Author: kannadanewsnow05

ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ಭೀಕರವಾದ ಕೊಲೆ ನಡೆದಿದ್ದು, ಪತಿ-ಪತ್ನಿಯರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಇರಿದು ಪತ್ನಿಯನ್ನು ಪತಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ನಡೆದಿದೆ. ಹೌದು ಪತಿ ಪತ್ನಿ ನಡುವೆ ನಡೆದ ಜಗಳದಲ್ಲಿ ಪತ್ನಿಯನ್ನು ಚಾಕುವಿನಿಂದ ಇರಿದು ಪತಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಲತಂಗಡಿ ತಾಲೂಕಿನ ತೆಕ್ಕರು ಗ್ರಾಮದಲ್ಲಿ ಈ ಒಂದು ಕೊಲೆ ನಡೆದಿದೆ. ಪತ್ನಿ ಜತೀನ್ ಳನ್ನು ಚಾಕುವಿನಿಂದ ಇರಿದು ಪತಿ ರಫೀಕ್ ಭೀಕರವಾಗಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಉತ್ತರಕನ್ನಡ : ವಿದ್ಯಾರ್ಥಿಗಳು ಜಲಪಾತ ವೀಕ್ಷಣೆಗೆ ಎಂದು ಬಂದಾಗ ಚಿಕ್ಕದಾದ ಹಳ್ಳ ದಾಟುತ್ತಿರುವಾಗಲೇ ಏಕಾಏಕಿ ರಭಸವಾಗಿ ನೀರು ಬಂದಿದೆ ಈ ವೇಳೆ ಮೂವರು ವಿದ್ಯಾರ್ಥಿಗಳು ಜಲಪಾತದ ಮದ್ಯ ಸಿಲುಕಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ನಲ್ಲಿ ಈ ಒಂದು ಘಟನೆ ನಡೆದಿದೆ. ಆರೈಬೈಲ್ ಫಾಲ್ಸ್ ಮಧ್ಯೆ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದು ಸದ್ಯ ರಕ್ಷಣೆ ಮಾಡಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸ್ ಸರಿಂದ ಮೂವರನ್ನು ರಕ್ಷಣೆ ಮಾಡಲಾಗಿದೆ. ಹುಬ್ಬಳ್ಳಿಯಿಂದ ಮೆಡಿಕಲ್ ಕಾಲೇಜಿನಿಂದ ವಿದ್ಯಾರ್ಥಿಗಳು ಅರಬೈಲ್ ಜಲಪಾತ ವೀಕ್ಷಣೆಗೆ ಬಂದಿದ್ದರು. ಈ ವೇಳೆ ಚಿಕ್ಕ ಹಳ್ಳ ದಾಟುವಾಗ ಏಕಾಏಕಿ ಜಲಪಾತದ ಮಧ್ಯ ರಭಸವಾಗಿ ನೀರು ಬಂದಿದೆ. ಈ ವೇಳೆ ಮೂವರು ವಿದ್ಯಾರ್ಥಿಗಳು ಜಲಪಾತದ ಮಧ್ಯದಲ್ಲಿ ಸಿಲುಕಿ ಕೊಂಡಿದ್ದಾರೆ. ತಕ್ಷಣ ಅರಣ್ಯ ಸಿಬ್ಬಂದಿಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಮೂವರು ವಿದ್ಯಾರ್ಥಿಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಳೆಗಾಲದಲ್ಲಿ ಇಂತಹ ಜಲಪಾತಗಳಿಗೆ ಭೇಟಿ ಕೊಡುವ ಸಂದರ್ಭದೊಳಗೆ ಆದಷ್ಟು ಮುನ್ನೆಚ್ಚರಿಕೆ ಕ್ರಮವಾಗಿ ಎಚ್ಚರಿಕೆಯಿಂದ ಇರುವುದು ಒಳ್ಳೆಯದು ಆದರೂ…

Read More

ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಗೌರವದ ದುರಂತ ಒಂದು ಸಂಭವಿಸಿದ್ದು ಮೊಬೈಲ್ ನೋಡಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 7ನೇ ತರಗತಿಯ ವಿದ್ಯಾರ್ಥಿ ಒಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮಂಗಳವಾಡ ಎಂಬ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ಓಂ ಕದಂ (13) ಎಂದು ತಿಳಿದುಬಂದಿದೆ. ಕಳೆದ ಮಂಗಳವಾರ ರಾತ್ರಿ ನಡೆದಂತಹ ಘಟನೆ ಇದೀಗ ಇಂದು ತಡವಾಗಿ ಬೆಳಕಿಗೆ ಬಂದಿದೆ ನಿತ್ಯ ಓಂ ಕದಂ ಹೆಚ್ಚಾಗಿ ಮೊಬೈಲ್ ನೋಡುತ್ತಾ ಕಾಲ ಕಳೆಯುತ್ತಿದ್ದ ಇದನ್ನು ಗಮನಿಸಿದ ಆತನ ತಂದೆ ಮನೋಹರ್ ಮೊಬೈಲ್ ನೋಡದಂತೆ ಬುದ್ಧಿವಾದ ಹೇಳಿದ್ದಾರೆ. ಮಾತು ಕೇಳದೆ ಓಂ ಮತ್ತೆ ಮತ್ತೆ ಮೊಬೈಲ್ ನೋಡುತ್ತಿದ್ದ. ಮಂಗಳವಾರ ತಂದೆ ಮನೋಹರ್ ಮಗನಿಗೆ ಗದರಿಸಿ ಮೊಬೈಲ್ ಕರೆದುಕೊಂಡಿದ್ದಾರೆ ಇದರಿಂದ ಮನನೊಂದು ಓಮು ಕದಂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಯಾದಗಿರಿ : ಕಳೆದ ಕೆಲವು ತಿಂಗಳ ಹಿಂದೆ ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ವಸತಿ ಶಾಲೆಯ ಮಕ್ಕಳಿಂದಲೇ ಶೌಚಾಲಯ ಶೌಚ ಗೊಂಡಿ ಸ್ವಚ್ಛಗೊಳಿಸಿದ್ದ ಪ್ರಕರಣಗಳು ನಡೆದಿದ್ದವು. ಇದೀಗ ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ವಸತಿ ಶಾಲೆಯಲ್ಲಿ ಶೌಚಾಲಯಗಳನ್ನು ಅಲ್ಲಿರುವ ಮಕ್ಕಳೇ ಪೊರಕೆ, ಬಕೆಟ್ ಹಿಡಿದು ಸ್ವಚ್ಛ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಅರಕೇರ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಯಾದಗಿರಿಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಮಾಡಿಸಿರುವ ಘಟನೆ ನಡೆದಿದ್ದು, ಹಾಸ್ಟೆಲ್ ನಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿರುವ ವಿಡಿಯೋ ವೈರಲ್ ಆಗಿದೆ. ಕೈಯಲ್ಲಿ ಮಕ್ಕಳು ಹಿಡಿದು ಶೌಚಾಲಯ ಕ್ಲೀನಿಂಗ್ ಮಾಡುತ್ತಿರುವ ದೃಶ್ಯ ವೈರಲ್ ಆಗಿದೆ. ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ ನಡೆದಿದೆ ಯಾದಗಿರಿಯ ಅರಕೆರೆ ಗ್ರಾಮದಲ್ಲಿ ವಸತಿ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಈ ಒಂದು ಹಾಸ್ಟೆಲ್ ಬರುತ್ತದೆ.

Read More

ಹಾಸನ : ಹಾಸನದಲ್ಲಿ ಘೋರ ಘಟನೆ ಒಂದು ನಡೆದಿದ್ದು, ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಹಿನ್ನೆಲೆ ನೇಣು ಬಿಗಿದುಕೊಂಡು ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಹೊರವಲಯದ ಗೆಂಡೆಕಟ್ಟೆ ಫಾರೆಸ್ಟ್ ಬಳಿ ನಡೆದಿದೆ. ನಟೇಶ್ (38) ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್‌ಟೇಬಲ್. ಮೂಲತಃ ಅರಕಲಗೂಡು ತಾಲೂಕಿನ ಚಿಕ್ಕಬೊಮ್ಮನಹಳ್ಳಿ ಗ್ರಾಮದ ನಟೇಶ್, 2008ನೇ ಸಾಲಿನಲ್ಲಿ ನಾಗರಿಕ ಪೊಲೀಸ್ ಪೇದೆಯಾಗಿ ಆಯ್ಕೆಯಾಗಿದ್ದರು. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ನಟೇಶ್ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ 3 ತಿಂಗಳಿನಿಂದ ಮೂಳೆ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ನಟೇಶ್ ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಒಂದು ವಾರದಿಂದ ನಟೇಶ್ ಹಾಸನ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಬುಧವಾರ ಸಂಜೆ ಆಸ್ಪತ್ರೆಯಿಂದ ಕಾಣೆಯಾಗಿದ್ದ ನಟೇಶ್, ಗೆಂಡೆಕಟ್ಟೆ ಅರಣ್ಯ ಬಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಮುಖ್ಯಪೇದೆಯಾಗಿ ಮುಂಬಡ್ತಿ ಪಡೆದಿದ್ದ ನಟೇಶ್ ಹೊಳೆನರಸಿಪುರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ…

Read More

ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮತ್ತೊಂದು ತಿರುವು ಸಿಕ್ಕಿದ್ದು ಭೈರತಿ ಬಸವರಾಜ ವಿರುದ್ಧ ನಾನು ದೂರು ಕೊಟ್ಟೆ ಇಲ್ಲ ಎಂದು ಕೊಲೆಯಾದ ಬಿಕ್ಲು ಶಿವು ತಾಯಿ ವಿಜಯಲಕ್ಷ್ಮಿ ಹೇಳಿಕೆ ನೀಡಿದ್ದು, ಪೊಲೀಸರೇ ಅವರ ಹೆಸರು ಹಾಕಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಮಧ್ಯಾಗಳೊಂದಿಗೆ ಮಾತನಾಡಿದ ಅವರು, ಯಾರ ಬಗ್ಗೆ ದೂರು ನೀಡಿದ್ದಾರೆ ಏನೋ ಗೊತ್ತಿಲ್ಲ ಅಂದರೆ ನಾನು ಯಾರ ಹೆಸರು ಹೇಳಲಿ? ನಾನು ನನ್ನ ಮಗ ಶಿವು ಕೊಲೆಯಾದ ಟೆನ್ಶನ್ ನಲ್ಲಿ ಇದ್ದೆ, ಕೊಲೆ ಮಾಡಿದ್ದು ನೋಡಿದೆ ಅನ್ನೋ ಕೇಸ್ ಸ್ಟ್ರಾಂಗ್ ಆಗುತ್ತೆ ಹೀಗಂತ ಹೇಳಿದಾಗ ನಾನು ಹು ಅಂದಿರಬೇಕು ಅಷ್ಟೇ ಎಂದು ವಿಜಯಲಕ್ಷ್ಮಿ ಹೇಳಿಕೆ ನೀಡಿದ್ದಾರೆ. ಪೊಲೀಸರೇ ಅವರ ಹೆಸರು ಹಾಕಿಕೊಂಡಿರುವುದು. ನನ್ನ ಮಗನ ಕೊಲೆಯಾಗಿದ್ದು ಅವನಿಗೆ ನ್ಯಾಯ ಬೇಕು ಅವರ ಮಕ್ಕಳಿಗೆ ರಕ್ಷಣೆ ನೀಡಬೇಕು. ನಾನು ಯಾರ ವಿರುದ್ಧವೂ ದೂರು ಕೊಟ್ಟಿಲ್ಲ. ವಿಷಯ ಏನು ಅಂತ ನನಗೆ ಗೊತ್ತಿಲ್ಲದ ಮೇಲೆ ಯಾರ ವಿರುದ್ಧ ನಾನು ದೂರು ಕೊಡಲಿ ಎಂದು…

Read More

ಕಲಬುರ್ಗಿ : ಕಲ್ಬುರ್ಗಿ ಜಿಲ್ಲಾಧಿಕಾರಿ ಬಹುಷಃ ಪಾಕಿಸ್ತಾನದಿಂದ ಬಂದಿರಬೇಕು ಎಂದು ಪ್ರತಿಭಟನೆ ವೇಳೆ ಬಿಜೆಪಿ ನೀಡಿದ್ದರು. ಈ ಒಂದು ಹೇಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಕಲಬುರ್ಗಿಯಲ್ಲಿ ಬಿಜೆಪಿ ಎಂಎಲ್ಸಿ ರವಿಕುಮಾರ್ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಕಲ್ಬುರ್ಗಿಯ ಡಿಸಿ ವಿರುದ್ಧ ರವಿಕುಮಾರ್ ಅವಹೇಳನಕಾರಿ ಹೇಳಿಕೆ ವಿಚಾರವಾಗಿ 2ನೇ ಬಾರಿಗೆ ಎಂಎಲ್ಸಿ ರವಿಕುಮಾರ್ ವಿಚಾರಣೆಗೆ ಹಾಜರಾಗಿದ್ದಾರೆ. ಕಲ್ಬುರ್ಗಿಯ ದಕ್ಷಿಣ ವಿಭಾಗದ ಎಸಿಪಿ ಕಚೇರಿಯಲ್ಲಿ ಬಿಜೆಪಿ ಎಂಎಲ್ಸಿ ರವಿಕುಮಾರ್ ಇದು ಈಗ ವಿಚಾರಣೆಗೆ ಹಾಜರಾಗಿದ್ದಾರೆ ಕೇಸ್ ದಾಖಲಾಗಿರುವ ಹಿನ್ನೆಲೆಯಲ್ಲಿ ತನಿಖಾಧಿಕಾರಿ ಶರಣಪ್ಪ ಸುಬೇದಾರ್ ಅವರಿಂದ ರವಿಕುಮಾರ್ ವಿಚಾರಣೆ ನಡೆಯುತ್ತಿದೆ ಕಲ್ಬುರ್ಗಿಯ ಡಿಸಿ ಪಾಕಿಸ್ತಾನದಿಂದ ಬಂದಿದ್ದಾರೆ ಎಂದು ಕಲಬುರ್ಗಿ ಚಲೋ ಕಾರ್ಯಕ್ರಮ ವೇಳೆ ರವಿಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದರು.

Read More

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಇಂದು ಮತ್ತೆ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು, ಹೆದ್ದಾರಿಯೆಲ್ಲಾ ಮಣ್ಣಿನಿಂದ ಮುಚ್ಚಿಹೋಗಿದೆ. ಇದರಿಂದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಸಂಚಾರ ಸ್ಥಗಿತವಾಗಿದೆ. ಈ ಪ್ರದೇಶದಲ್ಲಿ ರಸ್ತೆಯ ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ ಅತ್ಯಂತ ಎತ್ತರದ ಗುಡ್ಡವನ್ನು ಯಾವುದೇ ಮುನ್ನೆಚ್ಚರಿಕೆಯ ಕ್ರಮವಿಲ್ಲದೇ ಕತ್ತರಿಸಲಾಗಿದೆ. ಪರಿಣಾಮವಾಗಿ ಮಳೆ ಬರುತ್ತಿದ್ದಂತೆ ಮಣ್ಣು ಸಡಿಲಗೊಂಡು ಕುಸಿದು ಬೀಳುತ್ತಿದೆ. ಇದೀಗ ಹಲವು ಬಾರಿ ಹೆದ್ದಾರಿ ಬಂದ್ ಆಗುವ ಸ್ಥಿತಿ ನಿರ್ಮಾಣವಾಗಿದೆ. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಈಗಾಗಲೇ ಮಣ್ಣು ತೆಗೆಯುವ ಕಾರ್ಯ ಆರಂಭವಾಗಿದೆ. ಇನ್ನಷ್ಟು ಮಣ್ಣು ಕುಸಿಯುತ್ತಿದ್ದು, ತೆರವು ಕಾರ್ಯ ಮಧ್ಯಾಹ್ನದವರೆಗೆ ನಡೆಯಲಿದೆ. ಹೀಗಾಗಿ, ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು…

Read More

ರಾಜಸ್ತಾನ್ : ರಾಜ್ಯದಲ್ಲಿ ಹೃದಯಾಘಾರದಿಂದ ಸರಣಿ ಸಾವು ಪ್ರಕರಣ ಮುಂದುವರಿದಿದ್ದು ಇಂದು ಬೆಳಿಗ್ಗೆ ತಾನೇ ಹಾವೇರಿಯಲ್ಲಿ 25 ವರ್ಷದ ಶಾಲಾ ಬಸ್ ಚಾಲಕೀರಪ್ಪ ಹೃದಯಘಾತದಿಂದ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇದೀಗ ಶಾಲೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಊಟ ಮಾಡೋಕೆ ಬಾಕ್ಸ್ ಓಪನ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಸಿಕಾರ್ ಪಟ್ಟಣದಲ್ಲಿ ನಡೆದಿದೆ. ಹೌದು ರಾಜಸ್ಥಾನದಲ್ಲಿ ಹೃದಯಾಘಾತದಿಂದ 9 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಸಿಕಾರ್ ಪಟ್ಟಣದ ಆದರ್ಶ ವಿದ್ಯಾಮಂದಿರ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದ್ದು, 4ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನಪ್ಪಿದ್ದಾಳೆ. ಶಾಲೆಯಲ್ಲಿ ಊಟ ಮಾಡಲೆಂದು ಬಾಕ್ಸ್ ಓಪನ್ ಮಾಡುತ್ತಿದ್ದ ವೇಳೆ ಪ್ರಗತಿ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಕೂಡಲೇ ಬಾಲಕಿಯನ್ನು ಶಿಕ್ಷಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಆದರೆ ಅಸ್ಟೊತ್ತಿಗಾಗಲೇ ವೈದ್ಯರು ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿರುವುದು ದೃಢಪಡಿಸಿದ್ದಾರೆ.

Read More

ಬೆಂಗಳೂರು : ಕೊಪ್ಪಳದಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಸತತ ಮಳೆಯಿಂದಾಗಿ ಮನೆ ಕುಸಿದು ಒಂದುವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಮನೆ ಕುಸಿದು ಒಂದುವರೆ ವರ್ಷದ ಪ್ರಶಾಂತಿ ಎನ್ನುವ ಮಗು ಸಾವನಪ್ಪಿದ್ದು, ಮನೆಯಲ್ಲಿದ್ದ ಆರು ಜನರಿಗೆ ಗಂಭೀರವಾದ ಗಾಯಗಳಾಗಿವೆ, ಗಾಯಗೊಂಡ ಹನುಮಂತಿ, ದುರ್ಗಮ್ಮ, ಭೀಮಮ್ಮ, ಹುಸೇನಪ್ಪ ಹಾಗೂ ಫಕೀರಪ್ಪ ಸೇರಿ ಆರು ಜನರಿಗೆ ಗಂಗಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More