Author: kannadanewsnow05

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹತ್ತಕ್ಕೂ ಹೆಚ್ಚು ಮರಗಳ ಮಾರಣಹೋಮವಾಗಿದೆ. ರಸ್ತೆ ನಿರ್ಮಾಣ ಕಾರ್ಯಕ್ಕೆ ಬೆಟ್ಟದಲ್ಲಿದ್ದ ಮರಗಳನ್ನು ಇದೀಗ ಕಡಿಯಲಾಗಿದೆ. ಬೆಟ್ಟದಲ್ಲಿ ಇದ್ದಂತ ಹತ್ತಕ್ಕೂ ಹೆಚ್ಚು ಮರಗಳನ್ನು ಪ್ರಾಧಿಕಾರ ಕಡಿದು ಹಾಕಿದೆ.. ಅರಣ್ಯ ಇಲಾಖೆ ಅನುಮತಿ ಪಡೆಯದೆ ಪ್ರಾಧಿಕಾರದಿಂದ ಮರ ತೆರವುಗೊಳಿಸಲಾಗಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿಯಿಂದ ಇದೀಗ ಪ್ರಾಧಿಕಾರದ ಇಂಜಿನಿಯರ್ ಹಾಗೂ ಜೆಸಿಬಿ ಆಪರೇಟರ್ ವಿರುದ್ಧ ದಾಖಲಾಗಿದೆ. ಕಾರ್ಯದರ್ಶಿ ವಿರುದ್ಧ ಅರಣ್ಯ ಇಲಾಖೆ ಅಪಾಯದ ಕಳಿಸಲು ಅನುಮತಿ ಕೋರಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಾಯಕತ್ವ ಬದಲಾವಣೆ ವಿಚಾರ ಭಾರಿ ಸದ್ದು ಮಾಡಿತ್ತು. ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದರು. ಇದೀಗ ರಾರಾಜ್ಯ ಜ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾಂಗ್ರೆಸ್ ಶಾಸಕ ಸೇರಿದಂತೆ ಹಲವು ಪ್ರಭಾವಿಗಳ ವಿರುದ್ಧ 500 ಎಕರೆ ಭೂಕಬಳಿಕೆ ಆರೋಪ ಕೇಳಿ ಬಂದಿದೆ. ಹೌದು ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯಲ್ಲಿರುವ ಸುಮಾರು 12 ಸಾವಿರ ಕೋಟಿಗೂ ಹೆಚ್ಚು ಮೌಲ್ಯದ 500 ಎಕರೆಗಳಿಗೂ ಹೆಚ್ಚು ವಿಸ್ತೀರ್ಣದ ಸರ್ಕಾರಿ ಸ್ವತ್ತುಗಳನ್ನು ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಸೇರಿ ಕೆಲ ಪ್ರಭಾವಿಗಳು ಕಬಳಿಸಿದ್ದಾರೆ ಎಂದು ಆರೋಪಿ ಬಿಜೆಪಿ ನಾಯಕ ಎನ್.ಆರ್ ರಮೇಶ್ 1,67, 751 ಪುಟಗಳ ದಾಖಲೆಗಳ ಸಮೇತ ಗುರುವಾರ ಲೋಕಾಯುಕ್ತ ಮತ್ತು ಜಾರಿ ನಿರ್ದೇಶಾನಲಯಕ್ಕೆ ದೂರು ನೀಡಿದ್ದಾರೆ. ಭ್ರಷ್ಟಾಚಾರ, ನಕಲಿ ದಾಖಲೆ ತಯಾರಿಕೆ, ವಂಚನೆ, ಸರ್ಕಾರಿ ಭೂ ಕಬಳಿಕೆಗೆ ಸಹಕಾರ ಮತ್ತು ಅಧಿಕಾರ ದುರುಪಯೋಗ…

Read More

ಮೈಸೂರು : ಇತ್ತೀಚೆಗೆ ಮೈಸೂರು ಸೇರಿದಂತೆ ಚಾಮರಾಜನಗರ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹುಲಿ ಚಿರತೆಗಳ ಕಾಟ ಹೆಚ್ಚಾಗಿದೆ. ಇದೀಗ ಮೈಸೂರಿನ ಬೆಮೆಲ್ ಕಾರ್ಖಾನೆಯಲ್ಲಿ ಮತ್ತೊಂದು ಹುಲಿ ಪ್ರತ್ಯಕ್ಷವಾಗಿದೆ. ಹೌದು ಮೈಸೂರಿನಲ್ಲಿ 20 ಹುಲಿ ಸೆರೆ ಹಿಡಿದರು ಕೂಡ ಹುಲಿ ಕಾಟ ತಪ್ಪಿಲ್ಲ ಬೆಮೆಲ್ ಕಾರ್ಖಾನೆಯಲ್ಲಿ ಹುಲಿ ಪ್ರತ್ಯಕ್ಷ ಆಗಿದೆ ಹುಲಿ ಕಾಂಪೌಂಡ್ ಹಾರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಾರದ ಹಿಂದೆ ಅಷ್ಟೇ ಬೆಮೆಲ್ ಸಮೀಪ ಹುಲಿ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಕೈಗೆ ಸಿಗದೇ ಓಡಾಡುತ್ತಿತ್ತು. ಇದೀಗ ಮತ್ತೆ ಕಾರ್ಖಾನೆ ಕಾಂಪೌಂಡ್ ಹಾರುತ್ತಿರುವ ದೃಶ್ಯ ಇದೀಗ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಎಚ್ಚರದಿಂದ ಇರುವಂತೆ ಜನರಿಗೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಮೊಮೋಸ್ ಶಾಪ್ ಹುಡುಗನ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಬೈಕ್ ನಲ್ಲಿ ಬಂದಿದ್ದ ಮೂವರ ಪೈಕಿ ಓರ್ವ ಈ ಕೃತ್ಯ ಎಸಗಿದ್ದಾನೆ. ಮೊಮೋಸ್ ಶಾಪ್ ಹುಡುಗನ ಮೇಲೆ ಹಲ್ಲೆ ಮಾಡಿ ಅಂಗಡಿ ಧ್ವಂಸಗೊಳಿಸಿದ್ದಾನೆ. ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು ಯಾವ ಕಾರಣಕ್ಕಾಗಿ ಗಲಾಟೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಯುವತಿಗೆ ಮದುವೆಯಾಗೋದಾಗಿ ನಂಬಿಸಿ ಲವ್ ಸೆಕ್ಸ್ ದೋಖಾ ಮಾಡಿರುವ ಪ್ರಕರಣ ಇದೀಗ ತದವಾಗಿ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಾಗಿ 9 ತಿಂಗಳಾದ್ರು ಕ್ರಮ ಕೈಗೊಳ್ಳದ ಪೋಲೀಸರ ವಿರುದ್ಧ ಆರೋಪ ಕೇಳಿಬಂದಿದೆ. ಬೆಂಗಳೂರಿನ ಸುದ್ದಗುಂಟೆಪಾಳ್ಯ ಠಾಣೆ ವಿರುದ್ಧಆರೋಪ ಕೇಳಿಬಂದಿದೆ. ಯುವತಿಗೆ ಸ್ನೇಹಿತರ ಮೂಲಕ ಪರಿಚಯವಾಗಿದ್ದ ಆರೋಪಿ ಉಮ್ಮಾನ್. ಬಳಿಕ ಪ್ರೀತಿ ಮಾಡುವಂತೆ ಯುವತಿಯ ಹಿಂದೆ ಉಮ್ಮಾನ್ ಬಿದ್ದಿದ್ದಾನೆ. ಪ್ರೀತಿ ಮಾಡುವುದಾಗಿ ನಂಬಿಸಿ ಲಕ್ಷಾಂತರ ಹಣ, ಚಿನ್ನಾಭರಣ ಪಡೆದಿದ್ದ. ಅಲ್ಲದೇ ಯುವತಿಯ ಜೊತೆಗೆ ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿರೋ ಆರೋಪ ಕೇಳಿಬಂದಿದೆ. 13 ಲಕ್ಷ ಹಣ ಮತ್ತು ಚಿನ್ನ ಪಡೆದು ವಂಚನೆ ಮಾಡಿರೋ ಆರೋಪ ಕೇಳಿಬಂದಿದೆ. ಇಸ್ಲಾಂ ಧರ್ಮಕ್ಕೆ ಮತಾಂತಗೊಳ್ಳುವಂತೆ ಯುವತಿಗೆ ಬೆದರಿಕೆ ಹಾಕಿದ್ದಾನೆ. ಬಲವಂತವಾಗಿ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ. ದೆಹಲಿ ಕೇಸ್ ನಂತೆ ನಿನ್ನನ್ನು ಪೀಸ್ ಪೀಸ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ್ದಾನೆ.ಇದರಿಂದ ನೊಂದು ಮಾರ್ಚ್ ತಿಂಗಳಲ್ಲಿ ಎಸ್.ಜಿ…

Read More

ಬೆಂಗಳೂರು : ನಟ ದರ್ಶನ್ ಆರೋಪಿಯಾಗಿರುವ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನುಡಿಯಲು ಕೊಲೆಯಾದ ರೇಣುಕಾಸ್ವಾಮಿಯ ಪಾಲಕರಿಗೆ ಸಮನ್ಸ್‌ ಜಾರಿಗೊಳಿಸಿರುವ ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್‌ ನ್ಯಾಯಾಲಯ, ಡಿಸೆಂಬರ್ 17ರಂದು ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಿಸಿದೆ. ಪ್ರಕರಣ ಸಂಬಂಧ ಸಾಕ್ಷ್ಯ ನುಡಿಯಲು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಮತ್ತು ತಾಯಿ ರತ್ನಮ್ಮಗೆ (ಸಾಕ್ಷಿ ಸಂಖ್ಯೆ 7 ಹಾಗೂ 8) ಸಮನ್ಸ್‌ ಜಾರಿಗೊಳಿಸಬೇಕು ಎಂದು ಕೋರಿ ತನಿಖಾಧಿಕಾರಿಗಳು (ಪ್ರಾಸಿಕ್ಯೂಷನ್‌) ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಪುರಸ್ಕರಿಸಿರುವ ನ್ಯಾಯಾಧೀಶ ಐ.ಪಿ.ನಾಯಕ್ ಅವರು ಈ ಆದೇಶ ಮಾಡಿದ್ದಾರೆ. ದರ್ಶನ್‌ ಸೇರಿ ಪ್ರಕರಣದ 17 ಆರೋಪಿಗಳ ವಿರುದ್ಧ ಕೊಲೆ, ಅಪಹರಣ, ಹಲ್ಲೆ, ಅಪರಾಧಿಕ ಒಳಸಂಚು, ಅಕ್ರಮ ಕೂಟ ರಚನೆ, ಹಣ ವಸೂಲಿ, ಅಕ್ರಮ ಬಂಧನ ಇನ್ನಿತರ ಆರೋಪಗಳನ್ನು ನಿಗದಿಪಡಿಸಿ ನವೆಂಬರ್ 3ರಂದು ನ್ಯಾಯಾಲಯ ಆದೇಶಿಸಿತ್ತು. ಜತೆಗೆ ನವೆಂಬರ್ 10ರಿಂದ ಪ್ರಕರಣದ ಮುಖ್ಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತ್ತು. ಅದಾದ ಬಳಿಕ ಪ್ರಕರಣ ಕುರಿತು ನ್ಯಾಯಾಲಯ ನಡೆಸುತ್ತಿರುವ ಮೊದಲ ಸಾಕ್ಷಿ ವಿಚಾರಣೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಕತ್ತು ಕೊಯ್ದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರ ತನಿಖೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಹಿಮಾಚಲ ಪ್ರದೇಶ ಮೂಲದ ತಿಲಕ ಕುಮಾರ್ (32) ಆತ್ಮಹತ್ಯೆಗೆ ಶರಣಾಗಿದ್ದಾನೆ. ಗಂಟಲು ನೋವಿನಿಂದ ಬಳಲುತ್ತಿದ್ದರಿಂದ ತಿಲಕ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ತಿಲಕ್ 5000 ಕೊಡು ವಾಪಸ್ ಕೊಡುತ್ತೇನೆ ಎಂತ ತನ್ನ ಅಣ್ಣನ ಬಳಿ ಕೇಳಿದ್ದ. ಈಗ ಹಣ ಎಲ್ಲ ಒಂದು ವಾರ ಬಿಟ್ಟಕೊಡುವುದಾಗಿ ಅಣ್ಣ ಹೇಳಿದ್ದ. ಬಳಿಕ ಚಾಕುನಿಂದ ಕತ್ತು ಕೊಯ್ದ ರೀತಿಯಲ್ಲಿ ತಿಲಕ್ ಶವ ಪತ್ತೆಯಾಗಿದೆ. ನವೆಂಬರ್ 29ರಂದು ಜೆಪಿ ನಗರದ ಮೊದಲನೇ ಹಂತದಲ್ಲಿ ಈ ಒಂದು ಘಟನೆ ನಡೆದಿದೆ. ಫುಟ್ಪಾತ್ ಬಳಿಯ ಮರದ ಕೆಳಗೆ ಕುಳಿತಿದ್ದ ರೀತಿ ಶವ ಪತ್ತೆಯಾಗಿತ್ತು ರಕ್ತದ ಕಲೆ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಜೆಪಿ ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದಾರೆ. ಕೊಲೆ ಶಂಕೆ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.…

Read More

ಬೆಂಗಳೂರು : ಕಳೆದ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಸುಳ್ಳು ಹೇಳಿಕೆ ನೀಡಿ ಚುನಾವಣಾ ನೀತಿ ಸಂಹಿತೆ ಉಲ್ಲಘನೆ ಮಾಡಿದ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಿದ್ದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನಿನ್ನೆ ವಿಚಾರಣಾ ನ್ಯಾಯಾಲಯದ ಸಮನ್ಸ್ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಏಕ ಸದಸ್ಯಪೀಠ ಈ ಮಧ್ಯಂತರ ಆದೇಶ ನೀಡಿದೆ. ವಿಚಾರಣೆ ವೇಳೆ ಕುಮಾರಸ್ವಾಮಿ ಪರ ವಕೀಲರು, ಚುನಾವಣೆಯಲ್ಲಿ ಪ್ರತಿಸ್ಪರ್ಧಿಯ ಹೆಸರನ್ನು ಅರ್ಜಿದಾರರು ತಮ್ಮ ಹೇಳಿಕೆಯಲ್ಲಿ ಎಲ್ಲೂ ಉಲ್ಲೇಖಿಸಿಲ್ಲ. ಆದರೂ ಕೋರ್ಟ್ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ತಿರಸ್ಕರಿಸಿ ಸಮನ್ಸ್ ಜಾರಿಗೊಳಿಸಿದೆ. ಹಾಗಾಗಿ ಸಮನ್ಸ್​ಗೆ ತಡೆ ನೀಡಬೇಕು ಎಂದು ಕೋರಿದರು. ವಾದ ಆಲಿಸಿದ ಪೀಠ ಈ ಆದೇಶ ನೀಡಿದೆ. ಅಲ್ಲದೇ, ನಗರದ 42 ನೇ ಎಸಿಜೆಎಂ ಕೋರ್ಟ್​ನಲ್ಲಿ ನಡೆಯುತ್ತಿರುವ ವಿಚಾರಣೆ ಮತ್ತು ಆ ಸಂಬಂಧದ ಎಲ್ಲಾ ಪ್ರಕ್ರಿಯೆಗಳಿಗೆ ಮಧ್ಯಂತರ…

Read More

ಚಾಮರಾಜನಗರ : ಚಾಮರಾಜನಗರದಲ್ಲಿ ಚಿರತೆ ದಾಳಿ ಮುಂದುವರೆದಿದ್ದು, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಏಕಾಏಕಿ ಚಿರತೆ ದಾಳಿ ನಡೆಸಿದೆ. ಚಾಮರಾಜನಗರ ತಾಲೂಕಿನ ವಿ.ಸಿ ಹೊಸೂರು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು, ಜಮೀನಿನಲ್ಲಿ ಜಡೆಸ್ವಾಮಿ ಮತ್ತು ಅರ್ಚಕ ಶಿವಮಲ್ಲಪ್ಪನ ಮೇಲೆ ಏಕಾಏಕಿ ದಾಳಿ ನಡೆಸಿದೆ. ಚಾಮರಾಜನಗರದ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿರತೆ ದಾಳಿ ಹಿನ್ನೆಲೆ ಜಮೀನಿಗೆ ತೆರಳಲು ಗ್ರಾಮಸ್ಥರಲ್ಲಿ ಭಯ ಮನೆ ಮಾಡಿದ್ದು ಘಟನಾ ಸ್ಥಳಕ್ಕೆ ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ ಅಧಿಕಾರಿಗಳು ಆಗಮಿಸಿದ್ದಾರೆ. ಸದ್ಯ ಬೊನ್ ಇಟ್ಟು ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದಾರೆ.

Read More

ಕಲಬುರಗಿ : ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಯಡ್ರಾಮಿಯ ರಾಸಣಗಿ ಕ್ರಾಸ್ ಬಳಿ ನಡೆದಿದೆ. ಭೂಮಿಕಾ ಹಂಗರಗಾ (20) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಬೈಕ್ ಸವಾರ ಅಮೋಘಸಿದ್ದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯುವಕ ಮತ್ತು ಯುವತಿ ಜೇವರ್ಗಿ ಪಟ್ಟಣದಿಂದ ತಮ್ಮ ಸ್ವಗ್ರಾಮಕ್ಕೆ ಹೋಗುತ್ತಿದ್ದಾಗ, ಹಿಂಬದಿಯಿಂದ ವೇಗವಾಗಿ ಬಂದ ಎನ್‌ಇಕೆಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಭೂಮಿಕಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಈ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More