Author: kannadanewsnow05

ಹಾವೇರಿ : ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದಿದೆ. ಹಾವೇರಿ ಜಿಲ್ಲೆ ಅಕ್ಕಿಆಲೂರಿನ ಸಿ.ಜಿ.ಬೆಲ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆಲ ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಬಂದಿದ್ದನ್ನು ಖಂಡಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದು, ವಿವಾದಕ್ಕೆ ಕಾರಣವಾಗಿದೆ. ಬಳಿಕ, ಕಾಲೇಜಿನ ಪ್ರಾಚಾರ್ಯ ಡಾ.ವೀರೇಶ ಕುಮ್ಮೂರ ಅವರು ವಿದ್ಯಾರ್ಥಿಗಳ ಮನವೊಲಿಸಿದ್ದು, ಕಾಲೇಜಿನ ಸಮವಸ್ತ್ರ ಪಾಲನೆಗೆ ವಿದ್ಯಾರ್ಥಿಗಳು ಒಪ್ಪಿದ್ದಾರೆ. ಆ ಮೂಲಕ ವಿವಾದ ಸುಖಾಂತ್ಯಗೊಂಡಿದೆ. ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಮಧ್ಯಾಹ್ನ 12.30ರ ವೇಳೆಗೆ ಕೆಲ ವಿದ್ಯಾರ್ಥಿನಿಯರು ಬುರ್ಕಾ ಧರಿಸಿ ಬಂದಿದ್ದರು. ಇದರಿಂದ ಆಕ್ರೋಶಗೊಂಡ ಅಕ್ಕಿ ಆಲೂರು ಕಾಲೇಜಿನಲ್ಲಿ ಹಿಜಾಬ್ ವಿರೋಧಿಸಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿಗಳು, ಕೆಲ ವಿದ್ಯಾರ್ಥಿಗಳು, ಕೇಸರಿ ಶಾಲು ಧರಿಸಿ ಬಂದರು. ಇದು ಕಾಲೇಜಿನಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರ ನಡುವಿನ ಚರ್ಚೆಗೆ ಕಾರಣವಾಯಿತು. ವಿಷಯ ತಿಳಿದ ಪ್ರಾಚಾರ್ಯ ಡಾ. ವೀರೇಶ ಕುಮ್ಮೂರ, ಬುರ್ಕಾ ಧರಿಸಿದ ವಿದ್ಯಾರ್ಥಿನಿಯರು ಹಾಗೂ ಕೇಸರಿ ಶಾಲು ಧರಿಸಿದ…

Read More

ಬೆಂಗಳೂರು : ನಗರ ಪೊಲೀಸ್‌ ಆಯುಕ್ತರ ಕಚೇರಿ ಆವರಣದಲ್ಲಿ ನಿಲ್ಲಿಸಲಾಗಿದ್ದ ವಂಚನೆ ಪ್ರಕರಣದ ಆರೋಪಿಗೆ ಸೇರಿದ ಕಾರಿನಲ್ಲಿದ್ದ ಕ11 ಲಕ್ಷ ಕಳವು ಮಾಡಿದ ಆರೋಪಕ್ಕೆ ಸಿಸಿಬಿ ಸೈಬರ್‌ಠಾಣೆ ಕಾನ್‌ಸ್ಟೇಬಲ್ ಜಬಿವುಲ್ಲಾ ತುತ್ತಾಗಿದ್ದು, ಆರೋಪದ ಬೆನ್ನಲ್ಲೆ ಕಾನ್‌ಸ್ಟೇಬಲ್‌ ಸಂಪೂರ್ಣ ಹಣವನ್ನು ಮರಳಿಸಿದ್ದಾರೆ. ಕೆಲ ದಿನಗಳ ಹಿಂದೆ ವಂಚನೆ ಪ್ರಕರಣ ಸಂಬಂಧ ಇನ್‌ಸ್ಪೆಕ್ಟ‌ರ್ ಉಮೇಶ್‌ ಕುಮಾರ್‌ತಂಡ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಠಾಣೆಗೆ ಕರೆತಂದಿದ್ದು, ಆ ವೇಳೆ ಈ ಹಣ ಕಳ್ಳತನವಾಗಿದೆ. ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದ ಆರೋಪಿ, ತನ್ನ ಕಾರನ್ನು ಪರಿಶೀಲಿಸಿದಾಗ ಅದರಲ್ಲಿದ್ದ 11 ಲಕ್ಷ ಕಳ್ಳತನವಾಗಿದೆ ಎಂದು ದೂರಿದ್ದಾನೆ. ಈ ಕಳ್ಳತನ ಬಗ್ಗೆ ಸಿಸಿಬಿ ಡಿಸಿಪಿ ಅವರಿಗೆ ಸಹ ಆರೋಪಿಯು ದೂರು ನೀಡಿದ್ದಾನೆ. ಆಗ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕಾರಿನಲ್ಲಿದ್ದ ಹಣವನ್ನು ಜಬೀವುಲ್ಲಾ ಕಳ್ಳತನ ಮಾಡಿರುವುದು ಗೊತ್ತಾಗಿದೆ. ಆದರೆ, ಈ ಕುರಿತು ತನಿಖೆ ನಡೆಸದೆ ಅಧಿಕಾರಿಗಳು ನಿರ್ಲಕ್ಷ್ಯತನ ತೋರಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಆಯುಕ್ತ ಸೀಮಂತ್ ಕುಮಾರ್‌ಸಿಂಗ್ ಪ್ರತಿಕ್ರಿಯಿಸಿ, ಕಾರಿನಲ್ಲಿ ಹಣ…

Read More

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಪ್ರತಿಬಂಧಕ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಇದಲ್ಲದೇ ಧಾರ್ಮಿಕ ದತ್ತಿ ವಿಧೇಯಕಕ್ಕೂ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆಯನ್ನು ನೀಡಲಾಗಿದೆ. ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಕಾನೂನು ಸಚಿವ ಹೆಚ್ ಕೆ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಂಪುಟದ ನಿರ್ಣಯಗಳನ್ನು ಮಾಧ್ಯಮಗಳಿಗೆ ತಿಳಿಸಿದರು. ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ್ಕೆ ಒಪ್ಪಿಗೆಯನ್ನು ನೀಡಲಾಗಿದೆ. ಬಯಲುಸೀಮೆ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ ಸೂಚಿಸಿದೆ. ಮಲೆನಾಡು ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ಧಾರ್ಮಿಕ ದತ್ತಿ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ಜಾನುವಾರು ಹತ್ಯೆ ಪ್ರತಿಬಂಧಕ ಹತ್ಯೆ ಸಂರಕ್ಷಣೆ ವಿಧೇಯಕಕ್ಕೆ ಒಪ್ಪಿಗೆ ನೀಡಿದೆ ಎಂಬುದಾಗಿ ಹೇಳಿದರು. ಇನ್ನೂ ಸಾಮಾಜಿಕ‌ ಬಹಿಷ್ಕಾರ ನಿಷೇಧ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ಒಟ್ಟು 8 ಬಿಲ್ ಗೆ ಅನುಮೋದನೆ ಮಾಡಿದ್ದೇವೆ. ಮತೀಯ ದ್ವೇಷ ಭಾಷಣವೂ ಇದರಲ್ಲಿ ಸೇರಿದೆ. ದ್ವೇಷ ಭಾಷಣ,ಸೈದ್ಧಾಂತಿಕ ನಿಲುವುಗಳ ಬಗ್ಗೆ ಸ್ಪಷ್ಟವಾಗಿದೆ. ವಿಧೇಯಕದಲ್ಲಿ ಬಹಳ ಸ್ಪಷ್ಟವಾಗಿ ತಿಳಿಸಲಾಗಿದೆ ಎಂದರು.…

Read More

ಬೆಂಗಳೂರು : ಸರ್ಕಾರದ ಆಡಳಿತ ಯಂತ್ರದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಮಹಿಳಾ ನೌಕರರನ್ನು ಅಭಿನಂದಿಸಿ, ಸೆ. 13 ರಂದು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದರು. ರಾಜ್ಯ ಸರ್ಕಾರದ ವತಿಯಿಂದ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರದ ರಜೆಯನ್ನು ಮಂಜೂರು ಮಾಡಿರುವುದರಿಂದ, ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಬೆಂಗಳೂರು ಇವರ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​​ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ಋತುಚಕ್ರ ರಜೆಯನ್ನು ಮಂಜೂರು ಮಾಡಲು ಸರ್ಕಾರ ನಿರ್ಧರಿಸಿದೆ. ಸಂಘದ ಕಚೇರಿಯ ಕಾರ್ಯಚಟುವಟಿಕೆಗಳಿಗೆ ಬಾಲಭವನದಲ್ಲಿ ಸ್ಥಳಾವಕಾಶ ನೀಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರೊಂದಿಗೆ ಚರ್ಚಿಸಲಾಗಿದೆ. ಸೆ. 13 ರಂದು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡಲಾಗುವುದು ಎಂದರು.

Read More

ತಮಿಳುನಾಡು : ಮಕ್ಕಳು ಬಾಯಲ್ಲಿ ಏನೇ ಹಾಕಿಕೊಂಡರು ಪೋಷಕರಾದವರು ಮೊದಲು ಆ ಕುರಿತು ಎಚ್ಚರ ವಹಿಸಿವುದು ಸೂಕ್ತ. ಇಲ್ಲವಾದರೆ ಅನಾಹುತ ಆಗುವ ಸಂಭವ ಇರುತ್ತೆ. ಇದೀಗ ಬಾಳೆಹಣ್ಣು ತಿಂದು ಉಸಿರುಗಟ್ಟಿ 5 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ತಮಿಳುನಾಡಿನಾದ್ಯಂತ ತೀವ್ರ ಆಘಾತವನ್ನುಂಟು ಮಾಡಿದೆ. ಈರೋಡ್​​ನ ಬಾಲಕನ ಶವವನ್ನು ಈರೋಡ್ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿ ಪೋಷಕರಿಗೆ ಹಸ್ತಾಂತರಿಸಲಾಯಿತು. ಹೌದು ಈರೋಡ್‌ನ ಅನ್ನೈ ಸತ್ಯ ನಗರದ ಎಂ. ಸಾಯಿಶರಣ್ ಎಂಬ ಬಾಲಕ ಮನೆಯಲ್ಲಿ ಬಾಳೆಹಣ್ಣು ತಿನ್ನುವಾಗ ಅದು ಗಂಟಲಲ್ಲಿ ಸಿಕ್ಕಿಹಾಕಿಕೊಂಡು, ಉಸಿರಾಡಲಾಗದೆ ಸಾವನ್ನಪ್ಪಿದ್ದಾನೆ. ಈರೋಡ್ ಜಿಲ್ಲೆಯ ಅನ್ನೈ ಸತ್ಯ ನಗರ ಪ್ರದೇಶದ ಮಾಣಿಕ್ಕಂ-ಮಹಾಲಕ್ಷ್ಮಿ ದಂಪತಿಗೆ 5 ವರ್ಷದ ಸಾಯಿಶರಣ್ ಎಂಬ ಮಗ ಮತ್ತು 2 ವರ್ಷದ ಮಗಳಿದ್ದಾರೆ. ದಂಪತಿಗಳಿಬ್ಬರೂ ಕೂಲಿ ಕೆಲಸ ಮಾಡುವುದರಿಂದ ಅವರು ಸಾಮಾನ್ಯವಾಗಿ ಇಬ್ಬರೂ ಮಕ್ಕಳನ್ನು ಅಜ್ಜಿಯ ಮನೆಯಲ್ಲಿ ಬಿಡುತ್ತಿದ್ದರು. ಮಂಗಳವಾರ ರಾತ್ರಿ ಆ ಹುಡುಗನ ಅಜ್ಜಿ ಸಾಯಿಶರಣ್‌ಗೆ ತಿನ್ನಲು ಬಾಳೆಹಣ್ಣನ್ನು ಕೊಟ್ಟರು.ಹಣ್ಣು ತಿಂದ ಹುಡುಗ ಅದನ್ನು ನುಂಗಲು…

Read More

ಬೆಂಗಳೂರು : ರಾಜ್ಯದ ಮೆಕ್ಕೆಜೋಳ ಬೆಳೆಗಾರರಿಗೆ ರಾಜ್ಯ ಸರ್ಕಾರ ಇದೀಗ ಸಿಹಿಸುದ್ದಿ ನೀಡಿದ್ದು, MSP ಪ್ರಕಾರ ನೇರವಾಗಿ ರೈತರಿಂದ ಮೆಕ್ಕೆಜೋಳ ಖರೀದಿಸಲು ಅನುಮತಿ ನೀಡಿದೆ. ಹೌದು ಮೆಕ್ಕೆಜೋಳ ಖರೀಡಿಗೆ ಕುಕ್ಕುಟ ಆಹಾರ ಉತ್ಪಾದಕರಿಗೆ ಅನುಮತಿ ನೀಡಿದ್ದು, ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಅನುಮತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

Read More

ಬೆಂಗಳೂರು : ರೇಣುಕಾಸ್ವಾಮೀ ಕೊಲೆ ಪ್ರಕರಣದಲ್ಲಿ ಸದ್ಯ ನಟ ದರ್ಶನ್ ಪರಪ್ಪನ ಆಗ್ರಹಾರ ಜೈಲಲ್ಲಿ ಇದ್ದು, ಇದೀಗ ಕೊನೆಗೂ ದರ್ಶನ್ ಗೆ ಟಿವಿ ಭಾಗ್ಯ ದೊರೆತಿದೆ. ಬೆಂಗಳೂರಿನ 57ನೇ CCH ನ್ಯಾಯಾಲಯ ದರ್ಶನ್ ಇರೋ ಬ್ಯಾರಕ್ ನಲ್ಲಿ ಟಿವಿ ಅಳವಡಿಸುವಂತೆ ಕೋರ್ಟ್ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್ ಜಾರಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋರ್ಟ್ ಡಿಸೆಂಬರ್ 17 ರಂದು ಸಾಕ್ಷಿಗಳಿಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ರೇಣುಕಾಸ್ವಾಮಿ ತಂದೆ ಹಾಗು ತಾಯಿಗೆ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರಿನ 57ನೇ CCH ಕೋರ್ಟ್ ಈ ಒಂದು ಸಮನ್ಸ್ ಜಾರಿ ಮಾಡಿದ್ದು, ವಿಟ್ನೆಸ್ ನಂಬರ್ CW 7,8 ಆಗಿರುವ ತಂದೆ ತಾಯಿಗೆ ಸಮನ್ಸ್ ಜಾರಿಗೆ ಆದೇಶಸಿದೆ. ದರ್ಶನ್ ಬ್ಯಾರಾಕ್ ನಲ್ಲಿ ಟಿವಿ ಅಳವಡಿಕೆಗೂ ಕೋರ್ಟ್ ಸೂಚನೆ ನೀಡಿದೆ. ಯಾವ ಸಾಕ್ಷಿಗಳನ್ನು ಹಾಜರೂಪಡಿಸಬೇಕೆಂಬುದು ಪ್ರಾಜಿಕ್ಯೂಷನ್ ಆಯ್ಕೆ ದರ್ಶನ್ ಪರ ವಕೀಲರ ಆಕ್ಷೇಪ ತಿರಸ್ಕರಿಸಿ ಕೋರ್ಟ್ ಆದೇಶ ಹೊರಡಿಸಿದೆ.

Read More

ಕೊಪ್ಪಳ : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಮಧ್ಯ ಜಟಾಪಟಿ ನಡೆದಿತ್ತು. ಬಳಿಕ ಬ್ರೇಕ್ ಫಾಸ್ಟ್ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ.ಕೊಪ್ಪಳದಲ್ಲಿ ಮಾಧ್ಯಮಗಳು ಸಿದ್ದರಾಮಯ್ಯ ಸ್ಥಾನ ಭದ್ರ ಇದೆಯಾ ಎಂದು ಕೇಳಿದಕ್ಕೆ ಸಿಎಂ ಸಿದ್ದರಾಮಯ್ಯ ನೆಗೆದುಬಿದ್ದು ಹೋಗ್ತಿದಾರೆ. ಇನ್ನು ಬೇರೆ ಪದ ಹೇಳಬೆಕಾ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ನೆಗೆದುಬಿದ್ದು ಹೋಗ್ತಿದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋರ್ಟ್ ಡಿಸೆಂಬರ್ 17 ರಂದು ಸಾಕ್ಷಿಗಳಿಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ರೇಣುಕಾಸ್ವಾಮಿ ತಂದೆ ಹಾಗು ತಾಯಿಗೆ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರಿನ 57ನೇ CCH ಕೋರ್ಟ್ ಈ ಒಂದು ಸಮನ್ಸ್ ಜಾರಿ ಮಾಡಿದ್ದು, ವಿಟ್ನೆಸ್ ನಂಬರ್ CW 7,8 ಆಗಿರುವ ತಂದೆ ತಾಯಿಗೆ ಸಮನ್ಸ್ ಜಾರಿಗೆ ಆದೇಶಸಿದೆ. ದರ್ಶನ್ ಬ್ಯಾರಾಕ್ ನಲ್ಲಿ ಟಿವಿ ಅಳವಡಿಕೆಗೂ ಕೋರ್ಟ್ ಸೂಚನೆ ನೀಡಿದೆ. ಯಾವ ಸಾಕ್ಷಿಗಳನ್ನು ಹಾಜರೂಪಡಿಸಬೇಕೆಂಬುದು ಪ್ರಾಜಿಕ್ಯೂಷನ್ ಆಯ್ಕೆ ದರ್ಶನ್ ಪರ ವಕೀಲರ ಆಕ್ಷೇಪ ತಿರಸ್ಕರಿಸಿ ಕೋರ್ಟ್ ಆದೇಶ ಹೊರಡಿಸಿದೆ.

Read More

ಬೆಂಗಳೂರು : ನಟ ಶಾರುಖ್ ಖಾನ್ ಪುತ್ರ ನಿಂದ ಮತ್ತೊಂದು ವಿವಾದ ಆಗಿದ್ದು, ಪಬ್ನಲ್ಲಿ ಮಿಡಲ್ ಫಿಂಗರ್ ತೋರಿಸಿ ಶಾರುಖ್ ಖಾನ್ ಪುತ್ರ ಆರ್ಯಾನ್ ಖಾನ್ ಅಸಭೇ ಬರ್ತಾನೆ ತೋರಿರುವ ಘಟನೆ ವರದಿಯಾಗಿದೆ. ಬೆಂಗಳೂರಿನಲ್ಲಿ ಸಾರ್ವಜನಿಕವಾಗಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಈ ಒಂದು ದುರ್ವರ್ತನೆ ತೋರಿದ್ದು ಬೆಳಕಿಗೆ ಬಂದಿದೆ. ಕಳೆದ ನವೆಂಬರ್ 28 ರಂದು ನಡೆದಿದ್ದ ಘಟನೆ ಬೆಳಕಿಗೆ ಬಂದಿದೆ ಬೆಂಗಳೂರಿನಲ್ಲಿ ಸಾರ್ವಜನಿಕವಾಗಿ ದುರ್ವರ್ತನೆ ತೋರಿದ್ದು ನವೆಂಬರ್ 28ರ ಘಟನೆ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪಬ್ನಲ್ಲಿ ನಟ ಶಾರುಖ್ ಖಾನ್ ಪುತ್ರ ಆರ್ಯಾನ್ ಖಾನ್ ಬಂದಿದ್ದರು. ಈ ವೇಳೆ ಸಾರ್ವಜನಿಕವಾಗಿ ಅಸಭ್ಯವಾಗಿ ಮಧ್ಯದ ಬೆರಳು ತೋರಿಸಿ ದುರ್ವರ್ತನೆ ತೋರಿದ್ದಾರೆ. ಅವರ ಜೊತೆಗೆ ಸಚಿವರಾದ ಜಮೀರ್ ಅಹ್ಮದ್ ಖಾನ್ ಪುತ್ರ ಹಾಗೂ ಶಾಸಕ ಎನ್ ಎ ಹ್ಯಾರಿಸ್ ಪುತ್ರ ನಲಪಾಡ್ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ವಿನಯ್ ಗೌಡ ಸಹ…

Read More