Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸುವ ಪ್ರಸ್ತಾವನೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಷರತ್ತುಬದ್ಧ ಅನುಮೋದನೆ ನೀಡಿ ಕಡತ ಹಿಂತಿರುಗಿಸಿದ್ದಾರೆ. ಹಾಲಿ ಸದಸ್ಯರ ಅವಧಿ ಮುಕ್ತಾಯವಾದ ನಂತರ ಹಾಗೂ ಜನಗಣತಿ ಪ್ರಕ್ರಿಯೆ ಮುಗಿದ ನಂತರವಷ್ಟೇ ವಿಭಜನೆ ಜಾರಿಯಾಗಬೇಕು ಎಂದು ರಾಜ್ಯಪಾಲರು ತಿಳಿಸಿದ್ದಾರೆ. ಬೆಂಗಳೂರು ಬಿಟ್ಟರೆ ರಾಜ್ಯದಲ್ಲೇ ಅತ್ಯಂತ ದೊಡ್ಡದಾದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಧಾರವಾಡವನ್ನು ಪ್ರತ್ಯೇಕಿಸಬೇಕು ಎಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಹುಬ್ಬಳ್ಳಿಗೇ ಹೆಚ್ಚಿನ ಅನುದಾನ ಸಿಗುತ್ತಿದೆ ಎಂಬ ಅಸಮಾಧಾನದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕಳೆದ ವರ್ಷ ಧಾರವಾಡ ಪ್ರತ್ಯೇಕ ಪಾಲಿಕೆ ಘೋಷಿಸಿದ್ದರು. ಆದರೆ ಈಗ ಈ ಪ್ರಕ್ರಿಯೆಗೆ ಕಾನೂನು ಮತ್ತು ತಾಂತ್ರಿಕ ಒಳಸುಳಿಗಳು ಎದುರಾಗಿವೆ. ಪ್ರಸ್ತುತ ಇರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾಯಿತ ಸದಸ್ಯರ 5 ವರ್ಷಗಳ ಅಧಿಕಾರ ಅವಧಿ ಪೂರ್ಣಗೊಂಡ ನಂತರವೇ ವಿಭಜನೆ ಜಾರಿಗೆ ಬರಬೇಕು.2026ರ ಜನವರಿ 1ರಿಂದ 2027ರ ಮಾರ್ಚ್ 31ರವರೆಗೆ ಯಾವುದೇ ಆಡಳಿತಾತ್ಮಕ ಘಟಕಗಳ ಗಡಿ ಬದಲಾಯಿಸಬಾರದು ಎಂದು ಜನಗಣತಿ…
ಗಾಂಧಿನಗರ: ಗುಜರಾತ್‌ನಲ್ಲಿ ಮಾನವೀಯತೆಯನ್ನೇ ಮರೆತು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಪತಿಯೊಬ್ಬ ತನ್ನ ಸ್ವಂತ ಪತ್ನಿಯನ್ನೇ ಕೇವಲ 50 ಸಾವಿರ ರೂಪಾಯಿಗೆ ಸ್ನೇಹಿತರಿಗೆ ಮಾರಾಟ ಮಾಡಿದ್ದಾನೆ. ಹಣದ ಆಸೆಗಾಗಿ ಹೆಂಡತಿಯನ್ನು ಮಾರಿದ ಪತಿಯ ಕ್ರೌರ್ಯಕ್ಕೆ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಇಷ್ಟಕ್ಕೆ ನಿಲ್ಲದ ಆತನ ಸ್ನೇಹಿತರು, ಆ ಮಹಿಳೆಯನ್ನು ಕೂಡಿಹಾಕಿ ಸತತ 10 ದಿನಗಳ ಕಾಲ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಭೀಕರ ಘಟನೆಯು ಮೇ ತಿಂಗಳ ಆರಂಭದಲ್ಲಿ ಗುಜರಾತ್‌ನ ಪಲನ್‌ಪುರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ‘ನಾಪತ್ತೆ’ ಪ್ರಕರಣದ ತನಿಖೆಯ ವೇಳೆ ಬಯಲಾಗಿದೆ. ಮೇ 11ರಂದು ಆರೋಪಿ ಪತಿಯೇ ಪೊಲೀಸ್ ಠಾಣೆಗೆ ಬಂದು, ತನ್ನ ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದನು. ಪೊಲೀಸರು ಆತನ ದೂರನ್ನು ಸ್ವೀಕರಿಸಿ ತನಿಖೆ ಆರಂಭಿಸಿದ್ದರು. ಆದರೆ, ದೂರು ನೀಡಿದ ಕೇವಲ ಎರಡು ದಿನಗಳಲ್ಲೇ ಪತಿ ಕೂಡ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದನು. ಇದು ಪೊಲೀಸರಲ್ಲಿ ತೀವ್ರ ಅನುಮಾನವನ್ನು ಹುಟ್ಟುಹಾಕಿತು. ಪೊಲೀಸರ ತನಿಖೆ: ಪತ್ನಿ…
ರಾಮನಗರ: ರಾಜ್ಯ ರಾಜಕಾರಣದಲ್ಲಿ ನಾಳೆ ಒಂದು ಅತ್ಯಂತ ಪ್ರಮುಖ ಹಾಗೂ ಬಹುದೊಡ್ಡ ತಿರುವು ಸಿಗುವ ಸಾಧ್ಯತೆ ದಟ್ಟವಾಗಿದೆ. ಕಳೆದ ಕೆಲವು ದಿನಗಳಿಂದ ತೆರೆಮರೆಯಲ್ಲಿ ನಡೆಯುತ್ತಿದ್ದ ರಾಜಕೀಯ ವಿದ್ಯಮಾನಗಳು ಈಗ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿವೆ. ನಾಳೆ ಬೆಳಿಗ್ಗೆ 10:30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ದಟ್ಟವಾಗಿ ಹರಡುತ್ತಿದ್ದು, ಇಡೀ ರಾಜ್ಯದ ಗಮನ ಈಗ ರಾಜಧಾನಿಯತ್ತ ನೆಟ್ಟಿದೆ. ಡಿಕೆ ಶಿವಕುಮಾರ್‌ಗೆ ಸಿಎಂ ಪಟ್ಟ ಗ್ಯಾರಂಟಿ? ಸಿದ್ದರಾಮಯ್ಯ ಅವರ ರಾಜೀನಾಮೆ ಬೆನ್ನಲ್ಲೇ, ತೆರವಾಗಲಿರುವ ಮುಖ್ಯಮಂತ್ರಿ ಗಾದಿಗೆ ಪ್ರಸ್ತುತ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್ ಅವರು ಏರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಹೈಕಮಾಂಡ್ ಮಟ್ಟದಲ್ಲಿ ಈಗಾಗಲೇ ಈ ಕುರಿತು ಮಹತ್ವದ ಚರ್ಚೆಗಳು ಮುಗಿದಿದ್ದು, ‘ಕನಕಪುರ ಬಂಡೆ’ಗೆ ಸಿಎಂ ಪಟ್ಟ ಸಿಗುವುದು ಬಹುತೇಕ ಗ್ಯಾರಂಟಿ ಎಂದು ಅವರ ಆಪ್ತ ವಲಯ ಹಾಗೂ ರಾಜಕೀಯ ವಿಶ್ಲೇಷಕರು ಬಲವಾಗಿ ನಂಬಿದ್ದಾರೆ. ಇದು ಅವರ ಬೆಂಬಲಿಗರಲ್ಲಿ ಹೊಸ ಸಂಚಲನ ಮೂಡಿಸಿದೆ. ರಾಮನಗರದಲ್ಲಿ ಮುಗಿಲು ಮುಟ್ಟಿದ…
ಬೆಂಗಳೂರು : ಅತ್ತು ಕರೆದು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆದರೆ ಬಂದೇಯ ಗವಾಕ್ಷಿ ಅಂತ ಅಷ್ಟೇ. ಸಿದ್ದರಾಮಯ್ಯ ಹೋಗಿ ಡಿಕೆ ಶಿವಕುಮಾರ್ ಬಂದ್ರು ಅಷ್ಟೇ 2028 ರಲ್ಲಿ ಬಿಜೆಪಿ 150 ಸ್ಥಾನ ಗೆದ್ದು ಅಧಿಕಾರಕ್ಕೆ ಎಂದು ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದರು. ಮೈಸೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಳೆ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ ಅದರ ಬಗ್ಗೆ ಆಸಕ್ತಿ ಇಲ್ಲ ಕಾಂಗ್ರೆಸ್ಸಿನ ಕಥೆ ಹೆಂಗಾಗಿದೆ ಎಂದರೆ ಹೋದೆಯಾ ಪಿಶಾಚಿ ಎಂದರೆ ಬಂದೆಯ ಗವಾಕ್ಷಿ ಎಂಬಂತೆ ಆಗಿದೆ. ಕರ್ನಾಟಕದಲ್ಲಿ ದಲಿತರನ್ನು ವೋಟ್ ಮಾಡಿಕೊಂಡು ಇವತ್ತು ಸಿಎಂ ಮಾಡುತ್ತೇವೆ, ನಾಳೆ ಮಾಡುತ್ತೇವೆ ಇನ್ನೊಂದು ಚುನಾವಣೆ ಬಂದರೆ ಮುಖ್ಯಮಂತ್ರಿ ಅಂತ ಮಾಡುತ್ತೇವೆ ಎಂದು ಹೇಳಿ ವಂಚನೆ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿ ಇರುವ ದಲಿತ ಲೀಡರ್ ಗಳಿಗೆ ತಾಕತ್ತಿಲ್ಲ. ಎಷ್ಟು ದಿನ ವಂಚನೆ ಮಾಡುತ್ತೀರಾ ನಾವು ಮುಖ್ಯಮಂತ್ರಿ ಆಗುತ್ತೇವೆ ಎಂದು ಕೇಳುವ ತಾಕತ್ತು ಇಲ್ಲ. ದಲಿತರಿಗೆ ಕಾಂಗ್ರೆಸ್ ಭಗಣಿಗೂಟ ಇಟ್ಟಿದೆ.…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ, ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಈ ಎಲ್ಲಾ ವದಂತಿಗಳನ್ನು ಕಡಾಖಂಡಿತವಾಗಿ ನಿರಾಕರಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆ ನೀಡುತ್ತಾರೆ ಎನ್ನುವ ವಿಚಾರ ಕೇವಲ ಊಹಾಪೋಹ ಎಂದು ಹೇಳುವ ಮೂಲಕ ವಿಷಯಕ್ಕೆ ತಣ್ಣೀರೆರಚಿದ್ದಾರೆ. ಇತ್ತೀಚೆಗೆ ನಡೆದ ಹೈಕಮಾಂಡ್ ನಾಯಕರೊಂದಿಗಿನ ಸಭೆಯಲ್ಲಿ ನಾಯಕತ್ವ ಬದಲಾವಣೆ ಅಥವಾ ಮುಖ್ಯಮಂತ್ರಿಗಳ ರಾಜೀನಾಮೆ ಕುರಿತು ಯಾವುದೇ ರೀತಿಯ ಮಾತುಕತೆಗಳು ನಡೆದಿಲ್ಲ ಎಂದು ಎಂ.ಬಿ. ಪಾಟೀಲ್ ಸ್ಪಷ್ಟಪಡಿಸಿದರು. ದೆಹಲಿಯಲ್ಲಿ ನಡೆದ ಸಭೆಯು ಕೇವಲ ಮುಂಬರುವ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗಳ ಕಾರ್ಯತಂತ್ರದ ಬಗ್ಗೆ ಮಾತ್ರ ಆಗಿತ್ತು ಎಂದು ಅವರು ವಿವರಿಸಿದರು. ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ನಾಯಕತ್ವ ಬದಲಾವಣೆಯ ಚರ್ಚೆಗಳ ಕುರಿತು ತೀವ್ರ ಅಸಮಾಧಾನ ಹೊರಹಾಕಿದ ಸಚಿವರು, ಈ ವಿಷಯದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ “ಪಟ್ಟದ ಪಗಡೆಯಾಟ” ಇದೀಗ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಸಚಿವರು ಮತ್ತು ಶಾಸಕರಿಗೆ ಉಪಹಾರ ಕೂಟವನ್ನು ಆಯೋಜಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಅವರು ರಾಜ್ಯಪಾಲರನ್ನು ಭೇಟಿ ಮಾಡಲು ಸಮಯಾವಕಾಶ ಕೋರಿದ್ದು, ಭೇಟಿಯ ನಂತರ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ರಾಹುಲ್ ಗಾಂಧಿ ಮುಂದೆ ಸಿದ್ದರಾಮಯ್ಯ ಷರತ್ತು? ಹೈಕಮಾಂಡ್ ನಾಯಕರೊಂದಿಗಿನ ಮಾತುಕತೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ ಮುಂದೆ ಮಹತ್ವದ ಪ್ರಸ್ತಾಪವೊಂದನ್ನು ಇಟ್ಟಿದ್ದಾರೆ ಎನ್ನಲಾಗಿದೆ. “ಪಕ್ಷದ ಹಿರಿಯ ನಾಯಕರಾಗಿ ನೀವು ಹೇಳಿದಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ಆದರೆ, ನನ್ನ ನಂತರ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಹಿರಿಯ ನಾಯಕ ಜಿ. ಪರಮೇಶ್ವರ್…
ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ಇದೀಗ ಅಂತಿಮ ಘಟ್ಟಕ್ಕೆ ತಲುಪಿದೆ ಎಂಬ ಚರ್ಚೆಗಳು ಜೋರಾಗಿವೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತ್ಯೇಕ ಸಭೆಗಳನ್ನು ನಡೆಸಿದ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ದಟ್ಟವಾಗಿದೆ. ಈ ಮಹತ್ವದ ಬೆಳವಣಿಗೆಯ ಬೆನ್ನಲ್ಲೇ ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ರಾಜಕಾರಣದ ಮುಂದಿನ ಭವಿಷ್ಯದ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಂತರಿಕ ಕಚ್ಚಾಟ ಹಾಗೂ ಆಡಳಿತ ವೈಫಲ್ಯದಿಂದಾಗಿ ರಾಜ್ಯದಲ್ಲಿ ಶೀಘ್ರದಲ್ಲೇ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಸರ್ಕಾರದ ವೈಫಲ್ಯ ಒಪ್ಪಿಕೊಂಡ ಹೈಕಮಾಂಡ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಯುವಿಜಯೇಂದ್ರ, “ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದು ನಮಗೆ ಮುಖ್ಯವಲ್ಲ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ರಾಜ್ಯವನ್ನು…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ನಾಯಕತ್ವ ಬದಲಾವಣೆ ಪ್ರಕ್ರಿಯೆ ಇದೀಗ ಅಂತಿಮ ಘಟ್ಟಕ್ಕೆ ತಲುಪಿದಂತಿದೆ. ಕಾಂಗ್ರೆಸ್ ಹೈಕಮಾಂಡ್‌ನ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಬಲವಾದ ಸುದ್ದಿಯೊಂದು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಕಳೆದ ಕೆಲವು ದಿನಗಳಿಂದ ತೆರೆಮರೆಯಲ್ಲಿ ನಡೆಯುತ್ತಿದ್ದ ಜಟಾಪಟಿಗೆ ಹೈಕಮಾಂಡ್ ಸದ್ಯದಲ್ಲೇ ತೆರೆ ಎಳೆಯಲಿದೆ ಎನ್ನಲಾಗುತ್ತಿದೆ. ರಾಜೀನಾಮೆ ನೀಡುವ ಮುನ್ನ ಮುಖ್ಯಮಂತ್ರಿಗಳು ತಮ್ಮ ಆಪ್ತರು ಹಾಗೂ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ (ಗುರುವಾರ) ಮುಂಜಾನೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟದ ಸದಸ್ಯರಿಗಾಗಿ ವಿಶೇಷ ಉಪಹಾರಕೂಟವನ್ನು ಆಯೋಜಿಸಿದ್ದಾರೆ. ಈ ಸಭೆಯಲ್ಲಿ ಅವರು ತಮ್ಮ ನಿರ್ಧಾರದ ಹಿಂದಿನ ಕಾರಣಗಳನ್ನು ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ. ಉಪಹಾರಕೂಟದ ಬೆನ್ನಲ್ಲೇ ಮುಖ್ಯಮಂತ್ರಿಗಳು ರಾಜಭವನಕ್ಕೆ ತೆರಳಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ನಾಳೆ ಬೆಳಗ್ಗೆ 10:30ಕ್ಕೆ ರಾಜ್ಯಪಾಲರನ್ನು ಭೇಟಿಯಾಗಲು ಸಿಎಂ ಕಚೇರಿಯಿಂದ ಈಗಾಗಲೇ ಸಮಯಾವಕಾಶ ಕೋರಲಾಗಿದೆ. ಈ ಭೇಟಿಯ ವೇಳೆ…
ಮಂಡ್ಯ : ಮಂಡ್ಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಪಲ್ಟಿಯಾದ ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಮಂಡ್ಯ ತಾಲೂಕಿನ ಬಸರಾಳು ಗ್ರಾಮದ ಬಳಿ ನಡೆದಿದೆ. ಹಟ್ನ ಗ್ರಾಮದ ತಾಯಮ್ಮ (60) ಮೃತಪಟ್ಟ ಮಹಿಳೆ. ದೇವರ ಕಾರ್ಯಕ್ಕೆ ನಾಗಮಂಗಲದ ಹೆಗಟಿ ಗ್ರಾಮಕ್ಕೆ ತೆರಳಿದ್ದ ಹಟ್ನ ಗ್ರಾಮದ ಜನರು. ವಾಪಸ್ಸು ಊರಿಗೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಗಂಭೀರವಾಗಿ ಗಾಯಗೊಂಡ ತಾಯಮ್ಮ ಸ್ಥಳದಲ್ಲೆ ಸಾವನ್ನಪ್ಪಿದ್ದು, ಅಪಘಾತದಲ್ಲಿ ಗಾಯಗೊಂಡಿರುವ 10 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರ್ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಸರಾಳು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತೀಯ ಸನಾತನ ಧರ್ಮ ಮತ್ತು ಸಂಸ್ಕೃತಿಯಲ್ಲಿ ‘ಓಂ’ (ॐ) ಮತ್ತು ‘ಶ್ರೀ’ (ಶ್ರೀ) ಎಂಬ ಎರಡು ಅಕ್ಷರಗಳು ಅತ್ಯಂತ ಪವಿತ್ರ ಹಾಗೂ ಮೂಲಭೂತವಾದ ಚಿಹ್ನೆಗಳಾಗಿವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಇವೆರಡೂ ಕೇವಲ ಅಕ್ಷರಗಳಲ್ಲ, ಬದಲಿಗೆ ಇಡೀ ಬ್ರಹ್ಮಾಂಡದ ಶಕ್ತಿ, ಸೃಷ್ಟಿ ಮತ್ತು ಮಂಗಲದ ಪ್ರತೀಕಗಳು. ಇವುಗಳ ಬಗ್ಗೆ ಕೂಲಂಕಷವಾದ ವಿವರಣೆ ಇಲ್ಲಿದೆ: ೧. ಓಂ (ॐ) – ಬ್ರಹ್ಮಾಂಡದ ಮೂಲ ಧ್ವನಿ ’ಓಂ’ ಅಥವಾ ‘ಓಂಕಾರ’ ಎಂಬುದು ಹಿಂದೂ ಧರ್ಮದ ಅತ್ಯಂತ ಪ್ರಮುಖ ಮತ್ತು ಪ್ರಥಮ ಪ್ರಣವ ಮಂತ್ರವಾಗಿದೆ. ಇದನ್ನು “ಬ್ರಹ್ಮ ಅಕ್ಷರ” ಎನ್ನಲಾಗುತ್ತದೆ. ಆಧಾರಗಳು (Scriptural Evidence) ಮಾಂಡೂಕ್ಯ ಉಪನಿಷತ್: ಈ ಇಡೀ ಉಪನಿಷತ್ತೇ ಓಂಕಾರದ ಮಹತ್ವವನ್ನು ವಿವರಿಸುತ್ತದೆ. “ಓಮಿತ್ಯೇತದಕ್ಷರಮಿದಂ ಸರ್ವಂ” ಎಂದರೆ,…














