Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಗ್ರಾಮ ಲೆಕ್ಕಿಗರಿಂದ (ವಿ.ಎ.) ಸಚಿವರವರೆಗೆ ಕಾಗದರಹಿತ ವ್ಯವಹಾರಕ್ಕಾಗಿ ಇ-ಕಚೇರಿ ಕಡ್ಡಾಯಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಹಳ ದಿನಗಳಿಂದ ವಿ.ಎ.ಗಳಿಗೆ ಸ್ವಂತ ಕಚೇರಿ ಇರಲಿಲ್ಲ. ಹೀಗಾಗಿ ಜನರಿಗೆ ವಿ.ಎ. ಸಿಗುತ್ತಿರಲಿಲ್ಲ. ಕಚೇರಿ ಇಲ್ಲದ ವಿ.ಎ.ಗಳಿಗೆ ಗ್ರಾಮ ಪಂಚಾಯತಿಯಲ್ಲೇ ಕೊಠಡಿ ಮಾಡಲು ತೀರ್ಮಾನಿಸಲಾಗಿದೆ. ಒಟ್ಟು 8,357 ವಿ.ಎ.ಗಳ ಪೈಕಿ 7,405 ವಿ.ಎ.ಗಳಿಗೆ ಕಚೇರಿ ಸೌಲಭ್ಯ ಮಾಡಿಕೊಟ್ಟಿದ್ದೇವೆ. ಇನ್ನೂ 952 ವಿ.ಎ.ಗಳಿಗೆ ಕಚೇರಿ ಆಗಬೇಕಿದ್ದು, ಪ್ರಕ್ರಿಯೆ ನಡೆಯುತ್ತಿದೆ ಎಂದರು. ಎಲ್ಲ ಗ್ರಾಮ ಲೆಕ್ಕಿಗರ ಕಚೇರಿಯಲ್ಲಿ ಇ-ಕಚೇರಿ ಅಳವಡಿಸಲು ತೀರ್ಮಾನಿಸಲಾಗಿದೆ. ನಾಲ್ಕು ತಿಂಗಳಲ್ಲಿ ಎಲ್ಲ ವಿ.ಎ.ಗಳಿಗೆ ಲ್ಯಾಪ್ಟಾಪ್ ಕೊಡುತ್ತೇವೆ. ಈಗಾಗಲೇ ಸುಮಾರು 4,000 ಲ್ಯಾಪ್ಟಾಪ್ಗಳನ್ನು ಕೊಟ್ಟಿದ್ದೇವೆ. ವಿ.ಎ.ಗಳಿಂದ ಹಿಡಿದು ಸಚಿವರವರೆಗೆ ಇ-ಕಚೇರಿ ಕಡ್ಡಾಯವಾಗಿ ಬಳಕೆ ಮಾಡಲು ತೀರ್ಮಾನಿಸಲಾಗಿದೆ. ಕಾಗದರಹಿತ ವಹಿವಾಟಿಗಾಗಿ ಒಂದು ತಿಂಗಳಲ್ಲಿ ಕಡ್ಡಾಯವಾಗಿ ಇ-ಕಚೇರಿ ಅಳವಡಿಕೆಗೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಮಂಡ್ಯ :- ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ಒಕ್ಕೂಟಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮಂಡ್ಯ ಜಿಲ್ಲೆಯ ಸಾರಿಗೆ ಬಸ್ಗಳ ಸಂಚಾರ ಬಹುತೇಕ ಸಂಪೂರ್ಣ ಸ್ತಬ್ಧ ಸ್ತಬ್ಧಗೊಂಡಿದೆ. ಮಂಡ್ಯ ಜಿಲ್ಲೆಯ 7 ಘಟಕಗಳ ಚಾಲಕರು ಮತ್ತು ನಿರ್ವಾಹಕರು ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ಗೈರು ಹಾಜರಾಗಿರುವ ಪರಿಣಾಮ ಬೆಳಿಗ್ಗೆ 6 ಗಂಟೆಯಿಂದಲೇ ಬಸ್ ಸಂಚಾರ ಸ್ಥಗಿತಗೊಂಡಿದ ಹಿನ್ನೆಲೆಯಲ್ಲಿ ಪ್ರಯಾಣಿಕರು ತೊಂದರೆಗೀಡಾದರು. ಇದರಿಂದಾಗಿ ಸಾರ್ವಜನಿಕರ ಪ್ರಯಾಣಕ್ಕೆ ತೀವ್ರ ತೊಂದರೆ ಉಂಟಾಗಿದ್ದು, ಸಾರಿಗೆ ಬಸ್ಗಳನ್ನೇ ಅವಲಂಬಿಸಿರುವ ಜನರು ಕೆಲಸ ಕಾರ್ಯಗಳಿಗೆ ಹಾಗೂ ಶಾಲಾ, ಕಾಲೇಜುಗಳಿಗೆ ಹೋಗಲು ಪರದಾಡುವಂತಾಗಿದೆ. ಅನಿರ್ದಿಷ್ಟಾವಧಿ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸಾರಿಗೆ ಅಧಿಕಾರಿಗಳು ಮದ್ದೂರು ಘಟಕದ ವತಿಯಿಂದ 5 ಮಂದಿ ಖಾಸಗಿ ಚಾಲಕರನ್ನು ನೇಮಕ ಮಾಡಿಕೊಂಡು ಬಸ್ ಚಾಲನೆಗೆ ಮುಂದಾಗಿದ್ದರು. ಆದರೆ, ನಿರ್ವಾಹಕರು ಗೈರು ಹಾಜರಾಗಿರುವ ಕಾರಣ ಟಿಕೇಟ್ ವಿತರಣೆ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಖಾಸಗಿ ಚಾಲಕರು…
BREAKING : ಚಿಕ್ಕಮಗಳೂರು ಜಿಲ್ಲೆಯಲ್ಲಿ ಭೀಕರವಾದ ಅಪಘಾತ ಸಂಭಾವಿಸಿದ್ದು, ಕೆಎಸ್ಆರ್ಟಿಸಿ ಬಸ್ ಹಾಜಿಜ್ ಕ್ಯಾಂಟರ್ ಮುಖಾಮುಖಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ಶಿವಪುರ ಗೇಟ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಶಿವಪುರನಲ್ಲಿ ನಿದ್ದೆಯ ಮಂಪರಿನಲ್ಲಿ ಕ್ಯಾಂಟರ್ ಚಾಲಕ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ. ಕ್ಯಾಟರ್ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಹುಬ್ಬಳ್ಳಿಯಿಂದ ಕ್ಯಾಂಟರ್ ವಾಹನ ಮೈಸೂರಿಗೆ ತಿರುಳುತ್ತಿತ್ತು ಕಡೂರಿನಿಂದ ಕೆಎಸ್ಆರ್ಟಿಸಿ ಬಸ್ ಹೂವಿನಹಡಗಲಿಗೆ ತೆರಳುತ್ತಿತ್ತು. ಮೃತಪಟ್ಟ ಇಬ್ಬರನ್ನು ಹುಬ್ಬಳ್ಳಿ ಮೂಲದ ಚಾಲಕ ಕ್ಲೀನರ್ ಎಂದು ತಿಳಿದುಬಂದಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಅಪಘಾತ ಕುರಿತು ಪ್ರಕರಣ ದಾಖಲಾಗಿದೆ.
ಕೊಪ್ಪಳ / ತುಮಕೂರು : ಇಂದು ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ಹಮ್ಮಿಕೊಂಡಿದ್ದು, ಇದರಿಂದ ಇಡೀ ರಾಜ್ಯದ ಜನತೆಗೆ ದೊಡ್ ಹೊಡೆತ ಬಿದ್ದಿದೆ. ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಪರದಾಟ ನಡೆಸುತ್ತಿದ್ದರು. ಇದೀಗ ತುಮಕೂರು ಮತ್ತು ಕೊಪ್ಪಳ ವಿಶ್ವವಿದ್ಯಾಲಯ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಹೌದು ಸಾರಿಗೆ ಮುಷ್ಕರ ಹಿನ್ನೆಲೆಯಲ್ಲಿ ತುಮಕೂರು ವಿಶ್ವವಿದ್ಯಾಲಯ ಪರೀಕ್ಷೆಯನ್ನು ಮುಂದೂಡಲಾಗಿದೆ. ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ವಿಶ್ವವಿದ್ಯಾಲಯ ಮುಂದೂಡಿದೆ. ಸ್ನಾತಕ ಪೂರ್ವ ಹಾಗೂ ಸ್ನಾತಕೋತ್ತರ ಪರೀಕ್ಷೆಯನ್ನು ವಿಶ್ವವಿದ್ಯಾಲಯ ಮುಂದೂಡಿದೆ. ಅದೇ ರೀತಿಯಾಗಿ ಕೊಪ್ಪಳ ವಿಶ್ವವಿದ್ಯಾಲಯ ಕೂಡ ಸ್ನಾತ್ತಕೋತ್ತರ ಪರೀಕ್ಷೆ ಮುಂದೂಡಿದೆ. ಈ ಕುರಿತು ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿ ಬಿಕೆ ರವಿ ಮಾಹಿತಿ ನೀಡಿದ್ದು ಪರೀಕ್ಷೆ ಮುಂದುವಂತೆ ವಿದ್ಯಾರ್ಥಿಗಳು ಒತ್ತಾಯ ಮಾಡಿದ್ದರು. ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಪರೀಕ್ಷೆ ನೋಡಲಾಗಿದೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ತಳಕಲ್ ನಲ್ಲಿ ಇರುವ ವಿಶ್ವವಿದ್ಯಾಲಯದಲ್ಲಿ ಸ್ನಾತ್ತಕೋತ್ತರ ಪರೀಕ್ಷೆ ಮುಂದೂಡಿದ್ದು, ಪರೀಕ್ಷಾ ದಿನಾಂಕ ಶೀಘ್ರ ತಿಳಿಸುವುದಾಗಿ…
ಕೋಲಾರ : ವೇತನ ಹೆಚ್ಚಳ ಸೇರದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಅಗ್ರಹಿಸಿ, ಇಂದು ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಸ್ ಗಳು ಇದುವರೆಗೂ ರಸ್ತೆಗೆ ಇಳಿದಿಲ್ಲ. ಆದರೆ ಕೆಲವು ಭಾಗಗಳಲ್ಲಿ ಮಾತ್ರ ಕೆಲವು ಸಿಬ್ಬಂದಿಗಳು ಮುಷ್ಕರದಲ್ಲಿ ಪಾಲ್ಗೊಳ್ಳದೆ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಇದೀಗ ಕೋಲಾರದಲ್ಲಿ ಕೆಎಸ್ಆರ್ಟಿಸಿ ಬಸ್ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿರುವ ಘಟನೆ ವರದಿಯಾಗಿದೆ ಹೌದು ಕೋಲಾರದಲ್ಲಿ ಕೆಎಸ್ಆರ್ಟಿಸಿ ಬಸ್ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಕೋಲಾರ ನಗರದ ಬಸ್ ನಿಲ್ದಾಣದಲ್ಲಿ ಈ ಒಂದು ಘಟನೆ ನಡೆದಿದೆ. ಮುಂಜಾನೆಯಿಂದ ಕೋಲಾರದಲ್ಲಿ ಬಸ್ ನಿಲ್ದಾಣ ಸಂಪೂರ್ಣವಾಗಿ ಸ್ತಬ್ಧವಾಗಿತ್ತು. ಈಗ ಒಂದೆರಡು ಬಸ್ ಗಳನ್ನು ನಿಲ್ದಾಣಕ್ಕೆ ಅಧಿಕಾರಿಗಳು ಕಳುಹಿಸಿದ್ದಾರೆ. ಬಸ್ ನಿಲ್ದಾಣಕ್ಕೆ ಬರುತ್ತಿದ್ದಂತೆ ಕಿಡಿಗೇಡಿಗಳು ಕಲ್ಲುತೂರಾಟ ಮಾಡಿದ್ದಾರೆ. ಕೋಲಾರದಲ್ಲಿ ಕೆಎಸ್ಆರ್ಟಿಸಿ ಬಸ್ಸಿನ ಕಿಟಕಿ ಗಾಜು ಪುಡಿಪುಡಿ ಆಗಿವೆ.
ಬೆಂಗಳೂರು : ಸ್ಯಾಂಡಲ್ ವುಡ್ ನಟ ಸಂತೋಷ್ ಬಾಲರಾಜ್ (34) ನಿಧನರಾಗಿದ್ದಾರೆ. ಅನಾರೋಗ್ಯದಿಂದ ನಟ ಸಂತೋಷ್ ಬಾಲರಾಜ್ ಬಳಲುತ್ತಿದ್ದರು ಇದೀಗ ಅವರು ಇಂದು ನಿಧನರಾಗಿದ್ದಾರೆ.ನಟ ಸಂತೋಷ್ ಬಾಲರಾಜ್ ಜಾಂಡಿಸ್ ನಿಂದ ಬಳಲುತ್ತಿದ್ದರು. ಇತ್ತೀಚಿಗೆ ಚಿಕಿತ್ಸೆಗಾಗಿ ಬೆಂಗಳೂರಿನ ಬನಶಂಕರಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಸಂತೋಷ್ ಬಾಲರಾಜ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಕಿರಿಯ ವಯಸ್ಸಿಗೆ ಜಾಂಡೀಸ್ನಿಂದ ನಟ ಸಂತೋಷ್ ಬಾಲರಾಜ್ ಬಳಲುತ್ತಿದ್ದರು. ಹೀಗಾಗಿ 34 ವಯಸ್ಸಿನ ನಟ ಸಂತೋಷ್ ಬಾಲರಾಜ್ ಕುಮಾರಸ್ವಾಮಿ ಲೇಔಟ್ನ ಸಾಗರ್ ಅಫೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ, ಜಾಂಡೀಸ್ನಿಂದಾಗಿ ನಟ ಸಂತೋಷ್ ಕೋಮಗೆ ಹೋಗಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಂತೋಷ್ ಬಾಲ್ರಾಜ್ ಸಾವನಪ್ಪಿದ್ದಾರೆ. 2 ದಿನಗಳ ಹಿಂದೆ ಸಂತೋಷ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.ಸಂತೋಷ್ ಬೇಗ ಚೇತರಿಸಿಕೊಳ್ಳಲಿ ಅಂತ ಆಪ್ತರು, ಕುಟುಂಬ ವರ್ಗ ಪ್ರಾರ್ಥಿಸುತ್ತಿತ್ತು. ಇನ್ನೂ, ಸಂತೋಷ್ ಬಾಲ್ರಾಜ್ ಅವರು ಅಮ್ಮನ ಜೊತೆಗೆ ವಾಸವಾಗಿದ್ದರು. ನಟನ ಅಪ್ಪ ಅನೇಕಲ್ ಬಾಲರಾಜ್ ದರ್ಶನ್ಗೆ ಕರಿಯ ಸಿನಿಮಾ ಮಾಡಿದ್ದರು. ಕರಿಯ-2…
ತುಮಕೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಇಂದು ಬಸ್ ಗಳು ರಸ್ತೆಗೆ ಇಳಿಯುತ್ತಿಲ್ಲ. ಹಾಗಾಗಿ ಪ್ರಯಾಣಿಕರು ತೀವ್ರ ಪರದಾಟ ನಡೆಸಿದ್ದಾರೆ. ಈ ಹಿನ್ನೆಲೆ ಇದೀಗ ತುಮಕೂರಿಂದ ಬೆಂಗಳೂರಿಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಇಂದು ಬೆಳಿಗ್ಗೆ 9.20 ರಲ್ಲಿ ತುಮಕೂರಿನಿಂದ ಬೆಂಗಳೂರಿಗೆ ಹೊರಟಿರುವ ರೈಲು, ಬಳಿಕ ಬೆಳಿಗ್ಗೆ 11.20 ಗಂಟೆಗೆ KRS ನಿಂದ ಮತ್ತೆ ತುಮಕೂರಿಗೆ ರೈಲು ಹೋರಡಲಿದೆ. ಸಾರಿಗೆ ಮುಷ್ಕರ ಮುಗಿಯುವವರೆಗೆ ಮಾತ್ರ ವಿಶೇಷ ರೈಲಿನ ವ್ಯವಸ್ಥೆ ಕಲ್ಪಿಸಲಾಗಿದೆ.
ಚಿತ್ರದುರ್ಗ : ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದು ಹಿನ್ನಲೆಯಲ್ಲಿ ರಾಜ್ಯದ ಜನರು ಬಸ್ ಗಳಿಲ್ಲದೆ ತೀವ್ರ ಪರದಾಟ ನಡೆಸುತ್ತಿದ್ದಾರೆ ಇದೀಗ ಚಿತ್ರದುರ್ಗದಲ್ಲಿ ಬಾಣಂತಿಯೊಬ್ಬರು ಬಸ್ ಇಲ್ಲದೆ ಪರದಾಟ ನಡೆಸಿದ್ದಾರೆ. ಹೌದು ಚಿತ್ರದುರ್ಗದಲ್ಲಿ ಸಾರಿಗೆ ಬಸ್ ಇಲ್ಲದೆ ಬಾಣಂತಿ ಒಬ್ಬರು ಪರದಾಟ ನಡೆಸಿದ್ದಾರೆ ಹೆರಿಗೆ ಬಳಿಕ ಮೊದಲ ಸಲ ಬಾಣತಿ ಪತಿ ಊರಿಗೆ ತೆರಳುತ್ತಿದ್ದರು. ಮಗು ಮತ್ತು ಅತ್ತೆಯ ಜೊತೆಗೆ ಬಾಣತಿ ಪತಿ ಊರಿಗೆ ಹೊರಟಿದ್ದರು. ಆದರೆ ಬಸ್ ಗಳಿಲ್ಲದೆ ಇದೀಗ ಬಾಣಂತಿ ಪರದಾಡಿದ್ದಾರೆ. ಜಗಳೂರು ಹತ್ರ ಹೊಸದುರ್ಗ ಊರಿಗೆ ನಾವು ಹೋಗಬೇಕಿತ್ತು, ಆದರೆ ಬಸ್ ಇಲ್ಲ ಮೊದಲ ಬಾರಿ ಹೆರಿಗೆಯಾದ ಬಳಿಕ ಪತಿಯ ಮನೆಗೆ ಹೊರಟಿದ್ದೆ. ನಮ್ಮ ಅತ್ತೆಯ ಜೊತೆ ಪತಿಯ ಮನೆಗೆ ಹೊರಟಿದ್ದೆ ಇದೀಗ ಖಾಸಗಿ ವಾಹನಗಳನ್ನು ನೋಡಿಕೊಳ್ಳಬೇಕು. ಸರ್ಕಾರಿ ಬಸ್ ಇಲ್ದೆ ಇದ್ರೆ ಖಾಸಗಿ ವಾಹನಗಳಿಗೆ ದುಡ್ಡು ಕೊಡಲೇಬೇಕು ಎಂದು ಬಾಣಂತಿ ತಿಳಿಸಿದರು.
ಆಂಧ್ರಪ್ರದೇಶ : ಗಂಡನ ಮನೆಯವರ ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ಸಲ ನನಗೆ ರಾಖಿ ಕಟ್ಟೋಕೆ ಆಗಲ್ಲ, ಕ್ಷಮಿಸಿಬಿಡು ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯಲ್ಲಿ ನಡೆದಿದೆ. 24 ವರ್ಷದ ಶ್ರೀವಿದ್ಯಾ ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಕಾಲೇಜು ಉಪನ್ಯಾಸಕಿಯಾಗಿದ್ದರು. ಆರು ತಿಂಗಳ ಹಿಂದಷ್ಟೇ ರಾಂಬಾಬು ಎಂಬುವವರನ್ನು ಮದುವೆಯಾಗಿದ್ದರು. ಮದುವೆಯಾಗಿ ತಿಂಗಳಿನಿಂದಲೇ ಗಂಡನ ಮನೆಯವರಿಂದ ಕಿರುಕುಳ ಶುರುವಾಗಿತ್ತು ಎಂದು ಶ್ರೀವಿದ್ಯಾ ಪತ್ರದಲ್ಲಿ ಬರೆದಿದ್ದಾರೆ. ರಾಂಬಾಬು ಕುಡಿದು ಮನೆಗೆ ಬರುತ್ತಿದ್ದ. ದೈಹಿಕ ಹಿಂಸೆ ನೀಡುತ್ತಿದ್ದ, ಮಾತಿನಲ್ಲಿ ನಿಂದಿಸುತ್ತಿದ್ದ. ತನ್ನನ್ನು ಅಪಹಾಸ್ಯ ಮಾಡುತ್ತಿದ್ದ. ಬೇರೆ ಮಹಿಳೆಯರ ಮುಂದೆ ತನ್ನನ್ನು ನಿಷ್ಪ್ರಯೋಜಕ ಎಂದು ಕರೆಯುತ್ತಿದ್ದ ಎಂದು ಆಕೆ ಬರೆದಿದ್ದಾರೆ. ನಿರಂತರ ಕಿರುಕುಳದಿಂದ ಬೇಸತ್ತು ಮಹಿಳೆ ಈ ತಪ್ಪು ಹೆಜ್ಜೆ ಇಡಬೇಕಾಯಿತು.
ಕೊಪ್ಪಳ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದಿನಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಅನಿರ್ದಿಷ್ಟವಧಿ ಮುಷ್ಕರ ಆರಂಭಿಸಿದ್ದಾರೆ. ಮತ್ತೊಂದೆಡೆ ಕೆಎಸ್ಆರ್ಟಿಸಿ ಬಸ್ಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವುದು ಕುಕನೂರ ತಾಲೂಕಿನ ಮಸಬಹಂಚಿನಾಳದಲ್ಲಿ ನಡೆದಿದೆ. ಬಸ್ ತಡರಾತ್ರಿ ಯಲಬುರ್ಗಾದಿಂದ ಬೆಂಗಳೂರಿಗೆ ಹೊರಟಿತ್ತು. ಬಸ್ ಮಸಬಹಂಚಿನಾಳ ಬಳಿ ತಲುಪಿದ್ದಾಗ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಬಸ್ನ ಗಾಜು ಪುಡಿಪುಡಿಯಾಗಿದೆ. ಕಲ್ಲು ತೂರಾಟದ ಬಳಿಕ ಬಸ್ನ್ನು ಚಾಲಕ ವಾಪಸ್ ಡಿಪೋಗೆ ಕೊಂಡೊಯ್ದಿದ್ದಾರೆ. ಇದರಿಂದ ಪ್ರಯಾಣಿಕರು ರಾತ್ರಿ ವೇಳೆ ಪರದಾಡುವಂತಾಯಿತು. ಇನ್ನು ಬಸ್ ಸಂಚಾರ ಸ್ಥಗಿತವಾದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜನರು ಊರಿಗೆ ತೆರಳಲು ಪರದಾಡಿದರು.