Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ನಂದಿನಿ ತುಪ್ಪ ಕಲಬೆರೆಕೆ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಇದೀಗ ಕಿಂಗ್ ಪಿನ್ ದಂಪತಿಯನ್ನು ಬಂಧಿಸಿದ್ದಾರೆ. ನಂದಿನಿ ತುಪ್ಪ ಕಲಬೆರೆಕೆ ಪ್ರಕರಣದಲ್ಲಿ ಗಂಡ, ಹೆಂಡತಿಯೇ ಕಿಂಗ್ ಪಿನ್ ಆಗಿದ್ದು, ಸಿಸಿಬಿ ಪೊಲೀಸರು ಇದೀಗ ದಂಪತಿ ಶಿವಕುಮಾರ್, ರಮ್ಯಾರನ್ನು ಬಂಧಿಸಿದ್ದಾರೆ. ಸದ್ಯ ನಂದಿನಿ ತುಪ್ಪ ಕಲಬೆರೆಕೆ ಪ್ರಕರಣ ಸಂಬಂಧ ಆರೋಪಿಗಳಾದ ಶಿವಕುಮಾರ್ ಹಾಗೂ ರಮ್ಯಾಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಕಲಿ ನಂದಿನಿ ತುಪ್ಪ ತಯಾರಿ ಘಟಕದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.  ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕೆ ಘಟಕ ಹೊಂದಿದ್ದರು.

Read More

ಕಲಬುರ್ಗಿ : ನಿನ್ನೆ ಜೇವರ್ಗಿ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಭೀಕರವಾದ ಕಾರು ಅಪಘಾತದಲ್ಲಿ ದಕ್ಷ, ಪ್ರಾಮಾಣಿಕ ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿ ಅವರು ಸಾವನ್ನಪ್ಪಿದ್ದಾರೆ. ಇದೀಗ ಈ ಒಂದು ಅಪಘಾತದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಂತೇಶ ಸಂಬಂಧಿ ಬಸವರಾಜ್ ಅವರು ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ಠಾಣೆಗೆ ದೂರು ನೀಡಿದ್ದು ಚಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಾಲಕನ ನಿರ್ಲಕ್ಷ್ಮ ಮತ್ತು ಅತಿ ವೇಗದಿಂದ ಅಪಘಾತ ಸಂಭವಿಸಿದೆ. ತಡೆಗೋಡೆಗೆ ಡಿಕ್ಕಿಯಾಗಿ ನಾಲ್ಕೈದು ಬಾರಿ ಕಾರು ಪಲ್ಟಿಯಾಗಿ ಬಿದ್ದಿದೆ. ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದು ಆಸ್ಪತ್ರೆಯಲ್ಲಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದಾರೆ. ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರೆದಿದೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ 281, 125,(A), 125 (B) 106 BNS ಸೆಕ್ಷನ್ ಅಡಿ ಕಾರ್ ಚಾಲಕ ಆರೋಕಿಯ ಅಂಥೋನಿ ರಾಜ್ ವಿರುದ್ಧ ದಾಖಲಾಗಿದೆ.

Read More

ಮೈಸೂರು : ಮೈಸೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಬೆಳ್ಳಂ ಬೆಳಗ್ಗೆ ಯುವಕನ ಭೀಕರ ಕೊಲೆಯಾಗಿದೆ. ಗೆಳೆಯನನ್ನು ಯುವಕರು ಅಟ್ಟಾಡಿಸಿ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ನಗರದ ಶಾಂತಿನಗರದಲ್ಲಿ ಈ ಒಂದು ಹತ್ಯೆ ನಡೆದಿದೆ . ಚಾಕು ಇರಿದಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಸುಕಿನ ಜಾವ 5.45 ಸುಮಾರಿಗೆ ಕೊಲೆಗೈದು ಹಂತಕರು ಪರಾರಿ ಆಗಿದ್ದಾರೆ. ಮೈಸೂರಿನ ಶಾಂತಿ ನಗರದಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಮೃತ ಯುವಕನನ್ನು ಸೈಯದ್ ಸೂಫಿಯಾನ್ ಎಂದು ತಿಳಿದುಬಂದಿದೆ. ರಸ್ತೆಯಲ್ಲಿ ಅಟ್ಟಾಡಿಸಿ ಚಾಕುವಿನಿಂದ ಇರಿದು ಇಬ್ಬರು ಸ್ನೇಹಿತರು ಭೀಕರವಾಗಿ ಕೊಲೆ ಮಾಡಿದ್ದಾರೆ. ಶಾಂತಿನಗರದಲ್ಲಿ ಶಾಹೀದ್ ಮತ್ತು ಜಹೀದ್ ಎನ್ನುವವರಿ ಗೆಳೆಯ ಸೈಯದ್ ಗೆ ಚಾಕು ಇರಿದು ಅಟ್ಟಹಾಸ ಮೆರೆದಿದ್ದಾರೆ. ಕೊಲೆ ಮಾಡಿದ ಬಳಿಕ ಇಬ್ಬರು ಸ್ಥಳದಿಂದ ಪರಾರಿ ಆಗಿದ್ದಾರೆ ತೀವ್ರ ರಕ್ತ ಸ್ರಾವದಿಂದ ಸಯ್ಯದ್ ನರಳಾಡಿ ಪ್ರಾಣ ಬಿಟ್ಟಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲೀಸಲಾಗಿತ್ತಾದರೂ ಅಷ್ಟರಲ್ಲೇ ಸೈಯದ್ ಸಾವನ್ನಪ್ಪಿದ್ದ.ಕೊಲೆಯ ಭೀಕರ…

Read More

ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಕೇಸ್​ನ ವಾದ-ಪ್ರತಿವಾದ ಮುಕ್ತಾಯವಾಗಿದ್ದು, ಇದೀಗ ಪ್ರಕರಣದ ಮೊದಲ ಎಫ್ಐಆರ್ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ಮಧ್ಯಾಹ್ನ 2.45ಕ್ಕೆ ಮುಂದೂಡಿತು. ಮಧ್ಯಾಹ್ನ ಈ ಪ್ರಕರಣದ ಕುರಿತು ತೀರ್ಪು ಪ್ರಕಟಿಸಲಿದೆ. ಈ ಹಿಂದಿನ ವಿಚಾರಣೆ ವೇಳೆ ಶ್ರೀಗಳ ಪರವಾಗಿ ಕೋರ್ಟ್​ನಲ್ಲಿ ಖ್ಯಾತ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ. ಸ್ವಾಮೀಜಿ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ವಾದಿಸಿದ್ದಾರೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯದಲ್ಲಿ ಕೇಸ್​ನ ವಿಚಾರಣೆ ನಡೆದಿತ್ತು.ಇದೀಗ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ಮಧ್ಯಾಹ್ನ 2.45ಕ್ಕೆ ಮುಂದೂಡಿತು. ಮಧ್ಯಾಹ್ನ ಈ ಪ್ರಕರಣದ ಕುರಿತು ತೀರ್ಪು ಪ್ರಕಟಿಸಲಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಭಾರಿ ಚರ್ಚೆ ನಡೆಯುತ್ತಿದ್ದು ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲಿಯೇ ಸಿಎಂ ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್ ಬಣದ ಮಧ್ಯ ಕುರ್ಚಿಗಾಗಿ ಬಿಗ್ ಫೈಟ್ ನಡೆಯುತ್ತಿದೆ. ಇದರ ಮಧ್ಯ ದಲಿತ ಸಿಎಂ ಕೂಗು ಸಹ ಕೇಳಿ ಬರುತ್ತಿದೆ. ಈ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ನಿನ್ನೆ ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಅದರ ಬೆನ್ನಲ್ಲೇ ಇಂದು ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್ ಸಹ ಏರ್ಪಡಿಸಲಾಗಿತ್ತು. ಆದರೆ ಇದೀಗ ಸತೀಶ್ ಜಾರಕಿಹೊಳಿ ದಿಡೀರ್ ಎಂದು ಡಿನ್ನರ್ ಮೀಟಿಂಗ್ ರದ್ದುಪಡಿಸಿದ್ದಾರೆ. ಹಾಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ನಡೆ ತೀವ್ರ ಕುತೂಹಲ ಮೂಡಿಸಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಭಾರಿ ಚರ್ಚೆ ನಡೆಯುತ್ತಿದ್ದು ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲಿಯೇ ಸಿಎಂ ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್ ಬಣದ ಮಧ್ಯ ಕುರ್ಚಿಗಾಗಿ ಬಿಗ್ ಫೈಟ್ ನಡೆಯುತ್ತಿದೆ. ಇದರ ಮಧ್ಯ ಪ್ಲೀಸ್ ವೇಟ್‌ ಐ ವಿಲ್‌ ಕಾಲ್‌ ಯು ಅಂತ ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ರಾಹುಲ್‌ ಗಾಂಧಿ ಸಂದೇಶವನ್ನು ಕಳುಹಿಸಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ಜೊತೆಗೆ ನಿರಂತರ ಸಂಪರ್ಕದಲ್ಲಿರುವ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಮುಂದಿನ ಸನ್ನಿವೇಶದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಇನ್ನೂ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಇಂದು ಸಚಿವರಿಗೆ ಡಿನ್ನರ್‌ ಪಾರ್ಟಿಯನ್ನು ಹಮ್ಮಿಕೊಳ್ಳಲಾಗಿತ್ತು, ಆದರೆ ನಿನ್ನೆ ಸಂಜೆ ಖಾಸಗಿ ಹೋಟೆಲ್‌ನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ ಮತ್ತು ಸತೀಶ್‌ ಕುಮಾರ್‌ ಮುಖಾಮುಖಿ ಬೇಟಿಯಾದ ಬಳಿಕ ಈ ಡಿನ್ನರ್‌ ಪಾರ್ಟಿಯನ್ನು ರದ್ದು ಮಾಡಲಾಗಿದೆ ಎನ್ನಲಾಗಿದೆ. ಇನ್ನೂ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ರಾಹುಲ್‌ ಗಾಂಧಿ ಬೇಜಾರು ಆಗಿದ್ದಾರೆ ಎನ್ನಲಾಗಿದೆ. ಬಿಹಾರ ವಿಧಾನಸಭೆಯಲ್ಲಿ ಹೀನಾಯ ಸೋಲಿನಿಂದ ಮನಸ್ಸು…

Read More

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ಕರ್ಮಕಾಂಡ ಬಯಲಾಗಿದ್ದು, ಇದೀಗ ಜೈಲಿನಲ್ಲಿಯೇ ಕೈದಿಗಳಿಗೆ ಮತ್ತು ಏರಿಸುವ ಮದ್ಯ (ಕಳ್ಳಭಟ್ಟಿ) ತಯಾರಾಗುತ್ತಿದೆ. ಕಳ್ಳಭಟ್ಟಿ ತಯಾರಕರೇ ಕಾರಾಗೃಹದ ಮದ್ಯ ತಯಾರಿಕೆಯ ಲೀಡರ್ ಆಗಿದ್ದಾರೆ. ಕಳ್ಳಭಟ್ಟಿ ಕೇಸ್ನಲ್ಲಿ ಲಾಕ್ ಆದವರೇ ಕಳಭಟ್ಟಿ ತಯಾರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಹೌದು ಕಳಬಟ್ಟಿ ಪ್ರಕರಣದಲ್ಲಿ ಯಾರು ಜೈಲಿನಲ್ಲಿ ಇರುತ್ತಾರೋ ಅವರೇ ಕಳಬಟ್ಟಿ ತಯಾರಿಸಿ ಇತರೆ ಕೈದಿಗಳಿಗೆ ನೀಡುತ್ತಿದ್ದಾರೆ. ಪರಪ್ಪನ ಅಗ್ರಹಾರ ಜೈಲಲ್ಲಿ ಮದ್ಯದ ಫ್ಯಾಕ್ಟರಿಗೆ ತೆರೆದುಕೊಂಡಿದ್ದು ಈ ಕುರಿತು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಹೊಸ ವರ್ಷ ಆಚರಣೆ ಹಿನ್ನಲೆಯಲ್ಲಿ ಕಳ್ಳಬಟ್ಟಿ ತಯಾರಿಸಲಾಗುತ್ತಿದೆ ಎನ್ನಲಾಗುತ್ತಿದೆ. ಕೊಳೆತ ದ್ರಾಕ್ಷಿ ಮತ್ತು ಸೇಬು, ರಾಶಿ ರಾಶಿ ಹಣ್ಣುಗಳು ಚಕ್ಕೆ, ಗೋಧಿ ಸಕ್ಕರೆ ಮುಂತಾದ ಪದಾರ್ಥಗಳನ್ನು ಕೈದಿಗಳು ಸಂಗ್ರಹ ಮಾಡಿ ಇಟ್ಟುಕೊಂಡಿದ್ದಾರೆ ಕಳ್ಳಭಟ್ಟಿ ತಯಾರಿಕೆಗೆ ಒಂದೊಂದು ತಂಡ ಪ್ಲಾನ್ ಮಾಡಿದ್ದು, ಒಂದು ತಂಡ ಕೊಳೆತ ಹಣ್ಣು ಸಂಗ್ರಹ ಮಾಡುತ್ತದೆ. ಮತ್ತೊಂದು ತಂಡ ಜೈಲಿನ ಬೇಕರಿಯಿಂದ ಈಸ್ಟ್ ತಂದು ಎಲ್ಲಾ ಐಟಂಗಳು ಮಿಕ್ಸ್…

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಪತಿಯ ಕಿರುಕುಳಕ್ಕೆ ಬೇಸತ್ತು ಮದುವೆ ಆದ 6 ತಿಂಗಳಿಗೆ ನವವಿವಾಹಿತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಪತಿ ಹಾಗೂ ಪತಿಯ ಮನೆಯವರ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ಆತ್ಮಹತ್ಯೆಗೆ ಶರಣಾದ ನವವಿವಾಹಿತೆಯನ್ನು ಲತಾ (25) ಎಂದು ತಿಳಿದುಬಂದಿದೆ. ಭದ್ರಾವತಿಯ ಹಂಚಿನ ಸಿದ್ದಾಪುರದ ನಿವಾಸಿಯಾಗಿರುವ ಲತಾ ಬಿ ಎಸ್ ಸಿ ಮತ್ತು ಬಿಎಡ್ ಪದವೀಧರೆ ಆಗಿದ್ದರು ಎಂದು ತಿಳಿದು ಬಂದಿದೆ. 2025 ಏಪ್ರಿಲ್ 14 ರಂದು ಶಿಕಾರಿಪುರದ ಗುರುರಾಜ್ ಜೊತೆಗೆ ಲತಾ ವಿವಾಹವಾಗಿತ್ತು. ಆರು ತಿಂಗಳ ಹಿಂದೆ ಅಷ್ಟೇ ಲತಾ ಗುರುರಾಜ್ ನನ್ನು ಮದುವೆಯಾಗಿದ್ದರು ಬಿ ಆರ್ ಪಿ ಯ ಕೆಪಿಸಿಎಲ್ ನಲ್ಲಿ ಲತಾಪತಿ ಗುರುರಾಜ್ ಎಇಇ ಆಗಿದ್ದಾರೆ. ಡೆತ್ ನೋಟ್ ಬರೆದಿಟ್ಟು ನಾಲೆಗೆ ಹಾರಿ ನವ ವಿವಾಹಿತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲದೆ ವಾಟ್ಸಪ್ ನಲ್ಲಿ ಡೆತ್ ನೋಟ್ ಬರೆದಿದ್ದು ಪತಿ ಹಾಗೂ…

Read More

ಬೆಂಗಳೂರು : ನಿನ್ನೆ ಬೆಳಂ ಬೆಳಗ್ಗೆ ರಾಜ್ಯದ ಹಲವು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ದಾಳಿಯ ವೇಳೆ ಅಧಿಕಾರಿಗಳ ಅಕ್ರಮ ಆಸ್ತಿ ಕಂಡು, ಶಾಕ್ ಆಗಿದ್ದಾರೆ. ಇದುವರೆಗೂ ಲೋಕಾಯುಕ್ತ ಅಧಿಕಾರಿಗಳು 35.31 ಆಸ್ತಿ ಪತ್ತೆ ಹಚ್ಚಿದ್ದಾರೆ. ಹೌದು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 10 ಮಂದಿ ನೌಕರರಿಗೆ ಸೇರಿದ 47 ಸ್ಥಳಗಳ ಮೇಲೆ ಏಕಕಾಲದಲ್ಲಿ ಮಂಗಳವಾರ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದಾರೆ. ನಿನ್ನೆ ಬೆಳ್ಳಂಬೆಳಗ್ಗೆ ಬೆಂಗಳೂರು ನಗರ, ಮೈಸೂರು, ಮಂಡ್ಯ, ಬೀದರ್, ಹಾವೇರಿ, ಧಾರವಾಡ, ಗದಗ, ಕೊಡಗು ಶಿವಮೊಗ್ಗ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 10 ಮಂದಿ ಅಧಿಕಾರಿಗಳ ಮನೆ – ಕಚೇರಿ ಹಾಗೂ ಸಂಬಂಧಿಕರ ನಿವಾಸಗಳ ಮೇಲೆ ದಾಳಿ ನಡೆಸಿ ಸುಮಾರು 35.31 ಕೋಟಿ ಮೌಲ್ಯದ ಚರಾಸ್ತಿ ಹಾಗೂ ಸ್ಥಿರಾಸ್ತಿ ಪತ್ತೆ ಹಚ್ಚಿದ್ಧಾರೆ.

Read More

ರಾಯಚೂರು : ರಾಯಚೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಟ್ರಕ್ ಗೆ ಡಿಕ್ಕಿಯಾಗಿ ಶಾಲಾ ವಾಹನದಲ್ಲಿರುವ ಎಂಟು ಮಕ್ಕಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ರೈಚೂರ್ ಜಿಲ್ಲೆಯ ಮಾನ್ವಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಎಂಟು ಮಕ್ಕಳಿಗೆ ಗಾಯಗಳಾಗಿದ್ದು ಮಾನ್ವಿ ಸರ್ಕಾರಿ ಆಸ್ಪತ್ರೆಗೆ ಮಕ್ಕಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂಞಚ್ ಸನ್ನಿಧಿ ಎಂಬ ವಿದ್ಯಾರ್ಥಿನಿಗೆ ಗಂಭೀರವಾದ ಗಯಗಳಾಗಿದ್ದು ಆಕೆಯನ್ನು ರಾಯಚೂರಿನ ಖಾಸಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನೆನ್ನೆ ಸಂಜೆ ನಡೆದಿರುವ ಅಪಘಾತ ಇಂದು ತಳವಾಗಿ ಬೆಳಕಿಗೆ ಬಂದಿದೆ. ಮಾನ್ವಿ ಪಟ್ಟಣದ ಖಾಸಗಿ ಶಾಲೆಗೆ ಶಾಲಾ ವಾಹನ ಸೇರಿದೆ. ಮಕ್ಕಳನ್ನು ಬಿಟ್ಟು ಬರಲು ಕೊಟ್ನೆಕಲ್ ಗ್ರಾಮಕ್ಕೆ ಶಾಲಾ ವಾಹನ ತೆರುಳುತ್ತಿತ್ತು.ಸುಮಾರು 15ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಶಾಲಾ ಬಸ್ ಕರೆದುಕೊಂಡು ಹೋಗುತ್ತಿತ್ತು ಈ ವೇಳೆ ಟ್ರಕ್ ಓವರ್ಟೇಕ್ ಮಾಡಲು ಹೋಗಿ ಶಾಲಾ ಬಸ್ ಗೆ ಡಿಕ್ಕಿ ಹೊಡೆದಿದೆ. ಶಾಲಾ ಬಸ್ ಡಿಕ್ಕಿಯಾಗಿ ಎಂಟು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಮಾನ್ವಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More