Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ: 350 ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿದ್ದ, ಆಸ್ರಾನಿ ಎಂದೇ ಜನಪ್ರಿಯರಾಗಿರುವ ಹಿರಿಯ ನಟ ಗೋವರ್ಧನ್ ಆಸ್ರಾನಿ ತಮ್ಮ 84 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ವರದಿಯಾಗಿರುವಂತೆ, ನಟ ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ದೀರ್ಘಕಾಲದ ಅನಾರೋಗ್ಯದ ನಂತರ ನಿಧನರಾದರು. 84 ನೇ ವಯಸ್ಸಿನಲ್ಲಿ ಆಸ್ರಾನಿ ನಿಧನರಾದರು ಶೋಲೆ ಚಿತ್ರದಲ್ಲಿ ಜೈಲರ್ ಪಾತ್ರಕ್ಕಾಗಿ ನಟ ಹೆಚ್ಚು ಹೆಸರುವಾಸಿಯಾಗಿದ್ದರು. ನಂತರ ಅವರು ಭೂಲ್ ಭುಲೈಯಾ, ಧಮಾಲ್, ಬಂಟಿ ಔರ್ ಬಬ್ಲಿ 2, ಆರ್… ರಾಜ್ಕುಮಾರ್, ಆಲ್ ದಿ ಬೆಸ್ಟ್, ಮತ್ತು ವೆಲ್ಕಮ್ ಸೇರಿದಂತೆ ಹಲವಾರು ಹಿಟ್ ಚಿತ್ರಗಳಲ್ಲಿ ನಟಿಸಿದರು. ಹಿರಿಯ ನಟ ಅಸ್ರಾನಿ 84 ನೇ ವಯಸ್ಸಿನಲ್ಲಿ ನಿಧನರಾದರು. ಅವರ ಸೋದರಳಿಯ ಅಶೋಕ್ ಅಸ್ರಾನಿ ಈ ಸುದ್ದಿಯನ್ನು ದೃಢಪಡಿಸಿದರು. ಹಿಂದಿ ಚಿತ್ರರಂಗದ ಹಿರಿಯ ಮತ್ತು ಬಹುಮುಖ ಪ್ರತಿಭೆಯ ನಟ ಶ್ರೀ ಗೋವರ್ಧನ್ ಅಸ್ರಾನಿ ಅವರು ದೀರ್ಘಕಾಲದ ಅನಾರೋಗ್ಯದ ನಂತರ ಇಂದು ಸಂಜೆ 4 ಗಂಟೆ…
ಬೆಂಗಳೂರು : ಬೆಂಗಳೂರಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿದೆ. ನೆಲಮಂಗಲದ ಕುಣಿಗಲ್ ಬೈಪಾಸ್ ರಸ್ತೆಯಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಕುಣಿಗಲ್ ಬೈಪಾಸ್ ನಲ್ಲಿ ರಸ್ತೆ ಮಧ್ಯ ದೊಡ್ಡ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿದೆ. ಕಾರಿನಲ್ಲಿದ್ದ 6 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪವಾಡಸದೃಶ ರೀತಿಯಲ್ಲಿ ಪ್ರಣಾಪಾಯದಿಂದ ಪಾರಾಗಿದ್ದಾರೆ. ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಆರು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಟ್ಟೆಕೆರೆ ಗ್ರಾಮದಲ್ಲಿ ಹೊನ್ನೇನಹಳ್ಳಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ವೀರಭದ್ರ ಸ್ವಾಮಿ ಮೇಲೆ ಹಲ್ಲೆ ನಡೆಸಲಾಗಿದೆ. ಎಡಗೈ ಹಾಗೂ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ಭೀಕರವಾಗಿ ಹಲ್ಲೆ ನಡೆಸಲಾಗಿದೆ. ಹೊನ್ನೇನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಪಿ ಸುರೇಶ್ ಹಾಗೂ ಶಿವಕುಮಾರ್ ಎಂಬುವರ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. ಚಾಕುವಿನಿಂದ ಇರದ ಕೂಡಲೇ ವೀರಭದ್ರ ಸ್ವಾಮಿ ತಪ್ಪಿಸಿಕೊಂಡಿದ್ದಾನೆ. ಓಡಿ ಹೋಗಿ ಪ್ರಾಣ ಉಳಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ದಾಬಸ್ ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ತುಮಕೂರು ಆಸ್ಪತ್ರೆಗೆ ವೀರಭದ್ರ ಸ್ವಾಮಿಯನ್ನು ಶಿಫ್ಟ್ ಮಾಡಲಾಗಿದೆ. ಹಳೆಯ ವೈಷ್ಣವ ಹಿನ್ನೆಲೆಯಲ್ಲಿ ವೀರಭದ್ರ ಸ್ವಾಮಿ ಮೇಲೆ ಹಲ್ಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಯಚೂರು : ರಾಯಚೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್ ಮತ್ತು ಟ್ಯಾಕ್ಟರ್ ಡಿಕ್ಕಿಯಾಗಿ ನಾಲ್ವರು ಕಾಲು ಮುರಿತವಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಮಲ ಬಳಿ ಒಂದು ಭೀಕರ ಅಪಘಾತ ಸಂಭವಿಸಿದೆ. ಬಸ್ಸಿನ ಕಿಟಕಿ ಬಳಿ ಕುಳಿತಿದ್ದ ನಾಲ್ವರು ಪ್ರಯಾಣಿಕರ ಕಾಲು ಮುರಿತವಾಗಿದೆ. ನರಸಮ್ಮ(50) ಲಕ್ಷ್ಮಿ (55) ಹುಸೇನ್ (54) ಕಲಂದರ್ (4) ಗೆ ಗಂಭೀರವಾದ ಗಾಯಗಳಾಗಿದ್ದು ಗಾಯಾಳುಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಯಚೂರಿನಿಂದ ಸರ್ಕಾರಿ ಬಸ್ ಲಿಂಗಸುಗೂರು ಕಡೆಗೆ ತೆರಳುತ್ತಿತ್ತು. ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.
ಬೆಳಗಾವಿ : ರಾಮದುರ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಶಾಸಕ ಅಶೋಕ ಪಟ್ಟಣ ಅವರ ಬೆಂಬಲದೊಂದಿಗೆ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಸಹೋದರ ಮಲ್ಲಣ್ಣ ಯಾದವಾಡ ಅವರು ಗೆಲುವು ಸಾಧಿಸಿದ್ದಾರೆ. ಆದರೆ, ಈ ಗೆಲುವಿನ ಸಂಭ್ರಮಾಚರಣೆ ಬಳಿಕ ಪಿಕೆಪಿಎಸ್ ಮಾಜಿ ಅಧ್ಯಕ್ಷರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಾಸಕ ಅಶೋಕ್ ಪಟ್ಟಣ ಆಪ್ತ ಗಿರಿಯಪ್ಪ ಗಂಟೋಟಿ(40) ಹೃದಯಾಘಾತದಿಂದ ಮೃತಪಟ್ಟವರು. ನಿನ್ನೆ ನಡೆದ ಚುನಾವಣೆಯಲ್ಲಿ ಮಲ್ಲಣ್ಣ ಯಾದವಾಡ ಗೆಲುವು ಸಾಧಿಸಿದ್ದರು. ಈ ವೇಳೆ ವಿಜಯೋತ್ಸವದಲ್ಲಿ ಗಿರಿಯಪ್ಪ ಗಂಟೋಟಿ ಪಾಲ್ಗೊಂಡಿದ್ದರು. ಆದರೆ, ರಾತ್ರಿ ಹೃದಯಾಘಾತದಿಂದ ಗಿರಿಯಪ್ಪ ಮೃತಪಟ್ಟಿದ್ದಾರೆ. ಈ ಘಟನೆಯು ರಾಮದುರ್ಗ ತಾಲೂಕಿನಾದ್ಯಂತ ಶೋಕದ ವಾತಾವರಣವನ್ನು ಸೃಷ್ಟಿಸಿದೆ. ರಾಮದುರ್ಗ ತಾಲೂಕಿನ ಕಮಕೇರಿ ನಿವಾಸಿಯಾಗಿದ್ದ ಗಿರಿಯಪ್ಪ, ರಾಮದುರ್ಗ ತಾಲೂಕಿನಿಂದ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧಿಸಿದ್ದ ಮಲ್ಲಣ್ಣ ಯಾದವಾಡ ಪರವಾಗಿ ಶಾಸಕ ಅಶೋಕ ಪಟ್ಟಣ ಜೊತೆಗೂಡಿ ಪ್ರಚಾರ ಮಾಡಿದ್ದರು. ಆದರೆ, ಗೆಲುವಿನ ಸಂಭ್ರಮದಲ್ಲೇ ಮೃತಪಟ್ಟಿರುವುದು ದುರಂತ.
ದಕ್ಷಿಣಕನ್ನಡ : ರಾಜ್ಯದಲ್ಲಿ RSS ಚಟುವಟಿಕೆ ನಿಷೇಧ ಕುರಿತಂತೆ, ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ. ಯಾವುದೇ ಸಂಘ, ಸಂಸ್ಥೆಗಳು ಶಾಲಾ, ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ಜಗದೀಶ್ ಶೆಟ್ಟರ್ ನೇತೃತ್ವದ ಹಿಂದಿನ ಸರ್ಕಾರದಲ್ಲಿ ನಿಷೇಧಿಸಲಾಗಿತ್ತು. ಬಿಜೆಪಿ ಸರ್ಕಾರದ ಆದೇಶ ಮಾಡಿದ್ದನ್ನೇ ನಾವೂ ಪುನರುಚ್ಚರಿಸಿದ್ದೇವೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯ ಪುತ್ತೂರಿನಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ ಯಾವುದೇ ಸಂಘ, ಸಂಸ್ಥೆಗಳ ಕಾರ್ಯಕ್ರಮ, ಚಟುವಟಿಕೆಗಳಿಗೆ ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಸರ್ಕಾರದ ಆದೇಶದಲ್ಲಿ ಆರ್ಎಸ್ಎಸ್ ಎಂದು ಎಲ್ಲೂ ನಿರ್ದಿಷ್ಟ ಉಲ್ಲೇಖ ಮಾಡಿಲ್ಲ. ಬಿಜೆಪಿಯವರು ಮಾಡಿದ್ದ ಆದೇಶವನ್ನೇ ನಾವೂ ಮಾಡಿದ್ದೇವೆ. ಅವರು ಮಾಡಬಹುದು, ನಾವು ಮಾಡಬಾರದೇ ಎಂದು ಪ್ರಶ್ನಿಸಿದರು.
ದಕ್ಷಿಣಕನ್ನಡ : ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ನೂಕುನುಗ್ಗುಲು ಉಂಟಾಗಿ 11 ಜನರು ಅಸ್ವಸ್ಥಗೊಂಡಿರುವ ಘಟನೆ ವರದಿಯಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ 11ಕ್ಕೂ ಹೆಚ್ಚು ಜನರು ನೂಕುನಗ್ಗಲು ನಿಂದಾಗಿ ಅಸ್ವಸ್ಥಗೊಂಡಿದ್ದಾರೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಅಶೋಕ ಜನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು. ಈ ವೇಳೆ ಸಿಎಂ ಕಾರ್ಯಕ್ರಮದಲ್ಲಿ ನೂಕು ನುಗ್ಗುಲು ಉಂಟಾಗಿದ್ದು 11ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಮಹಿಳೆಯರು, ಮಕ್ಕಳು ಸೇರಿದಂತೆ ಬಹಳಷ್ಟು ಜನರು ಅಸ್ವಸ್ಥರಾಗಿದ್ದಾರೆ. ಕುಡಿಯಲು ನೀರು ಸಿಗದೆ ಜನರು ಪರದಾಟ ನಡೆಸಿದ್ದಾರೆ.ಸಣ್ಣ ಮಕ್ಕಳನ್ನು ಜನರು ಕರೆದುಕೊಂಡು ಈ ಒಂದು ಕಾರ್ಯಕ್ರಮಕ್ಕೆ ಬಂದಿದ್ದರು. ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ಈ ಒಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಶಾಸಕ ಅಶೋಕ ರೈ ನೇತ್ರತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕ್ರೀಡಾಂಗಣದ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ನೂಕು ನುಗ್ಗಲು ಉಂಟಾಗಿ ಆಮ್ಲಜನಕದ ಕೊರತೆ ಉಂಟಾಗಿದೆ.ಈ ವೇಳೆ ಸುಮಾರು ಮಹಿಳೆಯರು ಮಕ್ಕಳು ಸೇರಿದಂತೆ 11ಕ್ಕೂ ಹೆಚ್ಚು ಜನರು…
ಬಾಗಲಕೋಟೆ : ವಾಲ್ಮೀಕಿ ಸಮಾಜದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ವಿಚಾರವಾಗಿ ಇದೀಗ ಬಾಗಲಕೋಟೆ ಜಿಲ್ಲೆಯಲ್ಲಿ ಮತ್ತೇರಡು ದೂರು ದಾಖಲಾಗಿವೆ. ಬಾಗಲಕೋಟೆಯಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ವತಿಯಿಂದ ಹಾಗು ಮುಧೋಳ ಟೌನ್ ಪೊಲೀಸ ಠಾಣೆಗೆ ವೀರ ಸಿಂಧೂರ ಲಕ್ಷ್ಮಣ ಯುವ ಸೇನೆಯಿಂದ ದೂರು ಸಲ್ಲಿಸಲಾಗಿದೆ. ಬಾಗಲಕೋಟೆಯಲ್ಲಿ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾಧ್ಯಕ್ಷ ದ್ಯಾಮಣ್ಣ ನೇತೃತ್ವದಲ್ಲಿ ದೂರು ದಾಖಲಿಸಲಾಗಿದೆ. ರಮೇಶ್ ಕತ್ತಿ ವಿರುದ್ಧ ಜಾತಿನಿಂದನೆ ಆರೋಪದಡಿ ದೂರು ಸಲ್ಲಿಕೆ ಮಾಡಿದ್ದಾರೆ. ಹಾಗು ಮುಧೋಳದಲ್ಲಿ ವೀರ ಸಿಂಧೂರ ಲಕ್ಷ್ಮಣ ಯುವ ಸೇನೆಯಿಂದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಬಿಜೆಪಿ ನಾಯಕ ರಮೇಶ್ ಕತ್ತಿ ಬಂಧಿಸಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ದಕ್ಷಿಣಕನ್ನಡ : ಕೋಮು ಸೌಹಾರ್ದತೆ ಇದ್ದರೆ ರಾಜ್ಯ ಮತ್ತು ಜಿಲ್ಲೆಗಳು ಅಭಿವೃದ್ಧಿಯಾಗುತ್ತವೆ ಕೋಮು ಸೌಹಾರ್ದತೆ ಹಾಳು ಮಾಡಿದ್ದು ಯಾರು ಅಂತ ಅರ್ಥ ಮಾಡಿಕೊಳ್ಳಿ ಎಂದು ಅಶೋಕ ಜನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅಶೋಕ ಜನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಜಿಲ್ಲೆಯಲ್ಲಿ ಕೋಮ ಸೌಹಾರ್ದತೆಗೆ ವಿಶೇಷ ಗಮನ ಕೊಡಿ. ಸುಳ್ಳು ಹೇಳುವವರ ವಿರುದ್ಧ ಕಾನೂನು ತಂದು ಕೇಸ್ ದಾಖಲಿಸುತ್ತೇವೆ. ಸಚಿವ ಪ್ರಿಯಾಂಕ್ ಖರ್ಗೆ HK ಪಾಟೀಲ್ ಸದ್ಯ ಆ ಕೆಲಸದಲ್ಲಿ ಇದ್ದಾರೆ. ಈ ಜಿಲ್ಲೆಯ 8 ಕ್ಷೇತ್ರಗಳಲ್ಲೂ ನೀವು ಆಶೀರ್ವಾದ ಮಾಡಬೇಕು, ಎಷ್ಟೇ ಖರ್ಚಾದರೂ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮಾಡುತ್ತೇವೆ. ನುಡಿದಂತೆ ನಡೆದಿದ್ದೇವೆ. ಕೇಳುವ ಹಕ್ಕು ನಮಗಿದೆ. ನಾನು ಸಿಎಂ ಆಗಿರುವವರೆಗೂ ಬಡವರ ಯಾವುದೇ ಯೋಜನೆಯನ್ನು ನಿಲ್ಲಿಸಲ್ಲ. ಜಿಎಸ್ಟಿ ಜಾರಿ ಮಾಡಿದ್ದೆ ಮೋದಿ ಸರ್ಕಾರ ಈಗ ದೀಪಾವಳಿ ಗಿಫ್ಟ್ ಅಂತ ಹೇಳುತ್ತಾರೆ. ನರೇಂದ್ರ ಮೋದಿ ಸರ್ಕಾರ 8 ವರ್ಷ ಟ್ಯಾಕ್ಸ್ ಸಂಗ್ರಹ ಮಾಡಿದೆ.…
ಬೀದರ್ : ಸಾಮಾನ್ಯವಾಗಿ ಬಸ್ ನಲ್ಲಿ ಪ್ರಯಾಣಿಸುವಾಗ ಮರೆತು ಅದೆಷ್ಟೋ ಜನ ಹಣ ಒಡವೆ ಕಳೆದುಕೊಂಡಿರುತ್ತಾರೆ. ಬಹುತೇಕ ಪ್ರಯಾಣಿಕರಿಗೆ ತಾವು ಕಳೆದುಕೊಂಡ ಹಣ, ಒಡವೆ ಮರಳಿ ಸಿಕ್ಕಿರುತ್ತದೆ. ಸಿಬ್ಬಂದಿಗಳು ವಸ್ತುಗಳನ್ನು ಮರಳಿಸಿರುತ್ತಾರೆ. ಇದೀಗ ಬೀದರ್ ನಲ್ಲಿ ಕೂಡ ಹಣ ಬಿಟ್ಟು ಹೋಗಿದ್ದ ಪ್ರಯಾಣಿಕನಿಗೆ ಸಾರಿಗೆ ಸಿಬ್ಬಂದಿ ಹಣ ಮರಳಿಸಿ ಮಾನವೀಯತೆ ಮೆರೆದಿದ್ದಾರೆ. ಪ್ರಯಾಣ ಮಾಡುವಾಗ ಬಸ್ನಲ್ಲೇ ಬಿಟ್ಟು ಹೋಗಿದ್ದ 1.60ಲಕ್ಷ ಹಣವನ್ನು ಪ್ರಯಾಣಿಕನಿಗೆ ಮರಳಿ ನೀಡಿ ಕಂಡಕ್ಟರ್ ಮತ್ತು ಚಾಲಕ ಮಾನವೀಯತೆ ಮೆರೆದ ಘಟನೆ ಬೀದರ್ನಲ್ಲಿ ನಡೆದಿದೆ.ಗ್ರಾಮಕ್ಕೆ ತೆರಳಿ ವಯೋವೃದ್ಧನಿಗೆ ಹಣ ವಾಪಸ್ ನೀಡಿದ ನಿರ್ವಾಹಕ ಮತ್ತು ಚಾಲಕನ ಪ್ರಾಮಾಣಿಕತೆಗೆ ಜಿಲ್ಲೆಯ ಜನರು ಶ್ಲಾಘಿಸಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಭಾಟಸಾಂಗ್ವಿ ಗ್ರಾಮದ ಬಳಿ ಈ ಘಟನೆ ನಡೆದಿದೆ. 1.60 ಲಕ್ಷ ರೂ. ಬಸ್ನಲ್ಲೇ ಬಿಟ್ಟು ಹೋದ ವಿಷಯ ತಿಳಿದು ಕರ್ತವ್ಯ ನಿರತ ಸಾರಿಗೆ ಬಸ್ ನಿರ್ವಾಹಕರಾದ ಸಿದ್ರಾಮ್ ಮತ್ತು ಚಾಲಕರಾದ ಹನೀಪ್ ಗ್ರಾಮಕ್ಕೆ ಹೋಗಿ ಹಣದ ಚೀಲ ಮರಳಿಸಿ ಮಾನವೀಯತೆ…













