Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ (85) ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ. ಗಣಪತಿ ಮೂಲತಃ ಕೊಡಗಿನವರು. ತಮ್ಮದೇ ಅಂಕಣದ ಮೂಲಕ ಗಮನ ಸೆಳೆದಿದ್ದ ಗಣಪತಿ ಅವರು ಸದಾ ಸುದ್ದಿ ಮನೆಯಲ್ಲಿ ಕ್ರೀಯಾಶೀವಾಗಿದ್ದವರು. ಕೆಯುಡಬ್ಲ್ಯೂಜೆ ಸಂತಾಪ: ಹಿರಿಯ ಪತ್ರಕರ್ತರಾದ ಕೆ.ಬಿ.ಗಣಪತಿ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ತೀವ್ರ ಸಂತಾಪ ವ್ಯಕ್ತಪಡಿಸಿದೆ. ಘನತೆಯಿಂದ ಪತ್ರಿಕೋದ್ಯಮ ನಡೆಸಿದ ಗಣಪತಿ ಅವರ ನಿಧನದಿಂದ ಸುದ್ದಿಮನೆಯ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶೋಕಿಸಿದ್ದಾರೆ. ಗಣಪತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ಮೈಸೂರು : ಮೈಸೂರಿನಲ್ಲಿ ಹಿರಿಯ ಪತ್ರಕರ್ತ ಕೆ ವಿ ಗಣಪತಿ ನಿಧನರಾಗಿದ್ದಾರೆ. ಮೈಸೂರು ಮಿತ್ರ ಸ್ಟಾರ್ ಆಫ್ ಮೈಸೂರು ಪತ್ರಿಕೆ ಸಂಸ್ಥಾಪಕರಾಗಿದ್ದ ಗಣಪತಿಯವರು ಇಂದು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಾವನ್ನಪ್ಪಿದ್ದಾರೆ. ಚಿಕಿತ್ಸೆಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಕೆಬಿ ಗಣಪತಿ ಕೊನೆಯುಸಿರೆಳಿದಿದ್ದಾರೆ. ಕೆಬಿ ಗಣಪತಿ ಅವರು ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕ ಮತ್ತು ಸಂಪಾದಾಖರಾಗಿದ್ದರು. ಅವರು ಪತ್ರಿಕೋದ್ಯಮದಲ್ಲಿ ಐದು ದಶಕಗಳಿಗಿಂತಲೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ, ಅಲ್ಲದೇ ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಸಹ ಪಡೆದಿದ್ದಾರೆ.
ಕಲಬುರ್ಗಿ : ಕಳೆದ ಎರಡು ದಿನಗಳ ಹಿಂದೆ ಕಲಬುರ್ಗಿ ನಗರದ ಸರಾಫ್ ಬಜಾರ್ ನಲ್ಲಿ ಜುವೆಲ್ಲರೀ ಮಾಲೀಕನಿಗೆ ಗನ್ ತೋರಿಸಿ ಸುಮಾರು 82ಕ್ಕೂ ಅಧಿಕ ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರಿಗೆ ದರೋಡೆಕೋರರ ಸುಳಿವು ಸಿಕ್ಕಿದೆ ಎಂದು ಮಾಹಿತಿ ಲಭ್ಯವಾಗಿದೆ. ಹೌದು ಕಲ್ಬುರ್ಗಿಯಲ್ಲಿ ಹಾಡಹಗಲೇ ಚಿನ್ನದ ಅಂಗಡಿಗೆ ನುಗ್ಗಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದರೋಡೆಕೋರರ ಬಗ್ಗೆ ಪೊಲೀಸರು ಮಹತ್ವದ ಸುಳಿವು ಪತ್ತೆಹಚ್ಚಿದ್ದಾರೆ. ಪಶ್ಚಿಮ ಬಂಗಾಳದಿಂದ ಆಗಮಿಸಿ ಆರೋಪಿಗಳು ದರೋಡೆ ಮಾಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ದರೋಡೆಕೋರರ ಜಾಡು ಹಿಡಿದು ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾರೆ. ಕಲ್ಬುರ್ಗಿಯಿಂದ ಹೈದರಾಬಾದ್ ಗೆ ತೆರಳಿ ಅಲ್ಲಿಂದ ಪಶ್ಚಿಮ ಬಂಗಾಳಕ್ಕೆ ಕಲ್ಬುರ್ಗಿ ಪೊಲೀಸರು ತೆರಳಿದ್ದಾರೆ. ಆರೋಪಿಗಳು ಹೈದರಾಬಾದ್ ನಿಂದ ಪಶ್ಚಿಮ ಬಂಗಾಳಕ್ಕೆ ಸೇರಿರುವ ಶಂಕೆ ವ್ಯಕ್ತವಾಗಿದೆ. ಕಲ್ಬುರ್ಗಿ ಬಸ್ ನಿಲ್ದಾಣದ ಫ್ಲ್ಯಾಟ್ ಫಾರ್ಮ್ ನಂಬರ್ 6 ರಿಂದ ಆರೋಪಿಗಳು ಹೈದರಾಬಾದ್ ಗೆ ಪ್ರಯಾಣ ಬೆಳೆಸಿದ್ದಾರೆ. ನಂಬರ್ 6 ರಲ್ಲಿ…
ಮೈಸೂರು : ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವು ಮುಂದುವರೆದಿದ್ದು, ಇದೀಗ ಮೈಸೂರಿನಲ್ಲಿ ಬಸ್ ನಲ್ಲಿ ಚಲಿಸುತ್ತಿರುವಾಗಲೇ ಸರ್ಕಾರಿ ನೌಕರರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ಮಾರ್ಗ ಮಧ್ಯೆಯೇ ಹೃದಯಘಾತದಿಂದ ಸಾವನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನಲ್ಲಿ ಸರ್ಕಾರಿ ನೌಕರರೊಬ್ಬರು ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸರ್ಕಾರಿ ನೌಕರ ಅರುಣ್ ಎನ್ನುವವರಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕರೆದೋಯ್ಯುವಾಗ ಮಾರ್ಗಮಧ್ಯೆ ಅರುಣ್ (44) ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕು ಕಚೇರಿಯಲ್ಲಿ ಅರುಣ್ SDA ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತ ಅರುಣ್ ಮೂಲತಃ ಮಂಡ್ಯ ಜಿಲ್ಲೆಯ ಕಿಲಾರಿ ಗ್ರಾಮದ ನಿವಾಸಿಯಾಗಿದ್ದಾರೆ.
ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ಅಪ್ರಾಪ್ತೇ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇಲೆ ಉದ್ಯಮಿಯೋರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ಬಾಲಕಿಯ ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೋಯ್ದು ಈ ಕೃತ್ಯ ಎಸಗಲಾಗಿದೆ. ಸದ್ಯ ಸಂತ್ರಸ್ತೆಯ ತಾಯಿಯ ದೂರು ಆಧರಿಸಿ ಇದೀಗ ಆರೋಪಿ ವಿಡಿಯೋ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಳೆದ ಎರಡು ತಿಂಗಳಿಂದ ಬಾಲಕಿಯನ್ನು ಶಾಲೆಗೆ ಉದ್ಯಮಿ ತನ್ನ ಕಾರಿನಲ್ಲಿ ಕರೆದೊಯ್ಯುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿದೆ. ಬಾಲಕಿಯನ್ನು ಉದ್ಯಮಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ.ಈ ವೇಳೆ ಆಕೆಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಂಡಿರುವ ಮುಲ್ಕಿ ಪೊಲೀಸರು ತನಿಖೆ ನಡೆಸಿ 68 ವರ್ಷದ ಉದ್ಯಮಿಯನ್ನು ಇದೀಗ ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ವೇಳೆ ಅಧಿಕ ರಕ್ತದ ತೊಡಕ್ಕೆ ಒಳಗಾಗಿ…
ಮಂಡ್ಯ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು ಚಾಕಲೇಟ್ ಆಸೆ ತೋರಿಸಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘೋರ ಘಟನೆ, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಉತ್ತರ ಪ್ರದೇಶದ ಮೂಲದ ಓರ್ವ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಉತ್ತರ ಪ್ರದೇಶ ಮೂಲದ ಪ್ರವೀಣ್ (21) ಎನ್ನುವ ಆರೋಪಿಯನ್ನು ಪೋಲಿಸಿರುವ ಅರೆಸ್ಟ್ ಮಾಡಿದ್ದು, ಸಂತ್ರಸ್ತ ಬಾಲಕಿಯ ಕುಟುಂಬ ಪ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಅದೇ ಫ್ಯಾಕ್ಟರಿಯಲ್ಲಿ ಆರೋಪಿ ಪ್ರವೀಣ್ ಕೂಡ ಕೆಲಸ ಮಾಡುತ್ತಿದ್ದ. ಇದೀಗ ಆರೋಪಿ ಪ್ರವೀಣನ್ನು ಬಂಧಿಸಿದ ಪೊಲೀಸರು ಆರೋಪಿ ವಿರುದ್ಧ BNS 65(2), 4, 5 (i) 5 (m), 6 ಹಾಗೂ ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಯಚೂರು : ರಾಯಚೂರಿನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಮಂತ್ರಾಲಯಕ್ಕೆ ಭೇಟಿ ನೀಡಿದ್ದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದಾಗ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವಕರನ್ನು ಹಾಸನ ಗೆಳೆಯ ಅರಸೀಕೆರೆ ತಾಲೂಕಿನ ಜಾಗವಲ್ ಗ್ರಾಮದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ್ (19) ಎಂದು ಗುರುತಿಸಲಾಗಿದೆ. ನಿನ್ನೆ ಸ್ನೇಹಿತರ ತಂಡ ಮಂತ್ರಾಲಯಕ್ಕೆ ಬಂದಿದ್ದರು ಇವರೆಲ್ಲರೂ ಡಿಗ್ರಿ ಓದುತ್ತಿದ್ದರು ತುಂಗಭದ್ರಾ ನದಿಯ ಬಳಿ ಐವರು ಸ್ಥಾನ ಮಾಡುವ ವೇಳೆ ಈ ಒಂದು ಅವಘಡ ಸಂಭವಿಸಿದೆ. ನೀರಿನ ರಭಸಕ್ಕೆ ಮೂವರು ವಿದ್ಯಾರ್ಥಿಗಳು ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ. ನದಿಗೆ ಹೆಚ್ಚಿನ ನೀರು ಹರಿಬಿಟ್ಟಿರುವುದ್ದರಿಂದ, ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ನದಿಯಲ್ಲಿ ನೀರಿನ ರಭಸ ಕಂಡು ಬೇಡವೆಂದು ಹೇಳಿದರೂ ಈಜಲು ಹೋಗಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ…
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರುವ ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೌದು ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ ಸಾಕ್ಷಿ ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರ ಹೆಚ್ಚಿನ ಮಾಹಿತಿಯಿರುವ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳಿರುವ ವೀಡಿಯೋವನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿ ಉದ್ದೇಶ ಪೂರ್ವಕವಾಗಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಹಿನ್ನಲೆಯಲ್ಲಿ, ಸಮೀರ್ ಎಂಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ BNS ಸೆಕ್ಷನ್ 192, 240, 353(1)(b) ಅಡಿ ಪ್ರಕರಣ ದಾಖಲಿಸಿರುವುದಾಗಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.
BREAKING : ರಾಜ್ಯದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ತಡೆಗೋಡೆಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರ ದುರ್ಮರಣ!
ಬೆಂಗಳೂರು : ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇ ನಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ತಡೆಗೋಡೆಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಈ ಒಂದು ಘಟನೆ ನಡೆದಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಉಸಿರು ಚೆಲ್ಲಿದರೆ ಓರ್ವನ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಆಸ್ಪತ್ರೆ ಗಾಯಾಳುವನ್ನು ರವಾನಿಸಲಾಗಿದೆ. ಮೈಸೂರು ನಿಂದ ಕಾರು ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿದ್ದರೆ ಓರ್ವನ ಸ್ಥಿತಿ ಗಂಭೀರವಾಗಿದೆ.ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಹೈದ್ರಾಬಾದ್ : ತೆಲುಗು ಹಿರಿಯ ನಟ ಕೋಟ ಶ್ರೀನಿವಾಸರಾವ್ (83) ಇಂದು ವಿಧಿವಶರಾಗಿದ್ದಾರೆ. ಹೈದರಾಬಾದ್ ನ ತಮ್ಮ ನಿವಾಸದಲ್ಲಿ ಕೋಟ ಶ್ರೀನಿವಾಸರಾವ್ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಕೋಟಾ ಶ್ರೀನಿವಾಸರಾವ್ ಬಳಲುತ್ತಿದ್ದರು ಎನ್ನಲಾಗಿದೆ. ಸುಮಾರು 750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೋಟಾ ಶ್ರೀನಿವಾಸರಾವ್ ನಟಿಸಿದ್ದರು. ಕೋಟ ಶ್ರೀನಿವಾಸ್ ರಾವ್ ಅವರ ಕೊನೆಯ ಚಿತ್ರ ಸುವರ್ಣ ಸುಂದರಿಯಾಗಿದ್ದು, ತೆಲುಗು ತಮಿಳು ಹಿಂದಿ ಕನ್ನಡ ಮಲಯಾಳಂ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ, ನಮ್ಮ ಬಸವ, ರಕ್ತ ಕಣ್ಣೀರು ಸೇರಿ ಹಲವು ಕನ್ನಡ ಚಿತ್ರಗಳಲ್ಲಿ ನಟನೆ ಮಾಡಿದ್ದರು. ಅವರಿಗೆ ಪದ್ಮಶ್ರೀ ನಂದಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಲಭಿಸಿದೆ ಅಲ್ಲದೆ ಒಮ್ಮೆ ಶಾಸಕರಿಗೆ ಕೂಡ ಸೇವೆ ಸಲ್ಲಿಸಿದ್ದಾರೆ.













