Author: kannadanewsnow05

ಮೈಸೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ರಾಜ್ಯಕ್ಕೆ ಕಾಂಗ್ರೆಸ್ ನಾಯಕ ಆಗಮಿಸಳಿದ್ದು, ಮಂಡ್ಯ ವಿವಿ ಆವರಣದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದೆ.ರಾಹುಲ್ ಗಾಂಧಿ ಆಗಮನದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು ರಾಜ್ಯಕ್ಕೆ ರಾಹುಲ್ ಗಾಂಧಿ ಬರುವುದರಿಂದ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ರಾಹುಲ್ ಗಾಂಧಿ ಬರುವುದರಿಂದ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ. ಮಂಡ್ಯದಲ್ಲಿ ರಾಹುಲ್ ಗಾಂಧಿ ಅರ್ಧ ಗಂಟೆ ಭಾಷಣ ಮಾಡಿದರೆ ಏನು ಆಗಲ್ಲ. ಮಂಡ್ಯ ಜನತೆ ಮೈತ್ರಿ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ನಿರ್ಧರಿಸಿದ್ದಾರೆ. ರಾಹುಲ್ ಗಾಂಧಿ ಬಂದು ಹೋಗುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ತಿಳಿಸಿದರು. ಒಕ್ಕಲಿಗರ ರಕ್ಷಣೆಗೆ ನಾನಿದ್ದೇನೆ ಎಂಬ ಡಿಸಿಎಂ ಡಿಕೆ ಹೇಳಿಕೆಯ ವಿಚಾರವಾಗಿ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು ಸಿದ್ದರಾಮಯ್ಯ ಸರ್ಕಾರದಲ್ಲಿ ಒಕ್ಕಲಿಗರಿಗೆ ರಕ್ಷಣೆ ಇಲ್ಲ ಅಂತ ಆಯ್ತು ಇದನ್ನು ಡಿಸಿಎಂ ಡಿಕೆ ಶಿವಕುಮಾರ್…

Read More

ಬೆಂಗಳೂರು : ಲೋಕಸಭಾ ಚುನಾವಣೆ ಹೊತ್ತಿನಲ್ಲಿ ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದೆ ಬಿಜೆಪಿಯ ಸಂಸದ ಕರಡಿ ಸಂಗಣ್ಣ ಅವರು ನಿನ್ನೆ ಸಂಸದ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ. ಇಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ. ನಿನ್ನೆ ಸಂಸದ ಹಾಗೂ ಬಿಜೆಪಿ ಸದಸ್ಯತ್ವಕ್ಕೆ ಕರಡಿ ಸಂಗಣ್ಣ ಅವರು ರಾಜೀನಾಮೆ ನೀಡಿದ್ದರು. ಹಾಗಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ನಿನ್ನೆ ಸುದ್ದಿಗರರೊಂದಿಗೆ ಮಾತನಾಡಿದ ಅವರು ಸ್ವಾಭಿಮಾನಕ್ಕೆ ಧಕ್ಕೆಯಾದ ಕಾರಣ ರಾಜೀನಾಮೆ ನೀಡಿದ್ದೇನೆ. ಕಳೆದ 10 ವರ್ಷಗಳಿಂದ ಜನರ ಆಶೀರ್ವಾದದಿಂದ ಸಂಸದನಾಗಿ ಕೆಲಸ ಮಾಡಿದ್ದೇನೆ. ನಾನು ಸಂಸದನಾಗುವ ಮೊದಲು ರೈಲ್ವೆ, ಹೆದ್ದಾರಿ ಹಾಗೂ ಕೇಂದ್ರ ಸರ್ಕಾರ ಸರ್ಕಾರದ ಯೋಜನೆಗಳು ಜನರಿಗೆ ನಿರೀಕ್ಷಿತ ಮಟ್ಟದಲ್ಲಿ…

Read More

ಬೆಂಗಳೂರು : ಕಳೆದ ಒಂದು ವರ್ಷದಿಂದ ರಾಜ್ಯ ಬರದಿಂದ ಕಂಗೆಟ್ಟಿದ್ದು ರೈತರು ಸೇರಿದಂತೆ ಇಡೀ ರಾಜ್ಯದ ಜನತೆ ಹಲವು ಸಂಕಷ್ಟಗಳನ್ನು ಎದುರಿಸಿದ್ದಾರೆ.ಹೀಗಾಗಿ ರಾಜ್ಯದ ಎಲ್ಲಾ ಕೋರ್ಟ್​​ಗಳಲ್ಲಿ ಕಾರ್ಯನಿರ್ವಹಿಸುವ ವಕೀಲರಿಗೆ ಕರ್ನಾಟಕ ಹೈಕೋರ್ಟ್ ತುಸು ನಿರಾಳವಾಗುವಂತಹ ಸುದ್ದಿ ನೀಡಿದೆ. ಕಪ್ಪು ಕೋಟ್ ಧರಿಸುವುದರಿಂದ ತಾತ್ಕಾಲಿಕ ವಿನಾಯಿತಿ ನೀಡಿದೆ. ಹೌದು ಕೋರ್ಟ್ನಲ್ಲಿ ವಾದ ಮಂಡಿಸುವ ವಕೀಲರಿಗೆ ಇದೀಗ ತಾತ್ಕಾಲಿಕವಾಗಿ ಮುಕ್ತಿ ಸಿಕ್ಕಿದ್ದು, ಬೇಸಿಗೆಯ ದಿನಗಳಲ್ಲಿ ವಕೀಲರು ಕೋರ್ಟ್ ಧರಿಸದಿದ್ದರೂ ಕೂಡ ನಡೆಯುತ್ತದೆ. ಆದರೆ ಕಪ್ಪು ಕೋರ್ಟ್ ಹೊರದಾಗಿ ಯಾವ ಜರಿಸನ್ನು ಧರಿಸಬೇಕು ಎಂಬುದರ ಕುರಿತು ಇದೀಗ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ವಕೀಲರು ಕಪ್ಪು ಕೋಟಿನ ಬದಲಿಗೆ ಸಾದಾ ಬಿಳಿ ಶರ್ಟ್ ಸಲ್ವಾರ್-ಕಮೀಜ್ ಅಥವಾ ಯಾವುದೇ ಶಾಂತ ಬಣ್ಣದ ದಿರಿಸುಗಳನ್ನು ಧರಿಸಬಹುದು ಎಂದು ನ್ಯಾಯಾಲಯದ ರಿಜಿಸ್ಟ್ರಾರ್ ಕೆಎಸ್ ಭರತ್ ಕುಮಾರ್ ಮಂಗಳವಾರ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.ಏಪ್ರಿಲ್ 5 ರಂದು ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರಿಂದ ಪಡೆದ ಮನವಿಯನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Read More

ಚಿತ್ರದುರ್ಗ: ಚಿತ್ರದುರ್ಗ. ಜಿಲ್ಲೆಯ ತುರುವನೂರು ರಸ್ತೆಯ ತಿಪ್ಪೇರುದ್ರಸ್ವಾಮಿ ಆಶ್ರಮದ ಸಂಪಿನಲ್ಲಿ ತಾಯಿ ಮತ್ತು ಮಗಳ ಶವ ಪತ್ತೆಯಾಗಿದ್ದು, ಅನುಮಾನಾಸ್ಪದವಾಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಭದ್ರಾವತಿಯ ಗೀತಾ (40) ಹಾಗೂ ಪ್ರಿಯಾಂಕಾ (22) ಮೃತಪಟ್ಟವರು. ತಿಪ್ಪೇರುದ್ರಸ್ವಾಮಿ ದೇಗುಲದಲ್ಲಿ ಪೂಜೆ ಮಾಡಿಕೊಂಡು ಆಶ್ರಮದಲ್ಲಿ ವಾಸವಾಗಿದ್ದರು. ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆಶ್ರಮದಲ್ಲಿ ಗೀತಾ ಅವರು ಕುಟುಂಬ ಸಮೇತ ವಾಸವಾಗಿದ್ದರು. ಮಂಗಳವಾರ ಸಂಜೆ ಪತಿ ಮತ್ತು ಮಗ ಆಶ್ರಮದಿಂದ ಹೊರಹೋಗಿದ್ದರು. ರಾತ್ರಿ ಆಶ್ರಮಕ್ಕೆ ಮರಳಿದಾಗ ಇಬ್ಬರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಬಡಾವಣೆ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕನ್ನಡ ಚಿತ್ರರಂಗದ ಪ್ರಚಂಡ ಕುಳ್ಳ ಎಂದೆ ಖ್ಯಾತಿ ಪಡೆದಿದ್ದ ನಟ ದ್ವಾರಕೀಶ್ ಅವರು ನಿನ್ನೆ ಹೃದಯಘಾತದಿಂದ ಸಾವನಪ್ಪಿದ್ದಾರೆ. ಇಂದು ಬೆಳಿಗ್ಗೆ ನಟ ಶಿವರಾಜಕುಮಾರ್ ಅವರು ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹುಸ್ಕೂರು ರಸ್ತೆಯಲ್ಲಿ ಇರುವ ದ್ವಾರಕೀಶ್ ನಿವಾಸದಲ್ಲಿ ಅವರ ಅಂತಿಮ ದರ್ಶನ ಪಡೆದರು. ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದ ಶಿವರಾಜಕುಮಾರ್ ಹುಸ್ಕುರು ರಸ್ತೆಯಲ್ಲಿರುವ. ನಿವಾಸದಲ್ಲಿ ಅಂತಿಮ ದರ್ಶನ ಪಡೆದರು. ದ್ವಾರಕೀಶ್ ಅವರ ಪಾರ್ಥಿವ ಶರೀರಕ್ಕೆ ಶಿವಣ್ಣ ನಮಿಸಿದ್ದಾರೆ. ಈ ವೇಳೆ ಮಾತಾನಾಡಿದ ಅವರು, ದ್ವಾರಕೀಶ್ ಕುಟುಂಬಸ್ಥರಿಗೆ ನಾವು ಚಿಕ್ಕವರಿದ್ದಾಗಿನಿಂದ ಒಳ್ಳೆಯ ಬಾಂಧವ್ಯ ಇತ್ತು ಎಂದರು. ದ್ವಾರಕೀಶ್ ನಮ್ಮ ಕುಟುಂಬದ ಸದಸ್ಯರು ಇದ್ದಂತೆ. ದ್ವಾರಕೀಶ್ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನ ಯಾರು ಮರೆಯುವುದಿಲ್ಲ. ದ್ವಾರಕೀಶ್ ಕುಟುಂಬದ ಜೊತೆಗೆ ನಾವೆಲ್ಲ ಇದ್ದೇವೆ.ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಆ ದೇವರು ನೀಡಲಿ ದ್ವಾರಕೀಶ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಶಿವರಾಜ್ ಕುಮಾರ್ ಸಂತಾಪ ಸೂಚಿಸಿದರು. ಕೆಲವೇ…

Read More

ಹಾಸನ : ಈ ಬಾರಿ ಲೋಕಸಭೆ ಚುನಾವಣೆಯ ನಂತರ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾಗಿರುವ ಎಚ್ ಡಿ ದೇವೇಗೌಡ ಅವರು ಭವಿಷ್ಯ ನುಡಿದರು. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಇಬ್ಬೀಡು ಗ್ರಾಮದಲ್ಲಿ ಜೆಡಿಎಸ್ ಬಿಜೆಪಿ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಈಗ ನಡೆಯುತ್ತಿರುವ ಚುನಾವಣೆ ದೇಶದ ಚುನಾವಣೆಯಾಗಿದ್ದು ದೇಶದ ಅಳಿವು ಉಳಿವುಗಳ ಬಗ್ಗೆ ಮತ್ತು ಅಂತರಾಷ್ಟ್ರೀಯ ಬಗ್ಗೆ ಹಾಗೂ ದೇಶದ ಸುಭದ್ರತೆ ಸಮಸ್ಯೆಗಳ ಬಗ್ಗೆ ಮಾತನಾಡಬೇಕು. ಆದರೆ, ಕಾಂಗ್ರೆಸ್ ಬರೀ ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಾ ಜನರ ದಾರಿ ತಪ್ಪಿಸುತ್ತಿದ್ದಾರೆ ಇದರಿಂದ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ ಎಂದರು. ದೇಶದ ಪ್ರಧಾನಮಂತ್ರಿಯಾಗುವ ಯೋಗ್ಯತೆ ಐಎನ್‌ಡಿಐಎ ನಲ್ಲಿ ಯಾರಿಗೂ ಇಲ್ಲ ಎಂಬುದು ನನಗೆ ಗೊತ್ತಿರೋ ವಿಚಾರ. ಅದಕ್ಕಾಗಿ ಎಲ್ಲರ ಬಳಿಯೂ ಹೋಗಿ ಬರಿಗೈಲಿ ವಾಪಸ್ಸು ಬರುತ್ತಿದ್ದೆ. ಇಡೀ ದೇಶದಲ್ಲಿ ಸತ್ಯ ಹೇಳೋದಾದ್ರೆ ಕರ್ನಾಟಕ ಸೇರಿದಂತೆ 3 ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದ್ದು ಉಳಿದೆಲ್ಲ ಕಡೆ ಚೆಲ್ಲಾಪಿಲ್ಲಿಯಾಗಿ…

Read More

ಬೆಂಗಳೂರು : ಹಿರಿಯ ನಟ ನಿರ್ದೇಶಕ ಹಾಗೂ ನಿರ್ಮಾಪಕರಾಗಿದ್ದ ದ್ವಾರಕೀಶ್ ಅವರು ನಿಧನರಾಗಿದ್ದು ಇಂದು ಮಧ್ಯಾಹ್ನದ ನಂತ್ರ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ದ್ವಾರಕೀಶ್​ ಪುತ್ರ ಯೋಗಿ ದ್ವಾರಕೀಶ್ ತಿಳಿಸಿದ್ರು. ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಅವರು, ಸರ್ಕಾರಿ ಗೌರವದೊಂದಿಗೆ ನಟ ದ್ವಾರಕೀಶ್ ಅಂತ್ಯಕ್ರಿಯೆ ನಡೆಯಲಿದೆ. ಇಂದು ಹಿರಿಯ ನಟ ದ್ವಾರಕೀಶ್ ಅಂತ್ಯಕ್ರಿಯ ನೆರವೇರಲಿದೆ ಎಂದು ಪುತ್ರ ಯೋಗೇಶ್ ದ್ವಾರಕೀಶ್ ಹೇಳಿಕೇ ನೀಡಿದ್ದಾರೆ.ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದೇವೆ. ಬೆಳಗ್ಗೆ 7:30 ರಿಂದ ಬೆಳಗ್ಗೆ 11:30 ವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಚಿತ್ರರಂಗದ ಗಣ್ಯರು ಅಭಿಮಾನಿಗಳು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಅಂತಿಮ ದರ್ಶನದ ಬಳಿಕ ದ್ವಾರಕೀಶ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ದ್ವಾರಕೀಶ್ ಪುತ್ರ ಯೋಗೇಶ್ ದ್ವಾರಕೀಶ್ ತಿಳಿಸಿದರು.

Read More

ಬೆಂಗಳೂರು : ಹಿರಿಯ ನಟ ನಿರ್ಮಾಪಕ ನಿರ್ದೇಶಕ ದ್ವಾರಕೀಶ್ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ಸ್ವಯಂ ಪ್ರೇರಿತವಾಗಿ ಕನ್ನಡ ಚಿತ್ರರಂಗ ಬಂದ್ ಮಾಡಲು  ನಿರ್ಧರಿಸಲಾಗಿದೆ ಎಂದು ಫಿಲಂ ಚೆಂಬರ್ ಅಧ್ಯಕ್ಷ ಎಂ. ಎನ್ ಸುರೇಶ್ ತಿಳಿಸಿದರು. ಇಂದು ದ್ವಾರಕೀಶ್ ಅವರ ನಿಧನದ ಹಿನ್ನೆಲೆ ಇವತ್ತು ಒಂದು ದಿನ ಸಿನಿಮಾ ಚಟುವಟಿಕೆಗಳನ್ನು ನಿಲ್ಲಿಸಿ, ಸ್ವಯಂ ಪ್ರೇರಿತರಾಗಿ ಬಂದ್ ಆಚರಿಸೋಣ, ಅವರನ್ನು ಗೌರವಯುತವಾಗಿ ಕಳಿಸಿಕೊಡೋಣ.ಅಲ್ಲದೇ ಅಲ್ಲದೇ ದ್ವಾರಕೀಶ್ ಅಂತ್ಯಕ್ರಿಯೆಗೆ ಸಂಬಂಧಿಸಿದಂತೆ ಸರ್ಕಾರದೊಂದಿಗೂ ಮಾತಾಡುವೆ ಎಂದು ಎನ್​,ಎಂ ಸುರೇಶ್​ ಹೇಳಿದ್ರು. ಹಾಗಾಗಿ ಇಂದು 10:30ರ ಶೋಗಳನ್ನು ಬಂದ್ ಮಾಡಲಾಗಿದ್ದು ಇಂದು ಮಧ್ಯಾಹ್ನ 1:00 ನಂತರ ಚಲನಚಿತ್ರ ಪ್ರದರ್ಶನ ನಡೆಯಲಿದೆ. ಸಿಂಗಲ್ ಸ್ಕ್ರೀನ್ ಮಲ್ಟಿಪ್ಲೆಕ್ಸ್ ನಲ್ಲಿ ಒಂದು ಶೋ ಬಂದ್ ಮಾಡಲು ನಿರ್ಧರಿಸಲಾಗಿದೆ. ಶೋ ಬಂದ್ ಬಗ್ಗೆ ಪ್ರದರ್ಶಕರ ವಲಯದಿಂದ ಮಾಹಿತಿ ಪಡೆಯಲಾಗಿದೆ ಎಂದು ಸುರೇಶ್ ತಿಳಿಸಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ 11 ಗಂಟೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು…

Read More

ನವದೆಹಲಿ: ಡೀಪ್ ಫೇಕ್ ತಂತ್ರಜ್ಞಾನ ಇದೀಗ ಬಾಲಿವುಡ್ ನಟ ಅಮಿರ್ ಖಾನ್ ಗೂ ಬಿಸಿ ತಟ್ಟಿದ್ದು, ನಿರ್ದಿಷ್ಟ ರಾಜಕೀಯ ಪಕ್ಷವೊಂದನ್ನು ಬೆಂಬಲಿಸುವ ರೀತಿಯಲ್ಲಿ ಸಾಮಾಜಿಕ ಜಾಲ ಜಾಲತಾಣದಲ್ಲಿ ಓಡಾಡುತ್ತಿರುವ ತಮ್ಮ ವಿಡಿಯೋ ನಕಲಿ ಎಂದು ಖ್ಯಾತ ನಟ ಅಮೀರ್ ಖಾನ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅಮೀರ್ ಪರ ವಕ್ತಾರರು, ತಮ್ಮ 35 ವರ್ಷಗಳ ಚಿತ್ರರಂಗದ ವೃತ್ತಿ ಜೀವನದಲ್ಲಿ ಅಮೀರ್ ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುವ ರೀತಿಯಲ್ಲಿ 6 ಡೀಪ್‌ಫೇಕ್ ತಂತ್ರಜ್ಞಾನ ಬಳಸಿ 27 ಸೆಕೆಂಡ್‌ಗಳ ವಿಡಿಯೋ ತಯಾರಿಸಲಾಗಿದೆ. ಇದು ಸಂಪೂರ್ಣ ನಕಲಿ. ಈ ಕುರಿತು ಈಗಾಗಲೇ ಸೈಬರ್ ಕ್ರೈಮ್ ವಿಭಾಗದಕ್ಕೆ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ. ಜಾಲತಾಣದಲ್ಲಿ ವೈರಲ್ ಆದ ವಿಡಿಯೋದಲ್ಲಿ ಪರೋಕ್ಷವಾಗಿ ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರ 15 ಲಕ್ಷ ರು. ಕಪ್ಪುಹಣ ವಾಪಸ್ ಯೋಜನೆ ಯನ್ನು ಟೀಕಿಸುವ ಮತ್ತು ನೇರವಾಗಿ ಕಾಂಗ್ರೆಸ್ ಅನ್ನು ಬೆಂಬಲಿಸುವಂತೆ ಅಮೀರ್ ಕೋರಿಕೆ ಸಲ್ಲಿಸಿದ ಅಂಶಗಳಿವೆ.

Read More

ಬೆಂಗಳೂರು : ಹೆಣ್ಣು ಮಕ್ಕಳ ಕೈಯಿಂದ ಜಮೀನು ಬರೆಸಿಕೊಂಡಿದ್ದೇನೆ ಎಂದು ಮಾಜಿ ಸಿಎಂ ಎಚ್.ಡಿ. ಸಮಾರಸ್ವಾಮಿಯವರು ಆಧಾರ ರಹಿತ ಮಾಡುತ್ತಿದ್ದಾರೆ. ಒಂದು ಕಾಲದಲ್ಲಿ ಬಂಡೆ ಒಡೆದಿದ್ದರೆ, ನನ್ನ ಜಮೀನಿನ ಬಂಡೆಯನ್ನು ಕಾನೂನು ಬದ್ಧವಾಗಿ ಒಡೆದಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕುಮಾರಸ್ವಾಮಿ ಅವರಿಗೆ ವೈಯಕ್ತಿಕವಾಗಿ ಗೌರವ ನೀಡುತ್ತಿದ್ದೇನೆ, ಮುಂದೆಯೂ ನೀಡುತ್ತೇನೆ. ಆದರೂ ಅವರು ಪದೇ ಪದೇ ನನ್ನ ಬಗ್ಗೆ ವೈಯಕ್ತಿಕ ವಿಚಾರವಾಗಿ ಬಂಡೆ ಒಡೆದ, ವಿಷ ಹಾಕಿದ ಹೆಣ್ಣು ಮಕ್ಕಳ ಕೈಯಿಂದ ಜಮೀನು ಬರೆಯಿಸಿಕೊಂಡಿದ್ದೇನೆ ಎಂದೆಲ್ಲಾ ಆಧಾರ ರಹಿತ ಟೀಕೆ ಮಾಡುತ್ತಿದ್ದಾರೆ ಎಂದರು. ಕುಮಾರಸ್ವಾಮಿ ಅವರು ಮಹಿಳೆಯರ ಕುರಿತ ತಮ್ಮ ನುಡಿಮುತ್ತುಗಳನ್ನು ಮರೆ ಮಾಚಿಕೊಂಡು ಜನರ ಗಮನ ಬೇರೆಡೆ ಸೆಳೆಯಲು ಈರೀತಿ ಆರೋಪ ಮಾಡುತ್ತಿದ್ದಾರೆ. ಆದರೆ, ಅವರ ಮಾತುಗಳಿಂದ ಮಹಿಳೆಯರಿಗೆ ಆಗಿರುವ ಅವಮಾನವನ್ನು ಅವರ ಮನಸ್ಸಿನಿಂದ ತೆಗೆಯಲು ಸಾಧ್ಯವಿಲ್ಲ ಎಂದರು. ಕುಮಾರಸ್ವಾಮಿ ಇಂತಹ ಹೇಳಿಕೆ ಕೊಟ್ಟರೂ ಬಿಜೆಪಿಯವರು ಯಾಕೆ ಪ್ರತಿಕ್ರಿಯಿಸುತ್ತಿಲ್ಲ. ಬಿಎಸ್‌ವೈ ಯಾಕೆ…

Read More