Author: kannadanewsnow05

ಉಡುಪಿ : ರಂಜಾನ್ ಹಬ್ಬದಂದು ಉಡುಪಿಯಲ್ಲಿ ಹೃದಯ ವಿದ್ರಾವಕ ಘಟನೆ ಯೊಂದು ನಡೆದಿದ್ದು, ಉಡುಪಿ ಜಿಲ್ಲೆಯ ಕುಂದಾಪುರದ ಹೆಂಗವಳ್ಳಿ ಸಮೀಪದ ರೆಸಾರ್ಟೊಂದರ ವಾಟರ್‌ ಪಾರ್ಕ್‌ನಲ್ಲಿರುವ ಈಜುಕೊಳದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟ ಘಟನೆ ನಿನ್ನೆ ಸಂಜೆ ನಡೆದಿದೆ. ಮೃತ ಬಾಲಕನನ್ನು ಉಡುಪಿ ಹೂಡೆಯ ಮುಹಮ್ಮದ್ ಅರೀಝ್(10) ಎಂದು ಗುರುತಿಸಲಾಗಿದೆ. ಈತ ಹೂಡೆಯ ದಾರುಸ್ಸಲಾಮ್ ಇಂಗ್ಲಿಷ್ ಮೀಡಿಯಂ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿಯಾಗಿದ್ದ. ಹಬ್ಬದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರೊಂದಿಗೆ ವಾಟ‌ರ್ ಪಾರ್ಕ್‌ಗೆ ತೆರಳಿದ್ದ ಅರೀಝ್, ಆಟವಾಡುತ್ತಿರುವಾಗ ಅಕಸ್ಮಿಕವಾಗಿ ಈಜು ಕೊಳದ ನೀರಿಗೆ ಬಿದ್ದು ತೀವ್ರ ಅಸ್ವಸ್ಥಗೊಂಡಿದ್ದ. ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.ಬಾಲಕನ ಸಾವಿಗೆ ರೆಸಾರ್ಟ್ ನವರ ನಿರ್ಲಕ್ಷ್ಯವೇ ಕಾರಣ ಎಂದು ದೂರಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Read More

ಕಲಬುರ್ಗಿ : ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ರಾಧಾಕೃಷ್ಣಗೆ ವೋಟ್ ಕೊಟ್ಟು ನೋಡಿ ಐದು ವರ್ಷಗಳಲ್ಲಿ ಕಲಬುರ್ಗಿಯಲ್ಲಿ ಏನು ಬದಲಾವಣೆ ಆಗುತ್ತೆ ನೀವೇ ನೋಡಿ. ನಾನು ಇನ್ನೂ ಸತ್ತಿಲ್ಲ ಜನರ ಸೇವೆ ಮಾಡಲು ಬದ್ಧನಾಗಿದ್ದೇನೆ. ಎಂದು ಭಾಷಣದ ವೇಳೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾವುಕರಾದ ಘಟನೆ ಜರುಗಿತು. ಕಲ್ಬುರ್ಗಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನ 25 ಗ್ಯಾರಂಟಿಗಳಿವೆ ಎಲ್ಲವನ್ನು ಈಡೇರಿಸುತ್ತೇವೆ. ಕಲ್ಬುರ್ಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದರು ಎಲ್ಲೇ ಕೇಳಿದರೂ ನಾನು ಒಳ್ಳೆಯ ಕೆಲಸ ಮಾಡಿದ್ದೇನೆ ಎಂದು ಹೇಳ್ತೀರಾ ಆದರೆ ಮತಕಟ್ಟೆಗೆ ಹೋದಾಗ ನಿಮಗೆ ಏನೂ ಅನಿಸುತ್ತೋ ಗೊತ್ತಿಲ್ಲ ಆದರೆ ನಮ್ಮನ್ನೇ ಮರೆತು ಬಿಡ್ತೀರಾ ಎಂದು ಮಲ್ಲಿಕಾರ್ಜುನ ಖರ್ಗೆ ಬೇಸರ ವ್ಯಕ್ತಪಡಿಸಿದರು. ನನ್ನ ಗುರಿ ನಿಜವಾಗಿಯೂ ಕಲ್ಯಾಣ ಕರ್ನಾಟಕ ಕಲ್ಯಾಣ ಕರ್ನಾಟಕ ಭಾಗಕ್ಕೆ 371 ಜೆ ಸ್ಥಾನಮಾನ ತಂದು ಕೊಟ್ಟಿದ್ದೇನೆ. ಈ ಮೂಲಕ ಸಂವಿಧಾನದ ಪುಸ್ತಕದಲ್ಲಿ ಕಲಬುರ್ಗಿ ಹೆಸರನ್ನು ಸೇರಿಸಿದ್ದೇನೆ. ಸೆಂಟ್ರಲ್ ವಿಶ್ವವಿದ್ಯಾಲಯ ಇಎಸ್ಐ…

Read More

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಪಶ್ಚಿಮ ಬಂಗಾಳದಲ್ಲಿ ಅಲ್ಲಿ ಮುಸಾವಿರ್ ಹಾಗೂ ಮತ್ತಿನ್ ಎನ್ನುವ ಇಬ್ಬರು ಉಗ್ರರನ್ನು ಬಂದಿಸಿದ್ದು ಇದೀಗ ಮೆಡಿಕಲ್ ಟೆಸ್ಟ್ ಬಳಿಕ ವಿಶೇಷ ನ್ಯಾಯಾಲಯಕ್ಕೆ ಶಂಕಿತರನ್ನ ಅಧಿಕಾರಿಗಳು ಹಾಜರುಪಡಿಸಿದ್ದಾರೆ. ಈ ಕುರಿತಂತೆ ಬೆಂಗಳೂರಿನಲ್ಲಿ ಗ್ರಹ ಇಲಾಖೆ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿಗಳನ್ನು ನಿನ್ನೆ ಪಶ್ಚಿಮ ಬಂಗಾಳದಲ್ಲಿ ಎನ್ಐಎ ಅಧಿಕಾರಿಗಳು ದಿಗ ಎಂಬ ಊರಿನ ಹೋಟೆಲ್ ನಲ್ಲಿ ಇವರನ್ನು ಬಂಧಿಸಲಾಗಿದೆ. ಶಂಕಿತ ಉಗ್ರ ಮುಸಾವಿರ್ ಜೊತೆ ಮತೀನ್ ತಾಹ ಎನ್ನುವವರನ್ನ ಅರೆಸ್ಟ್ ಮಾಡಿದ್ದಾರೆ. ನಿನ್ನೆ ರಾತ್ರಿ ಎನ್ಐಎ ಅವರು ಅರೆಸ್ಟ್ ಮಾಡಿದ್ದಾರೆ. ಅಲ್ಲಿನ ಪ್ರಕ್ರಿಯೆ ಮುಗಿದ ಬಳಿಕ ಇಂದು ಸಂಜೆ ಪಶ್ಚಿಮ ಬಂಗಾಳದಿಂದ ಬೆಂಗಳೂರಿಗೆ ಕರೆತರುತ್ತಾರೆ ನಂತರ ಪೊಲೀಸರಿಗೆ ಹ್ಯಾಂಡಲ್ ಮಾಡಿ ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.

Read More

ಬೀದರ್ : ಬಹಿರ್ದೆಸೆಗೆ ಹೋಗಿದ್ದ ಮಹಿಳೆಯ ಮೇಲೆ ಯುವಕ ನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಬೀದರ್ ತಾಲೂಕಿನ ಜನವಾಡ ಎಂಬ ಗ್ರಾಮದಲ್ಲಿ ನಡೆದಿದೆ.ಈ ಹಿನ್ನೆಲೆಯಲ್ಲಿ ಯುವಕನ ವಿರುದ್ಧ ಕೊಲೆ ಯತ್ನ ಹಾಗು ಅತ್ಯಾಚಾರ ಕೇಸ್ ದಾಖಲಾಗಿದೆ. ವಿವಾಹಿತ ಮಹಿಳೆಯ ಮೇಲೆ ಯುವಕನಿಂದ ಅತ್ಯಾಚಾರ ನಡೆಸಿರುವ.ಆರೋಪ ಕೇಳಿಬಂದಿದೆ. ಬೀದರ ತಾಲೂಕಿನ ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಬಹಿರ್ದೆಸೆಗೆ ತೆರಳಿದ ಮಹಿಳೆಯ ಮೇಲೆ ಯುವಕ ಅತ್ಯಾಚಾರ ಎಂದು ಆರೋಪ ಕೇಳಿ ಬಂದಿದೆ. ಆರೋಪಿ ಯುವಕನ ವಿರುದ್ಧ ಕೊಲೆ ಯತ್ನ ಹಾಗೂ ಅತ್ಯಾಚಾರ ಕೇಸ್ ದಾಖಲಾಗಿದೆ ಬೀದರ್ ನ ಬ್ರಿಮ್ಸ್ ಆಸ್ಮತಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಇದೀಗ ಪೊಲೀಸರು ಆರೋಪಿ ಯುವಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೂಡ ಅಕ್ರಮವಾಗಿ ಹಣ ಮಧ್ಯ ಚಿನ್ನ ಸಾಗಾಟ ನಡೆಸುತ್ತಿದ್ದು ಅಂತವರ ಮೇಲೆ ಪೊಲೀಸರು ಅಕನಿಟ್ಟಿದ್ದು ಇದೀಗ ರಾಮನಗರ ಹಾಗೂ ದಾವಣಗೆರೆಯಲ್ಲಿ ಒಟ್ಟು 22 ಕೋಟಿ ರೂಪಾಯಿ ಮೌಲ್ಯದ ಚಿನ್ನ ಹಾಗೂ ವಜ್ರವನ್ನು ಜಪ್ತಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ರಾಮನಗರ ತಾಲೂಕಿನ ಬಿಡದಿ ಪೊಲೀಸರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ವಾಹನವನ್ನು ಬಿಡದಿ ಬಳಿಯ ಹೆಜ್ಜಾಲ‌ ಟೋಲ್ ಬಳಿ ಪೊಲೀಸರು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ. ಅಲ್ಲದೆ ದಾವಣಗೆರೆಯ ಲೋಕಿಕೆರೆ ಚೆಕ್​ಪೋಸ್ಟ್ ಮೂಲಕ ದಾಖಲೆ ಇಲ್ಲದೆ ಸಾಗಿಸಲು ಯತ್ನಿಸಿದ 12.50 ಕೋಟಿ ರೂ. ಮೌಲ್ಯದ ಚಿನ್ನ, ವಜ್ರವನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಚುನಾವಣಾ ಅಧಿಕಾರಿ ಲೋಕೇಶ್ ನೇತೃತ್ವದಲ್ಲಿ ತಪಾಸಣೆ ನಡೆಸಲಾಗಿದೆ. ಈ ಚಿನ್ನ ಮತ್ತು ವಜ್ರವನ್ನು ವಿವಿಧ ಆಭರಣ ಅಂಗಡಿಗಳಿಗೆ ಸಾಗಿಸಲಾಗುತ್ತಿತ್ತು ಎಂದು ತಿಳಿಬಂದಿದೆ.…

Read More

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಶಂಕಿತರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಶಕ್ಕೆ ಪಡೆದಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಶಂಕಿತರನ್ನು ಪಶ್ಚಿಮ ಬಂಗಾಳದಿಂದ ಬಂಧಿಸಲಾಗಿದೆ ಎಂದು ಅದು ಹೇಳಿದೆ. ಈ ವೇಳೆ ಸಂಗೀತ ಉಗ್ರ 1,000 ಹಾಗೂ ವತಿಯಿಂದ ನನ್ನು ಮೆಡಿಕಲ್ ಟೆಸ್ಟ್ ಬಳಿಕ ವಿಶೇಷ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಲಾಗಿದೆ ಅಧಿಕಾರಿಗಳು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಹೆಚ್ಚಿನ ವಿಚಾರಣೆಗೆ ಇಬ್ಬರನ್ನು ವಶಕ್ಕೆ ನೀಡುವಂತೆ ಎನ್ಐಎ ಮನವಿ ಮಾಡಿದೆ ಪಶ್ಚಿಮ ಬಂಗಾಳದಲ್ಲಿ ಎನ್ಐಎ ಇಬ್ಬರು ಉಗ್ರರನ್ನು ಬಂಧಿಸಿತ್ತು. ವೇದಿಕೆಯ ಪರೀಕ್ಷೆಯ ನಂತರ ಈ ಇಬ್ಬರನ್ನು ಅಧಿಕಾರಿಗಳು ಬೆಂಗಳೂರಿಗೆ ಕರೆತರಲಿದ್ದಾರೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ, ಗುಪ್ತಚರ ಬ್ಯೂರೋ (ಐಬಿ) ನೀಡಿದ ಮಾಹಿತಿಯ ಮೇರೆಗೆ ರಾಮೇಶ್ವರಂ ಕೆಫೆಯಲ್ಲಿ ನಡೆದ ಭಯಾನಕ ಘಟನೆಯ ಹಿಂದಿನ ಇಬ್ಬರು ಮಾಸ್ಟರ್ ಮೈಂಡ್ಗಳಾದ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಅಬ್ದುಲ್ ಮತೀನ್ ತಾಹಾ ಅವರನ್ನು ಭಯೋತ್ಪಾದನಾ ವಿರೋಧಿ ಸಂಸ್ಥೆ ಪಶ್ಚಿಮ…

Read More

ಹಾಸನ : ಹಾಸನದಲ್ಲಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದಕ್ಕೆ ಬಿಜೆಪಿ ಮುಖಂಡನ ಹಲ್ಲೆ ನಡೆದಿರುವ ಘಟನೆ ನಡೆದಿದೆ. ಮಾಜಿ ಶಾಸಕ ಪ್ರೀತಂ ಗೌಡ ಬೆಂಬಲಿಗರ ವಿರುದ್ಧ ಇದೀಗ ಹಲ್ಲೆ ನಡೆಸಿರುವ ಆರೋಪ ಕೇಳಿ ಬರುತ್ತಿದೆ. ಹಾಸನದ ಎಮ್‌ಜಿ ರಸ್ತೆಯ ಅಂಗಡಿಯಲ್ಲಿದ್ದ ವಸ್ತುಗಳು ದ್ವಂಸ ಮಾಡಲಾಗಿದ್ದು, 30ಕ್ಕೂ ಹೆಚ್ಚು ಯುವಕರ ಗುಂಪಿನಿಂದ ಈ ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ವಿಜಯ್ ಕುಮಾರ್, ಪ್ರಮೋದ್ ಹಾಗೂ ಸಂದೇಶ ಹಳ್ಳಿಗೆ ಗಂಭೀರವಾದ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ದಾಳಿಗೆ ಒಳಗದ ಮೂವರನ್ನು ಹಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಅಂಗಡಿ ಬಳಿ ಬಂದ 30ಕ್ಕೂ ಹೆಚ್ಚು ಜನರು ಬೇರೆಯವರ ಪರ ಪ್ರಚಾರ ಮಾಡ್ತೀಯಾ ಹೀಗೆ ಹೇಳಿ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ .ದಾಳಿ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ವಕ್ತಾರ ವಿಜಯ್ ಕುಮಾರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಡಿಸಿ ಹಾಗೂ ಎಸ್ ಪಿ ಭೇಟಿ ಮಾಡಿದ ಮೈತ್ರಿ ನಿಯೋಗ. ಅಲ್ಲದೆ ಶಾಸಕರಾದ ಸ್ವರೂಪ್ ಕೂಡ…

Read More

ಚಾಮರಾಜನಗರ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಪ್ರಚಾರ ನಡೆಸುತ್ತಿದ್ದು, ಇದೀಗ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಕಾಂಗ್ರೆಸ್ ಸಮಾವೇಶದ ವೇಳೆ ಮಾತನಾಡಿದ ಅವರು, ಎಷ್ಟೇ ಖರ್ಚಾದರೂ ಸರಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ತಿಳಿಸಿದರು. ಪಂಚ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಅವರಿಗೆ ಹೊಟ್ಟೆ ಉರಿ ಎಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಕಾಂಗ್ರೆಸ್ ಸಮಾವೇಶ ನಡೆಯುತ್ತಿದ್ದು ಇಡೀ ದೇಶಕ್ಕೆ ಅಚ್ಛೇದನ್ ಬರುತ್ತೇವೆ ಅಂದ್ರು ಅಚ್ಚೆ ದಿನ್ ಬಂತಾ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಕೇಂದ್ರದಲ್ಲಿ ಅಧಿಕಾರ ಕೊಟ್ಟರೆ ಕೊಟ್ಟ ಭರವಸೆ ಈಡೇರಿಸುತ್ತೇವೆ.ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ನಾವು ನುಡಿದಂತೆ ನಡೆದಿದ್ದೇವೆ.ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಈ ಬಾರಿ ಉಚಿತವಾಗಿ ತಲಾ ಹತ್ತು ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದೆವು. ಆದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡಲಿಲ್ಲ ಬಡವರಿಗೆ ಹಾಕಿ ಕೊಡುವುದಕ್ಕೂ ಕೇಂದ್ರ ಸರ್ಕಾರ…

Read More

ಬೀದರ್ : ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ರೈತರಿಗೆ ಲೋನ್ ಕೊಡುತ್ತಿದ್ದಾರೆಂಬ ಆರೋಪದ ಮೇಲೆಸಚಿವ ಈಶ್ವರ ಖಂಡ್ರೆ ಅವರ ಸಹೋದರರಾಗಿರುವ ಅಮರ್ ಖಂಡ್ರೆ ಅವರು ಅಧ್ಯಕ್ಷರಾಗಿರುವ ಡಿಸಿಸಿ ಬ್ಯಾಂಕ್ ಮೇಲೆ ಇಂದು 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/use-of-drinking-water-for-other-purposes-in-bengaluru-how-much-fine-has-been-collected-so-far-heres-the-complete-information/ ಬೀದರ್ ಹೈದರಾಬಾದ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕ್ ಮೇಲೆ ಐಟಿ ಅಧಿಕಾರಿಗಳು ಇದೀಗ ದಾಳಿ ನಡೆಸಿದ್ದಾರೆ.ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ರೈತರಿಗೆ ಲೋನ್ ಕೊಡುತ್ತಿದ್ದಾರೆಂಬ ಆರೋಪದ ಮೇಲೆ ದಾಳಿಯಾಗಿದೆ. ಬೀದರ್ ನಗರದ ಹೈದ್ರಾಬಾದ್ ರಸ್ತೆಯಲ್ಲಿರು ಡಿಸಿಸಿ ಬ್ಯಾಂಕ್ ಮೇಲೆ 15ಕ್ಕೂ ಅಧಿಕ ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ಬ್ಯಾಂಕ್ ಅಕೌಂಟ್ ಪರಿಶೀಲನೆ ನಡೆಸಿದ್ದಾರೆ. https://kannadanewsnow.com/kannada/bengaluru-techie-duped-of-rs-2-25-crore-by-threatening-to-contain-drugs-in-parcel/ ತೆಲಂಗಾಣ, ಯಾದಗಿರಿ ಕಲಬುರಗಿಯಿಂದ ಬಂದಿರುವ ಐಡಿ ಅಧಿಕಾರಿಗಳು ಬ್ಯಾಂಕ್​ನ ಅಕೌಂಟ್ಸ್​ಗಳನ್ನು ಪರಿಶೀನಲೆ ಮಾಡುತ್ತಿದ್ದಾರೆ. ಇನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಸಹೋದರ ಅಮರ ಖಂಡ್ರೆ ಬೀದರ್​ ಡಿಸಿಸಿ ಬ್ಯಾಂಕ್​ನ ಅಧ್ಯಕ್ಷರಾಗಿದ್ದಾರೆ. ಬ್ಯಾಂಕ್​ ಸಿಬ್ಬಂದಿಯ ಮೊಬೈಲ್​ಗಳನ್ನು…

Read More

ಬೆಂಗಳೂರು : ಬೆಂಗಳೂರಲ್ಲಿ ಕುಡಿಯುವ ನೀರನ್ನು ಕೇವಲ ಕುಡಿಯಲು ಅಷ್ಟೇ ಬಳಕೆ ಮಾಡುವಂತೆ ಜಲಮಂಡಳಿ ಸೂಚನೆ ನೀಡಿದ್ದು, ನೀರನ್ನು ಅನ್ಯ ಬಳಕೆ ಮಾಡಿದರೆ ಮಾ.10ರಂದು ದಂಡ ಹಾಕುವುದಾಗಿ ಆದೇಶ ನೀಡಿತ್ತು. ಆ ಆದೇಶದ ಪ್ರಕಾರ ಇದುವರೆಗೂ ಬೆಂಗಳೂರು ನಗರದಲ್ಲಿ ಈ ಸಂಬಂಧ ಈವರೆಗೂ 407 ಮಂದಿಗೆ ದಂಡ ವಿಧಿಸಿದ್ದು, 20 ಲಕ್ಷ ರೂ ಸಂಗ್ರಹವಾಗಿದೆ. ಈ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ. https://kannadanewsnow.com/kannada/bengaluru-techie-duped-of-rs-2-25-crore-by-threatening-to-contain-drugs-in-parcel/ ಬೆಂಗಳೂರಿನ ಜನತೆಗೆ ಜಲ ಮಂಡಳಿಯು ಕುಡಿಯುವ ನೀರಿಗೆ ಹೊರತುಪಡಿಸಿ ವಾಹನಗಳ ಸ್ವಚ್ಛತೆಗೆ ಕೈದೊಟಕ್ಕೆ ಕಟ್ಟಡಗಳ ನಿರ್ಮಾಣಕ್ಕೆ ಅಥವಾ ಕಾರಂಜಿಗಳಲ್ಲಿ ಮಾಲ್ಗಳಲ್ಲಿ ಇತರ ಅನ್ಯ ಬಳಕೆಗೆ ಕುಡಿಯುವ ನೀರನ್ನು ಬಳಸಿದರೆ ಮಾ. 10ರಂದು ಆದೇಶ ಹೊರಡಿಸಿದೆ. ನಿಯಮ ಉಲ್ಲಂಘಿಸಿದವರಿಗೆ 5 ಸಾವಿರ ರೂ. ದಂಡ ವಿಧಿಸುವುದಾಗಿ ಎಚ್ಚರಿಕೆ ಸಹ ನೀಡಲಾಗಿತ್ತು. https://kannadanewsnow.com/kannada/lok-sabha-elections-2024-election-commission-modifies-voting-process-for-kashmiri-migrant-voters/ ಆದರೂ ಕೂಡ ಜಲಮಂಡಳಿಯ ಆದೇಶವನ್ನು ಮೀರಿ ಈ ಹಲವು ಜನರು ಕಾವೇರಿ ನೀರನ್ನು ಕುಡಿಯಲು ಬಳಸದೆ ಅನ್ಯ ಬಳಕೆ ಮಾಡಿದ್ದರಿಂದ 5000 ದಂಡ ವಿಧಿಸಿದ್ದಾರೆ. ಅದರ…

Read More