Author: kannadanewsnow05

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಮತ್ತಷ್ಟು ಹೆಚ್ಚಾಗಿದ್ದು ಕಳೆದ ವಾರವಷ್ಟೆ ದೆಹಲಿಗೆ ಕಾಂಗ್ರೆಸ್ಸಿನ 9 ಶಾಸಕರ ತಂಡ ಭೇಟಿ ನೀಡಿತ್ತು. ಇದೀಗ ಇಂದು ದೆಹಲಿಗೆ ತೆರಳಿದ ಕಾಂಗ್ರೆಸ್ನ 6 ಶಾಸಕರ ಮತ್ತೊಂದು ತಂಡ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಶಾಸಕರಾದ ಕದಲೂರು ಉದಯ್ ನೇತೃತ್ವದಲ್ಲಿ ಆರು ಜನ ಶಾಸಕರು ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ನಾಯಕರ ಭೇಟಿಗೆ ಈ ಒಂದು ಶಾಸಕರ ತಂಡ ಪಟ್ಟು ಹಿಡಿದಿದ್ದು, ಕಳೆದ ವಾರ ಅಷ್ಟೇ ಕಾಂಗ್ರೆಸ್ಸಿನ 9 ಶಾಸಕರು ದೆಹಲಿಗೆ ತೆರಳಿದ್ದರು ಮತ್ತೆ 6 ಶಾಸಕರ ತಂಡ ದೆಹಲಿಗೆ ತೆರಳಿದೆ. ಹಾಗಾಗಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

Read More

ಗದಗ : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಕುರ್ಚಿ ಕಿತ್ತಾಟ ಜೋರಾಗಿದ್ದು ಎಷ್ಟು ದಿನ ತನ್ನಗಿದ್ದ ನಾಯಕತ್ವ ಬದಲಾವಣೆ ಇದೀಗ ಹೈಕಮಾಂಡ್ವರೆಗೂ ತಲುಪಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಅವರನ್ನು ಭೇಟಿಯಾಗಿ ಈ ವಿಚಾರವಾಗಿ ಚರ್ಚೆ ಮಾಡಿದ್ದು, ಇನ್ನೊಂದು ಕಡೆ ಡಿಕೆ ಶಿವಕುಮಾರ್ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಕಸರತ್ತು ನಡೆಸಿದ್ದಾರೆ. ಇದರ ಮಧ್ಯ ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಜೋಗತಿ ಒಬ್ಬರು ಭವಿಷ್ಯ ನುಡಿದಿದ್ದಾರೆ. ಹುಲಿಗೆಮ್ಮ ದೇವಿಯ ಜೋಗತಿ ಬೈಲಮ್ಮ ಬಾಳಮ್ಮಣ್ಣವರು ಭವಿಷ್ಯ ನುಡಿದಿದ್ದು, ಗದಗದ ರಾಜೋಟೇಶ್ವರ ನಿಗರದ ನಿವಾಸಿ ಜೋಗತಿ ಭೈಲಮ ಅವರು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಮತ್ತೊಂದು ಕಡೆ ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಬಾಗಲಕೋಟೆ, ಹಾವೇರಿ ಹಾಗೂ ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರ ಮೈಸೂರು ಜಿಲ್ಲೆಯಲ್ಲಿ ಬೆಂಬಲಿಗರು ದೇವರಿಗೆ ಪೂಜೆ ಸಲ್ಲಿಸಿ ಈಡುಗಾಯಿ ಒಡೆದು ಹರಕೆ ಸಲ್ಲಿಸಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಅಯ್ಯಪ್ಪ ಸ್ವಾಮಿ…

Read More

ಗುಜರಾತ್ : ಗುಜರಾತಿನ ಸೌರಾಷ್ಟ್ರದ ಹಲವಡೆ ಲಘು ಭೂಕಂಪ ಸಂಭವಿಸಿದೆ. ಇಂದು ಮುಂಜಾನೆ ಗುಜರಾತ್‌ನ ಸೌರಾಷ್ಟ್ರ ಪ್ರದೇಶದಲ್ಲಿ ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಭೂಕಂಪ ಸಂಭವಿಸಿದೆ. ಗಾಂಧಿನಗರದಲ್ಲಿರುವ ಭೂಕಂಪನ ಸಂಶೋಧನಾ ಸಂಸ್ಥೆ (ಐಎಸ್‌ಆರ್) ಪ್ರಕಾರ, ಭಾರತೀಯ ಕಾಲಮಾನ ಬೆಳಗಿನ ಜಾವ 3.06 ರ ಸುಮಾರಿಗೆ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ. ಭೂಕಂಪದ ಕೇಂದ್ರಬಿಂದು ಸೌರಾಷ್ಟ್ರದ ತಲಾಲಾದಿಂದ 15 ಕಿ.ಮೀ ಈಶಾನ್ಯ (NNE) ದಲ್ಲಿ, 21.188°N ಅಕ್ಷಾಂಶ ಮತ್ತು 70.546°E ರೇಖಾಂಶದಲ್ಲಿತ್ತು. ಇಲ್ಲಿಯವರೆಗೆ ಯಾವುದೇ ಹಾನಿ ಅಥವಾ ಸಾವುನೋವುಗಳ ವರದಿಯಾಗಿಲ್ಲ.

Read More

ಬೆಂಗಳೂರು : ಬೆಂಗಳೂರಲ್ಲಿ ಕರ್ನಾಟಕದ ಇತಿಹಾಸದಲ್ಲೇ ಬಹುದೊಡ್ಡ ದರೋಡೆ ಪ್ರಕರಣ ನಡೆದಿದ್ದು 7 ಕೋಟಿ ಹಣವನ್ನು ದೋಚಿ ಪರಾರಿಯಾಗಿದ್ದಆರೋಪಿಗಳನ್ನು  ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಇದುವರೆಗೂ 6 ಕೋಟಿ ಎಪ್ಪತ್ತು ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಇನ್ನುಳಿದ ಹಣ ಹಾಗೂ ಆರೋಪಿಗಳಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಇದೀಗ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂಎಸ್ ವಾಹನದಲ್ಲಿದ್ದ ಡಿವಿಆರ್ ಇನ್ನೂವರೆಗೂ ಪತ್ತೆಯಾಗಿಲ್ಲ. ಅರಣ್ಯ ಪ್ರದೇಶದಲ್ಲಿ ದರೋಡೆಗೆ ಡಿವಿಆರ್ ಅನ್ನು ಎಸೆದಿದ್ದು ಸಿಎಂಎಸ್ ವಾಹನದಲ್ಲಿದ್ದ ಡಿವಿಆರ್ ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ದರೋಡೆಯ ವೇಳೆ ಡಿವಿಆರ್ ಸಮೇತ ಹೊತ್ತೊಯ್ದಿದ್ದರು. ಆರೋಪಿಗಳ ಗುರುತು ಸಿಗುತ್ತೆ ಅಂತ ಡಿವಿಆರ್ ಕೂಡ ಕಳ್ಳತನ ಮಾಡಿದ್ದಾರೆ. ಚಿತ್ತೂರು ಮಾರ್ಗದ ಅರಣ್ಯದಲ್ಲಿ ದರೋಡೆ ಗ್ಯಾಂಗ್ ಡಿವಿಆರ್ ಅನ್ನು ಎಸೆದಿದೆ. ಪ್ರಮುಖ ಸಾಕ್ಷಿ ಆಗಿರುವುದರಿಂದ ಡಿ ವಿ ಆರ್ ಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಜೊತೆಗೆ 7 ಆರೋಪಿಗಳ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಬೆಂಬಲಿಗರು ರಾಜ್ಯಾದ್ಯಂತ ಪೂಜೆ ನಡೆಸುತ್ತಿದ್ದಾರೆ. ಬಾಗಲಕೋಟೆ ಹಾವೇರಿ, ಬೆಳಗಾವಿಯಲ್ಲಿ ಬೆಂಬಲಿಗರು ಪೂಜೆ ಸಲ್ಲಿಸಿದ್ದು 1001, 101 ಈಡುಗಾಯಿ ಮಾಡಿದು ಕಾರ್ಯಕರ್ತರು ಪೂಜೆ ಸಲ್ಲಿಸಿದ್ದಾರೆ. ಅಧಿಕಾರ ಹಂಚಿಕೆ ವಿಚಾರ ಮುನ್ನೆಲೆಗೆ ಬಂದ ಬೆನ್ನಲ್ಲೇ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಪೂಜೆ ಸಲ್ಲಿಸಿದ್ದಾರೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪೂಜೆ ಸಲ್ಲಿಕೆ ಮಾಡಲಾಗಿದ್ದು, ಡಿಕೆ ಶಿವಕುಮಾರ್ ಆದಷ್ಟು ಬೇಗ ಸಿಎಂ ಆಗಲೆಂದು ಪೂಜೆ ಸಲ್ಲಿಸಿದರು. ಸಿದ್ದರಾಮಯ್ಯ ತವರಲ್ಲೂ ಕೂಡ ಡಿಕೆ ಶಿವಕುಮಾರ್ ಪರವಾಗಿ ಪೂಜೆ ಸಲ್ಲಿಸಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಂದ ಪೂಜೆ ಸಲ್ಲಿಸಲಾಗಿದ್ದು, ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಮಾಲಾಧಾರಿಗಳು ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದ್ದಾರೆ.

Read More

ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ಇಷ್ಟು ದಿನ ಒಳಗೊಳಗೆ ಕುದಿಯುತ್ತಿದ್ದ ಅಧಿಕಾರ ಹಂಚಿಕೆಯ ಜ್ವಾಲಾಮುಖಿ ಸ್ಫೋಟಗೊಂಡಿದೆ. ಕಾಂಗ್ರೆಸ್‌ನ ದಿಗ್ಗಜ ನಾಯಕರಾದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ಕುರ್ಚಿ ಕಾಳಗಕ್ಕೆ ಖುದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಹೈರಾಣಾಗಿದ್ದಾರೆ. ಸದ್ಯ ಕುರ್ಚಿ ಕಿತ್ತಾಟದ ಚೆಂಡು ರಾಹುಲ್ ಗಾಂಧಿ ಅಂಗಳಕ್ಕೆ ತಲಪುತ್ತಿದೆ. ಹೌದು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್‌ ಮತ್ತು ಎರಡೂ ಬಣಗಳ ನಾಯಕರು ದೆಹಲಿಗೆ ಪರೇಡ್‌ ನಡೆಸುತ್ತಿದ್ದಂತೆಯೇ ಖರ್ಗೆ ಎಚ್ಚೆತ್ತುಕೊಂಡಿದ್ದರು. ಸಮಸ್ಯೆ ಇತ್ಯರ್ಥಕ್ಕೆ ಬೆಂಗಳೂರಿಗೆ ಬಂದರು. ಆದರೆ, ಈ ಸಮಸ್ಯೆ ಎಐಸಿಸಿ ಅಧ್ಯಕ್ಷರ ವ್ಯಾಪ್ತಿಯನ್ನೂ ಮೀರಿದ ಬಿಕ್ಕಟ್ಟಿನಂತಾಗಿದೆ. ಇದೇ ಕಾರಣಕ್ಕೆ, ‘ನನ್ನ ಬಳಿ ಏನೂ ಇಲ್ಲ’ ಎಂದು ಖರ್ಗೆ ಹೈಕಮಾಂಡ್‌ ನಾಯಕರತ್ತ ಬೊಟ್ಟು ಮಾಡಿ ತೋರಿಸಿದ್ದಾರೆ. ಪಕ್ಷದಲ್ಲಿ ಹೀಗೆ ಗೊಂದಲಗಳಾದರೆ ಆಡಳಿತದ ಮೇಲೆ ಪರಿಣಾಮ ಬೀರುತ್ತದೆ. ಸದ್ಯ ಪಕ್ಷದಲ್ಲಿ ನಡೆಯುತ್ತಿರುವ ಗೊಂದಲವನ್ನ ಬಗಹರಿಸಿ. ಡಿಕೆ ಆಪ್ತರಿಂದ ಸಹಿ ಸಂಗ್ರಹ ಮಾಡ್ತಿದ್ದಾರೆ. ಇದೆಲ್ಲಾ ಪಕ್ಷಕ್ಕೆ ಒಳ್ಳೆಯದಲ್ಲ. ನೀವೇ…

Read More

ಚಾಮರಾಜನಗರ : ಕೇರಳದಲ್ಲಿ ಅಮೀಬಾ ವೈರಸ್ ಹಿನ್ನೆಲೆ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು ಕೆರಳಿಕೆ ತಳ್ಳುವ ಅಯ್ಯಪ್ಪ ಮಾಲಾಧಾರಿಗಳಿಗೆ ಮಾರ್ಗಸೂಚಿ ಹಾಗೂ ಕೇರಳದ ಗಡಿ ಮೂಲೆಹೊಳೆ ಚೆಕ್ಪೋಸ್ಟ್ ನಲ್ಲಿ ಜಾಗೃತಿ ಕಾರ್ಯ ನಡೆಸಲಾಗುತ್ತಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಯಲ್ಲಿ ಗುಂಡ್ಲುಪೇಟೆ ತಾಲೂಕು ಜಾಗೃತಿ ಕಾರ್ಯ ನಡೆಸುತ್ತಿದ್ದಾರೆ. ಭಿತ್ತಿಪತ್ರ ಹಿಡಿದು ಅಲೀಂ ಪಾಷಾ ಜಾಗೃತಿ ಮೂಡಿಸುತ್ತಿದ್ದಾರೆ. ಶಬರಿಮಲೆಗೆ ತೆರಳುವ ಪ್ರತಿಯೊಂದು ವಾಹನದ ಮೇಲೆ ಹದ್ದಿನ ಕಣ್ಣು ಇಡಲಾಗಿದೆ ಕೇರಳದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಯನ್ನು ತಿಳಿಸುತ್ತಿದ್ದಾರೆ. ಜ್ವರ, ತಲೆನೋವು ಇದ್ದವರು ನಿರ್ಲಕ್ಷಿಸಬೇಡಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

Read More

ನವದೆಹಲಿ : ಸುಪ್ರೀಂ ಕೋರ್ಟ್ ನೂತನ ಸಿಜೆಐ ಆಗಿ ನ್ಯಾಯಮೂರ್ತಿ ಸೂರ್ಯಕಾಂತ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸುಪ್ರೀಂಕೋರ್ಟ್ ನ 53ನೇ ಸೂರ್ಯಕಾಂತ್ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿನ್ನೆ ಸಿಜೆ ಬಿ ಆರ್ ಗವಾಯಿ ಅವರು ನಿವೃತ್ತಿಯಾಗಿದ್ದಾರೆ. 2027 ಫೆಬ್ರವರಿ 9 ರವರೆಗೆ ಸೂರ್ಯಕಾಂತ್ ಸಿಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಇಂದು ಭಾರತದ 53 ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಪ್ರಮಾಣ ವಚನ ಸ್ವೀಕರಿಸಲಿದ್ದು, ದೇಶದ ಅತ್ಯುನ್ನತ ನ್ಯಾಯಾಂಗ ಕಚೇರಿಯಲ್ಲಿ ಅವರ 14 ತಿಂಗಳ ಅಧಿಕಾರಾವಧಿಯ ಆರಂಭವನ್ನು ಗುರುತಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹಾಲಿ ಸಿಜೆಐ ಭೂಷಣ್ ಆರ್ ಗವಾಯಿ ಅವರ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಕಾಂತ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಸಿಜೆಐ ಗವಾಯಿ ಅವರ ಶಿಫಾರಸಿನ ಮೇರೆಗೆ, ರಾಷ್ಟ್ರಪತಿಗಳು “ಸಂವಿಧಾನದ 124 ನೇ ವಿಧಿಯ ಷರತ್ತು (2) ರ ಮೂಲಕ ನೀಡಲಾದ ಅಧಿಕಾರವನ್ನು ಚಲಾಯಿಸಿ” ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದ್ದರು.…

Read More

ಬೆಂಗಳೂರು : ಬೆಂಗಳೂರಲ್ಲಿ ಘೋರ ಘಟನೆಯೊಂದು ನಡೆದಿದ್ದು, ವಂದೇ ಭಾರತ್ ರೈಲಿಗೆ ಸಿಲುಕಿ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ನಗರ ಹೊರವಲಯದ ಚಿಕ್ಕಬಾಣಾ ವರ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ನಡೆದಿದೆ. ಕೇರಳ ಮೂಲದಸ್ಟೇರ್ಲಿನ್ ಎಲ್ಲಾ ಶಾಜಿ (19) ಹಾಗೂ ಜಸ್ಟಿನ್ ಜೋಸೆಫ್ (20) ಮೃತ ದುರ್ದೈವಿಗಳು. ಈ ಇಬ್ಬರು ರೈಲ್ವೆ ನಿಲ್ದಾಣಕ್ಕೆ ಮಧ್ಯಾಹ್ನ 2.30 ರಲ್ಲಿ ಬಂದಿ ದ್ದರು. ಅದೇ ವೇಳೆ ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿಗೆ ಸಿಲುಕಿ ವಿದ್ಯಾರ್ಥಿಗಳು ಮೃತಪಟ್ಟಿ ದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹೆಸರ ಘಟ್ಟ ರಸ್ತೆಯ ಸಪ್ತಗಿರಿ ನರ್ಸಿಂಗ್ ಕಾಲೇಜಿ ನಲ್ಲಿ ಮೊದಲ ವರ್ಷದ ಬಿಎಸ್ಸಿ ವಿಭಾಗದಲ್ಲಿ ಇಬ್ಬರು ವ್ಯಾಸಂಗ ಮಾಡುತ್ತಿದ್ದು, ಕಾಲೇಜು ಸಮೀ ಪದಲ್ಲೇ ಇಬ್ಬರು ಆಗಿದ್ದರು. ಈ ಘಟನೆಗೆ ನಿಖರ ವಾಸ ಕಾರಣ ಗೊತ್ತಾಗಿಲ್ಲ. ರೈಲಿಗೆ ಆಕಸ್ಮಿಕವಾಗಿ ಸಿಲುಕಿ ಮೃತಪಟ್ಟಿದ್ದಾರೆಯೇ ಅಥವಾ ಆತ್ಮಹತ್ಯೆಯೇ ಎಂಬುದರ ಬಗ್ಗೆ ತನಿಖೆ ನಡೆದಿದೆ. ರೈಲ್ವೆ ನಿಲ್ದಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಾಸರಗೋಡು: ನಗರ ಹೊರವಲಯದಲ್ಲಿ ನಡೆದ ರಸಮಂಜರಿ ಕಾರ್ಯಕ್ರಮದ ವೇಳೆ ನಿರೀಕ್ಷೆಗೂ ಮೀರಿ ಸೇರಿದ್ದ ಜನಸಂದಣಿಯಿಂದ ನೂಕುನುಗ್ಗಲು ಸಂಭವಿಸಿ, ಕನಿಷ್ಠ 15 ಮಂದಿ ಗಾಯಗೊಂಡಿರುವ ಘಟನೆ ರವಿವಾರ ರಾತ್ರಿ ನಡೆದಿದೆ. ಗಾಯಗೊಂಡವರಲ್ಲಿ ಮಹಿಳೆಯರು, ಮಕ್ಕಳು ಸೇರಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕಾಸರಗೋಡು ನಗರದ ಹಲವು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಸರಗೋಡು ಫೀ ಯುವಜನ ಸಂಘಟನೆ ವತಿಯಿಂದ ನುಳ್ಳಿಪ್ಪಾಡಿ ಪ್ರದೇಶದಲ್ಲಿ ಆಯೋಜಿಸಿದ್ದ ಸಾಮಾಜಿಕ ಮಾಧ್ಯಮ ಪ್ರಭಾವಿ, ಗಾಯಕ ಹನಾನ್ ಷಾ ಅವರ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಸಾವಿರಾರು ಮಂದಿ ಸೇರಿದ್ದರು. ಕಾರ್ಯಕ್ರಮಕ್ಕೆ ಟಿಕೆಟ್ ವ್ಯವಸ್ಥೆ ಮಾಡಲಾಗಿತ್ತು. ಟಿಕೆಟ್ ಪಡೆದವರ ಜೊತೆ ಟಿಕೆಟ್ ಇಲ್ಲದವರೂ ಪ್ರಮುಖ ಗಾಯಕರನ್ನು ನೋಡುವ ಉತ್ಸಾಹದಲ್ಲಿ ಮೈದಾನಕ್ಕೆ ಒಳನುಗ್ಗಲು ಯತ್ನಿಸಿದಾಗ ಗೊಂದಲ ಸೃಷ್ಟಿಯಾಗಿ, ಹಲವರಿಗೆ ಉಸಿರಾಟದ ತೊಂದರೆ ಉಂಟಾಗಿ ಕುಸಿದು ಬಿದ್ದರು ಎನ್ನಲಾಗಿದೆ. ಪೊಲೀಸರು ನೀಡಿದ್ದ ಎಚ್ಚರಿಕೆಯನ್ನೂ ನಿರ್ಲಕ್ಷಿಸಿದ್ದರು ಎಂದು ಆರೋಪಿಸಲಾಗಿದೆ. ಆ ಬಳಿಕ ಗುಂಪನ್ನು ನಿಯಂತ್ರಿಸಲು ಸ್ಥಳಕ್ಕೆ ಧಾವಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದರು. ಕಾರ್ಯಕ್ರಮದ ಆರಂಭಕ್ಕೂ…

Read More