Author: kannadanewsnow05

ಚಿಕ್ಕಮಗಳೂರು : ಡಿಕೆಶಿ ಮಹಿಳೆಯನ್ನು ಅಪಹರಿಸಿ ಬೆದರಿಸಿ ಜಮೀನು ಬರೆಸಿಕೊಂಡಿದ್ದು ನಿಜ. ಆ ಘಟನೆ ನಡೆದದ್ದು 1996-97 ರಲ್ಲಿ, ಅದರ ದಾಖಲೆಗಳಿವೆ ಎಂದು ನಿನ್ನೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಡಿ ಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದರು. ಇದೀಗ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಕೂಡ ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದು,9 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿ, ಕೂಡಿ ಹಾಕಿ ಆಸ್ತಿ ಬರೆಸಿಕೊಂಡಿದ್ದಾರೆ.ನನ್ನ ಬಳಿ ಎಲ್ಲಾ ದಾಖಲೆಗಳಿವೆ ಎಂದು ಗಂಭಿರ ಆರೋಪ ಮಾಡಿದರು. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ದೇವೇಗೌಡರು ಡಿಸೈನ್ ಡಿಕೆ ಶಿವಕುಮಾರ್ ವಿರುದ್ಧ ಈ ರೀತಿ ಗಂಭೀರ ಆರೋಪ ಮಾಡಿದರು. 9 ವರ್ಷದ ಬಾಲಕಿಯನ್ನ ಕರೆದೋಯ್ದು ಆಸ್ತಿ ಬರೆಸಿಕೊಂಡಿದ್ದಾರೆ.ನನ್ನ ಬಳಿ ಎಲ್ಲಾ ದಾಖಲೆಗಳಿವೆ.ಸುಪ್ರೀಂ ಕೋರ್ಟ್ ನಲ್ಲಿ ಡಿಕೆ ಶಿವಕುಮಾರ್ ಗೆ ಮುಖಭಂಗವಾಗುತ್ತದೆ. ಅಮೇರಿಕಾದಿಂದ ಹಣ ತಂದಿದ್ದ ವ್ಯಕ್ತಿಗೆ ಆಸ್ತಿ ಬರೆಸಿದರು ಎಂದು ಗಂಭಿರ ಆರೋಪ ಮಾಡಿದರು. ಅವರು ಐಟಿ ಕಂಪನಿ ಸ್ಥಾಪನೆ…

Read More

ಬೆಂಗಳೂರು : ಗ್ಯಾರಂಟಿ ಮುಂದುವರೆಯಲ್ಲ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಬಿಜೆಪಿ ಹಣೆಬರಹದಲ್ಲಿ ಗ್ಯಾರಂಟಿ ತೆಗೆಯಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಇಂದು ಕೊಪ್ಪಳದ ಬಿಜೆಪಿಯ ಮಾಜಿ ಸಂಸದ ಕರಡಿ ಸಂಗಣ್ಣ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಸೋಲಿನ ಭಯದಿಂದಲೇ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕರಡಿ ಸಂಗಣ್ಣ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ನಮ್ಮ ಕಾರ್ಯಕ್ರಮ ಬಿಜೆಪಿಯನ್ನು ತೊಳೆಯುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಗ್ಯಾರಂಟಿಯ ದೊಡ್ಡ ಅಲೆ ಇದೆ ಬಿಜೆಪಿಯಲ್ಲಿ ಸುಮಾರು ನೂರು ಸಂಸದರಿಗೆ ಟಿಕೆಟ್ ಕೊಟ್ಟಿಲ್ಲ ಸರ್ವೆಯಲ್ಲಿ ಗೆಲ್ಲಲ್ಲ ಅಂತ ಸಂಸದರಿಗೆ ಟಿಕೆಟ್ ನಿರಾಕರಿಸಿದ್ದಾರೆ ಎಂದರು. ಎನ್ಡಿಎ ಪರಿಸ್ಥಿತಿ ಏನು ಅಂತ ಇದರಲ್ಲೇ ಗೊತ್ತಾಗುತ್ತದೆ. ಸಂವಿಧಾನ ಬದಲಾವಣೆ ಸಾಧ್ಯವಿಲ್ಲ ಅಂತ ಮೋದಿ ಹೇಳುತ್ತಾರೆ ಆದರೆ ಅವರ ಪಕ್ಷಕರು ಸಂವಿಧಾನ ಬದಲಿಸುತ್ತೇವೆ…

Read More

ಮಂಡ್ಯ : ಇತ್ತೀಚಿಗೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ಲೋಕಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿರುವ ವಿ ಸೋಮಣ್ಣ ಅವರ ಪರವಾಗಿ ಪ್ರಚಾರದ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಅವರ ಹೇಳಿಕೆಗೆ ಊಟ ಹೊಡೆದಿದ್ದು ನನ್ನ ಹೇಳಿಕೆಯನ್ನು ತಿರುಚಿಲಾಗಿದೆ ಎಂದು ತಿಳಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನನ್ನ ವಿರುದ್ಧ ಮಹಿಳೆಯರನ್ನು ಎತ್ತಿ ಕಟ್ಟಲು ಮುಂದಾಗಿದ್ದಾರೆ. ತುಮಕೂರಿನಲ್ಲಿ ನೀಡಿದ್ದ ನನ್ನ ಹೇಳಿಕೆ ತಿರುಚಿದ್ದಾರೆ.ಕೆರೆಗೂಡು ಗ್ರಾಮದಲ್ಲಿ ತಾಯಂದಿರು ಆರತಿ ಬೆಳಗಿ ಕಳುಹಿಸಿದ್ದಾರೆ.ನನಗೆ ದೊಡ್ಡ ಶಕ್ತಿ ತುಂಬುವುದು ಮಂಡ್ಯ ಜಿಲ್ಲಾ ಜನತೆ ನಿನ್ನೆಯಿಂದ ಮಂಡ್ಯ ಕ್ಷೇತ್ರದಲ್ಲಿ ನಾನು ಪ್ರಚಾರವನ್ನು ಆರಂಭಿಸಿದ್ದೇನೆ ಎಂದರು. ನನ್ನ ಸೋಲು ಗೆಲುವು ಡಿಸಿಎಂ ಡಿಕೆ ಶಿವಕುಮಾರ್ ಕೈಯಲ್ಲಿ ಇಲ್ಲ ಎಂದು ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರ ಅವರ ಪಕ್ಷದ ವಿಚಾರ.ಡಿಸಿಎಂ ಡಿಕೆ…

Read More

ಬೆಂಗಳೂರು : ನಿನ್ನೆ ಬೆಳಿಗ್ಗೆ ಕನ್ನಡದ ಹಿರಿಯ ನಟ ನಿರ್ಮಾಪಕ ಹಾಗೂ ನಿರ್ದೇಶಕರಾದಂತಹ ದ್ವಾರಕೀಶ್ ಅವರು ಹೃದಯಘಾತದಿಂದ ತಮ್ಮ ನಿವಾಸದಲ್ಲಿ ಸಾವನಪ್ಪಿದ್ದರು ಇಂದು ಅವರ ಪಾರ್ಥಿವ ಶರೀರವನ್ನು ಗಣ್ಯರಿಗೆ ಹಾಗೂ ಚಿತ್ರ ಕಲಾವಿದರಿಗೆ ಸಾರ್ವಜನಿಕರ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿತ್ತು ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆಗಮಿಸಿ ಅವರ ಅಂತಿಮ ದರ್ಶನ ಪಡೆದುಕೊಂಡರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕನ್ನಡ ಚಿತ್ರರಂಗಕ್ಕೆ ನಟ ದ್ವಾರಕೀಶ್ ಅವರ ಸೇವೆ ಬಹಳ ಅಪಾರವಾದದ್ದು,ಕನ್ನಡ ಚಿತ್ರರಂಗದಲ್ಲಿ ನಟ ದ್ವಾರಕೀಶ್ ಅವರದ್ದೇ ಆದಂತ ಛಾಪು ಹೊಂದಿದ್ದರು. ನಟರಾಗಿ ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿ ಕನ್ನಡ ಚಿತ್ರರಂಗದಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ. ಡಾಕ್ಟರ್ ರಾಜಕುಮಾರ್, ಅಂಬರೀಶ್, ವಿಷ್ಣುವರ್ಧನ್ ಜೊತೆ ಅವರು ನಟನೆ ಮಾಡಿದ್ದಾರೆ. ನಾನು ದ್ವಾರಕೀಶ್ ಹೆಲಿಕ್ಯಾಪ್ಟರ್ ನಲ್ಲಿ ಮೈಸೂರಿಗೆ ಹೋಗಿದ್ದೆವು. ದ್ವಾರಕೀಶ್ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಅಂತಿಮ ದರ್ಶನ ಪಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Read More

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿರುವಂತಹ ಡಿ ಕೆ ಸುರೇಶ್ ಪರಮಾಪ್ತನ ಮನೆಯ ಮೇಲೆ ಇದೀಗ ಐಟಿ ಅಧಿಕಾರಿಗಳು ದಾಳಿ ನಡೆಸಿ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಡಿಕೆ ಸುರೇಶ್ ಆಪ್ತನ ಮನೆ ಮೇಲೆ ಐಟಿ ದಾಳಿ ನಡೆಸಿದ್ದು, ವಾಜರಹಳ್ಳಿಯ ಗಣಪತಿಪುರದಲ್ಲಿರುವ ರಘು ಎಂಬುವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು. ಐಟಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿತು. ಸುಮಾರು ಆರು ಗಂಟೆಗಳ ಕಾಲ ಕಡತಗಳನ್ನ ಪರಿಶೀಲಿಸಿ ಐಟಿ ತಂಡ ಇದೀಗ ವಾಪಸ್ ತೆರಳಿದೆ ಎಂದು ತಿಳಿದು ಬಂದಿದೆ.

Read More

ಬೆಂಗಳೂರು : ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ಸಿಗೆ ಬಿಗ್ ಶಾಕ್ ಎದುರಾಗಿದ್ದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಮಿಸ್ ಆಗಿದ್ದರಿಂದ ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಸಹಜವಾಗಿ ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದರು. ಇದೀಗ  ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.ಈ ವೇಳೆ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಶಾಸಕ ಸುನಿಲ್ ಕುಮಾರ್ ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಉಪಸ್ಥಿತಿ ಇದ್ದರು. ಈ ವೇಳೆ ಮಾತನಾಡಿದ ಅಖಂಡ ಶ್ರೀನಿವಾಸ್ ಮೂರ್ತಿಯವರು, ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಶ್ರೀರಾಮನವಮಿ ದಿನದಂದೇ ಪಕ್ಷಕ್ಕೆ ಸೇರಿದ್ದು ಸಂತೋಷವಾಗಿದೆ.ಹೆಚ್ಚು ಮತಗಳ ಅಂತರದಲ್ಲಿ ಗೆದ್ದರೂ ಕಾಂಗ್ರೆಸ್ ನನಗೆ ಮೋಸ ಮಾಡಿದೆ.ನನ್ನ ಮನೆ ಸುಟ್ಟಿದ್ದಾರೆ ತಪ್ಪು ಮಾಡಿದವರು ಹೊರಗೆ ಓಡಾಡುತ್ತಿದ್ದಾರೆ ಎಂದು ಕಿಡಿ ಕಾರಿದರು. ಸುಖಾ ಸುಮ್ಮನೆ ನನ್ನ ಮೇಲೆ ಆರೋಪ ಮಾಡಿದರು. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಗೆಲ್ಲಿಸುವ…

Read More

ಬೆಂಗಳೂರು : ಅಕ್ರಮ ಚಟುವಟಿಕೆಗಳ ಮಾಹಿತಿ ಹಿನ್ನೆಲೆಯಲ್ಲಿ ಸಿಸಿಬಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಮಂಗಳವಾರ ನಸುಕಿನಲ್ಲಿ 3.30 ಗಂಟೆಗೆ ದಿಢೀರ್ ದಾಳಿ ನಡೆಸಿದೆ.ನಾಲ್ಕು ತಾಸಿಗೂ ಅಧಿಕ ಹೊತ್ತು ಜೈಲಿನಲ್ಲಿ ಜಾಲಾಡಿ ಅಲ್ಪ ಪ್ರಮಾಣದ ನಗದು ಹಾಗೂ ಚೂರಿಗಳನ್ನು ಸಿಸಿಬಿ ಜಪ್ತಿ ಮಾಡಿದೆ. ಅಕ್ರಮ ಚಟುವಟಿಕೆ ಶಂಕೆ ಮೇರೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಮಂಗಳವಾರ ನಸುಕಿನಲ್ಲಿ ದಿಢೀರ್ ದಾಳಿ ನಡೆಸಿ ಸಿಸಿಬಿ ಶೋಧ ನಡೆಸಿದೆ. ಈ ವೇಳೆ ರೂ.40,000 ನಗದು ಹಾಗೂ ಮೂರು ಚಾಕುಗಳು ಪತ್ತೆಯಾಗಿದ್ದು, ಅಧಿಕಾರಿಗಳು ಅವುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬೀದಯಾನಂದ ಸುದ್ದಿಗಾರರೊಂದಿಗೆ ಮಾತನಾಡಿ,ಕೇಂದ್ರ ಕಾರಾಗೃಹದಲ್ಲಿ ದಿಢೀರ್‌ ತಪಾಸಣೆ ನಡೆಸಿ ₹40 ಸಾವಿರ ನಗದು ಹಾಗೂ ಮೂರು ಚಾಕುಗಳನ್ನು ಸಿಸಿಬಿ ಜಪ್ತಿ ಮಾಡಿದೆ. ಈ ಹಣ ಹಾಗೂ ಚಾಕು ಬಗ್ಗೆ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲಾಗುತ್ತದೆ. ಅಕ್ರಮ ಚಟುವಟಿಕೆಗಳ ಶಂಕೆ ಮೇರೆಗೆ ಜೈಲು ತಪಾಸಣೆ ನಡೆಸಲಾಗಿದೆ…

Read More

ನವದೆಹಲಿ : ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ 25 ಗ್ಯಾರಂಟಿಗಳನ್ನು ಘೋಷಿಸಿದ್ದು ನೀತಿ ಸಂಹಿತೆ ಜಾರಿಯಾಗಿದ್ದರು ಕೂಡ ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಿಸಿ ಜನರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿ ಇದೀಗ ಬಿಜೆಪಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು ನೀಡಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಡುಗಡೆ ಮಾಡಿದ ಗ್ಯಾರಂಟಿ ಕಾರ್ಡ್‌ಗಳನ್ನು ಮನೆ ಮನೆಗೆ ವಿತರಣೆ ಮಾಡುತ್ತಿದ್ದು, ಚುನಾವಣಾ ಲಂಚ ನೀಡುವ ಮೂಲಕ ಮತದಾರರಿಗೆ ಲಂಚತನದ ಅಭ್ಯಾಸ ಮಾಡುತ್ತಿದ್ದಾರೆ. ನೀತಿ ಸಂಹಿತೆ ಜಾರಿಯಾಗಿದ್ದರೂ ಗ್ಯಾರಂಟಿ ಕಾರ್ಡ್‌ ಯೋಜನೆ ಮೂಲಕ ಜನರನ್ನು ಗೊಂದಲಕ್ಕೆ ದೂಡುವ ಕೆಲಸವನ್ನು ಕಾಂಗ್ರೆಸ್‌ ಪಕ್ಷ ಮಾಡುತ್ತಿದೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕಾಂಗ್ರೆಸ್‌ ಪಕ್ಷದ ಘರ್‌ ಘರ್‌ ಗ್ಯಾರಂಟಿ ಕಾರ್ಡ್‌ ಅಭಿಯಾನವು ಲಂಚಭರಿತವಾಗಿದ್ದು, ಅದನ್ನು ನಿಲ್ಲಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.ಅಲ್ಲದೆ ಗ್ಯಾರಂಟಿ ಕಾರ್ಡಿನಲ್ಲಿ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮೊದಲಾದವರ ಸಹಿ ಇದ್ದು, ಇದು ಪಕ್ಷದ ಗ್ಯಾರಂಟಿಗೆ…

Read More

ಶಿವಮೊಗ್ಗ : ಲೋಕಸಭೆ ಚುನಾವಣೆಗೆ ತಮ್ಮ ಪುತ್ರನಿಗೆ ಟಿಕೆಟ್ ನೀಡಿಲ್ಲವೆಂದು ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಿಜೆಪಿಯ  ಕೆ ಎಸ್ ಈಶ್ವರಪ್ಪ ಇದೀಗ ಮಾಜಿ ಯಡಿಯೂರಪ್ಪ ಹಾಗೂ ಅವರ ಪುತ್ರರ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದು ಬಿಜೆಪಿಯನ್ನು ಅಪ್ಪ-ಮಕ್ಕಳ ಹಿಡಿತದಿಂದ ಮುಕ್ತಗೊಳಿಸಬೇಕು ಎಂದು ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯನ್ನು ಅಪ್ಪ ಮಕ್ಕಳ ಹಿಡಿತದಿಂದ ಮುಕ್ತಗೊಳಿಸಬೇಕು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕೀಯ ಮಾಡಿದ್ದಾರೆ. ಶಿಕಾರಿಪುರದಲ್ಲಿ ತಂದೆ ಮಕ್ಕಳು ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿದ್ದಾರೆ. ಶಿಕಾರಿಪುರ ಇತಿಹಾಸದಲ್ಲಿ ಹೆಚ್ಚು ಹಣ ಖರ್ಚು ಮಾಡಿ ಗೆದ್ದಿದ್ದಾರೆ ಈ ಮಾತನ್ನು ನಾನಲ್ಲ ಕಾಂಗ್ರೆಸ್ ಪಕ್ಷದವರೇ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಅಪ್ಪ ಮಕ್ಕಳನ್ನು ಸೋಲಿಸಬೇಕು ನಾನು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ತಿಳಿಸಿದರು.

Read More

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರ ವಿಮಾನ ನಿಲ್ದಾಣದಲ್ಲಿ ನಿಯಮ ಉಲ್ಲಂಘಿಸಿ ವಿಡಿಯೋ ಚಿತ್ರೀಕರಣ ಮಾಡಿದ ಆರೋಪದ ಮೇರೆಗೆ ಯಲಹಂಕದ ಯೂಟ್ಯೂಬರ್ ಒಬ್ಬರನ್ನು ಇದೀಗ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂದಿತ ಯುವಕನನ್ನು ಯಲಹಂಕದ ವಿಕಾಸ ಗೌಡ ಎಂದು ಹೇಳಲಾಗುತ್ತಿದೆ.ವಿಕಾಸ ಗೌಡ ರನ್ ​ವೇನಲ್ಲಿ ವಿಡಿಯೋ ಮಾಡಿ ತನ್ನ ಯೂಟ್ಯೂಬ್​ನಲ್ಲಿ ಅಪ್ಲೋಡ್​ ಮಾಡಿದ್ದನು. ವಿಡಿಯೋದಲ್ಲಿ ಟಿಕೆಟ್ ಇಲ್ಲದೆ ಒಳಗಡೆ ಬಂದಿದ್ದೇನೆ, 24 ಗಂಟೆ ರನ್ ವೇ ಬಳಿಯೇ ಇದ್ದೆ. ಎಲ್ಲ ಅಧಿಕಾರಿಗಳ, ಸಿಬ್ಬಂದಿ ಕಣ್ಣುತಪ್ಪಿಸಿ ವಿಮಾನ ನಿಲ್ದಾಣದ ಒಳಗೆ ಪ್ರವೇಶ ಮಾಡಿ, ವಿಡಿಯೋ ಮಾಡಿದ್ದೇನೆ ಎಂದು ಹೇಳಿದ್ದನು. ಈ ವಿಡಿಯೋವನ್ನು ನೋಡಿದ ಸಿಐಎಸ್ಎಫ್ ಅಧಿಕಾರಿಗಳು ವಿಕಾಸಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಪೊಲೀಸರು ವಿಚಾರಣೆ ನಡೆಸಿದಾಗ ” ವಿಮಾನದಲ್ಲಿ ಪ್ರಯಾಣಿಸಲು ಟಿಕೆಟ್ ಪಡೆದಿದ್ದೇನೆ. ಆದರೆ ಪ್ರಯಾಣಿಸದೆ ರನ್ ​ವೇನಲ್ಲೆ ಉಳಿದುಕೊಂಡೆ. ಸುಮಾರು 4-5 ಗಂಟೆಗಳ ಕಾಲ ಅಲ್ಲಿಯೇ ಇದ್ದು, ವಿಡಿಯೋ…

Read More