Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಇಂದು ಮನೆಯ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿಯ ಯಾಸೀನ್ ಸೇರಿದಂತೆ ಆರು ಆರೋಪಿಗಳನ್ನು ಪೊಲೀಸರು ನಿನ್ನೆ ಬಂಧಿಸಿದ್ದರು.ಅಪ್ರಾಪ್ತ ಬಾಲಕರು ಸೇರಿದಂತೆ ಬಸವನಹಳ್ಳಿ ಪೊಲೀಸರು 6 ಮಂದಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದರು. ರಾತ್ರಿ ಚಿಕ್ಕಮಂಗಳೂರಿನ ಜಡ್ಜ್ ನಿವಾಸದಲ್ಲಿ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಜಡ್ಜ್ ನಿವಾಸದಲ್ಲಿ ಆರು ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ಜಡ್ಜ್ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ. ನಾಲ್ವರು ಅಪರಾಪ್ತರನ್ನು ಹಾಸನದ ರಿಮೈಂಡ್ ಹೋಂ ಗೆ ಶಿಫ್ಟ್ ಮಾಡಲಾಗಿದೆ ಸುಧಾ ಎಂಬವರ ಮನೆಯ ಮೇಲೆ ಆರೋಪಿಗಳು ಕಲ್ಲುತೂರಾಟ ನಡೆಸಿದರು ಸುಧಾ ನೀಡಿದ ದೂರಿನ ಮೇರೆಗೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು ವಿಜಯಪುರ ಬಡಾವಣೆಯಲ್ಲಿ ಈ ಒಂದು ಘಟನೆ ನಡೆದಿತ್ತು.
ಉಡುಪಿ : ಪಾಕಿಸ್ತಾನದಲ್ಲಿರುವವರಿಗೆ ಬಾರತೀಯ ನೌಕಾಪಡೆಗೆ ಸಂಬಂಧಿಸಿದ ಗೌಪ್ಯ ಮಾಹಿತಿ ಹಂಚಿಕೊಂಡ ಆರೋಪದಲ್ಲಿ ಉಡುಪಿಯಲ್ಲಿ ಮತ್ತೊಬ್ಬನ ಬಂಧನವಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಬಂಧಿತ ಆಲಿಫ್ ಇಸ್ಲಾಂ ಬಾಂಗ್ಲೇದೇಶ ಮೂಲದವನೇ ಎಂಬ ಶಂಕೆಯೂ ವ್ಯಕ್ತವಾಗಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ 21 ವರ್ಷದ ಆಲಿಫ್ ಇಸ್ಲಾಂ ಎಂದು ಗುರುತಿಸಲಾಗಿದೆ. ಆತ ಪ್ರಸ್ತುತ ಕೇರಳದ ಇಡುಕ್ಕಿ ಜಿಲ್ಲೆಯ ಮರಾಯು ಗ್ರಾಮದಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ. ಬಂಧಿತ ಬಾಂಗ್ಲಾದೇಶದ ಪ್ರಜೆ ಆಗಿರಬಹುದೆಂಬ ಅನುಮಾನವನ್ನೂ ಪೊಲೀಸರು ವ್ಯಕ್ತಪಡಿಸಿದ್ದಾರೆ. ಮಲ್ಪೆ ಬಂದರಿನ ಕೊಚ್ಚಿನ್ ಶಿಪ್ ಯಾರ್ಡ್‌ಗೆ ಸಂಬಂಧಿಸಿದ ನೌಕರರು ನೌಕಾಪಡೆಯ ಹಡಗುಗಳ ಸಂಖ್ಯೆಗಳ ಗೋಪ್ಯ ಮಾಹಿತಿಯನ್ನು ವಾಟ್ಸ್ಆ್ಯಪ್ ಮತ್ತು ಫೇಸ್‌ಬುಕ್ ಮೂಲಕ ಪಾಕಿಸ್ತಾನದ ಜತೆ ಹಂಚಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಈ ಪ್ರಕರಣದಲ್ಲಿ ಈಗಾಗಲೇ 2025ರ ನವೆಂಬರ್ ಹಾಗೂ ಡಿಸೆಂಬರ್ನಲ್ಲಿ ಗುಜರಾತ್ ಮೂಲದ ಹಿರೇಂದ್ರ ಕುಮಾರ್,…
ಬೆಂಗಳೂರು : ಸಿದ್ದರಾಮಯ್ಯ ಬಜೆಟ್ ಮಂಡನೆಗೆ ಸಿದ್ಧತೆ, ಸಿಎಂ ಗಾದಿಗಾಗಿ ಡಿಕೆ ಶಿವಕುಮಾರ್ ಸರ್ಕಸ್ ಮಧ್ಯೆ ಕಾಂಗ್ರೆಸ್‌ನಲ್ಲಿ ವಿದೇಶಿ ಪ್ರವಾಸ ರಾಜಕೀಯ ಜೋರಾಗಿ ನಡೆಯುತ್ತಿದೆ. ಸುಮಾರು 10ಕ್ಕೂ ಹೆಚ್ಚು ಎಂಎಲ್‌ಎಗಳು, ಎಂಎಲ್‌ಸಿಗಳು ಇವತ್ತು ರಾತ್ರಿ ವಿಮಾನ ಹತ್ತಲು ಸಿದ್ದರಾಗಿದ್ದಾರೆ. ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್‌ಗೆ ತೆರಳಲಿದ್ದು ಮಾರ್ಚ್ ಮೊದಲ ವಾರ ವಾಪಸ್ ಬರಲಿದ್ದಾರೆ. ಮೂಲಗಳ ಪ್ರಕಾರ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ ಈ ಟೂರ್ ಪ್ಲಾನ್ ನಿಗದಿಯಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ವೆಂಕಟೇಶ್ ಈ ಪ್ರವಾಸದಿಂದ ದೂರ ಉಳಿದಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ದೇವೇಂದ್ರಪ್ಪ, ಪುಟ್ಟರಂಗಶೆಟ್ಟಿ, ನಾಗರಾಜ್ ಹಾಗು ಹಂಪನಗೌಡ ಬಾದರ್ಲಿ, ಎಂಎಲ್ಸಿ ವಸಂತಕುಮಾರ್, ಹೆಚ್‍ಡಿ ತಮ್ಮಯ್ಯ ಆಗಮಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಇರುವ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.ಇದೆ ವೇಳೆ ನಾವು ಸ್ವಂತ ಖರ್ಚಿನಲ್ಲಿ ಪ್ರವಾಸಕ್ಕೆ ಹೋಗುತ್ತಿದ್ದೇವೆ ಎಂದು ಏರ್ಪೋರ್ಟ್ ನಲ್ಲಿ ಸಿಂಧನೂರಿನ ಶಾಸಕ ಹಂಪನಗೌಡ ಬಾದರ್ಲಿ ಹೇಳಿಕೆ ನೀಡಿದರು. ಪಶು ಸಂಗೋಪನೆ ಇಲಾಖೆಯ ಪ್ರವಾಸ ಅಂತಿದ್ದಾರೆ ಆದರೆ ಇದು ಪಶುಸಂಗೋಪನೆ…
ಬೀದರ್ : ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಕೇಂದ್ರದ ಮಾಜಿ ಸಚಿವ ಭಗವಂತ್ ಖೂಬಾ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಸುರೇಶ್ ಎಸ್. ಬಿರಾದಾರ್ ಅವರು ನೀಡಿದ ದೂರಿನ ಮೇರೆಗೆ ಭಾಲ್ಕಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲಿಸಲಾಗಿದೆ. ಫೆ.7ರಂದು ವಾಟ್ಸಪ್‌ನಲ್ಲಿ ಹರಿದಾಡಿದ ವಿಡಿಯೋದಲ್ಲಿ ಭಗವಂತ್ ಖೂಬಾ ಅವರು ಈಶ್ವರ್ ಖಂಡ್ರೆ ಅವರನ್ನು ಏಕವಚನದಲ್ಲಿ ಅವಾಚ್ಯವಾಗಿ ಬೈದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈಶ್ವರ್ ಖಂಡ್ರೆ ಅವರ ಬಗ್ಗೆ ಕೀಳುಮಟ್ಟದಲ್ಲಿ ಮಾತನಾಡಿರುವುದರಿಂದ ಅನುಯಾಯಿಗಳಿಗೆ ನೋವಾಗಿದೆ. ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಅವುಗಳಿಂದ ಭಾವನೆಗಳಿಗೆ ಧಕ್ಕೆಯಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಭಗವಂತ್ ಖೂಬಾ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಪರಿಸ್ಥಿತಿ ಸಂಘರ್ಷಕ್ಕೆ ದಾರಿ ಮಾಡಿಕೊಡಬಹುದು ಎಂದು ದೂರಿನಲ್ಲಿ ಎಚ್ಚರಿಸಲಾಗಿದೆ. ಈ ಸಂಬಂಧ ಭಾಲ್ಕಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಬೋಧಕ, ಬೋಧಕೇತರರಿಗೆ ಡಿಜಿಟಲ್ ಹಾಜರಾತಿ ಕಡ್ಡಾಯಗೊಳಿಸಿದ್ದು, ಇದೀಗ ರಾಜ್ಯ ಸರ್ಕಾರ ಮುಂದಿನ ಶೈಕ್ಷಣಿಕ ಸಾಲಿನಿಂದ ವಿದ್ಯಾರ್ಥಿಗಳಿಗೆ ಡಿಜಿಟಲ್ ಹಾಜರಾತಿ ಅನುಷ್ಠಾನಕ್ಕೆ ತರಲು ಸಿದ್ಧತೆ ನಡೆಸಿದೆ. ಕರ್ನಾಟಕ ಅಡ್ವಾನ್ಸ್ ಅಟೆಂಡೆನ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (ಕರ್ತವ್ಯ) ಮೊಬೈಲ್ ಅಪ್ಲಿಕೇಶನ್‌ನಲ್ಲಿ ಕೃತಕ ಬುದ್ಧಿಮತ್ತೆ, ಭೌಗೋಳಿಕ ಮಾಹಿತಿ ವ್ಯವಸ್ಥೆ ಮೂಲಕ ಜಿಯೋ ಫೆನ್ಸಿಂಗ್ ಮಾಡಿ ಮುಖಚಹರೆಯಲ್ಲಿ ಹಾಜರಾತಿ ದಾಖಲಿಸಿಕೊಳ್ಳಲಾಗುತ್ತದೆ. ಶಿಕ್ಷಕರು, ಸಿಬ್ಬಂದಿ ತಮ್ಮ ಕರ್ತವ್ಯ ಸ್ಥಳದಲ್ಲಿ ಪ್ರತಿದಿನ 2 ಬಾರಿ (ಇನ್ ಟೈಮ್, ಔಟ್ ಟೈಮ್) ಹಾಜರಾತಿ ದಾಖಲಿಸುವುದು ಕಡ್ಡಾಯವಾಗಿರಲಿದೆ ಎಂದು ಆದೇಶದಲ್ಲಿ ತಿಳಿಸಿದೆ. ಶಾಲಾ ಶಿಕ್ಷಣ ಇಲಾಖೆಯಲ್ಲಿ ಖಾಯಂಮಾತಿಯಾಗಿರುವ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಯ ಶಿಕ್ಷಕರು, ಪಿಯು ಉಪನ್ಯಾಸಕರು, ಮುಖ್ಯ ಶಿಕ್ಷಕರು, ಪ್ರಾಂಶುಪಾಲರು, ಸಿಬ್ಬಂದಿ, ಇಲಾಖೆಯ ಕಚೇರಿಗಳಲ್ಲಿನ ಬೋಧಕೇತರ ಸಿಬ್ಬಂದಿ ಮತ್ತು ಅಧಿಕಾರಿಗಳು ತಮ್ಮ ಹಾಜರಾತಿಯನ್ನು ಮೊಬೈಲ್ ಅಪ್ಲಿಕೇಷನ್ನಲ್ಲಿ ಹಾಕಬೇಕಿದೆ. ಕರ್ತವ್ಯ ಸ್ಥಳದಲ್ಲಿ ಪ್ರತಿದಿನ ಹಾಗೂ ತರಬೇತಿ ಸಮಯದಲ್ಲಿ ತರಬೇತಿ ಕೇಂದ್ರದಲ್ಲಿ, ಕರ್ನಾಟಕ ಶಾಲಾ ಪರೀಕ್ಷೆ…
ಬೆಂಗಳೂರು : ಜಾನುವಾರು ಸಾಗಿಸುತ್ತಿದ್ದವರಿಂದ ಗೋರಕ್ಷಕರ ಮೇಲೆ ಹಕ್ಕೆ ಮಾಡಿರುವ ಆರೋಪ ಕೇಳಿ ಬಂದಿದೆ ಬೆಂಗಳೂರು ಮೂಲದ ಪುಷ್ಪಲತಾ ತಂಡದ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿ ಗೋರಕ್ಷಕರ ತಂಡದ ಮೇಲೆ ಹಲ್ಲೆ ನಡೆದಿದೆ. ಅಕ್ರಮವಾಗಿ ಕಂಟೇನರ್ ಗಳಲ್ಲಿ ಗೋವು ಸಾಗಿಸುತ್ತಿದ್ದರು ಈ ವೇಳೆ ಗೋ ರಕ್ಷಕರು ಕಂಟೇನರ್ ಅನ್ನು ಅಡ್ಡಗಟ್ಟಿದ್ದಾರೆ. ಇವಳೇ ಗೋವು ಸಾಧಿಸುತ್ತಿದ್ದವರು ಪುಷ್ಪಲತಾ ಮತ್ತು ತಂಡದ ಮೇಲೆ ಮರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಬೆಂಗಳೂರು : ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದಿಂದ ಕೈಬಿಡುವಂತೆ ಕೋರಿದ ಮರುಪರಿಶೀಲನ ಅರ್ಜಿ ಇದೀಗ ಕೋರ್ಟ್ ವಜಾ ಗೊಳಿಸಿದೆ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಈ ಒಂದು ಆದೇಶ ಹೊರಡಿಸಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಸೂರಜ್ ರೇವಣ್ಣ ಮರು ಪರಿಶೀಲನ ಅರ್ಜಿಯನ್ನು ಸಲ್ಲಿಸಿದ್ದರು. ಇದೀಗ ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಸಂತೋಷ್ ಗಜಾನನ ಭಟ್ ಅರ್ಜಿಯ ವಿಚಾರಣೆ ನಡೆಸಿ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ನೀನೇ ಅವರ 49ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಅಭಿಮಾನಿಗಳು ಭರ್ಜರಿ ಹುಟ್ಟು ಹಬ್ಬ ಆಚರಣೆ ಮಾಡಿದ್ದರು, ಇದೀಗ ಖ್ಯಾತ ಜ್ಯೋತಿಷಿ ಒಬ್ಬರು ಜೂನ್ ನಲ್ಲಿ ನಟ ದರ್ಶನ್ ಅವರು ಜೈಲಿನಿಂದ ಬಿಡುಗಡೆಯಾಗುತ್ತಾರೆ ಎಂದು ಪ್ರಶಾಂತ್ ಕಿಣಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಇದೇ ಜ್ಯೋತಿಷಿಯು ರಾಜಕಾರಣಿಯೊಬ್ಬರು ಸಾವಿಗೀಡಾಗುತ್ತಾರೆ ಎಂದು ಭವಿಷ್ಯ ನುಡಿದ ಬೆನ್ನಲ್ಲೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮೃತಪಟ್ಟಿದ್ದರು. ಆ ಸಂದರ್ಭದಲ್ಲಿ ಜ್ಯೋತಿಷಿ ಹೇಳಿದ್ದ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಸದ್ಯ ನಟ ದರ್ಶನ್ ಜಾಮೀನಿನ ಬಗ್ಗೆಗೂ ಹೇಳಿರುವುದು ವೈರಲ್ ಆಗಿದೆ. ಪ್ರಶಾಂತ್ ಕಿಣಿ ರಾಜಕೀಯ, ಸಿನಿಮಾ, ಕ್ರಿಕೆಟ್ ಹಾಗೂ ಹಲವು ಪ್ರಚಲಿತ ವಿದ್ಯಮಾನಗಳ ಕುರಿತು ಟ್ವೀಟ್ ಮಾಡಿ ಭವಿಷ್ಯ ಹೇಳುತ್ತಾರೆ. ಸದ್ಯ ನಟ ದರ್ಶನ್ ಬಗ್ಗೆ ಟ್ವೀಟ್ ಮಾಡಿರುವ ಪ್ರಶಾಂತ್ ಕಿಣಿ, ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಜೂನ್ 2026 ರ…
ಬೆಂಗಳೂರು : ಬೆಂಗಳೂರಿನಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು, ಬಿಡದಿ ಬಳಿ ರೈಲು ಒಂದು ಹಳಿ ತಪ್ಪಿದ್ದು, ಭಾರಿ ಅನಾಹುತ ಒಂದು ತಪ್ಪಿದೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಿಡದಿಯಲ್ಲಿ ಗೂಡ್ಸ್ ರೈಲು ಒಂದು ಹಳಿ ತಪ್ಪಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಈ ಒಂದು ಗೂಡ್ಸ್ ರೈಲು ತೆರಳುತ್ತಿತ್ತು. ಈ ವೇಳೆ ಗೂಡ್ಸ್ ರೈಲು ಹಳಿ ತಪ್ಪಿದ್ದರಿಂದ ಭಾರಿ ಅನಾಹುತ ಒಂದು ತಪ್ಪಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಪ್ಯಾಸೆಂಜರ್ ರೈಲು ಓಡಾಡದಿದ್ದರಿಂದ ದುರಂತ ತಪ್ಪಿದೆ.
ಬೆಂಗಳೂರು : ಕಾಂಗ್ರೆಸ್ ಭವನಗಳಿಗೆ ಸರ್ಕಾರಿ ಜಮೀನು ಬಳಕೆ ಮಾಡಿರುವುದಾಗಿ ಬಿಜೆಪಿ ಆರೋಪ ಮಾಡಿದೆ. ಇದೀಗ ಬಿಜೆಪಿ ನಾಯಕರ ಆರೋಪಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಭವನಗಳಿಗೆ ನಾವು ಸರ್ಕಾರಿ ಜಾಗ ಬಳಸಿಕೊಳ್ಳುತ್ತಿದ್ದೇವೆ. ಬಿಜೆಪಿಯವರು ನೂರಾರು ಎಕರೆ ಕೊಟ್ಟಿಲ್ವೇ ಎಂದು ಪ್ರಶ್ನಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಚಾಣಕ್ಯ ವಿಶ್ವವಿದ್ಯಾಲಯ, ಆರ್ ಎಸ್ ಎಸ್ ಕಚೇರಿಗೆ ಬಿಜೆಪಿ ಅವರು ನೂರಾರು ಎಕರೆ ಭೂಮಿ ಕೊಟ್ಟಿಲ್ಲವೇ? 5 ರಿಂದ 10 ಸಾವಿರ ಅಡಿ ಜಾಗ ಮಂಜೂರು ಮಾಡುತ್ತಿದ್ದೇವೆ. ಬಿಜೆಪಿ ಅವಧಿಯಲ್ಲಿ ಬೆಂಗಳೂರಲ್ಲಿ ನೂರಕ್ಕೂ ಹೆಚ್ಚು ಕಡೆಗಳಲ್ಲಿ ವಿವಿಧ ಟ್ರಸ್ಟ್ ಗಳ ಹೆಸರಿನಲ್ಲಿ ಜಾಗವನ್ನು ಪಡೆದಿದ್ದಾರೆ. ಚಾಣಕ್ಯ ವಿಶ್ವವಿದ್ಯಾಲಯಕ್ಕೆ ನೀಡಿರುವ ಜಾಗ ಪ್ರತಿ ಎಕರೆಗೆ 10 ಕೋಟಿ ಇದೆ. ಆದರೆ ಬಿಜೆಪಿಗರು ಎಕರೆಗೆ 50 ಲಕ್ಷದ ದರದಲ್ಲಿ ಮಂಜೂರು ಮಾಡಿದೆ 100 ಎಕರೆ ಜಾಗ ಮಂಜೂರು ಮಾಡಿದ್ದಾರೆ. ಬಿಜೆಪಿಯವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದರು. ಇಂತಹ ನೂರಾರು ಉದಾಹರಣೆಗಳನ್ನು ನಾನು ನೀಡಬಲ್ಲೆ, ಬಿಜೆಪಿಯವರು ನಮಗೆ…














