Author: kannadanewsnow05

ಬೆಂಗಳೂರು : ಪ್ರಯಾಣದ ವೇಳೆ ಬ್ಯಾಗ್ ನಲ್ಲಿ ಬಾಂಬ್ ಇದೆ ಅಂತ ಬೆದರಿಕೆ ಹಾಕಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಬೆದರಿಕೆ ಹಾಕಿದವನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ಮೂಲದ ಅಬು ಅಕಿಲ್ ಅಜರ್ ಎಂಬಾತನನ್ನ ಅರೆಸ್ಟ್ ಮಾಡಿದ್ದಾರೆ. ತಪಾಸನೆ ವೇಳೆ ಬಾಂಬ್ ಎಂದು ಬೆದರಿಕೆ ಹಾಕಿದ್ದಾನೆ. ಆರೋಪಿನ ವಶಕ್ಕೆ ಪಡೆದು ಏರ್ಪೋರ್ಟ್ ಸಿಬ್ಬಂದಿಗಳು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರಿನಿಂದ ಅಹ್ಮದಾಬಾದ್ ಗೆ ಅಬು ಅಖಿಲ್ ತೆರಳಲು ಏರ್ ಪೋರ್ಟ್ ಗೆ ಬಂದಿದ್ದ. ಈ ವೇಳೆ ಎರಡು ಕಡೆ ಬ್ಯಾಗ್ ತಪಾಸಣೆ ಮಾಡಿದ್ದ ಏರ್ಪೋರ್ಟ್ ಸಿಬ್ಬಂದಿ, ಬ್ಯಾಗ್ ಸಂಪೂರ್ಣ ಚೆಕ್ ಮಾಡಿದ್ದಕ್ಕೆ ಅಬು ಅಕಿಲ್ ಆಕ್ರೋಶಗೊಂಡಿದ್ದ . ಆಗ ಬ್ಯಾಗನಲ್ಲಿ ಎರಡು ಚಿಕ್ಕ ಚಿಕ್ಕ ಬಾಂಬ್ ಇದೆ ಅಂತ ಬೆದರಿಕೆ ಹಾಕಿದ್ದಾನೆ ಬೆದರಿಕ ಹಾಕಿದ್ದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಕೆಂಪೇಗೌಡ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ : ದೆಹಲಿಯ ಪ್ರೀತಿ ವಿಹಾರ್ ಪ್ರದೇಶದಲ್ಲಿ ಭಾರಿ ಕಟ್ಟಡ ಕುಸಿತವಾಗಿದ್ದು, ಹಳೆಯ ಜಲ ಮಂಡಳಿ ಕಚೇರಿ ಬಳಿ ಕಟ್ಟಡವನ್ನು ಕುಸಿದಿದೆ. ಅದೃಷ್ಟವಶಾತ್ ಯಾವುದೇ ರೀತಿಯಾದ ಸಾವು ನೋವು ಸಂಭವಿಸಿಲ್ಲ. ಆದರೆ ಕಟ್ಟಡದಲ್ಲಿ ನಾಲ್ವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹೌದು ನವದೆಹಲಿಯ ಪ್ರೀತ್ ವಿಹಾರ್ ಪ್ರದೇಶದಲ್ಲಿ ಕಟ್ಟಡ ಕುಸಿದಿದೆ. ಅಗ್ನಿಶಾಮಕ ದಳದವರು ಸ್ಥಳದಲ್ಲಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ದಳ ತಿಳಿಸಿದೆ. ಯಾವುದೇ ಸಾವುನೋವುಗಳು ವರದಿಯಾಗಿಲ್ಲ, ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಕಳೆದ ವರ್ಷ, ನವೆಂಬರ್‌ನಲ್ಲಿ, ನವದೆಹಲಿಯಲ್ಲಿ ಹೊಸದಾಗಿ ನಿರ್ಮಿಸಲಾದ ರಚನೆಯ ಕುಸಿತದಿಂದಾಗಿ ಮೂವರು ಪುರುಷರು ಮತ್ತು ಒಬ್ಬ ಮಹಿಳೆ ಸೇರಿದಂತೆ ನಾಲ್ವರು ಗಾಯಗೊಂಡಿದ್ದರು. ನವದೆಹಲಿಯ ಜ್ವಾಲಾ ನಗರದ ಬೀದಿ ಸಂಖ್ಯೆ 6 ರಲ್ಲಿ ಈ ಕುಸಿತ ಕಂಡುಬಂದಿದೆ. ಜ್ವಾಲಾ ನಗರದ ಘಟನೆಯ ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಗಿದೆ. ಮನೆಯ ಮೂರನೇ ಮಹಡಿಯಲ್ಲಿ ಕುಟುಂಬವು ಹಾಲ್ ನಿರ್ಮಿಸುತ್ತಿದೆ ಎಂದು ಒಬ್ಬ ಕುಟುಂಬದ ಸದಸ್ಯರು ತಿಳಿಸಿದ್ದು, ಪರಿಣಾಮವಾಗಿ, ಹೊಸದಾಗಿ ನಿರ್ಮಿಸಲಾದ ರಚನೆಯ…

Read More

ಬಾಗಲಕೋಟೆ : ಚರಂಡಿ ನೀರಿನಲ್ಲಿ ಶಾಲಾ ಮಕ್ಕಳು ತಟ್ಟೆ ತೊಳದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಸಹ ಶಿಕ್ಷಕಿ ನಂದಾ ಭೀಮಾಜಿ ಕುಲಕರ್ಣಿಯನ್ನು ಇದೀಗ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಸಹ ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು ಆಲಬಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಿನ್ನೆ ಈ ಒಂದು ಘಟನೆ ನಡೆದಿತ್ತು. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಳಬಾಳ ಗ್ರಾಮದಲ್ಲಿ ಮಕ್ಕಳ ತಟ್ಟೆಗಳನ್ನು ಚರಂಡಿNನೀರಿನಲ್ಲಿ ತೊಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಇದೀಗ ಈ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗಿದ್ದು, ನಾಗರೀಕ ಸೇವಾ ಅಧಿನಿಯಮ, 1957 ನಿಯಮ 10(01) ರ ಅಡಿ ಕ್ರಮ ಕೈಗೊಳ್ಳಲಾಗಿದೆ. ತಪ್ಪೇಸಗಿದ್ದಲ್ಲಿ ಕ್ರಮ ಕೈಗೊಳ್ಳುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೇ ಸೂಚನೆ ನೀಡಿದ್ದರು..ಆಯೋಗದ ಅಧ್ಯಕ್ಷರ ಸೂಚನೆಯ ಮೇರೆಗೆ ಇದೀಗ ಸಹ ಶಿಕ್ಷಕಿ ನಂದಾ ಅವರನ್ನ ಅಮಾನತು ಮಾಡಿ ಉಪ ನಿರ್ದೇಶಕರು ಹಾಗೂ ಶಿಸ್ತು ಪ್ರಾಧಿಕಾರಗಳ ಶಾಲಾ…

Read More

ಬೆಂಗಳೂರು : ಮಹಾತ್ಮ ಗಾಂಧೀಜಿಯನ್ನು ಓರ್ವ ಮತಾಂಧ ಕೊಂದು ಹಾಕಿದ. ಗಾಂಧೀಜಿಯನ್ನು ನಾಥುರಾಮ್ ಗೋಡ್ಸೆ ಕೊಂದು ಹಾಕಿದ. ಅಹಿಂಸಾ ಪರಮೋಧರ್ಮ ಅಂತ ಗಾಂಧೀಜಿ ತಿಳಿಸಿದರು. ಮಹಾತ್ಮ ಗಾಂಧೀಜಿ ಅವರಿಗೆ ಯಾವುದೇ ಸ್ವಾರ್ಥ ಇರಲಿಲ್ಲ. ಗಾಂಧೀಜಿ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದರು ದೇಶ ಸ್ವತಂತ್ರ ಆಗಬೇಕು ಅಷ್ಟೇ ಅಂತ ಗಾಂಧೀಜಿ ಮನಸ್ಸಿನಲ್ಲಿ ಇತ್ತು ಸ್ವತಂತ್ರ ಸಿಗಬೇಕು ನಾವು ಗೌರವ ಸಲ್ಲಿಸಬೇಕೆಂದರೆ ಗಾಂಧೀಜಿ ಅವರ ತತ್ವ ಅನುಸರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತ ಬಲಿದಾನವನ್ನು ಸ್ಮರಿಸಬೇಕು. ಗಾಂಧೀಜಿಯವರು ಸ್ವಾತಂತ್ರ್ಯ ಚಳುವಳಿಯ ನೇತೃತ್ವವನ್ನು ವಹಿಸಿದ್ದರು. ಈ ದಿನವನ್ನು ದೇಶದ ಜನರು ಸ್ಮರಿಸಿಕೊಳ್ಳುತ್ತಾರೆ. ಅವರು ಸಮಾಜಕ್ಕೆ ಮಾಡಿರುವ ಸೇವೆಯನ್ನು ಸ್ಮರಿಸಿಕೊಳ್ಳಬೇಕು, ಗಾಂಧೀಜಿ ಅವರು ಎಲ್ಲಾ ತ್ಯಾಗ ಮಾಡಿದರು ಜೈಲಿಗೆ ಸಹ ಹೋಗಿದ್ದರು. ಮಹಾತ್ಮ ಗಾಂಧೀಜಿಯವರು ಇಡೀ ದೇಶವನ್ನು ಸುತ್ತಿದ್ದರು.ಕಾಂಗ್ರೆಸ್ ಪಕ್ಷ ಗಾಂಧೀಜಿ ನೇತೃತ್ವದಲ್ಲಿ ಹೋರಾಟ ಮಾಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇನ್ನು ರಾಜ್ಯದ…

Read More

ಬೆಂಗಳೂರು : ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿಗಳಿಗೆ ಗಾಂಧೀಜಿ ಅವರ ಹೆಸರು ಇಡುತ್ತೇವೆ ಎಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಗ್ರಾಮಗಳು ಸ್ವಾವಲಂಬನೆ ಆಗದಿದ್ದರೆ ದೇಶವು ಪ್ರಗತಿ ಆಗುವುದಿಲ್ಲ. ಭಾರತ ಹಳ್ಳಿಗಳ ದೇಶ, ಹಳ್ಳಿಗಳ ಉದ್ಧಾರ ಆಗಬೇಕೆಂದು ಮಹಾತ್ಮ ಗಾಂಧೀಜಿ ಹೇಳಿದ್ದರು. ಕರ್ನಾಟಕ ರಾಜ್ಯದಲ್ಲಿ 6,000 ಗ್ರಾಮ ಪಂಚಾಯಿತಿಗಳು ಇವೆ. ಗ್ರಾಮ ಪಂಚಾಯಿತಿಗಳಿಗೆ ಗಾಂಧೀಜಿ ಹೆಸರು ಇಡಲು ತೀರ್ಮಾನ ಮಾಡಿದ್ದೇವೆ. ಗ್ರಾಮಸ್ವರಾಜ್ಯ ಕಲ್ಪನೆಯ ಕೊಟ್ಟಿದ್ದು ಮಹಾತ್ಮ ಗಾಂಧೀಜಿ ಅವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತ ಬಲಿದಾನವನ್ನು ಸ್ಮರಿಸಬೇಕು. ಗಾಂಧೀಜಿಯವರು ಸ್ವಾತಂತ್ರ್ಯ ಚಳುವಳಿಯ ನೇತೃತ್ವವನ್ನು ವಹಿಸಿದ್ದರು. ಈ ದಿನವನ್ನು ದೇಶದ ಜನರು ಸ್ಮರಿಸಿಕೊಳ್ಳುತ್ತಾರೆ. ಅವರು ಸಮಾಜಕ್ಕೆ ಮಾಡಿರುವ ಸೇವೆಯನ್ನು ಸ್ಮರಿಸಿಕೊಳ್ಳಬೇಕು, ಗಾಂಧೀಜಿ ಅವರು ಎಲ್ಲಾ ತ್ಯಾಗ ಮಾಡಿದರು ಜೈಲಿಗೆ ಸಹ ಹೋಗಿದ್ದರು. ಮಹಾತ್ಮ ಗಾಂಧೀಜಿಯವರು ಇಡೀ ದೇಶವನ್ನು ಸುತ್ತಿದ್ದರು.ಕಾಂಗ್ರೆಸ್ ಪಕ್ಷ ಗಾಂಧೀಜಿ ನೇತೃತ್ವದಲ್ಲಿ ಹೋರಾಟ ಮಾಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Read More

ಬೆಂಗಳೂರು : ಇತ್ತೀಚಿಗೆ ಕಾನ್ವೆಂಟ್ ಸ್ಕೂಲ್ ಗಳಲ್ಲಿ ಕ್ಷುಲ್ಲಕ ವಿಚಾರವಾಗಿ ಶಿಕ್ಷಕ ಶಿಕ್ಷಕಿಯರು ಮಕ್ಕಳ ಮೇಲೆ ತೀವ್ರವಾಗಿ ಹಲ್ಲೆ ಮಾಡುತ್ತಿರುವ ಘಟನೆಗಳು ನಡೆದಿದೆ. ಇದೀಗ ಬೆಂಗಳೂರಿನಲ್ಲಿ ಕೇವಲ ಹೋಮವರ್ಕ್ ಮಾಡಿಲ್ಲ ಎಂಬ ಸಣ್ಣ ಕಾರಣಕ್ಕೆ ಬಾಲಕನಿಗೆ ಬಾಸುಂಡೆ ಬರುವಂತೆ ಶಿಕ್ಷಕಿ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ. ಹೌದು ಹೋಂವರ್ಕ್ ಮಾಡಿಲ್ಲ ಎಂದು ಬಾಲಕನ ಮೇಲೆ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ನ ವೀಣಾ ವಿದ್ಯಾಸಂಸ್ಥೆಯಲ್ಲಿ ಒಂದು ಘಟನೆ ನಡೆದಿದ್ದು, ಬಾಲಕನಿಗೆ ಶಿಕ್ಷಕಿ ಬಾಸುಂಡೆ ಬರುವಂತೆ ಹೊಡೆದಿದ್ದಾರೆ ಶಾಲಾ ಶಿಕ್ಷಕಿ ವಿರುದ್ಧ ಇದೀಗ ಬಿಇಒಗೆ ಪೋಷಕರು ದೂರು ಸಹ ನೀಡಿದ್ದಾರೆ. ಬೆಂಗಳೂರು ಉತ್ತರ ವಲಯದ ರಾಜಾಜಿನಗರ ಬಿಇಒಗೆ ಬಾಲಕನ ಪೋಷಕರು ಇದೀಗ ದೂರು ಸಲ್ಲಿಸಿದ್ದಾರೆ. ಈ ಒಂದು ಘಟನೆಗೆ ಸಂಬಂಧಪಟ್ಟಂತೆ ಬಾಲಕನ ಮೇಲೆ ಹಲ್ಲೆ ಮಾಡಿದ ಕೆಸ್ ವಿಚಾರವಾಗಿ ತ್ರೀಮನ್ ಕಮಿಟಿ ಮಾಡಿ ತನಿಖೆ ನಡೆಸುತ್ತೇವೆ ಈ ಕುರಿತು ಕ್ರಮ ತೆಗೆದುಕೊಳ್ಳುತ್ತೇವೆ ಅಂತ ಬಿಇಓ ತಾರಾನಾಥ ಮಾಹಿತಿ ನೀಡಿದ್ದಾರೆ.…

Read More

ಗದಗ : ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ 13ನೇ ದಿನಕ್ಕೆ ಉತ್ಖನನ ಕಾರ್ಯ ಮುಂದುವರೆದಿದ್ದು, ಇದೀಗ ನಿಧಿ ಶೋಧ ನಡೆಸುವ ವೇಳೆ ನಿಜವಾಗಿಯೂ ಒಂದು ಹಾವು ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಇದೀಗ ಆತಂಕ ಮನೆ ಮಾಡಿದೆ. ಹೌದು ಲಕ್ಕುಂಡಿಯಲ್ಲಿ ಇಂದು 13ನೇ ದಿನದ ಉತ್ಖನನ ಕಾರ್ಯ ನಡೆಯುತ್ತಿದ್ದು ಉತ್ಖನನ ನಡೆಯುತ್ತಿರುವ ಸ್ಥಳದಲ್ಲಿ ಹಾವು ಕಾಣಿಸಿಕೊಂಡಿತು. ನಿನ್ನೆ ಮೂರು ಹೆಡೆ ನಾಗರಿಕ ಶಿಲೆ ಪತ್ತೆಯ ಬೆನ್ನಲ್ಲೇ, ಇಂದು ನಿಜವಾದ ಹಾವು ಪತ್ತೆಯಾಗಿದೆ. ನಿಜವಾದ ಹಾವು ಕಂಡ ಕೂಡಲೇ ಸ್ಥಳೀಯರಲ್ಲಿ ಭಯ ಹೆಚ್ಚಿದೆ.

Read More

ಮೈಸೂರು : ಕರ್ನಾಟಕ ಗೋವಾ ಗಡಿಯಲ್ಲಿ 400 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಮ್ಮ ಪೊಲೀಸರು ಈ ಒಂದು ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಈ ಪ್ರಕರಣದ ಕುರಿತು ಮಾತನಾಡಿದ ಗ್ರಹ ಸಚಿವ ಪರಮೇಶ್ವರ್ ಅವರು ನಮ್ಮ ಪೊಲೀಸರು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ ಇನ್ನೂ ಹೆಚ್ಚಿನ ಮಾಹಿತಿ ಎಸ್ಐಟಿ ವರದಿ ಬಂದವಳಿಗೆ ಗೊತ್ತಾಗಲಿದೆ ಎಂದು ಮೈಸೂರಿನಲ್ಲಿ ಗ್ರಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. 400 ಕೋಟಿ ರಾಬರಿ ಪ್ರಕರಣದಲ್ಲಿ ಈಗಾಗಲೇ ಏಳು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದು ತನಿಖೆ. ಮುಂದುವರೆದಿದೆ.

Read More

ಕೊಡಗು : ಕಾಡಾನೆ ಜೊತೆಗೆ ಶಾಲಾ ವಾಹನ ಚಾಲಕ ಹುಚ್ಚಾಟ ನಡೆಸಿದ್ದಾನೆ. ವಿಡಿಯೋ ಮಾಡುತ್ತಿದ್ದಾಗ ಕಾಡಾನೆ ಶಾಲಾ ಬಸ್ ಅನ್ನು ಅಟ್ಟಾಡಿಸಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಾಲ್ದಾರಿ ಬಳಿ ಈ ಒಂದು ಘಟನೆ ನಡೆದಿದೆ. ಮಗಳ ಕೈಯಲ್ಲಿ ಚಾಲಕ ಸುನಿಲ್ ವಿಡಿಯೋ ಮಾಡಿಸಿದ್ದಾನೆ. ಆನೆ ಹಿಮ್ಮುಖವಾಗಿ ಶಾಲಾ ವಾಹನ ಚಲಾಯಿಸಿ ಹುಚ್ಚಾಟ ಮೆರೆದಿದ್ದಾನೆ. ಶಾಲಾ ಮಕ್ಕಳನ್ನು ಬಿಟ್ಟು ಬರುವಾಗ ಒಂಟಿ ಸಲಗ ಎದುರಾಗಿತ್ತು. ವಾಹನ ನಿಲ್ಲಿಸಿ ಸುನಿಲ್ ಮಗಳಿಗೆ ವಿಡಿಯೋ ಮಾಡುವಂತೆ ಸೂಚನೆ ನೀಡಿದ್ದಾನೆ. ಸಿದ್ದಾಪುರದ ಬಿಜಿಎಸ್ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲಾ ಬಸ್ ಇದಾಗಿದ್ದು ಚಾಲಕನ ಹುಚ್ಚಾಟಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಅನಧಿಕೃವಾಗಿ ಬಾಂಗ್ಲಾ ನುಸುಳುಕೋರರ ವಿರುದ್ಧ ವಿಳಂಬವಾಗಿ ಕ್ರಮ ಕೈಗೊಂಡಿರುವ ಬಗ್ಗೆ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿತ್ತು. ಈ ಬೆನ್ನಲ್ಲೇ, ಬಾಂಗ್ಲಾದೇಶ ಸೇರಿ ವಿವಿಧ ದೇಶಗಳಿಂದ ಬಂದು ರಾಜ್ಯದಲ್ಲಿ ಬೀಡುಬಿಟ್ಟಿದ್ದ ಅಕ್ರಮ ವಲಸಿಗರ ಪತ್ತೆ, ಗಡಿಪಾರು ಹಾಗೂ ಈ ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಕಳೆದ ಮೂರು ವರ್ಷಗಳಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳಿಂದ ಅಕ್ರಮವಾಗಿ ರಾಜ್ಯದಲ್ಲಿ ನೆಲೆಯೂರಿದ್ದ 432 ಮಂದಿ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 255 ಮಂದಿಯನ್ನು ಪೊಲೀಸ್ ಇಲಾಖೆ ಗಡಿಪಾರು ಮಾಡಿದೆ. ಇದರ ಪೈಕಿ 370 ಮಂದಿ ಬಾಂಗ್ಲಾದೇಶದವರಾಗಿದ್ದಾರೆ. ಅಲ್ಲದೆ, ಪಾಕಿಸ್ತಾನದ 16 ಹಾಗೂ ಶ್ರೀಲಂಕಾದ 42 ಮಂದಿ ಇದ್ದಾರೆ. ಮೂರು ವರ್ಷಗಳಲ್ಲಿ 255 ಮಂದಿ ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿದೆ. 178 ಜನರನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಇವರ ವಿರುದ್ದ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನದಲ್ಲಿ…

Read More