Author: kannadanewsnow05

ರಾಯಚೂರು : ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರರ ನಡುವೆ ಗಲಾಟೆ ನಡೆದಿದ್ದು ಗಲಾಟೆಯು ತೀವ್ರ ವಿಕೋಪಕ್ಕೆ ತಿರುಗಿ ತಮ್ಮನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಜೀನೂರಿನಲ್ಲಿ ನಡೆದಿದೆ. https://kannadanewsnow.com/kannada/finland-three-students-injured-in-shooting-by-12-year-old-boy-finland-shooting/ ರಾಮಣ್ಣ (36) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಗ್ರಾಮದಲ್ಲಿದ್ದ 2 ಎಕರೆ 10 ಗುಂಟೆ ಜಮೀನನ್ನು ರಾಮಣ್ಣ ತನ್ನ ಉಳಿದ ಸಹೋದರರಿಗೆ ಬಿಡದೆ ತಾನೇ ಉಳುಮೆ ಮಾಡುತ್ತಿದ್ದ. ಇದೇ ವಿಚಾರಕ್ಕೆ ರಾಮಣ್ಣನ ಅಣ್ಣಂದಿರಾದ ಮೂಕಯ್ಯ, ಮುದಕಯ್ಯ ಹಾಗೂ ಅವರ ಮಕ್ಕಳು ಸೇರಿಕೊಂಡು ರಾಮಣ್ಣನ ಮೇಲೆ ಗಲಾಟೆ ಮಾಡಿದ್ದಾರೆ. ಬಳಿಕ ಕೊಡಲಿ ಮತ್ತು ಬೆತ್ತದಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. https://kannadanewsnow.com/kannada/ben-stokes-ruled-out-of-2024-t20-world-cup/ ಗಲಾಟೆಯಲ್ಲಿ ರಾಮಣ್ಣ ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಗಲಾಟೆಯಲ್ಲಿ ಮೃತನ ಪತ್ನಿ ರತ್ನಮ್ಮ ಹಾಗೂ ಅಕ್ಕ ಯಲ್ಲಮ್ಮ ಗಂಭೀರವಾಗಿ ಗಾಯಗೊಂಡಿದ್ದು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.ಈ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,…

Read More

ಮೈಸೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಹಲವು ದಿನಗಳಿಂದ ಮೈಸೂರು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದು ಇಂದು ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಎಚ್ ಡಿ ದೇವೇಗೌಡ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಜೆಡಿಎಸ್ ಪಕ್ಷ ಕಟ್ಟಿದ್ದೆ ನಾನು. ಆದರೆ ದೇವೇಗೌಡರು ನನ್ನನ್ನೇ ಪಕ್ಷದಿಂದ ಉಚ್ಚಾಟಿಸಿ ಹೊರಗೆ ಕಳುಹಿಸಿದರು ಎಂದು ಗಂಭೀರವಾದ ಆರೋಪ ಮಾಡಿದರು. https://kannadanewsnow.com/kannada/it-is-forbidden-to-feed-gods-fish-in-this-famous-area-of-the-state/ 2009 ರಲ್ಲಿ ರಾಮಕೃಷ್ಣ ಹೆಗಡೆ, ಎಸ್.ಬೊಮ್ಮಾಯಿ ಸೇರಿದಂತೆ ಅನೇಕರು ಜನತಾದಳ ಬಿಟ್ಟು ಹೋದರು. ಆಗ ನಾನು ದೇವೇಗೌಡರ ಬಳಿ ಹೋಗಿ ಜೆಡಿಎಸ್ ಮಾಡೋಣ ಎಂದು ಹೇಳಿದೆ. ನಂತರ ಜೆಡಿಎಸ್ ಹುಟ್ಟಿಕೊಂಡಿತು. ನಾನು ಜೆಡಿಎಸ್ ಸಂಸ್ಥಾಪಕ ಅಧ್ಯಕ್ಷನಾಗಿದ್ದೇ. ನಂತರ ನನ್ನನ್ನು ಪಕ್ಷದಿಂದ ದೇವೇಗೌಡರು ಉಚ್ಛಾಟನೆ ಮಾಡಿದರು ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಮೈಸೂರಿನಲ್ಲಿ ಇಂದು ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, 2009ರಲ್ಲಿ ಜನತಾದಳ ವಿಭಜಯನೆಯಾತು. ಬೈರೇಗೌಡರು, ಬೊಮ್ಮಾಯಿ ಎಲ್ಲಾ ಜೆ.ಎಚ್.ಪಟೇಲ್ ಜೊತೆ ಹೊದ್ರು. ನಾವು ಹೋಗಲಿಲ್ಲ. ನಾನು ದೇವೇಗೌಡರು…

Read More

ಬೆಂಗಳೂರು : ಕರ್ನಾಟಕ ರಾಜ್ಯದ ಜನರಿ ಹಿತಕ್ಕಾಗಿ ಕಾಂಗ್ರೆಸ್ ಕೆಲಸ ಮಾಡುತ್ತಿಲ್ಲ ಎಂದು ಬಿಜೆಪಿಯ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದರು.5 ಲೋಕಸಭಾ ಕ್ಷೇತ್ರಗಳ ಶಕ್ತಿ ಕೇಂದ್ರಗಳ ಪ್ರಮುಖ ಸಮಾವೇಶ ನಡೆಯುತ್ತಿದ್ದು ಈ ಸಮಾವೇಶದಲ್ಲಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. https://kannadanewsnow.com/kannada/india-has-43-3-crore-digital-transactions-every-month-nirmala-sitharaman/ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಂತಹ 5 ಲೋಕಸಭಾ ಕ್ಷೇತ್ರಗಳ ಶಕ್ತಿ ಕೇಂದ್ರಗಳ ಪ್ರಮುಖ ಸಮಾವೇಶದಲ್ಲಿ ಮಾತನಾಡಿದ ಅವರು, ಒಬ್ಬರು ಕುರ್ಚಿ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ. ಮತ್ತೊಬ್ರು ಕುರ್ಚಿ ಕಿತ್ತುಕೊಳ್ಳಲು ಹೋರಾಟ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. https://kannadanewsnow.com/kannada/financial-crisis-byjus-lays-off-employees-via-phone-calls/ ಡಾಕ್ಟರ್ ಮನ ಮೋಹನ್ ಸಿಂಗ್ ಸರ್ಕಾರ 1.42 ಲಕ್ಷ ಕೋಟಿ ಅನುದಾನ ನೀಡಿದರೆ, ಮೋದಿ ಸರಕಾರ ರಾಜ್ಯ ಸರ್ಕಾರಕ್ಕೆ 4. 91 ಲಕ್ಷ ಕೋಟಿ ಅನುದಾನ ಕೊಟ್ಟಿದೆ. ಕೆಲವು ಕ್ರಿಮಿನಲ್ ಕಾನೂನು ಸೆಕ್ಷನ್ ಗಳನ್ನು ತಿದ್ದುಪಡಿ ಮಾಡಿದ್ದೇವೆ ಎಂದು ಅವರು ತಿಳಿಸಿದರು. https://kannadanewsnow.com/kannada/amit-shahs-efforts-to-quell-rebellion-former-minister-ks-eshwarappa-to-visit-delhi-tomorrow/ 12…

Read More

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ತಮ್ಮ ಮಗನಿಗೆ ಟಿಕೆಟ್ ಸಿಗಲಿಲ್ಲವೆಂದು ಬಂಡಾಯ ವೆದ್ದಿರುವ ಬಿಜೆಪಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಇದೀಗ ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೆ ಎಸ್ ಈಶ್ವರಪ್ಪ ಅವರೊಂದಿಗೆ ದೂರವಾಣಿ ಸಂಪರ್ಕ ಮಾಡಿ ದೆಹಲಿಗೆ ಬರುವಂತೆ ತಿಳಿಸಿದ್ದಾರೆ ಹಾಗಾಗಿ ನಾಳೆ ಕೆಎಸ್ ಈಶ್ವರಪ್ಪ ದೆಹಲಿಗೆ ತರಲಿದ್ದಾರೆ ಎಂದು ತಿಳಿದುಬಂದಿದೆ. ನಾಳೆ ಈಶ್ವರಪ್ಪ ದಿಲ್ಲಿಗೆ ತೆರಳಲಿದ್ದಾರೆ.ಸೋಮವಾರ ಈಶ್ವರಪ್ಪ ಅವರಿಗೆ ಕರೆ ಮಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಷಾ, ಯಡಿಯೂರಪ್ಪ ವಿರುದ್ಧ ತಿರುಗಿ ಬಿದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಜ್ಜಾಗಿದ್ದಾರೆ.ನನ್ನ ಮಗ ಕಾಂತೇಶ್ ಗೆ ಹಾವೇರಿಯಲ್ಲಿ ಟಿಕೆಟ್ ತಪ್ಪಿಸಿದ್ದಾರೆ,ನಾನು ಶಿವಮೊಗ್ಗದಲ್ಲಿ ಸ್ಪರ್ಧಿಸಿ ಅವರ ಪುತ್ರ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸುತ್ತೇನೆ ಅಂತ ಪ್ರತಿಜ್ಞೆ ಮಾಡಿದ್ದಾರೆ. ಕಳೆದ ಹದಿನೈದು ದಿನಗಳಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈಶ್ವರಪ್ಪ ಅವರ ಓಡಾಟ ಜೋರಾಗಿದೆ.ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರ ಬಂಡಾಯ ಶಮನಕ್ಕೆ…

Read More

ಬೆಂಗಳೂರು : ನಿನ್ನೆ ಮೈಸೂರಿನಲ್ಲಿ ಟಿ ನರಸೀಪುರದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಕಾರ್ಯಕ್ರಮದಲ್ಲಿ ನಾನು ಸಿಎಂ ಸ್ಥಾನದಲ್ಲಿ ಇರಬೇಕಾ ಬೇಡ್ವಾ ಎಂಬ ಹೇಳಿಕೆಯನ್ನು ನೀಡಿದರು ಅದಕ್ಕೆ ಇಂದು ಅವರು ಸ್ಪಷ್ಟನೆಯನ್ನು ನೀಡಿದ್ದಾರೆ. https://kannadanewsnow.com/kannada/india-is-a-role-model-for-many-countries-jaishankar/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವರುಣ ಕ್ಷೇತ್ರದ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ಪರ ಮತಯಾಚನೆ ವೇಳೆ ನಾನು ಇರಬೇಕಾಗಿ ಬೇಡುವ ನಾನು ಇರಬೇಕೆಂದರೆ ಸುನಿಲ್ ಬಸ್ಸಿಗೆ 60 ಸಾವಿರ ಲೀಡ್ನಿಂದ ಗೆಲ್ಲಿಸಿ ಎಂದು ಹೇಳಿಕೆ ನೀಡಿದರು. https://kannadanewsnow.com/kannada/gst-collection-swells-11-5-to-21-35-billion-in-march/ ಈಗ ಈ ಒಂದು ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಎಲ್ಲಾ ಕೆಲಸಗಳು ಮುಂದುವರಿಯಬೇಕೆಂದರೆ ಇರಬೇಕು ಎಂದು ನಾನು ಆ ಧಾಟಿಯಲ್ಲಿ ನಾನು ಹೇಳಿದ್ದು. ಬಿಜೆಪಿಯವರು ಬಂದರೆ ಇವೆಲ್ಲ ನಿಲ್ಲಿಸಿ ಬಿಡುತ್ತಾರೆ ಅಸೆಂಬ್ಲಿಯಲ್ಲಿ ನನಗೆ 48000 ಲೀಡ್ ಬಂದಿದೆ ಇದಕ್ಕಿಂತ ಜಾಸ್ತಿ ಕೊಡಿ ಅಂತ ಕೇಳಿದ್ದೇನೆ. ಸುನಿಲ್ ಬಾರಿಗೆ 60000 ಲೀಡ್ ಕೊಡಿ ಅಂತ ಹೇಳಿದ್ದೇನೆ ಎಂದು ಅವರು ತಿಳಿಸಿದರು.

Read More

ಬೆಂಗಳೂರು : ಕೋವಿಡ್ ಸಂದರ್ಭದಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪ ಎದುರಿಸುತ್ತಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣದ ಮಾಜಿ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವ‌ರ್, ರಾಜ್ಯ ಸರಕಾರದ ಕಾರ್ಯದರ್ಶಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಪ್ರವೀಣ್ ಕುಮಾರ್ ಎಂಬುವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/breaking-vistara-cuts-flights-to-meet-pilot-shortage-reimburses-passengers/ ಬಿಜೆಪಿ ಸರಕಾರದ ಅವಧಿಯಲ್ಲಿ ಕೆ.ಸುಧಾಕ‌ರ್ ಅವರು ನಡೆಸಿದ್ದಾರೆ ಎನ್ನಲಾದ ಕೋವಿಡ್ ಹಗರಣದ ಬಗ್ಗೆ ತನಿಖೆಗೆ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿತ್ತು. 2021ರ ಜುಲೈ-ಆಗಸ್ಟ್ ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ನೀಡಿರುವಂತೆ ಕೋವಿಡ್ ನಿರ್ವಹಣೆ ತಡೆಗಟ್ಟಲು ಔಷಧ, ಉಪಕರಣಗಳು ಹಾಗೂ ಸಾಮಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳ ಕುರಿತು ತನಿಖೆಗೆ ನ್ಯಾಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಿ, 3 ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿತ್ತು. https://kannadanewsnow.com/kannada/bidar-rs-3-lakh-cash-seized-from-car-without-proper-documents/ ಈ ನಡುವೆ ಕೋವಿಡ್ ಅಕ್ರಮದ…

Read More

ಬೀದರ್ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಕ್ರಮ ತಡೆಗಟ್ಟಲು ಪ್ರತಿಯೊಂದು ಸ್ಥಳದಲ್ಲೂ ಚೆಕ್ ಪೋಸ್ಟ್ಗಳನ್ನು ನಿರ್ಮಾಣ ಮಾಡಲಾಗಿದೆ. ಇದೀಗ ಬೀದರ್ ಜಿಲ್ಲೆಯಲ್ಲಿ ಕಾರಿನಲ್ಲಿ ಆಕ್ರಮವಾಗಿ ಸಾಗಿಸುತ್ತಿದ್ದ ಮೂರು ಲಕ್ಷ ರೂಪಾಯಿಗಳನ್ನು ಅಧಿಕಾರಿಗಳು ಸೀಜ್ ಮಾಡಿಕೊಂಡಿದ್ದಾರೆ. ಹೌದು ಕಾರಿನಲ್ಲಿ ಸೂಕ್ತದ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಮೂರು ಲಕ್ಷ ನಗದು ಜಪ್ತಿ ಮಾಡಿಕೊಳ್ಳಲಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮನಹಳ್ಳಿ ಗ್ರಾಮದ ಚಂಡಕಾಪುರ ಚಿಕ್ಕ ಪೋಸ್ಟ್ ನಲ್ಲಿ ನಗದನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಗೋವಾದಿಂದ ತೆಲಂಗಾಣಕ್ಕೆ ಕಾರಿನಲ್ಲಿ ಅಕ್ರಮವಾಗಿ ಹಣ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.

Read More

ಬೆಂಗಳೂರು : ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಇದ್ದರೂ ಕೂಡ ಬಿಜೆಪಿ ಚಿನ್ಹೆ ಹಾಗೂ ಮೋದಿ ಫೋಟೋ ಅಳವಡಿಸಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಡು ವಿರುದ್ಧ ಇದೀಗ ಚುನಾವಣೆ ಅಧಿಕಾರಿಗಳ ದೂರಿನ ಮೇರೆಗೆ ಕೋರಮಂಗಲದ ಠಾಣೆಯಲ್ಲಿ ದಾಖಲಾಗಿದೆ. https://kannadanewsnow.com/kannada/%e0%b2%b8%e0%b2%bf%e0%b2%8e%e0%b2%82-%e0%b2%b8%e0%b2%bf%e0%b2%a6%e0%b3%8d%e0%b2%a6%e0%b2%b0%e0%b2%be%e0%b2%ae%e0%b2%af%e0%b3%8d%e0%b2%af%e0%b2%97%e0%b3%81-%e0%b2%a4%e0%b2%9f%e0%b3%8d%e0%b2%9f%e0%b2%bf/ ಕೋರಮಂಗಲ ಠಾಣೆಯಲ್ಲಿ ರಾಘವೇಂದ್ರ ನಾಯ್ಡು ವಿರುದ್ಧ FIR ದಾಖಲಾಗಿದೆ. ರಾಘವೇಂದ್ರ ನಾಯ್ಡು ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಂದು ಹೇಳಲಾಗುತ್ತಿದೆ.ಅನುಮತಿ ಇಲ್ಲಿದೆ ಬಿಜೆಪಿ ಚಿನ್ಹೆ ಪ್ರಧಾನಿ ಫೋಟೋ ಅಂಟಿಸಲಾಗಿತ್ತು. ಈ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ಸ್ಥಳೀಯರು ದೂರು ನೀಡಿದ್ದರು. https://kannadanewsnow.com/kannada/97-69-of-rs-2000-notes-returned-since-may-2023-another-rs-8202-crore-yet-to-be-returned-rbi/ ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೋರಮಂಗಲ ಠಾಣೆಗೆ ದೂರು ನೀಡಿದ್ದರು. ಚುನಾವಣೆ ಅಧಿಕಾರಿಗಳ ದೂರಿನಂತೆ ರಾಘವೇಂದ್ರ ನಾಯ್ಡು ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ.

Read More

ಮೈಸೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ರೀತಿಯಾದಂತಹ ಅಕ್ರಮಗಳು ನಡೆದಂತೆ ಮಾದರಿ ನೀತಿ ಸಂಹಿತೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಹಾಗಾಗಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಈ ಒಂದು ಮಾದರಿ ನೀತಿ ಸಂಹಿತೆಗೆ ಸಿಎಂ ಸಿದ್ದರಾಮಯ್ಯ ಕೂಡ ಹೊರತಾಗಿಲ್ಲ.ಹೀಗಾಗಿ ಇಂದು ಮೈಸೂರು ಹಾಗೂ ಟಿ ನರಸೀಪುರ ರಸ್ತೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕಾರನ್ನು ತಪಾಸಣೆ ಮಾಡಲಾಯಿತು. https://kannadanewsnow.com/kannada/hassan-two-killed-as-bike-collides-with-stationary-truck/ ಹೌದು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಭಾಗದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮರಳುತ್ತಿದ್ದಾಗ ಮೈಸೂರು-ಟಿ.ನರಸೀಪುರ ರಸ್ತೆಯ ಚಿಕ್ಕಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಮಹದೇವಪ್ಪ ತೆರಳುತ್ತಿದ್ದ ಕಾರನ್ನು ನಿಲ್ಲಿಸಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. https://kannadanewsnow.com/kannada/weather-update-imd-warns-of-heatwave-for-10-20-days-in-these-states-including-karnataka-in-april-june/ ಚೆಕ್‌ಪೋಸ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಮಹದೇವಪ್ಪ ತೆರಳುತ್ತಿದ್ದ ಕಾರನ್ನು ನಿಲ್ಲಿಸಿ, ಅಧಿಕಾರಿಗಳು ಕಾರಿನಲ್ಲಿದ್ದ ಸೂಟಕೇಸ್, ಬ್ಯಾಗ್, ಡ್ಯಾಷ್ ಬೋರ್ಡ್ ಸೇರಿ ಎಲ್ಲಾ ಕಡೆಗಳಲ್ಲೂ ತಪಾಸಣೆ ನಡೆಸಿದ್ದಾರೆ. ಟಿ.ನರಸೀಪುರದಲ್ಲಿ ಕಾರ್ಯಕ್ರಮ ಮುಗಿಸಿ ತೆರಳುವಾಗ ತಪಾಸಣೆ ಮಾಡಲಾಗಿದೆ.

Read More

ಹಾಸನ : ಹಾಸನದಲ್ಲಿ ಭೀಕರ ಅಪಘಾತ ಒಂದು ಸಂಭವಿಸಿದ್ದು ರಸ್ತೆ ಬದಿಯಲ್ಲಿ ನಿಲ್ಲಿಸಿದಂತಹ ಟ್ರಕ್ಕಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಹಾಸನ ತಾಲ್ಲೂಕಿನ ಶಾಂತಿಗ್ರಾಮ ಟೋಲ್ ಬಳಿ ನಡೆದಿದೆ. https://kannadanewsnow.com/kannada/beware-women-who-drink-alcohol-have-higher-risk-of-heart-disease-study/ ಈ ಒಂದು ಅಪಘಾತದಲ್ಲಿ ಮೃತರನ್ನು ಅರಕಲಗೂಡು ತಾಲ್ಲೂಕಿನ ಚಿಕ್ಕ ಆಲದಹಳ್ಳಿ ಗ್ರಾಮದ ಅಶ್ವತ್ಥ (42) ಹಾಗೂ ಸಾಗರ್ (42) ಎಂದು ಗುರುತಿಸಲಾಗಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್ಕಿಗೆ ಹಿಂಬದಿಗಯಿಂದ ಬೈಕ್ ಸವಾರರು ಗುದ್ದಿದ ಪರಿಣಾಮ ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/former-cm-bs-yediyurappa-is-our-godfather-holalkere-bjp-mla-chandrappa-raghuchandan/ ಚಾಲಕ ಹಾಗೂ ನಿರ್ವಾಹಕ ಶಾಂತಿಗ್ರಾಮ ಟೋಲ್ ಬಳಿ ರಸ್ತೆ ಬದಿ ಟ್ರಕ್ ನಿಲ್ಲಿಸಿಕೊಂಡು ಅಡುಗೆ ಮಾಡುತ್ತಿದ್ದ ಸಂದರ್ಭದಲ್ಲಿ ಚನ್ನರಾಯಪಟ್ಟಣದ ಕಡೆಯಿಂದ ಹಾಸನದ ಕಡೆಗೆ ಬರುತ್ತಿದ್ದ ಬೈಕ್‌ ಸವಾರರು ವೇಗವಾಗಿ ಬಂದು ಟ್ರಕ್‌ಗೆ ಢಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.ಸ್ಥಳಕ್ಕೆ ಪೊಲೀಸರು ಭೇಟಿನೀಡಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Read More