Author: kannadanewsnow05

ಮಂಡ್ಯ : ಮಳವಳ್ಳಿ ಪಟ್ಟಣದಲ್ಲಿ ನಡೆಯಲಿರುವ ಸುತ್ತೂರಿನ ಶಿವರಾತ್ರಿ ಶಿವಯೋಗಿಗಳರವರ 1066ನೇ ಜಯಂತಿ ಮಹೋತ್ಸವ ಉದ್ಘಾಟನೆಗೆ ಡಿ.17 ರಂದು ರಾಷ್ಟ್ರಪತಿ ದ್ರೌಪತಿ ಮುರ್ಮು ಆಗಮಿಸಲಿದ್ದಾರೆ. ಈ ಹಿನ್ನೆಲೆ ಹೆಲಿಪ್ಯಾಡ್, ವೇದಿಕೆ ಹಾಗೂ ಇತರೆ ಸ್ಥಳಗಳನ್ನು ಮೈಸೂರು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಡಾ. ಕುಮಾರ್ ಸೇರಿದಂತೆ ಇತರೆ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಟ್ಟಣದ ಹೊರ ಭಾಗದ ಮಾರೇಹಳ್ಳಿ ಬಳಿ ನಿರ್ಮಿಸುತ್ತಿರುವ ಹೆಲಿಪ್ಯಾಡ್‌ಗೆ ತೆರಳಿ ಗ್ರೀನ್ ರೂಂ ನಿರ್ಮಾಣ, ವಿದ್ಯುತ್ ಕಂಬಗಳ ತೆರವು, ಜಾಗ ಸಮತಟ್ಟಾಗಿಸುವುದು, ಕಾರ್ಯಕ್ರಮಕ್ಕೆ ರಾಷ್ಟ್ರಪತಿಗಳನ್ನು ತೆರಳುವ ಮಾರ್ಗ, ಮೂಲಭೂತ ಸೌಲಭ್ಯಗಳ ಅಳವಡಿಕೆ ಕುರಿತು ತೆಗೆದುಕೊಂಡಿರುವ ಕ್ರಮಗಳ ಅಧಿಕಾರಿಗಳು ಚರ್ಚೆ ನಡೆಸಿದರು. ಡಿ.17ರಿಂದ 22 ರವರಗೆ ನಡೆಯಲಿರುವ ಜಯಂತೋತ್ಸವಕ್ಕೆ ರಾಷ್ಟ್ರಪತಿಗಳು, ಮುಖ್ಯಮಂತ್ರಿಗಳು ಹಾಗೂ ರಾಜ್ಯ ಸಚಿವರು ಕಾರ್ಯಕ್ರಮಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಸಾರ್ವಜನಿಕರ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಗಣ್ಯ ವ್ಯಕ್ತಿಗಳ ವಾಸ್ತವ್ಯಕ್ಕೆ ತಾಲೂಕು ವ್ಯಾಪ್ತಿಯ ಎಲ್ಲಾ ಲಾಡ್ಜ್, ಕಲ್ಯಾಣ ಮಂಟಪಗಳ, ರೆಸಾರ್ಟ್‌, ರೂಮುಗಳನ್ನು ಕಾಯ್ದಿರಿಸುವುದು, ಕಾನೂನು…

Read More

ನವದೆಹಲಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್‌ಗಳು) ಮತ್ತು ಸೆಕ್ರೆಟರಿಯೇಟ್ ಸೆಕ್ಯುರಿಟಿ ಫೋರ್ಸ್ (ಎಸ್‌ಎಸ್‌ಎಫ್) ಮತ್ತು ರೈಫಲ್‌ಮ್ಯಾನ್ (ಜನರಲ್ ಡ್ಯೂಟಿ) ಅಸ್ಸಾಂ ರೈಫಲ್ಸ್ ಪರೀಕ್ಷೆ, 2026 ರಲ್ಲಿ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಗಾಗಿ ಆನ್‌ಲೈನ್ ನೋಂದಣಿ ಪ್ರಕ್ರಿಯೆಯನ್ನು ತೆರೆದಿದೆ. ಕೈಗಾರಿಕಾ ಭದ್ರತಾ ಪಡೆ (CISF), ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF), ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP), ಸಶಸ್ತ್ರ ಸೀಮಾ ಬಾಲ್ (SSB), ಅಸ್ಸಾಂ ರೈಫಲ್ಸ್ (AR) ಮತ್ತು ಸೆಕ್ರೆಟರಿಯೇಟ್ ಭದ್ರತಾ ಪಡೆ (SSF). ಆನ್‌ಲೈನ್ ಅರ್ಜಿ ನಮೂನೆಯು ಅಧಿಕೃತ ವೆಬ್‌ಸೈಟ್ ssc.gov.in ನಲ್ಲಿ ಲಭ್ಯವಿದೆ. 1 ಡಿಸೆಂಬರ್ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು 1 ಡಿಸೆಂಬರ್ ಮತ್ತು 31 ಡಿಸೆಂಬರ್ 2025 (23:00 ಗಂಟೆಗಳು) ನಡುವೆ ಸಲ್ಲಿಸಬಹುದು. ಆನ್‌ಲೈನ್ ಶುಲ್ಕ ಪಾವತಿಯ ಅಂತಿಮ ದಿನಾಂಕ 1 ಜನವರಿ 2026 (23:00 ಗಂಟೆಗಳು). ಆಯೋಗವು 8 ಜನವರಿಯಿಂದ 10…

Read More

ಬೆಂಗಳೂರು : ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂಬ ವಿಶ್ವಾಸ ವೈಯಕ್ತಿಕವಾಗಿ ನನಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಡಿಕೆಶಿ ಅವಕಾಶ ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್ ಹೇಳಿದೆ. ದೆಹಲಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದೂ ಅವರು ಹೇಳಿದ್ದಾರೆ. ಕಾಂಗ್ರೆಸ್​​ನನಲ್ಲಿ ಅಧಿಕಾರಕ್ಕಾಗಿ ಯಾವುದೇ ಕಿತ್ತಾಟ ನಡೆದಿಲ್ಲ. ಇದೆಲ್ಲ ಪ್ರತಿಪಕ್ಷದವರ ಸೃಷ್ಟಿ ಎಂದರು. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್ ಹೇಳಿದೆ. ನಮ್ಮಲ್ಲಿ ಯಾವುದೇ ಕಿತ್ತಾಟ ಇಲ್ಲ. ಆ ರೀತಿಯ ವದಂತಿಯನ್ನು ಪ್ರತಿಪಕ್ಷದವರು ಹುಟ್ಟು ಹಾಕಿದ್ದಾರೆ. ಅಧಿಕಾರಕ್ಕೆ ಬಂದಾಗಿನಿಂದ ಸಿಎಂ ಬದಲಾಗುತ್ತಾರೆಂದು ಹೇಳುತ್ತಿದ್ದಾರೆ. ಆದರೆ, ಸಿಎಂ ಬದಲಾಗುತ್ತಾರೆ ಎಂಬ ಕನಸು ಕಾಣಬೇಕಷ್ಟೇ ಎಂದು ಯತೀಂದ್ರ ಹೇಳಿದ್ದಾರೆ. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾದ ಬೆನ್ನಲ್ಲೇ ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಎರಡೆರಡು ‘ಬ್ರೇಕ್​ಫಾಸ್ಟ್ ಮೀಟಿಂಗ್’ ನಡೆಸಿ ಒಗ್ಗಟ್ಟು ಪ್ರದರ್ಶಿಸಿದ್ದರು. ಅದಾದ…

Read More

ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವರು; ನಾನು ಕೊಟ್ಟಿದ್ದನ್ನು ಪಟ್ಟಿ ಮಾಡಿ ಹೇಳುತ್ತೇನೆ, ಮೊದಲು ಐದು ವರ್ಷ ಮುಖ್ಯಮಂತ್ರಿ ಆಗಿದ್ದಾಗ, ಈಗ ಏನೇನು ಕೊಟ್ಟಿದ್ದೀರಿ ಎಂಬುದನ್ನು ಹೇಳಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದರು. ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು; ನಾನು ಕೊಟ್ಟಿದ್ದನ್ನು ಹೇಳುತ್ತೇನೆ. ಸಿದ್ದರಾಮಯ್ಯ ಅವರೇ.. ನೀವು ರೈತರಿಗೆ ಏನು ಕೊಡುಗೆ ಕೊಟ್ಟಿದ್ದೀರಿ ಎಂಬುದನ್ನು ಹೇಳಿ. ಮಂಡ್ಯಕ್ಕೆ ನಿಮ್ಮ ಕೊಡುಗೆ ಏನು? ಹಿಂದಿನ ಐದು ವರ್ಷ ಆಡಳಿತದಲ್ಲಿ 200ಕ್ಕೂ ಹೆಚ್ಚು ರೈತರು ಮಂಡ್ಯದಲ್ಲಿ ಸರಣಿ ಆತ್ಮಹತ್ಯೆ ಮಾಡಿಕೊಂಡಿದ್ದೇ ನಿಮ್ಮ ಕೊಡುಗೆ. ಅಂಥ ಕಷ್ಟಕಾಲದಲ್ಲಿ ನಾನು ಅಧಿಕಾರಕ್ಕೆ ಬಂದ ಮೇಲೆ ಅದೇ ಜಿಲ್ಲೆಯ ರೈತರ 900 ಕೋಟಿ ಸಾಲ ಮನ್ನಾ ಮಾಡಿದೆ. ಇದಕ್ಕಿಂತ ಕೊಡುಗೆ ಬೇಕಾ? ನಿಮ್ಮ ಕಾಲದಲ್ಲಿ ರೈತರ ಜೀವ ಹೋಯಿತು, ನನ್ನ ಕಾಲದಲ್ಲಿ ಜೀವ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು, ಮಗನನ್ನು ಕೊಂದು ತಾಯಿ ಮತ್ತು ಅಜ್ಜಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಎಸ್‌ಜಿ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೌನೇಶ್ (14) ಎನ್ನುವ ಬಾಲಕನನ್ನು ಕೊಂದು ತಾಯಿ ಸುಧಾ ಹಾಗೂ ಅಜ್ಜಿ ಮುದ್ದಮ್ಮ ಆತ್ಮಹತ್ಯೆಗೆ ಶರಣಾಗಿದ್ದಾರೆ ಪುತ್ರನಿಗೆ ವಿಷ ಕುಡಿಸಿ ತಾವು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ, ಘಟನಾ ಸ್ಥಳಕ್ಕೆ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.a

Read More

ಬೆಳಗಾವಿ : ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್ ತಡಿದು ಶಿವಸೇನೆ ಮತ್ತೆ ಪುಂಡಾಟ ಮೆರೆದಿದೆ. ಈ ಹಿನ್ನೆಲೆ ತಾತ್ಕಾಲಿಕವಾಗಿ ಮಹಾರಾಷ್ಟ್ರಕ್ಕೆ ಕೆಎಸ್ಆರ್ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಮುಂಜಾಗೃತ ಕ್ರಮವಾಗಿ ಕರ್ನಾಟಕ ಸಾರಿಗೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಬಳಿಯೇ ಎಲ್ಲಾ ಬಸ್ ಗಳ ಸಂಚಾರ ಬಂದ್ ಮಾಡಲಾಗಿದೆ. ಕೊಲ್ಹಾಪುರ, ಪುಣೆ, ಮುಂಬೈ, ಸೇರಿದಂತೆ ವಿವಿಧ ಕಡೆಗೆ ಕೆಎಸ್ಆರ್ಟಿಸಿ ಬಸ್ ಸಂಚರಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಗಳನ್ನು ನಿಪ್ಪಾಣಿಯಲ್ಲಿಯೇ ಸ್ಥಗಿತಗೊಳಿಸಲಾಗಿದೆ. ಸಂಚಾರ ಸ್ಥಗಿತ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಟ ನಡೆಸಿದರು.

Read More

ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ತಮಿಳುನಾಡಿನಲ್ಲಿ ಬಾಳೆಹಣ್ಣಿನ ಪೀಸ್ ಗಂಟಲಲ್ಲಿ ಸಿಲುಕಿ 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ವರದಿಯಾಗಿತ್ತು ಆದರೆ ಬೆನ್ನಲ್ಲೇ ಇದೀಗ ಆಟೋ ಚಾಲಕ ಒಬ್ಬರು ಚಿಕನ್ ತಿನ್ನುವಾಗ ಅದರ ಪಿಸ್ ಗಂಟಲಲ್ಲಿ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಯೆಲ್ಲಾರೆಡ್ಡಿಪೇಟೆ ಮಂಡಲದ ಗೊಲ್ಲಪಳ್ಳಿಯ ಕೆಸಿಆರ್ ಡಬಲ್ ಬೆಡ್ರೂಮ್ ಕಾಲೋನಿಯ ಸುರೇಂದರ್ (45) ಎನ್ನುವವರಿಗೆ ಕೋಳಿ ತುಂಡು ಗಂಟಲಿನಲ್ಲಿ ಸಿಲುಕಿಕೊಂಡು ಸಾವನ್ನಪ್ಪಿದ್ದಾರೆ. ಸುರೇಂದರ್ ಟ್ರಾಲಿ ಆಟೋ ಓಡಿಸುವ ಮೂಲಕ ತನ್ನ ಕುಟುಂಬವನ್ನು ಪೋಷಿಸುತ್ತಿದ್ದರು. ಭಾನುವಾರವಾದ್ದರಿಂದ ಮನೆಯಲ್ಲಿ ಕೋಳಿ ಬೇಯಿಸಿ ತಿನ್ನುತ್ತಿದ್ದರು. ಮಧ್ಯಾಹ್ನ ಮನೆಯಲ್ಲಿ ಒಟ್ಟಿಗೆ ಕುಳಿತು ಊಟ ಮಾಡುತ್ತಿದ್ದಾಗ, ಸುರೇಂದರ್ ಅವರ ಗಂಟಲಿನಲ್ಲಿ ಕೋಳಿ ತುಂಡು ಸಿಲುಕಿಕೊಂಡಿತು. ಇದರಿಂದಾಗಿ, ಅವರಿಗೆ ದೀರ್ಘಕಾಲದವರೆಗೆ ಉಸಿರಾಡಲು ತೊಂದರೆಯಾಯಿತು. ಅವರು ಉಸಿರುಗಟ್ಟಿ ಸಾವನ್ನಪ್ಪಿದರು. ಕುಟುಂಬ ಸದಸ್ಯರ ಮೂಲಕ ಈ ವಿಷಯ ಬೆಳಕಿಗೆ ಬಂದಿದೆ. ಮೃತರು ಪತ್ನಿ ಕವಿತಾ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.

Read More

ಬೆಂಗಳೂರು : ಸದ್ಯ ಸಿಎಂ ಸಿದ್ದರಾಮಯ್ಯ ಸೇರಿದಂತೆ ವಿಪಕ್ಷ ನಾಯಕರು ಎಲ್ಲರೂ ಬೆಳಗಾವಿಯಲ್ಲಿ ಇದ್ದು ಇಂದಿನಿಂದ ಡಿಸೆಂಬರ್ 19 ರವರೆಗೆ ಬೆಳಗಾವಿ ಅಧಿವೇಶನ ನಡೆಯಲಿದೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಸುಪ್ರೀಂಕೋರ್ಟ್ನಿಂದ ನೋಟಿಸ್ ಜಾರಿಯಾಗಿದೆ. ಹೌದು ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ ಪ್ರಶ್ನಿಸಿ ಶಂಕರ್ ಎನ್ನುವವರು ಅರ್ಜಿ ಸಲ್ಲಿಸಿದ್ದರು. ಈ ಮೊದಲು ಕರ್ನಾಟಕ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಬಳಿಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೆ ಶಂಕರ್ ಎನ್ನುವವರು ಸುಪ್ರೀಂ ಕೋರ್ಟಿಗೆ ಮೇಲ್ಮನೆ ಸಲ್ಲಿಸಿದ್ದರು. ಇಂದು ನ್ಯಾಯಮೂರ್ತಿ ವಿಕ್ರಮನಾಥ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು ವಿಚಾರಣೆ ಬಳಿಕ ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದ್ದಾರೆ. ಚುನಾವಣಾ ಅಕ್ರಮ ನಡೆಸಿದರೆ ಎಂದು ಶಂಕರ್ ಆರೋಪಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ ಬಂದಿದ್ದು ಹಾಗಾಗಿ ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

Read More

ಬೆಳಗಾವಿ : ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು ಡಿಸೆಂಬರ್ 19 ರವರೆಗೆ ಈ ಒಂದು ಅಧಿವೇಶನ ನಡೆಯಲಿದೆ ಈಗಾಗಲೇ ವಿಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ತಂತ್ರಗಳನ್ನು ಹೂಡಿದ್ದು ಅದಕ್ಕೆ ಪ್ರತಿ ತಂತ್ರವಾಗಿ ಕಾಂಗ್ರೆಸ್ ಕೂಡ ಎಲ್ಲದಕ್ಕೂ ಸಿದ್ಧವಾಗಿದೆ. ಕಲಾಪ ಆರಂಭದ ವೇಳೆ ನಿಧನ ಹೊಂದಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಇದೇ ಸಂದರ್ಭದಲ್ಲಿ, ಸಾಲುಮರದ ತಿಮ್ಮಕ್ಕ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಬೇಲೂರಿನಲ್ಲಿ ಸಾಲುಮರದ ತಿಮ್ಮಕ್ಕ ವಸ್ತು ಸಂಗ್ರಹಲಕ್ಕೆ ಚಿಂತನೆ ನಡೆಸಲಾಗುತ್ತಿದೆ. ವಸ್ತು ಸಂಗ್ರಹಾಲಯ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ ನೀಡಲು ಕೂಡ ತೀರ್ಮಾನ ಮಾಡಿದ್ದೇವೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.

Read More

ಬೆಂಗಳೂರು : ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂಬ ವಿಶ್ವಾಸ ವೈಯಕ್ತಿಕವಾಗಿ ನನಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಡಿಕೆಶಿ ಅವಕಾಶ ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್ ಹೇಳಿದೆ. ದೆಹಲಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದೂ ಅವರು ಹೇಳಿದ್ದಾರೆ. ಕಾಂಗ್ರೆಸ್​​ನನಲ್ಲಿ ಅಧಿಕಾರಕ್ಕಾಗಿ ಯಾವುದೇ ಕಿತ್ತಾಟ ನಡೆದಿಲ್ಲ. ಇದೆಲ್ಲ ಪ್ರತಿಪಕ್ಷದವರ ಸೃಷ್ಟಿ ಎಂದರು. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್ ಹೇಳಿದೆ. ನಮ್ಮಲ್ಲಿ ಯಾವುದೇ ಕಿತ್ತಾಟ ಇಲ್ಲ. ಆ ರೀತಿಯ ವದಂತಿಯನ್ನು ಪ್ರತಿಪಕ್ಷದವರು ಹುಟ್ಟು ಹಾಕಿದ್ದಾರೆ. ಅಧಿಕಾರಕ್ಕೆ ಬಂದಾಗಿನಿಂದ ಸಿಎಂ ಬದಲಾಗುತ್ತಾರೆಂದು ಹೇಳುತ್ತಿದ್ದಾರೆ. ಆದರೆ, ಸಿಎಂ ಬದಲಾಗುತ್ತಾರೆ ಎಂಬ ಕನಸು ಕಾಣಬೇಕಷ್ಟೇ ಎಂದು ಯತೀಂದ್ರ ಹೇಳಿದ್ದಾರೆ. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾದ ಬೆನ್ನಲ್ಲೇ ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಎರಡೆರಡು ‘ಬ್ರೇಕ್​ಫಾಸ್ಟ್ ಮೀಟಿಂಗ್’ ನಡೆಸಿ ಒಗ್ಗಟ್ಟು ಪ್ರದರ್ಶಿಸಿದ್ದರು. ಅದಾದ…

Read More