Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇಂದು ಬೆಂಗಳೂರಿನ ಸದಾಶಿವ ನಗರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಭಾಗವಹಿಸಿದ್ದರು. ಪಕ್ಷದ ವಿಚಾರ ಹಾಗು ಬೆಳಗಾವಿ ಅಧಿವೇಶನದ ಕುರಿತು ಚರ್ಚಿಸಿದ್ದೆವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬ್ರೇಕ್ ಫಾಸ್ಟ್ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ರೇಕ್ ಫಾಸ್ಟ್ ವೇಳೆ ಪಕ್ಷದ ವಿಚಾರ ಚರ್ಚೆ ಮಾಡಿದ್ದೇವೆ.ಡಿಸೆಂಬರ್ 8 ರಿಂದ ಬೆಳಗಾವಿ ಅಧಿವೇಶನ ಆರಂಭ ಆಗುತ್ತದೆ. ಅಧಿವೇಶನ ಹಿನ್ನೆಲೆ ನಾವು ಚರ್ಚೆ ಮಾಡಿದ್ದೇವೆ. ವಿಪಕ್ಷಗಳ ಯಾವುದೇ ವಿಚಾರ ಪ್ರಸ್ತಾಪಿಸಿದ್ರೂ ಎದುರಿಸಿತ್ತೇವೆ. ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಹೈಕಮಾಂಡ್ ಭೇಟಿಗೆ ಅವಕಾಶ ಸಿಕ್ಕರೆ ಭೇಟಿ ಮಾಡ್ತೇವೆ. ನಾನು ಡಿಕೆ ಶಿವಕುಮಾರ್ ಬ್ರದರ್ಸ್. ನಾನು ಡಿಕೆ ಶಿವಕುಮಾರ್ ಒಂದೇ ಪಕ್ಷ ಒಂದೇ ಸಿದ್ದಾಂತ ಹೊಂದಿದ್ದೆವೆ. ನಮ್ಮ ಸರ್ಕಾರ ಯಾವಾಗಲು ರೈತರ ಪರ ಇರುತ್ತದೆ ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಕಾರ್ಖಾನೆ ಮಾಲೀಕರ ಜತೆ ಚರ್ಚೆ…
BREAKING : ಪಕ್ಷದ ವಿಚಾರ, ಅಧಿವೇಶನದ ಕುರಿತು ಚರ್ಚಿಸಿಸಿದ್ದೇವೆ : ಬ್ರೇಕ್ ಫಾಸ್ಟ್ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ
ಬೆಂಗಳೂರು : ಇಂದು ಬೆಂಗಳೂರಿನ ಸದಾಶಿವ ನಗರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಭಾಗವಹಿಸಿದ್ದರು. ಪಕ್ಷದ ವಿಚಾರ ಹಾಗು ಬೆಳಗಾವಿ ಅಧಿವೇಶನದ ಕುರಿತು ಚರ್ಚಿಸಿದ್ದೆವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬ್ರೇಕ್ ಫಾಸ್ಟ್ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ರೇಕ್ ಫಾಸ್ಟ್ ವೇಳೆ ಪಕ್ಷದ ವಿಚಾರ ಚರ್ಚೆ ಮಾಡಿದ್ದೇವೆ.ಡಿಸೆಂಬರ್ 8 ರಿಂದ ಬೆಳಗಾವಿ ಅಧಿವೇಶನ ಆರಂಭ ಆಗುತ್ತದೆ. ಅಧಿವೇಶನ ಹಿನ್ನೆಲೆ ನಾವು ಚರ್ಚೆ ಮಾಡಿದ್ದೇವೆ. ವಿಪಕ್ಷಗಳ ಯಾವುದೇ ವಿಚಾರ ಪ್ರಸ್ತಾಪಿಸಿದ್ರೂ ಎದುರಿಸಿತ್ತೇವೆ. ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ನಮ್ಮ ಸರ್ಕಾರ ಯಾವಾಗಲು ರೈತರ ಪರ ಇರುತ್ತದೆ ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಕಾರ್ಖಾನೆ ಮಾಲೀಕರ ಜತೆ ಚರ್ಚೆ ಮಾಡಲಾಗಿದೆ. ರಾಜ್ಯದ ಸಮಸ್ಯೆ ಬಗ್ಗೆಯೂ ನಾನು ಡಿಸಿಎಂ ಚರ್ಚೆ ಮಾಡಿದ್ದೇವೆ. ರಾಜ್ಯದಲ್ಲಿ ಈ ಬಾರಿ ರೈತರು ಹೆಚ್ಚು ಮೆಕ್ಕೆಜೋಳ ಬೆಳೆದಿದ್ದಾರೆ ಎಂದು ತಿಳಿಸಿದರು.
ಬೆಂಗಳೂರು : ಕೆಂಪೇಗೌಡ ಏರ್‌ಪೋರ್ಟ್‌ನ ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಫೆ ಮಾಲೀಕ ಹಾಗೂ ಮ್ಯಾನೇಜರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಕರಣದಿಂದ ತಪ್ಪಿಕೊಳ್ಳಲು ಯತ್ನಿಸಿದ್ದ ಕೆಫೆ ಮಾಲೀಕರಾದ ದಿವ್ಯಾ, ರಾಘವೇಂದ್ರ ರಾವ್ ಹಾಗೂ ಮ್ಯಾನೇಜರ್ ಸುಮಂತ್ ವಿರುದ್ಧ ಸುಳ್ಳು ದೂರು ನೀಡಿ, ಮಾನಹಾನಿ ಮಾಡಿದ ಆರೋಪದಡಿ ಎಫ್‌ಐಆರ್ ದಾಖಲಾಗಿದೆ. ತನಿಖೆ ವೇಳೆ, ವಿಡಿಯೋ ಮಾಡಿದ್ದ ಯುವಕರು ಬ್ಲ್ಯಾಕ್‌ಮೇಲ್ ಮಾಡಿಲ್ಲ ಎಂಬುದು ಸಾಬೀತಾಗಿದೆ. ಈ ಹಿನ್ನೆಲೆ ವಿಡಿಯೋ ಮಾಡಿದ್ದ ಯುವಕ, ತನ್ನ ಮೇಲೆ ಸುಳ್ಳು ಆಪಾದನೆ ಮಾಡಿದ್ದಾರೆಂದು ಏರ್‌ಪೋರ್ಟ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು: ಮಾಜಿ ಸಿಎಂ ಬಿಎಸ್‌ವೈ (BSY) ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಈ ಪ್ರಕರಣ ಸಂಬಂಧ ಕೆಳಹಂತದ ನ್ಯಾಯಾಲಯ ಆರೋಪ ನಿಗದಿಗೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಬಿಎಸ್‌ವೈ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ, ಟ್ರಯಲ್‌ಗೆ ಅನುಮತಿ ನೀಡಿತ್ತು. ಅದಾದ ಬಳಿಕ 1ನೇ ಫಾಸ್ಟ್ ಟ್ರ‍್ಯಾಕ್ ಕೋರ್ಟ್ ಬಿ.ಎಸ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿತ್ತು. ಸದ್ಯ ಈ ಸಂಬಂಧ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಏನಿದು ಪ್ರಕರಣ? ಬೆಂಗಳೂರಿನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಬಿಎಸ್‌ವೈ ಮೇಲಿದೆ. ಸಹಾಯ ಕೇಳಿ ಬಂದಾಗ ಯಡಿಯೂರಪ್ಪನವರು ಮಗಳ ಮೇಲೆ ಲೈಂಗಿಕ…
ಬೆಂಗಳೂರು : ಸ್ಮಾರ್ಟ್ ಮೀಟರ್ ಹಗರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆಜೆ ಜಾರ್ಜ್ ವಿರುದ್ಧದ್ದ ಖಾಸಗಿ ದೂರು ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಕೆಜೆ ಜಾರ್ಜ್ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ರದ್ದುಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣಕ್ಕೆ ಸಂಬಂಧಸಿದಂತೆ ಬಿಜೆಪಿ ನಾಯಕರು ಸಲ್ಲಿಸಿದ್ದ ಪ್ರಕರಣ ಇದೀಗ ಹೈಕೋರ್ಟ್ ರದ್ದುಪಡಿಸಿದೆ. ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಈ ಒಂದು ಪ್ರಕರಣದಿಂದ ಸಚಿವ ಕೆಜೆ ಜಾರ್ಜ್ ಗೆ ಸದ್ಯಕ್ಕೆ ರಿಲೀಫ್ ಸಿಕ್ಕಂತಾಗಿದೆ.
ಬೆಂಗಳೂರು : ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ಸೌಲಭ್ಯ ಒದಗಿಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ಪ್ರಶ್ನಿಸಿ ಬೆಂಗಳೂರು ಹೋಟೆಲುಗಳ ಸಂಘ (ರಿ) ಹೈಕೋರ್ಟ್ ಮಟ್ಟಿಲೇರಿದೆ. ಅರ್ಜಿದಾರ ಸಂಘಟನೆಯ ಸದಸ್ಯರು ನಡೆಸುತ್ತಿರುವ ಸಂಸ್ಥೆಗಳಲ್ಲಿ ಕೈಗಾರಿಕೆಗಳ ಸ್ವರೂಪವನ್ನು ಆಧರಿಸಿ ಕಾರ್ಖಾನೆ ಕಾಯ್ದೆ, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಳಡಿ ನೋಂದಾಯಿಸಿಕೊಳ್ಳಲಾಗಿದೆ. ಈ ಕಾಯಿದೆಗಳು ಕೆಲಸದ ಸಮಯ, ಸಾಪ್ತಾಹಿಕ ರಜಾದಿನಗಳು, ವೇತನದೊಂದಿಗೆ ರಜೆ ಇತ್ಯಾದಿಗಳನ್ನು ಒಳಗೊಂಡಂತೆ ಉದ್ಯೋಗಿಗಳ ಆರೋಗ್ಯ, ಕಲ್ಯಾಣವನ್ನು ನಿಯಂತ್ರಿಸುತ್ತಿವೆ. ಅಲ್ಲದೆ, ಕರ್ನಾಟಕ ಕೈಗಾರಿಕಾ ಉದ್ಯೋಗ ನಿಯಮಗಳಲ್ಲಿ ಸೇರಿಸಿರುವ ಸ್ಥಾಯಿ ಆದೇಶಗಳ ಷರತ್ತುಗಳ ಪ್ರಕಾರ ವೇತನಸಹಿತ ರಜೆ ಸೇರಿದಂತೆ ಇತರೆ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಹೀಗಾಗಿ ಕಾನೂನು ಮೂಲಕ ಉದ್ಯೋಗದಾತರು ಉದ್ಯೋಗಿಗಳಿಗೆ ಸಾಕಷ್ಟು ರಜೆಗಳನ್ನು ನೀಡುವುದು ಕಡ್ಡಾಯವಾಗಿದೆ. ಅದರಂತೆ ಕಾರ್ಮಿಕರು ಅಥವಾ ನೌಕರರ ಆರೋಗ್ಯ, ಯೋಗಕ್ಷೇಮ, ಸುರಕ್ಷತೆ ಕೆಲಸದ…
ಬೆಂಗಳೂರು : ಬೆಂಗಳೂರು ಟೆಕ್ಕಿ ತೇಜಸ್ ಎಂಬವರನ್ನು ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವ ನೆಪದಲ್ಲಿ ಮೋಸಮಾಡಿ 48 ಲಕ್ಷ ರೂ. ವಂಚಿಸಿದ ವಿಜಯ್ ಗುರೂಜಿಯನ್ನು ಬೆಂಗಳೂರಿನ ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಔಷಧಿಯಿಂದ ಕಿಡ್ನಿ ಹಾನಿಯಾದ ಬಳಿಕ ತೇಜಸ್ ದೂರು ನೀಡಿದ್ದರು. ಪ್ರಕರಣದಲ್ಲಿ ತನಿಖೆ ಮುಂದುವರಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ತೇಜಸ್ ಎಂಬ ಟೆಕ್ಕಿ ಲೈಂಗಿಕ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಕೆಂಗೇರಿ ಸನೈರಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಹೋಗಿ ಬರುವಾಗ ರಸ್ತೆ ಪಕ್ಕದ ಟೆಂಟ್‌ನಲ್ಲಿ ‘‘ಲೈಂಗಿಕ ಸಮಸ್ಯೆಗೆ ಚಿಕಿತ್ಸೆ’’ ಎಂಬ ಬೋರ್ಡ್ ನೋಡಿ ಒಳಗೆ ಹೋಗಿದ್ದರು. ಅಲ್ಲಿ ಭೇಟಿಯಾದ ವ್ಯಕ್ತಿ ವಿಜಯ್ ಗುರೂಜಿಯನ್ನು ಪರಿಚಯಿಸಿ, ಆಯುರ್ವೇದಿಕ್ ಚಿಕಿತ್ಸೆ ಮೂಲಕ ಸಮಸ್ಯೆ ಗುಣವಾಗುತ್ತದೆ ಎಂದು ಭರವಸೆ ನೀಡಿದ್ದರು. ತೇಜಸ್ ನಂತರ ಟೆಂಟ್ ಗುರೂಜಿಯನ್ನು ಭೇಟಿಯಾಗಿ ‘ದೇವರಾಜ್ ಬೂಟಿ’ ಎಂಬ 1 ಗ್ರಾಂ ಔಷಧಿಗೆ 1.60 ಲಕ್ಷ ರೂ. ದರ ಫಿಕ್ಸ್ ಮಾಡಲಾಗಿತ್ತು. ಯಶವಂತಪುರದ ವಿಜಯಲಕ್ಷ್ಮೀ ಆಯುರ್ವೇದಿಕ್ ಶಾಪ್‌ಗೆ ಹೋಗಿ ಮಾತ್ರೆಗಳು…
ಬೆಂಗಳೂರು : ರಾಜ್ಯದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಜೋರಾಗಿ ನಡೆಯುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರ ಮನೆಗೆ ಭೇಟಿ ನೀಡಿ ಉಪಹಾರ ಕೂಟದಲ್ಲಿ ಭಾಗಿಯಾಗಲಿದ್ದಾರೆ. ಈ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ಮಾತನಾಡಿ ನನ್ನ ಮನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರನ್ನು ಕರೆಯುತ್ತೇನೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಅಗತ್ಯ ಬಿದ್ರೆ ನಮ್ಮ ಮನೆಗೂ ಬ್ರೇಕ್ಫಾಸ್ಟ್ ಗೆ ಕರೆಯುತ್ತೇನೆ. ಇಬ್ಬರನ್ನು ನನ್ನ ಮನೆಗೆ ಬ್ರೇಕ್ ಫಾಸ್ಟ್ ಗೆ ಯಾಕೆ ಕರೆಯಬಾರದು? ಪಕ್ಷದಲ್ಲಿ ಸದ್ಯ ಎಲ್ಲವೂ ತಿಳಿಯದೆ ಖುಷಿಯ ವಾತಾವರಣ ಇದೆ. 2ನೇ ಬಾರಿಯೂ ನನ್ನ ಕರೆದಿಲ್ಲ. ಬ್ರೇಕ್ ಫಾಸ್ಟ್ ಗೆ ನನ್ನ ಕರೆದಿದ್ದರೆ ಹೋಗುತ್ತಿದ್ದೆ ಎಂದು ತಿಳಿಸಿದರು. ಗೃಹ ಸಚಿವ ಜಿ.ಪರಮೇಶ್ವರ್ ಸಿಎಂ ಆಗಲಿ ಎಂದು ಅಭಿಮಾನಿಗಳು ಮುಡಿ ವಿಚಾರವಾಗಿ ಎಲ್ಲ ನಾಯಕರ ಅಭಿಮಾನಿಗಳಿಗೆ ಸಿಎಂ ಆಗಲಿ ಅಂತ ಆಸೆ ಇರುತ್ತದೆ ತಮ್ಮ ನಾಯಕರು ಮುಖ್ಯಮಂತ್ರಿ ಆಗಲಿ ಅಂತ…
ನವದೆಹಲಿ : 2025-26ನೇ ಆರ್ಥಿಕ ವರ್ಷದ ಮೊದಲ 6 ತಿಂಗಳಲ್ಲಿ (ಏಪ್ರಿಲ್-ಸೆಪ್ಟೆಂಬರ್) ಭಾರತ ಹಾಗೂ ದೇಶದ ಯಾವ ರಾಜ್ಯಗಳಲ್ಲಿ ಎಷ್ಟು ವಿದೇಶಿ ನೇರ ಬಂಡವಾಳ (ಎಫ್‌ಡಿಐ) ಹರಿದು ಬಂದಿದೆ ಎಂಬ ಅಂಕಿ-ಅಂಶ ವನ್ನು ಸರ್ಕಾರ ಬಿಡುಗಡೆ ಮಾಡಿದ್ದು, ದೇಶದಲ್ಲೇ ಕರ್ನಾಟಕ 2ನೇ ಸ್ಥಾನ ಪಡೆದಿದೆ. ರಾಜ್ಯಗಳ ಪೈಕಿ ಮಹಾರಾಷ್ಟ್ರಕ್ಕೆ ಅತಿ ಹೆಚ್ಚು (95 ಸಾವಿರ ಕೋಟಿ ರು.) ಹೂಡಿಕೆ ಹರಿದುಬಂದಿದ್ದರೆ, 84.2 ಸಾವಿರ ಕೋಟಿ ರು. ಹೂಡಿಕೆ ಪಡೆಯುವ ಮೂಲಕ ಕರ್ನಾಟಕ 2ನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿರುವ ತಮಿಳುನಾಡು 32 ಸಾವಿರ ಕೋಟಿ ರು., ಹರ್ಯಾಣ 28.8 ಸಾವಿರ ಕೋಟಿ ರು., ದೆಹಲಿ 20.6 ಸಾವಿರ ಕೋಟಿ ರು., ಗುಜರಾತ್ 20 ಸಾವಿರ ಕೋಟಿ ರು. ಹಾಗೂ ತೆಲಂಗಾಣಕ್ಕೆ 10 ಸಾವಿರ ಕೋಟಿ ರು. ಹೂಡಿಕೆ ಆಕರ್ಷಿಸಿವೆ.
ಬೆಂಗಳೂರು : ರಾಜ್ಯದಲ್ಲಿ ಕಳೆದ 15 ದಿನಗಳಿಂದ ಕುರ್ಚಿ ಕದನ ಜೋರಾಗಿತ್ತು. ಕಳೆದ ಶನಿವಾರವಷ್ಟೇ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಆಹ್ವಾನಿಸಿದ್ದರು. ಬಳಿಕ ಸುದ್ದಿಗೋಷ್ಠಿಯಲ್ಲಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕುರ್ಚಿ ಕದನಕ್ಕೆ ಫುಲ್ ಸ್ಟಾಪ್ ಹಾಕಿದ್ದರು. ಇದೀಗ ಇಂದು ಬೆಂಗಳೂರಿನ ಸದಾಶಿವ ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಖಾಸಗಿ ನಿವಾಸಕ್ಕೆ ನಿನ್ನೆ ಸಿಎಂ ಸಿದ್ದರಾಮಯ್ಯ ಅವರನ್ನು ಡಿಕೆ ಶಿವಕುಮಾರ್ ಉಪಹಾರ ಕೂಟಕ್ಕೆ ಅಧಿಕೃತವಾಗಿ ಆಹ್ವಾನಿಸಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕೂಡ ಭಾರಕೂಟಕ್ಕೆ ಬರುವುದಾಗಿ ಸಿಎಂ ಸಿದ್ದರಾಮಯ್ಯ ಸಹ ತಿಳಿಸಿದ್ದರು. ಡಿಸಿಎಂ ಆಹ್ವಾನ ಒಪ್ಪಿದ ಸಿಎಂ ಸಿದ್ದರಾಮಯ್ಯ ತಮ್ಮ ಆಹ್ವಾನದಂತೆ ಮನೆಗೆ ಬರುವುದಾಗಿ ತಿಳಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾರೆ. ಉಪಹಾರದ ಜೊತೆಗೆ ಒಂದಷ್ಟು ರಾಜಕೀಯ ಬೆಳವಣಿಗೆಗಳ ಚರ್ಚೆ ನಡೆಸಲಿದ್ದಾರೆ. ಇತ್ತ ಅಧಿಕಾರ ಹಂಚಿಕೆಗೆ ಕಿತ್ತಾಡಿದ್ದ ಉಭಯ ನಾಯಕರಿಂದ…













