Author: kannadanewsnow05

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಿಗ್ಗೆ 11 ಗಂಟೆಗೆ 2026-27ನೇ ಸಾಲಿನ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾನುವಾರ ಬಜೆಟ್ ಮಂಡನೆಯಾಗುತ್ತಿರುವುದು ಒಂದು ವಿಶೇಷ ದಾಖಲೆಯಾಗಿದೆ. ಈ ಬಾರಿಯ ಬಜೆಟ್‌ನ ಪ್ರಮುಖ ಅಂಶಗಳು ಮತ್ತು ನಿರೀಕ್ಷೆಗಳು ಇಲ್ಲಿವೆ 1. ವೈಯಕ್ತಿಕ ಆದಾಯ ತೆರಿಗೆ (Income Tax) * ವಿನಾಯಿತಿ ಮಿತಿ ಏರಿಕೆ: ಹೊಸ ಆದಾಯ ತೆರಿಗೆ ಪದ್ಧತಿಯಡಿ ತೆರಿಗೆ ಮುಕ್ತ ಆದಾಯದ ಮಿತಿಯನ್ನು ಪ್ರಸ್ತುತ ಇರುವ ಮೊತ್ತದಿಂದ ₹13 ಲಕ್ಷಕ್ಕೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. * ಸ್ಟ್ಯಾಂಡರ್ಡ್ ಡಿಡಕ್ಷನ್: ವೇತನದಾರರಿಗೆ ನೀಡಲಾಗುವ ಪ್ರಮಾಣಿತ ಕಡಿತದ ಮಿತಿಯನ್ನು ₹75,000 ದಿಂದ ₹1 ಲಕ್ಷಕ್ಕೆ ಏರಿಸುವ ನಿರೀಕ್ಷೆಯಿದೆ. 2. ರೈತರು ಮತ್ತು ಗ್ರಾಮೀಣಾಭಿವೃದ್ಧಿ * PM ಕಿಸಾನ್ ಸಮ್ಮಾನ್ ನಿಧಿ: ರೈತರಿಗೆ ನೀಡಲಾಗುವ ವಾರ್ಷಿಕ ಆರ್ಥಿಕ ನೆರವನ್ನು ₹6,000 ದಿಂದ ₹9,000ಕ್ಕೆ ಹೆಚ್ಚಿಸುವ…

Read More

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 65 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಬಳಿಕ ವ್ಯಕ್ತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಮೈಕೋ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯನ್ನು ಅತ್ಯಾಚಾರವೆಸಗಿ, ಬಳಿಕ ನೇಣು ಬಿಗಿದುಕೊಂಡು ಆರೋಪಿ ದೇವರಾಜು (50) ಆತ್ಮಹತ್ಯೆಗೆ ಶರಣಾಗಿದ್ದಾನೆ. ದೇವರಾಜು ಮನೆಗೆಲಸ ಮಾಡುತ್ತಿದ್ದ 65 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಳಗಾವಿ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯ ಭಾಗದಲ್ಲಿರುವ ಚೋರ್ಲಘಾಟ್ ನಲ್ಲಿ 400 ಕೋಟಿ ಬೃಹತ್ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಈ ಒಂದು ದರೋಡೆಯ ಪ್ರಮುಖ ಆರೋಪಿ ಆಗಿರುವ ಕಿಶೋರ್ ಸಾಳ್ವೆ ನನ್ನು ಅರೆಸ್ಟ್ ಮಾಡಿದ್ದಾರೆ. ಕಿಶೋರ್ ಸಾಳ್ವೆ, ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ನಂತರ ಆತನನ್ನು ಬಂಧಿಸಲಾಗಿದೆ.ಕಿಶೋರ್ ಸಾಳ್ವೆ ಬಂಧನದೊಂದಿಗೆ ದರೋಡೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ಮಹಾರಾಷ್ಟ್ರ ಸರ್ಕಾರ, ತನಿಖೆಯನ್ನು ಕಟ್ಟುನಿಟ್ಟಾಗಿ ಮುಂದುವರೆಸಲು ಸೂಚನೆ ನೀಡಿದೆ. ಪ್ರಕರಣ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಚೋರ್ಲಾ ಘಾಟ್ ಪ್ರದೇಶದಲ್ಲಿ 2025 ರ ಅಕ್ಟೋಬರ್ 25 ರಂದು ಎರಡು ಕಂಟೇನರ್‌ಗಳಲ್ಲಿದ್ದ ಸುಮಾರು 400 ಕೋಟಿ ರೂ. ಹಣವನ್ನು ದರೋಡೆ ಮಾಡಲಾಗಿತ್ತು ಎಂದು ಮಹಾರಾಷ್ಟ್ರದ ನಾಸಿಕ್ ಮೂಲದ ಉದ್ಯಮಿ ಸಂದೀಪ್ ದತ್ತಾ ಪಾಟೀಲ್ ಇತ್ತೀಚೆಗೆ ಮಹಾರಾಷ್ಟ್​ರ ಪೊಲೀಸರಿಗೆ ದೂರು ನೀಡಿದ್ದರು. ಅದರೊಂದಿಗೆ, ಪ್ರಕರಣ ಬೆಳಕಿಗೆ ಬಂದಿದ್ದು ದೇಶದಾದ್ಯಂತ ಸಂಚಲನ ಮೂಡಿಸಿತ್ತು.…

Read More

ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದು ಎಸ್ಐಟಿ ಇಂದ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಆಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತಣಿಕೆಗಾಗಿ ಎಸ್ಐಟಿ ರಚನೆ ಮಾಡಲಾಗಿದೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಸಹ ಇರುತ್ತಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅವರಿಗೆ ಏನಾದರೂ ಸಮಸ್ಯೆ ಇತ್ತ?ಎನ್ನುವುದರ ಕುರಿತು ಸಂಪೂರ್ಣ ತನಿಖೆ ನಡೆಸಲಾಗುತ್ತೆ ಎಂದರು.

Read More

ತುಮಕೂರು : ಚಾಮರಾಜನಗರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾನು ಕ್ಲಿಯರ್ ಆಗಿ ಹೇಳುತ್ತೇನೆ ಯಾವುದೇ ಗೊಂದಲ ಮಾಡೋದು ಬೇಡ. ಚಾಮರಾಜನಗರದಲ್ಲಿ ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಹಿರಿಯ ನಾಯಕರಿದ್ದಾರೆ ಎಂದರು. ಯಾವುದು ಯಾವುದು ಕ್ಷೇತ್ರಕ್ಕೆ ಮೂಗು ತೂರಿಸುವ ವ್ಯಕ್ತಿತ್ವ ನನ್ನದಲ್ಲ. ಸುದ್ದಿ ಆಗಬೇಕು ಎಂದು ನನ್ನ ಹೆಸರನ್ನು ತರುವುದು ಬೇಡ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಹೊರತು ಚಾಮರಾಜನಗರ ಅಥವಾ ಬೇರೆ ಕಡೆ ಸ್ಪರ್ಧಿಸಬೇಕು ಎಂಬ ಯೋಚನೆ ಇಲ್ಲ ಎಂದರು. ನಿಖಿಲ್ ಕುಮಾರಸ್ವಾಮಿ ಎಲ್ಲಿ ಸ್ಪರ್ಧೆ ಮಾಡುತ್ತಾರೆ ಎಂದು ನಿಗದಿಯಾದರೆ, ಕಾಣದ ಕೈಗಳು ಕೆಲಸ ಶುರು ಮಾಡುತ್ತವೆ. ನಾನು ಎಲ್ಲಿ ನಿಲ್ಲಬೇಕು ಯಾವಾಗ ನಿಲ್ಲಬೇಕು ಎಂದು ಜನ ತೀರ್ಮಾನಿಸುತ್ತಾರೆ ಎಂದು ತುಮಕೂರಿನಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದರು.

Read More

ವಿಜಯನಗರ : ವಿಜಯನಗರದಲ್ಲಿ ತ್ರಿಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಲೆಯ ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ಆರೋಪಿ ಅಕ್ಷಯ್ ಹೊರಗಡೆ ಇದ್ದ ತಂಗಿಗೆ ಕರೆ ಮಾಡಿ ನಿನಗೆ ಗಿಫ್ಟ್ ತಂದಿದ್ದೇನೆ ಮನೆಗೆ ಬಾ ಎಂದು ಕರೆಸಿ ಚಾಕುವಿನಿಂದ ಇರಿದು ಮನೆಯ ಹಾಲ್ ನಲ್ಲಿಯೇ ಆಕೆಯ ಶವ ಹೂತು ಹಾಕಿದ್ದಾನೆ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಹೌದು ಮೊದಲು ತಾಯಿಯನ್ನು ಪಾಪಿ ಪುತ್ರ ಅಕ್ಷಯ್ ಕೊಲೆ ಮಾಡಿದ್ದಾನೆ. ಚಾಕುವಿನಿಂದ ಇರಿದು ತಾಯಿ ಜಯಲಕ್ಷ್ಮಿಯನ್ನು ಪುತ್ರ ಅಕ್ಷಯ್ ಕೊಲೆ ಮಾಡಿದ್ದಾನೆ. ಬಳಿಕ ಮನೆಯ ಕೊಠಡಿಯಲ್ಲಿ ತಾಯಿಯ ಶವವನ್ನು ಹಾಕಿದ್ದಾನೆ . ನಂತರ ತಂಗಿಗೆ ಕರೆ ಮಾಡಿ ಮನೆಗೆ ಕರೆದು ಚಾಕು ಇರಿದು ಕೊಲೆ ಮಾಡಿದ್ದಾನೆ. ನಿನಗೆ ಗಿಫ್ಟ್ ತಂದಿದ್ದೇನೆ ಅಂತ ಕರೆದು ಕೊಲೆ ಮಾಡಿದ್ದಾನೆ. ತಂಗಿ ತಾಯಿಯ ಮೃತ ದೇಹಗಳನ್ನು ಕೊಠಡಿಯಲ್ಲಿ ಇಟ್ಟಿದ್ದಾನೆ. ಆನಂತರ ಮನೆಗೆ ಬಂದು ತಂದೆ ಟಿವಿ ನೋಡುತ್ತಾ ಕುಳಿತಿದ್ದಾಗ ತಂದೆಯನ್ನು ಸಹ ಕೊಲೆ ಮಾಡಿದ್ದಾನೆ. ನಂತರ ಮನೆಯ ಹಾಲ್…

Read More

ಮುಂಬೈ : ಮಹಾರಾಷ್ಟ್ರದ ದಿವಂಗತ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪತ್ನಿ ಮತ್ತು ರಾಜ್ಯಸಭಾ ಸಂಸದೆ ಸುನೇತ್ರಾ ಪವಾರ್ ಅವರನ್ನ ಇಂದು (ಶನಿವಾರ) ಎನ್ಸಿಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಯಿತು. ಹೌದು ಅವರು ಇಂದು ಸಂಜೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಜ್ಯದ ಮೊದಲ ಮಹಿಳಾ ಉಪಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರ ನಾಮನಿರ್ದೇಶನವನ್ನು ಹಿರಿಯ ಎನ್‌ಸಿಪಿ ನಾಯಕ ಛಗನ್ ಭುಜಬಲ್ ಪ್ರಸ್ತಾಪಿಸಿದರು ಮತ್ತು ಇತರ ಹಿರಿಯ ನಾಯಕರು ಅನುಮೋದಿಸಿದರು ಮತ್ತು ಅವರು ಸರ್ವಾನುಮತದಿಂದ ಆಯ್ಕೆಯಾದರು. ಬಾರಾಮತಿಯಲ್ಲಿ ನಡೆದ ಚಾರ್ಟರ್ಡ್ ವಿಮಾನ ಅಪಘಾತದಲ್ಲಿ ಎನ್‌ಸಿಪಿ ಮುಖ್ಯಸ್ಥ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವನ್ನಪ್ಪಿದ ಮೂರು ದಿನಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ಅಪಘಾತದಲ್ಲಿ ಇನ್ನೂ 4 ಜನರು ಸಾವನ್ನಪ್ಪಿದ್ದಾರೆ.

Read More

ಬೆಂಗಳೂರು : ರಾಜ್ಯದ ಎಲ್ಲ ರಾಜಕೀಯ ಪಕ್ಷಗಳಲ್ಲಿನ ಪ್ರಭಾವಿ ವ್ಯಕ್ತಿಗಳು ಅಕ್ರಮ ಮರಳು ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದಾರೆ ಎಂಬುದಾಗಿ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ವಿಧಾನಸಭೆಯಲ್ಲಿ ನೀಡಿದ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಅಕ್ರಮ ಗಣಿಗಾರಿಕೆ ಆರೋಪ ಸಂಬಂಧ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. 2026ರ ಜನವರಿ 27ರಂದು ನಡೆದ ವಿಧಾನಸಭಾ ಕಲಾಪದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ನೀಡಿದ ಹೇಳಿಕೆ, ಅಕ್ರಮ ಗಣಿಗಾರಿಕೆ ದೊಡ್ಡ ದಂಧೆಯಾಗಿದೆ. ಪ್ರಕರಣ ಸಂಬಂಧ ಯಾರ ಹೆಸರನ್ನು ಪ್ರಸ್ತಾಪಿಸುತ್ತಿಲ್ಲ. ಯಾರನ್ನೂ ದೂಷಣೆ ಮಾಡುತ್ತಿಲ್ಲ. ಏಕೆಂದರೆ ಇದು ಅತ್ಯಂತ ಮುಜುಗರ ಸಂಗತಿಯಾಗಿದೆ. ಈ ಸಂಬಂಧ ಸೀಮಿತವಾಗಿ ಉತ್ತರವನ್ನು ಮಾತ್ರ ನೀಡುತ್ತಿದ್ದು, ಅನೇಕ ಪ್ರಭಾವಿಗಳು ದಂಧೆಯಲ್ಲಿ ಭಾಗಿಯಾಗಿದ್ದಾರೆ. ಈ ವಿಷಯವನ್ನು ಚರ್ಚಿಸುವುದಕ್ಕಾಗಿ ಸಭೆ ಕರೆಯುವುದಾಗಿ ಹೇಳಿದ್ದಾರೆ. ಈ ಅಂಶ ಜನವರಿ 28ರಂದು ಪತ್ರಿಕೆಗಳು ಮತ್ತು ಟಿವಿ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ ಎಂದು ನ್ಯಾಯಪೀಠ ಹೇಳಿದೆ. ಮಾಫಿಯಾಗಳಿಂದ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ತಡೆಯುವುದಕ್ಕೆ ಕ್ರಮ ಕೈಗೊಳ್ಳುವಲ್ಲಿ ರಾಜ್ಯದ ಗೃಹ…

Read More

ಮೈಸೂರು : ಮೈಸೂರಿನಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮಗು ಮೇಲೆ ಏಕಾಏಕಿ ಚಿರತೆ ದಾಳಿ ನಡೆಸಿದೆ. ಚಿರತೆ ದಾಳಿಯಿಂದ ಬೈಕ್ ನಿಂದ ಕೆಳಗೆ ಬಿದ್ದ ದಂಪತಿ ಮತ್ತು ಮಗುವಿಗೆ ಗಂಭೀರವಾದ ಗಾಯಗಳಾಗಿದ್ದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಚುಂಚನಹಳ್ಳಿ ಬಳಿ ಈ ಒಂದು ಕಡಿಮೆ ಸಂಭವಿಸಿದೆ. ಚಿರತೆ ದಾಳಿಯಿಂದ ರೈತ ಮಹದೇವಸ್ವಾಮಿ ಪತ್ನಿ ಮತ್ತು ಮಗುವಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ತಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಎಚ್ಎಂಟಿಸಿಗಾಗಿ ಮೈಸೂರು ಆಸ್ಪತ್ರೆಗೆ ಸಿಬ್ಬಂದಿಗಳು ಕಳುಹಿಸಿದ್ದು ಚಿರತೆಯನ್ನು ಸೆರೆಹಿಡಿದು ಸ್ಥಳಾಂತರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Read More

ಬೆಂಗಳೂರು : ಬೀದರ್ ನಲ್ಲಿ ನಿಗೂಢ ಸ್ಫೋಟ ಬೆನ್ನಲ್ಲೇ, ಬೆಂಗಳೂರಿನ ಉರ್ದು ಶಾಲೆಯಲ್ಲಿ ಕೆಮಿಕಲ್ ಸ್ಫೋಟಗೊಂಡು ಓರ್ವ ವಿದ್ಯಾರ್ಥಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಸರ್ಕಾರಿ ಉರ್ದು ಶಾಲೆಯಲ್ಲಿ ಘಟನೆ ಸಂಭವಿಸಿದೆ. ಜಗ್ ನ ನೀರಿಗೆ ಕೆಮಿಕಲ್ ಹಾಕಿದಾಗ ಏಕಾಏಕಿ ಸ್ಪೋಟಗೊಂಡಿದೆ. ಕೆಮಿಕಲ್ ಸ್ಫೋಟದಿಂದ 7ನೇ ತರಗತಿ ವಿದ್ಯಾರ್ಥಿಗೆ ಗಂಭೀರವಾದ ಗಾಯಗಳಾಗಿವೆ. ಕಾರ್ಬನ್ ಕೆಮಿಕಲ್ ತಂದು 7ನೇ ತರಗತಿ ವಿದ್ಯಾರ್ಥಿ ಪ್ರಯೋಗ ಮಾಡುತ್ತಿದ್ದ ಗಾಯಗೊಂಡ ವಿದ್ಯಾರ್ಥಿ ದೇವನಹಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಜಯಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

Read More