Subscribe to Updates
Get the latest creative news from FooBar about art, design and business.
Author: kannadanewsnow05
ಮುಂಬೈ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಹಿರಿಯ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಬುಧವಾರ ವಿಮಾನ ಅಪಘಾತದಲ್ಲಿ ನಿಧನರಾಗಿದ್ದು, ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಪತಿಯ ಕಾಲಿಗೆ ಪತ್ನಿ ಸುನೇತ್ರ ನಮಸ್ಕರಿಸಿ ಕಣ್ಣೀರು ಹಾಕಿದರು ಬಾರಾಮತಿ ವಿದ್ಯಾ ಪ್ರತಿಷ್ಠಾನ ವಿಧಾನದಲ್ಲಿ ಅಂತ್ಯಕ್ರಿಯೆ ನೆರವೇರಿತು. ಪುತ್ರರಾದ ಪಾರ್ಥ ಮತ್ತು ಜಯ್ ರಿಂದ ಅಂತಿಮ ವಿಧಿ ವಿಧಾನ ನೆರವೇರಿತು. ಅಜಿತ್ ಪವಾರ್ ಅವರು ನಿನ್ನೆ ಬಾರಾಮತಿಗೆ ಪ್ರಯಾಣಿಸುತ್ತಿದ್ದರು, ಅಲ್ಲಿ ಅವರು ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಿರ್ಧರಿಸಲಾಗಿತ್ತು.ಅವರ ವೈಯಕ್ತಿಕ ಭದ್ರತಾ ಅಧಿಕಾರಿ, ವಿಮಾನ ಸಿಬ್ಬಂದಿ ಮತ್ತು ಇಬ್ಬರು ಪೈಲಟ್‌ಗಳು ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಐದು ಜನರು ಅಪಘಾತದಲ್ಲಿ ಸಾವನ್ನಪ್ಪಿದರು. ರಾಜ್ಯ ಸರ್ಕಾರ ಮೂರು ದಿನಗಳ ರಾಜ್ಯ ಶೋಕಾಚರಣೆಯನ್ನು ಘೋಷಿಸಿದೆ. ಇಂದು ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು. ಮಹಾರಾಷ್ಟ್ರದ ಅತಿ ಹೆಚ್ಚು ಕಾಲ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಅಜಿತ್ ಪವಾರ್ ಅವರನ್ನು ರಾಜ್ಯ ರಾಜಕೀಯದಲ್ಲಿ ಪ್ರಭಾವಿ ಮತ್ತು…
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಇಂದಿನ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದರಿಂದ ಬೇಸರಗೊಂಡು ಸಚಿವ ಕೆಜೆ ಜಾರ್ಜ್ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಲು ಮುಂದಾಗಿದ್ದರು ಎನ್ನುವ ಸುದ್ದಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಸುನಿಲ್ ಕುಮಾರ್ ಪ್ರಸ್ತಾಪಿಸಿದರು ಸುನಿಲ್ ಕುಮಾರ್ ಇದೇ ವಿಚಾರವನ್ನು ಸ್ಪೀಕರ್ ಯುಟಿ ಖಾದರ್ ಅವರ ಗಮನಕ್ಕೆ ತಂದರು. ಇದಕ್ಕೆ ಸಚಿವ ಕೆಜಿ ಜಾರ್ಜ್ ಸ್ಪಷ್ಟನೆ ನೀಡಿದ್ದು, ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸಿಲ್ಲ. ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಸಿಎಂ ಸಿದ್ದರಾಮಯ್ಯ ಅವರ ಮೇಲೆ ಸಂಪೂರ್ಣವಾದ ನಂಬಿಕೆ ನಮಗೆ ಇದೆ ನಿನ್ನೆ ಸಹ CLP ಮೀಟಿಂಗ್ ಇತ್ತು. ನನಗೆ ಗೊತ್ತಿಲ್ಲದ ವಿಚಾರ ಕೇಳಿದರೆ ನಾನು ಏನು ಹೇಳಲಿ? ರಾಜೀನಾಮೆ ವಿಚಾರ ಸತ್ಯಕ್ಕೆ ದೂರವಾದ ಮಾತು. ಮಾಧ್ಯಮಗಳು ಇಂತಹ ಸುದ್ದಿಗಳನ್ನು ಅವರೇ ಸೃಷ್ಟಿ ಮಾಡುತ್ತಿದ್ದಾರೆ. ಆವರಿಗೆ ಬೆಳಿಗ್ಗೆ ಸಾಯಂಕಾಲ ಸುದ್ದಿ ಬೇಕಾಗಿದೆ ಈ ರೀತಿ…
ಕೊಡಗು : ಕೊಡಗು ಜಿಲ್ಲೆಯಲ್ಲಿ ಮೊಹಮ್ಮದ್ ಸವದ್ ಎಂಬ ಯುವಕನ ರಾಸಲೀಲೆ ವಿಡಿಯೋಗಳು ವೈರಲ್ ಆಗಿದ್ದು, ಭಾರಿ ಸಂಚಲನ ಮೂಡಿಸಿವೆ. ಅನ್ಯ ಧರ್ಮದ ಯುವತಿಯರ ಜತೆ ರಾಸಲೀಲೆ ನಡೆಸಿ ವಿಡಿಯೋ ಮಾಡಿಟ್ಟುಕೊಂಡಿದ್ದ ಸವದ್, ಅನೇಕ ರಾಜಕಾರಣಿಗಳ ಮಗಳಂದಿರ ಜತೆಗೂ ಕಾಮಕೇಳಿ ನಡೆಸಿದ್ದ ಎಂದು ಆರೋಪಿಸಲಾಗಿದೆ. ಸದ್ಯ ಮಡಿಕೇರಿ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ ಸಂಪಿಗೆಹಳ್ಳಿಯ ಯೆನಪೋಯ ಕಾಲೇಜಿನಲ್ಲಿ ಬಿಬಿಎ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದುಬಂದಿದೆ.ಆರೋಪಿಯು ವಿವಿಧ ಯುವತಿಯರೊಂದಿಗೆ ಕಾಮಕೇಳಿ ನಡೆಸಿ, ಖಾಸಗಿ ಕ್ಷಣಗಳನ್ನು ಸ್ವತಃ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾನೆ ಎನ್ನಲಾಗಿದೆ. ಈ ವಿಡಿಯೋಗಳು ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಜಿಲ್ಲೆಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ವೈರಲ್ ಆದ ವಿಡಿಯೋಗಳಲ್ಲಿ ಕೆಲ ಯುವತಿಯರು ಅನ್ಯ ಧರ್ಮಕ್ಕೆ ಸೇರಿದವರಾಗಿದ್ದು, ಕೆಲವರು ರಾಜಕೀಯ ಪಕ್ಷದ ಜಿಲ್ಲಾ ಮಟ್ಟದ ನಾಯಕರ ಪುತ್ರಿಯರು ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆ ಪ್ರಕರಣವು ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಸಂಬಂಧ ಕೊಡಗು ಅಭಿವೃದ್ಧಿ ಸಮಿತಿ ಅಧ್ಯಕ್ಷ…
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಬೀಸಿದ್ದು, ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡಿದ ಹಿನ್ನೆಲೆಯಲ್ಲಿ ಯತೀಂದ್ರ ನಡೆಗೆ ಬೇಸತ್ತು ಸಚಿವ ಕೆಜೆ ಜಾರ್ಜ್ ರಾಜೀನಾಮೆಗೆ ಮುಂದಾಗಿದ್ದರು ಎನ್ನುವ ಸುದ್ದಿ ಭಾರಿ ಚರ್ಚಿಗೆ ಕಾರಣವಾಗಿದೆ. ಹೌದು ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ನೀಡಲು ಸಚಿವ ಕೆ ಜೆ ಜಾರ್ಜ್ ಮುಂದಾಗಿದ್ದರು ಎನ್ನುವ ಸುದ್ದಿ ಇದೀಗ ಬೆಳಕಿಗೆ ಬಂದಿದೆ. ಕೇಜೆ ಜಾರ್ಜ್ ವಿಶ್ವಾಸಕ್ಕೆ ಪಡೆಯದೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಅಧಿಕಾರಿಗಳ ವರ್ಗಾವಣೆಗೆ ಮುಂದಾಗಿದ್ದ ಕೆ ಜೆ ಚಾರ್ಜ್ ಬೇಸರ ಹೊರಹಾಕಿದ್ದು ಯತೀಂದ್ರ ಹಸ್ತಕ್ಷ ಬಗ್ಗೆ ಸಚಿವ ಜಾರ್ಜ್ ಬೇಸರ ಪ್ರತಿಪಡಿಸಿದ್ದಾರೆ. ಯತೀಂದ್ರ ಹಸ್ತಕ್ಷಪ್ಪಕ್ಕೆ ಬೇಸತ್ತು ಸಿಎಂ ಸಿದ್ದರಾಮಯ್ಯಗೆ ಕೆಜೆ ಜಾರ್ಜ್ ರಾಜೀನಾಮೆ ಪತ್ರ ಸಹ ನೀಡಿದ್ದರು ಎನ್ನಲಾಗಿದೆ. ಸಚಿವನಾಗಿ ನನ್ನ ಮಾತಿಗೆ ಬೆಲೆ ಇಲ್ಲದಿರುವಾಗ ನಾನೇಕೆ ಇರಲಿ? ಈ ಸರ್ಕಾರದಲ್ಲಿ ನಾನೇಕೆ ಇರಲಿ ಎಂದು ಕೇಜೆ ಜಾರ್ಜ್ ಪ್ರಶ್ನೆ ಮಾಡಿದ್ದಾರೆ. ನಾನು ನಿಮ್ಮ ಜೊತೆ ಇರುತ್ತೇನೆ ಆದರೆ ಸರ್ಕಾರದಲ್ಲಿ…
ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಗೇಟ್ ಮುರಿದುಬಿದ್ದು ಸೆಕ್ಯೂರಿಟಿ ಗಾರ್ಡ್ ಒಬ್ಬರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ವಾಯುವ್ಯ ವಿಭಾಗದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಬಿಲ್ಡಿಂಗ್ ಬಳಿ ಸ್ವಾಮಿ ಎಂಬವರು ಗೇಟ್ ಕೆಲಸಕ್ಕೆ ನಿಯೋಜನೆಗೊಂಡಿದ್ದರು. ಗೂಡ್ಸ್ ವೆಹಿಕಲ್ ಬಂದಿದ್ದ ವೇಳೆ ಸ್ವಾಮಿ ಗೇಟ್ ಓಪನ್ ಮಾಡಿದ್ದಾರೆ ಈ ವೇಳೆ ಸ್ಲೈಡಿಂಗ್ ಗೇಟ್ ಮುರಿದುಬಿದ್ದು ಸ್ವಾಮಿ (55) ಸ್ಥಳದಲ್ಲಿ ಸಾವನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಬಾಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
ಮುಂಬೈ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಕುಮಾರ್ ಅವರು ನಿನ್ನೆ ವಿಮಾನ ದುರಂತದಲ್ಲಿ ಸಾವನಪ್ಪಿದ್ದಾರೆ. ಇದೀಗ ಈ ಒಂದು ದುರ್ಘಟನೆ ನಡೆದ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದೆ. ಅಜಿತ್ ಪವಾರ್ ತೆರಳುತ್ತಿದ್ದ ವಿಮಾನ ದುರಂತದ ರಹಸ್ಯ ಬೇಧಿಸಲು DGCA ಬೆನ್ನುತ್ತಿದ್ದು, ಪೈಲಟ್ ಅಚಾತುರ್ಯವೊ ಅಥವಾ ತಾಂತ್ರಿಕ ದೋಷವೊ, ಇಲ್ಲ ಹವಾಮಾನ ವೈಪರಿತ್ಯದಿಂದ ದುರಂತ ಸಂಭವಿಸಿದೆಯಾ ಎನ್ನುವ ಎಲ್ಲಾ ಪ್ರಶ್ನೆಗಳಿಗೆ ಬ್ಲಾಕ್ ಬಾಕ್ಸ್ ನಲ್ಲಿ ಉತ್ತರ ಸಿಗಲಿದೆ. ಹಲವು ವಿಚಾರಗಳು ಹಾಗು ಕೆಲ ಪ್ರಶ್ನೆಗಳಿಗೆ ಈ ಒಂದು ಬ್ಲಾಕ್ ಬಾಕ್ಸ್ ನಲ್ಲಿ ಉತ್ತರ ಸಿಗಲಿದೆ.
ಹಾಸನ : ಅನೈತಿಕ ಸಂಬಂಧದ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಚಾಕುವಿನಿಂದ ಇರಿದು ಅಡುಗೆ ಕಾಂಟ್ರಾಕ್ಟರ್ ಅನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಹಾಸನ ನಗರದ ಕೆಆರ್ ಪುರಂ ಬಡಾವಣೆಯಲ್ಲಿ ತಡರಾತ್ರಿ ಈ ಒಂದು ಘಟನೆ ಸಂಭವಿಸಿದೆ. ಚಾಕುವಿನಿಂದ ಇರಿದು ಅಡುಗೆ ಗುತ್ತಿಗೆದಾರ ಆನಂದ (48) ಎಂಬಾತ್ತನ್ನು ಕೊಲೆ ಮಾಡಲಾಗಿದೆ. ಐದಾರು ಬಾರಿ ಚಾಕುವಿನಿಂದ ಇರಿದು ಧರ್ಮೇಂದ್ರ ಎಂಬಾತ ಆನಂದನನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಮಹಿಳೆಯ ಜೊತೆಗೆ ಆನಂದ್ ಮತ್ತು ಧರ್ಮೇಂದ್ರ ಅನೈತಿಕ ಸಂಬಂಧ ಹೊಂದಿದ್ದರು. ಮಹಿಳೆಯ ಜೊತೆ ಧರ್ಮೇಂದ್ರ ಎಂಟು ವರ್ಷಗಳ ಗೆಳೆತನ ಹೊಂದಿದ್ದ. ಈ ನಡುವೆ ಇದೆ ಮಹಿಳೆ ಜೊತೆ ಆನಂದ್ ಸಹ ಸಂಬಂಧ ಹೊಂದಿದ್ದ. ಈ ವಿಚಾರವಾಗಿ ನಿನ್ನೆ ರಾತ್ರಿ ಆನಂದ್ ಮತ್ತು ಧರ್ಮೇಂದ್ರ ನಡುವೆ ಗಲಾಟೆ ನಡೆದಿದೆ. ಗಲಾಟೆ ಬಳಿಕ ಗುತ್ತಿಗೆದಾರ ಆನಂದ್ ಮನೆಗೆ ತೆರಳಿದ್ದಾನೆ. ಮತ್ತೆ ಫೋನ್ ಮಾಡಿ ಧರ್ಮೇಂದ್ರ ಆನಂದನ್ನು ಕರೆಸಿಕೊಂಡಿದ್ದಾನೆ. ಕುಡಿದ ಅಮಲಿನಲ್ಲಿ ಆನಂದನನ್ನು ಕೊಲೆ ಮಾಡಿ ಧರ್ಮೇಂದ್ರ ಪರಾರಿಯಾಗಿದ್ದಾನೆ. ಸ್ಥಳಕ್ಕೆ…
ದಾವಣಗೆರೆ : ಪತ್ನಿ ಮದುವೆಯಾದ 45 ದಿನದಲ್ಲಿ ಬೇರೆ ಯುವಕನೊಂದಿಗೆ ಓಡಿ ಹೋಗಿದ್ದಕ್ಕೆ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿತ್ತು. ಈ ವಿಚಾರ ತಿಳಿದು ಮುಂದೆ ನಿಂತು ಮದುವೆ ಮಾಡಿಸಿದ್ದ, ಯುವತಿಯ ಸೋದರ ಮಾವ ಕೂಡ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆರೋಪಿ ಯುವತಿಯನ್ನು ಅರೆಸ್ಟ್ ಮಾಡಿದ್ದಾರೆ. ಸರಸ್ವತಿಯ ಪತಿ ಹರೀಶ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವಿಚಾರ ತಿಳಿದು ಪತ್ನಿ ಸರಸ್ವತಿಯ ಸೋದರ ಮಾವ ರುದ್ರೇಶ್ ಕೂಡಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತ್ನಿ ಸರಸ್ವತಿಯನ್ನು ಪೋಲಿಸರು ಬಂಧಿಸಿದ್ದಾರೆ. ದಾವಣಗೆರೆಯ ಎಲೆಬೇತೂರಿನಲ್ಲಿ ಸಂಬಂಧಿಕರ ಮನೆಯಲ್ಲಿ ಇದ್ದ ಪತ್ನಿ ಸರಸ್ವತಿಯನ್ನು ಬಂಧಿಸಿ ಪೋಲಿಸರು ಗ್ರಾಮಾಂತರ ಠಾಣೆಗೆ ಕರೆ ತಂದಿದ್ದಾರೆ. ಇನ್ನು ತಲೆಮರಿಸಿಕೊಂಡಿರುವ ಉಳಿದ ಮೂವರು ಆರೋಪಿಗಳ ಬಂಧನಕ್ಕೆ ಪೋಲಿಸರು ಬಲೆ ಬೀಸಿದ್ದಾರೆ. ಸರಸ್ವತಿ ಪ್ರಿಯಕರ ಶಿವಕುಮಾರ್, ಸೋದರ ಮಾವ ಗಣೇಶ್, ಸರಸ್ವತಿ ಚಿಕ್ಕಮ್ಮ ಅಂಜಿನಮ್ಮ ನಾಪತ್ತೆಯಾಗಿದ್ದು,…
ನವದೆಹಲಿ : ಸುಪ್ರೀಂ ಕೋರ್ಟ್ ನಲ್ಲಿ ಜಯನಗರ ಶಾಸಕ ರಾಮಮೂರ್ತಿಗೆ ಭಾರಿ ಹಿನ್ನಡೆಯಾಗಿದೆ ಚುನಾವಣಾ ವಿವಾದ ಸಂಬಂಧ ಸಲ್ಲಿಸಿದ ರಾಮಮೂರ್ತಿ ಅರ್ಜಿಯನ್ನು ಇದೀಗ ಸುಪ್ರೀಂ ಕೋರ್ಟ್ ವಜಾ ಗೊಳಿಸಿದೆ. ಪ್ರಕರಣದ ಟ್ರಯಲ್ ತಡೆ ಕೋರಿ ಶಾಸಕ ರಾಮಮೂರ್ತಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ರಾಮಮೂರ್ತಿ ಅವರ ಅರ್ಜಿಯನ್ನು ವಜಾಗೊಳಿಸಿದೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿ ವಿಕ್ರಮನಾಥ್ ಅವರಿದ್ದಾ ಪೀಠ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಧಾರವಾಡ : ಧಾರವಾಡದಲ್ಲಿ ಹುಚ್ಚುನಾಯಿ ಭೀಕರವಾಗಿ ದಾಳಿ ಮಾಡಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 9 ಜನರ ಮೇಲೆ ಹುಚ್ಚು ನಾಯಿ ದಾಳಿ ಮಾಡಿದೆ ಶಿರಡಿ ನಗರ ಬಡಾವಣೆಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಬಡಾವಣೆಯ ವಿವಿಧ ಕೆಲಸಕ್ಕೆ ಬರೋವರ ಮೇಲೆ ಹುಚ್ಚು ನಾಯಿ ದಾಳಿ ಮಾಡಿದೆ ಕ್ಯಾರಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಈ ಒಂದು ಬಡಾವಣೆಯಲ್ಲಿ ಬೀದಿ ನಾಯಿ ದಾಳಿಗೆ ಜನರು ಹೊರಗಡೆ ಬರುವುದಕ್ಕೂ ಹೆದರುತ್ತಿದ್ದಾರೆ. ಹುಚ್ಚುನಾಯಿ ದಾಳಿಗೆ ಮಹಿಳೆಯರ ಕೈ ಕಾಲಿಗೆ ಕಚ್ಚಿದ್ದು, ಅಲ್ಲದೆ ಮಕ್ಕಳ ಮೇಲು ದಾಳಿ ಮಾಡಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳೀಯರು ಹುಚ್ಚುನಾಯಿಯನ್ನು ಹೊಡೆದು ಕೊಂದಿದ್ದಾರೆ.














