Subscribe to Updates
Get the latest creative news from FooBar about art, design and business.
Author: kannadanewsnow05
ಚಿತ್ರದುರ್ಗ : ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ವೀರೇಂದ್ರ ಪಪ್ಪಿ ಮನೆಯಲ್ಲಿ ಸುಮಾರು 12 ಕೋಟಿ ನಗದು ಹಣವನ್ನು ಇಡಿ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಸುಮಾರು 1 ಕೋಟಿ ವಿದೇಶಿ ಕರೆನ್ಸಿ ಸೇರಿದಂತೆ ಸುಮಾರು 12 ಕೋಟಿ ನಗದು ಪತ್ತೆಯಾಗಿದೆ. ಶಾಸಕ ಕೆಸಿ ವೀರೇಂದ್ರ ಪಪ್ಪಿ ನಿವಾಸದ ಮೇಲೆ ದಾಳಿ ಮಾಡಿದಾಗ 6 ಕೋಟಿ ರೂಪಾಯಿ ಮೌಲ್ಯದ ಚಿನ್ನ, ಸುಮಾರು 10 ಕೆಜಿ ಬೆಳ್ಳಿ ನಾಲ್ಕು ವಾಹನ ಜಪ್ತಿ ಮಾಡಿದ್ದಾರೆ. ನಿನ್ನೆ ಸಿಕ್ಕಿಂನ ಗ್ಯಾಂಗ್ಟಾಕ್ ನಲ್ಲಿ ಶಾಸಕ ಕೆ ಸಿ ವೀರೇಂದ್ರ ಪಪ್ಪಿಯನ್ನು ಇಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಅಕ್ರಮ ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಅರೆಸ್ಟ್ ಮಾಡಲಾಗಿದೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ನಿನ್ನೆ ಚಳ್ಳೆಕೆರೆ ಪಟ್ಟಣದಲ್ಲಿರುವ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು ಕೆ ಸಿ…
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚೆನ್ನಯ್ಯನನ್ನು ಅರೆಸ್ಟ್ ಮಾಡಿದ್ದಾರೆ. ಎಸ್ಐಟಿ ವಿಚಾರಣೆಯ ವೇಳೆ, ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆಯೇ ಇದ್ದಾರೆ ಎಂದು ಮಾಸ್ಕ್ ಮ್ಯಾನ್ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ. ಧರ್ಮಸ್ಥಳದಲ್ಲಿ ಉತ್ಖನನ ನಿಲ್ಲಿಸಿ ಮಾಸ್ಕ್ ಮ್ಯಾನ್‌ನನ್ನೇ ವಿಚಾರಣೆ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು, ಆತ ಹೇಳಿದ್ದೆಲ್ಲಾ ಬುರುಡೆ ಎಂದು ಕನ್ಫರ್ಮ್ ಆದ ಬಳಿಕ ಮಾಸ್ಕ್ ಮ್ಯಾನ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ಸತ್ಯದ ಅನಾವರಣವಾಗಿದೆ. ನನಗೆ ಈ ರೀತಿ ಹೇಳಲು ಹೇಳಿದ್ರು, ನಾನು ಈ ರೀತಿ ಹೇಳಿದೆ. ಬುರುಡೆ ತೆಗೆದುಕೊಂಡು ಕೋರ್ಟ್‌ಗೆ ಒಪ್ಪಿಸಿ ಅಂದ್ರು, ನಾನು ಒಪ್ಪಿಸಿದೆ. ಕೋರ್ಟ್‌ಗೆ ಹಾಜರುಪಡಿಸಿದ ಬುರುಡೆ ಎಲ್ಲಿಂದ ಬಂತು ನನಗೆ ಗೊತ್ತಿಲ್ಲ ಎಂದು ಮಾಸ್ಕ್ ಮ್ಯಾನ್ ಚೆನ್ನ ಹೇಳಿದ್ದಾನೆ. ಮಾಸ್ಕ್ ಮ್ಯಾನ್ ವಿರುದ್ಧವೇ ರಿವರ್ಸ್ ತನಿಖೆ ಶುರು ಮಾಡಿತ್ತು. ಪ್ರಕರಣದ ತನಿಖಾಧಿಕಾರಿ ಜಿತೇಂದ್ರ ದಯಾಮ ಮತ್ತು ಸುಮಾರು…
ದಕ್ಷಿಣಕನ್ನಡ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಅನಾಮಿಕ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಧರ್ಮಸ್ಥಳದಲ್ಲಿ ಶವ ಹೂತಿದೆ ಎಂಬ ಮಾಸ್ಕ್‌ಮ್ಯಾನ್‌ನ ದೂರಿನ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಯ ನಂತರ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಂಧನವಾಗಿದೆ. ಬಳಿಕ ಚಿನ್ನಯ್ಯನನ್ನು ಬೆಳ್ತಂಗಡಿ ಸಿವಿಲ್ ಹಾಗು JMFC ಕೋರ್ಟ್ ಗೆ ಹಾಜರುಪಡಿಸಲಾಯಿತು.ಈ ವೇಳೆ ಜಡ್ಜ್ ವಿಜಯೇಂದ್ರ ಚಿನ್ನಯ್ಯನನ್ನು ಹತ್ತು ದಿನಗಳ ಕಾಲ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. ಮಾಸ್ಕ್ಮ್ಯಾನ್ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಬಂಧಿಸಿದ್ದಾರೆ. ತಲೆಬುರುಡೆ ಕೇಸ್ನಲ್ಲಿ ಎಸ್ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದು, ಆ ಮೂಲಕ ಸಾಕ್ಷಿ ಸಂರಕ್ಷಣಾ ಕಾಯ್ದೆಯಿಂದ ವಿಮುಖಗೊಳಿಸಲಾಗಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಿವಿಲ್ ಮತ್ತು JMFC ಕೋರ್ಟ್‌ಗೆ ಎಸ್ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಹಾಜರುಪಡಿಸಿದರು. ವಿಚಾರಣೆಯ ವೇಳೆ SIT ಅಧಿಕಾರಿಗಳು ಜಡ್ಜ್ ಗೆ ಚಿನ್ನಯ್ಯನನ್ನು 10 ದಿನಗಳ ಕಾಲ ಕಸ್ಟಡಿಗೆ ನೀಡಿ ಎಂದು ಮನವಿ ಮಾಡಿದರು. ನಾನು ಹೆಣ ಹೂತು ಹಾಕಿದ್ದು…
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಆರೋಪಿಗಳ ಜೈಲು ವರ್ಗಾವಣೆ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ. ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಲಾಗಿದೆ. ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 9 ರವರೆಗೆ ವಿಸ್ತರಿಸಲಾಗಿದೆ. ಹೌದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಅವರ ಸಹ ಆರೋಪಿಗಳು ಸಲ್ಲಿಸಿದ್ದ ಜೈಲು ವರ್ಗಾವಣೆ ಅರ್ಜಿಯ ವಿಚಾರಣೆಯನ್ನು ಸೆಷನ್ಸ್ ಕೋರ್ಟ್ ಮುಂದೂಡಿದೆ. ಜತೆಗೆ, ಪವಿತ್ರಾ ಗೌಡ ಪರ ವಕೀಲರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಲಾಗಿದೆ. ಈ ನಡುವೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳಿಗೆ ನ್ಯಾಯಾಂಗ ಬಂಧನ ಅವಧಿಯನ್ನು ಸೆಪ್ಟೆಂಬರ್ 9ರ ವರೆಗೆ ವಿಸ್ತರಿಸಲಾಗಿದೆ. ಇದೇ ವೇಳೆ, ಪವಿತ್ರಾ ಗೌಡ ಪರ ವಕೀಲರು ಸ್ಟ್ಯಾಚುಟರಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಚಾರ್ಜ್‌ಶೀಟ್ ಅನ್ನು ಸಿಆರ್‌ಪಿಸಿ ಅಡಿಯಲ್ಲಿ ಸಲ್ಲಿಸಲಾಗಿದ್ದು, ಹೊಸ ಬಿಎನ್‌ಎಸ್‌ಎಸ್ ಕಾಯ್ದೆ ಅಡಿಯಲ್ಲಿ ಸಲ್ಲಿಸಿಲ್ಲ ಎಂದು ವಕೀಲ ಬಾಲನ್…
ಬೆಂಗಳೂರು : ರಾಜ್ಯದ ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಕರಾವಳಿ ಮತ್ತು ಮಲೆನಾಡು ಪ್ರದೇಶದ ಒಟ್ಟು 9 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದ್ದು ಈ ಒಂದು 9 ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಳಗಾವಿ ಹಾಗೂ ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ, ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಂದು ಎಸ್ ಐ ಟಿ ಅಧಿಕಾರಿಗಳು ಬೆಳಿಗ್ಗೆ ಮಾಸ್ಕ್ ಮ್ಯಾನ್ ಚೆನ್ನಯ್ಯನನ್ನು ಅರೆಸ್ಟ್ ಮಾಡಿದ್ದಾರೆ ಬೆಳ್ತಂಗಡಿ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಕೆಲವೇ ಕ್ಷಣಗಳಲ್ಲಿ ಚಿನ್ನಯ್ಯ ಭವಿಷ್ಯ ನಿರ್ಧಾರವಾಗಲಿದೆ. ಇದೀಗ ಎಫ್ ಐ ಟಿ ಅಧಿಕಾರಿಗಳು ಚೆನ್ನಯ್ಯನನ್ನು ವಿಚಾರಣೆ ಮಾಡುವ ವೇಳೆ ಸ್ಪೋಟಕವಾದ ಮಾಹಿತಿ ಬಿಚ್ಚಿಟ್ಟಿದ್ದು 2, ಲಕ್ಷ ಹಣ ಪಡೆದಿರುವುದು ಚಿನ್ನಯ್ಯ ಬಾಯಿಬಿಟ್ಟಿದ್ದಾನೆ. ಮಹೇಶ್ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ ತಂಡದಿಂದ ಎರಡು ಲಕ್ಷ ಹಣ ಪಡೆದಿರುವುದಾಗಿ ಚಿನ್ನಯ್ಯ ಬಾಯಿ ಬಿಟ್ಟಿದ್ದಾನೆ. ತನಿಖೆ ವೇಳೆ ಮತ್ತೊಬ್ಬ ದೂರ ಟಿ ಜಯಂತಿ ತನ್ನ ಸಂಪರ್ಕದಲ್ಲಿ ಇದ್ದ ಎನ್ನುವುದು ಕೂಡ ಚಿನ್ನಯ ಎಸ್ಐಟಿ ತನಿಖೆ ವೇಳೆ ಬಾಯಿಬಿಟ್ಟಿದ್ದಾನೆ.
ಸಕಲ ಸಂಪತ್ತು ತರುವ ಅವನಿ ಅಮಾವಾಸ್ಯೆ ದೀಪ ಪೂಜೆ ನಮ್ಮ ಜೀವನದಲ್ಲಿ ನಮಗೆ ಅಗತ್ಯವಿರುವ ಎಲ್ಲಾ ಅಗತ್ಯಗಳನ್ನು ಪೂರೈಸಲು ನಾವು ಹಲವು ವಿಧಗಳಲ್ಲಿ ಪ್ರಯತ್ನಗಳನ್ನು ಮಾಡುತ್ತೇವೆ. ಆದಾಗ್ಯೂ, ಆ ಪ್ರಯತ್ನಗಳಲ್ಲಿ ಹಲವು ವಿಫಲವಾಗಿವೆ ಮತ್ತು ಅವು ಕೆಲವು ಕೊರತೆಯಿಂದಾಗಿ ಬಳಲುತ್ತಿವೆ. ಈ ಸಮಸ್ಯೆಗಳನ್ನು ತೆಗೆದುಹಾಕಬೇಕಾದರೆ, ನಮ್ಮ ಜೀವನಕ್ಕೆ ಅಗತ್ಯವಾದ ಎಲ್ಲಾ ಸಂತೋಷವನ್ನು ನಾವು ಪಡೆಯಬೇಕು. ಭಗವಾನ್ ಶುಕ್ರ ಮತ್ತು ಅವನ ದೇವತೆ ಮಹಾಲಕ್ಷ್ಮಿ ಅಂತಹ ಸಂತೋಷವನ್ನು ನೀಡುವ ಗ್ರಹಗಳು. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಅವರಿಬ್ಬರ ಆಶೀರ್ವಾದವನ್ನು ಸಂಪೂರ್ಣವಾಗಿ ಪಡೆಯಲು ಅವನಿಯ ಅಮಾವಾಸ್ಯೆಯ ದಿನದಂದು ಬೆಳಗಿಸಬೇಕಾದ ದೀಪವನ್ನು ನಾವು ನೋಡಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ…
ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಸ್ಐಟಿ ಅಧಿಕಾರಿಗಳು ದೂರುದಾರ ಮಾಸ್ಕ್ ಮ್ಯಾನ್ ಅನ್ನು ಅರೆಸ್ಟ್ ಮಾಡಿದ್ದಾರೆ ಇಂದು ಅರೆಸ್ಟ್ ಮಾಡಿ ಬೆಳ್ತಂಗಡಿಯ ಸಿವಿಲ್ ಮತ್ತು JMFC ಕೋರ್ಟಿಗೆ ಹಾಜರುಪಡಿಸಲಿದ್ದು ಮಾಸ್ಕ್ ಮ್ಯಾನ್ ಕಸ್ಟರ್ಡಿನ ಅಥವಾ ನ್ಯಾಯಾಂಗ ಬಂಧನ ಎನ್ನುವುದು ಕೆಲವೇ ಕ್ಷಣಗಳಲ್ಲಿ ತಿಳಿದು ಬರಲಿದೆ ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಸ್ಕ್ ಮ್ಯಾನ್ ನನ್ನು ಸಂಶಯ ಬಂದು ವಶಕ್ಕೆ ತಗೊಂಡಿದ್ದಾರಾ ಅಥವಾ ಯಾವ ಉದ್ದೇಶದಿಂದ ಅವನನ್ನು ವಶಕ್ಕೆ ವಶಕ್ಕೆ ತೆಗೆದುಕೊಂಡಿದ್ದರೋ ಅವರಿಗೆ ಗೊತ್ತು. ದೂರುದಾರನ ಆಧಾರದ ಮೇಲೆ ನಾವು ತನಿಖೆ ಪ್ರಾರಂಭ ಮಾಡಿದ್ದೇವೆ ಈಗ ಅವರನ್ನು ಅರೆಸ್ಟ್ ಮಾಡಿ ಅವನ ಹೇಳಿಕೆ ಆಧಾರದ ಮೇಲೆ ತನಿಖೆ ಮುಂದುವರಿಯುತ್ತದೆ. ಅವರು ಹೇಳಿದ್ದನ್ನೆಲ್ಲ ನಾನು ನಿಮಗೆ ಹೇಳೋಕೆ ಆಗಲ್ಲ ಎಂದರು. ಮಾಸ್ಕ್ ಮ್ಯಾನ್ ಅರೆಸ್ಟ್ ಆಗಿರೋದು ಅಂತ ಅಷ್ಟೇ ಗೊತ್ತು ಅದನ್ನೇ ಹೇಳಿದ್ದೇನೆ ಎಸ್ ಐ…
ದಕ್ಷಿಣಕನ್ನಡ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಅನಾಮಿಕ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಧರ್ಮಸ್ಥಳದಲ್ಲಿ ಶವ ಹೂತಿದೆ ಎಂಬ ಮಾಸ್ಕ್‌ಮ್ಯಾನ್‌ನ ದೂರಿನ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಯ ನಂತರ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಂಧನವಾಗಿದೆ. ಇದೀಗ ಮಾಸ್ಕ್ ಮ್ಯಾನ್ ಹೆಸರು ಮತ್ತು ಫೋಟೋವನ್ನು ಎಸ್ಐಟಿ ಅಧಿಕಾರಿಗಳು ಕೊನೆಗೂ ರಿವಿಲ್ ಮಾಡಿದ್ದಾರೆ. ಮಾಸ್ಕ್ಮ್ಯಾನ್ ಹೆಸರು ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ತಿಳಿದುಬಂದಿದ್ದು, ಆತನನ್ನು ಬಂಧಿಸಿದ್ದಾರೆ. ತಲೆಬುರುಡೆ ಕೇಸ್ನಲ್ಲಿ ಎಸ್ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದು, ಆ ಮೂಲಕ ಸಾಕ್ಷಿ ಸಂರಕ್ಷಣಾ ಕಾಯ್ದೆಯಿಂದ ವಿಮುಖಗೊಳಿಸಲಾಗಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಿವಿಲ್ ಮತ್ತು JMFC ಕೋರ್ಟ್‌ಗೆ ಎಸ್ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಹಾಜರುಪಡಿಸಿದ್ದಾರೆ.
ಬಳ್ಳಾರಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶವ ಹೂತು ಹಾಕಿದ್ದಾಗಿ ಮಾಸ್ಕ್ ಮ್ಯಾನ್ ದೂರು ನೀಡಿರುವ ವಿಚಾರವಾಗಿ ಇದೀಗ ದೂರುದಾರರನ್ನು SIT ಅಧಿಕಾರಿಗಳು ಅರೆಸ್ಟ್ ಮಾಡಿ ಕೆಲವೇ ಕ್ಷಣಗಳಲ್ಲಿ ಕೋರ್ಟಿಗೆ ಹಾಜರುಪಡಿಸಲಿದ್ದಾರೆ, ಇದರ ಮಧ್ಯ, ಮಂಗಳೂರು ಜಿಲ್ಲಾ ನ್ಯಾಯಾಲಯದಿಂದ ಜಾಮೀನು ಸಿಕ್ಕರೂ ಧರ್ಮಸ್ಥಳ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ. ಮನೆಗೆ ಪೊಲೀಸರು ನೋಟಿಸ್ ಅಂಟಿಸಿ ಬಂದಿದ್ದಾರೆ. ಹೌದು ಸಮೀರ್ ಎಂ.ಡಿ. ಕೋರ್ಟ್‌ಗೆ ನೀಡಿದ ವಿಳಾಸ ಬಳ್ಳಾರಿ ಜಿಲ್ಲೆಯ ಕೌಲ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬಂಡಿಹಟ್ಟಿ ನಿವಾಸಕ್ಕೆ ಶುಕ್ರವಾರ ನೋಟಿಸ್ ನೀಡಲು ತೆರಳಿದಾಗ ಮನೆ ಬಾಗಿಲಿಗೆ ಬೀಗ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಮನೆ ಗೋಡೆಗೆ ನೋಟಿಸ್ ಅಂಟಿಸಿದ್ದಾರೆ. ಪೊಲೀಸರ ಇನ್ನೊಂದು ತಂಡ ಬೆಂಗಳೂರು ಜಿಗಣಿಯಲ್ಲಿರುವ ಹುಲ್ಲಹಳ್ಳಿಯಲ್ಲಿರುವ ಬಾಡಿಗೆ ಮನೆಗೆ ಹೋದಾಗ ಕೂಡ ಮನೆ ಬಾಗಿಲಿಗೆ ಬೀಗ ಹಾಕಿದ್ದ ಹಿನ್ನೆಲೆಯಲ್ಲಿ ಆ ಮನೆ ಗೋಡೆಗೂ ಪೊಲೀಸರು ನೋಟಿಸ್ ಅಂಟಿಸಿದ್ದಾರೆ.











