Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ರಾಯಚೂರು : ರಾಯಚೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕೆಕೆಆರ್‌ಟಿಸಿ ಬಸ್ ಡಿಕ್ಕಿಯಾಗಿ ಆಟೋದಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕರಿಗುಡ್ಡ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಮೃತರನ್ನ ಮಲ್ಲಪ್ಪ (60) ಸ್ಥಳದಲ್ಲಿ ಸಾವನಪ್ಪಿದ್ದರೆ, ಇನ್ನು ರಿಮ್ಸ್ ನಲ್ಲಿ ದಾಖಲಾಗಿದ್ದ ಮೋನಮ್ಮ (35) ಎನ್ನುವವರು ಚಿಕಿತ್ಸೆ ಫಲಕರಿಯಾಗದೆ ಸಾವನಪ್ಪಿದ್ದಾರೆ. ಓವರ್ ಟೇಕ್ ಮಾಡಲು ಹೋಗಿ ಎದುರಿಗೆ ಬರುತ್ತಿದ್ದ ಆಟೋಗೆ ಬಸ್ ಡಿಕ್ಕಿ ಹೊಡೆದಿದೆ. ಆ ರಭಸಕ್ಕೆ ಆಟೋ ಪಲ್ಟಿಯಾಗಿ ಬಿದ್ದಿದೆ. ಆಟೋದಲ್ಲಿದ್ದ 12 ಜನರಿಗೆ ಗಂಭೀರ ಗಾಯಗಳಾಗಿದ್ದು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋಗೆ ಡಿಕ್ಕಿ ಹೊಡೆಸಿ ಬಸ್ ಚಾಲಕ ಮುಂದೆ ತೆರಳುತ್ತಿದ್ದ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿಗರಿಗೆ ಕೇಂದ್ರ ಸರ್ಕಾರ ಹೊಸ ಸುದ್ದಿ ನೀಡಿದೆ. ಬೆಂಗಳೂರನ್ನು ಇತರೆ ಮೆಟ್ರೋ ನಗರಗಳ ಪಟ್ಟಿಗೆ ಸೇರಿಸಲಾಗಿದ್ದು, ಇನ್ಮುಂದೆ ಶೇ. 50 ರಷ್ಟು ‘HRA’ ಸಿಗಲಿದೆ ಎಂದು ನವದೆಹಲಿಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದರು. ಬೆಂಗಳೂರನ್ನು ಇತರೆ ಮೆಟ್ರೋ ನಗರಗಳ ಪಟ್ಟಿಗೆ ಸೇರಿಸಲಾಗಿದೆ. ಇದರಿಂದ ಬೇರೆ ಮಹಾನಗರಗಳ ರೀತಿಯಂತೆ ಶೇಕಡ 50ರಷ್ಟು ಎಚ್ ಆರ್ ಎ ಬಗ್ಗೆ ಬೆಂಗಳೂರಿಗೂ ನೀಡಬೇಕೆಂಬ ಬೇಡಿಕೆ ಈಡೇರಿದೆ ಬೆಂಗಳೂರಿನ ಲಕ್ಷಾಂತರ ವೇತನದಾರರಿಗೆ ಇದು ಸಹಾಯ ಆಗಲಿದೆ. ಬೆಂಗಳೂರಿನಲ್ಲಿ ಎಚ್ ಆರ್ ಎ ಮತ್ತೆ ಶೇಕಡ 40 ರಷ್ಟು ಇತ್ತು ಇನ್ನು ಮುಂದೆ ಶೇ.50 ರಷ್ಟು ಸಿಗಲಿದೆ. ಬೆಂಗಳೂರಿನಲ್ಲಿ ಎಚ್ ಆರ್ ಎ ಬಗ್ಗೆ ಎರಡು ವರ್ಷಗಳ ಹಿಂದೆ ನಾನು ಪ್ರಸ್ತಾಪ ಮಾಡಿದ್ದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದರು.

Read More

ಬೆಂಗಳೂರು : ಇಂದು ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್ ತೆರಳಿದ್ದು, ಈ ವಿಚಾರವಾಗಿ ನನಗೆ ಯಾವುದೇ ಕರೆ ಬಂದಿಲ್ಲ ಅಕಸ್ಮಾತ್ ಬಂದ್ರೆ ನಾನು ದೆಹಲಿಗೆ ಹೋಗ್ತೇನೆ ಎಂದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾನು ಸಿದ್ದರಾಮಯ್ಯ ಕದ್ದು ಮುಚ್ಚಿ ಮಾತನಾಡಿಲ್ಲ, ಹೈಕಮಾಂಡ್ ಮುಂದೆ ಮಾತಾಡಿದ್ದೇವೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿ, ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ಹೈಕಮಾಂಡ್ ಏನು ಹೇಳುತ್ತದೆ ಅದರಂತೆ ನಡೆದುಕೊಳ್ಳುತ್ತೇನೆ. ಅವರು ಏನು ಹೇಳುತ್ತಾರೋ ಅವರನ್ನೇ ಕೇಳಿ ಎಂದರು. ದೆಹಲಿಗೆ ಹೋಗುತ್ತೀರಾ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿ, ಕರೆಯದಿದ್ರೆ ನಾನು ಯಾಕೆ ಹೋಗಲಿ. ಬಜೆಟ್ ಸಭೆ ಇದ್ದಾವೆ. ಹೈಕಮಾಂಡ್ ಕರೆದರೆ ಹೋಗುತ್ತೇನೆ. ಬಜೆಟ್ ಪೂರ್ವ ಸಿದ್ಧತೆಗೆ ಡಿ.ಕೆ. ಶಿವಕುಮಾರ್ ಗೈರು, ಅನುಮತಿ ಪಡೆದಿದ್ದಾರಾ ಎಂಬ ಪ್ರಶ್ನೆಗೆ, ಹೌದು ಲೆಟರ್ ಬರೆದಿದ್ದಾರೆ. ಅಸ್ಸೋಂ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿಗೆ ಹೋಗುತ್ತೇನೆ ಅಂತ ಬರೆದಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಸಭೆ ನಡೆಯುತ್ತದೆ ಎಂದರು.

Read More

ಬೆಂಗಳೂರು : ರೌಡಿ ಬಿಕ್ಲು ಶಿವು ಹತ್ಯೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಶಾಸಕ ಬೈರತಿ ಬಸವರಾಜುಗೆ ಹೈಕೋರ್ಟ್‌ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದ ಐದನೇ ಆರೋಪಿಯಾಗಿರುವ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರಿಗೆ ಹೈಕೋರ್ಟ್‌ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ನಿರಕಾರಣೆ ಮಾಡಿದೆ. ನ್ಯಾಯಾಧೀಶರಾದ ಸುನೀಲ್‌ ದತ್ತು ಅವರಿದ್ದ ನ್ಯಾಯಪೀಠವು ಈ ಆದೇಶವನ್ನು ಹೊರಡಿಸಿದೆ. ಇದರೊಂದಿಗೆ ಮತ್ತೆ . ಬಿಕ್ಲು ಶಿವು ಕೊಲೆಯಲ್ಲಿ ಅವರಿಗೆ ಬಂಧನದ ಭೀತಿ ಎದರು ಆಗಿದೆ. ಪ್ರಕರಣ ಹಿನ್ನೆಲೆ ಬೆಂಗಳೂರಿನ ಹಲಸೂರು ಕೆರೆ ಸಮೀಪದ ಮನೆಯೊಂದರ ಎದುರು 2025ರ ಜುಲೈನಲ್ಲಿ ರೌಡಿಶೀಟರ್‌ ಬಿಕ್ಲು ಶಿವ ಅಲಿಯಾಸ್‌ ಶಿವಪ್ರಕಾಶ್‌ ಕೊಲೆ ಆರೋಪದ ಮೇರೆಗೆ ಜಗದೀಶ್‌, ಕಿರಣ್‌, ವಿಮಲ್‌, ಅನಿಲ್‌ ಮತ್ತು ಬೈರತಿ ಬಸವರಾಜ್‌ ವಿರುದ್ಧ ಭಾರತೀನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. . ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊ

Read More

ಮಣಿಪುರ : ಇತ್ತೀಚಿಗೆ ತಾನೇ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಕೊನೆಗೊಂಡು ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು ಇದೀಗ ಮಣಿಪುರ ರಾಜ್ಯದಲ್ಲಿ ಮತ್ತೆ ಹಿಂಸಾಚಾರ ಮುಂದುವರೆದಿದೆ. ಮಣಿಪುರದ ಉಕ್ರುನ್ ಜಿಲ್ಲೆಯಲ್ಲಿ ಸಶಸ್ತ್ರ ಗುಂಪು ಮನೆಗಳಿಗೆ ಬೆಂಕಿ ಹಚ್ಚಿ ಹಿಂಸಾಚಾರ ನಡೆಸಿದ್ದಾರೆ. ಮನೆಗಳಿಗೆ ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ ಐದು ದಿನಗಳ ಕಾಲ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಿ ಮಣಿಪುರ ಸರಕಾರ ಆದೇಶ ಹೊರಡಿಸಿದೆ.

Read More

ಬೆಂಗಳೂರು : ರೌಡಿ ಬಿಕ್ಲು ಶಿವು ಹತ್ಯೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಶಾಸಕ ಬೈರತಿ ಬಸವರಾಜುಗೆ ಹೈಕೋರ್ಟ್‌ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದ ಐದನೇ ಆರೋಪಿಯಾಗಿರುವ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರಿಗೆ ಹೈಕೋರ್ಟ್‌ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ನಿರಕಾರಣೆ ಮಾಡಿದೆ. ನ್ಯಾಯಾಧೀಶರಾದ ಸುನೀಲ್‌ ದತ್ತು ಅವರಿದ್ದ ನ್ಯಾಯಪೀಠವು ಈ ಆದೇಶವನ್ನು ಹೊರಡಿಸಿದೆ. ಇದರೊಂದಿಗೆ ಮತ್ತೆ . ಬಿಕ್ಲು ಶಿವು ಕೊಲೆಯಲ್ಲಿ ಅವರಿಗೆ ಬಂಧನದ ಭೀತಿ ಎದರು ಆಗಿದೆ. ಪ್ರಕರಣ ಹಿನ್ನೆಲೆ ಬೆಂಗಳೂರಿನ ಹಲಸೂರು ಕೆರೆ ಸಮೀಪದ ಮನೆಯೊಂದರ ಎದುರು 2025ರ ಜುಲೈನಲ್ಲಿ ರೌಡಿಶೀಟರ್‌ ಬಿಕ್ಲು ಶಿವ ಅಲಿಯಾಸ್‌ ಶಿವಪ್ರಕಾಶ್‌ ಕೊಲೆ ಆರೋಪದ ಮೇರೆಗೆ ಜಗದೀಶ್‌, ಕಿರಣ್‌, ವಿಮಲ್‌, ಅನಿಲ್‌ ಮತ್ತು ಬೈರತಿ ಬಸವರಾಜ್‌ ವಿರುದ್ಧ ಭಾರತೀನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. . ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎಂದು…

Read More

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ಮೇಲೆ ಚಿರತೆ ಒಂದು ದಾಳಿ ಮಾಡಿದೆ ಎಂದು ತಿಳಿದುಬಂದಿದೆ. ಬಾಲಕನ ಮೇಲೆ ಚಿರತೆ ದಾಳಿ ಮಾಡಿರುವ ಆರೋಪ ಕೇಳಿ ಬಂದಿದೆ. ಚನ್ನಪಟ್ಟಣ ತಾಲೂಕಿನ ಬುವವಳ್ಳಿಯ ಶ್ರೇಯಸ್ ಎಂಬ ಬಾಲಕನ ಮೇಲೆ ಚಿರತೆ ದಾಳಿ ಮಾಡಿದೆ. ಪೊನ್ನಾಚಿ ಕ್ರಾಸ್ ಬಳಿ ಏಕಾಏಕಿ ಬಾಲಕ ಶ್ರೇಯಸ್ ಮೇಲೆ ಚಿರತೆ ದಾಳಿ ಮಾಡಿದೆ. ಬಾಲಕ ಶ್ರೇಯಸ್ ಕಿವಿಗೆ ತರಚಿತ ಗಾಯದ ಗುರುತು ಪತ್ತೆಯಾಗಿದೆ ಡ್ರೋನ್ ಬಳಸಿ ಅರಣ್ಯ ಸಿಬ್ಬಂದಿಗಳು ಸುತ್ತಮುತ್ತಲು ಪರಿಶೀಲನೆ ನಡೆಸಿದ್ದಾರೆ. ಆದರೆ ಯಾವುದೇ ಚರಿತೆ ಪತ್ತೆ ಆಗಿಲ್ಲ ಎಂದು ಡಿಸಿಎಫ್ ಭಾಸ್ಕರ್ ತಿಳಿಸಿದ್ದಾರೆ.

Read More

ಮಧ್ಯಾಪ್ರದೇಶ : ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಕಳಶಯಾತ್ರೆಯಲ್ಲಿ ಭೀಕರ ಕಾಲ್ತುಳಿತ ನಡೆದಿದೆ ಈ ಒಂದು ಘಟನೆಯಲ್ಲಿ ಓರ್ವ ಭಕ್ತ ಸಾವನ್ನಪ್ಪಿದು ಹಲವರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಗ್ವಾಲಿಯರ್‌ನ ದಾಬ್ರಾದಲ್ಲಿ ಮಂಗಳವಾರ ನಡೆದ ನವಗ್ರಹ ಪೀಠ ಕಲಾಶ್ ಯಾತ್ರೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿದ್ದಾರೆ. ಇನ್ನು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಜಿ ಗೃಹ ಸಚಿವ ನರೋತ್ತಮ್ ಮಿಶ್ರಾ ಆಯೋಜಿಸಿದ್ದ ಈ ಕಾರ್ಯಕ್ರಮವು ಭಾರಿ ಜನಸಮೂಹವನ್ನು ಸೇರಿದ್ದು ಘಟನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಗೊಂದಲ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದು, ಇದೀಗ ಹೊಸ ಮಾಹಿತಿಯೊಂದು ಹೊರಬಿದ್ದಿದೆ. ಡಿಕೆಶಿ ಅವರು ತೆರಳಬೇಕಿದ್ದ ಬೆಳಗಿನ ಎರಡು ವಿಮಾನಗಳ ಟಿಕೆಟ್ ಅನ್ನು ರದ್ದುಗೊಳಿಸಿದ್ದಾರಂತೆ. ಇದೀಗ 3ನೇ ಬಾರಿ ಟಿಕೆಟ್ ಬುಕ್ ಮಾಡಿ ದೆಹಲಿಗೆ ತೆರಳಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಿಂದ ಬೆಳಗ್ಗೆಯಿಂದ ಎರಡು ವಿಮಾನಗಳ ಟಿಕೆಟ್ ಕ್ಯಾನ್ಸಲ್ ಮಾಡಲಾಗಿದ್ದು, ನಿಗದಿಯಂತೆ ಡಿಸಿಎಂ ಡಿಕೆಶಿ ಬೆಳಗ್ಗೆಯೇ ಪ್ರಯಾಣ ಬೆಳಸಬೇಕಿತ್ತು. ಆದರೆ ಈಗ ಮಧ್ಯಾಹ್ನ 12.30ರ ವಿಮಾನದಲ್ಲಿ ತೆರಳಲು ಟಿಕೆಟ್ ಬುಕ್ಕಿಂಗ್‌ ಮಾಡಲಾಗಿದೆ. ಎರಡು ಬಾರಿ ಟಿಕೆಟ್ ಯಾಕೆ ರದ್ದುಗೊಳಿಸಿದರು ಎಂಬ ಕಾರಣ ಇನ್ನೂ ನಿಗೂಢವಾಗಿದೆ. ಬಳಿಕ 12:30 ವಿಮಾನದಲ್ಲಿ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ರಾಜ್ಯದಲ್ಲಿ ಅಧಿಕಾರದ ಹಸ್ತಾಂತರದ ಗೊಂದಲಕ್ಕೂ ಮಾತನಾಡಿರುವ ಡಿಕೆಶಿ, ನಾಯಕತ್ವದ ಗೊಂದಲದ ಬಗ್ಗೆ ಪರ, ವಿರೋಧ ಹೇಳಿಕೆಯಿಂದ ಪಕ್ಷಕ್ಕೆ ಹಾನಿಯಾಗಲಿದೆ. ಎಲ್ಲರೂ ಮೌನ ವಹಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ…

Read More

ವಿಜಯಪುರ : ವಿಜಯಪುರದಲ್ಲಿ ಮತ್ತೆ ಭೂಕಂಪ ಆಗಿರುವ ಅನುಭವ ಆಗಿದ್ದು ಬೆಳಗ್ಗೆ 11: 43 ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ದುರಾದ ಶಬ್ದದೊಂದಿಗೆ ಭೂಮಿ ನಡುಗಿದ ಅನುಭವ ಆಗಿದೆ ವಿಜಯಪುರ ಹಾಗೂ ಸುತ್ತಮುತ್ತಲೂ ಕೂಡ ಭೂಮಿಕಂಪಿಸಿದ ಅನುಭವ ಆಗಿದ್ದು, ಆದರ್ಶ ನಗರ ಭೂತನಾಳ ಪಾನಿ ನಗರ ಮತ್ತು ಇತರೆ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದ್ದು ಜನರು ಬೆಚ್ಚಿಬಿದ್ದಿದ್ದಾರೆ.

Read More