Author: kannadanewsnow05

ಬೆಳಗಾವಿ : ಅಕ್ಕನ ಕ್ಷೇತ್ರದಲ್ಲಿಯೇ ಬಿಜೆಪಿ ಸಮಾವೇಶದಲ್ಲಿ ಅಪಾರ ಸಂಖ್ಯೆಯ ಮಹಿಳೆಯರು ಸೇರಿದ್ದಾರೆ. ಅಕ್ಕ ನಿದ್ದೆಗೆಡುವುದು ಗ್ಯಾರಂಟಿ. ಅವರಿಂದು ನಿದ್ದೆ ಮಾತ್ರೆ ತೆಗೆದುಕೊಳ್ಳಬೇಕು ಇಲ್ಲವೇ ಒಂದು ಎಕ್ಸ್‌ಟ್ರಾ ಪೆಗ್ ಹೆಚ್ಚುವರಿ ಕುಡಿಯಬೇಕು ಎಂದು ಸಂಜಯ ಪಾಟೀಲ್ ಹೇಳಿಕೆಗೆ ಲಕ್ಷೀ ಹೆಬ್ಬಾಳ್ಕರ್ ಆಕ್ರೋಶಗೊಂಡಿದ್ದು, ಸಂಜಯ ಪಾಟೀಲ ನೀಡಿದ ನೀಚತನದ ಹೇಳಿಕೆ ಬಿಜೆಪಿಯ ಹಿಡನ್ ಅಜೆಂಡಾ ಎಂದು ಕಿಡಿ ಕಾರಿದ್ದಾರೆ. ಪ್ರಚಾರಕ್ಕಾಗಿ ನೀಚತನದ, ಕೀಳು ಮಟ್ಟದ ಹೇಳಿಕೆ ನನ್ನ ಬಗ್ಗೆ ಸಂಜಯ್ ಪಾಟೀಲ್‌ ನೀಡಿದ್ದಾರೆ. ಕರ್ನಾಟಕ ರಾಜ್ಯದ ಮಹಿಳೆಯರು ಮಕ್ಕಳನ್ನು‌‌ ನಿಭಾಯಿಸುವ ಸಚಿವೆಗೆ ಇವರು ಈ ರೀತಿ ಹೇಳಿಕೆ‌ ನೀಡ್ತಾರೆ. ಈ ಮೂಲಕ ಬಿಜೆಪಿಯವರಿಗೆ ಮಹಿಳೆಯರು ಮತ್ತು‌‌ ಮಹಿಳಾ ಕುಲದ ಬಗ್ಗೆ ಇರು ಗೌರವ ಎಷ್ಟು ಎನ್ನುವುದು ತೋರಿಸುತ್ತೆ. ಬಿಜೆಪಿಯವರ ಅಜೆಂಡಾ ಏನು ಎನ್ನುವುದು ಈ ಮೂಲಕ ಗೊತ್ತಾಗುತ್ತೆ ಎಂದರು. ಸಂಜಯ್ ಪಾಟೀಲ ಹೇಳಿಕೆಯನ್ನು ವೇದಿಕೆ ಮೇಲೆಯೇ ಬಿಜೆಪಿ ನಾಯಕರು ಖಂಡಿಸಬೇಕಿತ್ತು. ಖಂಡಿಸಿದ್ರೆ ಬಿಜೆಪಿಯವರು ಹೆಣ್ಣಿಗೆ ಗೌರವ ಕೊಡ್ತಾರೆ ಎಂದಾಗುತ್ತಿತ್ತು. ಆದರೆ ಇವತ್ತು ಬಿಜೆಪಿಯವರ…

Read More

ಆಂಧ್ರಪ್ರದೇಶ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಡೀ ದೇಶದಲ್ಲಿ ಎಲ್ಲಾ ಪಕ್ಷಗಳು ಚುನಾವಣಾ ಪ್ರಚಾರ ಕೈಗೊಂಡಿದ್ದು ಇದೀಗ ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಚುನಾವಣಾ ಪ್ರಚಾರ ಕೈಗೊಂಡಿದ್ದರು. ಈ ವೇಳೆ ಕಿಡಿಗೇಡಿಗಳು ಅವರ ಮೇಲೆ ಕಲ್ಲೇಸೆದಿರುವ ಘಟನೆ ನಡೆದಿದೆ.ಆಂಧ್ರಪ್ರದೇಶದ ವಿಜಯವಾಡದ ಸಿಂಗ್ ನಗರದಲ್ಲಿ ಈ ಘಟನೆ ನಡೆದಿದೆ. ಚುನಾವಣಾ ಪ್ರಚಾರದ ವೇಳೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಮೇಲೆ ಕಲ್ಲೇಸಿದ್ದಾರೆ. ಕಿಡಿಗೇಡಿಗಳು ಕಲ್ಲೇಸತದಿಂದ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಗೆ ಕಣ್ಣಿಗೆ ಗಾಯವಾಗಿದೆ. ತಕ್ಷಣ ಅವರಿಗೆ ಪ್ರಚಾರದ ವಾಹನದಲ್ಲೇ ಜಗನ್ ಮೋಹನ್ ರೆಡ್ಡಿಗೆ ಪ್ರಾರ್ಥಮಿಕ ಚಿಕಿತ್ಸೆ ನೀಡಲಾಯಿತು. ಪ್ರಾಥಮಿಕ ಚಿಕಿತ್ಸೆ ಬಳಿಕ ಸಿಎಂ ಜಗನ್ಮೋಹನ್ ರೆಡ್ಡಿ ಪ್ರಚಾರವನ್ನು ಮುಂದುವರಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

Read More

ಬೆಂಗಳೂರು : ಕಳೆದ ಎಪ್ರಿಲ್ 10 ರಂದು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳನ್ನು ಕೊಂದು ಜೈಲು ಸೇರಿದ್ದ ತಾಯಿಯೊಬ್ಬಳು ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಗಂಗಾದೇವಿ(30) ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ. ಜಾಲಹಳ್ಳಿಯಲ್ಲಿ ಕಳೆದ ಏಪ್ರಿಲ್ 10 ರಂದು ಮುಂಜಾನೆ ಇಬ್ಬರು ಮಕ್ಕಳನ್ನು ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ ತಾಯಿ, ಗಂಗಾದೇವಿ ಬಳಿಕ ಪೊಲೀಸರಿಗೆ ಕರೆ ಮಾಡಿ ಶರಣಾಗಿದ್ದಾಳೆ.ಭೋವಿ ಕಾಲೊನಿ ನಿವಾಸಿ ಗಂಗಾದೇವಿ(30) ಪೊಲೀಸ್ ಠಾಣೆಗೆ ಶರಣಾಗಿದ್ದಳು. ಗುರುವಾರ ರಾತ್ರಿ ಸೆಂಟ್ರಲ್ ಜೈಲಿಗೆ ಗಂಗಾದೇವಿ ಸೇರಿದಳು.ಗುರುವಾರ ರಾತ್ರಿ ಜೈಲಿನ ಶೌಚಾಲಯದಲ್ಲಿ ಗಂಗಾದೇವಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಸೀರೆಯಿಂದ ನೇಣು ತೆಗೆದುಕೊಂಡು ಗಂಗಾದೇವಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ಆರೋಪಿ ಮಹಿಳೆ ತನ್ನ ಮಕ್ಕಳಾದ ಲಕ್ಷ್ಮಿ(7) ಹಾಗೂ ಗೌತಮ್(9)ನನ್ನು ಕೊಲೆ ಮಾಡಿದ್ದಳು.ಕೌಟುಂಬಿಕ ಕಲಹದಿಂದ ಮಕ್ಕಳನ್ನು ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ಆರೋಪಿ ಮಹಿಳೆ ಹೇಳಿದ್ದಾಳೆ ಎಂದು ಪೊಲೀಸರು ಹೇಳಿದ್ದರು. ಇದೀಗ…

Read More

ಬೆಂಗಳೂರು : ಏಪ್ರಿಲ್‌ 15, ಮೇ 4, 12 ಮತ್ತು ಮೇ 18ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಪಂದ್ಯಗಳು ನಡೆಯಲಿವೆ. ಹಾಗಾಗಿ ಪ್ರಯಾಣಿಕರ ಅನುಕೂಲಕ್ಕೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲು ಬಿಎಂಟಿಸಿ ನಿರ್ಧರಿಸಿದೆ. ಕ್ರಿಕೆಟ್ ಪ್ರೇಮಿಗಳಿಗೆ ಈ ಮೂಲಕ ಬಿಎಂಟಿಸಿ ಸಿಹಿ ಸುದ್ದಿ ನೀಡಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಿಂದ ಎಚ್‌ಎಎಲ್ ರಸ್ತೆ ಮೂಲಕ ಕಾಡುಗೋಡಿ ಬಸ್‌ ನಿಲ್ದಾಣಕ್ಕೆ, ಹೂಡಿ ರಸ್ತೆ ಮೂಲಕ ಕಾಡುಗೋಡಿ ಬಸ್‌ ನಿಲ್ದಾಣಕ್ಕೆ, ಹೊಸೂರು ರಸ್ತೆ ಮೂಲಕ ಎಲೆಕ್ಟ್ರಾನಿಕ್‌ ಸಿಟಿಗೆ, ನಾಗವಾರ–ಟ್ಯಾನರಿ ರಸ್ತೆ ಮೂಲಕ ಆರ್‌.ಕೆ. ಹೆಗಡೆ ನಗರಕ್ಕೆ ಸಂಚರಿಸಲಿವೆ. ಮಾಗಡಿ ರಸ್ತೆ ಮೂಲಕ ಜನಪ್ರಿಯ ಟೌನ್‌ಶಿಪ್‌ಗೆ, ಎಂಟಿಸಿಟಿ– ನಾಯಂಡಹಳ್ಳಿ ಮೂಲಕ ಕೆಂಗೇರಿ ಕೆಎಚ್‌ಬಿ ಕ್ವಾರ್ಟರ್ಸ್‌ಗೆ, ಹೆಣ್ಣೂರು ರಸ್ತೆ ಮೂಲಕ ಬಾಗಲೂರಿಗೆ ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ. ಸರ್ಜಾಪುರ, ಬನ್ನೇರುಘಟ್ಟ ಮೃಗಾಲಯ, ನೆಲಮಂಗಲ, ಯಲಹಂಕ 5ನೇ ಹಂತ, ಹೊಸಕೋಟೆಗಳಿಗೂ ಹೆಚ್ಚುವರಿ ಬಸ್‌ ವ್ಯವಸ್ಥೆ ಇರಲಿದೆ ಎಂದು ಬಿಎಂಟಿಸಿ ಸಾರ್ವಜನಿಕ ಅಧಿಕಾರಿ ತಿಳಿಸಿದ್ದಾರೆ.

Read More

ಬಾಗಲಕೋಟೆ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮಾದರಿ ನೀತಿ ಸಂಹಿತೆಯನ್ನು ಕಟುನಿಟ್ಟಾಗಿ ಪಾಲಿಸುತ್ತಿದ್ದು, ಅಕ್ರಮವಾಗಿ ಹಣ ಮದ್ಯ ಸಾಗಣೆ ಮೇಲೆ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಕಣ್ಣಿಟ್ಟಿದ್ದು ಈಗ ಬಾಗಲಕೋಟೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯಲ್ಲಿದ್ದ 59 ಲಕ್ಷಕ್ಕೂ ಹೆಚ್ಚು ಮೌಲ್ಯದ ಮಧ್ಯವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಲಿದ್ದ 59 ಲಕ್ಷ ರೂಪಾಯಿ ಮೌಲ್ಯದ 14,688 ಲೀಟರ್ ಮದ್ಯವನ್ನು ಇದೀಗ ಅಬಕಾರಿ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಬಾಗಲಕೋಟೆ ಕ್ಷೇತ್ರದ ವ್ಯಾಪ್ತಿಯ ಕೆಎಸ್ಬಿಸಿಎಲ್ ಡಿಪೋದಲ್ಲಿ ಚುನಾವಣಾ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಲಾರಿಯಲ್ಲಿದ್ದ 90 ಎಂಎಲ್ ವಿಸ್ಕಿ ಬಾಟಲ್ ಗಳಿರುವ 1700 ಬಾಕ್ಸ್ ಗಳನ್ನು ವಶಪಡಿಸಿಕೊಂಡಿದ್ದಾರೆ ಪ್ರಕರಣವನ್ನು ದಾಖಲಿಸಿಕೊಂಡು ಅಬಕಾರಿ ಇಲಾಖೆಗಳು ಇದೀಗ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Read More

ಗದಗ : ನಿಯಂತ್ರಣ ತಪ್ಪಿದ KSRTC ಬಸ್ ಒಂದು ಪಲ್ಟಿ ಯಾದ ಪರಿಣಾಮ ಬಸ್ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ. ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ ಆಗಿ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿವೆ. ಬಸ್ ಪಲ್ಟಿಯಾಗುತ್ತಿದ್ದಂತೆ ಪ್ರಯಾಣಿಕರ ಕೂಗಾಟ, ಚಿರಾಟ ಕೇಳಿ ಬಂದಿದ್ದು ಬಸ್ನ ಮುಂದಿನ ಗ್ಲಾಸ್ ಒಡೆದು ಸ್ಥಳೀಯ ಗ್ರಾಮಸ್ಥರು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ.ಗಾಯಾಳುಗಳನ್ನು ರಕ್ಷಿಸಿ ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳನ್ನು ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳ್ಳಟ್ಟಿಯಿಂದ ಮುಂಡರಿಗಿಗೆ ತರುಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಪಲ್ಟಿ ಆಗಿದೆ. ಬಸ್ ಕಂಡಿಶನ್ ಸರಿ ಇಲ್ಲದ್ದರಿಂದ ಪಲ್ಟಿ ಆಗಿದೆ ಎಂದು ಆರೋಪ ಕೇಳಿ ಬಂದಿದೆ. ಘಟನಾ ಸ್ಥಳಕ್ಕೆ ಮುಂಡರಗಿ ತಾಲೂಕು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ವ್ಯಾಪ್ತಿಯ ಜಯನಗರ ಅಸೆಂಬ್ಲಿಯಲ್ಲಿ ಕೋಟ್ಯಾಂತರ ರೂಪಾಯಿ ದಾಖಲೆಯಿಲ್ಲದ ಹಣವನ್ನು ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಏ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಈ ಹಣ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು ಎಂದು ಆರೋಪಿಸಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಸೀಜ್ ಮಾಡಿದ ಕೋಟ್ಯಾಂತರ ಹಣ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು, ಸೋಲು ಖಚಿತವಾಗಿರುವ ಹಿನ್ನೆಲೆಯಲ್ಲಿ ಅವರು ಹಣ ಮತ್ತು ತೋಳ್ಬಲದ ಮೂಲಕ ಗೆಲ್ಲುವ ಹುನ್ನಾರ ನಡೆಸಿದ್ದಾರೆ ಎಂದು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಹಾಲಿ ಸಂಸದ ತೇಜಸ್ವೀ ಸೂರ್ಯ ಹೇಳಿದರು. ಬೆಳಗ್ಗೆ ನಮಗೆ ಇಬ್ಬರು ಫೋನ್ ಮಾಡಿ ಕಾಂಗ್ರೆಸ್ಸಿನವರು ಕೆಂಪು ಬಣ್ಣದ ವೋಕ್ಸವ್ಯಾಗನ್ ಕಾರಿನಲ್ಲಿ ಮತ್ತು ಬಿಳಿ ಬಣ್ಣದ ಇನ್ನೂ ನೊಂದಾಣಿಯಾಗದ ಬೆನ್ಜ್ ಕಾರಿನಲ್ಲಿ ಹಣ ಸಾಗಾಟ ಮಾಡುತ್ತಿದ್ದಾರೆ. ಕೋಟ್ಯಾಂತರ ರೂಪಾಯಿ ದುಡ್ಡನ್ನು ಸಾಗಿಸುತ್ತಿದ್ದಾರೆ ಎಂದು ಯಾರಿಂದ ಬಲವಂತವಾಗಿ ಕಾಂಗ್ರೆಸ್ಸಿನವರು ದುಡ್ಡು ತೆಗೆದುಕೊಂಡಿದ್ದಾರೋ ಅವರು ಕಚೇರಿಗೆ ಫೋನ್…

Read More

ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ, ಅದೇ ರೀತಿ ಜೀವನದಲ್ಲೂ ಏರುಪೇರು ಆಗುತ್ತಲೇ ಇರುತ್ತದೆ. ಒಂದು ವೇಳೆ ತಂತ್ರ ಶಕ್ತಿಯಿಂದ ತೊಂದರೆ ಅನುಭವಿಸುತ್ತಿದ್ದರೆ ಅಥವಾ ಹಣದ ಸಮಸ್ಯೆಯನ್ನು ಎದುರಿಸುತ್ತಿದ್ದರೆ ,ಶತ್ರುಗಳಿಂದ ನಿಮಗೆ ತೊಂದರೆಯಾಗುತ್ತಿದ್ದರೆ ,ಗಂಡ-ಹೆಂಡತಿ ನಡುವೆ ಯಾವುದಾದರೂ ವಿಚಾರಕ್ಕೆ ಯಾವಾಗಲೂ ಕಲಹ ಆಗುತ್ತಿದ್ದರೆ ನಾವು ಇಂದು ತಿಳಿಸಿಕೊಡುವ ಈ ಉಪಾಯವನ್ನು ಮಾಡಿದರೆ ಜೀವನವಿಡಿ ಸುಖ ಶಾಂತಿ ಹಾಗೂ ನೆಮ್ಮದಿಯಿಂದ ಜೀವನವನ್ನು ನಡೆಸಬಹುದು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ,…

Read More

ತುಮಕೂರು : ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಅವರ ಪರವಾಗಿ ಪ್ರಚಾರದ ವೇಳೆ ಎಚ್ ಡಿ ಕುಮಾರಸ್ವಾಮಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವಿ.ಸೋಮಣ್ಣ ಪರ ಪ್ರಚಾರ ಭಾಷಣದಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಾಗಿ ಯಾವ ಜೇಬಿಗೆ ಕೈ ಹಾಕಿದ್ದಾರೆ ಎಂದು ಹೇಳುತ್ತಾ, ಇವತ್ತಿನ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ. ಅವರ ಬದುಕು ಏನಾಗಬೇಕು ಎಂದು ಯೋಚನೆ ಮಾಡಬೇಕಿದೆ ಎಂದಿದ್ದಾರೆ. ಗಮನವಿಟ್ಟು ಎರಡು ಮಾತು ಕೇಳಬೇಕೆಂದು ಹೇಳಿದ ಹೆಚ್‍ಡಿ ಕುಮಾರಸ್ವಾಮಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ ಅವರ ಬದುಕು ಏನಾಗಬೇಕು ಎಂದು ಯೋಚನೆ ಮಾಡಬೇಕಿದೆ. ನಿಮ್ಮ ಕುಟುಂಬದ ಬದುಕು ಏನಾಗಬೇಕೆಂದು ಯೋಚನೆ ಮಾಡಬೇಕು. ಅವರಿಗೆ…

Read More

ಮೈಸೂರು : ರಾಜ್ಯದಲ್ಲಿ 14 ಸಂಸದರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲುತ್ತಾರೆ ಎನ್ನುವ ಭೀತಿಯಿಂದ ಬಿಜೆಪಿ 14 ಸಂಸದರಿಗೆ ಟಿಕೆಟ್ ನೀಡಿಲ್ಲ. ಇನ್ನೂ ಪ್ರತಾಪ ಸಿಂಹ ಹಾಗೂ ಡಿವಿ ಸದಾನಂದ ಗೌಡ ಗೋವಿಂದ ಗೋವಿಂದ ಎಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದರು. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಕಾಂಗ್ರೆಸ್ ಪ್ರಜಾ ಧ್ವನಿ ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಭಾರತೀಯ ಜನತಾ ಪಕ್ಷ 14 ಸಂಸದರಿಗೆ ಟಿಕೆಟ್ ನಿರಾಕರಿಸಿದೆ. ಯಾಕೆಂದರೆ ಅವರೆಲ್ಲರೂ ಸೋಲುತ್ತಾರೆ ಎಂದು ಮೊದಲೇ ಗೊತ್ತಿತ್ತು. ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಹೋರಾಟ ಮಾಡಿದ್ದ adareಬಿಜೆಪಿಯವರು ಯಾಕೆ ಪ್ರತಾಪ್ ಸಿಂಹ ಹಾಗೆ ಟಿಕೆಟ್ ಕೊಡಲಿಲ್ಲ? ಎಂದು ಪ್ರಶ್ನಿಸಿದರು. ಇನ್ನೂ ಚಿಕ್ಕಮಗಳೂರಿನಲ್ಲಿ ಶೋಭಕ್ಕ ನೀನು ಹೋಗಕ್ಕ ಅಂತ ಹೊರಗಡೆ ಕಳುಹಿಸಿಬಿಟ್ಟರು. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೆ, ನಳಿನ್ ಕುಮಾರ್ ಕಟೀಲು ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದರು, ಸಂಸದ ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾಯಿಸುತ್ತೇವೆ ಅಂತಿದ್ದ, ಕೇಂದ್ರ ಸಚಿವ…

Read More