Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯ ಸರ್ಕಾರದಲ್ಲಿನ ಅಧಿಕಾರ ಹಂಚಿಕೆ ಗೊಂದಲದ ಬಗ್ಗೆ ನಾಳೆ, ನಾಡಿದ್ದು ಹೈಕಮಾಂಡ್ ಸಭೆ ಇದೆ. ಆಗ ಮಾತನಾಡಿ ಅಂತಿಮ ನಿರ್ಧಾರ ಮಾಡುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ಹಿಂದುಳಿದ ವರ್ಗಗಳ ಬಗ್ಗೆ ಸಭೆ ಇದೆ. ಬಿಹಾರ ಫಲಿತಾಂಶ ಬಗ್ಗೆಯೂ ಚರ್ಚೆ ನಡೆಯಲಿದೆ. ಆಗ ರಾಜ್ಯದ ಗೊಂದಲದ ಬಗ್ಗೆ ಮಾತನಾಡಿ ಬಗೆಹರಿಸುತ್ತಾರೆ. ಎಐಸಿಸಿ ಅಧ್ಯಕ್ಷರು ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ. ಗೊಂದಲದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ. ಮಲ್ಲಿಕಾರ್ಜುನ ಖರ್ಗೆಯವರು ಒಂದು ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬರುತ್ತಿದ್ದಾರೆ ಎಂದರು. ಸಿಎಂ ಎರಡೂವರೆ ವರ್ಷಕ್ಕೆ ಅಂತ ಆಗಿಲ್ಲವಾ ಎಂಬ ಶಾಸಕ ರಾಯರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿ, ದೆಹಲಿಗೆ ಹೋಗಿ ಪ್ರಶ್ನೆ ಮಾಡಲಿ, ಮಾಧ್ಯಮದಲ್ಲಿ ಅಲ್ಲ. ಯಾರ್ಯಾರಿಗೆ ಏನೇನು ಜವಾಬ್ದಾರಿ ಕೊಡಬೇಕು ಎಂಬುದು ಸಿಎಲ್ಪಿಯಲ್ಲಿ ತೀರ್ಮಾನ ಆಗಿಲ್ಲ. ಸಿಎಲ್ಪಿ ಆಗಿದ್ದು ಹೇಗೆ? ಬಿ ಫಾರಂ ಕೊಟ್ಟಿರುವುದು ಪಾರ್ಟಿ ಅಲ್ವಾ? ಹೈಕಮಾಂಡ್ ಅಂತಿಮ ತೀರ್ಮಾನ ಮಾಡುತ್ತದೆ. ನಾನು ಮಾತಾಡಿದ…
ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಕೇಸ್ನ ವಾದ-ಪ್ರತಿವಾದ ಮುಕ್ತಾಯವಾಗಿದ್ದು, ಇದೀಗ ಪ್ರಕರಣದ ಮೊದಲ ಎಫ್ಐಆರ್ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು,ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಗಳಿಗೆ ಬಿಗ್ ರಿಲೀಫ್ ಸಿಕ್ಕಿದ್ದು ಮುರುಘಾ ಶ್ರೀಗಳ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಈ ಹಿಂದಿನ ವಿಚಾರಣೆ ವೇಳೆ ಶ್ರೀಗಳ ಪರವಾಗಿ ಕೋರ್ಟ್ನಲ್ಲಿ ಖ್ಯಾತ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ. ಸ್ವಾಮೀಜಿ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ವಾದಿಸಿದ್ದಾರೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯದಲ್ಲಿ ಕೇಸ್ನ ವಿಚಾರಣೆ ನಡೆದಿತ್ತು.ಕೋರ್ಟ್ ಹಾಲ್ ಗೆ ಮುರುಘಾ ಶ್ರೀಗಳು ಸಹ ಹಾಜರಾಗಿದ್ದರು. ಕೇಸ್ ಖುಲಾಸೆ ಆದ ಬಳಿಕ ಕೋರ್ಟ್ ನಿಂದ ಶ್ರೀಗಳು ಕೋರ್ಟ್ ನಿಂದ ತೆರಳಿದ್ದಾರೆ. ಪ್ರಕರಣದಿಂದ ಶ್ರೀಗಳು ನಿರಾಳರಾಗಿದ್ದಾರೆ. ಮುರುಘಾ ಶರಣರು ಹಾಗು ಮತ್ತಿಬ್ಬರು ಆರೋಪಿಗಳಿಗೆ ರಿಲೀಫ್ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಮುರುಘಾ ಮಠಕ್ಕೆ ಒಳ್ಳೆಯದು ತರಲಿ.…
ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಕೇಸ್ನ ವಾದ-ಪ್ರತಿವಾದ ಮುಕ್ತಾಯವಾಗಿದ್ದು, ಇದೀಗ ಪ್ರಕರಣದ ಮೊದಲ ಎಫ್ಐಆರ್ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು,ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಗಳಿಗೆ ಬಿಗ್ ರಿಲೀಫ್ ಸಿಕ್ಕಿದ್ದು ಮುರುಘಾ ಶ್ರೀಗಳ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಈ ಹಿಂದಿನ ವಿಚಾರಣೆ ವೇಳೆ ಶ್ರೀಗಳ ಪರವಾಗಿ ಕೋರ್ಟ್ನಲ್ಲಿ ಖ್ಯಾತ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ. ಸ್ವಾಮೀಜಿ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ವಾದಿಸಿದ್ದಾರೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯದಲ್ಲಿ ಕೇಸ್ನ ವಿಚಾರಣೆ ನಡೆದಿತ್ತು. ಏನಿದು ಪ್ರಕರಣ? ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2022ರ ಆ.26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದ್ದು, ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ,…
ಕಲಬುರ್ಗಿ : ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಮಂಗಳವಾರ ಸಂಜೆ ಸಂಭವಿಸಿದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಭೀಕರ ಕಾರು ಅಪಘಾತದಲ್ಲಿ ಮೃಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಗಂಭೀರವಾಗಿ ಗಾಯಗೊಂಡು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈರಣ್ಣ ಸಿರಸಂಗಿ ಅವರು ಬುಧವಾರ ನಸುಕಿನಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಅವಘಡದಲ್ಲಿ ಈರಣ್ಣ ಬೀಳಗಿ, ಶಂಕರ್ ಬೀಳಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ತೀವ್ರ ಗಾಯಗೊಂಡಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇದೀಗ ಈರಣ್ಣ ಸಿರಸಂಗಿ ಕೂಡ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಕಾರಿನ ಚಾಲಕ ರಾಜು ಗಂಭೀರ ಸ್ಥಿತಿಯಲ್ಲಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ನಾನು ‘CM’ ಆದ್ರೆ ‘KPCC’ ಅಧ್ಯಕ್ಷ, ಡಿಸಿಎಂ ಸ್ಥಾನ ನೀಡುತ್ತೇನೆ : ಸತೀಶ್ ಜಾರಕಿಹೊಳಿಗೆ ಡಿಸಿಎಂ ಡಿಕೆಶಿ ಬಿಗ್ ಆಫರ್!
ಬೆಂಗಳೂರು : ಸಚಿವ ಸತೀಶ್ ಜಾರಕಿಹೊಳಿಗೆ ಡಿಕೆ ಶಿವಕುಮಾರ್ ಅವರು ಆಫರ್ ಕೊಟ್ಟಿದ್ದಾರೆ ಎನ್ನಲಾಗಿದೆ. ನಿನ್ನೆ ಖಾಸಗಿ ಹೋಟೆಲ್‌ನಲ್ಲಿ ನಡೆದ ಇಬ್ಬರ ನಡುವಿನ ಮಾತುಕತೆಯಲ್ಲಿ ಡಿ.ಕೆ ಶಿವಕುಮಾರ್ ಅವರು ಸಚಿವ ಸತೀಶ್ ಜಾರಕಿಹೊಳಿಗೆ ಒಂದು ವೇಳೆ ನಾನು ಸಿಎಂ ಆದರೆ ನಿಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಡಿಸಿಎಂ ಸ್ಥಾನವನ್ನು ನೀಡುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಆದರೆ ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಇದನ್ನು ನಿರಾಕರಿಸಲ್ಲ, ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಸದ್ಯಕ್ಕೆ ಹೈಕಮಾಂಡ್ ಹೇಳಿದ ಹಾಗೇ ಕೇಳುವೆ, ಹೈಕಮಾಂಡ್ ನಿಮ್ಮನ್ನು ಒಪ್ಪಿದರೆ ನಿಮ್ಮ ಪರವಾಗಿ ನಾವು ಇರುತ್ತೇವೆ ಅಂತ ಹೇಳಿದ್ದಾರೆ ಎನ್ನಲಾಗಿದೆ. ಸಿಎಂ ಸ್ಥಾನಕ್ಕೆ ಕಣ್ಣಿಟ್ಟಿರುವ ಡಿ.ಕೆ ಶಿವಕುಮಾರ್ ಅವರು ಸದ್ಯ ಸಿಎಂ ಸಿದ್ದರಾಮಯ್ಯ ಅವರ ಪರವಾಗಿರುವ ನಾಯಕರ ಮೇಲೆ ಕಣ್ಣಿಟ್ಟಿದ್ದು, ಸಿಎಂ ಸಿದ್ದರಾಮಯ್ಯ ಅವರ ಹಿಂಬಾಲಕರು ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ಅವರನ್ನು ಬಿಟ್ಟು ಹೋಗುವುದಿಲ್ಲ ಎನ್ನುವುದು ಡಿ.ಕೆ ಶಿವಕುಮಾರ್ ಚೆನ್ನಾಗಿ ಗೊತ್ತಿರುವ ಹಿನ್ನಲೆಯಲ್ಲಿ ಸದ್ಯ ಡಿ.ಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ…
ಕೊಪ್ಪಳ : ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದ್ದು, ಅದರ ಮಧ್ಯ ದಲಿತ ಸಿಎಂ ಕೂಗು ಸಹ ಕೇಳಿ ಬರುತ್ತಿದೆ. ಈ ವಿಚಾರವಾಗಿ ಕೊಪ್ಪಳದಲ್ಲಿ ಇಂಧನ ಸಚಿವ ಕೆಜೆ ಜಾರ್ಜ್ ರಾಜ್ಯದಲ್ಲಿ ಅವಕಾಶ ಸಿಕ್ಕರೆ ದಲಿತರನ್ನು ಸಿಎಂ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆಕಾಶ ಸಿಕ್ಕರೆ ದಲಿತರನ್ನು ಸಿಎಂ ಮಾಡುತ್ತೇವೆ. ಬೇರೆ ಬೇರೆ ರಾಜ್ಯದಲ್ಲಿ ದಲಿತರನ್ನು ಕಾಂಗ್ರೆಸ್ ಸಿಎಂ ಮಾಡಿದೆ. ರಾಜ್ಯದಲ್ಲೂ ಕೂಡ ಅವಕಾಶ ಸಿಕ್ಕರೆ ದಲಿತರನ್ನು ಸಿಎಂ ಮಾಡುತ್ತೇವೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಆಗುವ ಎಲ್ಲಾ ಅರ್ಹತೆ ಇದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿಕೆ ನೀಡಿದರು.
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬಲು ಜೋರಾಗಿದ್ದು ಒಂದು ಕಡೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಕುರ್ಚಿಗಾಗಿ ಜಟಪಟಿ ನಡೆಸುತ್ತಿದ್ದರೆ ಮತ್ತೊಂದು ಕಡೆ ದಲಿತ ಸಿಎಂ ಕೂಗು ಸಹ ಕೇಳಿ ಬರುತ್ತಿದೆ ಈ ವಿಚಾರವಾಗಿ ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜಾರಕಿಹೊಳಿ ಸದ್ಯ ರಾಜ್ಯದಲ್ಲಿ ಬದಲಾವಣೆಯ ಚರ್ಚೆ ಇಲ್ಲವೇ ಇಲ್ಲ. ಹೈಕಮಾಂಡ್ ಈ ವಿಚಾರವಾಗಿ ಎಲ್ಲವನ್ನು ನಿರ್ಧಾರ ಮಾಡುತ್ತೆ. ಇನ್ನು ನಿನ್ನೆ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸತೀಶ್ ಜಾರಕಿಹೊಳಿ ಭೇಟಿ ಮಾಡಿದ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ ಅವರು, ನಮ್ಮ ವಿಚಾರಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು. ಡಿಸಿಎಂ ಡಿಕೆಗೂ ಕೂಡ ಸಿಎಂ ಆಗುವ ಆಸೆ ಇದ್ದೇ ಇರುತ್ತೆ ಅವರು ಮೊದಲಿನಿಂದಲೂ ಕ್ಲೈಮ್ ಮಾಡಿದ್ದಾರೆ.ಆದರೆ ಹೈಕಮಾಂಡ್ ಸಿದ್ದರಾಮಯ್ಯಗೆ ಅವಕಾಶ ಕೊಟ್ಟಿದೆ. ಹಾಗಾಗಿ ಸದ್ಯಕ್ಕೆ ಸಿಎಂ ಬದಲಾವಣೆ ಚರ್ಚೆ ಇಲ್ಲ ಆ ವಿಚಾರವಾಗಿ ಬಂದಾಗ ಅದರ…
ವಿಜಯನಗರ : ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಭಾರಿ ದೊಡ್ಡ ಚರ್ಚೆ ನಡೆಯುತ್ತಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ಹೋಗೋ ಪ್ರಶ್ನೆಯೇ ಇಲ್ಲ. ಅಲ್ಲದೆ ನಮಗೆ ಯಾವುದೇ ಆಫರ್ ಇಲ್ಲ. ಹಾಗಾಗಿ ಚುನಾವಣೆಗೆ ಹೋಗುವುದು ನಮ್ಮ ನಿಲುವು ಎಂದು ವಿಪಕ್ಷ ನಾಯಕ ಆರ್ ಅಶೋಕ ಸ್ಪಷ್ಟಪಡಿಸಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಡಿಕೆ ಶಿವಕುಮಾರ್ ಹಿಂದೆ ಯಾರಿದ್ದಾರೆ ಗೌಪ್ಯ ಮತದಾನ ಮಾಡಿ ಅಂತಿದ್ದಾರೆ ಗೌಪ್ಯ ಮತದಾನ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ ಕಾಂಗ್ರೆಸ್ ಪಕ್ಷ ಸತ್ತ ಹೆಣ ಇದ್ದಂತೆ ಸಿದ್ದರಾಮಯ್ಯ ಹಿಂದೆ ಡಿಕೆ ಶಿವಕುಮಾರ್ ಮುಂದೆ ಹೊತ್ತುಕೊಂಡು ಹೋಗಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಒಕ್ಕಲಿಗ ಎಂದು ಯಾರು ಹೇಳಿದರು? ನಮಗೂ ಅವರಿಗೂ ಸಂಬಂಧ ಇಲ್ಲ ಎಂದು ಪ್ರತಿಪಕ್ಷ ನಾಯಕ ಅಶೋಕ್ ಹೇಳಿಕೆ ನೀಡಿದರು.
ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿಗೆ ಡಿಕೆ ಶಿವಕುಮಾರ್ ಅವರು ಆಫರ್ ಕೊಟ್ಟಿದ್ದಾರೆ ಎನ್ನಲಾಗಿದೆ. ನಿನ್ನೆ ಖಾಸಗಿ ಹೋಟೆಲ್‌ನಲ್ಲಿ ನಡೆದ ಇಬ್ಬರ ನಡುವಿನ ಮಾತುಕತೆಯಲ್ಲಿ ಡಿ.ಕೆ ಶಿವಕುಮಾರ್ ಅವರು ಸಚಿವ ಸತೀಶ್ ಜಾರಕಿಹೊಳಿಗೆ ಒಂದು ವೇಳೆ ನಾನು ಸಿಎಂ ಆದರೆ ನಿಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಡಿಸಿಎಂ ಸ್ಥಾನವನ್ನು ನೀಡುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಆದರೆ ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಇದನ್ನು ನಿರಾಕರಿಸಲ್ಲ, ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಸದ್ಯಕ್ಕೆ ಹೈಕಮಾಂಡ್ ಹೇಳಿದ ಹಾಗೇ ಕೇಳುವೆ, ಹೈಕಮಾಂಡ್ ನಿಮ್ಮನ್ನು ಒಪ್ಪಿದರೆ ನಿಮ್ಮ ಪರವಾಗಿ ನಾವು ಇರುತ್ತೇವೆ ಅಂತ ಹೇಳಿದ್ದಾರೆ ಎನ್ನಲಾಗಿದೆ. ಸಿಎಂ ಸ್ಥಾನಕ್ಕೆ ಕಣ್ಣಿಟ್ಟಿರುವ ಡಿ.ಕೆ ಶಿವಕುಮಾರ್ ಅವರು ಸದ್ಯ ಸಿಎಂ ಸಿದ್ದರಾಮಯ್ಯ ಅವರ ಪರವಾಗಿರುವ ನಾಯಕರ ಮೇಲೆ ಕಣ್ಣಿಟ್ಟಿದ್ದು, ಸಿಎಂ ಸಿದ್ದರಾಮಯ್ಯ ಅವರ ಹಿಂಬಾಲಕರು ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ಅವರನ್ನು ಬಿಟ್ಟು ಹೋಗುವುದಿಲ್ಲ ಎನ್ನುವುದು ಡಿ.ಕೆ ಶಿವಕುಮಾರ್ ಚೆನ್ನಾಗಿ ಗೊತ್ತಿರುವ ಹಿನ್ನಲೆಯಲ್ಲಿ ಸದ್ಯ ಡಿ.ಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ…
ಕೊಪ್ಪಳ : ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದ್ದು, ಅದರ ಮಧ್ಯ ದಲಿತ ಸಿಎಂ ಕೂಗು ಸಹ ಕೇಳಿ ಬರುತ್ತಿದೆ. ಈ ವಿಚಾರವಾಗಿ ಕೊಪ್ಪಳದಲ್ಲಿ ಇಂಧನ ಸಚಿವ ಕೆಜೆ ಜಾರ್ಜ್ ರಾಜ್ಯದಲ್ಲಿ ಅವಕಾಶ ಸಿಕ್ಕರೆ ದಲಿತರನ್ನು ಸಿಎಂ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆಕಾಶ ಸಿಕ್ಕರೆ ದಲಿತರನ್ನು ಸಿಎಂ ಮಾಡುತ್ತೇವೆ. ಬೇರೆ ಬೇರೆ ರಾಜ್ಯದಲ್ಲಿ ದಲಿತರನ್ನು ಕಾಂಗ್ರೆಸ್ ಸಿಎಂ ಮಾಡಿದೆ. ರಾಜ್ಯದಲ್ಲೂ ಕೂಡ ಅವಕಾಶ ಸಿಕ್ಕರೆ ದಲಿತರನ್ನು ಸಿಎಂ ಮಾಡುತ್ತೇವೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಆಗುವ ಎಲ್ಲಾ ಅರ್ಹತೆ ಇದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿಕೆ ನೀಡಿದರು.














