Author: kannadanewsnow05

ಬೆಂಗಳೂರು : ಎಂಟು ವರ್ಷಗಳ ಹಿಂದೆ ಎಂಜಿನಿಯರಿಂಗ್ ಓದುವ ಸಲುವಾಗಿ ನಗರಕ್ಕೆ ಬಂದಿದ್ದ ಯುವಕನೊಬ್ಬ, ನಾಗವಾರ ಸಮೀಪ ಪ್ರತಿಷ್ಠಿತ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದ. ಆದರೆ ಅಂತಿಮ ವರ್ಷದಲ್ಲಿ ಬಿಇ ಅರ್ಧಕ್ಕೆ ಮೊಟಕುಗೊಳಿಸಿದ ಆತ, ಸುಲಭವಾಗಿ ಹಣ ಸಂಪಾದನೆಗೆ ಡ್ರಗ್ಸ್ ದಂಧೆಗಿಳಿದು ಈಗ ಜೈಲು ಸೇರಿದ್ದಾನೆ. ಹೌದು ಬೆಂಗಳೂರಿನಲ್ಲಿ ಬಿಇ ಓದನ್ನು ಬಂದಿದ್ದ ಯುವಕ ರಿಜ್ವಾನ್ ಅರ್ಧಕ್ಕೆ ನಿಲ್ಲಿಸಿದ ಬಳಿಕ ಆತ ಬೇಗೂರು ಹತ್ತಿರದ ಕ್ರೀಡಾ ಕ್ಲಬ್‌ನಲ್ಲಿ ಈಜು ತರಬೇತುದಾರನಾಗಿ ಸೇರಿಕೊಂಡಿದ್ದ ಎಂದು ಹೇಳಲಾಗುತ್ತಿದೆ.ಇದೀಗ ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಖಾಸಗಿ ಕ್ರೀಡಾ ಕ್ಲಬ್‌ನ ಈಜು ತರಬೇತುದಾರ ಸೇರಿದಂತೆ ಇಬ್ಬರನ್ನು ಸಿಸಿಬಿ ಹಾಗೂ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಪ್ರತ್ಯೇಕವಾಗಿ ಸೆರೆ ಹಿಡಿದಿದ್ದಾರೆ. ಆಫ್ರಿಕಾ ಮೂಲದ ಅಮದೌ ಸಿಡಿಬೆ ಬೌಬಕರ್ ಹಾಗೂ ಕೇರಳದ ರಿಜ್ವಾನ್ ರಜಾಕ್ ಬಂಧಿತರಾಗಿದ್ದು, ಆರೋಪಿಗಳಿಂದ 5.5 ಕೇಜಿ ಗಾಂಜಾ ಹಾಗೂ 24 ಗ್ರಾಂ ಕೊಕೇನ್ ಸೇರಿ 21.75 ಲಕ ಲಕ್ಷ ಮೌಲ್ಯದ ಮೌಲ್ಯದ ಡ್ರಗ್ಸ್ ಜಪ್ತಿ…

Read More

ಧಾರವಾಡ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಹಾಗೂ ಮಧ್ಯ ಸಾಗಾಟದ ಮೇಲೆ ಅಧಿಕಾರಿಗಳು ಕಣ್ಣಿಟ್ಟಿದ್ದು, ಇದೀಗ ಧಾರವಾಡದಲ್ಲಿ ವಕೀಲರೊಬ್ಬರಿಗೆ ಸೇರಿದ ಫ್ಲ್ಯಾಟ್ ವೊಂದರಲ್ಲಿ ಕಂತೆ ಕಂತೆ ನೋಟುಗಳು ಸಿಕ್ಕಿರುವ ಘಟನೆ ಮಂಗಳವಾರ ನಗರದಲ್ಲಿ ರಾತ್ರಿ ನಡೆದಿದೆ. ದಾಳಿಗೆ ಹೋದ ಅಬಕಾರಿ ಅಧಿಕಾರಿಗಳಿಗೆ ಸುಮಾರು 20 ಕೋಟಿಗೂ ಅಧಿಕ ಹಣ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಇದು ರಾಜ್ಯದಲ್ಲಿ ಚುನಾವಣೆ ಘೋಷಣೆಯಾದ ನಂತರ ವಶಕ್ಕೆ ಪಡೆದ ಅತಿದೊಡ್ಡ ಮೊತ್ತದ ಹಣವಾಗಿದೆ ಎಂದು ಹೇಳಲಾಗುತ್ತಿದೆ. ಧಾರವಾಡದ ದಾಸನಕೊಪ್ಪ ಸರ್ಕಲ್ ಬಳಿ ಇರುವ ಆರ್ಣಾ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯ ಫ್ಲ್ಯಾಟ್ ವೊಂದರಲ್ಲಿ ಮದ್ಯದ ದಾಳಿಗೆ ಹೋದ ಅಬಕಾರಿ ಅಧಿಕಾರಿಗಳಿಗೆ ಈ ಹಣ ಸಿಕ್ಕಿದೆ.ಖ್ಯಾತ ಗುತ್ತಿಗೆದಾರ ರೊಬ್ಬರ ಖಾತೆ ನಿರ್ವಹಿಸುತ್ತಿದ್ದಾರೆ ನ್ನಲಾದ ವಕೀಲರೂ ಆಗಿರುವ ಬಸವರಾಜ ದತ್ತೂನವ‌ರ್ ಎಂಬುವರಿಗೆ ಸೇರಿದ ಫ್ಲ್ಯಾಟ್ ಇದಾಗಿದೆ ಎಂದು ತಿಳಿದುಬಂದಿದೆ. ಫ್ಲಾಟ್ ನಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿಡಲಾಗಿದೆ ಎಂಬ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ರಾತ್ರಿ ದಾಳಿ…

Read More

ಬೆಂಗಳೂರು : ಹಿರಿಯ ನಟ ನಿರ್ಮಾಪಕ ನಿರ್ದೇಶಕರಾಗಿರುವ ದ್ವಾರಕೀಶ್ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಒಂದು ದಿನ ಕನ್ನಡ ಚಿತ್ರರಂಗ ಬಂದ್ ಇರಲಿದೆ ಎಂದು ಫಿಲಂ ಚೇಂಬರ್ ಅಧ್ಯಕ್ಷ ಎನ್ಎಂ ಸುರೇಶ್ ತಿಳಿಸಿದರು. ನಾಳೆ ಚಿತ್ರರಂಗ ಬಂದ್ ಮಾಡಿ ನಟ ದ್ವಾರಕೀಶ್ ಅವರಿಗೆ ಗೌರವ ಕೊಡುಲಾಗುತ್ತದೆ. ದ್ವಾರಕೀಶ್ ಗೆ ಗೌರವ ಕೊಡುವುದು ನಮ್ಮ ಕರ್ತವ್ಯವಾಗಿದೆ. ದ್ವಾರಕೀಶ್ ನಿಧನದಿಂದ ಚಿತ್ರರಂಗಕ್ಕೆ ಬಹಳ ನಷ್ಟವಾಗಿದೆ. ನಾಳೆ ಒಂದು ದಿನ ಚಿತ್ರರಂಗದ ಚಟುವಟಿಕೆ ಬೇಡ ಹೀಗಾಗಿ ಎಲ್ಲಾ ಕಲಾವಿದರಿಗೂ ನಾನು ಮನವಿ ಮಾಡುತ್ತೇನೆ ಎಂದರು. ಬೆಳಿಗ್ಗೆಯಿಂದ ಮಧ್ಯಾಹ್ನ 1:00 ವರೆಗೆ ಯಾವುದೇ ಚಲನಚಿತ್ರಗಳನ್ನು ಪ್ರದರ್ಶಿಸದೆ ಬಂದ್ ಮಾಡಲಾಗಿದೆ ಮಲ್ಟಿಪ್ಲೆಕ್ಸ್ ಸೇರಿದಂತೆ ಹಲವು ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನಕ್ಕೆ ಚಲನಚಿತ್ರ ಪ್ರದರ್ಶಿಸದಿರಲು ಚಿತ್ರರಂಗ ನಿರ್ಧರಿಸಿದೆ. ನಾಳೆ ಒಂದು ದಿನ ಚಿತ್ರರಂಗದ ಚಿರೋಟಿಗೆ ಬಂದು ಎಲ್ಲಾ ಕಲಾವಿದರಿಗೂ ನಾನು ಮನವಿ ಮಾಡುತ್ತೇನೆ. ಎಂದು NM ಸುರೇಶ ಹೇಳಿಕೆಯ ನೀಡಿದ್ದು ನಾಳೆ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ಮನವಿ ಮಾಡಿಕೊಂಡಿದ್ದಾರೆ. ಅಂತ್ಯಕ್ರಿಯೆ…

Read More

ಬೆಂಗಳೂರು : ಇಂದು ಕನ್ನಡ ಚಿತ್ರರಂಗಕ್ಕೆ ಅತ್ಯಂತ ತುಂಬಲಾರದಂತಹ ನಷ್ಟವಾಗಿದ್ದು ಹಿರಿಯ ನಟ ನಿರ್ದೇಶಕ ನಿರ್ಮಾಪಕ ರಾಗಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಆದರೆ ಇವರ ಸಾವು ಹಾಗೂ ಇವರ ಪತ್ನಿ ಅಂಬುಜ ಅವರ ಸಾವು ಕೂಡ ಒಂದೇ ದಿನಾಂಕದಂದು ಸಾವನ್ನಪ್ಪಿದ್ದರೆ. ಈ ವಿಷಯದ ಕುರಿತಾಗಿ ಅವರ ಪತ್ರ ಯೋಗೇಶ್ ಮಾತನಾಡಿದ್ದು ತಂದೆ ಹಾಗೂ ತಾಯಿ ಇಬ್ಬರು ಒಂದೇ ದಿನಾಂಕದಂದು ಮೃತಪಟ್ಟಿದ್ದಾರೆ ತಾಯಿ ಅಮೃತ ಅವರು 2021 ಏಪ್ರಿಲ್ 16ರಂದು ಸಾವನ್ನಪ್ಪಿದ್ದರೆ, ನಟ ದ್ವಾರಕೀಶ್ ಅವರು ಎಪ್ರಿಲ್ 16 2018 ಅಂದರೆ ಇವತ್ತು ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ 9:30ಕ್ಕೆ ದ್ವಾರಕೀಶ್ ಉಸಿರು ಚೆಲ್ಲಿದರು ತಾಯಿ ಹಾಗೂ ತಂದೆ ಒಂದೇ ದಿನಾಂಕದಲ್ಲಿ ಸಾವನಪ್ಪಿದ್ದಾರೆ ಎಂದರು. ನಮ್ಮ ತಾಯಿ ಅಂಬುಜಾ ಅವರು 2021 ಏಪ್ರಿಲ್ 16 ಬೆಳಗ್ಗೆ 9:45 ಕ್ಕೆ ಮೃತಪಟ್ಟಿದ್ದಾರೆ.ಅದೇ ರೀತಿಯಾಗಿ ಇಂದು ನಮ್ಮ ತಂದೆಯವರು ಕೂಡ 16 2024 ರಂದು ಬೆಳಿಗ್ಗೆ 9.45 ಕ್ಕೆ ಅವರು ಸಾವನ್ನಪ್ಪಿದ್ದಾರೆ. ಆದರೆ ತಿಥಿಯ ಪ್ರಕಾರ…

Read More

ತುಮಕೂರು : ತುಮಕೂರಿನ ಕುಂಚಿಟಿಗರ ಭವನದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಸಮಾವೇಶ ನಡೆಯುತ್ತಿರುವಾಗ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ದೇವೇಗೌಡರ ವಿರುದ್ಧ ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಇದೀಗ ದೇವೇಗೌಡರಿಗೆ ಭದ್ರತಾ ವೈಫಲ್ಯವಾಗಿದೆ ಎಂದು ಜೆಡಿಎಸ್ ಹಾಗೂ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿವೆ. ಮಾಜಿ ಪ್ರಧಾನಿ ದೇವೇಗೌಡರಿಗೆ ಭದ್ರತಾ ವೈಫಲ್ಯವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಹಕಾರ ಸಚಿವ ಕೆಎನ್ ರಾಜಣ್ಣ ಪ್ರಚೋದನೆಯಿಂದ ಗಲಾಟೆ ಮಾಡಲಾಗಿದೆ. ಪ್ರಚಾರ ಸಭೆಗೆ ನುಗ್ಗಿ ಗಲಾಟೆ ಮಾಡಿದ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ಸ್ಥಳದಲ್ಲಿ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಪೊಲೀಸರನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಲಾಗಿದೆ. ಜೆಡಿಎಸ್ ಪಕ್ಷದ ಕಾನೂನು ವಿಭಾಗದ ಅಧ್ಯಕ್ಷ ಎಪಿ ರಂಗನಾಥ್ ಉಭಯ ಪಕ್ಷಗಳ ಪರವಾಗಿ ದೂರು ನೀಡಿದ್ದಾರೆ. ಅಷ್ಟಕ್ಕೂ ನಡೆದಿದ್ದೇನು? ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ವಿ ಸೋಮಣ್ಣ ಪರ ಚುನಾವಣಾ ಪ್ರಚಾರಕ್ಕೆ ದೇವೇಗೌಡರು ತುಮಕೂರಿಗೆ ಆಗಮಿಸಿದ್ದರು. ತುಮಕೂರಿನ ಕುಂಚಿಟಿಗರ ಭವನದಲ್ಲಿ ಮೈತ್ರಿ ಪಕ್ಷದ ಸಮಾವೇಶ ನಡೆಯುತ್ತಿತ್ತು. ಈ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತರ…

Read More

ಕಲಬುರಗಿ : ಕಲ್ಬುರ್ಗಿ ಜಿಲ್ಲೆಯನ್ನು ಅಗ್ರಿಕಲ್ಚರ್ ಹಬ್ ಮಾಡಲು ನಿರ್ಧರಿಸಿದ್ದು ಹಾಗಾಗಿ ಮುಂದಿನ ಆರು ತಿಂಗಳಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಅಗ್ರಿಕಲ್ಚರ್ ಹಬ್ ಮಾಡಲು 39 ಕೋಟಿ ವೆಚ್ಚವನ್ನು ಭರಿಸಲಾಗುತ್ತದೆ ಎಂದು ಕಲ್ಬುರ್ಗಿಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು. ಜಿಲ್ಲೆಯ ರೈತರು ಬೆಳೆಗಳ ಸಂರಕ್ಷಣೆ, ಪೋಷಣೆ ಹಾಗೂ ಉತ್ತಮ ಮಾರುಕಟ್ಟೆ ಕಲ್ಪಿಸುವ ಉದ್ದೇಶ ಹೊಂದಿದ್ದು ಈ ನಿಟ್ಟಿನಲ್ಲಿ ಕೋಲ್ಡ್ ಸ್ಟೋರೇಜ್, ಕಸ್ಟಮ್ ಹೈರ್ ಸೆಂಟರ್, ಆಧುನಿಕ ಉಪಕರಣಗಳ ವಿತರಣೆ ಕೇಂದ್ರ, ವ್ಯಾಲ್ಯು ಎಡಿಷನ್ ಸೆಂಟರ್ ಸೇರಿದಂತೆ ಹಲವಾರು ಯೋಜನೆಗಳನ್ನು ಮುಂದಿನ ಆರು ತಿಂಗಳಲ್ಲಿ ಜಾರಿಗೆ ತರುವ ಮೂಲಕ ಅಗ್ರಿಕಲ್ಚರ್ ಹಬ್ ಮಾಡಲಾಗುವುದು. ಇದಕ್ಕಾಗಿ ₹39 ಕೋಟಿ ವೆಚ್ಚಮಾಡಲಾಗುವುದು ಎಂದರು. ನೆಹರು ಗಂಜನ್ನು ನಗರದ ಹೊರ ವಲಯದಲ್ಲಿ ಶಿಫ್ಟ್ ಮಾಡುವ ಪ್ರಸ್ತಾವನೆ ಕುರಿತು ಹೇಳಿದ ಸಚಿವರು ಚುನಾವಣೆ ಮುಗಿದ ನಂತರ ಈ ವಿಷಯಕ್ಕೆ ಕುರಿತಂತೆ ಸೂಕ್ತ ಕ್ರಮ‌ಕೈಗೊಳ್ಳಲಾಗುವುದು. ಇದರ ಜೊತೆಗೆ ಒಂದು ವೇರ್ ಹೌಸ್, ಕೋಲ್ಡ್ ಸ್ಟೋರೇಜ್, ಕುಡಿಯುವ ನೀರು ಹಾಗೂ ಶೌಚಾಲಯ…

Read More

ಬೆಂಗಳೂರು : ಹಿರಿಯ ನಟ ನಿರ್ಮಾಪಕ ನಿರ್ದೇಶಕ ದ್ವಾರಕೀಶ್ (81) ಅವರು ಇಂದು ಅದ್ಯಾಗಾತದಿಂದ ಸಾವನ್ನಪ್ಪಿದ್ದು ನಾಳೆ ಬೆಳಿಗ್ಗೆ 11:30ಕ್ಕೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ. ಹಿರಿಯ ನಟ ನಿರ್ಮಾಪಕ ನಿರ್ದೇಶಕ ದ್ವಾರಕೀಶ್ ನಿಧನರಾಗಿರುವ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 7:30ರ ಬಳಿಕ ರವೀಂದ್ರ ಕಲಾಕ್ಷೇತ್ರಕ್ಕೆ ಅವರ ಪಾರ್ಥಿವ ಶರೀರವನ್ನು ಶಿಫ್ಟ್ ಮಾಡಲಾಗುತ್ತಿದ್ದು, ಇಂದು ಅವರ ನಿವಾಸದಲ್ಲಿಯೇ ಪಾರ್ಥಿವ ಶರೀರ ಇರಲಿದೆ. ಹಾಗಾಗಿ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಗ್ಗೆ 11:30 ನಂತರ ದ್ವಾರಕೀಶ್ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದುಬಂದಿದೆ.

Read More

ಮಂಗಳೂರು : 6ನೇ ತರಗತಿ ವಿದ್ಯಾರ್ಥಿ ನಿಗೆ ಶಿಕ್ಷಕನೊಬ್ಬ ಕಳೆದ ಒಂದು ವರ್ಷದಿಂದ ಲೈಂಗಿಕ ಕಿರುಕುಳ ನೀಡುತ್ತಿರುವ ಹಿನೆಲೆಯಲ್ಲಿ ಇದೀಗ ಮಂಗಳೂರು ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಠಾಣೆಯಲ್ಲಿ ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಶಿಕ್ಷಕ ವಿರಾಜ್​ ಜೈನ್​ ಕಳೆದ ಜೂನ್ ನಿಂದ ದೂರು ನೀಡುವ ದಿನದವರೆಗೂ ಕೂಡ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಮಾರ್ಚ್​ 10 ರಂದು ವಿದ್ಯಾರ್ಥಿನಿ ಶಾಲೆಗೆ ಹೋಗುವುದಿಲ್ಲ ಎಂದು ಪೋಷಕರ ಮುಂದೆ ಹೇಳಿದ್ದಾಳೆ. ಆಗ ಪೋಷಕರು ಏನಾಯಿತು ಎಂದು ವಿಚಾರಿಸಿದ್ದಾರೆ.ಆಗ ವಿದ್ಯಾರ್ಥಿನಿ ಶಾಲೆಯ ಶಿಕ್ಷಕನಾದ ವಿರಾಜ್​ ಜೈನ್​ ಕಳೆದ ವರ್ಷ ಜೂನ್​​ನಿಂದ ದೂರು ದಾಖಲಾಗುವ ದಿನದವರೆಗೆ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸುತ್ತಾ, ಲೈಂಗಿಕ ಕಿರುಕುಳ ನೀಡುತ್ತಾ ಬಂದಿದ್ದಾನೆ ಎಂದು ದೂರಿನಲ್ಲಿ ದಾಖಲಾಗಿದೆ. ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು,…

Read More

ಬೆಂಗಳೂರು : ನಟ ನಿರ್ಮಾಪಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಅಪಾರ ಸೇವೆ ಸಲ್ಲಿಸಿದಂತಹ ಹಿರಿಯ ನಟ ದ್ವಾರಕೀಶ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇದೀಗ ಟ್ವೀಟ್ ನಲ್ಲಿ ಸಂತಾಪಸೂಚಿಸಿದ್ದಾರೆ. ಕನ್ನಡದ ಹಿರಿಯ ನಟರಾದ ಶ್ರೀ ದ್ವಾರಕೀಶ್ ಅವರ ಅಗಲಿಕೆ ನನಗೆ ಬಹಳ ನೋವುಂಟು ಮಾಡಿದೆ. ಕಲಾವಿದರಾಗಿ ಅಷ್ಟೇ ಅಲ್ಲದೆ; ನಿರ್ಮಾಪಕರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಅವರು ಸಲ್ಲಿಸಿರುವ ಅನುಪಮ ಸೇವೆ ಆವಿಸ್ಮರಣೀಯ. ವರನಟ ಡಾ||ರಾಜ್‌ಕುಮಾರ್‌, ಡಾ||ವಿಷ್ಣುವರ್ಧನ್‌, ಶ್ರೀ ಅಂಬರೀಶ್‌ರಂಥ ದಿಗ್ಗಜರ ಜತೆ ನಟಿಸಿದ್ದ ಅವರು, ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಿನಿಮಾ ಆಸ್ತಿಯಾಗಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದರು. https://twitter.com/hd_kumaraswamy/status/1780130986870947853?t=ZS6NA2qBUYylN8pwvjU37Q&s=19

Read More

ದಾವಣಗೆರೆ: ಲೋಕಸಭಾ ಚುನಾವಣೆ ಮಾತ್ರವಲ್ಲದೇ ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಮುಂದುವರಿಯಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು. ದಾವಣಗೆರೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲು ಪ್ರಯತ್ನ ಶುರುವಾಗಿದೆ. ನಾನು 23 ಕ್ಷೇತ್ರಗಳಲ್ಲೂ ಸುತ್ತಿದ್ದೇನೆ. ಉಳಿದ ಕ್ಷೇತ್ರಗಳಿಗೂ ಹೋಗುವೆ. ದೇವೇಗೌಡರು ಇಳಿವಯಸ್ಸಿನಲ್ಲೂ ಪ್ರಚಾರ ಮಾಡುತ್ತಿದ್ದಾರೆ. ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಭಾರಿ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವಿರೋಧಿಯಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲಿಲ್ಲ. ಅಂಬೇಡ್ಕರ್ ನಿಧನರಾದಾಗ ಅವರ ಸಂಸ್ಕಾರಕ್ಕೆ ಜಾಗ ನೀಡಲಿಲ್ಲ. ಜವಾಹರಲಾಲ್ ನೆಹರೂ ಸಮಾಧಿಗೆ 52.6 ಎಕರೆ, ಇಂದಿರಾಗಾಂಧಿ ಸಮಾಧಿಗೆ 45 ಎಕರೆ, ರಾಜೀವ್ ಗಾಂಧಿ ಸಮಾಧಿಗೆ 15 ಎಕರೆ ಜಾಗ ನೀಡಲಾಗಿದೆ. ಆದರೆ ಅಂಬೇಡ್ಕರ್ ಅವರಿಗೆ…

Read More