Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಶಿವಮೊಗ್ಗ,ಫೆ 13 (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ(ಕೆಪೆಕ್) ಸಂಸ್ಥೆ, ಜಿಲ್ಲಾ ಪಂಚಾಯತ್, ಕೃಷಿ ಹಾಗೂ ತೋಟಗಾರಿಕೆ ಇಲಾಖೆ, ಚಿಕ್ಕಮಗಳೂರು ಇವರ ವತಿಯಿಂದ ಫೆ.17 ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಚಿಕ್ಕಮಗಳೂರಿನ ಜಿ.ಪಂ ಸಭಾಂಗಣದಲ್ಲಿ ‘ಕಾಳು ಮೆಣಸು ಮತ್ತಿತರೆ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ರಫ್ತು’ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ತರಬೇತಿಯಲ್ಲಿ ಸಂಬಾರು ಬೆಳೆಗಳ ವಿವಿಧ ವಿಷಯ ತಜ್ಞರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ತರಬೇತಿ ನೀಡುವರು. ಸಂಬಾರು ಬೆಳೆಗಾರರು, ರೈತ ಉತ್ಪಾದಕ ಸಂಸ್ಥೆಗಳು, ಸಂಬಾರು ಉತ್ಪನ್ನಗಳ ಉದ್ದಿಮೆದಾರರಿಗೆ ಈ ತರಬೇತಿ ಕಾರ್ಯಕ್ರಮವು ಉಪಯುಕ್ತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೆಪೆಕ್ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಬೆಂಗಳೂರು : ಮುಂದಿನ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಪ್ರೊ. ಗೋವಿಂದರಾವ್ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕಾಗಿ ಕನಿಷ್ಟ 15 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಹೆಚ್ಚು ಅವಧಿ ಅಧಿಕಾರದಲ್ಲಿದಿದ್ದುಕಾಂಗ್ರೆಸ್ ಪಕ್ಷ. ಅತಿ ಹೆಚ್ಚು ಬಜೆಟ್ ಮಂಡಿಸಿರುವುದು ಸಿದ್ದರಾಮಯ್ಯ. ಹೀಗಾಗಿ ಪ್ರಾದೇಶಿಕ ಅಸಮತೋಲನಕ್ಕೆ ಅವರೇ ಕಾರಣ. ಈಗ ಆ ತಪ್ಪನ್ನು ಸರಿಪಡಿಸಲು ಬಜೆಟ್‌ನಲ್ಲಿ ಸೂಕ್ತ ಅನುದಾನ ನಿಗದಿ ಮಾಡಬೇಕು ಎಂದು ಇಂದು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ. ಅನ್ಯ ಇಲಾಖೆ ಅಥವಾ ಸಂಸ್ಥೆಗಳಿಗೆ ನೀಡುವ ಅನುದಾನವನ್ನು ಕ್ರೊಢೀಕರಿಸಿ ಇಂತಿಷ್ಟು ಮೊತ್ತ ಹಣವನ್ನು ನೀಡಿರುವುದಾಗಿ ಹಾರಿಕೆ ಭರವಸೆ ನೀಡಬಾರದು. ಕೆಕೆಆರ್‌ಡಿಬಿ ಸಹಿತ ಇತರೆ ಅಭಿವೃದ್ಧಿ ಮಂಡಳಿ ಅಥವಾ ನಿಗಮಗಳಿಗೆ ನೀಡುವ ಅನುದಾನವನ್ನು ಈ ಲೆಕ್ಕಾಚಾರಕ್ಕೆ ಸೇರಿಸಬಾರದು. ತಾರತಮ್ಯ ನಿವಾರಣೆಗಾಗಿಯೇ ವಿಶೇಷ, ಪ್ರತ್ಯೇಕ ಅನುದಾನ ಒದಗಿಸಬೇಕು. ಇಲ್ಲವಾದರೆ ನಿಮ್ಮ ಮಾತಿಗೂ ಕೃತಿಗೂ ಸಂಬಂಧವಿಲ್ಲ…
ಶಿವಮೊಗ್ಗ. ಫೆಬ್ರವರಿ 13: ( ಕರ್ನಾಟಕ ವಾರ್ತೆ): ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ಅಭಿವೃದ್ದಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಲ್ಲಿ ನಿಗಮದಿಂದ ವಾಹನ ಖರೀದಿಗೆ ರೂ.3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂದು ಪೋರ್ಟೆಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯು ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ಹಿಂದುಳಿದ ವರ್ಗಗಳ ಪ್ರವರ್ಗ-1ರ ಬುಂಡ್ ಬೆಸ್ತರ್, ಬೈಲ ಪತ್ತರ್, ಭೈರಾಗಿ (ಬಾವ), ಬಜಿನಿಯ, ಬಾಲಸಂತೋಶಿ-ಜೋಶಿ, ಬಾಜಿಗರ್, ಭರಡಿ, ಬುಡ್ ಬುಡಕಿ – ಜೋಶಿ- ಗೋಂಧಳಿ, ಚಾರ, ಚಿತ್ರಕಶಿ-ಜೋಶಿ, ದರ್ವೇಶ್, ದವೇರಿ, ಧೋಲಿ, ದೊಂಬರಿ, ದೊಂಬಿದಾಸ, ದುರ್ಗ-ಮುರ್ಗ (ಬುರ್ ಬುರಚ), ಗರಡಿ, ಘಿಸಡಿ, ಗೊಲ್ಲ, ಗೋಂಧಳಿ, ಗೋಪಲ್, ಹೆಳವ, ಹಾವ್ ಗಾರ (ಹಾವಡಿಗರ್), ಜೋಗಿ, ಜೋಶಿಸಾದ ಜೋಶಿ, ಕಾಶಿಕಪಾಡಿ, ಕಡಬು, ಕೆಲ್ ನಾರಿ, ಕಿಳ್ಳೆಕ್ಯಾತನ್, ಕೊಲಾತಿ, ಮಸನಿಯ…
ಹಾಸನ : ಮದುವೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಹಾಸನ ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ ಮಹಿಳೆಯ ಉಡುಪು, ಚಪ್ಪಲಿ ಹಾಗೂ ವ್ಯಾನಿಟಿ ಬ್ಯಾಗ್ ಪತ್ತೆಯಾಗಿದೆ ತುಮಕೂರು ಜಿಲ್ಲೆಯ ಕುಣಿಗಲ್ ನಿವಾಸಿಯಾಗಿರುವ ಪ್ರಿಯಾಂಕ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಮದುವೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪ್ರಿಯಾಂಕ ಚಿಕ್ಕಮಂಗಳೂರಿಗೆ ಬಂದಿದ್ದರು. ನಿಗೂಢವಾಗಿ ನಾಪತ್ತೆಯಾದ ಬೆನ್ನಲ್ಲೇ ಈ ವಿಚಾರವಾಗಿ ದೂರು ಕೊಟ್ಟರು ಪೊಲೀಸರು ಸ್ಪಂದಿಸುತ್ತಿಲ್ಲ ಎಂದು ಸಂಬಂಧಿಕರು ಗಂಭೀರವಾಗಿ ಆರೋಪಿಸಿದ್ದಾರೆ. ಇದೀಗ ಅರೆಹಳ್ಳಿ ಹಾಗೂ ಬೇಲೂರು ಠಾಣೆ ಪೊಲೀಸರ ವಿರುದ್ಧ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಧರ್ಮಸ್ಥಳಕ್ಕೆ ಪಾದಯಾತ್ರೆಗೆ ಹೊರಟಿರುವ ಜನರಿಗೆ ಪ್ರಿಯಾಂಕಾ ಆಧಾರ್ ಕಾರ್ಡ್ ಸಿಗುತ್ತದೆ. ಅವರು ತಕ್ಷಣ ಆಧಾರ್ ಕಾರ್ಡನಲ್ಲಿದ್ದ ನಂಬರ್ ಗೆ ಕರೆ ಮಾಡುತ್ತಾರೆ ಅದು ಅವರ ಪತಿಗೆ ಹೋಗುತ್ತದೆ ನಿಮ್ಮ ಪತ್ನಿ ಆಧಾರ್ ಕಾರ್ಡ್ ನಮಗೆ ಸಿಕ್ಕಿದೆ ಎಂದು ಮಾಹಿತಿ ನೀಡುತ್ತಾರೆ. ತಕ್ಷಣ ಕುಟುಂಬಸ್ಥರು ಸ್ಥಳಕ್ಕೆ ಬಂದಾಗ ಅಲ್ಲಿ ಅವರ ವಸ್ತುಗಳು ಸಿಗುತ್ತವೆ. ಆದರೆ ಅವರು ನಾಪತ್ತೆಯಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 373 ಸಮೀಪ…
ಮೈಸೂರು : ಕಳೆದ ಕೆಲವು ದಿನಗಳಿಂದ ಮೈಸೂರಿನಲ್ಲಿ ಚಿನ್ನದ ಅಂಗಡಿಗೆ ನುಗ್ಗಿ ಚಿನ್ನಾಭರಣ ದರೋಡೆ ಪ್ರಕರಣ ನಡೆದಿತ್ತು. ಆ ಒಂದು ಘಟನೆ ಮಾದರಿಯಲ್ಲಿಯೇ ಮತ್ತೊಂದು ದರೋಡೆಯಾಗಿದ್ದು, ಪೆಟ್ರೋಲ್ ಬಂಕ್ ನಲ್ಲಿ ಐವರು ಡ್ಯಾಗರ್ ತೋರಿಸಿ ದರೋಡೆ ಮಾಡಿದ್ದಾರೆ. ಮೈಸೂರು ಕಿರುಮುದ್ದನಹಳ್ಳಿ ಬಳಿ ಇರುವ ಪೆಟ್ರೋಲ್ ಬಂಕ್ ನಲ್ಲಿ ಈ ಒಂದು ದರೋಡೆ ನಡೆದಿದೆ. ನಂಬರ್ ಪ್ಲೇಟ್ ಇಲ್ಲದ ಸ್ಕೋಡಾ ಕಾರಿನಲ್ಲಿ ಐವರು ಬಂದು ಈ ದುಷ್ಕೃತ ಎಸಗಿದ್ದಾರೆ. ಪೆಟ್ರೋಲ್ ಬಂಕ್ ನಲ್ಲಿ ಇದ್ದ ಇಬ್ಬರೂ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದ್ದಾರೆ. ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೆಟ್ರೋಲ್ ಬಂಕ್ ನಲ್ಲಿ ದಿನದ ವ್ಯವಹಾರದ ನಗದು ಇಟ್ಟಿದ್ದರು. ಈ ವೇಳೆ ಡ್ಯಾಗಾರ್ ನಿಂದ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ನಗದು ಹಣ ದೋಚಿಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ರಾತ್ರಿಯ ವೇಳೆ ಪೆಟ್ರೋಲ್ ಕೇಳಿಕೊಂಡು ಬಂದು ಈ ಒಂದು ಕೃತ್ಯ ಎಸಗಿದ್ದಾರೆ. ದರೋಡೆಕೋರರಿಗೆ ಸದ್ಯ ಪೋಲಿಸಲು ಹುಡುಕಾಟ ನಡೆಸುತ್ತಿದ್ದಾರೆ
ಹಾವೇರಿ : ರಾಜ್ಯ ಕಾಂಗ್ರೆಸ್ ಸರ್ಕಾರ ಸಾವಿರ ದಿನ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಹಾವೇರಿಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಂಡಿದೆ ಈ ಒಂದು ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು ಹಾಗೂ ಶಾಸಕರು ಭಾಗಿಯಾಗಲಿದ್ದಾರೆ. ಇದೀಗ ಹಾವೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ ನಾಯಕತ್ವ ಬದಲಾವಣೆಯ ಬಗ್ಗೆ ನನಗೆ ಪದೇ ಪದೇ ಪ್ರಶ್ನೆ ಕೇಳಬೇಡಿ. ಹೈಕಮಾಂಡ್ ನಾಯಕರು ಏನು ಹೇಳುತ್ತಾರೋ ನಾನು ಅದರಂತೆ ನಡೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶಿವಮೊಗ್ಗ, ಫೆಬ್ರವರಿ 13, (ಕರ್ನಾಟಕ ವಾರ್ತೆ): ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿ:02/03/2026 ರಿಂದ 31 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗೆ ಉಚಿತ ಎಂಬ್ರಾಯಡರಿ ಆರಿ ವರ್ಕ್ ಮತ್ತು ಸ್ಯಾರಿ ಕುಚ್ಚು ಹಾಕುವುದು, ಬ್ಲೌಸ್ ಗಳಿಗೆ ಆರಿ ವರ್ಕ್ ಮಾಡುವುದು, ಸ್ಯಾರಿ ಕುಚ್ಚು ಮತ್ತು ಫ್ಯಾಬ್ರಿಕ್ ಪೈಂಟಿAಗ್ ಬಗ್ಗೆ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.…
ಶಿವಮೊಗ್ಗ: ಫೆಬ್ರುವರಿ 13, (ಕರ್ನಾಟಕ ವಾರ್ತೆ) : ಕರ್ನಾಟಕ ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಲ್ಲಿ ನಿಗಮದಿಂದ ವಾಹನ ಖರೀದಿಗೆ ರೂ.3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂಧು ಪೋರ್ಟೆಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯು ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ 3-ಎ ನಲ್ಲಿ ಕ್ರಮ ಸಂಖ್ಯೆ 1 ರ(ಎ) ಯಿಂದ (ಟಿ) ರವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್‌ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಹಳ್ಳಿಕಾರ್, ಕುಂಚಿಟಿಗ, ಕಾಪು, ಹೆಗ್ಗಡೆ, ಕಮ್ಮ,ರಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನ ಕೊಳಗ/ಉತ್ತಮ ಕೊಳಗ ಸಮುದಾಯಕ್ಕೆ ಸೇರಿದ ಜಾತಿಗಳಿಗೆ ಅನ್ವಯವಾಗುತ್ತದೆ. ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಆಧಾರ್ ಕಾರ್ಡನಲ್ಲಿರುವಂತೆ…
ನಾಳೆ ಎಲ್ಲೆಡೆ ಮಹಾ ಶಿವರಾತ್ರಿ ಆಚರಣೆ ಮಾಡಲಾಗುತ್ತದೆ. ಆದರೆ ಹಲವು ಜನರಿಗೆ ಶಿವರಾತ್ರಿ ದಿನದಂದು ಹೇಗೆ ಉಪವಾಸ ಮಾಡುತ್ತಾರೆ ಉಪವಾಸದ ಹಿಂದಿನ ಇತಿಹಾಸವೇನು ಎಂಬುವುದರ ಕುರಿತು ತಿಳಿದಿರುವುದಿಲ್ಲ ಹಾಗಾಗಿ ಇದೀಗ ಶಿವರಾತ್ರಿಯ ದಿನ ಉಪವಾಸ ಏಕೆ ಮಾಡುತ್ತಾರೆ ಅದರ ಹಿಂದಿನ ಇತಿಹಾಸದ ಕುರಿತು ತಿಳಿಯೋಣ. ಇದು ಆಧ್ಯಾತ್ಮಿಕ, ಪುರಾಣಿಕ ಮತ್ತು ಯೋಗಿಕ ಅರ್ಥ ಹೊಂದಿರುವ ಆಚರಣೆ. 🔱 ಉಪವಾಸ ಮಾಡುವ ಪ್ರಮುಖ ಕಾರಣಗಳು 1️⃣ ಮನಸ್ಸು–ದೇಹ ಶುದ್ಧಿಗಾಗಿ ಉಪವಾಸದಿಂದ ದೇಹಕ್ಕೆ ವಿಶ್ರಾಂತಿ ಸಿಗುತ್ತದೆ. ಜೀರ್ಣಕ್ರಿಯೆ ಕಡಿಮೆಯಾಗುತ್ತದೆ, ಮನಸ್ಸು ಹೆಚ್ಚು ಶಾಂತವಾಗುತ್ತದೆ. ಶಿವರಾತ್ರಿ ರಾತ್ರಿ ಜಾಗರಣೆ + ಧ್ಯಾನ ಮಾಡುವುದರಿಂದ ಆತ್ಮಶುದ್ಧಿ ಆಗುತ್ತದೆ ಎಂದು ನಂಬಿಕೆ. 2️⃣ ಶಿವತತ್ತ್ವಕ್ಕೆ ಸಮೀಪವಾಗಲು ಈ ರಾತ್ರಿ ಶಿವನ ಶಕ್ತಿ ಹೆಚ್ಚು ಸಕ್ರಿಯವಾಗಿರುತ್ತದೆ ಎಂದು ಭಕ್ತರ ನಂಬಿಕೆ. ಉಪವಾಸದಿಂದ ಇಂದ್ರಿಯ ನಿಯಂತ್ರಣ ಬರುತ್ತದೆ — ಇದು ಶಿವಭಕ್ತಿಯ ಪ್ರಮುಖ ಭಾಗ. 3️⃣ ಆಸೆಗಳ ನಿಯಂತ್ರಣ ಹಸಿವು, ನಿದ್ರೆ, ಇಂದ್ರಿಯಗಳ ಮೇಲೆ ನಿಯಂತ್ರಣ ಸಾಧಿಸುವುದು — ಭಕ್ತಿಗೆ ಬೇಕಾದ…
ಬೆಂಗಳೂರು : ಇತ್ತೀಚಿಗೆ ಕೆನಡಾದಲ್ಲಿ ಗುಂಡಿನ ದಾಳಿಗೆ ತುಮಕೂರು ಮೂಲದ ವ್ಯಕ್ತಿಯೊಬ್ಬ ಬಲಿಯಾಗಿದ್ದ. ಇದೀಗ ಅಮೆರಿಕಾದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ಒಬ್ಬ ನಾಪತ್ತೆಯಾಗಿದ್ದಾನೆ. ಕರ್ನಾಟಕ ಮೂಲದ 22 ವರ್ಷದ ವಿದ್ಯಾರ್ಥಿ ಸಾಕೆತ್ ನಾಪತ್ತೆಯಾಗಿದ್ದಾನೆ. ಸಾಕೆತ್ ಶ್ರೀನಿವಾಸಯ್ಯ (22) ನಾಪತ್ತೆಯಾದ ವಿದ್ಯಾರ್ಥಿ ಎಂದು ತಿಳಿದು ಬಂದಿದ್ದು, ಈತ ಕ್ಯಾಲಿಫೋರ್ನಿಯ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ರಾಸಾಯನಿಕ ಜೈವಿಕ ಅಣು ಇಂಜಿನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಕಾಣೆಯಾಗಿದ್ದಾನೆ. ನಾಪತ್ತೆಯಾಗಿರುವ ಸಾಕೇತ್ ಎಲ್ಲಿ ಹೋದ ಅಂತ ಇದುವರೆಗೂ ಗೊತ್ತಾಗುತ್ತಿಲ್ಲ ಹೀಗಾಗಿ ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ತಮ್ಮ ಮಗನನ್ನು ಹುಡುಕಿ ಕೊಡಿ ಎಂದು ಕೇಳಿಕೊಳ್ಳುತ್ತಿದ್ದಾರೆ.













