Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಲ್ಲಿ ಮಹಿಳೆಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ, ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಯುವಕನನ್ನು ಮಹಿಳೆಯ ಕುಟುಂಬಸ್ಥರು ಹತ್ಯೆ ಮಾಡಿದ ಘಟನೆ ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ನಡೆದಿದೆ. ಮೃತ ಯುವಕನನ್ನನು ನರಸಿಂಹರಾಜು (32) ಎಂದು ತಿಳಿದುಬಂದಿದೆ. ಈತ ಮದುವೆಯಾಗಿದ್ದ ಮಹಿಳೆಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ. ಆ ಮಹಿಳೆಯೂ ಆಗಾಗ ಯುವಕನ ಮನೆಗೆ ಬರುತ್ತಿದ್ದಳು. ಕಳೆದ ಶನಿವಾರ ಆ ಮಹಿಳೆ ನರಸಿಂಹರಾಜು ಮನೆಯಲ್ಲಿ ಇದ್ದರು. ಇದನ್ನು ತಿಳಿದ ಮಹಿಳೆಯ ಮನೆಯವರು ಬಂದಿದ್ದಾರೆ. ಬಳಿಕ ಮನೆಯಲ್ಲಿದ್ದ ನರಸಿಂಹರಾಜುನನ್ನು ಮನೆಯಿಂದ ಹೊರಗಡೆ ಎಳೆದುಕೊಂಡು ಬಂದು ರಸ್ತೆಯಲ್ಲಿ ನಾಲ್ಕೈದು ಜನ ಮನಸ್ಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಬಿಡಿಸಲು ಬಂದ ನರಸಿಂಹರಾಜು ತಾಯಿಯ ಮೇಲೂ ಹಲ್ಲೆ ಮಾಡಲಾಗಿದೆ. ಹಲ್ಲೆಯಿಂದ ಅಸ್ವಸ್ಥನಾಗಿದ್ದ ನರಸಿಂಹರಾಜುನನ್ನು ಕೂಡಲೇ ಕೆ.ಸಿ ಜನರಲ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆಯಲ್ಲಿ ಯುವಕ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ…
ಅಯೋಧ್ಯೆ : ಅಯೋಧ್ಯೆಯ ಶ್ರೀ ರಾಮಮಂದಿರ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಶ್ರೀರಾಮಮಂದಿರ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೇಸರಿ ಧ್ವಜಾರೋಹಣ ನೆರವೇರಿಸಿದ್ದಾರೆ. ಮೋದಿ ಅವರು ಶ್ರೀ ರಾಮಲಲ್ಲಾ ದೇವಾಲಯದ ಮೇಲ್ಭಾಗದಲ್ಲಿ, ಅಂದರೆ ಮುಖ್ಯ ಶಿಖರದ ಮೇಲೆ ಔಪಚಾರಿಕವಾಗಿ ಕೇಸರಿ ಧ್ವಜವನ್ನು ಹಾರಿಸಿದ್ದಾರೆ. ಬಲರಾಮನ ತ್ಯಾಗದ ನಂತರ, ಇದು ದೇವಾಲಯ ನಿರ್ಮಾಣ ಪೂರ್ಣಗೊಂಡ ಬಲವಾದ ಸಂಕೇತವಾಗಿ ನಿಲ್ಲುತ್ತದೆ. ಅಯೋಧ್ಯೆಯ ಸಂಪೂರ್ಣ ರಾಮ ಮಂದಿರವು ಹಬ್ಬದ ನೋಟವನ್ನು ಪಡೆದುಕೊಂಡಿದೆ. ಈ ಐತಿಹಾಸಿಕ ಕಾರ್ಯಕ್ರಮವನ್ನು ವೀಕ್ಷಿಸಲು ಸಾವಿರಾರು ಭಕ್ತರು ಮತ್ತು ಆಹ್ವಾನಿತರು ಅಯೋಧ್ಯೆಯನ್ನು ತಲುಪಿದ್ದಾರೆ. ಧ್ವಜದ ವಿಶೇಷತೆಗಳೇನು? ತಿಳಿಯಿರಿ ಶಿಖರದ ಮೇಲೆ ಸ್ಥಾಪಿಸಲಾದ 42 ಅಡಿ ಎತ್ತರದ ಧ್ವಜಸ್ತಂಭವನ್ನು 360 ಡಿಗ್ರಿ ತಿರುಗುವಂತೆ ವಿನ್ಯಾಸಗೊಳಿಸಲಾಗಿದೆ. ಧ್ವಜವು ಕೇಸರಿ ಬಣ್ಣ ಹಾಗೂ ತ್ರಿಕೋನಾಕೃತಿಯಲ್ಲಿದೆ. 10 ಅಡಿ ಎತ್ತರ ಮತ್ತು 20 ಅಡಿ ಉದ್ದವಿದೆ. ಇದರ ಮೇಲೆ ಸೂರ್ಯ, ‘ಓಂ’ ಹಾಗೂ ಕೋವಿದಾರ ಮರವನ್ನು ಚಿತ್ರಿಸಲಾಗಿದೆ. ಸೂರ್ಯನ ಚಿತ್ರ ರಾಮನ ವಂಶವಾದ ಸೂರ್ಯವಂಶವನ್ನು ಸೂಚಿಸುತ್ತದೆ.…
ಬೆಂಗಳೂರು : ತೀವ್ರ ಪೈಪೋಟಿ ನಡುವೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕ್ರಿಕೆಟ್ ಆಟಗಾರ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಪ್ರಸಾದ್ ಹಾಗೂ ಶಾಂತಕುಮಾರ್ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆ ಅಂತ್ಯಗೊಂಡು ಪರಿಶೀಲನೆ ವೇಳೆ ಬ್ರಿಜೇಶ್ ಬಣದ ಶಾಂತಕುಮಾರ್ ನಾಮಪತ್ರ ತಿರಸ್ಕೃತಗೊಂಡಿದೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಕಣಕ್ಕಿಳಿಯುತ್ತಿದ್ದಂತೆ ಹಿರಿಯ ಆಟಗಾರರು ವೆಂಕಟೇಶ್ ಪ್ರಸಾದ್‌ಗೆ ಬೆಂಬಲ ನೀಡಿದ್ದರು. ಮಾಜಿ ಕ್ರಿಕೆಟಿಗ, ಮಾಜಿ ಕೆಎಸ್‌ಸಿಎ ಅಧ್ಯಕ್ಷ ಅನಿಲ್ ಕುಂಬ್ಳೆ, ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಸೇರಿದಂತೆ ಹಲವರು ಬೆಂಬಲ ನೀಡಿದ್ದರು. ಶಾಂತಕುಮಾರ್ ಅವರು 200 ರೂ. ಸಬ್‌ಸ್ಕ್ರಿಪ್ಶನ್ ಫೀಸ್ ಕಟ್ಟಿಲ್ಲದ ಕಾರಣ ಅರ್ಜಿ ತಿರಸ್ಕೃತವಾಗಿದೆ. ಹೀಗಾಗಿ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ ಆಗಿದ್ದಾರೆ. ಹಾಗಾಗಿ ಬ್ರಿಜೇಶ್ ಪಾಟೇಲ್ ಬಣಕ್ಕೆ ತೀವ್ರ ಮುಖಭಂಗವಾಗಿದೆ.
ಬೆಂಗಳೂರು : ಇತ್ತೀಚಿಗೆ ಬೆಂಗಳೂರು ಸೇರಿದಂತೆ ದೇಶದ ಹಲವು ಕಡೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಗೇಮಿಂಗ್ ಆ್ಯಪ್‌ಗಳ ಮೇಲೆ ದಾಳಿ ನಡೆಸಿ 527 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಬ್ಯಾಂಕ್ ಖಾತೆ, ಬಾಂಡ್‌ಗಳು ಮತ್ತು ಮ್ಯೂಚುವಲ್ ಫಂಡ್‌ಗಳನ್ನು ಜಪ್ತಿ ಮಾಡಿದ್ದಾರೆ. ಹೌದು ಬೆಂಗಳೂರು, ಗುರ್ಗಾವ್‌ನಲ್ಲಿನ ಗೇಮಿಂಗ್ ಆ್ಯಪ್ ‘ವಿಂಜೋ’ಗೆ ಸಂಬಂಧಿಸಿದ ಕಚೇರಿಗಳ ಮೇಲೆ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಸುಮಾರು 505 ಕೋಟಿ ರೂ. ಮೌಲ್ಯದ ಬ್ಯಾಂಕ್ ಠೇವಣಿ, ಬಾಂಡ್‌ಗಳು ಮತ್ತು ಮ್ಯೂಚುವಲ್ ಫಂಡ್‌ಗಳನ್ನು ಇಡಿ ವಶಪಡಿಸಿಕೊಂಡಿದೆ. ವಿಂಜೋ ಗೇಮ್ಸ್ ಪ್ರೈವೆಟ್ ಲಿಮಿಟೆಡ್ ಕಂಪನಿಯು ಗ್ರಾಹಕರಿಗೆ ಮೋಸ ಮಾಡುತ್ತಿರುವುದು ತನಿಖೆಯಿಂದ ಗೊತ್ತಾಗಿದೆ. ಗೇಮಿಂಗ್ ಹೆಸರಲ್ಲಿ ಕಂಪನಿಯು ರಹಸ್ಯವಾಗಿ ಅಲ್ಗರಿದಮ್‌ಗಳು ಮತ್ತು ಸಾಫ್ಟ್‌ವೇರ್‌ಗಳನ್ನು ಬಳಸಿ ಗ್ರಾಹಕರನ್ನು ಸೋಲಿಸುತ್ತಿತ್ತು ಎಂಬ ಆಘಾತಕಾರಿ ವಿಷಯ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ. ಕೇಂದ್ರ ಸರ್ಕಾರವು ‘ಪ್ರಮೋಷನ್ ಅಂಡ್ ರೆಗ್ಯುಲೇಷನ್ ಆಫ್ ಆನ್‌ಲೈನ್ ಗೇಮಿಂಗ್ ಆ್ಯಕ್ಟ್ -…
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡೆಯುತ್ತಿದ್ದು ಇದರ ಮಧ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಒಂದೇ ಕಾರಿನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಹೌದು, ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಒಂದೇ ಕಾರಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಐಪಿ ಟರ್ಮಿನಲ್ ನಲ್ಲಿ ಒಂದೇ ಕಾರಿನಲ್ಲಿ ಬಂದರು. ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರ ಕಾರಿಗೆ ಏಕಾಏಕಿ ಭದ್ರತಾ ಸಿಬ್ಬಂದಿ ಅಡ್ಡಲಾಗಿ ಬಂದಿದ್ದಾನೆ. ಆದರೆ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಮಂಡ್ಯ :- ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ಪಡೆಯಲು ಪೊಲೀಸರ ಗುಂಡೇಟಿಗೆ ಹೆದರದೆ ಹೋರಾಟ ನಡೆಸಿ, ಹುತಾತ್ಮರಾದ ರೈತರ ಹೋರಾಟ ಅವಿಸ್ಮರಣೀಯ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಸೋಮವಾರ ಹೇಳಿದರು. ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಗೆಜ್ಜಲಗೆರೆ ಗೋಲಿಬಾರ್ ನಲ್ಲಿ ಮಡಿದ ವಳಗೆರೆಹಳ್ಳಿಯ ನಾಥೇಗೌಡ ಗೆಜ್ಜಲಗೆರೆ ಸಿದ್ದಪ್ಪ ಅವರ 43ನೇ ವರ್ಷದ ಹುತಾತ್ಮ ದಿನಾಚರಣೆ ಹಾಗೂ ಸಾಲುಮರದ ತಿಮ್ಮಕ್ಕ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದರು. ಪ್ರಾರಂಭದಲ್ಲಿ ಕಬ್ಬು ಬೆಳೆಗಾರರಿಗಾಗಿ ಸ್ಥಾಪಿಸಿದ್ದ ಸಂಘವೇ ಮುಂದೆ ರೈತ ಸಂಘವಾಯಿತು. ಕೆ.ಎಂ.ದೊಡ್ಡಿಯ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ 1982 ರಲ್ಲಿ ಕಾರ್ಖಾನೆಗೆ ಒಪ್ಪಿಗೆ ಮಾಡಿದ ರೈತರಿಗೆ ಒಂದು ರೀತಿಯ ಹಣ, ಒಪ್ಪಿಗೆ ಮಾಡಿಸದ ರೈತರಿಗೆ ಒಂದು ರೀತಿಯ ಹಣ ನೀಡುತ್ತಿತ್ತು. ಇದರಿಂದ ಬೇಸತ್ತು ರೈತರು ಹೋರಾಟಕ್ಕಿಳಿದಿದ್ದು, ಬಂಡವಾಳ ಶಾಹಿಗಳ ಪರವಾಗಿದ್ದ ಅಂದಿನ ಮುಖ್ಯಮಂತ್ರಿ ಗುಂಡೂರಾವ್ ಅವರ ಸರ್ಕಾರ ವಳಗೆರೆಹಳ್ಳಿ ನಾಥೇಗೌಡ, ಗೆಜ್ಜಲಗೆರೆ ಸಿದ್ದಪ್ಪ ಅವರನ್ನು…
ಹಿಂದೂ ದರ್ಮದಲ್ಲಿ ತುಪ್ಪದ ದೀಪಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತದೆ. ಪೂಜೆ ಸಮಯದಲ್ಲಿ ಹಲವು ಜನರು ತುಪ್ಪದ ದೀಪ ಹಚ್ಚುವುದನ್ನು ನೋಡಿದ್ದೇವೆ.. ತುಪ್ಪದ ದೀಪ ಹಚ್ಚುವುದರಿಂದ ಸಕಾರಾತ್ಮಕತೆ ಹೆಚ್ಚುತ್ತದೆ. ದೇವರಿಗೆ ತುಪ್ಪದ ದೀಪ ಯಾಕೆ ಶ್ರೇಷ್ಠ.. ವಿಸ್ತಾರವಾಗಿ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ದೇವರಿಗೆ, ತುಪ್ಪದ ದೀಪ , ಪ್ರಯೋಜನಗಳು, ಹಿಂದೂ ಧರ್ಮ ಹಾಗೂ ಧರ್ಮ ಗ್ರಂಥಗಳಲ್ಲಿ ತುಪ್ಪದ ದೀಪಕ್ಕೆ ಸಾಕಷ್ಟು ಮಹತ್ವವಿದೆ. ಪ್ರತಿ ಹಿಂದೂ ಕುಟುಂಬದಲ್ಲಿ ಬೆಳಿಗ್ಗೆ, ಮತ್ತು ಸಂಜೆ ಮನೆಯಲ್ಲಿ ಮಹಿಳೆಯರು ದೇವರ ಮುಂದೆ ದೀಪವನ್ನು ಹಚ್ಚುವ ಪದ್ಧತಿ ಇದೆ. ದೀಪ ಹಚ್ಚುವುದರಿಂದ ದೇವತೆಗಳು ಸಂತೋಷವಾಗುತ್ತಾರೆ ಎಂದು ಹೇಳಲಾಗಿದೆ. ಆದ್ರೆ ಶಿವ ಪುರಾಣದ ಪ್ರಕಾರ, ದೇವರ ಮುಂದೆ ದೀಪ ಹಚ್ಚುವುದರಿಂದ ಮನೆಯಲ್ಲಿ ಸಂತೋಷ, ನೆಮ್ಮದಿ,…
ಮಂಡ್ಯ : ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಭ್ರಷ್ಟ ಅಧಿಕಾರಿ ಚಳಿ ಬಿಡಿಸುತ್ತಿರುವ ಲೋಕಾಯುಕ್ತರು, ಏಕಕಾಲಕ್ಕೆ ಪ್ರತ್ಯೇಕ ತಂಡವಾಗಿ ಮೂರು ಕಡೆ ದಾಳಿ ಮಾಡಿದ್ದಾರೆ. ಇನ್ನು ಮಂಡ್ಯ ನಗರಸಭೆ ಸಂಯೋಜನಾಧಿಕಾರಿ ಪುಟ್ಟಸ್ವಾಮಿ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತರು, ಸ್ವಗ್ರಾಮ ತೊರೆಚಾಕನಹಳ್ಳಿಯ ಮನೆಯ ಮೇಲೆ ದಾಳಿ ಮಾಡಿದ್ದಾರೆ.ಅದೇ ಗ್ರಾಮದಲ್ಲಿರುವ ಆಲೆಮನೆ ಮೇಲು ದಾಳಿ ಮಾಡಿದ್ದಾರೆ. ಮೈಸೂರಿನ ಅಧಿಕೃತ ನಿವಾಸದ ಮೇಲೂ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿರುವ ಆರೋಪ ಹಿನ್ನೆಲೆ ಎಲ್ಲಾ ಕಡೆಯಲ್ಲೂ ಸಂಪೂರ್ಣವಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ದಾವಣಗೆರೆ : ರಾಜ್ಯದಲ್ಲಿ ಇತ್ತೀಚಿಗೆ ಬೆಂಗಳೂರು ನಗರದಲ್ಲಿ 7 ಕೋಟಿ ದರೋಡೆ ಪ್ರಕರಣ ತನಿಖೆ ನಡೆಯುತ್ತಿರುವಾಗಲೇ, ಮತ್ತೊಂದು ದರೋಡೆ ನಡೆದಿತ್ತು. ಚಿಕ್ಕಮಗಳೂರಲ್ಲಿ ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ ನಗ ನಾಣ್ಯ ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ಅದರ ಬಳಿಕ ಇದೀಗ ದಾವಣಗೆರೆಯಲ್ಲಿ ಚಿನ್ನದ ವ್ಯಾಪಾರಿ ಬಳಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಪಿಎಸ್ಐ ಸೇರಿದಂತೆ ನಾಲ್ವರನ್ನು ದಾವಣಗೆರೆಯ ಕೆಟಿಜೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪಿಎಸ್‍ಐಗಳನ್ನು ಮಾಳಪ್ಪ ಚಿಪ್ಪಲಕಟ್ಟಿ, ಪ್ರವೀಣ್ ಕುಮಾರ್ ಎಂದು ಗುರುತಿಸಲಾಗಿದೆ. ಈ ಇಬ್ಬರಿಗೆ ಸಹಕರಿಸಿದ್ದ ಚಿನ್ನದಂಗಡಿಯ ಕೆಲಸಗಾರರಾದ ಸತೀಶ್ ರೇವಣಕರ್, ನಾಗರಾಜ್ ರೇವಣಕರ್ ಎಂಬವರನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ಆರೋಪಿಗಳು ಪಿಎಸ್‍ಐಗಳಿಗೆ ವ್ಯಾಪಾರಿ ಬಳಿ ಚಿನ್ನ ಇರುವುದರ ಬಗ್ಗೆ ಮಾಹಿತಿ ನೀಡಿದ್ದರು ಎಂದು ತಿಳಿದುಬಂದಿದೆ. ಇಬ್ಪಿಬರು ಎಸ್‌ಐಗಳು ವರ್ಗಾವಣೆ ಆಗಿ ಐಜಿ ಅಫೀಸ್‌ನಲ್ಲಿ ರಿಪೋರ್ಟ್ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಕಾರವಾರ ಮೂಲದ ವ್ಯಾಪಾರಿ ವಿಶ್ವನಾಥ್ ಅರ್ಕಸಾಲಿ ಎಂಬವರು 80 ಗ್ರಾಂ ಬಂಗಾರದ ಒಡವೆಗಳನ್ನು…
ನವದೆಹಲಿ : ಹಿಂದಿ ಚಿತ್ರರಂಗದ ಹಿರಿಯ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಈ ಸುದ್ದಿ ಅವರ ಅಭಿಮಾನಿಗಳಿಗೆ ದೊಡ್ಡ ಆಘಾತ ನೀಡಿದೆ. ಧರ್ಮೇಂದ್ರ ಅವರು ತಮ್ಮ ಅಭಿನಯದಿಂದ ದಶಕಗಳ ಕಾಲ ಪ್ರೇಕ್ಷಕರನ್ನು ರಂಜಿಸಿದ್ದರು. ಅವರ ಅಗಲಿಕೆಯ ಸುದ್ದಿ ಚಿತ್ರರಂಗದಲ್ಲಿ ದುಃಖ ಮೂಡಿಸಿದೆ. ಅವರ ನಿಧನವು ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಹಿರಿಯ ನಟ, ಪ್ರೇಕ್ಷಕರ ಮನಗೆದ್ದಿದ್ದ ಧರ್ಮೇಂದ್ರ ಅವರು ನಿಧನರಾಗಿದ್ದಾರೆ. ಅವರ ಅಗಲಿಕೆಯ ಸುದ್ದಿ ಚಿತ್ರರಂಗದಲ್ಲಿ ಮತ್ತು ಅಭಿಮಾನಿ ವಲಯದಲ್ಲಿ ದುಃಖ ಮೂಡಿಸಿದೆ.ಧರ್ಮೇಂದ್ರ ಅವರು ತಮ್ಮ ಅಭಿನಯದ ಮೂಲಕ ದಶಕಗಳ ಕಾಲ ಪ್ರೇಕ್ಷಕರನ್ನು ರಂಜಿಸಿದ್ದರು. ಅವರ ನಟನೆಯು ಅನೇಕರಿಗೆ ಸ್ಫೂರ್ತಿಯಾಗಿದೆ. ಧರ್ಮೇಂದ್ರ ಅವರು ತಮ್ಮ ನಟನೆಯಿಂದ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಅವರ ಅಭಿನಯಕ್ಕೆ ಅನೇಕ ಪ್ರಶಸ್ತಿಗಳು ಸಂದಿವೆ. ಅವರ ಅಭಿನಯದ ಚಿತ್ರಗಳು ಇಂದಿಗೂ ಜನಪ್ರಿಯವಾಗಿವೆ. ಪ್ರೇಕ್ಷಕರು ಅವರನ್ನು ಬಹಳ ಪ್ರೀತಿಸುತ್ತಿದ್ದರು.a














