Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಗ್ರಾಮ ಆಡಳಿತಾಧಿಕಾರಿ NVS ಕಿರಣ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ರಾಯನಕಲ್ಲು ಗ್ರಾಮ ಆಡಳಿತ ಅಧಿಕಾರಿ ಆಗಿರುವ ಕಿರಣ್ ಕುಮಾರ್, ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚನಹಳ್ಳಿ ತಾಲೂಕಿನ ರಾಯನ ಕಲ್ಲು ಗ್ರಾಮದಲ್ಲಿ ಫೋನ್ ಪೇ ಮೂಲಕ ಕಿರಣ್ ಕುಮಾರ್ ಲಂಚ ಪಡೆದಿದ್ದ. ಕಿರಣ್ ಕುಮಾರ್ ಚಿಕ್ಕಬಳ್ಳಾಪುರ ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ. 28 ಗುಂಟೆ ಜಮೀನು ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಖರೀದಿಸಿದ ಜಮೀನು ಖಾತೆ ಮಾಡಿಕೊಡಲು 10,000 ಲಂಚಕ್ಕೆ ಕಿರಣ್ ಕುಮಾರ್ ಬೇಡಿಕೆ ಇಟ್ಟಿದ್ದ. 8,000 ಫೋನ್ ಪೇ ಮೂಲಕ ಪಡೆದಿದ್ದ ಪುನೀತ್ ಕಡಿವಾಳ ಎಂಬುವವರಿಂದ ಕಿರಣ್ ಕುಮಾರ್ ಲಂಚ ಪಡೆದಿದ್ದ.
ಬೆಂಗಳೂರು : ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಭ್ರಷ್ಟಾಚಾರವನ್ನು ತಡೆಯುವುದು ಸರ್ಕಾರದ ಆಶಯ. ವರ್ಗಾವಣೆ ಏಜೆಂಟ್ಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರಿ ನೌಕರರು ಇದಕ್ಕೆ ಬಲಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶನಿವಾರ ಆಯೋಜಿಸಲಾಗಿದ್ದ ಅಭಯ ಹಸ್ತ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ವೃಂದಗಳ ನೇಮಕಾತಿ ಆದೇಶಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಇಂದು 1,000 ಜನರು ನೇಮಕಾತಿ ಆದೇಶಗಳನ್ನು ಪಡೆದು ಆರೋಗ್ಯ ಇಲಾಖೆಗೆ ಸೇರ್ಪಡೆಯಾಗಿರುವುದು ಸಂತೋಷದ ವಿಷಯ. ಇದು ಕೇವಲ ವೃತ್ತಿಯಲ್ಲ, ಜೀವ ಉಳಿಸುವ ಹಾಗೂ ರೋಗ ತಡೆಯುವ ಸಾರ್ಥಕ ಕಾರ್ಯ. https://twitter.com/siddaramaiah/status/2025114299912618186?t=LQqEjTo-Bz8tFRNogWsTig&s=19 ನಮ್ಮ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದ ನಂತರ ನೇಮಕಾತಿಯಲ್ಲಿದ್ದ ಹಲವು ಸಮಸ್ಯೆಗಳನ್ನು ಬಗೆಹರಿಸಿ, ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುತ್ತಿದೆ. ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಶಿಕ್ಷಣ, ಆರೋಗ್ಯ, ಪೊಲೀಸ್ ವ್ಯವಸ್ಥೆ ಅತಿ ಮಹತ್ವದ್ದಾಗಿದ್ದು, ಇಲ್ಲಿ…
ಗದಗ : 5 ಲಕ್ಷ ರೂಪಾಯಿ ಕಮಿಷನ್ ಪಡೆಯುವಾಗ ಬಿಜೆಪಿ ಶಾಸಕ ಚಂದ್ರುಲ ಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಶಾಸಕ ಸೇರಿದಂತೆ ಮೂವರು ಲೋಕಾಯುಕ್ತ ವಶಕ್ಕೆ ಪಡೆದಿದ್ದಾರೆ. ಸದ್ಯ ಎಲ್ಲರನ್ನೂ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಬಾಲಾಜಿ ಆಸ್ಪತ್ರೆ ಇಲ್ಲಿ ಚಂದ್ರು ಲಮಾಣಿ ಅವರಿಗೆ ಸೇರಿದ ಒಂದು ಆಸ್ಪತ್ರೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಗುತ್ತಿಗೆದಾರನಿಂದ 5 ಲಕ್ಷ ಕಮಿಷನ್ ಪಡೆಯುವಾಗ ಶಾಸಕ ಚಂದ್ರು ಲಮಾಣಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಳಕೆ ಬಿದ್ದಿದ್ದಾರೆ. ರಸ್ತೆ ಬದಿಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ, 1ಕೋಟಿ ರುಪಾಯಿ ಮೊತ್ತದ ಮಾಲ್ ನಿರ್ಮಾಣ ಮಾಡೋದಿತ್ತು. ಇದಕ್ಕೆ 12 ಪರ್ಸೆಂಟ್ ಕಮಿಷನ್ ಕೇಳಿದರು. ಇದೀಗ ಗುತ್ತಿಗೆದಾರನಿಂದ 5 ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ದಾಳಿ ನಡೆಸಿದೆ.ಶಾಸಕ ಚಂದ್ರು ಉಲಮಾಣಿ ಪಿಎ…
ಸಾಮಾನ್ಯವಾಗಿ ದೊಡ್ಡವರೇ ಎಷ್ಟೋ ಬಾರಿ ಲಿಪ್ಟ್ ನಲ್ಲಿ ಸಿಲುಕಿ ಪರದಾಟ ನಟಿಸಿರುವ ಘಟನೆಗಳು ವರದಿಯಾಗಿವೆ. ಇದೀಗ ಸಮಾಜಿಕ ಜಾಲತಾಣದಲ್ಲಿ ಲಿಫ್ಟ್ ನಲ್ಲಿ ಸಿಲುಕಿದ ಇಬ್ಬರು ಪುಟ್ಟ ಮಕ್ಕಳನ್ನು ಓರ್ವ ಬಾಲಕಿ ದೃತಿಗೆಡದೆ ಧೈರ್ಯವಾಗಿ ರಕ್ಷಣೆ ಮಾಡಿರುವ ವಿಡಿಯೋ ಒಂದು ವೈರಲ್ ಆಗಿದೆ. ಹೌದು ಸೋಶಿಯಲ್ ಮೀಡಿಯಾದಲ್ಲಿ ಈ ಒಂದು ವಿಡಿಯೋ ಇದೀಗ ವೈರಲ್ ಆಗಿದ್ದು, ಲಿಫ್ಟ್ ನಲ್ಲಿ ಮಕ್ಕಳಿದ್ದಾಗಲೇ ಏಕಾಏಕಿ ಡೋರ್ ಲಾಕ್ ಆಗಿದೆ. ಮಕ್ಕಳ ರಕ್ಷಣೆಗೆ ಪ್ರಯತ್ನ ಮಾಡಲಾಗಿದೆ. ಓರ್ವ ಬಾಲಕಿ ಮಕ್ಕಳನ್ನು ರಕ್ಷಣೆ ಮಾಡಲು ಮುಂದಾಗಿದ್ದಾಳೆ. ಬಾಲಕಿಯ ಪ್ರಯತ್ನಕ್ಕೆ ಸ್ಥಳೀಯ ನಿವಾಸಿಗಳು ನೆರವಾಗಿದ್ದಾರೆ. ಬಾಲಕಿ ಬಾಗಿಲಲ್ಲಿ ಸಿಲುಕಿದರೂ ಕೂಡ ಭಯಪಡದೆ ಮಕ್ಕಳನ್ನು ರಕ್ಷಣೆ ಮಾಡಿದ್ದಾಳೆ. ಬಾಲಕಿಯ ಸಮಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ.
ನವದೆಹಲಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ನಡುವೆ ಬಿಗ್ ಫೈಟ್ ನಡೆಯುತ್ತಿದೆ. ಇದರ ಮಧ್ಯೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕೆಎನ್ ರಾಜಣ್ಣ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಮಾಡಿದ್ದು ಕುತೂಹಕ್ಕೆ ಕಾರಣವಾಗಿತ್ತು . ಖರ್ಗೆ ಅವರನ್ನು ಭೇಟಿ ಮಾಡಿದ ಬಳಿಕ ಸತೀಶ್ ಜಾರಕಿಹೊಳಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನಾಯಕತ್ವದ ಗೊಂದಲದ ನಿವಾರಣೆಯ ಬಗ್ಗೆ ಖರ್ಗೆ ಭರವಸೆ ನೀಡಿದ್ದಾರೆ. ಖರ್ಗೆ ಭೇಟಿ ಮಾಡಿ ರಾಜ್ಯದ ಬಗ್ಗೆ ಚರ್ಚೆ ಮಾಡಿದ್ದೇವೆ ಹಾಗಾಗಿ ಗೊಂದಲ ಬೇಗನೆ ನಿವಾರಣೆ ಮಾಡಿ ಅಂತ ಚರ್ಚಿಸಿದ್ದೇವೆ. ಆದಷ್ಟು ಬೇಗ ಗೊಂದಲ ನಿವಾರಣೆ ಮಾಡುತ್ತೇವೆ ಅಂದಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದರು.
BREAKING : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಫೆ.26 ರವರೆಗೆ ನ್ಯಾಯಾಂಗ ಬಂಧನ!
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೋಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ 5 ದಿನಗಳ ಕಾಲ ಅಂದರೆ ಫೆಬ್ರವರಿ 26 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 42ನೇ ACJM ಕೋರ್ಟ್ ಆದೇಶ ಹೊರಡಿಸಿದೆ. ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಇತ್ತೀಚಿಗೆ ಶಾಸಕ ಭೈರತಿ ಬಸವರಾಜ್ ತಲೆಮರೆಸಿಕೊಂಡಿದ್ದರು. ಬಳಿಕ ಅವರಾಗಿಯೇ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದರು. ಬಳಿಕ ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತ್ತು. ಇದೀಗ ಇಂದು ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ಬೈರತಿ ಬಸವರಾಜ್ ಅವರನ್ನು ಕೋರ್ಟಿಗೆ ಹಾಜರುಪಡಿಸಿದಾಗ ವಿಚಾರಣೆ ನಡೆಸಿದ ನ್ಯಾಯಾಧೀಶರು ಭೈರತಿ ಬಸವರಾಜ್ ಗೆ ಫೆಬ್ರವರಿ 26 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಕೊಪ್ಪಳ : ಬೀಗರು ತಂದಿದ್ದ ಉಪಹಾರ ಸೇವಿಸಿ ಐವತ್ತಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ. ಬುತ್ತಿ ಊಟ ಸೇವಿಸಿ 50 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಗುನ್ನಾಳ ಗ್ರಾಮದಲ್ಲಿ ನಡೆದಿದೆ. ವಧುವನ್ನು ಮನೆತೊಂಬಿಸಿಕೊಳ್ಳುವ ದಿನ ಬೀಗರು ಬುತ್ತಿ ತಂದಿದ್ದರು. ಈ ವೇಳೆ ಬುತ್ತಿ ಉಪಹಾರ ಸೇವಿಸಿ 50 ಕ್ಕು ಹೆಚ್ಚು ಜನ ಅಸ್ವಸ್ಥರಾಗಿದ್ದು, ಸದ್ಯ ಅಸ್ವಸ್ಥರನ್ನು ಗುನ್ನಾಳ ಮತ್ತು ಹಿರೇವಂಕಲಕುಂಟ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆ ಬಳಿಕ ಗುಣಮುಖರಾಗಿ ಎಲ್ಲರೂ ಮನೆಗೆ ತೆರಳಿದ್ದಾರೆ ಎಂದು ಹಿರೇವಂಕಲಕುಂಟ ವೈದ್ಯಾಧಿಕಾರಿ ದಯಾನಂದ ಸ್ವಾಮಿ ಮಾಹಿತಿ ನೀಡಿದರು.
ಬೆಂಗಳೂರು : ಬೆಂಗಳೂರಲ್ಲಿ ಜಾಮೀನು ಪಡೆದು ತಲೆಮರಿಸಿಕೊಂಡಿದ್ದ ಶಂಕಿತ ಉಗ್ರನನ್ನು ಇದೀಗ NIA ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಹರ್ಷದ್ ಖಾನ್ ನನ್ನು NIA ಅರೆಸ್ಟ್ ಮಾಡಿದೆ. ಈ ಹಿಂದೆ ಅರ್ಷದ್ ಖಾನ್ ಅನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು. ಗ್ರೀನೆಟ್ ಸಿಕ್ಕಿದ ಪ್ರಕರಣದಲ್ಲಿ ಹರ್ಷದ್ ನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು ಆತನ ಬಂಧನದ ಬಳಿಕ ಕೇಸ್ NIA ಗೆ ವರ್ಗಾವಣೆ ಮಾಡಲಾಗಿತ್ತು ಈ ವೇಳೆ ಜಾಮೀನು ಪಡೆದು ಅರ್ಷದ್ ಖಾನ್ ಜೈಲಿನಿಂದ ಬಿಡುಗಡೆಯಾಗಿದ್ದ. ಜಾಮೀನು ಪಡೆದ ನಂತರ ನ್ಯಾಯಾಲಯಕ್ಕೆ ಹಾಜರಾಗುತ್ತಿರಲಿಲ್ಲ. ನ್ಯಾಯಾಲಯವು ವಾರಂಟ್ ಮತ್ತು ಪ್ರಕ್ಲೊಮೇಷನ್ ಹೊರಡಿಸಿತ್ತು. ನ್ಯಾಯಾಲಯದ ಆದೇಶದಂತೆ ಆರೋಪಿಯನ್ನು ವಿಧಿಗೆ ಬಂದಿಸಿದೆ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಚಾಕೊಲೇಟ್ ನೀಡುವುದಾಗಿ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಂಗಳೂರಿನ ಆನೇಕಲ್ ಪೊಲೀಸ್ ಅಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಷ್ಟೆ ಅಲ್ಲದೇ 9 ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಸಿದ ಆರೋಪ ಕೇಳಿ ಬಂದಿದೆ. ಹೌದು 9 ವಿದ್ಯಾರ್ಥಿಗಳಿಗೆಗಳ ಜೊತೆಗೆ ಅಸಭ್ಯವಾಗಿ ವರ್ತನೆ ಆರೋಪ ಕೇಳಿ ಬಂದಿದ್ದು, ಕೃಷ್ಣಮೂರ್ತಿ ಅಲಿಯಾಸ್ ಕಿಟ್ಟಿ ಎಂಬಾತನಿಂದ ಈ ಒಂದು ದುಷ್ಕೃತ್ಯ ನಡೆದಿದೆ. ಶಾಲಾ ಆವರಣ ಮತ್ತು ಶೌಚಾಲಯದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಆರೋಪಿ ಕೃತ್ಯದ ಬಗ್ಗೆ ಪೋಷಕರ ಬಳಿ ಮಕ್ಕಳು ಎಲ್ಲ ವಿಚಾರ ತಿಳಿಸಿದ್ದಾರೆ. ನಿನ್ನೆ ಬೆಳಿಗ್ಗೆ ಆರೋಪಿ ಕೃಷ್ಣ ಮೂರ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.
ಬೆಂಗಳೂರು : ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಾಗಲಕೋಟೆ ಪೊಲೀಸರು 8 ಆರೋಪಿಗಳನ್ನು ಅರೆಸ್ಟ್ ಮಾಡಿ ಎಫ್ಐಆರ್ ಕೂಡ ದಾಖಲಿಸಿದ್ದಾರೆ. ಈ ಕುರಿತು ಗೃಹ ಸಚಿವ ಜಿ ಪರಮೇಶ್ವರ್ ಅವರು ಕೂಡ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈಗಾಗಲೇ ಅಲ್ಲಿ 8 ಜನರನ್ನು ಬಂಧಿಸಲಾಗಿದೆ ಸದ್ಯ ಎಲ್ಲವೂ ಸಹಜ ಸ್ಥಿತಿಯತ್ತ ಮರಳುತ್ತಿದೆ. ಎಲೆಕ್ಷನ್ ಬರುತ್ತದೆಯಲ್ಲ ಆ ರೀತಿ ತಿಮ್ಮಾಪುರವರು ಆ ರೀತಿ ಹೇಳಿಕೆ ನೀಡಿರಬಹುದು ನಾವು ಕೂಡ ಅಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸಿಬ್ಬಂದಿ ಯೋಜನೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಬಿಜೆಪಿ ನಾಯಕರು ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಬಿಜೆಪಿ ನಾಯಕರು ಅದನ್ನೇ ಹೇಳಬೇಕಲ್ಲ ಇನ್ನೇನ್ ಮಾಡೋಕಾಗುತ್ತೆ. ನಾವು ಒಂದು ವರ್ಗಕ್ಕೆ ಕಾನೂನು ಸೀಮಿತ ಮಾಡಲ್ಲ ಯಾರೇ ಇದ್ದರೂ ಕೂಡ ಕಾನೂನು ಎಲ್ಲರಿಗೂ ಒಂದೇ ಭಾರತೀಯ ಜನತಾ ಪಾರ್ಟಿಯವರಿಗೆ ಓಲೈಕೆ ಮಾಡುತ್ತಾರೆ ಮೈನಾರಿಟಿ, ದಲಿತ ವರ್ಗಕ್ಕೆ…














