Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ವಿಜಯಪುರ : ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ನಿರ್ಧರಿಸುತ್ತಾರೆ. 2028 ರಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಭವಿಷ್ಯ ನುಡಿದಿದ್ದಾರೆ. ವಿಜಯಪುರದಲ್ಲಿ ಜೆಡಿಎಸ್ ಬೆಳ್ಳಿ ಹಬ್ಬ ಸಮಾರಂಭದಲ್ಲಿ ಮಾತನಾಡಿದ ಅವರು, ಸದ್ಯ ನಾವು ಎನ್.ಡಿ.ಎ ಮೈತ್ರಿಕೂಟದಲ್ಲಿ ಇದ್ದೇವೆ. ಕೊಟ್ಟು ಪಡೆಯುವ ಶಕ್ತಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಲ್ಲಿ ಇದೆ ನಾನು ಸಾಯುವ ಮುನ್ನ ಯೋಗ್ಯ ಆಡಳಿತ ನೀಡುವ ಪಕ್ಷ ಬರಬೇಕು. ಉತ್ತಮ ಆಡಳಿತ ನೀಡುವ ಪಕ್ಷ ಅಧಿಕಾರಕ್ಕೆ ಬರುವುದನ್ನು ನೋಡುವೆ. ಅದರ ಬಗ್ಗೆ ಪ್ರಧಾನ ನರೇಂದ್ರ ಮೋದಿಯವರು ಮಾತನಾಡುತ್ತಾರೆ.ಈ ಮೂಲಕ ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಅತ್ಯಂತ ಕೆಟ್ಟ ಹಾಗು ಭ್ರಷ್ಟ ಸರ್ಕಾರವಾಗಿದೆ. ನಾನು ಹಿಂದೆಂದೂ ಇಂತಹ ಸರ್ಕಾರ…

Read More

ಬೆಂಗಳೂರು : ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವ ನಗರದ ಸಾಂಸ್ಕೃತಿಕ, ಐತಿಹಾಸಿಕ ಪರಂಪರೆಯ ಹೆಗ್ಗುರುತು. ಹೂವಿನ ದಂಡನ್ನ ಹೊತ್ತು ಸಾಗುವ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಇದೀಗ ದಿನಾಂಕ ಫಿಕ್ಸ್​​ ಆಗಿದೆ.ಮಾರ್ಚ್ 24ರಂದು ಧ್ವಜಾರೋಹಣದ ಮೂಲಕ ಉತ್ಸವಕ್ಕೆ ಚಾಲನೆ ಸಿಗಲಿದೆ. ಏಪ್ರಿಲ್ 1ರ ಮಧ್ಯರಾತ್ರಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಚೈತ್ರ ಪೌರ್ಣಮಿಯ ಮಧ್ಯರಾತ್ರಿ ಆದಿಶಕ್ತಿ ದ್ರೌಪದಿದೇವಿಯ ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಇದರ ಪ್ರಥಮ ಭಾಗವಾಗಿ ಮಾರ್ಚ್ 30ರಂದು ಹಸಿಕರಗ ನಡೆಯಲಿದೆ. ಬೆಳಿಗ್ಗೆ ನಾಲ್ಕು ಗಂಟೆ ಸುಮಾರಿಗೆ ಹಸಿಕರಗಕ್ಕೆ ಚಾಲನೆ ದೊರೆಯಲಿದೆ. ಇನ್ನು 16ನೇ ಬಾರಿಗೆ ಅರ್ಚಕರು ಎ.ಜ್ಞಾನೇಂದ್ರಸ್ವಾಮಿ ಬೆಂಗಳೂರು ಕರಗ ಹೊರಲಿದ್ದಾರೆ. ಮಾರ್ಚ್ 30ರಂದು ಹಸಿಕರಗ ನಡೆಯಲಿದೆ. ಬಳಿಕ ಏಪ್ರಿಲ್ 1ರ ಮಧ್ಯರಾತ್ರಿ ಬೆಂಗಳೂರು ಕರಗ ಶಕ್ತ್ಯೋತ್ಸವ ನಡೆಯಲಿದೆ. ಇನ್ನು ಒಟ್ಟು 11 ದಿನಗಳ ಕಾಲ ಬೆಂಗಳೂರು ಕರಗ ಶಕ್ತ್ಯೋತ್ಸವ ನಡೆಯಲಿದೆ. ಕಳೆದ ವರ್ಷ ಬೆಂಗಳೂರು ಕರಗ ಹೊತ್ತಿದ್ದ ಅರ್ಚಕರು ಎ.ಜ್ಞಾನೇಂದ್ರ ಸ್ವಾಮಿ ಅವರು 16ನೇ ಬಾರಿಗೆ ಕರಗ ಹೊರಲಿದ್ದಾರೆ. ಬೆಂಗಳೂರು ಕರಗ…

Read More

ಹಾವೇರಿ : ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಲಿದ್ದು, ಬಳಿಕ SSLC ಪರೀಕ್ಷೆ ಆರಂಭವಾಗಲಿವೆ. ಇದೀಗ ಹಾವೇರಿಯಲ್ಲಿ ಪರೀಕ್ಷೆಗೆ ಹೆದರಿ ಐವರು SSLC ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯ SSLC ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಸುಣಕಲಬಿದರಿ ಬಳಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ನಾಪತ್ತೆಯಾಗಿರುವ ಐವರು ಮಕ್ಕಳ ಮಾಹಿತಿಯನ್ನು ಅಧಿಕಾರಿಗಳು ಮುಚ್ಚಿಡುತ್ತಿದ್ದಾರೆ. ಮಕ್ಕಳು ಇದ್ದಾರೆ ಸಿಕ್ಕಿದ್ದಾರೆ ಅಂತ ಹೆಡ್ ಮಾಸ್ಟರ್ ನಾಗರಾಜ್ ಹೇಳುತ್ತಿದ್ದರೆ, ಮಕ್ಕಳು ಬೇರೆ ಕಡೆ ಇದ್ದಾರೆ ಎಂದು ಅಧಿಕಾರಿಗಳು ಹಾರಿಕೆ ಉತ್ತರ ನೀಡುತ್ತಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಅಬ್ದುಲ್ ಮಿರಜ್ ಉತ್ತರ ನೀಡುತ್ತಿದ್ದಾರೆ. ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ ನಿನ್ನೆ ರಾತ್ರಿ ವಾಚ್ ಮನ್ ಇರಲಿಲ್ಲ. ಎಸ್ ಎಸ್ ಎಲ್ ಸಿ ಪೂರ್ವಭಾವಿ ಪರೀಕ್ಷೆಗಳು ನಡೆಯುತ್ತಿದ್ದವು. ಪರೀಕ್ಷೆಗೆ ಹೆದರಿ ವಿದ್ಯಾರ್ಥಿಗಳು ಪರಾರಿಯಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ನಾಪತ್ತೆಯಾಗಿರುವ ಮಕ್ಕಳಿಗಾಗಿ ಹೆಡ್ ಮಾಸ್ಟರ್ ಮತ್ತು ಶಾಲಾ ಸಿಬ್ಬಂದಿಗಳು ಹುಡುಕಾಟ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಗುತ್ತಿಗೆದಾರನಿಂದ 5 ಲಕ್ಷ ಸ್ವೀಕರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಚಂದ್ರು ಲಮಾಣಿ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಶಾಸಕ ಚಂದ್ರು ಲಮಾಣಿ ಪರ ಹಿರಿಯ ವಕೀಲ ಅಶೋಕ ಹಾರನಹಳ್ಳಿ ವಾದ ಮಂಡಿಸಿದರು. ಎಸ್ಪಿಪಿ ವಾದಮಂಡನೆಗೆ ಕಾಲಾವಕಾಶ ಕೋರಿದ್ದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿತು. ತಡೆಗೋಡೆ ನಿರ್ಮಾಣ ಒಂದಕ್ಕೆ ಗುತ್ತಿಗೆದಾರನ ಬಳಿ 11% ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಳಗೆ ಶಾಸಕ ಚಂದ್ರು ಲಮಾಣಿ ರೆಡ್ ಹ್ಯಾಂಡಾಗಿ ಸಿಗಿಬಿದ್ದಿದ್ದಾರೆ.

Read More

ಬೆಂಗಳೂರು : ಇಡೀ ದೇಶವೇ ಬೆಚ್ಚಿ ಬೀಳಿಸುವಂತಹ ಘಟನೆ ಇದೀಗ ಬೆಂಗಳೂರಿನಲ್ಲಿ ನಡೆದಿದ್ದು, ಡ್ರಗ್ಸ್ ಬಳಸಿ ಯುವತಿಯರಿಗೆ ಗಾಳ ಹಾಕಿ ಅವರಿಗೆ ಮತ್ತ ಬರುವ ಮಾತ್ರೆ ಮಿಕ್ಸ್ ಮಾಡಿ ಕಾಲೇಜ್ ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಇದೀಗ ವರದಿಯಾಗಿದೆ. ಕಾಲೇಜ್ ಹುಡುಗಿಯರನ್ನು ಟಾರ್ಗೆಟ್ ಮಾಡಿ, ಜೊತೆ ಮೋಜು ಮಸ್ತಿ ಮಾಡಿದ್ದು ಡ್ರಗ್ಸ್ ಮತ್ತು ಮದ್ಯದ ಜೊತೆ ಮತ್ತಿನ ಮಾತ್ರೆ ಮಿಕ್ಸ್ ಮಾಡಿದ್ದಾರೆ ಈ ವೇಳೆ ಆರ್ಯ ಪ್ರಜ್ಞಾವಸ್ಥೆಯಲ್ಲಿರುವ ಯುವತಿಯರು ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಪೊಲೀಸರ ತನಿಖೆಗಳೆ ಕೆಲವು ಸ್ಪೋಟಕ ಮಾಹಿತಿ ಬಯಲಾಗಿದೆ. ಗ್ಯಾಂಗ್ ರೇಪ್ ಗ್ಯಾಂಗಿನ ನಿಖಿಲ್ ಮತ್ತು ಡಿಕ್ಸನ್ ಸಂಚು ಇದೀಗ ಬಯಲಾಗಿದೆ ಗ್ಯಾಂಗ್ ರೇಪ್ ಗ್ಯಾಂಗಿನ ಮಾಸ್ಟರ್ ಮೈಂಡ್ ನಿಖಿಲ್ ಎಂದು ತಿಳಿದುಬಂದಿದೆ ಹುಡುಗಿಯರಿಗೆ ನಿಖಿಲ್ ಬಲೆ ಬೀಸುವಂತೆ ಸೂಚನೆ ನೀಡುತ್ತಿದ್ದ ಡಿಕ್ಸನ್ ತಂಡದಿಂದ ಕಾಲೇಜು ಯುವತಿಯರಿಗೆ ಬಲೆ ಬೀಸಲಾಗುತ್ತಿತ್ತು. ಪ್ರತಿಷ್ಠಿತ ಕಾಲೇಜು ಯುವತಿಯರೇ ಈ ಒಂದು ಗ್ಯಾಂಗಿನ ಟಾರ್ಗೆಟ್ ಆಗಿತ್ತು. ಸ್ನೇಹದ ಬಲೇ…

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಗೃಹ ಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಮನೆ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡಲಾಗುತ್ತಿದೆ. ಆದ್ರೆ, ಸತ್ತವರ ಅಕೌಂಟ್​​​ಗೆ ಗೃಹ ಲಕ್ಷ್ಮೀ ಯೋಜನೆ ಹಣ ಪಾವತಿಯಾಗಿರುವುದು ಬೆಳಕಿಗೆ ಬಂದಿದೆ. ಇದರಿಂದ ಈ ಯೋಜನೆ ಇದೀಗ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎನ್ನಲಾಗಿದೆ. ಹೀಗಾಗಿ ಸರ್ಕಾರ, ಸತ್ತವರ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮೀ ಹಣವನ್ನು ವಾಪಸ್ ಪಡೆದುಕೊಳ್ಳಲು ಮುಂದಾಗಿದೆ. ಬರೋಬ್ಬರಿ 69 ಸಾವಿರ ಸತ್ತವರ ಬ್ಯಾಂಕ್ ಖಾತೆಗಳಿಗೆ 79 ಕೋಟಿ ರೂ. ಗೃಹಲಕ್ಷ್ಮಿ ಹಣ ಪಾವತಿ ಆಗಿರುವುದನ್ನು ಸರ್ಕಾರ ಪತ್ತೆ ಮಾಡಿದೆ. ಈ ಹಣವನ್ನು ಇದೀಗ ವಾಪಸ್ ಪಡೆದುಕೊಳ್ಳಲು ಸರ್ಕಾರ, ಬ್ಯಾಂಕ್ ಅಧಿಕಾರಿಗಳ ಜೊತೆಯೂ ಸಂಪರ್ಕ ಸಾಧಿಸಿದೆ. ಈಗಾಗಲೇ ಸತ್ತವರ ಖಾತೆಗೆ ಎಷ್ಟು ಹಣ ಹೋಗಿದೆ ಎನ್ನುವುದು ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದು ಇನ್ನು ಸತ್ತವರ ಮನೆಯ ಮುಂದಿನ ಸದಸ್ಯರು ಅಂದರೆ ಅವರ ಮನೆಯ ಹೆಣ್ಣು ಮಕ್ಕಳು ಹೊಸದಾಗಿ ಗೃಹಲಕ್ಷ್ಮಿ ಯೋಜನೆ…

Read More

ಬೆಂಗಳೂರು : ವಿಶ್ವ ವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 1 ರಂದು ಮಧ್ಯರಾತ್ರಿ ಬೆಂಗಳೂರು ಕರಗ ನಡೆಯಲಿದೆ. 16ನೇ ಬಾರಿಗೆ ಜ್ಞಾನೇಂದ್ರಸ್ವಾಮಿ ಬೆಂಗಳೂರು ಕರಗ ಹೊರಲಿದ್ದಾರೆ. ಮಾರ್ಚ್ 24ರಂದು ಧ್ವಜಾರೋಹಣದ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಮಾರ್ಚ್ 31 ಹಸಿ ಕರಗ ನಡೆಯಲಿದ್ದು, ಒಟ್ಟು 11 ದಿನಗಳ ಕಾಲ ಬೆಂಗಳೂರು ಕರಗ ಶಕ್ತ್ಯೋತ್ಸವ ನಡೆಯಲಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ 5.24 ಕೋಟಿ ಮೌಲ್ಯದ ಡ್ರಗ್ಸ್ ಮತ್ತು ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವಿವಿಧ ಡ್ರಗ್ಸ್ ಪ್ರಕರಣಗಳಲ್ಲಿ ಒಟ್ಟು 16 ಆರೋಪಿಗಳನ್ನು ಬಂಧಿಸಲಾಗಿದೆ. ಇಬ್ಬರು ಮಹಿಳೆಯರು ಸೇರಿ 16 ಪೆಡ್ಲರ್ ಗಳು ಅರೆಸ್ಟ್ ಆಗಿದ್ದಾರೆ. ವಿದೇಶಿ ಪ್ರಜೆಗಳು ಹಾಗೂ ಹೊರ ರಾಜ್ಯದ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ ಸಿಸಿಬಿ ಹಾಗೂ ನಗರದ ವಿವಿಧ ಠಾಣೆಗಳ ಪೊಲೀಸರು ಈ ಒಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವಿವಿಧ ಪ್ರಕರಣಗಳಲ್ಲಿ ಒಟ್ಟು 16 ಆರೋಪಿಗಳನ್ನು ಬಂಧಿಸಿದ್ದು ಇದುವರೆಗೂ 5.24 ಕೋಟಿ ಮಾಡಿದ ಡ್ರಗ್ಸ್ ಮತ್ತು ಗಾಂಜಾವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

Read More

ಕಲಬುರಗಿ: ಬಾಲಕಿ ಜೊತೆ ಅನುಚಿತ ವರ್ತನೆ ಕೇಸ್‌ಗೆ ಸಂಬಂಧಿಸಿದಂತೆ ಇದೀಗ ಮಲ್ಲಿಕಾರ್ಜುನ ಮುತ್ಯಾ ಪ್ರಕರಣ ರದ್ದು ಕೋರಿ ಕರ್ನಾಟಕ ಹೈಕೋರ್ಟ್ ಕಲಬುರಗಿ ವಿಭಾಗೀಯ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಬಾಲಕಿಯ ಜೊತೆ ಮಲ್ಲಿಕಾರ್ಜುನ ಮುತ್ಯಾ ಅಸಭ್ಯವಾಗಿ ನಡೆದುಕೊಂಡಿದ್ದರು. ಹೀಗಾಗಿ ಮುತ್ಯಾನ ವಿರುದ್ಧ ಕ್ರಮ ಜರುಗಿಸಲು ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ದೂರು ದಾಖಲಿಸಿಕೊಂಡಿತ್ತು. ಯಾದಗಿರಿ ಎಸ್ಪಿ ಅವರಿಗೆ ಪತ್ರವನ್ನೂ ಬರೆದಿದ್ದರು. ಅದರಂತೆ ಗೋಗಿ ಪೊಲೀಸ್ ಠಾಣೆಯಲ್ಲಿ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಇದೀಗ ಮಲ್ಲಿಕಾರ್ಜುನ ಮುತ್ಯಾ ಪ್ರಕರಣ ರದ್ದು ಕೋರಿ ಕರ್ನಾಟಕ ಹೈಕೋರ್ಟ್ ಕಲಬುರಗಿ ವಿಭಾಗೀಯ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದಾರೆ.ಸಲ್ಲಿಸಿದ ಅರ್ಜಿಯಲ್ಲಿ ಪೋಷಕರೇ ದೂರು ನೀಡಿಲ್ಲ. ಆದರೂ ಎಫ್‌ಐಆರ್ ದಾಖಲಿಸಿದ್ದಾರೆ. ಹೀಗಾಗಿ ಎಫ್‌ಐಆರ್ ರದ್ದು ಮಾಡಿ ಎಂದು ಉಲ್ಲೇಖಿಸಿದ್ದಾರೆ. ಈ ಸಂಬಂಧ ಸೋಮವಾರ (ಮಾ.2) ಕೋರ್ಟ್ ವಿಚಾರಣೆ ನಡೆಸಲಿದ್ದಾರೆ.

Read More

ಬೆಂಗಳೂರು : ಸಾಮಾನ್ಯವಾಗಿ ಜನರ ಮನೆಗೆ ನುಗ್ಗಿ ಚಿನ್ನಾಭರಣ ಅನ್ನೋದು ಕರಿಯುತ್ತಿದ್ದ ಕಳ್ಳರು ಇದೀಗ ಪೊಲೀಸರ ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರು ನಗರದ ಜಾಲಹಳ್ಳಿ ಹೆಚ್‌ಎಟಿ ಪೊಲೀಸ್ ಕ್ವಾಟ್ರಸ್‌ನಲ್ಲಿ ವಾಸವಿದ್ದ ಶ್ರೀಧರ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಶ್ರೀಧರ್ ಎಂಬುವವರು ಕಾನ್‌ಸ್ಟೇಬಲ್ ಆಗಿದ್ದು, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಶ್ರೀಧರ್ ಅವರ ಪತ್ನಿ ಕುಟುಂಬಸ್ಥರು ಮುರುಗೇಶ್ ಪಾಳ್ಯದಲ್ಲಿ ವಾಸವಾಗಿದ್ದರು. ಈ ಹಿನ್ನೆಲೆ ಶ್ರೀಧರ್ ಹಾಗೂ ಅವರ ಪತ್ನಿ ಅಲ್ಲಿಗೆ ತೆರಳಿದ್ದರು. ಈ ವೇಳೆ ಜಾಲಹಳ್ಳಿಯಲ್ಲಿರುವ ಕ್ವಾಟರ್ಸ್ನಲ್ಲಿ ಕಳ್ಳತನ ನಡೆದಿದೆ. ಮನೆಯಲ್ಲಿದ್ದ ನೆಕ್ಲೆಸ್, ಕಿವಿ ಓಲೆ, ಬೆಳ್ಳಿ ಹಾಗೂ ರೇಷ್ಮೆ ಸೀರೆ ಕಳ್ಳತನವಾಗಿದ್ದು, ಘಟನೆ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಜಾಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More