Author: kannadanewsnow05

ಬೆಂಗಳೂರು : ನಿಮ್ಮ ಹೆಸರಿನಲ್ಲಿ ರವಾನೆಯಾದ ಪಾರ್ಸೆಲ್‌ನಲ್ಲಿ ಮಾದಕ ವಸ್ತು ಇದೆ ಎಂದು ಕರೆ ಮಾಡಿ ವಂಚಿಸುವ ಸೈಬರ್ ವಂಚಕರ ಪ್ರಕರಣಗಳು ಹೆಚ್ಚುತ್ತಿವೆ ಇದೀಗ ಅಮೃತಹಳ್ಳಿಯ ಸಾಫ್ಟ್‌ವೇರ್‌ ಎಂಜಿನಿಯರ್‌ ಒಟ್ಟು 2.24 ಕೋಟಿ ಹಣ ಕಳೆದುಕೊಂಡಿದ್ದಾರೆ. ಹೌದು ಸಾಫ್ಟ್‌ವೇರ್‌ ಎಂಜಿನಿಯರ್‌ಗೆ ಕೆಲ ದಿನಗಳ ಹಿಂದೆ ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿ, ನಿಮ್ಮ ಹೆಸರಿಗೆ ಬಂದಿರುವ ಪಾರ್ಸೆಲ್‌ ಅನ್ನು ದಿಲ್ಲಿಯಲ್ಲಿ ಜಪ್ತಿ ಮಾಡಲಾಗಿದೆ. ಅದರಲ್ಲಿ ನಿಮ್ಮ ಪಾಸ್‌ಪೋರ್ಟ್‌, ಎಟಿಎಂ ಕಾರ್ಡ್‌ಗಳು ಮತ್ತು ಎಂಡಿಎಂಎ ಮಾದಕ ವಸ್ತುವಿದೆ, ಎಂದು ಸುಳ್ಳು ಹೇಳಿ ಬೆದರಿಸಿದ್ದ. https://kannadanewsnow.com/kannada/lok-sabha-elections-2024-election-commission-modifies-voting-process-for-kashmiri-migrant-voters/ ನಂತರ ಪಾರ್ಸೆಲ್‌ನಲ್ಲಿ ಮಾದಕ ವಸ್ತು ಇರುವುದು ಆ್ಯಂಟಿ ನಾರ್ಕೊಟಿಕ್‌ ಬ್ಯೂರೊಗೆ ಗೊತ್ತಾಗಿದೆ. ಆ ಪಾರ್ಸೆಲ್‌ ನಿಮಗೆ ಸೇರಿರದಿದ್ದರೆ ದೂರು ಕೊಡಬಹುದು. ದೂರು ದಾಖಲಿಸಲು ಸ್ಕೈಪ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳಿ, ಎಂದು ಆ ವಂಚಕ ಸೂಚಿಸಿದ್ದ.ಆತನ ಸೂಚನೆಯಂತೆ ಇದನ್ನು ನಿಜವೆಂದು ನಂಬಿದ ಟೆಕ್ಕಿಯು ಸ್ಕೈಪ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡಿದ್ದರು. ನಂತರ ಆಪ್ ನಲ್ಲಿ ಪೊಲೀಸ್ ಸಮವಸ್ತ್ರದಲ್ಲಿ…

Read More

ವಿಜಯಪುರ : ಸಿಡಿಲು ಬಡಿದು ಬೀರಪ್ಪ ನಿಂಗಪ್ಪ ಅವರಾದಿ (16) ಎನ್ನುವ ಬಾಲಕ ದುರ್ಮರಣ ಹೊಂದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಾವಿನಪುರ ಎಂಬಲ್ಲಿ ನಡೆದಿದೆ. ಮೃತ ಬಾಲಕನ ಕುಟುಂಬಕ್ಕೆ ಪರಿಹಾರ ನೀಡುವಂತೆ ಇದೀಗ ಜನರು ಆಗ್ರಹಿಸುತ್ತಿದ್ದಾರೆ. ಅಲ್ಲದೆ ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿದಿದ್ದು, ಬಿಸಿಲಿನ ತಾಪದಿಂದ ರೋಸಿ ಹೋಗಿದ್ದ ಜನತೆಗೆ ಇದೀಗ ಮಳೆರಾಯ ಕರುಣೆ ತೋರಿ ತಂಪೆರಿದಿದ್ದಾನೆ. ಅಲ್ಲದೆ ಇದ್ದ ಕಲಬುರ್ಗಿ ನಗರದಲ್ಲೂ ಕೂಡ ಒಂದು ಗಂಟೆಗಳ ಕಾಲ ಮಳೆಯಾಗಿ ಮಳೆರಾಯ ತಂಪೆರೆದಿದ್ದಾನೆ ಎಂದು ತಿಳಿದು ಬಂದಿದೆ

Read More

ಬೆಂಗಳೂರು : ಕರ್ನಾಟಕದಲ್ಲಿ ಗೃಹಲಕ್ಷ್ಮಿ ಅನ್ನೋದು ವರದಾನವಾಗಿದೆ. ಮಹಾಲಕ್ಷ್ಮಿ ಸ್ಕೀಮ್ ನಲ್ಲಿ ನಾವು ಒಂದು ಲಕ್ಷ ರೂಪಾಯಿ ಕೊಡುತ್ತೇವೆ.ಮಧ್ಯಮ ವರ್ಗದ ಮಹಿಳೆಯರಿಗೆ ಪ್ರತಿ ವರ್ಷ ಒಂದು ಲಕ್ಷ ರೂಪಾಯಿ ಸಿಗುತ್ತದೆ.ಇದಕ್ಕೆ ಕರ್ನಾಟಕದ ಸರ್ಕಾರದ ಗ್ಯಾರಂಟಿ ಯೋಜನೆಗಳು ಉದಾಹರಣೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣಧೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದರು. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪತನದ ಹಾದಿಯಲ್ಲಿದೆ, ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಭ್ರಷ್ಟಾಚಾರ ಮಿತಿಮೀರಿದೆ. ಇದು ಭಾರತದ ಜನರ ಮಾತಾಗಿದೆ. ನಿರುದ್ಯೋಗ ಹಾಗೂ ಆರ್ಥಿಕ ದಿವಾಳಿತನ ಸಮಸ್ಯೆಯಾಗಿದೆ.ಬಿಜೆಪಿಯವರು ಜಾತಿ ಧರ್ಮದ ಹೆಸರಿನಲ್ಲಿ ದೇಶ ಒಡೆಯುತ್ತಿದ್ದಾರೆ ಎಂದು ರಾಜ್ಯ ಚುನಾವಣೆ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದರು. ಬಿಜೆಪಿಯೇತರ ರಾಜ್ಯಗಳ ಕೇಂದ್ರ ಸರ್ಕಾರ ಗಮನ ಹರಿಸುತ್ತಿಲ್ಲ. ಬಿಜೆಪಿ ಆಡಳಿತ ವಿಲ್ಲದ ರಾಜ್ಯಗಳು ರೋಸಿ ಹೋಗಿವೆ.ಸಿದ್ದರಾಮಯ್ಯ ನೇತೃತ್ವ ಸರ್ಕಾರ ಸಹ ಇದೆ ಆರೋಪ ಮಾಡುತ್ತಿದೆ.ಬರದಿಂದ ರಾಜ್ಯ ತತ್ತರಿಸಿದೆ.ಬರ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದರು. ಐದು ತಿಂಗಳಿನಿಂದ ಸರ್ಕಾರ ಕೊಟ್ಟ…

Read More

ಚಿಕ್ಕಮಗಳೂರು: ಮಹಿಳೆ ಒಬ್ಬರು ಒಂಟಿಯಾಗಿರುವುದನ್ನು ಗಮನಿಸಿ ಅವರ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿ ವ್ಯಾಪ್ತಿಯ ಹುಣಸೇಮಕ್ಕಿಯಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ. ಹುಣಸೇಮಕ್ಕಿ ಗ್ರಾಮದ ನಿವಾಸಿ ಲಲಿತಾ(43) ಬರ್ಬರವಾಗಿ ಹತ್ಯೆಯಾದ ದುರ್ದೈವಿ ಎಂದು ಹೇಳಲಾಗುತ್ತಿದೆ. ಕಳೆದ ಅನೇಕ ವರ್ಷಗಳಿಂದ ಈ ಮಹಿಳೆ ಹುಣಸೇಮಕ್ಕಿ ಗ್ರಾಮದಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದರು ಎನ್ನಲಾಗಿದೆ.ಮಹಿಳೆಯನ್ನು ಬುಧವಾರ ರಾತ್ರಿ ಅಪರಿಚಿತ ವ್ಯಕ್ತಿಗಳು ಮನೆಗೆ ನುಗ್ಗಿ ಕತ್ತು ಸೀಳಿ ಕೊಲೆ ಮಾಡಿದ್ದಾರೆಂದು ತಿಳಿದುಬಂದಿದೆ. ಸ್ಥಳಕ್ಕೆ ಆಲ್ದೂರು ಪೊಲೀಸರು ಭೇಟಿ ನೀಡಿ ಸ್ಥಳದ ಮಹಜರು ನಡೆಸಿದ್ದು, ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಆಲ್ದೂರು ಪೊಲೀಸರು ಹತ್ಯೆ ಆರೋಪಿಗಳ ಸುಳಿವು ಪತ್ತೆಗೆ ತನಿಖೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

Read More

ಕಲಬುರ್ಗಿ : ಕಳೆದ ವರ್ಷದಿಂದ ಮಳೆ ಬಾರದೆ ಇಡೀ ರಾಜ್ಯ ತೀವ್ರ ಬರದಿಂದ ಕಂಗೆಟ್ಟು ಹೋಗಿತ್ತು. ಅಲ್ಲದೆ ರೈತರು ಕೂಡ ಮಳೆ ಇಲ್ಲದೆ ಬೆಳೆ ಬೆಳೆಯದೆ ತೀವ್ರ ಸಂಕಷ್ಟವನ್ನು ಎದುರಿಸಿದ್ದರು. ಇದೀಗ ವರುಣನ ಕೃಪೆಯಿಂದ ಮಳೆರಾಯ ಕರುಣೆ ತೋರಿದ್ದು, ಕಲ್ಬುರ್ಗಿ ಜನತೆಗೆ ತಂಪೆರೆದಿದ್ದಾನೆ. ಹೌದು ಇಂದು ಸಂಜೆ ಸತತ ಒಂದು ಗಂಟೆಗಳ ಕಾಲ ಕಲ್ಬುರ್ಗಿ ನಗರದಲ್ಲಿ ಗುಡುಗು ಸಹಿತ ಮಳೆ ಆಗುತ್ತಿದೆ. ಬಿಸಿಲಿನ ತಾಪದಿಂದ ಜನರು ಮನೆಯಿಂದ ಹೊರಬರದೆ ಮನೆಯಲ್ಲಿಯೇ ಕುಳಿತು ಬೇಸರಗೊಂಡಿದ್ದರು ಇದೀಗ ಮಳೆರಾಯ ಸ್ವಲ್ಪ ಕರುಣೆ ತೋರಿದ್ದರಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಕಲಬುರ್ಗಿ ಜಿಲ್ಲೆಯಲ್ಲಿ ಅಷ್ಟೇ ಅಲ್ಲದೆ ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಕೂಡ ನಿನ್ನೆ ಧಾರಾಕಾರ ಮಳೆ ಸುರಿದಿದೆ ಎಂದು ತಿಳಿದು ಬಂದಿದೆ. ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಯಿಂದ ಕೆಲಕಾಲ ಜನಜೀವನ ಕೂಡ ಅಸ್ತವ್ಯಸ್ಥಗೊಂಡಿತ್ತು.. ಅದೇ ರೀತಿಯಾಗಿ ಚಿಕ್ಕಮಗಳೂರಿನಲ್ಲಿ ಕೂಡ ಇಂದು ಕೆಲಕಾಲ ಮಳೆಯಾಗಿದೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಬೇಸಿಗೆ ತಾಪ ಹಾಗೂ ಬರದಿಂದ ಕಂಗೆಟ್ಟ ರಾಜ್ಯಕ್ಕೆ ಕೊಂಚ ಮಳೆಯಾಗುತ್ತಿರುವುದರಿಂದ…

Read More

ಬೆಂಗಳೂರು : ಬೆಂಗಳೂರಿನ ಸಿಗ್ನಲ್ಗಳಲ್ಲಿ ಮಕ್ಕಳನ್ನು ಬಳಸಿಕೊಂಡು ಭಿಕ್ಷಾಟನೆಗೆ ತಳ್ಳಿದ ಆರೋಪದ ಮೇರೆಗೆ ಸಿಸಿಬಿ ಪೊಲೀಸರು ಹಾಗೂ ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಒಟ್ಟು 47 ಮಕ್ಕಳನ್ನು ರಕ್ಷಿಸಿದ್ದು ಘಟನೆಗೆ ಸಂಬಂಧಿಸಿದಂತೆ 37 ಪೋಷಕರನ್ನು ಸಿಸಿಬಿ ಅಧಿಕಾರಿಗಳು ವರ್ಷಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/meta-ai-is-now-available-for-whatsapp-users-in-india-as-well-do-you-know-how-to-identify/ ಕಾರ್ಯಾಚರಣೆಯಲ್ಲಿ 47 ಮಕ್ಕಳನ್ನು ರಕ್ಷಿಸಲಾಗಿದ್ದು, ಸದ್ಯ ಮಕ್ಕಳ ಕಲ್ಯಾಣ ಸಮಿತಿ ಸುಪರ್ದಿಗೆ ಒಪ್ಪಿಸಲಾಗಿದೆ. ಬಿಕ್ಷಾಟನೆಗೆ ತೊಡಗಿಸಿಕೊಂಡಿದ್ದ ಮಕ್ಕಳು ನಿಜವಾಗಲು ಪೋಷಕರ ಮಕ್ಕಳೇ ಎಂಬುದರ‌ ಬಗ್ಗೆ ಪರಿಶೀಲಿಸಲಾಗುತ್ತಿದೆ. https://kannadanewsnow.com/kannada/breaking-another-fire-breaks-out-in-bengaluru-4-shops-gutted-in-furniture-scrap-shops/ ನಗರದ ಕೆ.ಜಿ.ಹಳ್ಳಿ ಹಾಗೂ ಫ್ರೇಜರ್​ ಟೌನ್ ಸುತ್ತಮುತ್ತಲಿನ ಸಿಗ್ನಲ್​ಗಳಲ್ಲಿ ಮಕ್ಕಳನ್ನು ಬಳಸಿಕೊಂಡು ಬಿಕ್ಷಾಟನೆ ‌ನಡೆಸಲಾಗುತಿತ್ತು. ಈ ಬಗ್ಗೆ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ. ಮಕ್ಕಳನ್ನ ಭಿಕ್ಷಾಟನೆಗೆ ಬಳಸುತ್ತಿದ್ದ 37 ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಮಾನವ ಕಳ್ಳಸಾಗಾಣಿಕೆ ಮೂಲಕ ಮಕ್ಕಳನ್ನು ನಗರಕ್ಕೆ ಕರೆತರಲಾಗಿದೆಯೇ ಎಂಬುದರ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರು ಮಹಾನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು ಹೆಬ್ಬಾಳದ ಗುಡ್ಡದ ಹಳ್ಳಿಯ ಬಳಿ ಗ್ಯಾರೇಜ್ ಅಂಗಡಿ ಸೇರಿದಂತೆ ಒಟ್ಟು ಬೆಂಕಿ ಕಾಣಿಸಿಕೊಂಡಿದೆ.ಘಟನಾ ಸ್ಥಳಕ್ಕೆ ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಬೆಂಕಿಯನ್ನು ನಂದಿಸಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಹೆಬ್ಬಾಳದ ಗುಡ್ಡದಹಳ್ಳಿಯಲ್ಲಿ ನಾಲ್ಕು ಅಂಗಡಿಗೆ ಗಳಿಗೆ ಬೆಂಕಿ ತಗುಲಿದೆ ಫರ್ನಿಚರ್ ಹಾಗೂ ಗುಜರಿ ಶಾಪ್ ಗಳಿಗೆ ಬೆಂಕಿ ತಗುಲಿದೆ ಎಂದು ಹೇಳಲಾಗುತ್ತಿದೆ ಅಂಗಡಿಗಳ ಹಿಂಬದಿಯ ಖಾಲಿ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಬಳಿಕ ಗ್ಯಾರೇಜ್ ಫರ್ನಿಚರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಂಜಾನ್ ಹಬ್ಬ ಹಿನ್ನಲೆಯಲ್ಲಿ ಎಲ್ಲಾ ಅಂಗಡಿಗಳು ಬಂದ್ ಆಗಿದ್ದವು ಹಾಗಾಗಿ ಘಟನೆ ರಿ ಯಾವುದೇ ರೀತಿಯಾದಂತಹ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ ಸದ್ಯ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುತ್ತಿವೆ.

Read More

ಬಳ್ಳಾರಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ತಡೆಗಟ್ಟಲು ನೀರು ಸಮೇತ ಜಾರಿ ಮಾಡಲಾಗಿದ್ದು ಇತ್ತೀಚಿಗೆ ಏಪ್ರಿಲ್ ಏಳರಂದು ಬಳ್ಳಾರಿಯಲಿ ಐದು ಕೋಟಿ 60 ಲಕ್ಷಕ್ಕೂ ಹೆಚ್ಚು ಹಣ ಹಾಗೂ ಚಿನ್ನ ಬೆಳ್ಳಿ ಜಪ್ತಿ ಮಾಡಿಕೊಂಡಿರುವ ಪ್ರಕರಣಕ್ಕೆ ಹೊಸ ತಿರುಗು ಸಿಕ್ಕಿದ್ದು ಪೊಲೀಸರ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. https://kannadanewsnow.com/kannada/bjp-files-complaint-against-dk-shivakumar-for-allegedly-influencing-voters-in-the-name-of-caste/ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ವೇಳೆ ನರೇಶ್ ಹವಾಲಾ ದಂಧೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಎಸ್ಪಿ ರಂಚಿತಕುಮಾರ ಬಂಡಾರು ಅವರು ಹೇಳಿದ್ದಾರೆ. ಇಂದು ಬಳ್ಳಾರಿ ಡಿಸಿ ಕಚೇರಿಯಲ್ಲಿ ಮಾತನಾಡಿ, ‘ಬಳ್ಳಾರಿ ನಗರ ಮತ್ತು ಸುತ್ತಮುತ್ತ ಹವಾಲಾ ದಂಧೆ ನಡೆಸುತ್ತಿದ್ದ ನರೇಶ್, ಈ ಹಿಂದೆಯೂ ಹವಾಲಾ ಮೂಲಕ ಹಣ ವರ್ಗಾಯಿಸಿದ್ದ ಎಂದು ತಿಳಿಸಿದರು. https://kannadanewsnow.com/kannada/cowardice-is-bad-india-china-border-dispute-congress-attacks-pm-modi/ ಈ ಹಿನ್ನೆಲೆಯಲ್ಲಿ ನಿಖರ ಮಾಹಿತಿ ಮೇರೆಗೆ ಏ.7ರಂದು ಬಳ್ಳಾರಿಯ ಕಂಬಳಿ ಬಜಾರ್​ನ ನರೇಶ್ ಮನೆ ಮೇಲೆ ಏಕಕಾಲದಲ್ಲಿ ಐಟಿ ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿ, ಆತನ ಮನೆಯಲ್ಲಿದ್ದ 5 ಕೋಟಿ 60…

Read More

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜಾತಿ ಹೆಸರು ಹೇಳಿ ಮತದಾರರ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಆರೋಪಿಸಿ ಇದೀಗ ಬಿಜೆಪಿ ಬೆಂಗಳೂರಿನಲ್ಲಿ ಚುನಾವಣಾ ಆಯೋಗಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲಿಸಿದ್ದಾರೆ. ಬೆಂಗಳೂರಿನಲ್ಲಿ ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ.ಬಿಜೆಪಿಯ ಸಿಎನ್ ಅಶ್ವಥ್ ನಾರಾಯಣ ನೇತೃತ್ವದಲ್ಲಿ ದೂರು ಸಲ್ಲಿಸಲಾಗಿದೆ. ಅದರ ಜೊತೆಗೆ ಕಾಂಗ್ರೆಸ್ ನಿಂದ ಗ್ಯಾರಂಟಿ ಕಾರ್ಡ್ ಹಂಚಿಕೆ ಬಗ್ಗೆಯೂ ಕೂಡ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ವೈದ್ಯಕೀಯ ಮಹಾವಿದ್ಯಾಲಯದಲ್ಲಿ 47ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವಾಂತಿಭೇದಿಯಿಂದ ಅಸ್ವಸ್ಥರಾಗಿದ್ದರು.ಅವರಲ್ಲಿ ಮೂರು ಜನ ವಿದ್ಯಾರ್ಥಿನಿಯರಿಗೆ ಕಾಲರಾ ರೋಗ ಪತ್ತೆಯಾಗಿತ್ತು ಇದೀಗ ರಾಜ್ಯಾದ್ಯಂತ ಒಟ್ಟು ಕಾಲರ ರೋಗದ ಪ್ರಕರಣ ಸಂಖ್ಯೆ 23ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಕಾಲರಾ ಪ್ರಕರಣಗಳ ಸಂಖ್ಯೆ 23ಕ್ಕೆ ಏರಿಕೆಯಾಗಿದ್ದು, ಬೆಂಗಳೂರು ರಾಮನಗರ ನಂತರ ಇದೀಗ ಮೈಸೂರಿಗೆ ಕಾಲರಾ ರೋಗ ಕಾಲಿಟ್ಟಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 12, ಬೆಂಗಳೂರು ನಗರ 9 ಪ್ರಕರಣಗಳು ಪತ್ತೆಯಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಒಂದು ರಾಮನಗರ ಜಿಲ್ಲೆಯಲ್ಲಿ ತಲಾ ಒಂದು ಕಾಲರಾ ಪ್ರಕರಣ ಪತ್ತೆಯಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

Read More