Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಚಿಕ್ಕಮಗಳೂರು : ಆಟೋ ಡಿಕ್ಕಿ ಆಗಿ ಸ್ಕೂಟಿಯಲ್ಲಿ ತೆರುಳುತ್ತಿದ್ದ ವೃದ್ಧ ಸಾವನ್ನಪ್ಪಿರುವ ಘಟನೆ ಚಿಕ್ಕಮಂಗಳೂರು ತಾಲೂಕಿನ ಕಬ್ಬಿಣ ಸೇತುವೆ ಗ್ರಾಮದ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಆಟೋ ಡಿಕ್ಕಿಯಾಗಿ ಉದ್ದೆಗೌಡ (68) ಎನ್ನುವ ವೃದ್ಧರು ಸ್ಥಳದಲ್ಲಿ ಸಾವನ್ನಪ್ಪಿದ್ದರೆ. ವೇಗವಾಗಿ ಬಂದಂತಹ ಆಟೋ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಆಟೋ ಚಾಲಕನನ್ನು ಸದ್ಯ ಪೋಲಿಸರ ವಶಕ್ಕೆ ಪಡೆದುಕೊಂಡಿದ್ದಾರೆ. ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕೃಷಿಹೊಂಡದಲ್ಲಿ ಮೀನು ಹಿಡಿಯಲು ಹೋಗಿಓರ್ವ ಬಾಲಕ ಸೇರಿ ಇಬ್ಬರು ನೀರು ಪಾಲಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಚಂದುರಾಯನ ಪಾಳ್ಯದಲ್ಲಿ ನಡೆದಿದೆ. ಚಂದುರಾಯನ ಪಾಳ್ಯದಲ್ಲಿ ಮೀನು ಹಿಡಿಯಲು ಹೋಗಿ ಶಂಕರ್ (32) ಹಾಗೂ ಬಾಲಕ ಮೋಹಿತ್ (17) ಎಂದು ತಿಳಿದು ಬಂದಿದೆ. ಘಟನೆ ಕುರಿತು ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಇಂದಿನ ಇಲಾಖೆಯಲ್ಲಿ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಸಚಿವ ಕೆಜೆ ಜಾರ್ಜ್ ಇತ್ತೀಚಿಗೆ ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯಗೆ ಬರೆದಿದ್ದರು ಎನ್ನುವ ವಿಚಾರ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಸಚಿವ ಜಾರ್ಜ್ ಬಳಿಕ ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಅವರು ಕೂಡ ಇದೇ ವಿಚಾರವಾಗಿ ಅಸಮಾಧಾನ ಹೊರಹಾಕಿದ್ದಾರೆ. ಹೌದು ಯತೀಂದ್ರ ವಿರುದ್ಧ ಮತ್ತೊಂದು ಹಸ್ತಕ್ಷೇಪದ ಆರೋಪ ಕೇಳಿ ಬಂದಿದ್ದು ಗೃಹ ಸಚಿವ ಜಿ ಪರಮೇಶ್ವರ್ ಅವರ ಮುಂದೆ ತನ್ವೀರ್ ಸೇಠ್ ಅಸಮಾಧಾನ ಹೊರಹಾಕಿದ್ದಾರೆ. ಪೊಲೀಸ್ ಠಾಣೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಅಸಮಾಧಾನ ಹೊರಹಾಕಿದ ಪ್ರಕರಣ ನಡೆದಿದೆ. ಪರಮೇಶ್ವರ್ ಮನವೊಲಿಸಲು ಯತ್ನಿಸಿದರು ಕೂಡ ತನ್ವೀರ್ ಸೇಠ್ ಯಾವುದಕ್ಕೂ ಜಗ್ಗಿಲ್ಲ. ಬಳಿಕವಲ್ಲದ ಮನಸ್ಸಿನಿಂದ ಕಾರ್ಯಕ್ರಮದಲ್ಲಿ ಭಾಗಿಯಾದರು.
ಗದಗ : ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನ ಮುಂದುವರೆದಿದ್ದು, ಇದೀಗ ಲಕ್ಕುಂಡಲ್ಲಿ ನಿಧಿಗೆ ಸರ್ಪಗಾವಲು ಇದೆ ಎನ್ನುವುದಕ್ಕೆ ಮತ್ತೊಂದು ಸಾಕ್ಷಿ ಪತ್ತೆಯಾಗಿದೆ. ಐತಿಹಾಸಿಕ ಕೋಡಿ ಬಸವಣ್ಣ ದೇವಸ್ಥಾನಕ್ಕೆ ಸರ್ಪಗಾವಲು ಇರುವುದು ಸಾಕ್ಷಿ ಸಮೇತ ತಿಳಿದು ಬಂದಿದೆ. ದೇವಸ್ಥಾನದ ಗರ್ಭಗುಡಿಯಲ್ಲಿ ನಾಗರಹಾವಿನ ಪೊರೆ ಪತ್ತೆಯಾಗಿದೆ. ಹೌದು ನಿಧಿ ಜಾಗದಲ್ಲಿಯೇ ಬೃಹತ್ ನಾಗ ಸರ್ಪ ಬೀಡು ಬಿಟ್ಟಿದೆ ಎನ್ನುವ ಪ್ರಶ್ನೆ ಎದುರಾಗಿದೆ. ಗರ್ಭಗುಡಿಯ ಬಲಭಾಗದಲ್ಲಿ ಹಂಡೆ ಆಕಾರದ ಕಲ್ಲು ಬಂಡೆ ಇದೆ. ಕಲ್ಲು ಬದಿಯಲ್ಲಿ ನಾಗರಹಾವಿನ ಪೊರೆ ಇದೀಗ ಪತ್ತೆಯಾಗಿದೆ. ಈ ಹಿಂದೆ ಇದೇ ಗ್ರಾಮದಲ್ಲಿ ಅನೇಕರು ಹೇಳಿದ್ದಾರೆ ಅಲ್ಲದೆ ಕೂಡ ನಿಜವಾದ ನಾಗರಹಾವು ಸಹಪತೆಯಾಗಿತ್ತು ಹಾಗಾಗಿ ಲಕ್ಕುಂಡಿಯಲ್ಲಿರುವ ನದಿಗಳಿಗೆ ಸರ್ಪಗಾವಲು ಇದೆ ಎನ್ನುವುದಕ್ಕೆ ಮತ್ತೊಂದು ಸಾಕ್ಷಿ ಪತ್ತೆಯಾಗಿದೆ
ರಾಯಚೂರು : ಸಿಎಂ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ವೇಳೆ ಇಂದು ಭದ್ರತಾ ವೈಫಲ್ಯ ಕಂಡುಬಂದಿತು. ಲ್ಯಾಂಡ್ ಆಗಬೇಕಿದ್ದ ಹೆಲಿಕ್ಯಾಪ್ಟರ್ ಒಂದು ಹೆಲಿಪ್ಯಾಡ್ ನಲ್ಲಿ, ಆದರೆ ಸಿಎಂ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಲ್ಯಾಂಡ್ ಆಗಿದೆ ಮತ್ತೊಂದು ಹೆಲ್ಪ್ಯಾಡ್ನಲ್ಲಿ. ಇಂದು ರಾಯಚೂರು ಜಿಲ್ಲೆಯ ಲಿಂಗಸುಗೂರುನಲ್ಲಿ ಈ ಒಂದು ಘಟನೆ ನಡೆದಿದೆ. ದಿಡೀರ್ ಗೊಂದಲದಿಂದ ಅಧಿಕಾರಿಗಳು ತಬ್ಬಿಬಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಜೊತೆಗೆ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರೆಡ್ಡಿ ಸಹ ಇದ್ದರು. ಇಂದು ಲಿಂಗಸುಗೂರಿನ ಹಿರಿಯ ಕಾಂಗ್ರೆಸ್ ಮುಖಂಡ ಅಮರೇಗೌಡ ಬಯ್ಯಾಪುರ ಅವರ ಕುಟುಂಬದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಿಎಂ ಹಾಗೂ ಡಿಸಿಎಂಗಾಗಿ ಎರಡು ಪ್ರತ್ಯೇಕ ಹೆಲಿಪಾಡ್ ನಿರ್ಮಾಣ ಮಾಡಲಾಗಿತ್ತು. ಅವರಿರುವ ಪ್ರೋಟೋಕಾಲ್ ಸಂಬಂಧಪಟ್ಟಂತೆ ಸೂಕ್ತ ಭದ್ರತೆ ಒದಗಿಸಲಾಗಿತ್ತು. ಇನ್ನು ಕಲಬುರ್ಗಿಯಲ್ಲಿ ಮತ್ತೊಂದು ಹೆಲಿಪ್ಯಾಡ್ ಇದ್ದು ಅಲ್ಲಿ ಸತೀಶ್ ಜಾರಕಿಹೊಳಿಯವರು ಲ್ಯಾಂಡಿಂಗ್ ಆಗಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಇದರಲ್ಲಿ ಅದಲು ಬದಲು ಲ್ಯಾಂಡಿಂಗ್ ಆಯ್ತು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಥಾಯ್ಲೆಂಡ್ನ ಪುಕೆಟ್ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ಇಮಿಗ್ರೇಷನ್ ವಿಭಾಗದಲ್ಲಿ ಪರಿಶೀಲಿಸಿದಾಗ, ಪ್ಯಾಕೆಟ್‌ಗಳಾಗಿ ಅಡಗಿಸಿಟ್ಟಿದ್ದ ಒಟ್ಟು 8.5 ಕೆ.ಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಇನ್ನು, ಪ್ರತ್ಯೇಕ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಮಾದಕವಸ್ತು ಜಾಲ ಬಯಲಾಗಿದ್ದು, ₹53,03,000 ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಗಾಂಜಾ ಪೂರೈಕೆ ಮಾಡುತ್ತಿದ್ದ ಒಡಿಶಾದ ವ್ಯಕ್ತಿಯೊಂದಿಗೆ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ವಿಜಯಪುರ : ವಿಜಯಪುರದಲ್ಲಿ ರೆಡ್ ಬರ್ಡ್ ಜೆಟ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಖಾಸಗಿ ಜೆಟ್ ಪತನವಾಗಿ ಇಬ್ಬರಿಗೆ ಗಂಭೀರವಾಗಿ ಗಯಗಳಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ನಡೆದಿದೆ. ರೆಡ್ ಬರ್ಡ್ ಜೆಟ್ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ೧೦೮ ಆಂಬುಲೆನ್ಸ್ ಗೆ ಕರೆ ಮಾಡಿದ್ದು ಆ ಮೂಲಕ ಗಾಯಲುಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಮಂಗಳೂರು ಗ್ರಾಮದ ಬಳಿ ಇಂದು ರೆಡ್ ಬರ್ಡ್ ಖಾಸಗಿ ಜೆಟ್ ಪತನವಾಗಿದೆ. ಸ್ಥಳಕ್ಕೆ ಬಬಲೇಶ್ವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
ಬೆಂಗಳೂರು : ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿಯಿಂದ ಸ್ಕೂಟಿಯಲ್ಲಿ ತೆರಳುತ್ತಿದ್ದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ಬಾಗಲೂರಿನ ಗುಂಡಪ್ಪ ಕ್ರಾಸ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಬಾಗಲೂರು ಗ್ರಾಮದಲ್ಲಿ ಅಪಘಾತ ನಡೆದಿದೆ. ಬೂದಿಗೆರೆಯ ವಿರಗ ನಗರ ನಿವಾಸಿ ಮಾನಸ ಮೃತ ಗರ್ಭಿಣಿ ಎಂದು ತಿಳಿದು ಬಂದಿದೆ. ಹಿಂಬದಿಯಿಂದ ಡಿಕ್ಕಿ ಹೊಡೆದು ಗರ್ಭಿಣಿ ಮೇಲೆ ಲಾರಿ ಹರಿದಿದ್ದರಿಂದ ಸ್ಥಳದಲ್ಲಿಯೇ ಸಾವನಪ್ಪಿದ್ದಾಳೆ. ಪೊಲೀಸರು ಸದ್ಯ ಸಿಮೆಂಟ್ ಮಿಕ್ಸರ್ ಲಾರಿ ಚಾಲಕನನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಈಗಾಗಲೇ ನಾಳೆಯಿಂದ ನಮ್ಮ ಮೆಟ್ರೋ ಪ್ರಯಾಣದ ದರ ಶೇಕಡ 5 ರಷ್ಟು ಏರಿಕೆ ಆಗಲಿದೆ ಎಂದು ಬಿಎಂಆರ್‌ಸಿಎಲ್ ಎಂಡಿ ರವಿಶಂಕರ್ ಸ್ಪಷ್ಟನೆ ನೀಡಿದ್ದಾರೆ. ಇದರ ಬೆನ್ನಲೆ ರಾಜ್ಯದ ಜನತೆಗೆ ಜನತೆಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರದಲ್ಲಿಯೇ ವಿದ್ಯುತ್ ಏರಿಕೆ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಹೌದು ರಾಜ್ಯದಲ್ಲಿ ವಿದ್ಯುತ್ ಬಿಲ್ ಏರಿಕೆ ಆಗುವ ಸಾಧ್ಯತೆ ಇದೆ ಎಸ್ಕಾಂಗಳ ನಷ್ಟ ಸರಿದೂಗಿಸಲು ದೊರೆ ಏರಿಕೆಗೆ ಚಿಂತನೆ ನಡೆಸಲಾಗುತ್ತಿದೆ. ಆದಾಯ ಕೊರತೆಯಿಂದ ಕರೆಂಟ್ ಬಿಲ್ ಹೆಚ್ಚಿಸಲು ಚಿಂತಿಸಲಾಗುತ್ತಿದೆ ವಿದ್ಯುತ್ ಸರಬರಾಜು ಕಂಪನಿಗಳು ನಷ್ಟದ ಹಳಿಯಲ್ಲಿವೆ. ಆದಾಯ ಸರಿದೂಗಿಸಲು ವಿದ್ಯುತ್ ದರ ಏರಿಕೆಗೆ ಬೆಸ್ಕಾಂ, ಎಸ್ಕಾಂ ಗಳು ಪಟ್ಟು ಹಿಡಿದಿವೆ. ಏಪ್ರಿಲ್ 1 ರಿಂದ ವಿದ್ಯುತ್ತರ ಏರಿಕೆ ಆಗುವ ಸಾಧ್ಯತೆ ಇದೆ. ವಿದ್ಯುತ್ ದರ ಏರಿಕೆಗೆ ಕೆ ಇ ಆರ್ ಸಿ ಅಸ್ತು ಎನ್ನುತ್ತಾ ಎಂದು ಕಾಡುನೋಡ್ಬೇಕಾಗಿದೆ. ಬೆಸ್ಕಾಂ ಸೇರಿ ಎಸ್ಕಾಂಗಳಿಂದ ಕೆಇಆರ್‌ಸಿಗೆ…
ನವದೆಹಲಿ : ಆಗ್ನೇಯ ದೆಹಲಿಯ ಹಜರತ್ ನಿಜಾಮುದ್ದೀನ್‌ನಲ್ಲಿ ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ವಿದ್ಯುತ್ ಗೀಸರ್ ಸ್ಫೋಟಗೊಂಡು 50 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮತ್ತು ಅವರ ಪತ್ನಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಬೆಂಕಿ ಕಾಣಿಸಿಕೊಂಡ ವರದಿಯಾದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ನೋಡಿದಾಗ ಹೊಗೆಯಿಂದ ಉಸಿರಾಡಿದ ಕಾರಣ ಪತಿ ಮತ್ತು ಅವರ ಪತ್ನಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ – ಪತಿ ಸ್ನಾನಗೃಹದಲ್ಲಿದ್ದರು ಮತ್ತು ಮನೆ ಒಳಗಿನಿಂದ ಲಾಕ್ ಆಗಿತ್ತು. ಮೊಹಮ್ಮದ್ ಸಯೀದ್ ನಿಜಾಮಿ ಮತ್ತು ಅವರ ಪತ್ನಿ ಫಿದಾ ಅವರನ್ನು ಸಂಪರ್ಕಿಸಲು ಪೊಲೀಸರು ಬಾಗಿಲು ಒಡೆದು ಒಳಗೆ ಹೋಗಬೇಕಾಯಿತು. ದುರದೃಷ್ಟವಶಾತ್ ನಿಜಾಮಿ ಸಾವನ್ನಪ್ಪಿದ್ದರು. ಆದರೆ ಫಿದಾಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್, ಮನೆಯಲ್ಲಿ ಇಬ್ಬರೇ ಇದ್ದ ಕಾರಣ ಕುಟುಂಬದ ಇತರ ಸದಸ್ಯರು ಸುರಕ್ಷಿತವಾಗಿದ್ದಾರೆ. ಸ್ಫೋಟಕ್ಕೆ ಕಾರಣವೇನು ಎಂಬುದರ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.














