Author: kannadanewsnow05

ಬಾಗಲಕೋಟೆ : ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆಯ ವಿಚಾರವಾಗಿ ಅಸಮಾಧಾನ ಬಿಜೆಪಿ ಪಕ್ಷ ಅಷ್ಟೆ ಅಲ್ಲದೆ ಕಾಂಗ್ರೆಸ್ ಪಕ್ಷ ಕೂಡ ಇದಕ್ಕೆ ಹೊರತಾಗಿಲ್ಲ. ಏಕೆಂದರೆ ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಶಾಸಕ ವಿಧಾನದ ಕಾಶಪ್ಪನವರ ಪತ್ನಿ ವೀಣಾ ಕಾಶಪ್ಪನವರು ಲೋಕಸಭೆ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಸಚಿವ ಶಿವಾನಂದ್ ಪಾಟೀಲ್ ಅವರ ಪುತ್ರಿ ಸಂಯುಕ್ತ ಪಾಟೀಲ್ ಗೆ ಟಿಕೆಟ್ ನೀಡಿದೆ. ಹೀಗಾಗಿ ಅವರು ಇದೀಗ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ. ಈ ವೇಳೆ ಮಾತನಾಡಿದ ಅವರು ನಾನು ಮುಂದೆ ದೇಶದ ಪ್ರಧಾನಿಯಾದರು ಆಗಬಹುದು ಎಂದು ಹೇಳಿಕೆಯನ್ನು ನೀಡಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟಿಲ್ ಅವರು ಹಣವನ್ನ ಪ್ರಚಾರದ ವೇಳೆ ಒಂದು ಅವಕಾಶ ಕೊಡಿ ನಿಮ್ಮ ಮನೆಯ ಜೀತದಾಳಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದು, ಮನೆ ಯಜಮಾನಿಗೆ ಸರ್ಕಾರ 2 ಸಾವಿರ ರೂಪಾಯಿ ಹಣ ನೀಡುತ್ತಿದೆ. ಪುರುಷರಿಗೆ ಕೊಟ್ಟರೆ ಸಂಜೆ ಯಾವ ಅಂಗಡಿಗೆ ಹೋಗುತ್ತೆ ಗೊತ್ತಿದೆ ಎಂದು ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ…

Read More

ಶಿವಮೊಗ್ಗ : ಲೋಕಸಭೆ ಚುನಾವಣೆಗೆ ಮಾಜಿ ಜೀವ ಕೆಎಸ್ ಈಶ್ವರಪ್ಪ ಅವರ ಮಗ ಕಾಂತೇಶ್ ಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಇದೀಗ ಪಕ್ಷೇತರವಾಗಿ ಸ್ಪರ್ಧಿಸುತ್ತಿದ್ದು ಶಿವಮೊಗ್ಗದಲ್ಲಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮತ್ತೆ ಕೆಎಸ್ ಈಶ್ವರಪ್ಪ ಗರ್ಜಿಸಿದ್ದು, ಶನೇಶ್ವರ ಹಾಗೂ ಗಣೇಶನ ಮೇಲೆ ಆಣೆ ಮಾಡಿ ಹೇಳುತ್ತಿದ್ದೇನೆ ಈ ಬಾರಿ ಚುನಾವಣೆಯಲ್ಲಿ ನಿಂತೆ ನಿಲ್ಲುತ್ತೇನೆ ಎಂದು ಗುಡುಗಿದರು. https://kannadanewsnow.com/kannada/dk-shivakumar-thanks-nirmala-sitharaman-for-acknowledging-injustice-done-to-the-state/ ಶಿವಮೊಗ್ಗದಲ್ಲಿ ಸಮಾರಂಭ ಒಂದರಲ್ಲಿ ಮಾತನಾಡಿದ ಅವರು, ಏಪ್ರಿಲ್ 19 ರಿಂದ ರಾವಣನ ಸಂಹಾರಕ್ಕೆ ಸಜ್ಜಾಗಿ ಎಂದು ಬಿಎಸ್ ಯಡಿಯೂರಪ್ಪ ಹಾಗೂ ಪುತ್ರರ ವಿರುದ್ಧ ಈಶ್ವರಪ್ಪ ಘರ್ಜಿಸಿದ್ದಾರೆ. ಬಿಜೆಪಿಯಲ್ಲಿ ಬಿಎಸ್ ಯಡಿಯೂರಪ್ಪ ಮತ್ತು ಪುತ್ರರ ದರ್ಬಾರ್ ಆಗಿದೆ.ಯಡಿಯೂರಪ್ಪ ಎಲ್ಲರಿಗೂ ಮೋಸ ಮಾಡಿದ್ದಾರೆ. ಚುನಾವಣೆಗೆ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿ ಮೋಸ ಮಾಡಿದ್ದಾರೆ. ನಾವೇನು ಅವರಿಗೆ ಮೋಸ ಮಾಡಿದ್ವಿ? ಏಪ್ರಿಲ್ 12 ರಂದು ನಾಮಿನೇಷನ್ ಹಾಕಿ ಹಾಕುತ್ತೇನೆ. ಶನೇಶ್ವರ, ಗಣೇಶನ ಮೇಲಾಣೆಗೂ ನಾನು ಸ್ಪರ್ಧೆ ಮಾಡೇ ಮಾಡುತ್ತೇನೆ ಎಂದು ಶಿವಮೊಗ್ಗದಲ್ಲಿ ಬಿಎಸ್ ಯಡಿಯೂರಪ್ಪ…

Read More

ಬೆಂಗಳೂರು : ಬೆಂಗಳೂರಲ್ಲಿ ಇತ್ತೀಚಿನ ದಿನಗಳಲ್ಲಿ ಹಿಟ್ ಅಂಡ್ ರನ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಆನಂದ ನಗರದ ಸಮೀಪ ಹಿಟ್ ಅಂಡ್ ರನ್ ಗೆ ವೃದ್ದೆಯೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ರಸ್ತೆ ದಾಟುವ ವೇಳೆ ವೃದ್ದೆಗೆ ಕಾರು ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸಿರೇಸಂದ್ರದ ನಾರಯಣಮ್ಮ(66) ಮೃತ ರ್ದುದೈವಿ. ಅಪಘಾತದ ಬಳಿಕ ಕಾರಿನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಆಸ್ಪತ್ರೆಯಿಂದ ವಾಪಸ್ ಮನೆಗೆ ತೆರಳುವಾಗ ಈ ಅವಘಡ ಸಂಭವಿಸಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : 2024ರಲ್ಲಿ ನಡೆದ ಆರ್‌ಸಿಬಿ ಅನ್‌ಬಾಕ್ಸ್‌ ಈವೆಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಗೌರವಿಸಿ ಅವರಿಂದಲೇ ಹೊಸ ಟೀಶರ್ಟ್ ಬಿಡುಗಡೆ ಮಾಡಿಸಲಾಯಿತು. ಆದರೆ, ಈ ಬಗ್ಗೆ ಗಜಪಡೆ ಎಂಬ ಟ್ವಿಟರ್ ಖಾತೆಯನ್ನು ಹೊಂದಿದ ವ್ಯಕ್ತಿ ಗಂಡನಿಲ್ಲದ ಮಹಿಳೆಯಿಂದ ಅನ್‌ಬಾಕ್ಸಿಂಗ್ ಮಾಡಿಸಿದ್ದಕ್ಕೆ ಆರ್‌ಸಿಬಿ ಸೋಲುತ್ತಿದೆ ಎಂದು ಹೇಳಿ ಟ್ವೀಟ್‌ ಮಾಡಿದ್ದನು. ಈ ಕುರಿತಂತೆ ಅಶ್ವಿನಿ ಪುನೀತ್ ರಾಜಕುಮಾರ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಯೊಬ್ಬ ಅವಹೇಳನ ಮಾಡಿ ಪೋಸ್ಟ್‌ ಮಾಡಿದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ, ಇದು ಸಂವಿಧಾನವನ್ನು ತಿರಸ್ಕರಿಸಿ ಮನುವಾದವನ್ನು ಪುರಸ್ಕರಿಸಬೇಕೆಂದು ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಕುತ್ತಿರುವ ಕೂಗಿನ ಫಲ ಎಂದು ಕಿಡಿಗೇಡಿಯೊಬ್ಬನ ಅವಹೇಳನೆಗೆ ರಾಜಕೀಯ ಬಣ್ಣವನ್ನು ನೀಡಿದ್ದಾರೆ. ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ. ಪತಿಯನ್ನು ಕಳೆದುಕೊಂಡು ಹೆಣ್ಣುಮಕ್ಕಳು ಕೂಡಾ ವೈಯಕ್ತಿಕ ಬದುಕಿನ…

Read More

ಬೆಂಗಳೂರು : ಕಾನೂನುಬಾಹಿರವಾಗಿ ಬಾಲಕಿಯನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಹೆಸರುವಾಸಿಯಾಗಿದ್ದ ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ ಮೂಲಕ ಫೇಮಸ್ ಆದ ಸೋನುಶ್ರೀನಿವಾಸಗೌಡ ಇದೀಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜಾಮೀನು ಷರತ್ತು ಪೂರೈಸಿದ ನಂತರ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಇಂದು ಜಾಮೀನು ಅರ್ಜಿಯ ಷರತ್ತುಗಳನ್ನ ಪೂರೈಸಿದ ಹಿನ್ನೆಲೆ 8:10 ರ ಸುಮಾರಿಗೆ ಜೈಲಿನಿಂದ ಬಿಡುಗಡೆ ಮಾಡಿದ್ದಾರೆ. ಇತ್ತ ಬಿಡುಗಡೆಯಾಗುತ್ತಿದ್ದಂತೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ಸೋನು ಶ್ರೀನಿವಾಸಗೌಡ ತೆರಳಿದ್ದಾರೆ. ಘಟನೆ ಹಿನ್ನೆಲೆ? ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ ಮೂಲಕ ಫೇಮಸ್ ಆದ ಸೋನು ಶ್ರೀನಿವಾಸ್ ಗೌಡ ಇತ್ತೀಚಿಗೆ ಕಾನೂನು ಬಾಹಿರವಾಗಿ ಅವರು ಮಗುವನ್ನು ದತ್ತು ಪಡೆದಿದ್ದರು. ಈ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು. ಇತ್ತೀಚೆಗೆ ಮಗುವಿನ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಕೆಲವು ತಿಂಗಳ ಹಿಂದೆ ಸೋನು ಶ್ರೀನಿವಾಸ್​ ಗೌಡ ಅವರು ಹೆಣ್ಣು…

Read More

ಚಿತ್ರದುರ್ಗ : ಚಿತ್ರದುರ್ಗ ಹಾಗೂ ಮಡಿಕೇರಿಯಲ್ಲಿ ನಡೆದಂತಹ ಎರಡು ಪ್ರತ್ಯೇಕ ಘಟನೆಗಳಲ್ಲಿ ಈಜಲು ತೆರಳಿದ್ದ ಇಬ್ಬರು ವ್ಯಕ್ತಿಗಳು ನೀರು ಪಾಲಾಗಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.ಹೌದು ಈಜಲು ತೆರಳಿದ್ದ ಯುವಕನೋರ್ವ ಚಳ್ಳಕೆರೆ ತಾಲೂಕಿನ ಗೊರ್ಲತ್ತು ಗ್ರಾಮದ ಬಳಿಯಿರುವ ಚೆಕ್‌ಡ್ಯಾಂನಲ್ಲಿ ನೀರುಪಾಲಾಗಿದ್ದರೆ, ಇತ್ತ ಕುಶಾಲನಗರ ತಾಲೂಕಿನ ಹೆರೂರು ಬಳಿ‌ ಇರುವ ಹಾರಂಗಿ ಹಿನ್ನೀರಿನಲ್ಲಿ ಈಜಲು ತೆರಳಿದ್ದಾಗ ಕಾಲಿಗೆ ಮೀನಿನ ಬಲೆ‌ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. https://kannadanewsnow.com/kannada/parents-should-note-do-you-have-these-apps-on-your-childs-phone-make-sure/ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೊರ್ಲತ್ತು ಗ್ರಾಮದ ಬಳಿಯಿರುವ ಚೆಕ್‌ಡ್ಯಾಂನಲ್ಲಿ ಈಜಲು ತೆರಳಿದ್ದ ಯುವಕನೋರ್ವ ನೀರುಪಾಲಾಗಿದ್ದಾನೆ. ಹುಲಿಕುಂಟೆ ಗ್ರಾಮದ ಪ್ರಹ್ಲಾದ್(28) ಮೃತವ್ಯಕ್ತಿ. ಇದೀಗ ಅಗ್ನಿಶಾಮಕ ದಳ, ಪೊಲೀಸ್‌ ಸಿಬ್ಬಂದಿ ಸೇರಿ ಮೃತದೇಹವನ್ನು ಹೊರತೆಗೆದಿದ್ದಾರೆ. ಈ ಕುರಿತು ಪರಶುರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/kodagu-car-catches-fire-due-to-technical-snag-youths-escape-unhurt/ ಮೀನಿನ ಬಲೆ ಸಿಲುಕಿ ವ್ಯಕ್ತಿ ಸಾವು ಇತ್ತ ಮಡಿಕೇರಿ ಜಿಲ್ಲೆಯ ಕುಶಾಲನಗರ ತಾಲೂಕಿನ ಹೆರೂರು ಬಳಿ‌ ಇರುವ ಹಾರಂಗಿ ಹಿನ್ನೀರಿನಲ್ಲಿ ಈಜಲು ತೆರಳಿದ್ದಾಗ ಕಾಲಿಗೆ ಮೀನಿನ ಬಲೆ‌…

Read More

ಕೊಡಗು : ತಾಂತ್ರಿಕ ದೋಷದಿಂದ ನಡು ರಸ್ತೆಯಲ್ಲಿ ಕಾರು ಒಂದು ಹೊತ್ತಿ ಉರಿದಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಾಳತ್ ಮನೆ ರಾಷ್ಟ್ರೀಯ ಹೆದ್ದಾರಿ ಬಳಿ ಕಾರೊಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಾಳತ್ ಮನೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಾಂತ್ರಿಕ ದೋಷದಿಂದ ನಡು ರಸ್ತೆಯಲ್ಲಿ ಕಾರು ಹೊತ್ತಿ ಉರಿದಿದೆ. ಈ ವೇಳೆ ರಸ್ತೆ ಬದಿ ಅರಣ್ಯಕ್ಕೂ ಈ ವೇಳೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದೆ. ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವಕರಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತಂತೆ ಮಡಿಕೇರಿ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ49 ವೈದ್ಯಕೀಯ ವಿದ್ಯಾರ್ಥಿನಿಯರ ಪೈಕಿ ಇಬ್ಬರಲ್ಲಿ ಕಾಲರಾ ರೋಗ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಹಾಸ್ಟೆಲ್ ವಾರ್ಡನ ಆಗಿರುವಂತ ಅಖಿಲಾಂಡೇಶ್ವರಿಯನ್ನು ಅಮಾನತುಗೊಳಿಸಲಾಗಿದೆ. ಹೌದು ಬಿ ಎಂ ಸಿ ಹಾಸ್ಟೆಲ್ ವಾರ್ಡನ್ ಅಖಿಲಾಂಡೇಶ್ವರಿ ಅಮಾನತುಗೊಳಿಸಿ ಬಿ ಎಂ ಸಿ ಡೀನ್ ರಮೇಶ್ ಕೃಷ್ಣ ಆದೇಶ ಹೊರಡಿಸಿದ್ದಾರೆ ಎಂದು ಹೇಳಲಾಗುತ್ತಿದೆ. ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಊಟ ನೀಡುವಂತೆ ಸೂಚನೆ ನೀಡಲಾಗಿದೆ. ಪ್ರತಿ ತಿಂಗಳು ಹಾಸ್ಟೆಲ್ ಆಡಳಿತ ಮಂಡಳಿ ಜೊತೆಗೆ ಸಭೆ ನಡೆಸಬೇಕು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ. ಅಲ್ಲದೆ ಬಿಎಂಸಿ ಹಾಸ್ಟೆಲ್ ಅಡುಗೆ ಸಿಬ್ಬಂದಿಗಳನ್ನು ಬದಲಿಸಬೇಕು. ಹಾಸ್ಟೆಲ್ ರೂಮ್ ಕಿಚನ್ ಶೌಚಾಲಯವನ್ನು ಸ್ವಚ್ಛಗೊಳಿಸಬೇಕು. ಪ್ರತಿ ದಿನ ಶಿಫ್ಟ್ ನಲ್ಲಿ ಸ್ವಚ್ಛಗೊಳಿಸುವಂತೆ ಡೀನ್ ರಮೇಶ್ ಕೃಷ್ಣ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.ಇನ್ನು ವಿಕ್ಟೋರಿಯಾ ಆಸ್ಪತ್ರೆಗೆ ಇಂದು ಮಹಿಳಾ ಆಯೋಗದ ಅಧ್ಯಕ್ಷೇ ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ,…

Read More

ಬಾಗಲಕೋಟೆ : ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ಪತ್ನಿ ವೀಣಾ ಕಾಶಪ್ಪನವರಿಗೆ ಕಾಂಗ್ರೆಸ್ ಮಣೆ ಹಾಕಿಲ್ಲ.ಹೀಗಾಗಿ ಅಲ್ಲಿ ಸಚಿವ ಶಿವಾನಂದ್ ಪಾಟೀಲ್ ಅವರ ಮಗಳಾದ ಸಂಯುಕ್ತ ಪಾಟೀಲ್ ಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಸಹಜವಾಗಿ ಅಸಮಾಧಾನಗೊಂಡಿರುವ ವೀಣಾ ಕಾಶಪ್ಪನವರ್ ಇದೀಗ ಬಾಗಲಕೋಟೆಯಲ್ಲಿ ಬೆಂಬಲಿಗರ ಜೊತೆ ಸಭೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/weather-alert-imd-predicts-heatwave-and-hailstorm-in-several-states-list-released/ ಬಾಗಲಕೋಟೆ ನಿವಾಸದಲ್ಲಿ ವೀಣಾ ಕಾಶಪ್ಪ ಬೆಂಬಲಿಗರ ಜೊತೆ ಇದೀಗ ಸಭೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಪತಿ ವಿಜಯಾನಂದ ಕಾಶಪ್ಪನವರ ಹೊರಗಿಟ್ಟು ವೀಣಾ ಅವರು ಬೆಂಬಲಿಗರ ಜೊತೆ ಸಭೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಗೆ ವಿಜಯಾನಂದ ಕಾಶಪ್ಪನವರ ಬೆಂಬಲ ಸೂಚಿಸಿದ್ದರಿಂದ ಪತಿಯ ಈ ನಿರ್ಧಾರಕ್ಕೆ ವೀಣಾ ಕಾಶಪ್ಪನವರು ವಿರೋಧ ವ್ಯಕ್ತಪಡಿಸಿ ಅಸಮಾಧಾನವನ್ನು ಹೊರಹಾಕಿದ್ದಾರೆ. https://kannadanewsnow.com/kannada/former-minister-suresh-gowda-summoned-in-corruption-case-against-minister-cheluvarayaswamy/ ಬೆಂಬಲಿಗರ ಅಭಿಪ್ರಾಯವನ್ನು ಸಂಗ್ರಹಿಸಲು ಇದೀಗ ವೀಣಾ ಕಾಶಪ್ಪನವರ್ ಸಭೆ ನಡೆಸುತ್ತಿದ್ದಾರೆ. ಬೆಂಬಲಿಗರ ಅಭಿಪ್ರಾಯ ಸಂಗ್ರಹಿಸಿ ವೀಣಾ ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ. ಎಂದು ತಿಳಿದುಬಂದಿದೆ ಸಭೆಯಲ್ಲಿ ಕಿತ್ತೂರು…

Read More

ಬೆಂಗಳೂರು : ಮಾಜಿ ಶಾಸಕ ಸುರೇಶ್ ಗೌಡ ಕೃಷಿ ಇಲಾಖೆ ಸಚಿವರಾಗಿರುವಂತಹ ಚೆಲುವರಾಯಸ್ವಾಮಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದರು.ಈ ಹಿನ್ನೆಲೆಯಲ್ಲಿ ಚೆಲುವರಾಯಸ್ವಾಮಿ ಅವರು ಸುರೇಶಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದರು. ಇದೀಗ ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯ ಮೇ 21ರಂದು ಹಾಜರಾಗುವಂತೆ ಸುರೇಶ ಗೌಡಗೆ ಸಮನ್ಸ್ ಜಾರಿ ಮಾಡಿದೆ. ಸಚಿವ ಚೆಲುವರಾಯಸ್ವಾಮಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಹಿನ್ನೆಲೆ ಮಾಜಿ ಶಾಸಕ ಸುರೇಶ ಗೌಡ ವಿರುದ್ಧ ಸಚಿವ ಚೆಲುವರಾಯಸ್ವಾಮಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಹೀಗಾಗಿ ಮೇ 21ರಂದು ಖುದ್ದು ಹಾಜರಾಗುವಂತೆ ಮಾಜಿ ಶಾಸಕ ಸುರೇಶ್ ಗೌಡಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿಂದ ಸಮನ್ಸ್ ಜಾರಿ ಮಾಡಲಾಗಿದೆ.

Read More