Author: kannadanewsnow05

ಕೇರಳ : ಹಲವಾರು ಮಹಿಳೆಯರಿಂದ ಲೈಂಗಿಕ ದೌರ್ಜನ್ಯದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಮ್‌ಕೂಟತಿಲ್ ರಾಜೀನಾಮೆ ನೀಡಿದ ಒಂದು ದಿನದ ನಂತರ, ಇದೀಗ ಶಾಸಕ ರಾಹುಲ್ ನನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿದೆ. ಹೌದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಶಾಸಕ ರಾಹುಲ್ ಮಮಕೂಟತಿಲ್ ನನ್ನ ಇದೀಗ ಕಾಂಗ್ರೆಸ್ ಅಮಾನತು ಗೊಳಿಸಿದೆ. ಕೇರಳದ ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ರಾಹುಲ್ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಇದೀಗ ಕಾಂಗ್ರೆಸ್ ಅಮಾನತುಗೊಳಿಸಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಬಿಎಂಟಿಸಿ ಚಾಲಕರ ಅಟ್ಟಹಾಸ ನಿಲ್ಲುತ್ತಿಲ್ಲ.ಇದೀಗ BMTC ಬಸ್ ಡಿಕ್ಕಿಯಾಗಿ ವ್ಯಕ್ತಿಯ ಸ್ಥಿತಿ ಗಂಭೀರ ಆಗಿರುವ ಘಟನೆ ತಾವರೆಕೆರೆ ನಿಲ್ದಾಣದಲ್ಲಿ ನಡೆದಿದೆ.ವ್ಯಕ್ತಿಗೆ ಎಲೆಕ್ಟ್ರಿಕ್ ಬಸ್ ಡಿಕ್ಕಿಯಾಗಿ ಈ ಒಂದು ಅಪಘಾತ ಸಂಭವಿಸಿದೆ. AK 7024 ನಂಬರ್ ಎಲೆಕ್ಟ್ರಿಕ್ ಬಸ್ ಡಿಕ್ಕಿಯಾಗಿ ಅನಾಹುತ ಸಂಭವಿಸಿದೆ. ಇನ್ನು ಇಂದು ಬೆಳಿಗ್ಗೆ ತಾನೇ ನಗರದಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ಸಿಗೆ ಮತ್ತೊಂದು ಬಲಿಯಾಗಿದೆ. ಬಿಎಂಟಿಸಿ ಬಸ್ ಹರಿದು 11 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಕೆ ಆರ್ ಮಾರ್ಕೆಟ್ ಬಳಿಯಲ್ಲಿ ಈ ದುರ್ಘಟನೆ ನಡೆದಿದೆ. ತಂದೆ ಜೊತೆಗೆ ದ್ವಿಚಕ್ರ ವಾಹನದಲ್ಲಿ ಬಾಲಕ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ದೇವಸ್ಥಾನದ ಪೂಜಾರಿ ದಿಲೀಪ್ ಕುಮಾರ್ ಪುತ್ರ ಶಬರೀಶ್(11) ಸಾವನ್ನಪ್ಪಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಬೈಕ್ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ ಅಪಘಾತ ನಡೆದಿದೆ. ಬೈಕ್​​ನಲ್ಲಿದ್ದ ಫಾರೆಸ್ಟ್ ಗಾರ್ಡ್ ಕೆಂಪರಾಜು, ಸೆಂಟ್ರಿಂಗ್ ಕೆಲಸ ಮಾಡುವ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More

ಮಂಡ್ಯ : ಡಿಸಿಎಂ ಡಿಕೆ ಶಿವಕುಮಾರ್ ಆರ್ ಎಸ್ ಎಸ್ ಗೀತೆ ಹಾಡಿದ ವಿಚಾರವಾಗಿ ಮಂಡ್ಯದಲ್ಲಿ ಸಚಿವ ಚಲುವರಾಯಸ್ವಾಮಿ ಹೇಳಿಕೆ ನೀಡಿದ್ದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಬ್ಬ ಹಿಂದು. ಹಿಂದುತ್ವ ದೇಗುಲಗಳ ಬಗ್ಗೆ ಬಿಜೆಪಿಗಿಂತ ನಮಗೆ ಹೆಚ್ಚು ಗೌರವವಿದೆ. ನಾವು ಎಲ್ಲರನ್ನೂ ಸಮಾನವಾಗಿ ನೋಡುತ್ತೇವೆ. ಡಿಸಿಎಂ ಡಿಕೆ ಶಿವಕುಮಾರ್ ಸಂದರ್ಭ ಬಂದಾಗ ಸಿಎಂ ಆಗುತ್ತಾರೆ ಎಂದು ಸಚಿವ ಚೆಲುವರಾಯ ಸ್ವಾಮಿ ತಿಳಿಸಿದರು. ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಿಂದುತ್ವದಲ್ಲಿ ರಾಜಕಾರಣ ಮಾಡುತ್ತಾರೆ. ನಾವು ಧರ್ಮ ಸಮುದಾಯ ಇಟ್ಟುಕೊಂಡು ರಾಜಕಾರಣ ಮಾಡಲ್ಲ. ಡಿಕೆ ಶಿವಕುಮಾರ್ ಬಿಜೆಪಿಗೆ ಹೋಗುವುದಾದರೆ ಯಾವಾಗಲೂ ಹೋಗುತ್ತಿದ್ದರು ಕಾಂಗ್ರೆಸ್ ನಲ್ಲಿ ಡಿಕೆ ಶಿವಕುಮಾರ್ ದಟ್ಟಿ ನೆಲ ಕಂಡುಕೊಂಡಿದ್ದಾರೆ ಡಿಕೆ ಶಿವಕುಮಾರ್ ಹಾಗೆ ಬಿಜೆಪಿಗೆ ಹೋಗುತ್ತಾರೆ ಕಾಂಗ್ರೆಸ್ ಅಧ್ಯಕ್ಷರಾಗಿ ಉತ್ತಮವಾಗಿ ಡಿಕೆ ಶಿವಕುಮಾರ್ ಕೆಲಸ ಮಾಡಿದ್ದಾರೆ ಎಂದು ಮಂಡ್ಯದಲ್ಲಿ ಸಚಿವ ಚೆಲುವರಾಯಸ್ವಾಮಿ ಹೇಳಿಕೆ ನೀಡಿದರು. ನಮಗೆ ಡಿಕೆ ಶಿವಕುಮಾರ್ ಅವರ ಬಗ್ಗೆ ಪ್ರಶಂಸೆ ಇದೆ ಎಂದರು. ಹಾಗಿದ್ರೆ ಡಿಸಿಎಂ…

Read More

ಬೆಂಗಳೂರು : ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಅಕ್ರಮ ಹಣ ವರ್ಗಾವಣೆ ಮತ್ತು ಆಸ್ತಿ ಗಳಿಕೆ ಆರೋಪದಡಿ ಇಡಿ ವಶಕ್ಕೆ ಪಡೆದುಕೊಂಡಿದೆ. ಆಗಸ್ಟ್ 28 ರವರೆಗೆ ಇಡಿ ಕಸ್ಟಡಿಗೆ ನೀಡಲಾಗಿದೆ. ಕೋಟ್ಯಂತರ ರೂಪಾಯಿ ನಗದು ಮತ್ತು ಚಿನ್ನ ವಶಪಡಿಸಿಕೊಳ್ಳಲಾಗಿದೆ. ಆನ್‌ಲೈನ್ ಬೆಟ್ಟಿಂಗ್ ಮತ್ತು ಕ್ಯಾಸಿನೋಗಳೊಂದಿಗಿನ ಸಂಪರ್ಕವನ್ನು ಇಡಿ ತನಿಖೆ ನಡೆಸುತ್ತಿದೆ. ಹೌದು ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನು ಬೆಂಗಳೂರಿನ 35ನೇ ಸಿಸಿಹೆಚ್ ಆಗಸ್ಟ್ 28ರ ವರೆಗೆ ಜಾರಿ ನಿರ್ದೇಶನಾಲಯದ (ED) ಕಸ್ಟಡಿಗೆ ನೀಡಿದೆ. ಶಾಸಕ ಕೆ.ಸಿ ವೀರೇಂದ್ರ ಅವರನ್ನು 14 ದಿನ ತಮ್ಮ ವಶಕ್ಕೆ ನೀಡುವಂತೆ ಇಡಿ ಮನವಿ ಮಾಡಿತ್ತು. ಇಡಿ ವಶಕ್ಕೆ ನೀಡುವ ಅವಶ್ಯಕತೆ ಇಲ್ಲ ಎಂದು ವಿರೇಂದ್ರ ಪಪ್ಪಿ ಪರ ವಕೀಲರ ಮನವಿ ಮಾಡಿದರು. ಆಗ ಇಡಿ ಪರ ವಕೀಲರು, ತನಿಖೆ ಅಗತ್ಯ ಇದೆ. ಕೋಟ್ಯಾಂತರ ರೂ. ನಗದು…

Read More

ಬಾಗಲಕೋಟೆ : ಬಾಗಲಕೋಟೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಓವರ್ ಟೆಕ್ ಮಾಡಲು ಹೋಗಿ KSRTC ಬಸ್ ಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಕಾರಿನ ಚಾಲಕ ಸಾವನ್ನಪ್ಪಿದ್ದಾನೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೂಲಗೇರಿ ಬಳಿ ಈ ಒಂದು ಘಟನೆ ನಡೆದಿದೆ. ಘಟನೆಯಲ್ಲಿ ಇನ್ನೋವಾ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, KSRTC ಬಸ್ ಚಾಲಕನಿಗೆ ಗಂಭೀರವಾದ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಕೆರೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಮೃತ ಕಾರು ಚಾಲಕನ ಬಗ್ಗೆ ಪೊಲೀಸರು ಮಾಹಿತಿ ಕಲೇ ಹಾಕುತ್ತಿದ್ದಾರೆ.

Read More

ದಕ್ಷಿಣಕನ್ನಡ : ಧರ್ಮಸ್ಥಳದ ಬಗ್ಗೆ ಅಪಪ್ರಚಾರದ ಕುರಿತು ಸುಮೊಟೊ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೊಲೀಸ್ ಠಾಣೆಗೆ ಯೂಟ್ಯೂಬರ್ ಸಮೀರ್ ವಿಚಾರಣೆಗೆ ಹಾಜರಾಗಿದ್ದಾನೆ. ಕಳೆದ ಎರಡು ದಿನಗಳಿಂದ ಬೆಂಗಳೂರು ಬಾಡಿಗೆ ಮನೆ ಹಾಗೂ ಬಳ್ಳಾರಿಯಲ್ಲಿರುವ ಸ್ವಂತ ಮನೆಗೆ ಪೊಲೀಸರು ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್ ಅಂಟಿಸಿ ಬಂದಿದ್ದರು. ಇದೀಗ ಯೂಟ್ಯೂಬರ್ ಸಮೀರ್ ಮೂವರು ವಕೀಲರೊಂದಿಗೆ ಬೆಳ್ತಂಗಡಿ ಠಾಣೆಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದಾನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಗೆ ಯೂಟ್ಯೂಬರ್ ಸಮೀರ್ ವಿಚಾರಣೆಗೆ ಹಾಜರಾಗಿದ್ದಾನೆ. ಇನ್ನು ಇದೇ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಅರೆಸ್ಟ್ ಮಾಡಿದ್ದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ.

Read More

ಯಾದಗಿರಿ : ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ವಿಚಾರವಾಗಿ ಈಗಾಗಲೇ SIT ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಅರೆಸ್ಟ್ ಮಾಡಿದ್ದಾರೆ. ಈ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು ಧರ್ಮಸ್ಥಳದ ಬಗ್ಗೆ ಷಡ್ಯಂತ್ರದ ಬಗ್ಗೆ ‘NIA’ ತನಿಖೆಯಾದ್ರೆ ತಪ್ಪಿಲ್ಲ ಎಂದು ತಿಳಿಸಿದರು. ಯಾದಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, NIA ತನಿಖೆ ನಡೆದರೆ ಷಡ್ಯಂತ್ರದ ಹಿಂದೆ ಯಾರು ಇದ್ದಾರೆ ಎಂದು ಗೊತ್ತಾಗುತ್ತದೆ ಇದಕ್ಕೆ ಬೇಕಾದರೆ NIA ಕ್ಕಿಂತ ಉನ್ನತ ತನಿಖೆ ಆಗಬೇಕು ಜನರು ಬೇರೆ ಕೆಲಸ ಬಿಟ್ಟು ಧರ್ಮಸ್ಥಳದ ಬಗ್ಗೆ ನೋಡ್ತಾ ಕುಳಿತಿದ್ದಾರೆ. ನ್ಯಾಯಾಲಯ ತನಿಖೆಗೆ ಸೂಚಿಸಿದ್ದರಿಂದ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಇದರಲ್ಲಿ ಎಡಪಂಥಿ ಹಾಗೂ ಬಲಪಂಥೀಯ ಎಂಬುದು ಯಾವುದು ಇಲ್ಲ ಇದು ದೇಶಕ್ಕೆ ಹಾಗೂ ರಾಜಕೀಯಕ್ಕೆ ಸಂಬಂಧಿಸಿದ ವಿಷಯ ಅಲ್ಲ ಧರ್ಮಸ್ಥಳದ ವಿಚಾರ ಒಂದು ಊರಿಗೆ ಸಂಬಂಧಿಸಿದಂತೆ ಅದನ್ನು ದೊಡ್ಡದು ಮಾಡಿ ಚರ್ಚೆ ಮಾಡುವುದು ಅನಗತ್ಯ. SIT ಅಧಿಕಾರಿಗಳು 15 ದಿನಗಳಿಂದ ತನಿಖೆ ಮಾಡುತ್ತಿದ್ದಾರೆ. ಕೋರ್ಟ್ ಆದೇಶ ಮಾಡದಿದ್ದರೆ…

Read More

ಸೆಪ್ಟೆಂಬರ್ ತಿಂಗಳು ಖಗೋಳ ದೃಷ್ಟಿಕೋನದಿಂದ ಬಹಳ ವಿಶೇಷವಾಗಿರಲಿದೆ. ಏಕೆಂದರೆ ಈ ಬಾರಿ ಎರಡು ದೊಡ್ಡ ಗ್ರಹಣಗಳು ಒಂದೇ ತಿಂಗಳಿನಲ್ಲಿ ಸಂಭವಿಸಲಿದೆ. ಚಂದ್ರಗ್ರಹಣ ಸೆಪ್ಟೆಂಬರ್ 7 ರಂದು ಮತ್ತು ಸೂರ್ಯಗ್ರಹಣ ಸೆಪ್ಟೆಂಬರ್ 21 ರಂದು. ಮತ್ತೊಂದು ವಿಶೇಷವೆನೆಂದರೆ ಎರಡೂ ಗ್ರಹಣಗಳೂ ಭಾರತದಲ್ಲಿ ಗೋಚರಿಸುತ್ತವೆ, ಆದ್ದರಿಂದ ಧಾರ್ಮಿಕ ಮತ್ತು ಜ್ಯೋತಿಷ್ಯ ದೃಷ್ಟಿಕೋನದಿಂದ ಅವುಗಳ ಪ್ರಾಮುಖ್ಯತೆ ಇನ್ನಷ್ಟು ಹೆಚ್ಚಾಗಲಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ,…

Read More

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮಾಸ್ಕ್ ಮ್ಯಾನ್ ಚೆನ್ನೈನನ್ನು ಸೈಟ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ ಇದೀಗ ಈ ಒಂದು ಪ್ರಕರಣಕ್ಕೆ ಮತ್ತೊಂದು ಸಿಕ್ಕಿದ್ದು ಚಿನ್ನಯ್ಯ ತಾನು ಹೆಸರು ಹೇಳಿದ ಎಲ್ಲರನ್ನೂ SIT ಅಧಿಕಾರಿಗಳು ಅರೆಸ್ಟ್ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹೌದು ಬುರುಡೆ ತಂದುಕೊಟ್ಟ 10ರಿಂದ 12 ಜನರ ಬಂಧನ ಆಗುವ ಸಾಧ್ಯತೆ ಇದೆ ಚಿನ್ನಯ ಹೆಸರು ಹೇಳಿದವರಿಗೂ ಕೂಡ ಇದೀಗ ಬಂಧನದ ಭೀತಿ ಎದುರಾಗಿದೆ.ಈಗಾಗಲೇ ಚಿನ್ನಯ್ಯ ಹಲವರ ಹೆಸರು ಹೇಳಿದ್ದು, ಧರ್ಮಸ್ಥಳದ ಕಾಡಿನಲ್ಲಿ ತಾವೇ ಬುರುಡೆ ಹೂತಿಟ್ಟ ಶಂಕೆ ವ್ಯಕ್ತವಾಗಿದೆ. ಧರ್ಮಸ್ಥಳದ ಅರಣ್ಯವ್ಯಾಪ್ತಿಯಲ್ಲಿ ಬುರುಡೆ ಷಡ್ಯಂತ್ರ ಇರಬಹುದು ಎಂದು ತೋರಿಸಲು ಚಿನ್ನಯ್ಯಗೆ ಸೂಚನೆ ಕೊಡಲಾಗಿತ್ತು ತಂದಿದ್ದ ಬುರುಡೆ ಅಲ್ಲದೆ ಮತ್ತೊಂದು ಬುರುಡೆ ಇರಿಸಿ ಸಂಚು ರೂಪಿಸಲಾಗಿತ್ತು ಕಳೆ ಬರಹದ ವೇಳೆ ಎಸ್ಐಟಿಗೆ ಸ್ಥಳ ತೋರಿಸಲು ಸೂಚನೆ ನೀಡಲಾಗಿತ್ತು ಎಂದು ತಿಳಿದು ಬಂದಿದೆ

Read More