Author: kannadanewsnow05

ಬೆಂಗಳೂರು : ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿ ಆಗುತ್ತೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದರು ಇದೀಗ ಈ ಒಂದು ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ದಿವಾಳಿ ಆಗಿರುವುದು ನಿಮ್ಮ ಬುದ್ಧಿಯೆ ಹೊರತು ನಮ್ಮ ರಾಜ್ಯವಲ್ಲ.ಸುಳ್ಳುಗಳನ್ನು ಸೃಷ್ಟಿಸುತ್ತಾ ನಿಮ್ಮನ್ನ ನೀವೇ ಬೆತ್ತಲೆ ಮಾಡಿಕೊಳ್ಳಬೇಡಿ ಎಂದು ಕಿಡಿ ಕಾರಿದರು. ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಬಿಜೆಪಿ ಆರೋಪ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ನಾಯಕರ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ದೀವಾಳಿ ಆಗಿರುವುದು ನಿಮ್ಮ ಬುದ್ಧಿಯೆ ಹೊರತು ನಮ್ಮ ರಾಜ್ಯವಲ್ಲ. ರಾಜ್ಯ ಬಿಜೆಪಿ ನಾಯಕರು ದಿನಕ್ಕೊಂದು ಸುಳ್ಳು ಹೇಳುತ್ತಿದ್ದಾರೆ. ಆ ಸುಳ್ಳು ಬಯಲಾದಾಗ ಸಮರ್ಥಿಸಲು ಇನ್ನೊಂದಷ್ಟು ಸುಳ್ಳು ಹೇಳುತ್ತಾರೆ ಎಂದು ಕಿಡಿ ಕಾರಿದರು. ಸುಳ್ಳುಗಳನ್ನು ಸೃಷ್ಟಿಸುತ್ತಾ ನಿಮ್ಮನ್ನ ನೀವೇ ಬೆತ್ತಲೆ ಮಾಡಿಕೊಳ್ಳಬೇಡಿ. ಹತ್ತು ಸಾವಿರ ಕೋಟಿ ಸಾಲ ಮಾಡಿದ್ದ ಕಾರಣಕ್ಕೆ ರಾಜ್ಯ ದಿವಾಳಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ.ನಿಮ್ಮ ಸರ್ಕಾರದ ಕಾಲದಲ್ಲಿನ ಸಾಲದ ಲೆಕ್ಕವನ್ನು ಪರಿಶೀಲಿಸಿದ್ದರೆ ಈ ರೀತಿ ನಮ್ಮ…

Read More

ಉತ್ತರಕನ್ನಡ : ರಾಜ್ಯದಲ್ಲಿ ತೀವ್ರ ಬಿಸಿ ಗಾಳಿ ಹಿನ್ನೆಲೆಯಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಹನಿ ನೀರಿಗೂ ಜನ ಪರದಾಡುತ್ತಿದ್ದಾರೆ. ಆದರೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಬಿಸಿಲಿನ ತಾಪಕ್ಕೆ ಚಲಿಸುತ್ತಿದ್ದ ಕಾರೊಂದು ಹೊತ್ತಿ ಹೊಡೆದಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಪಟ್ಟಣದಲ್ಲಿ ಬಿಸಿಲಿನ ತಾಪಕ್ಕೆ ಚಲಿಸುತ್ತಿದ್ದ ಕಾರು ಒಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ.ಅದೃಷ್ಟವಶಾತ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗುತ್ತಿದೆ.ಘಟನೆ ಕುರಿತಂತೆ ದಾಂಡೇಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಂಡೀಗಢ: ಲೋಕಸಭೆ ಚುನಾವಣೆ ಸಮೀಪದಲ್ಲಿ ಚಂಡೀಗಡದಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರುವುದಾಗಿ ಇಂದು ಹೇಳಿದರು. ಅವರ ಮಗ ಬ್ರಿಜೇಂದ್ರ ಸಿಂಗ್ ಸುಮಾರು ಒಂದು ತಿಂಗಳ ಹಿಂದೆ ಕಾಂಗ್ರೆಸ್‌ಗೆ ಸೇರಿದ್ದರು. ಬಿರೇಂದರ್ ಪತ್ನಿ ಪ್ರೇಮಲತಾ ಸಿಂಗ್ ಕೂಡ ಬಿಜೆಪಿ ತೊರೆದಿದ್ದಾರೆ. ಕಾಂಗ್ರೆಸ್ ಜೊತೆಗಿನ ಸುಮಾರು ನಾಲ್ಕು ದಶಕಗಳ ಹಳೆಯ ಸಂಬಂಧವನ್ನು ಕಡಿದುಕೊಂಡ ನಂತರ ಬಿರೇಂದರ್ ಸಿಂಗ್ 2014 ರಲ್ಲಿ ಆಗಿನ ಪಕ್ಷದ ಅಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರಿದರು.ಈ ವರ್ಷದ ಮಾರ್ಚ್ 10 ರಂದು, ಅವರ ಮಗ ಬ್ರಿಜೇಂದ್ರ ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದರು.ಬಲವಾದ ರಾಜಕೀಯ ಕಾರಣಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಸೇರಿದರು. ಅಕ್ಟೋಬರ್ 2023 ರಲ್ಲಿ ಜಿಂದ್‌ನಲ್ಲಿ ನಡೆದ ರ್ಯಾಲಿಯಲ್ಲಿ ಸಿಂಗ್ ಪಕ್ಷಕ್ಕೆ ಅಲ್ಟಿಮೇಟಮ್ ನೀಡಿದ ಸುಮಾರು ಐದು ತಿಂಗಳ ನಂತರ ಬ್ರಿಜೇಂದ್ರ ಅವರು ಬಿಜೆಪಿಯನ್ನು ತೊರೆದಿದ್ದರು. ಬಿರೇಂದರ್ ಸಿಂಗ್ ಅವರು ಸುಮಾರು 10 ವರ್ಷಗಳ…

Read More

ಬೆಂಗಳೂರು : ಇಂದು ಚುನಾವಣೆ ಪ್ರಚಾರದ ವೇಳೆ ಗನ್ ಇಟ್ಟುಕೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬ ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಿರುವ ಘಟನೆ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯ ರೆಡ್ಡಿ ಪರ ಪ್ರಚಾರ ವೇಳೆ ಈ ಘಟನೆ ನಡೆದಿದೆ. ಆದರೆ ಹಾರ ಹಾಕಿರುವ ವ್ಯಕ್ತಿಯ ಕುರಿತು ಇದೀಗ ಪೊಲೀಸರು ಪ್ರಾಥಮಿಕ ಮಾಹಿತಿ ಕಲೆಹಾಕಿದ್ದಾರೆ. ಹಾರ ಹಾಕಿರುವ ವ್ಯಕ್ತಿಯ ಹೆಸರು ರಿಯಾಜ್ ಎಂದು ಹೇಳಲಾಗುತ್ತಿದ್ದು ಈತನ ಮೇಲೆ ಕಳೆದ ಐದು ವರ್ಷಗಳ ಹಿಂದೆ ಮರ್ಡರ್ ಟು ಅಟೆಂಪ್ಟ್ ನಡೆದಿತ್ತು. ಹಾಗಾಗಿ ಈತ ತನಗೆ ಜೀವ ಭಯವಿದೆ ಎಂದು ಪೊಲೀಸ್ ಇಲಾಖೆಗೆ ಅರ್ಜಿ ಹಾಕಿ ಗನ್ ಲೈಸೆನ್ಸ್ ಅನ್ನು ಪಡೆದುಕೊಂಡಿದ್ದ ಎಂದು ಹೇಳಲಾಗುತ್ತಿದೆ ಅಲ್ಲದೆ ಈತ ಸಿದ್ದಾಪುರ ವಿಧಾನಸಭಾ ಕ್ಷೇತ್ರದ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತನು ಕೂಡ ಎಂದು ಹೇಳಲಾಗುತ್ತಿದೆ.ಹೀಗಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರಿಗೆ ಹಾರ ಹಾಕಿ ಅಲ್ಲಿಂದ ತೆರಳಿದ್ದ. ಚುನಾವಣೆ ವೇಳೆ ಗನ್ ಸಿಲಿಂಡರ್ ಮಾಡಿದರೂ ಅನುಮತಿ ಪಡೆದಿದ್ದ ಪೊಲೀಸ ಇಲಾಖೆಗೆ ಅರ್ಜಿ ಹಾಕಿ ರಿಯಾಜ್…

Read More

ಬೆಂಗಳೂರು : ಬೆಂಗಳೂರು ಕೇಂದ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಪಿ ಸಿ ಮೋಹನ್ಗೆ ವೋಟ್ ಕೇಳಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹೆಸರು ಹೇಳುತ್ತಿದ್ದಾರೆ ಆದರೆ ಕರ್ನಾಟಕದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಲೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. https://kannadanewsnow.com/kannada/bjp-may-become-no-1-party-in-bengal-prashant-kishor/ ಕರ್ನಾಟಕದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪರ ಅಲೆ ಇಲ್ಲ ಎಂದು ಮನ್ಸೂರ್ ಅಲಿ ಖಾನ್ ಪರ ರೋಡ್ ಶೋ ವೇಳೆ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಸಂಸದ ಪಿ ಸಿ ಮೋಹನ್ ಯಾವತ್ತಾದರೂ ಈ ಕಡೆ ಬಂದಿದ್ದಾರಾ? ವೋಟ್ ಕೊಡಲ್ಲ ಅಂತ ನರೇಂದ್ರ ಮೋದಿ ಅವರ ಹೆಸರು ಹೇಳುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು. ಕೇಂದ್ರದ ಬಿಜೆಪಿ ಸರ್ಕಾರದಿಂದ ಕರ್ನಾಟಕಕ್ಕೆ ದೊಡ್ಡ ಅನ್ಯಾಯವಾಗಿದೆ.ಹಣಕಾಸು ಆಯೋಗ ಶಿಫಾರಸು ಮಾಡಿದರು ಕೂಡ ರಾಜ್ಯಕ್ಕೆ ಅನುದಾನ ನೀಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೂ ಕೇಂದ್ರ ಸರ್ಕಾರ ಹಣ ನೀಡಿಲ್ಲ. ರಾಜ್ಯಕ್ಕೆ ಅನ್ಯಾಯವಾಗಿದ್ದರೂ ಕೂಡ ಬಿಜೆಪಿ ಸಂಸದರು ಬಾಯಿಬಿಟ್ಟಿಲ್ಲ. ಈ ಕುರಿತಂತೆ ಪಿ…

Read More

ಬೆಂಗಳೂರು : ಪ್ರಚಾರದ ವೇಳೆ ಗನ್ ಇಟ್ಟುಕೊಂಡಿದ್ದ ಅಪರಿಚಿತ ವ್ಯಕ್ತಿಯಿಂದ ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಿರುವ ಘಟನೆ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯ ರೆಡ್ಡಿ ಪರ ಪ್ರಚಾರ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದು ಕ್ಯಾಂಟರ್ ಏರಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಾರ ಹಾಕಿದ್ದಾನೆ. ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಿ ನಂತರ ಅಪರಿಚಿತ ವ್ಯಕ್ತಿ ಅಲ್ಲಿಂದ ತೆರಳಿದ್ದಾನೆ ಎಂದು ಹೇಳಲಾಗುತ್ತಿದೆ. ಆತನ ಬಳಿ ಲೈಸೆನ್ಚ್ ಇತ್ತ? ಸಿಎಂ ಗೆ ಹಾರ ಹಾಕಿದ ವ್ಯಕ್ತಿ ಯಾರು? ಇದರ ಬಗ್ಗೆಯೂ ಸಿಎಂ ಬೆಂಗಾವಲು ಪಡೆ ಹಾಗೂ ಪೊಲೀಸರಿಗೆ ಮಾಹಿತಿ ಇಲ್ಲ. ಸಿಎಂ ಮತಯಾಚನೆಗಳೇ ಇದು ಪೊಲೀಸರ ಭದ್ರತಾ ವೈಫಲ್ಯವಾಗಿದೆ ಎಂದು ಹೇಳಲಾಗುತ್ತಿದೆ. ಗನ್ ಇಟ್ಟುಕೊಂಡಿದ್ದವನು ಸಿಎಂ ಸಿದ್ದರಾಮಯ್ಯ ಬಳಿ ಹೇಗೆ ಹೋಗುತ್ತಾನೆ? ಲೈಸೆನ್ಸ್ ಹೊಂದಿದ ವ್ಯಕ್ತಿಯಾಗಿದ್ದರು ಏಕಾಏಕಿ ಸಿಯಂಬಳಿ ಹೋಗಬಹುದಾ? ಎನ್ನುವ ಪ್ರಶ್ನೆ ಇದೀಗ ಕಾಣತೊಡಗಿದೆ.

Read More

ಬೆಂಗಳೂರು : ಧಾರವಾಡ ಲೋಕಸಭಾ ಕ್ಷೇತ್ರದಿಂದ ಶಿರಹಟ್ಟಿ ಮಠದ ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಇದರಿಂದ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬ್ರಾಹ್ಮಣ ಹಾಗೂ ಲಿಂಗಾಯತ ಸ್ಪರ್ಧೆ ಏರ್ಪಟ್ಟಿದೆ. ಇವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್​ನಿಂದ ಯುವ ಕಾಂಗ್ರೆಸ್​ ಘಟಕದ ಜಿಲ್ಲಾ ಅಧ್ಯಕ್ಷ, ಕುರುಬ ಸಮಾಜದ ವಿನೋದ ಅಸೂಟಿ ಸ್ಪರ್ಧಿಸುತ್ತಿದ್ದಾರೆ. https://kannadanewsnow.com/kannada/breaking-tmc-mps-detained-by-police-for-protesting-outside-ec-office/ ದಿಂಗಾಲೇಶ್ವರ ಶ್ರೀ ಗಳಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡುವ ವಿಚಾರವಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ದಿಂಗಾಲೇಶ್ವರ ಶ್ರೀಗಳು ಹೋರಾಟದ ಮೂಲಕ ಬಂದವರುಎಂದು ಕೆಪಿಸಿಸಿ ಕಸಿರೇಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. https://kannadanewsnow.com/kannada/siddaramaiahs-habit-of-blaming-centre-ashwathnarayan/ ದಿಂಗಾಲೇಶ್ವರ ಶ್ರೀ ಏನೋ ಕೇಳ್ತಿದ್ದಾರೆ ಆದರೆ ಅಂತ ಸ್ಥಿತಿ ಇವಾಗಿಲ್ಲ. ಹಿಂದೆ ವೀರಶೈವರಿಗೆ ಟಿಕೆಟ್ ಕೊಟ್ಟಿದ್ದೆವು ಈ ಬಗ್ಗೆ ಚರ್ಚಿಸುತ್ತೇವೆ. ಜನ ಒತ್ತಡ ಹಾಕಿದ್ದಾರೆ ವರಿಷ್ಟರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.ಈ ಬಗ್ಗೆ ಮುಖ್ಯಮಂತ್ರಿ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತನಾಡಬೇಕು ಮೊದಲೇ ಬಂದಿದ್ದರೆ ನೋಡಬಹುದಿತ್ತೇನೋ ಎಂದು ತಿಳಿಸಿದರು. https://kannadanewsnow.com/kannada/vani-wife-of-retired-ias-officer-k-sivaram-formally-joins-congress/ ಇನ್ನೂ ಕುಕ್ಕರ್ ಬ್ಲಾಸ್ಟ್…

Read More

ಬೆಂಗಳೂರು : ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ರದ್ದುಗೊಳಿಸಿ ಎಂದು ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ ಅರ್ಜಿಯನ್ನು ಇದೀಗ ಹೈಕೋರ್ಟ್ ವಜಾಗೊಳಿಸಿದೆ ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ವಿಚಾರಣೆ ನಡೆಸಿದ ಹೈಕೋರ್ಟಿನ ನ್ಯಾ. ಕೃಷ್ಣ ಎಸ್ ದೀಕ್ಷಿತರಿದ್ದ ಹೈಕೋರ್ಟ್ ಪೀಠ ಇದೀಗ ಪ್ರಕರಣ ಕುರಿತಂತೆ ಆದೇಶ ಹೊರಡಿಸಿದೆ.ಸಾಕ್ಷ ವಿಚಾರಣೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಸಿಬಿಐ ಪರ ಅಭಿಯೋಜಕರಿಗೆ ಹೈಕೋರ್ಟ್ ಇದೀಗ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. ಏನಿದು ಪ್ರಕರಣ? ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶಗೌಡ ಗೌಡರ್ ಅವರನ್ನು ಜೂನ್ 2016 ರಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 2020 ರಲ್ಲಿ ವಿನಯ್ ಕಲಕರ್ಣಿ ಅವರನ್ನು ಬಂಧಿಸಲಾಗಿತ್ತು.ಅಲ್ಲದೆ, ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಒಂದು ವೇಳೆ ಧಾರವಾಡಕ್ಕೆ ತೆರಳಿದರೆ ಜಾಮೀನು ರದ್ಧಪಡಿಸುವುದಾಗಿ ಕೋರ್ಟ್ ಎಚ್ಚರಿಕೆ ಕೂಡ ನೀಡಿತ್ತು.

Read More

ಬೆಂಗಳೂರು : ಬೆಂಗಳೂರಿನಿಂದ ಕೊಯಮತ್ತೂರಿಗೆ ಖಾಸಗಿ ಬಸ್ ನಲ್ಲಿ ಸುಮಾರು 30.50 ಲಕ್ಷ ನಗದು ಹಾಗೂ 500 ಗ್ರಾಂ ಚಿನ್ನವನ್ನು ಅಕ್ರಮವಾಗಿ ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿ ಇದೀಗ ಜಪ್ತಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ತಮಿಳುನಾಡಿನ ಜೂಜುವಾಡಿ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕದ ಗಡಿಭಾಗಕ್ಕೆ ಹೊಂದಿಕೊಂಡಿರುವ ತಮಿಳುನಾಡಿನ ಜೂಜುವಾಡಿ ಎಂಬಲ್ಲಿ ಖಾಸಗಿ ಬಸ್ ನಲ್ಲಿ ಬೆಂಗಳೂರಿನಿಂದ ಕೊಯಮತ್ತೂರಿಗೆ ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ಸಹ ವಶಪಡಿಸಿಕೊಳ್ಳಲಾಗಿದೆ. ರಾಜಕುಮಾರ್ ಎನ್ನುವ ವ್ಯಕ್ತಿಯನ್ನು ವಶಕ್ಕೆ ಪಡಿಸಿಕೊಳ್ಳಲಾಗಿದೆ. ಬೆಂಗಳೂರಿನಿಂದ ಕೊಯಮತ್ತೂರಿಗೆ ಹಣ ಸಾಗಿಸುತ್ತಿದ್ದ ರಾಜಕುಮಾರ್ ಎಂದು ಹೇಳಲಾಗುತ್ತಿದ್ದು, ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದಾಗ 30.50 ಲಕ್ಷ ನಗದು 500 ಗ್ರಾಂ ಚಿನ್ನಾಭರಣ ಪತ್ತೆಯಾಗಿದ್ದು, ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Read More

ಹಾಸನ: ಚುನಾವಣಾಧಿಕಾರಿ ಅನುಮತಿ ಪಡೆಯದೇ ಕಾಂಗ್ರೆಸ್ ಅಭ್ಯರ್ಥಿ ಪರ ಕರಪತ್ರ ಮುದ್ರಿಸಿದ ಪ್ರಿಂಟಿಂಗ್ ಪ್ರೆಸ್ ಮಾಲೀಕ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜೇಗೌಡ ವಿರುದ್ಧ ಚುನಾವಣಾ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದು, ಪ್ರಿಂಟಿಂಗ್ ಪ್ರೆಸ್‌ಗೆ ಬೀಗಮುದ್ರೆ ಹಾಕಿದ್ದಾರೆ. https://kannadanewsnow.com/kannada/bigg-news-lok-sabha-elections-ssc-exams-postponed-heres-the-new-schedule/ ನಗರದ ಕಟ್ಟಿನಕೆರೆ ಮಾರುಕಟ್ಟೆಯಲ್ಲಿರುವ ಶ್ರೀನಿಧಿ ಪ್ರಿಂಟರ್ಸ್ ಮಾಲೀಕ ಬಾಲಾಜಿ ಹಾಗೂ ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಮೇಲೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಹಿನ್ನೆಲೆಯಲ್ಲಿ ಅವರ ಸೂಚನೆಯಂತೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಪ್ರಿಂಟಿಂಗ್‌ ಪ್ರೆಸ್‌ಗೆ ತೆರಳಿ ಪರಿಶೀಲನೆ ನಡೆಸಿದ್ದು, ಮಾಲೀಕರು ಅನುಮತಿ ನೀಡಿರಲಿಲ್ಲ. ಹೀಗಾಗಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ. https://kannadanewsnow.com/kannada/hc-gives-big-relief-to-kalladka-prabhakar-bhat-in-case-of-derogatory-remarks-against-muslim-women/ ಪ್ರವಾಸಿ ಮಂದಿರಕ್ಕೆ ಬಂದ ದಿನಪತ್ರಿಕೆಯೊಳಗಿದ್ದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪರ ಮತ ಕೋರಿ ಹೊರಡಿಸಿದ್ದ ಕರಪತ್ರವನ್ನು ಸಹಾಯಕ ಚುನಾವಣಾಧಿಕಾರಿ ರಕ್ಷಿತ್ ಪರಿಶೀಲಿಸಿದ್ದು, ಅದನ್ನು ಮುದ್ರಿಸಲು ಪೂರ್ವಾನುಮತಿ ಪಡೆಯದಿರುವುದು ಕಂಡು ಬಂದಿದೆ.

Read More