Subscribe to Updates
Get the latest creative news from FooBar about art, design and business.
Author: kannadanewsnow05
ಮಂತ್ರಿಗಿರಿ ಬೇಡ ಅನ್ನಲು ನಾನೇನು ಸನ್ಯಾಸಿ ಅಲ್ಲ ರಾಜಕಾರಣಿ : ಅಧಿವೇಶನ ನಂತರ ಸಂಪುಟ ಪುನಾರಚನೆ : ಶಾಸಕ ಲಕ್ಷ್ಮಣ ಸವದಿ
ಬೆಳಗಾವಿ : ರಾಜ್ಯ ಕಾಂಗ್ರೆಸ್ ನಲ್ಲಿ ದಿನಕ್ಕೊಂದು ಭಾರಿ ಬೆಳವಣಿಗೆ ನಡೆಯುತ್ತಿದ್ದು, ಮಲ್ಕೊಡಿ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದು ಪದೇಪದೇ ಹೇಳಿಕೆ ನೀಡುತ್ತಿದ್ದಾರೆ ಇನ್ನೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಪರವಾಗಿ ಕೆಲವು ಸಚಿವರಾಗೋ ಶಾಸಕರು ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ಜೊತೆ ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇತ್ತ ಇನ್ನೊಂದು ಕಡೆ ಸಂಪುಟ ಪುನಾರಚನೆಗೆ ಹಲವು ಆಕಾಂಕ್ಷಿಗಳು ನಮಗೂ ಮಂತ್ರಿ ಸ್ಥಾನ ಬೇಕು ಎಂದು ಆಗ್ರಹಿಸುತ್ತಿದ್ದು, ಇದೀಗ ಶಾಸಕ ಲಕ್ಷ್ಮಣ ಸವದಿ ಸಚಿವ ಸ್ಥಾನ ಬೇಡ ಅನ್ನೋದಕ್ಕೆ ನಾನೇನು ಸನ್ಯಾಸಿ ಅಲ್ಲ ಎಂದು ಅಥಣಿಯಲ್ಲಿ ತಿಳಿಸಿದರು. ಸಚಿವ ಸ್ಥಾನಕ್ಕೆ ನಾನು ಅಪೇಕ್ಷೆ ಪಟ್ಟಿಲ್ಲ ಆದರೆ ಸಚಿವ ಸ್ಥಾನ ನೀಡುವುದು ವರಿಷ್ಠರಿಗೆ ಬಿಟ್ಟ ವಿಷಯ. ಮಂತ್ರಿಗಿರಿ ಬೇಡ ಎನ್ನಲು ನಾನೇನು ಸನ್ಯಾಸಿಯಲ್ಲ ರಾಜಕಾರಣಿ. ಅಧಿವೇಶನ ಮುಗಿದ ನಂತರ ಸಂಪುಟ ಪುನಾರಚನೆ ಆಗಬಹುದು ಎಂದು ಅಥಣಿಯಲ್ಲಿ ಶಾಸಕ ಲಕ್ಷ್ಮಣ ಸವದಿ ತಿಳಿಸಿದರು.
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾ. ಮೈಕೆಲ್ ಕುನ್ಹಾ ಅವರ ತನಿಖಾ ವರದಿಯನ್ನು ಪ್ರಶ್ನಿಸಿ ‘ಡಿಎನ್‌ಎ’ ನೆಟ್‌ವರ್ಕ್ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಿತ್ತು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಡಿಎನ್ಎ ನೆಟ್ವರ್ಕ್ ಸಲ್ಲಿಸಿದ ಅರ್ಜಿಯನ್ನು ವಜಾ ಗೊಳಿಸಿ ಆದೇಶ ಹೊರಡಿಸಿದೆ. ಕಳೆದ ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದರು. ಈ ಪ್ರಕರಣದ ತನಿಖೆಗೆ ರಚಿಸಲಾದ ಏಕಸದಸ್ಯ ಆಯೋಗದ ವರದಿಯನ್ನು ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಅವರು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದರು. ಈ ವರದಿಯಲ್ಲಿ ಪೊಲೀಸರ ವೈಫಲ್ಯ ಮತ್ತು ಆಯೋಜಕರ ತಪ್ಪನ್ನು ಉಲ್ಲೇಖಿಸಲಾಗಿತ್ತು, ಹಾಗೂ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿತ್ತು. ಈ ವರದಿಯನ್ನು ಪ್ರಶ್ನಿಸಿ, ಅದನ್ನು ರದ್ದುಗೊಳಿಸುವಂತೆ ಕೋರಿ ‘ಡಿಎನ್‌ಎ’ ಎಂಟರ್‌ಟೇನ್‌ಮೆಂಟ್ ನೆಟ್‌ವರ್ಕ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಆದರೆ ವಿಚಾರಣೆ ನಡೆಸಿದ ಹೈ ಕೋರ್ಟ್ ಇದೀಗ ಡಿಎನ್ಎ ನೆಟ್ವರ್ಕ್ ಅರ್ಜಿಯನ್ನು ವಜಾ ಗೊಳಿಸಿದೆ.
ಕಲಬುರ್ಗಿ : ಬಿಜೆಪಿ ಮುಖಂಡ ಮಣಿಕಂಡ ರಾಟೋಡ್ ಮತ್ತೆ ಅರೆಸ್ಟ್ ಆಗಿದ್ದಾನೆ. ಜೇವರ್ಗಿ ತಾಲೂಕಿನ ನೆಲೋಗಿ ಠಾಣೆ ಪೋಲಿಸರಿಂದ ಮಣಿಕಂಠ ರಾಠೋಡ್ನನ್ನು ಬಂಧಿಸಲಾಗಿದ್ದು, ತಡರಾತ್ರಿ ಬಂಧಿಸಿ ಮಣಿಕಂಠ ರಾಠೋಡ್ ನನ್ನ ನ್ಯಾಯಾಂಗಕ್ಕೆ ಪೊಲೀಸ್ರು ಒಪ್ಪಿಸಿದ್ದಾರೆ. ಕೊಲೆ ಯತ್ನದ ಆರೋಪದ ಅಡಿ ಮಣಿಕಂಠ ರಾಠೋಡ್ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ಮಣಿಕಂಠ ರಾಠೋಡ್ ನನ್ನ ಅರೆಸ್ಟ್ ಮಾಡಿದ್ದಾರೆ. ನಾಟಿ ಔಷಧಿ ಕೊಡುತ್ತಿದ್ದಂತಹ ರಶೀದ್ ಮುತ್ಯಾ ಬಂಧನಕ್ಕೆ ಅಗ್ರಹಿಸಿದ್ದ ಮಣಿಕಂಠ ರಾಠೋಡ್ ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮಕ್ಕೆ ತೆರಳಿ ಹೈಡ್ರಾಮಾ ಮಾಡಿದ್ದ. ತನ್ನ ಬೆಂಬಲಿಗರ ಜೊತೆ ಸೇರಿ ಗಲಾಟೆ ಮಾಡಿದ್ದ. ಬೆಂಬಲಿಗರ ಜೊತೆ ಸೇರಿ ಹಲ್ಲೆ ಮಾಡಿದ್ದು ಅಲ್ಲದೆ ರಶೀದ್ ಮುತ್ಯಾನ ಕಾರು ಚಾಲಕನಿಗೂ ಕೂಡ ಗಲಾಟೆ ವೇಳೆ ಕಲ್ಲೇಟು ತಗುಲಿದ್ದು, ರಶೀದ್ ಮುತ್ಯ ದೂರಿನ ಮೇರೆಗೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರು : ಬೆಂಗಳೂರು ನಗರದಲ್ಲಿ ಏಳು ಕೋಟಿ ನಗದು ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಸಿಎಂಎಸ್ ಮಾಜಿ ನೌಕರ ಝೆವಿಯರ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆಂಧ್ರಪ್ರದೇಶದಲ್ಲಿ 5 ಕೋಟಿ 30 ಲಕ್ಷ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಿಎಂಎಸ್ ನ ಮಾಜಿ ನೌಕರ ಝೆವಿಯರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ಸ್ನೇಹಿತರು ಎಂದು ತನಿಖೆಯಲ್ಲಿ ತಿಳಿದು ಬಂದಿದೆ.ಇನ್ನು ಉಳಿದ ಹಣದ ಸಮೇತ ಆರೋಪಿಗಳು ಪರಾರಿಯಾಗಿದ್ದು ಉಳಿದ ಹಣಕ್ಕಾಗಿ ಮತ್ತು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಪೋಲೀಸರ ಭರ್ಜರಿ ಕಾರ್ಯಾಚರಣೆ : ಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 3.62 ಲಕ್ಷ ಮೌಲ್ಯದ ಮದ್ಯ ಸಹಿತ 5 ಬೈಕ್ ವಶಕ್ಕೆ
ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಗೋವಾದಿಂದ ಅರಣ್ಯ ಪ್ರದೇಶದ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು ಮೂರು ಲಕ್ಷಕ್ಕೂ ಅಧಿಕ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದು ಅಲ್ಲದೆ ನಾಲ್ಕು ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಗೋವಾದಿಂದ ಅಕ್ರಮವಾಗಿ ದೊಡ್ಡ ಪ್ರಮಾಣದ ಮದ್ಯವನ್ನು ಸಾಗಿಸುತ್ತಿದ್ದ ಜಾಲವನ್ನು ಕಾರವಾರದ ಅಬಕಾರಿ ಇಲಾಖೆ ಅಧಿಕಾರಿಗಳು ಭೇದಿಸಿದ್ದು, ಸುಮಾರು ರೂ. 3.62 ಲಕ್ಷ ಮೌಲ್ಯದ ಮದ್ಯ ಮತ್ತು ರೂ. 4 ಲಕ್ಷ ಮೌಲ್ಯದ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆದಾಗ್ಯೂ, ಅಧಿಕಾರಿಗಳನ್ನು ಕಂಡ ತಕ್ಷಣ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆಗಿಳಿದ ಅಬಕಾರಿ ಇಲಾಖೆಯ ಸಿಬ್ಬಂದಿ ಗುರುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ತಾಲೂಕಿನ ಮುಡಗೇರಿ ಡ್ಯಾಮ್ ಹತ್ತಿರದ ಅರಣ್ಯ ಪ್ರದೇಶದಲ್ಲಿ ಗಸ್ತು ನಡೆಸಿದರು. ಈ ವೇಳೆ ಐದು ದ್ವಿಚಕ್ರ ವಾಹನಗಳಲ್ಲಿ ಭಾರೀ ಪ್ರಮಾಣದ ಮದ್ಯವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆ…
ರಾಜಸ್ತಾನ : ಕರ್ನಾಟಕದ ಕೆಎಸ್ಆರ್ಟಿಸಿ ಸಂಸ್ಥೆಯು ಮತ್ತೊಂದು ಗರಿ ಪಡೆದಿದ್ದು, ರಾಜಸ್ಥಾನದ ಉದಯಪುರದಲ್ಲಿ ನಡೆದ 10ನೇ ಅಫೆಕ್ಸ್ ಇಂಡಿಯಾ Safety, Quality, HR & Business Excellence ಪ್ರಶಸ್ತಿ ಮತ್ತು ಸಮ್ಮೇಳನ- 2025 ಕಾರ್ಯಕ್ರಮದಲ್ಲಿ ಕರ್ನಾಟಕದ ಕೆಎಸ್ಆರ್ಟಿಸಿ ಸಾರಿಗೆ ಸಂಸ್ಥೆ ಒಟ್ಟು ಎರಡು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಕೈಗೊಂಡಿರುವ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮ ಗಳಿಗಾಗಿ ಚಿನ್ನದ ವರ್ಗದಲ್ಲಿ ಅಪೆಕ್ಸ್ ಇಂಡಿಯಾ ಮಾನವ ಸಂಪನ್ಮೂಲ ಶ್ರೇಷ್ಠತೆ ಪ್ರಶಸ್ತಿ ಮತ್ತು 2600 ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿನ ಪಾರದರ್ಶಕತೆ, ತ್ವರಿತ, ತಂತ್ರಜ್ಞಾನ ಅವಲಂಬಿತ ಪ್ರಕ್ರಿಯೆಗೆ ಅಪೆಕ್ಸ್ ಇಂಡಿಯಾ ಮಾನವ ಸಂಪನ್ಮೂಲ ಧಾರಣಾ ಶ್ರೇಷ್ಠತೆ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಗಳನ್ನು ಉದಯಪುರ (ರಾಜಸ್ಥಾನ) ದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀ ಎಸ್ ಸಿ ಬಾಸಿನ್, ಮಾಜಿ ಪ್ರಧಾನ ವ್ಯವಸ್ಥಾಪಕರು SAIL ಮತ್ತು ರಾಯಲ್ ಹೌಸ್ ಆಪ್ ಮೇವಾರ್ ರಾಜಕುಮಾರಿ ಜಾನ್ಹವಿ ಕುಮಾರಿ ರವರು ಶ್ರೀ ಜಿ…
ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಭಟ್ಕಳ ತಾಲೂಕಿನಲ್ಲಿ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಬಿದ್ದು ಐದು ವರ್ಷದ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಭಟ್ಕಳದ ಜಾಲಿ ಬೀಚ್ ರೆಸಾರ್ಟ್ ನಲ್ಲಿ ಈ ಒಂದು ದುರಂತ ಸಂಭವಿಸಿದೆ ಮೃತ ಬಾಲಕನನ್ನು ಮೊಹಮ್ಮದ್ ಮುಸ್ತಕಿಂ (5) ಎಂದು ತಿಳಿದುಬಂದಿದೆ. ತಾಯಿ ಹಾಗೂ ತಮ್ಮನ ಜೊತೆಗೆ ತೆರಳಿದಾಗ ಈ ದುರಂತ ಸಂಭವಿಸಿದೆ. ಮೃತ ಬಾಲಕನ ತಂದೆ ಸ್ಥಳೀಯ ಮದ್ರಸಾ ಶಾಲೆಯ ಶಿಕ್ಷಕ ಮೌಲಾನಿ ಶಾಹಿದುಲ್ಲಾ ಎನ್ನುವವರ ಮಗ ಎಂದು ತಿಳಿದುಬಂದಿದೆ. ತಾಯಿ ಹಾಗೂ ತಮ್ಮನ ಜೊತೆಗೆ ರೆಸಾರ್ಟ್ ಗೆ ಬಾಲಕ ತೆರಳಿದ್ದಾನೆ ಈ ವೇಳೆ ಸ್ವಿಮ್ಮಿಂಗ್ ಪೂಲ್ ನಲ್ಲಿ ಬಾಲಕ ಬಿದ್ದಾಗ ತಕ್ಷಣ ತಾಯಿ ಆತನನ್ನು ಮೇಲಕ್ಕೆ ಎತ್ತಿದ್ದಾರೆ ಆದರೆ ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಆತ ಸಾವನಪ್ಪಿದ್ದ ಭಟ್ಕಳ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯಗಳಲ್ಲಿ ಕೃಷ್ಣಮೃಗಗಳ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಸಾಕು ಪ್ರಾಣಿಗಳಿಗೂ ಗಳಲೆ ರೋಗ ಹರಡುತ್ತಿದೆ. ಸಾಕು ಪ್ರಾಣಿಗಳಿಗೆ ಹಿಮೋರೆಜಿಕ್ ಸೇಪ್ಟಿಸೀಮಿಯ ಸೋಂಕು ಹರಡುತ್ತಿದೆ. ಹೌದು ಇತ್ತೀಚಿಗೆ ಚೆನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣ ಮೃಗಗಳ ಸಾವನಪ್ಪಿದ್ದವು ಬೆಳಗಾವಿ ತಾಲೂಕಿನ ಭೂತ ರಾಮನ ಹಟ್ಟಿ ಬಳಿ ಇರುವ ಕಿರು ಮೃಗಾಲಯದಲ್ಲಿ ಸಾವನ್ನಪ್ಪಿದ್ದವೇ ಎಚ್.ಎಸ್ ಬ್ಯಾಕ್ಟೀರಿಯಾ ಸೋಂಕಿನಿಂದ ರೈತರಲ್ಲಿ ಆತಂಕ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಗಂಟು ರೋಗದಿಂದ ಈಗಾಗಲೇ ಏಳು ಜಾನುವಾರುಗಳು ಸಾವನ್ನಪ್ಪಿದ್ದು ಮೃತ ಜಾನುವಾರುಗಳಿಗೆ ಹಿಮೋರೆಜಿಕ್ ಸೇಪ್ಟಿಸೀಮಿಯ ಸೋಂಕು ತಗುಲಿರುವ ಹಿನ್ನೆಲೆ ಜನರಿಗೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು : ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಒತ್ತುವರಿ ಹಾಗೂ ದೇವರ ಹೆಸರಲ್ಲಿ ರಿಯಲ್ ಎಸ್ಟೇಟ್ ನಡೆಸಲು ಅವಕಾಶ ನೀಡಲಾಗದು ಎಂದು ಹೈಕೋರ್ಟ್ ಖಡಕ್ ತೀರ್ಪು ನೀಡಿದೆ. ಅರ್ಜಿಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಜಾಗ ಸರ್ಕಾರಕ್ಕೆ ಸೇರಿದ್ದು. ಸರ್ಕಾರಿ ಜಾಗದಲ್ಲಿ ನೀವು ಹಕ್ಕು ಸಾಧಿಸಲು ಬರುವುದಿಲ್ಲ. ಸರ್ಕಾರಿ ಜಾಗ ಇದ್ದಾಗ ನಿಮಗೆ ಯಾವುದೇ ರಕ್ಷಣೆ ಅಥವಾ ಪರಿಹಾರ ನೀಡಲಾಗದು ಎಂದು ಹೈಕೋರ್ಟ್ ಹೇಳಿತು. ಕೋಲಾರ ತಾಲೂಕು ವೇಮಗಲ್ ಹೋಬಳಿಯ ಕ್ಯಾಲನೂರು ಗ್ರಾಮದ ಸರ್ಕಾರಿ ಶಾಲೆ ಕಾಂಪೌಂಡ್ ಗೋಡೆ ಹಾಗೂ ಗ್ರಾಮದ ರಸ್ತೆಯ ಸರ್ಕಾರಿ ಜಾಗದಲ್ಲಿ ಕಟ್ಟಲಾಗಿರುವ ಮಳಿಗೆಗಳ ತೆರವಿಗೆ ತಹಶೀಲ್ದಾರ್ ಜಾರಿಗೊಳಿಸಿರುವ ನೋಟಿಸ್ ಪ್ರಶ್ನಿಸಿ ಗ್ರಾಮದ ವಿರಾಟ್ ಹಿಂದೂ ಸೇವಾ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಜಾಮೀಯಾ ಮಸ್ಜಿದ್ ಕಮಿಟಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿವೆ. ಅರ್ಜಿದಾರರು ಮಳಿಗೆಗಳನ್ನು ಕಟ್ಟಿರುವ ಜಾಗ ಸರ್ಕಾರಿ ಜಮೀನು ಎಂದು ಗೊತ್ತಾದಾಗ, ಸರ್ಕಾರಿ ಜಾಗದಲ್ಲಿ ಧಾರ್ಮಿಕ ಸಂಸ್ಥೆಗಳ ಕೆಲಸ ಏನಿದೆ?, ಮಳಿಗೆಗಳನ್ನು ಕಟ್ಟಿ ಅವುಗಳನ್ನು ಬಾಡಿಗೆಗೆ ಕೊಟ್ಟು…
ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಸುಮಾರು 14 ಕೆಜಿ ಹೆಚ್ಚು ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿ ಆರ್ ಐ ಅಧಿಕಾರಿಗಳು ಇದೀಗ ನಟಿ ರನ್ಯಾರಾವ್ ಸೇರಿದಂತೆ ನಾಲ್ವರ ವಿರುದ್ಧ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದರು. ಹೌದು ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣ ಸಂಬಂಧ ತನಿಖೆ ಪೂರ್ಣಗೊಳಿಸಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ನಟಿ ರನ್ಯಾರಾವ್ ಸೇರಿ ನಾಲ್ವರು ಆರೋಪಿಗಳ ವಿರುದ್ಧ ನಗರದ ವಿಶೇಷ ಆರ್ಥಿಕ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಬಂಧನಕೊಳ್ಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರನ್ಯಾರಾವ್ ಮತ್ತು ಆಕೆಯ ಸ್ನೇಹಿತ ತರುಣ್ ಕೊಂಡರಾಜು ಹಾಗೂ ಅವರಿಂದ ಚಿನ್ನ ಖರೀದಿಸಿದ್ದ ಸಕಾರಿಯಾ ಜೈನ್ ಮತ್ತು ಭರತ್ ಕುಮಾರ್ ಜೈನ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಆರೋಪಪಟ್ಟಿಯು 2,200 ಪುಟಗಳನ್ನು ಹೊಂದಿದ್ದು, ಅದರಲ್ಲಿ 350 ಪುಟಗಳ ಸಾಕ್ಷಿಗಳ ಹೇಳಿಕೆಯನ್ನು ಪಡೆಯಲಾಗಿದೆ. ಚಾರ್ಜ್ ಶೀಟ್ ನಲ್ಲಿ ಏನಿದೆ? 2025ರ ಮಾರ್ಚ್ 3ರ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14…














