Subscribe to Updates
Get the latest creative news from FooBar about art, design and business.
Author: kannadanewsnow05
ಮಂಡ್ಯ : ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿದರು ಸಹ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಸಿಬ್ಬಂದಿಗಳ ಕಾಟ ತಪ್ಪಿಲ್ಲ. ಇದೀಗ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಸಹಳ್ಳಿ ಎಂಬ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಮಳವಳ್ಳಿ ತಾಲೂಕಿನ ಸಾಹಳ್ಳಿ ಗ್ರಾಮದಲ್ಲಿ ಸಾಲದ ಹೊರೆ ತಾಳಲಾರದೆ ರೈತ ಸುಬ್ಬೇಗೌಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.3 ಎಕರೆ ಜಮೀನು ಹೊಂದಿದ್ದ ಸುಬ್ಬೇಗೌಡ ವ್ಯವಸಾಯಕ್ಕಾಗಿ ಬ್ಯಾಂಕ್, ಸಹಕಾರ ಸಂಘ ಹಾಗೂ ಖಾಸಗಿಯಾಗಿ ಸುಮಾರು 5 ಲಕ್ಷ ಸಾಲ ಮಾಡಿದ್ದರು. ಈ ಹಿನ್ನೆಲೆ ಸಾಲದ ಹೊರೆಯಿಂದ ಮನನೊಂದಿದ್ದ ಸುಬ್ಬೇಗೌಡ ಸೋಮವಾರ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದರು.ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಗುರುವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಂಡಿಘಡ : ಮಹಿಳೆಯೊಬ್ಬಳು ಹೆತ್ತ ತಾಯಿಯ ತೊಡೆಗೆ ಕಚ್ಚಿ ಮನಬಂದಂತೆ ಥಳಿಸಿ ಚಿತ್ರಹಿಂಸೆ ನೀಡಿರುವಂತಹ ಬೆಚ್ಚಿ ಬೀಳಿಸೋ ಘಟನೆ ಹರಿಯಾಣದಲ್ಲಿ ನಡೆದಿದ್ದು, ಸದ್ಯ ಇದರ ವಿಡಿಯೋ ವೈರಲ್ ಆಗಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬಳು ತನ್ನ ತಾಯಿಗೆ ಪ್ರಾಣಿಗಳ ಮೇಲೆ ಹಲ್ಲೆ ಮಾಡುವಂತೆ ಥಳಿಸುತ್ತಿರುವುದು ಕಂಡುಬಂದಿದೆ. ಇಷ್ಟಕ್ಕೆ ಸುಮ್ಮನಿರದೆ ತಾಯಿಯ ತೊಡೆಗೆ ಕಚ್ಚಿ ಚಿತ್ರಹಿಂಸೆ ನೀಡುತ್ತಿರುವುದು ಸಹ ವಿಡಿಯೋದಲ್ಲಿ ಕಂಡುಬಂದಿದೆ. ಸಂತ್ರಸ್ತೆ ಅಳುತ್ತಾ ತನಗೆ ಹೊಡೆಯಬೇಡ ಎಂದು ಮಗಳಲ್ಲಿ ಪರಿಪರಿಯಾಗಿ ಕೇಳಿಕೊಂಡಿದ್ದಾಳೆ. ಮಹಿಳೆ ತನ್ನ ತಾಯಿಗೆ ಮನಬಂದಂತೆ ಹೊಡೆಯುವುದು, ಕೂದಲನ್ನು ಎಳೆದಾಡುವುದು, ಕಾಲಿನಿಂದ ಒದೆಯುವುದು ಮಾತ್ರವಲ್ಲದೇ ಹಲ್ಲಿನಿಂದ ಕಚ್ಚುವುದು ಕಾಣಿಸಿಕೊಂಡಿದೆ. ಈ ಒಂದು ಘಟನೆ ಹರಿಯಾಣದಲ್ಲಿ ನಡೆದಿದ್ದು, ತಾಯೆ ಮೇಲೆ ಮಗಳು ಈ ರೀತಿ ಹಲ್ಲೆ ಮಾಡಿ ಚಿತ್ರಹಿಂಸೆ ನೀಡುತ್ತಿದ್ದರು ಸಹ ಸಹಾಯಕ್ಕೆ ಬರದೇ ವಿಡಿಯೋ ಮಾಡಿಕೊಳ್ಳುತ್ತಿದ್ದರು. I ಕುರಿತು ನೆಟ್ಟಿಗರು ಮಹಿಳೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ಕೂಡಲೇ ಪೊಲೀಸರು ಮಹಿಳೆಯ…
ಬೆಂಗಳೂರು : ಇನ್ಮುಂದೆ ಅನುಮತಿಯಿಲ್ಲದೆ ಗೃಹ ಸಚಿವ ಜಿ. ಪರಮೇಶ್ವರ್ ಅವರ ಮನೆಗೆ ಹೋಗಿ ಭೇಟಿಯಾಗಕೂಡದು ಎಂದು ಎಲ್ಲಾ ಹಂತದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಲೋಕ್ ಮೋಹನ್ ಸೂಚಿಸಿದ್ದಾರೆ. ಈ ಸಂಬಂಧ ಮೆಮೊ ಸಹ ಹೊರಡಿಸಲಾಗಿದೆ. ವರ್ಗಾವಣೆ ಸೇರಿದಂತೆ ವಿವಿಧ ಕಾರಣಗಳಿಗಾಗಿ ಬೆಂಗಳೂರು ಮಾತ್ರವಲ್ಲದೆ, ರಾಜ್ಯದ ನಾನಾ ಕಡೆಗಳಿಂದ ಎಲ್ಲಾ ಹಂತದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯು ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡುತ್ತಿದ್ದರು. ದಿನೇ ದಿನೆ ಭೇಟಿಯಾಗುವವರ ಸಂಖ್ಯೆ ಅಧಿಕವಾದ ಹಿನ್ನೆಲೆಯಲ್ಲಿ ಅನುಮತಿಯಿಲ್ಲದೆ ಹೋಮ್ ಮಿನಿಸ್ಟರ್ ಅವರನ್ನು ಖುದ್ದು ಭೇಟಿಯಾಗಬಾರದು ಎಂದು ಡಿಜಿಪಿ ಸೂಚಿಸಿದ್ದಾರೆ. ನಿರಂತರವಾಗಿ ಕೆಲ ಪೊಲೀಸರು, ಸಿಬ್ಬಂದಿ ವರ್ಗದವರು ಸಚಿವರ ಕಚೇರಿ, ನಿವಾಸಕ್ಕೆ ನೇರವಾಗಿ ಭೇಟಿ ನೀಡುತ್ತಿರುವುದರ ಬಗ್ಗೆ ಸಚಿವರ ಕಚೇರಿಯಿಂದ ಡಿಜಿ ಐಜಿ ಕಚೇರಿಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಈ ವಿಚಾರವಾಗಿ ಅಲೋಕ್ ಮೋಹನ್ ಅವರೇ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಮೆಮೋ…
ಬೆಂಗಳೂರು : ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನ ಇಂಜಿನ್ ನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದ ಚಾಲಕ ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರು ಚೆನ್ನೈ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ. ಬೆಂಗಳೂರಿನ ಅತ್ತಿಬೆಲೆ ಗುಡಿ ಗೋಪುರದ ಬಳಿ ಹುಂಡೈ i20 ಕಾರು ಹೊತ್ತಿ ಉರಿದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಬಳಿ ಚೆನ್ನೈ ಮೂಲದ ಶಂಕರ್ ಗೆ ಒಂದು i20 ಹುಂಡೈ ಕಾರು ಸೇರಿತ್ತು. ಇಂಜಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಚಾಲಕ ಕೂಡಲೇ ಕೆಳಗೆ ಇಳಿದಿದ್ದಾನೆ. ಕ್ಷಣಾರ್ಧದಲ್ಲಿ ಇಡೀ ಕಾರಿಗೆ ಬೆಂಕಿ ಹಾಕಿ ಕೆನ್ನಾಲಿಗೆ ಆವರಿಸಿದೆ. TN 06 CE 3143 ನಂಬರ್ ಕಾರು ಬೆಂಕಿಗೆ ಆಹುತಿ ಆಗಿದೆ. ಕೂಡಲೇ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಸಿ ಬೆಂಕಿ ನಂದಿಸಿದೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚೆಗೆ ಕಾಂಗ್ರೆಸ್ ಮುಖಂಡ ಹೈದರ್ ಅಲಿ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ 7 ಆರೋಪಿಗಳಿಗೆ ಮಾರ್ಚ್ 11 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ 29ನೇ ACMM ಕೋರ್ಟ್ ಆದೇಶ ಹೊರಡಿಸಿದೆ. ಹೌದು ಹೈದರ್ ಅಲಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ಅಶೋಕನಗರ ಠಾಣೆಯ ಪೊಲೀಸರು 7 ಆರೋಪಿಗಳನ್ನು ಅರೆಸ್ಟ್ ಮಾಡಿದ್ದರು.ಹಳೇ ದ್ವೇಷದ ಹಿನ್ನೆಲೆಯಲ್ಲಿ ಹೈದರ್ ಅಲಿಯನ್ನು ಹತ್ಯೆ ಮಾಡಿರುವುದಾಗಿ ತನಿಖೆಯ ವೇಳೆ ತಿಳಿದು ಬಂದಿದೆ. ಬಂಧಿತ ಆರೋಪಿಗಳನ್ನ ನಯಾಜ್ ಪಷಾ ಅಲಿಯಾಸ್ ನಾಜುದ್ದೀನ್, ರಿಜ್ವಾನ್, ಸದ್ದಾಂ, ಮತೀನ್, ದರ್ಶನ್, ರಾಹಿದ್, ವಸೀಂ ಎನ್ನಲಾಗಿದ್ದು, ಬಂಧಿತ ಸದ್ದಾಂ, ರಾಹಿದ್, ವಾಸಿಂ, ರಿಜ್ವಾನ್ ವಿರುದ್ಧ ಶಿವಮೊಗ್ಗ ಜಿಲೆಯ ವಿವಿಧ ಠಾಣೆಗಳಲ್ಲಿ ರೌಡಿಶೀಟ್ ಇದೆ. ಕೊಲೆಯಾದ ಹೈದರ್ ಹಾಗೂ ಆರೋಪಿ ನಯಾಜ್ ನಡುವೆ 10 ವರ್ಷಗಳ ದ್ವೇಷವಿತ್ತು ಎಂದು ತಿಳಿದುಬಂದಿದೆ. ಪ್ರಕರಣ ಹಿನ್ನೆಲೆ… ಬಿಬಿಎಂಪಿ ಚುನಾವಣೆಗಾಗಿ ಹೈದರ್ ಅಲಿಯ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.ಮೊನ್ನೆ ರಾತ್ರಿ ಶಾಂತಿ…
ಉತ್ತರಕನ್ನಡ : ಗುಜರಿ ಸಾಮಾನುಗಳಿದಂತಹ ಗೋಡೌನ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದ ಪರಿಣಾಮ ಪಕ್ಕದ್ದಲ್ಲಿದ್ದ ಲಾರಿ ಸಮೇತ ಅಪಾರ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಬಳಿ ಗುಣವಂತೆ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿಯೇ ರಾಶಿ ಹಾಕಿದ್ದ ಗುಜರಿ ಸಾಮಾನು ಅಂಗಡಿಗೆ ಬೆಂಕಿ ಬಿದ್ದಿದೆ. ಮಧ್ಯಾಹ್ನದ ಸುಡು ಬಿಸಿಲಿನ ವೇಳೆ ಘಟನೆ ನಡೆಯಿತು. ನೋಡನೋಡುತ್ತಿದ್ದಂತೆ ಜ್ವಾಲೆ ಸಂಪೂರ್ಣ ಅಂಗಡಿಯನ್ನೇ ಆವರಿಸಿಕೊಂಡಿತು. ದಟ್ಟ ಹೊಗೆಯಿಂದ ಸಂಪೂರ್ಣ ಪ್ರದೇಶ ಕಾಣದಂತಾಗಿ ಅಂಗಡಿ ಪಕ್ಕದಲ್ಲೇ ಇದ್ದ ಲಾರಿ ಕೂಡ ಬೆಂಕಿಗೆ ಆಹುತಿಯಾಯಿತು. ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಬೆಂಕಿ ತಹ ಬದಿಗೆ ಬರಲಿಲ್ಲ.ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಘಟನೆ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ : ಒಂದು ಕಡೆ ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಕುರಿತು ಭಾರಿ ಚರ್ಚೆ ಆಗುತ್ತಿದ್ದು, ಇನ್ನೊಂದು ಕಡೆ ಡಿಕೆ ಶಿವಕುಮಾರ್ ಅವರು ನಿನ್ನೆ ಮುಂದಿನ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಲಿದೆ ಎಂದು ಪರೋಕ್ಷವಾಗಿ ಸಿಎಂ ಆಗುವ ಕುರಿತು ವಿರೋಧಿ ಬಣಗಳಿಗೆ ಟಾಂಗ್ ನೀಡಿದ್ದಾರೆ. ಇದರ ಮಧ್ಯ ಡಿ.ಕೆ.ಶಿವಕುಮಾರ್ ಇದೇ ಅವಧಿಯಲ್ಲಿ ಸಿಎಂ ಆಗ್ತಾರೆ ಎಂದು ಭೈರವಿ ಅಮ್ಮ ಸ್ಪೋಟಕ ಭವಿಷ್ಯ ಹೇಳಿದ್ದಾರೆ. ನಗರದಲ್ಲಿರುವ ಸಿದ್ದರೂಢ ಮಠದ ಕಾರ್ಯಕ್ರಮದಲ್ಲಿ ಇಂದು ಭಾಗಿಯಾದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಅವರು, ನನ್ನ ಮಾತು ಯಾವತ್ತೂ ಸುಳ್ಳಾಗಲ್ಲ. ಇಲ್ಲಿಯತನಕ ಸುಳ್ಳಾಗಿಲ್ಲ, ಸುಳ್ಳು ಆಗೋದೂ ಇಲ್ಲ. ನಾನೂ ಮೂರು ವರ್ಷದ ಹಿಂದೆ ಡಿಕೆಶಿ ಮನೆಗೆ ಹೋಗಿದ್ದೆ. ಅವರು ನನ್ನ ಕರೆದಿದ್ರು. ಮುಂದೆ ಏನಾಗುತ್ತೆ ಅಂತಾ ಕೇಳಿದ್ರು. ಏನು ಆಗಬೇಕು ಅಂತಾ ಕೇಳಿದೆ. ಮುಂದಿನ ಕಥೆ ಏನು ಅಂತಾ ಕೇಳಿದರು. ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ ಅಂತಾ ಹೇಳಿದ್ದೆ. ನೀನು ದುಡಿದ ದುಡ್ಡು, ಇನ್ಯಾವನೋ ತಿಂದು ಗುಂಡಾಗ್ತಾನೆ…
ಬೆಂಗಳೂರು : ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ. ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಈ ಕುರಿತು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ತಮ್ಮ ಖಾತೆಯಲ್ಲಿ ಸರಣಿ ವಾಗ್ದಾಳಿ ನಡೆಸಿದ್ದು, ಕೇಂದ್ರ ಗೃಹ ಸಚಿವರ ಬೀಸು ಹೇಳಿಕೆಯನ್ನು ನೋಡಿದರೆ ಅವರಿಗೆ ಒಂದೋ ಮಾಹಿತಿಯ ಕೊರತೆ ಇದೆ, ಇಲ್ಲವಾದರೆ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಗಳಿಗೆ ಅನ್ಯಾಯ ಮಾಡುವ ದುರುದ್ದೇಶ ಇದೆ ಎಂದು ಅರ್ಥಮಾಡಿಕೊಳ್ಳಬಹುದು. ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಮಾಡಬಾರದೆಂಬ ಸದುದ್ದೇಶ ಕೇಂದ್ರ ಸರ್ಕಾರ ಹೊಂದಿರುವುದಾಗಿದ್ದರೆ ಕ್ಷೇತ್ರ ಮರುವಿಂಗಡಣೆಯನ್ನು ಜನಸಂಖ್ಯೆಯ ಅನುಪಾತದ ಆಧಾರದಲ್ಲಿ ಮಾಡಲಾಗುವುದೋ? ಇಲ್ಲವೇ ಲೋಕಸಭಾ ಸದಸ್ಯರ ಈಗಿನ ಸಂಖ್ಯೆಯ ಅನುಪಾತದಲ್ಲಿ ಮಾಡಲಾಗುವುದೋ? ಎಂಬ ಮುಖ್ಯ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಬೇಕಾಗುತ್ತದೆ.ಇತ್ತೀಚಿನ ಜನಸಂಖ್ಯೆಯ ಅನುಪಾತದಲ್ಲಿ ಕ್ಷೇತ್ರ ಮರುವಿಂಗಡಣೆ ನಡೆದರೆ…
ಹಾಸನ : ಹಾಸನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಲಾರಿ ಹಾಗು ಬೈಕ್ ಮಧ್ಯ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.ಮೃತ ಸವಾರರನ್ನು ಆಕಾಶ್ (22) ಶಂಕರ್ (45) ಎಂದು ತಿಳಿದುಬಂದಿದೆ. ಇವರು ಸಕಲೇಶಪುರ ತಾಲೂಕಿನ ವಳಲಹಳ್ಳಿ ಗ್ರಾಮದ ನಿವಾಸಿಗಳು ಎನ್ನಲಾಗಿದ್ದು, ಇವರು ಇಂದು ಸಕಲೇಶಪುರ ಪಟ್ಟಣದಲ್ಲಿ ನಡೆಯುತ್ತಿರುವ ಸಕಲೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಮುಗಿಸಿ ವಾಪಸ್ ಸ್ವಗ್ರಾಮಕ್ಕೆ ತೆರಳುವ ವೇಳೆ ಹಿಂಬದಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಇಬ್ಬರು ಸಾವಿಗೀಡಾಗಿದ್ದಾರೆ. ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯ ಮತ್ತು ಅತೀ ವೇಗವೇ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಸಕಲೇಶಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಬೆಂಗಳೂರಿನ ಅರಮನೆ ಜಾಗಕ್ಕೆ ಟಿಡಿಆರ್ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ಅಲ್ಲಿ ಮೈಸೂರು ರಾಜಮನೆತನ ಸಲ್ಲಿಸಿದ ವಿಚಾರಣೆ ಇಂದು ನಡೆಯಿತು. ಅರ್ಜಿ ವಿಚಾರಣೆಯ ಬಳಿಕ ನ್ಯಾ.ಸುರೇಶ ಹಾಗೂ ನ್ಯಾ.ಅರವಿಂದ್ ಕುಮಾರ್ ಅವರಿದ್ದ ಪೀಠವು ಒಂದು ವಾರದ ಒಳಗಾಗಿ ಟಿಡಿಆರ್ ತನ್ನ ಸುಪರ್ದಿಗೆ ನೀಡಬೇಕು ರಾಜ್ಯ ಸರಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನು ಮಾರ್ಚ್ 20ಕ್ಕೆ ಮುಂದೂಡಿತು. ಈ ವೇಳೆ ನ್ಯಾಯಾಂಗ ನಿಂದನೆಯಿಂದ ಪಾರಾದ ರಾಜ್ಯ ಸರ್ಕಾರ. ಟಿಡಿಆರ್ ನೀಡಿದರೂ ಸಹ ಅದು ಬಳಕೆಯಾದಂತೆ ವಕೀಲರು ನೋಡಿಕೊಂಡಿದ್ದಾರೆ. ಟಿಡಿಆರ್ ಬಳಕೆಯಾದಂತೆ ಸರ್ಕಾರದ ಪರ ವಕೀಲರು ಇದೀಗ ನೋಡಿಕೊಂಡ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ರಾಜ ಮನೆತನದವರಿಗೆ ನೀಡಬೇಕಿದ್ದ ಟಿಡಿಆರ್ ಕೋರ್ಟಿಗೆ ಹಸ್ತಾಂತರವಾಗಿದ್ದು, ರಾಜಮನೆತನದವರಿಗೆ ನೀಡಬೇಕಿದ್ದ 3400 ಕೋಟಿಯ ಟಿಡಿಆರ್ ನ್ಯಾಯಾಲಯದ ಅಧಿಕಾರದಲ್ಲಿ ಟಿಡಿಆರ್ ಇರಲಿದೆ. ಇದರಿಂದ ಟಿಡಿಆರ್ ಬಳಕೆ ಆಗಬಹುದು ಎನ್ನುವ ಆತಂಕದಿಂದ ಇದೀಗ ರಾಜ್ಯ ಸರ್ಕಾರಕ್ಕೆ ಮುಕ್ತಿ ದೊರೆತಿದೆ. ಇತ್ತ ಟಿಡಿಆರ್ ನೀಡಲು ನ್ಯಾಯಾಲಯ ಸೂಚಿಸಿತ್ತು.…