Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ನಾಯಕತ್ವ ಬದಲಾವಣೆ ವಿಚಾರಕ್ಕೆ ಕೊನೆಗೂ ತೆರೆ ಬಿದ್ದಿದೆ. ತೀವ್ರ ಹಗ್ಗಜಗ್ಗಾಟ ಹಾಗೂ ಹೈಕಮಾಂಡ್ ಮಟ್ಟದ ಚರ್ಚೆಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಇಂದು ಬೆಳಿಗ್ಗೆ ಏರ್ಪಡಿಸಿದ್ದ ಸಚಿವರ ಉಪಹಾರಕೂಟ ಸಭೆಯಲ್ಲಿ ಅವರು ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಸೃಷ್ಟಿಸಿದೆ. ಸಭೆಯಲ್ಲಿ ಸಚಿವರಿಗೆ ತಮ್ಮ ನಿರ್ಧಾರವನ್ನು ತಿಳಿಸಿದ ಸಿದ್ದರಾಮಯ್ಯ ಅವರು, ಇಂದು ಮಧ್ಯಾಹ್ನವೇ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ರಾಜ್ಯಪಾಲರು ಲಭ್ಯವಿಲ್ಲದಿದ್ದರೆ, ಅವರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಹಸ್ತಾಂತರಿಸಲು ನಿರ್ಧರಿಸಿದ್ದಾರೆ. “ಇಂದು ಮಧ್ಯಾಹ್ನ 3 ಗಂಟೆಗೆ ರಾಜ್ಯಪಾಲರ ಕಾರ್ಯದರ್ಶಿಗೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಲಿದ್ದೇನೆ” ಎಂದು ಮುಖ್ಯಮಂತ್ರಿಗಳು ಖುದ್ದಾಗಿ ಘೋಷಣೆ ಮಾಡುವ ಮೂಲಕ ಎಲ್ಲಾ ಕಟ್ಟುಕಥೆಗಳಿಗೆ ಪೂರ್ಣವಿರಾಮ ಇಟ್ಟಿದ್ದಾರೆ. ಮುಖ್ಯಮಂತ್ರಿಗಳ ರಾಜೀನಾಮೆ ಘೋಷಣೆ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ಹೈಡ್ರಾಮಾ ಇದೀಗ ಅಂತಿಮ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸುವ ಮೂಲಕ ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದಾರೆ. ಇಂದು ಬೆಳಿಗ್ಗೆ ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಹಮ್ಮಿಕೊಂಡಿದ್ದ ಸಚಿವರ ಮಹತ್ವದ ಉಪಹಾರ ಸಭೆಯಲ್ಲಿ ಸಿಎಂ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಕಾವೇರಿ ನಿವಾಸದಲ್ಲಿ ನಡೆದ ಈ ‘ಬ್ರೇಕ್ ಫಾಸ್ಟ್’ ಸಭೆಯಲ್ಲಿ ಸರ್ಕಾರದ ಪ್ರಮುಖ ಸಚಿವರು ಭಾಗವಹಿಸಿದ್ದರು. ಸಭೆಯ ಆರಂಭದಲ್ಲಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳು ಮತ್ತು ಸರ್ಕಾರದ ಮುಂದಿರುವ ಸವಾಲುಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಸಭೆಯ ಅಂತಿಮ ಹಂತದಲ್ಲಿ ಅಚ್ಚರಿಯ ನಿರ್ಧಾರ ಕೈಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, “ನಾನು ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ” ಎಂದು ಸಚಿವರಿಗೆ ಅಧಿಕೃತವಾಗಿ ಘೋಷಿಸಿದರು. ಸಿಎಂ ಅವರ ಈ ದಿಢೀರ್ ನಿರ್ಧಾರದಿಂದ ಸಭೆಯಲ್ಲಿದ್ದ ಸಚಿವರು ಕೆಲಕಾಲ ದಿಗ್ಭ್ರಮೆಗೊಂಡರು ಎನ್ನಲಾಗಿದೆ. ತಮ್ಮ ನಿರ್ಧಾರವನ್ನು…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮತ್ತು ಚರ್ಚೆಗಳಿಗೆ ಕಾರಣವಾಗಿದ್ದ ರಾಜಕೀಯ ಬೆಳವಣಿಗೆಗಳು ಇದೀಗ ಅಂತಿಮ ಹಂತಕ್ಕೆ ತಲುಪಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ತಮ್ಮ ಕಾವೇರಿ ನಿವಾಸದಲ್ಲಿ ಹಮ್ಮಿಕೊಂಡಿದ್ದ ಸಚಿವರ ಮಹತ್ವದ ‘ಬ್ರೇಕ್ ಫಾಸ್ಟ್’ (ಉಪಾಹಾರ) ಸಭೆಯಲ್ಲಿ ತಾವೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಈ ದಿಢೀರ್ ಬೆಳವಣಿಗೆಯು ರಾಜ್ಯ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಕಾವೇರಿ ನಿವಾಸದಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಪ್ರಸಕ್ತ ರಾಜಕೀಯ ಪರಿಸ್ಥಿತಿಯ ಕುರಿತು ಸುದೀರ್ಘವಾಗಿ ಚರ್ಚಿಸಿದರು. ಆ ಬಳಿಕ ಸಿಎಂ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದು, “ನಾನು ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ” ಎಂದು ಸಚಿವರಿಗೆ ತಿಳಿಸಿದರು. ಸಿಎಂ ಅವರ ಈ ದಿಢೀರ್ ನಿರ್ಧಾರದಿಂದ ಸಭೆಯಲ್ಲಿದ್ದ ಹಲವು ಸಚಿವರು ಅಚ್ಚರಿ ಮತ್ತು ಆಘಾತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,…
ಬೆಂಗಳೂರು : ಇನ್ನೇನು ಕೆಲವೇ ಕ್ಷಣಗಳಲ್ಲಿ ರಾಜ ಭವನಕ್ಕೆ ತೆರಳಿ l ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದುz ಅದಕ್ಕೂ ಮುನ್ನ ಇಂದು ತಮ್ಮ ಕಾವೇರಿ ನಿವಾಸದಲ್ಲಿ ಸಚಿವ ಸಂಪುಟದ ಎಲ್ಲ ಸಚಿವರಿಗೂ ಬ್ರೇಕ್ ಫಾಸ್ಟ್ ಮೀಟಿಂಗ್ ಆಯೋಜನೆ ಮಾಡಿದ್ದು, ಈ ಒಂದು ಸಭೆಗೆ ಡಿಕೆ ಶಿವಕುಮಾರ್ ಆಗಮಿಸಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ನಮಸ್ಕರಿಸಿ ಪರಸ್ಪರ ಆಲಿಂಗನ ಮಾಡಿಕೊಂಡರು. ಈ ಒಂದು ಉಪಹಾರಕೂಟ ಭಾವುಕ ಕ್ಷಣಕ್ಕೆ ಸಾಕ್ಷಿ ಆಯಿತು. ಹೌದು ಹೈಕಮಾಂಡ್ ನಾಯಕರ ಸೂಚನೆಯಂತೆ ಇಂದು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದು ಅದಕ್ಕೂ ಮುನ್ನ ಅವರು ತಮ್ಮ ಕಾವೇರಿ ನಿವಾಸದಲ್ಲಿ ಸಚಿವರಿಗೆ ಉಪಹಾರಕೂಟ ಸಭೆ ಆ ಯೋಜನೆ ಮಾಡಿದರು ಈ ವೇಳೆ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ನಮಸ್ಕರಿಸಿದ್ದು, ಅಪರೂಪದ ಕ್ಷಣಕ್ಕೆ ಸಾಕ್ಷಿಯಾಯಿತು. ಉಳಿದ ಎಲ್ಲಾ ಸಚಿವರನ್ನು ಹೊರಗಡೆ ಕಳುಹಿಸಿ ಪ್ರತ್ಯೇಕ ಕೊಠಡಿಯಲ್ಲಿ ಸಿಎಂ…
ಬೆಂಗಳೂರು : ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ ಎಂಬ ವದಂತಿಗಳು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿವೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಂಪುಟ ದರ್ಜೆಯ ಸಚಿವರಿಗಾಗಿ ಬ್ರೇಕ್ ಫಾಸ್ಟ್ ಮೀಟಿಂಗ್ (ಉಪಹಾರ ಕೂಟ) ಆಯೋಜಿಸಿದ್ದು, ಈ ಸಭೆಯು ತೀವ್ರ ರಾಜಕೀಯ ಮಹತ್ವ ಪಡೆದುಕೊಂಡಿದೆ. ಈ ಸಭೆಯ ಬಳಿಕ ಸಿಎಂ ನೇರವಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದೆ. ರಾಜ್ಯ ರಾಜಕೀಯದಲ್ಲಿ ಇಂತಹ ಮಹತ್ತರ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಆಪ್ತ ವಲಯ ಮತ್ತು ಬೆಂಬಲಿಗರಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಅಧಿಕೃತವಾಗಿ ರಾಜೀನಾಮೆ ನೀಡುವವರೆಗೂ ಯಾವುದೇ ಆಟ ಮುಗಿದಿಲ್ಲ. ಹಾಗಾಗಿ ಯಾರೂ ಕೂಡ ಯಾವುದೇ ರೀತಿಯ ಗಡಿಬಿಡಿಯ ಅಥವಾ ದುಡುಕಿನ ಹೇಳಿಕೆಗಳನ್ನು ನೀಡಬಾರದು ಎಂದು ತಮ್ಮ…
ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ವಿಚಾರ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಸಿಎಂ ಸಿದ್ದರಾಮಯ್ಯ ಇಂದು ಮಧ್ಯಾಹ್ನ ರಾಜ್ಯಪಾಲರ ಭೇಟಿಗೆ ಈಗಾಗಲೇ ಸಮಯ ಕೋರಿದ್ದಾರೆ. ಆದರೆ, ರಾಜ್ಯಪಾಲರು ದಿಢೀರಾಗಿ ಇಂದೋರ್ಗೆ ತೆರಳಿದ್ದಾರೆ. ರಾಜ್ಯಪಾಲರ ಅನುಪಸ್ಥಿತಿಯ ನಡುವೆಯೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಲು ಅವಕಾಶ ಇದೆ ಎಂದೇ ಹೇಳಲಾಗುತ್ತಿದೆ. ಹೌದು ರಾಜ್ಯಪಾಲರು ಕೇಂದ್ರ ಸ್ಥಾನದಲ್ಲಿ ಇಲ್ಲದಿದ್ದರೂ ಮುಖ್ಯಮಂತ್ರಿಗಳು ರಾಜೀನಾಮೆ ಪತ್ರವನ್ನು ಸಲ್ಲಿಸಲು ಸಂವಿಧಾನದಲ್ಲಿ ಅವಕಾಶವಿರುವುದು ಗೊತ್ತಾಗಿದೆ. ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ರಾಜಭವನದ (ಲೋಕಭವನ) ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಲು ಗಂಭೀರ ಚಿಂತನೆ ನಡೆಸಿದ್ದಾರೆ. ಸಾಂವಿಧಾನಿಕ ನಿಯಮಗಳ ಪ್ರಕಾರ, ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಪತ್ರವನ್ನು ವಿಶೇಷ ಕಾರ್ಯದರ್ಶಿಗೆ ಸಲ್ಲಿಸಿದರೆ, ಅವರು ರಾಜ್ಯಪಾಲರು ಇಂದೋರ್ ಪ್ರವಾಸ ಮುಗಿಸಿ ವಾಪಸ್ ಬಂದ ತಕ್ಷಣ ಅದನ್ನು ಅವರ ವಿವೇಚನೆಗೆ ಕಳುಹಿಸಿಕೊಡಲಿದ್ದಾರೆ. ಆದರೆ, ಕೇವಲ ಪತ್ರ ತಲುಪಿದ ತಕ್ಷಣ ರಾಜೀನಾಮೆ ಅಂಗೀಕಾರವಾಗುವುದಿಲ್ಲ. ರಾಜೀನಾಮೆ ಅಂಗೀಕರಿಸುವ ಮುನ್ನ ರಾಜ್ಯಪಾಲರು ಮುಖ್ಯಮಂತ್ರಿಗಳನ್ನು ಖುದ್ದಾಗಿ ಲೋಕಭವನಕ್ಕೆ ಕರೆಸಿ, ಮುಖಾಮುಖಿ…
ಬೆಂಗಳೂರು : ಇನ್ನೇನು ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಸಂಪುಟ ಸಚಿವರಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಆಯೋಜನೆ ಮಾಡಲಾಗಿದ್ದು, ಎಲ್ಲ ಸಚಿವರು ಈ ಒಂದು ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ. ಯಾವಾಗ ಸಿಎಂ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ನಾಯಕರ ಜೊತೆ ಚರ್ಚಿಸಿದರೊ ಅಲ್ಲಿಂದ ಬಂದು ನೇರವಾಗಿ ಅವರು ಇಂದು ಸಂಪುಟದ ಎಲ್ಲ ಸಚಿವರಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಆಯೋಜನೆ ಮಾಡಿದ್ದಾರೆ. ಈ ಒಂದು ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲಾ ಸಚಿವರುಗಳು ಭಾಗವಹಿಸಲಿದ್ದಾರೆ. ಬಳಿಕ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ, ಆದರೆ ರಾಜ್ಯಪಾಲರು ವೈಯಕ್ತಿಕ ಕಾರಣಗಳಿಂದ ಅವರು ಇಂದು ಮುಂಬೈಗೆ ತೆರಳಿದ್ದಾರೆ. ಹಾಗಾಗಿ ಇಂದು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಬಹುತೇಕ ಅನುಮಾನ ಎಂದು ಹೇಳಲಾಗುತ್ತಿದೆ. ಅಕಸ್ಮಾತ್ ರಾಜ್ಯಪಾಲರು ಇಂದೇ ಬೆಂಗಳೂರಿಗೆ ವಾಪಸ್ ಆದರೆ ಹಿಂದೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸಾಧ್ಯತೆ ಇದೆ.
ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮಹತ್ವದ ಸುದ್ದಿಯೊಂದನ್ನು ನೀಡಿದೆ. 2026-27ನೇ ಶೈಕ್ಷಣಿಕ ಸಾಲಿನ ರಿಯಾಯಿತಿ ದರದ ವಿದ್ಯಾರ್ಥಿ ಬಸ್ ಪಾಸ್‌ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೇ 29ರಿಂದ ಅರ್ಜಿ ಸಲ್ಲಿಕೆ ಆರಂಭ ಬಸ್ ಪಾಸ್ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಮೇ 29ರಿಂದಲೇ ಅಧಿಕೃತ ‘ಸೇವಾ ಸಿಂಧು’ ಪೋರ್ಟಲ್ (https://sevasindhuservices.karnataka.gov.in) ಮೂಲಕ ಆನ್‌ಲೈನ್‌ನಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಸೌಲಭ್ಯವಿಲ್ಲದವರು ರಾಜ್ಯದಾದ್ಯಂತ ಇರುವ ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ, ಕೇವಲ 30 ರೂ.ಗಳ ಸೇವಾ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಜೂನ್ 1ರಿಂದ ಪಾಸ್ ವಿತರಣೆ ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಗಳು ಪರಿಶೀಲನೆಗೊಂಡು ಅನುಮೋದನೆಯಾದ (Approved) ಬಳಿಕ, ಅವರ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ (SMS) ಮೂಲಕ ಸಂದೇಶ ಬರಲಿದೆ. ಅದರಲ್ಲಿ ಪಾಸ್ ಪಡೆಯಬೇಕಾದ…
ಮೈಸೂರು : ರಾಜ್ಯದಲ್ಲಿ ಸಿಡಿಲಿಗೆ ಇಬ್ಬರು ಬಲಿಯಾಗಿದ್ದು, ಮೂರು ಪ್ರತ್ಯೇಕ ಘಟನೆಗಳಲ್ಲಿ ಸಿಡಿಲಿನ ಅಬ್ಬರಕ್ಕೆ ಜಿಲ್ಲೆಯ ಹೆಚ್.ಡಿ.ಕೋಟೆ ಹಾಗೂ ಹುಣಸೂರು ತಾಲೂಕುಗಳಲ್ಲಿ ಪುರುಷ, ಮಹಿಳೆ ಹಾಗೂ ಹಸುವೊಂದು ಮೃತಪಟ್ಟಿದೆ.ಕಳೆ ಕೀಳಲು ಹೊಲಕ್ಕೆ ತೆರಳಿದ್ದ ಮಹಿಳೆ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಹೊಸಪುರ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ. ಹೊಸಪುರ ಗ್ರಾಮದ ಯಶೋಧಮ್ಮ (65) ಮೃತ ದುರ್ದೈವಿ. ಗ್ರಾಮದ ಬಸಪ್ಪ ಎಂಬವರ ಜಮೀನಿನಲ್ಲಿ ಬೀನ್ಸ್ ಬೆಳೆಯ ಕಳೆ ಕೆಲಸಕ್ಕೆ ಬೆಳಗ್ಗೆ ಯಶೋಧಮ್ಮ ಸೇರಿದಂತೆ 6 ಮಹಿಳೆಯರು ತೆರಳಿದ್ದರು. ಸಂಜೆಯಾಗುತ್ತಿದ್ದಂತೆ ಗುಡುಗು ಸಿಡಿಲು ಸಹಿತ ಜೋರು ಮಳೆ ಆರಂಭವಾಗಿದ್ದು, ರಕ್ಷಣೆಗಾಗಿ ಯಶೋಧಮ್ಮ ಜಮೀನಿನ ಪಕ್ಕದಲ್ಲಿದ್ದ ಬೇವಿನ ಮರದ ಕೆಳಗೆ ಆಶ್ರಯ ಪಡೆದಿದ್ದರು. ಈ ವೇಳೆ ಏಕಾಏಕಿ ಸಿಡಿಲು ಬಡಿದ ಪರಿಣಾಮ ಸ್ಥಳದಲ್ಲೇ ಮೃತರಾಗಿದ್ದಾರೆ. ಗ್ರಾಮಸ್ಥರು ಬಿಳಿಕೆರೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಹುಣಸೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ತೀವ್ರ ರಾಜಕೀಯ ಸಂಚಲನ ಮೂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಹಸನ ಈಗ ಹೊಸ ತಿರುವು ಪಡೆದುಕೊಂಡಿದೆ. ಸಿಎಂ ಹುದ್ದೆಯಿಂದ ಕೆಳಗಿಳಿಯಲು ಸಿದ್ಧರಾಗಿರುವ ಸಿದ್ದರಾಮಯ್ಯ ಅವರು, ಹೈಕಮಾಂಡ್ ನಾಯಕರು ತಮಗೆ ನೀಡಿದ್ದ ಆಫರ್‌ಗಳನ್ನು ನಯವಾಗಿಯೇ ತಿರಸ್ಕರಿಸುವ ಮೂಲಕ ಅಚ್ಚರಿಯ ನಡೆ ಇಟ್ಟಿದ್ದಾರೆ. ದೆಹಲಿ ಮಟ್ಟದ ನಾಯಕರ ಲೆಕ್ಕಾಚಾರಗಳಿಗೆ ಎರಡು ಪ್ರಮುಖ ವಿಚಾರಗಳಲ್ಲಿ ಬಿಗ್ ಚೆಕ್‌ಮೇಟ್ ನೀಡುವ ಮೂಲಕ ತಮ್ಮದೇ ಆದ ರಾಜಕೀಯ ಪಟ್ಟು ಮುಂದುವರಿಸಿದ್ದಾರೆ. ರಾಷ್ಟ್ರ ರಾಜಕಾರಣದಲ್ಲಿ ಒಬಿಸಿ (ಹಿಂದುಳಿದ ವರ್ಗಗಳ) ಪ್ರಭಾವಿ ನಾಯಕನ ಅವಶ್ಯಕತೆ ಇರುವುದನ್ನು ಮನಗಂಡಿದ್ದ ಕಾಂಗ್ರೆಸ್ ಹೈಕಮಾಂಡ್, ಸಿದ್ದರಾಮಯ್ಯ ಅವರನ್ನು ದೆಹಲಿ ರಾಜಕಾರಣಕ್ಕೆ ಮುನ್ನಡೆಸಲು ಪ್ಲಾನ್ ಮಾಡಿತ್ತು. ಸಿದ್ದರಾಮಯ್ಯನವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಕಳುಹಿಸುವ ಹಾಗೂ ಕೇಂದ್ರ ಮಟ್ಟದಲ್ಲಿ ಪ್ರಮುಖ ಜವಾಬ್ದಾರಿ ನೀಡುವ ಆಫರ್ ಅನ್ನು ಹೈಕಮಾಂಡ್ ಮುಂದಿಟ್ಟಿತ್ತು. ಆದರೆ, ಈ ಪ್ರಸ್ತಾಪವನ್ನು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ನಾಯಕರ ನಿಲುವಿಗೆ ಸೆಡ್ಡು ಹೊಡೆದಿರುವ ಸಿದ್ದರಾಮಯ್ಯ, ತಮಗೆ ದೆಹಲಿ…














