸನ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೀಘ್ರದಲ್ಲೇ ಆರಂಭ ಆಗಲಿದೆ. ಕಿಚ್ಚ ಸುದೀಪ್ ಅವರು ನಿರೂಪಣೆ ಮಾಡಲು ಸಜ್ಜಾಗಿದ್ದಾರೆ. ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಬಿಗ್ ಬಾಸ್ ಪ್ರಸಾರ ಆಗಲಿದ್ದು, ಈಗ ಪ್ರೋಮೋ ಬಿಡುಗಡೆ ಮಾಡಲಾಗಿದೆ. ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಪ್ರೋಮೋ ಬಂದಿದೆ. ಕರ್ನಾಟಕದಲ್ಲಿ ಸಖತ್ ವೈವಿದ್ಯತೆ ಇದೆ. ಊಟ, ಉಡುಗೆ, ಅಭಿರುಚಿಯಲ್ಲೂ ತುಂಬ ವೈವಿದ್ಯತೆ ಇದೆ. ಕೆಲವರಿಗೆ ಸುದ್ದಿ ಇಷ್ಟ, ಇನ್ನು ಕೆಲವರಿಗೆ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜೊತೆಗೆ ಐದು ನಗರ ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿದ್ದು, ಪ್ರಾಧಿಕಾರ ಹಾಗೂ ಐದು ನಗರ ಪಾಲಿಕೆಗಳಿಗೆ ಆಯುಕ್ತರು, ವಿಶೇಷ ಆಯಕ್ತರುಗಳನ್ನು ನೇಮಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಆ ಮೂಲಕ ಬಿಬಿಎಂಪಿ ಇತಿಹಾಸ ಪುಟ ಸೇರಿತು. ಇಂದಿನಿಂದ ಐದು ನಗರ ಪಾಲಿಕೆಗಳು ಪ್ರತ್ಯೇಕವಾಗಿ ಕಾರ್ಯನಿರ್ವಹಿಸಲಿದ್ದು, ಬುಧವಾರದಿಂದ ಆಯಾ ನಗರ ಪಾಲಿಕೆಗಳು ತೆರಿಗೆ ಸಂಗ್ರಹ ಮಾಡಲಿದೆ. ಇತ್ತ ಜಿಬಿಎ ಕೇಂದ್ರ ಕಚೇರಿಯಲ್ಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಂಬ ನಾಮಫಲಕ ತೆಗೆದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಫಲಕವನ್ನು ಅಳವಡಿಸಲಾಗಿದೆ. ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ವಿಮ ನಗರ ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿದ್ದು, ಪ್ರತಿ ನಗರ ಪಾಲಿಕೆಗಳು ತಲಾ ಎರಡು ವಲಯಗಳಂತೆ ಒಟ್ಟು 10 ವಲಯಗಳನ್ನು ಹೊಂದಿರಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ 198 ವಾರ್ಡುಗಳನ್ನೇ ಐದು ನಗರ ಪಾಲಿಕೆಗಳಿಗೆ ವಿಂಗಡನೆ ಮಾಡಲಾಗಿದೆ. ಪಾಲಿಕೆ ವಾರ್ಡುಗಳ ವಿಂಗಡನೆ ಹೇಗಿದೆ? ಬೆಂಗಳೂರು ಕೇಂದ್ರ ನಗರ ಪಾಲಿಕೆ…
ಬೆಂಗಳೂರು : ರಾಜ್ಯದಲ್ಲಿ ಅಬಕಾರಿ ಇಲಾಖೆ ಆದಾಯ ನಿರೀಕ್ಷಿತ ಪ್ರಮಾಣಕ್ಕಿಂತ ಹೆಚ್ಚು ಗಳಿಕೆಯಾಗಿದೆ. ಹೀಗಾಗಿ ಪ್ರೀಮಿಯಂ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ನಡೆಸಲಾಗಿದ್ದು, ಈ ಕುರಿತು ಚರ್ಚೆ ನಡೆಸಿ ಶೀಘ್ರದಲ್ಲಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಅಬಕಾರಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ಪ್ರಸಕ್ತ ಆರ್ಥಿಕ ವರ್ಷದ ಮೊದಲೆರಡು ತ್ರೈಮಾಸಿಕದಲ್ಲಿ ನಿರೀಕ್ಷಿತ ಪ್ರಮಾಣಕ್ಕಿಂತ ಹೆಚ್ಚಿನ ಆದಾಯ ಗಳಿಕೆಯಾಗಿದೆ. ಈ ಅವಧಿಯಲ್ಲಿ 16,290 ಕೋಟಿ ರು. ಆದಾಯದ ನಿರೀಕ್ಷೆಯಿತ್ತು. ಆದರೆ, 16,358 ಕೋಟಿ ರು. ಆದಾಯ ಬಂದಿದ್ದು, 68.78 ಕೋಟಿ ರು. ಹೆಚ್ಚಿನ ಆದಾಯ ಬಂದಿದೆ ಎಂದು ಹೇಳಿದರು. ಅಬಕಾರಿ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ. ಇಲಾಖೆಯಲ್ಲಿ ಮೊದಲ ಬಾರಿಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ಇಲಾಖೆಯಲ್ಲಿ ಡಿಜಿಟಲ್ ವ್ಯವಸ್ಥೆ ಜಾರಿ ಮಾಡ ಲಾಗುತ್ತಿದೆ. 5 ವರ್ಷಕ್ಕೊಮ್ಮೆ ಆನ್‌ಲೈನ್ ಮೂಲಕ ಪರವಾನಗಿ ನವೀಕರಣಕ್ಕೆ ಅವಕಾಶ 7…
ಬೆಂಗಳೂರು : ಬೆಂಗಳೂರು ಗ್ರಾಮಾಂತರದಲ್ಲಿ ಹಾಸನ, ತುಮಕೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 75 ಮತ್ತು 48ರ ಟೋಲ್ ದರಗಳು ಏರಿಕೆಯಾಗಿವೆ. ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ 5 ರಿಂದ 10 ರೂಪಾಯಿಗಳಷ್ಟು ಹೆಚ್ಚಳವಾಗಿದೆ. ಫಾಸ್ಟ್‌ಟ್ಯಾಗ್ ಇಲ್ಲದ ವಾಹನ ಸವಾರರಿಗೆ ದಂಡದ ಮೊತ್ತವೂ ಹೆಚ್ಚಾಗಿದೆ. ಇದರಿಂದ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ರಾಜ್ಯದ ವಿವಿಧ ಟೋಲ್‌ಗಳು ಏಪ್ರಿಲ್‌ನಲ್ಲಿ ದರ ಏರಿಕೆ ಮಾಡಿ ವಾಹನ ಸವಾರರಿಗೆ ಶಾಕ್ ನೀಡಿದ್ದರು, ಈಗ ಬೆಂಗಳೂರಿನಿಂದ ಹಾಸನ, ಮಂಗಳೂರು, ಧರ್ಮಸ್ಥಳ, ತುಮಕೂರು, ಚಿತ್ರದುರ್ಗ ಸೇರಿದಂತೆ ರಾಜ್ಯದ 22ಕ್ಕೂ ಹೆಚ್ಚು ಜಿಲ್ಲೆಗಳಿಗೆ ಹೋಗುವ ವಾಹನ ಸವಾರರಿಗೆ ಸೆಪ್ಟೆಂಬರ್ 1 ರಿಂದ ಟೋಲ್ ಶುಲ್ಕದ ಹೆಚ್ಚಳ ಸಂಕಷ್ಟದ ಮೇಲೆ ಬರೆ ಎಳೆದಂತಾಗಿದೆ. ಫಾಸ್ಟ್‌ಟ್ಯಾಗ್ ಹೊಂದಿರುವ ಲಘುವಾಹನಗಳ ಏಕಮುಖ ಪ್ರಮಾಣ 55ರಿಂದ 60ಕ್ಕೆ ಏರಿಕೆಯಾದರೆ, ವಾಣಿಜ್ಯ ಮತ್ತು ಸರಕು ವಾಹನಗಳ ಏಕಮುಖ ಸಂಚಾರಕ್ಕೆ 200ರಿಂದ 205 ಏರಿಕೆ ಆಗಿದೆ,ಇದೇ ಟೋಲ್‌ಗಳಲ್ಲಿ ದ್ವಿಮುಖ ಸಂಚಾರಕ್ಕೆ ಹಿಂದಿನದರದ ಮೇಲೆ 10ರೂ ಸಹ ಏರಿಕೆಯಾಗಿದೆ. ಫಾಸ್ಟ್‌ಟ್ಯಾಗ್…
ಉಡುಪಿ : ರಾಜ್ಯದಲ್ಲಿ ಮತ್ತೊಂದು ಘೋರವಾದ ದುರಂತ ಒಂದು ನಡೆದಿದ್ದು, ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ತಾನು ಹೆತ್ತ ಮಗುವನ್ನೇ ತಾಯಿಯೊಬ್ಬಳು ನೇಣು ಬಿಗಿದು ಕೊಂದ ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಹೇರಂಜೆ ಕ್ರಾಸ್ ಬಳಿ 1 ವರ್ಷ 6 ತಿಂಗಳ ಮಗುವನ್ನು ನೇಣಿಗೆ ಹಾಕಿದ ಸುಷ್ಮಿತಾ (23) ಆತ್ಮಹತ್ಯೆ ಮಾಡಿಕೊಂಡ ತಾಯಿ ಎಂದು ತಿಳಿದು ಬಂದಿದೆ.ನನ್ನ ಸಾವಿಗೆ ನಾನೇ ಕಾರಣ ಎಂಬುದಾಗಿ ಮರಣ ಪತ್ರ ಬರೆದಿಟ್ಟು ಸುಷ್ಮಿತಾ ತನ್ನ ಮಗು ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಕೂಡ ತಮ್ಮ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಹೆಚ್ಚುವರಿ ಮಾಹಿತಿ ಕಲೆ ಹಾಕಿದರು.
ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಅಪಹರಿಸಿ, ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ರೌಡಿಶೀಟರ್‌ಗಳ ಸಹಿತ ಆರು ಜನ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜೇಶ್ ಅಲಿಯಾಸ್ ಅಪ್ಪಿ, ಸೀನಾ ಅಲಿಯಾಸ್ ಬಾಂಬೆ ಸೀನಾ, ಲೋಕೇಶ್ ಕುಮಾರ್, ನವೀನ್ ಕುಮಾರ್, ಸೋಮಯ್ಯ ಮತ್ತು ಯುಕೇಶ್ ಬಂಧಿತ ಆರೋಪಿಗಳು. ಬಂಧಿತರು ಆಗಸ್ಟ್ 26ರಂದು ರಾಜಾಜಿನಗರದ ಮೋದಿ ಆಸ್ಪತ್ರೆ ಸರ್ಕಲ್‌ನಿಂದ ರಿಯಲ್ ಎಸ್ಟೇಟ್ ಉದ್ಯಮಿ ಹೆಚ್.ವಿ.ಮನೋಜ್ ಕುಮಾರ್ (25) ಅವರನ್ನು ಅಪಹರಿಸಿ ಸುಲಿಗೆ ಮಾಡಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಮನಗರ : ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಎನ್ ರಾಜಣ್ಣ ಬಿಜೆಪಿಗೆ ಅರ್ಜಿ ಹಾಕಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಎಚ್ ಸಿ ಬಾಲಕೃಷ್ಣ ಹೊಸ ಬಾಂಬ್ ಒಂದು ಸಿಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಣ್ಣರ ಬ್ರೈನ್ ಮ್ಯಾಪಿಂಗ್ ಆದರೆ ಎಲ್ಲವೂ ಗೊತ್ತಾಗುತ್ತದೆ. ಯಾರ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಯಲಿದೆ ನಮ್ಮ ಸರ್ಕಾರ ಇದೆ ಎಂದು ಪಕ್ಷದಲ್ಲಿ ಇದ್ದಾರೆ. ಇಲ್ಲದಿದ್ದರೆ ಎಷ್ಟೊತ್ತಿಗೆ ಅವರು ಪಕ್ಷ ಬಿಟ್ಟು ಹೋಗುತ್ತಿದ್ದರು . ಈಗಾಗಲೇ ರಾಜಣ್ಣ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದಾರೆ ಬೇರೆ ಬೇರೆ ನಾಯಕರಾದ ಜೊತೆಗೆ ಸಂಪರ್ಕದಲ್ಲಿ ಇದ್ದಾರೆ ಎಂದರು. ಕೆಎನ್ ರಾಜಣ್ಣ ತಮ್ಮ ಮಾತಿನಿಂದಲೇ ಕೆಟ್ಟು ಹೋದರು ಮಾತು ಮನೆ ಕೆಡಿಸಿತು ತೂತು ಒಲೆ ಕೆಡಿಸಿತು ಎಂಬ ಮಾತಿದೆ. ಇದರಲ್ಲಿ ನಮ್ಮ ನಾಯಕರ ಷಡ್ಯಂತರ ಇಲ್ಲವೇ ಇಲ್ಲ. ಪಕ್ಷದ ಮೇಲೆ ಗೂಬೆ ಕೂರಿಸಲು ಪಿತೂರಿ ನಡೆಯುತ್ತಿದೆ ನಡೆಸಲಿ. ಡೆಲ್ಲಿ ಸಮಾವೇಶ ಮಾಡಲಿ ನಾವು ಹಿಡಿದುಕೊಳ್ಳಲು ಆಗುತ್ತಾ ಎಂದು ಬಾಲಕೃಷ್ಣ ಹೇಳಿಕೆ…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಲೆ ಆರೋಪಿ ಪವಿತ್ರ ಗೌಡಗೆ ಕೋರ್ಟ್ ಬಿಗ್ ಶಾಕ್ ನೀಡಿದ್ದು ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿ ವಜಾ ಗೊಳಿಸಿ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್ನಿಂದ ತೀರ್ಪು ಬಂದ ಬಳಿಕ ಪವಿತ್ರ ಗೌಡ ಬಿಲ್ ಅರ್ಜಿ ಸಲ್ಲಿಸಿದರು. ಇಂದು ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯದಲ್ಲಿ ಪವಿತ್ರ ಗೌಡ ಸಲ್ಲಿಸಿದ ವಿಚಾರಣೆ ನಡೆಯಿತು. ವಿಚಾರಣೆ ಬಳಿಕ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ ಈ ಮೂಲಕ ಪವಿತ್ರ ಗೌಡಗೆ ಜೈಲೇ ಗತಿ ಎಂಬಂತಾಗಿದೆ.
ಬೆಂಗಳೂರು : ವಾಲ್ಮೀಕಿ ಹಗರಣ ಮುಡಾ ಹಗರಣದ ಬಳಿಕ ಇದೀಗ ಭೋವಿ ಅಭಿವೃದ್ಧಿ ನಿಗಮದಲ್ಲೂ ಕೂಡ ಬೃಹತ್ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು ಈ ನೆಲೆಯಲ್ಲಿ ಬೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಿಎಂ ಕಚೇರಿಯಿಂದ ಮಾಹಿತಿ ತಿಳಿದು ಬಂದಿದೆ. ಹೌದು ಭೋವಿ ನಿಗಮದ ಅಧ್ಯಕ್ಷ ರಾಜೀನಾಮೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ರವಿಕುಮಾರ್ ಗೆ ರಾಜೀನಾಮೆ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ ಲಂಚದ ಆರೋಪ ಬಯಲಾಗುತ್ತಿದ್ದಂತೆ ರಾಜೀನಾಮೆಗೆ ಸೂಚನೆ ನೀಡಿದ್ದಾರೆ ಹಾಗಾಗಿ ರವಿಕುಮಾರ್ ಶೀಘ್ರದಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ಭಾರಿ ಮಳೆ ಸುರಿದಿದ್ದು ರಾತ್ರಿ ಘೋರ ದುರಂತ ಒಂದು ಸಂಭವಿಸಿದೆ. ಈ ವೇಳೆ ಜೋರಾದ ಮಳೆ ಸುರಿದಿದ್ದು, ನಿರ್ಮಾಣ ಹಂತದ ಕಟ್ಟಡ ಪಕ್ಕದಲ್ಲಿದ್ದ ಮಣ್ಣು ಕುಸಿದು ಆಂಧ್ರಪ್ರದೇಶ ಮೂಲದ ಕಾರ್ಮಿಕ ಸಾವನ್ನಪ್ಪಿದ್ದ ಆದರೆ ಇದೀಗ ಮತ್ತೊಂದು ಕಾರ್ಮಿಕ ದುರಂತದಲ್ಲಿ ಸಾವನಪ್ಪಿದ್ದಾನೆ. ಮಣ್ಣಿನಡಿ ಸಿಲುಕಿ ಮೃತಪಟ್ಟವರ ಸಂಖ್ಯೆ ಇದೀಗ ಎರಡಕ್ಕೆ ಏರಿದೆ ಜೆ.ಶಿವ ಹಾಗೂ ಮಧುಸೂದನ್ ರೆಡ್ಡಿ ಮೃತಕಾರ್ಮಿಕರು ಎಂದು ತಿಳಿದುಬಂದಿದೆ. ಇಬ್ಬರು ಆಂಧ್ರಪ್ರದೇಶದ ಮೂಲದ ಕಟ್ಟಡ ಕಾರ್ಮಿಕರು ಎಂದು ತಿಳಿದುಬಂದಿದೆ ಸದ್ಯ ಮೃತ ದೇಹ ಯಲಹಂಕ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ.














