Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಷಣಕ್ಕೂ ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ ಎಂದು ವರದಿಯಾಗಿದೆ. ಮೇ 28ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಸಿಎಂ ರಾಜೀನಾಮೆ ನೀಡುತ್ತಿದ್ದಂತೆಯೇ ಹಾಲಿ ಸಚಿವ ಸಂಪುಟವು ಸಂಪೂರ್ಣವಾಗಿ ವಿಸರ್ಜನೆಯಾಗಲಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸದ್ಯ ಸಂಪುಟದಲ್ಲಿರುವ ಎಲ್ಲಾ 31 ಸಚಿವರು ತಮ್ಮ ಸ್ಥಾನಗಳನ್ನು ಕಳೆದುಕೊಳ್ಳಲಿದ್ದಾರೆ. ಇದು ರಾಜ್ಯದಲ್ಲಿ ಹೊಸ ಸರ್ಕಾರ ಹಾಗೂ ಹೊಸ ಸಂಪುಟ ರಚನೆಗೆ ಹಾದಿ ಮಾಡಿಕೊಡಲಿದೆ. ಸಿದ್ದರಾಮಯ್ಯ ಅವರ ನಿರ್ಗಮನದ ಬಳಿಕ ಮುಂದಿನ ಮುಖ್ಯಮಂತ್ರಿ ಯಾರು ಮತ್ತು ಹೊಸದಾಗಿ ರಚನೆಯಾಗಲಿರುವ ಸಂಪುಟದಲ್ಲಿ ಯಾರಿಗೆಲ್ಲಾ ಸ್ಥಾನ ಸಿಗಲಿದೆ ಎಂಬುದು ಸದ್ಯದ ದೊಡ್ಡ ಯಕ್ಷಪ್ರಶ್ನೆಯಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆಗಳ ನಡುವೆ, ಅವರ ನೇತೃತ್ವದ ಸಂಪುಟದಲ್ಲಿ ಸಿದ್ದರಾಮಯ್ಯ ಅವರ ಆಪ್ತರಾದ ಜಮೀರ್ ಅಹ್ಮದ್ ಖಾನ್ ಮತ್ತು ಎಂ.ಬಿ. ಪಾಟೀಲ್ ಸೇರಿದಂತೆ…

Read More

ಮೈಸೂರು: ಕೋಟಿಗಟ್ಟಲೆ ಮೌಲ್ಯದ ಆನೆದಂತವನ್ನು ಕಾನೂನುಬಾಹಿರವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆಂಧ್ರಪ್ರದೇಶದ ನಿವೃತ್ತ ಮಹಿಳಾ ಪೊಲೀಸ್ ಅಧಿಕಾರಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 3 ಕೆ.ಜಿ ತೂಕದ 3 ಆನೆದಂತದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮೈಸೂರು ಡಿಸಿಎಫ್ ಪರಮೇಶ್ ಅವರು ಮಾಹಿತಿ ನೀಡಿದ್ದಾರೆ. ಬಂಧಿತ ಆರೋಪಿಗಳ ವಿವರ: ಅರಣ್ಯ ಇಲಾಖೆಯ ಬಲೆಗೆ ಬಿದ್ದವರನ್ನು ಆಂಧ್ರಪ್ರದೇಶದ ಕರ್ನೂಲ್ ನಿವಾಸಿ ಸೈಯ್ಯದ್ ಮಹಮದ್ ಫಯಾಜ್, ಕೊಳ್ಳೇಗಾಲದ ಮುನೀರ್ ಪಾಷ, ಕೊಳ್ಳೇಗಾಲದ ಅಪ್ಸರ್‌ಪಾಷ ಮತ್ತು ಮೈಸೂರಿನ ರಾಮಕೃಷ್ಣನಗರದ ನಿವಾಸಿ, ನಿವೃತ್ತ ಪೊಲೀಸ್ ಅಧಿಕಾರಿ ಜಮುನಾರಾಣಿ ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರದ ನಾಗ್ಪುರದ ಡೈರೆಕ್ಟೊರೇಟ್ ಆಫ್ ರೆವಿನ್ಯೂ ಇಂಟಲಿಜೆನ್ಸ್ (ಡಿಆರ್‌ಐ) ಅಧಿಕಾರಿಗಳು ನೀಡಿದ ಖಚಿತ ಮಾಹಿತಿ ಮೇರೆಗೆ ಮೈಸೂರು ಪ್ರಾದೇಶಿಕ ವಿಭಾಗದ ಅರಣ್ಯ ಇಲಾಖೆಯ ಸಿಬ್ಬಂದಿ ಈ ಮಿಂಚಿನ ದಾಳಿ ನಡೆಸಿದ್ದಾರೆ. ಕೋಟಿ ಮೌಲ್ಯದ ದಂತಕ್ಕೆ ಗ್ರಾಹಕರ ಹುಡುಕಾಟ:…

Read More

ಬೆಂಗಳೂರು: ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ವಿದಾಯದ ಬ್ರೇಕ್‌ಫಾಸ್ಟ್‌ನಲ್ಲಿ ನುಡಿದಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಹೇಳುವುವುದನ್ನು ಪಾಲನೆ ಮಾಡುವುದು ನನ್ನ ಕರ್ತವ್ಯ ಎಂದು ನುಡಿದಿದ್ದಾರೆ. ಈ ಹಿಂದೆ ನಡೆದ ಒಪ್ಪಂದ ಸೂತ್ರ ಬಿಚ್ಚಿಟ್ಟ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳ ಮುಂದೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದರು. ಇನ್ನು ಇದೇ ಸಂದರ್ಭದಲ್ಲಿ ಸಚಿವರ ಮುಂದೆ ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಹೈಕಮಾಂಡ್ ಹೇಳಿದಂತೆ ಕರ್ನಾಟಕ ರಾಜ್ಯದ ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಿ ಮುಂದುವರೆಯಲಿದ್ದು 2028 ರ ವರೆಗೂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ. ಬಿಜೆಪಿಯಿಂದ ಅಲರ್ಟ್ ಆಗಿ ಇರಿ ನಾನು ಮಾಡಿರುವ ಕೆಲಸಗಳ ಬಗ್ಗೆ ನನಗೆ ಸಮಾಧಾನ ಇದೆ. ಎಲ್ಲಾ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಮುಂದೆ ಒಳ್ಳೆಯ ಕೆಲಸಗಳನ್ನು ಮಾಡಿಕೊಂಡು ಹೋಗಿ ಜನರಿಗೆ ಒಳ್ಳೆಯ ಯೋಜನೆಗಳನ್ನು ನೀಡಿ ಎಂದು ಸಿದ್ದರಾಮಯ್ಯ ಸಲಹೆ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬೆಳವಣಿಗೆಯೊಂದರಲ್ಲಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಗೆ ಭೇಟಿ ನೀಡಿದ್ದರು. ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಉಪಾಹಾರ (ಬ್ರೇಕ್ ಫಾಸ್ಟ್) ಮುಗಿಸಿದ ಡಿಕೆಶಿ, ಪ್ರಸ್ತುತ ರಾಜಕೀಯ ವಿದ್ಯಮಾನಗಳು ಹಾಗೂ ಸರ್ಕಾರದ ಪ್ರಮುಖ ನಿರ್ಧಾರಗಳ ಕುರಿತು ಕೆಲಕಾಲ ಚರ್ಚೆ ನಡೆಸಿದರು ಎನ್ನಲಾಗಿದೆ. ಸದಾಶಿವನಗರ ನಿವಾಸಕ್ಕೆ ವಾಪಸ್: ಸಿಎಂ ಭೇಟಿಯ ನಂತರ ನೇರವಾಗಿ ಸದಾಶಿವನಗರದಲ್ಲಿರುವ ತಮ್ಮ ಸ್ವಗೃಹಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮರಳಿದರು. ಸಿಎಂ ನಿವಾಸದ ರಾಜಕೀಯ ಮಾತುಕತೆಯ ಬೆನ್ನಲ್ಲೇ, ಡಿಕೆಶಿ ಅವರ ಮುಂದಿನ ನಡೆ ಏನು ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗಳು ಆರಂಭವಾದವು. ಮನೆಯಲ್ಲಿ ಕೆಲಕಾಲ ವಿಶ್ರಮಿಸಿದ ಅವರು, ಪ್ರಮುಖ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಸಜ್ಜಾದರು. ಪುತ್ರಿ ಜೊತೆ ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ಭೇಟಿ: ತಮ್ಮ ಸದಾಶಿವನಗರ ನಿವಾಸದಿಂದ ಹೊರಟ ಡಿ.ಕೆ. ಶಿವಕುಮಾರ್ ಅವರು, ತಮ್ಮ ಪುತ್ರಿಯ ಜೊಗೂಡಿಕೊಂಡು ನೇರವಾಗಿ ತುಮಕೂರು…

Read More

ಬೆಂಗಳೂರು: ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಇಂದು ಅತ್ಯಂತ ಅಪರೂಪದ ಮತ್ತು ಭಾವುಕ ಕ್ಷಣವೊಂದು ಸೃಷ್ಟಿಯಾಗಿದೆ. ರಾಜ್ಯ ರಾಜಕೀಯದ ಇಬ್ಬರು ಧ್ರುವತಾರೆಗಳಂತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡುವಿನ ಆತ್ಮೀಯತೆ ಮತ್ತು ಭಾವನಾತ್ಮಕ ಬಾಂಧವ್ಯಕ್ಕೆ ಮುಖ್ಯಮಂತ್ರಿಯವರ ನಿವಾಸ ಸಾಕ್ಷಿಯಾಯಿತು. ಉಪಹಾರ ಕೂಟಕ್ಕಾಗಿ ಆಗಮಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ಈ ವೇಳೆ ಇಬ್ಬರು ನಾಯಕರು ಪರಸ್ಪರ ಆಲಂಗಿಸಿಕೊಂಡಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತೀವ್ರ ಭಾವುಕರಾದ ದೃಶ್ಯ ನೆರೆದಿದ್ದವರ ಕಣ್ಣಾಲಿಗಳು ಒದ್ದೆಯಾಗುವಂತೆ ಮಾಡಿತು. ಇದಾದ ಬಳಿಕ ನಡೆದ ಸಚಿವರ ಮಹತ್ವದ ಬ್ರೇಕ್ ಫಾಸ್ಟ್ ಮೀಟಿಂಗ್ (ಉಪಹಾರ ಸಭೆ) ರಾಜಕೀಯದ ಗಂಭೀರ ಚರ್ಚೆಗಿಂತ ಹೆಚ್ಚಾಗಿ ಭಾವನೆಗಳ ಸಾಗರವಾಗಿ ಮಾರ್ಪಟ್ಟಿತು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ನಿರ್ಧಾರದ ಕುರಿತು ಸಹೋದ್ಯೋಗಿ ಸಚಿವರಿಗೆ ಅಧಿಕೃತವಾಗಿ ತಿಳಿಸಿದರು. ದಶಕಗಳ ಕಾಲ ರಾಜಕಾರಣದಲ್ಲಿ ಗಟ್ಟಿಯಾಗಿ ನಿಂತು, ಸದಾ ಗಂಭೀರವಾಗಿರುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರು…

Read More

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸುವಂತಹ ವಿದ್ಯಮಾನವೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಅವರು ರಾಜಭವನಕ್ಕೆ ತೆರಳಿ, ರಾಜ್ಯಪಾಲರಿಗೆ ಅಧಿಕೃತವಾಗಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ದಿಢೀರ್ ಬೆಳವಣಿಗೆಯು ಆಡಳಿತಾರೂಢ ಕಾಂಗ್ರೆಸ್ ಪಾಳಯದಲ್ಲಿ ಮಾತ್ರವಲ್ಲದೆ ಇಡೀ ರಾಜ್ಯ ರಾಜಕಾರಣದಲ್ಲಿ ತಲ್ಲಣ ಮೂಡಿಸಿದೆ. ರಾಜೀನಾಮೆ ನೀಡುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಇಂದು ಬೆಳಿಗ್ಗೆ ಸಚಿವ ಸಂಪುಟದ ಎಲ್ಲಾ ಸಹೋದ್ಯೋಗಿಗಳಿಗೆ ವಿಶೇಷ ಉಪಹಾರಕೂಟವನ್ನು ಆಯೋಜಿಸಿದ್ದರು. ಅತ್ಯಂತ ಗಂಭೀರ ವಾತಾವರಣದಲ್ಲಿ ನಡೆದ ಈ ಸಭೆಯಲ್ಲಿ ಮುಖ್ಯಮಂತ್ರಿಗಳು ತಮ್ಮ ರಾಜೀನಾಮೆಯ ನಿರ್ಧಾರವನ್ನು ಸಚಿವರ ಮುಂದೆ ಪ್ರಕಟಿಸಿದರು. “ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ” ಎಂದು ಸಿದ್ದರಾಮಯ್ಯ ಘೋಷಿಸುತ್ತಿದ್ದಂತೆ ಸಭೆಯಲ್ಲಿದ್ದ ಸಚಿವರು ಒಂದು ಕ್ಷಣ ದಿಗ್ಭ್ರಮೆಗೊಂಡರು. ಮುಖ್ಯಮಂತ್ರಿಗಳ ಈ ದಿಢೀರ್ ನಿರ್ಧಾರವನ್ನು ಕೇಳಿ ಸಭೆಯಲ್ಲಿದ್ದ ಸಚಿವರು…

Read More

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸುವಂತಹ ಮಹತ್ವದ ವಿದ್ಯಮಾನವೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಲಿದ್ದಾರೆ ಎಂದು ವಿಶ್ವಾಸಾರ್ಹ ಮೂಲಗಳಿಂದ ತಿಳಿದುಬಂದಿದೆ. ರಾಜೀನಾಮೆ ನೀಡುವ ಮುನ್ನ ಮುಖ್ಯಮಂತ್ರಿಗಳು ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರಿಗಾಗಿ ವಿಶೇಷ ಉಪಹಾರಕೂಟ ಸಭೆಯನ್ನು ಆಯೋಜಿಸಿದ್ದರು. ಈ ಮಹತ್ವದ ಸಭೆಯಲ್ಲಿ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ತಾವು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುತ್ತಿರುವ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದರು. ಹೈಕಮಾಂಡ್ ಸೂಚನೆ ಹಾಗೂ ಪಕ್ಷದ ಆಂತರಿಕ ಒಪ್ಪಂದದ ಹಿನ್ನೆಲೆಯಲ್ಲಿ ತಾವು ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಸಚಿವರಿಗೆ ಸ್ಪಷ್ಟಪಡಿಸಿದರು. ಇದೇ ಉಪಹಾರಕೂಟ ಸಭೆಯಲ್ಲಿ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುರಿತಾಗಿಯೂ ಇದ್ದ ಕುತೂಹಲಕ್ಕೆ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಪ್ರಸ್ತುತ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್…

Read More

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇಂದು ಮಹತ್ವದ ದಿನವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಉಪಹಾರಕೂಟ ಸಭೆಯಲ್ಲಿ ತಮ್ಮ ಸಚಿವರಿಗೆ ನಾನು ಇಂದು ರಾಜೀನಾಮೆ ನೀಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಇದೀಗ ಈ ವಿಚಾರವಾಗಿ ಕಾನೂನು ಸಚಿವ ಹೆಚ್ಚಿಗೆ ಪಾಟೀಲ್ ಹಿಂದೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿಸಿದರು. ನಮ್ಮ ವರಿಷ್ಠರು ಜೊತೆಗೆ ಏನು ಮಾತುಕತೆ ಆಯ್ತು ಆ ಮಾತುಕತೆಗಳ ಬಗ್ಗೆ ಸಿಎಂ ವಿವರವಾಗಿ ನಮ್ಮೆಲ್ಲರಿಗೆ ತಿಳಿಸಿದರು. ಅವರು ಚರ್ಚೆ ಮಾಡಿ ರಾಹುಲ್ ಗಾಂಧಿಯವರು ಮಲ್ಲಿಕಾರ್ಜುನ ಖರ್ಗೆ ಅವರು ಅವರೆಲ್ಲರ ಹತ್ತಿರ ಚರ್ಚೆ ಮಾಡಿ ಅವರಿಗೆ ರಾಜೀನಾಮೆ ಕೊಡುವುದರ ಬಗ್ಗೆ ಅವರು ಸಲಹೆ ಕೊಟ್ಟಿದ್ದಾರೆ. ಅವರ ಸಲಹೆವನ್ನು ಒಪ್ಪಿದ್ದು ಇವತ್ತು 3 ಗಂಟೆಗೆ ರಾಜಭವನಕ್ಕೆ ಹೋಗಿ ರಾಜೀನಾಮೆ ಸಲ್ಲಿಕೆ ಮಾಡುತ್ತಾರೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.

Read More

ಬೆಳಗಾವಿ : ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್)ಯ ಸಿಪಿಐ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಪಿಐ ಶ್ರೀಶೈಲ್ ಚೌಗಲಾ(37) ಮೃತಪಟ್ಟ ದುರ್ದೈವಿ. ಬೆಳಗಾವಿಯ ರಾಣಿ ಚನ್ನಮ್ಮ ನಗರದ ಅವರ ಮನೆಯ ರೂಮಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಾಗಿಲು ಬಡಿದರೂ ತೆಗೆಯದೇ ಇದ್ದುದರಿಂದ ಅನುಮಾನಗೊಂಡ ಶ್ರೀಶೈಲ್ ಅವರ ಪತ್ನಿ ತಕ್ಷಣವೇ ಎಸ್‌ಡಿಆರ್‌ಎಫ್ ಸಿಬ್ಬಂದಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಅವರು ರೂಮಿನ ಬಾಗಿಲು ಮುರಿದು ಒಳಗೆ ನೋಡಿದಾಗ ವಿಷಯ ಗೊತ್ತಾಗಿದೆ. ತಕ್ಷಣ ಅವರನ್ನು ಹೊರತೆಗೆದು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟರಲ್ಲೇ ಅವರು ನಿಧನರಾಗಿದ್ದರು. ಶ್ರೀಶೈಲ್ ಅವರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಗೊತ್ತಾಗಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಹಳೇ ಪ್ರೇಮದ ನೆನಪಿನಲ್ಲಿ ಮಾಜಿ ಪ್ರೇಯಸಿಯ ಮನೆಗೆ ಭೇಟಿ ನೀಡಿದ್ದ ಯುವಕನೊಬ್ಬ ಭೀಕರವಾಗಿ ಕೊಲೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕೊಲೆಯಾದ ಯುವಕನನ್ನು ಮೊಹಮ್ಮದ್ ಖಾಸಿಂ ಎಂದು ಗುರುತಿಸಲಾಗಿದೆ. ಮಾಜಿ ಪ್ರೇಮಿಯ ಆಗಮನದಿಂದ ಆಕ್ರೋಶಗೊಂಡ ಯುವತಿಯ ಪತಿ ಹಾಗೂ ಆಕೆಯ ಕುಟುಂಬಸ್ಥರು ನಡೆಸಿದ ಮಾರಣಾಂತಿಕ ಹಲ್ಲೆಯಿಂದಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ಮೊಹಮ್ಮದ್ ಖಾಸಿಂ ಈ ಹಿಂದೆ ಯುವತಿಯೊಬ್ಬಳನ್ನು ಗಾಢವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ಕೆಲವು ವೈಯಕ್ತಿಕ ಕಾರಣಗಳಿಂದಾಗಿ ಇಬ್ಬರ ನಡುವೆ ಬ್ರೇಕಪ್ ಆಗಿತ್ತು. ತದನಂತರ ಯುವತಿಯ ಕುಟುಂಬಸ್ಥರು ಆಕೆಗೆ ಬೇರೆ ವ್ಯಕ್ತಿಯೊಂದಿಗೆ ವಿವಾಹ ಮಾಡಿಕೊಟ್ಟಿದ್ದರು. ಮದುವೆಯಾದ ಬಳಿಕ ಆಕೆ ತನ್ನ ಪತಿಯೊಂದಿಗೆ ಬೆಂಗಳೂರಿನಲ್ಲಿ ಸಂಸಾರ ಹೂಡಿದ್ದಳು. ಆದರೆ ಇತ್ತೀಚೆಗೆ ಖಾಸಿಂ ಮತ್ತೆ ಆಕೆಯನ್ನು ಸಂಪರ್ಕಿಸಲು ಮತ್ತು ಭೇಟಿಯಾಗಲು ನಿರಂತರವಾಗಿ ಪ್ರಯತ್ನಿಸುತ್ತಿದ್ದ ಎಂದು ತಿಳಿದುಬಂದಿದೆ. ಘಟನೆಯ ದಿನದಂದು ಮೊಹಮ್ಮದ್ ಖಾಸಿಂ ಯಾರಿಗೂ ಮುನ್ಸೂಚನೆ ನೀಡದೆ, ನೇರವಾಗಿ ಬೆಂಗಳೂರಿನಲ್ಲಿರುವ ತನ್ನ ಮಾಜಿ ಪ್ರೇಯಸಿಯ ಮನೆಗೆ ತೆರಳಿದ್ದಾನೆ. ಈ ವೇಳೆ ಮನೆಯಲ್ಲಿದ್ದ…

Read More