Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು ಪ್ರಿಯಕರನೀಗಾಗಿ ಗಂಡನನ್ನು ಜೈಲಿಗೆ ಕಳುಹಿಸಲು ಪತ್ನಿ ಒಬ್ಬಳು ಬಾರಿ ಸ್ಕೆಚ್ ಹಾಕಿದ್ದಾಳೆ. ಪತಿಯನ್ನು ಕೊಲೆಗಾರನನ್ನಾಗಿ ಮಾಡಲು ಪತ್ನಿ ಪ್ಲಾನ್ ಮಾಡಿದ್ದಳು. ಅದರಂತೆ ಹೆಂಡತಿಯ ಖತರ್ನಾಕ್ ಪ್ಲಾನ್ ಇಂದ ಜೈಲು ಪಾಲದ ಪತಿ. ಆನೇಕಲ್ ನಲ್ಲಿ ಅಣ್ಣನ ಕೊಂದು ಆಂಥೋನಿ ಎಂಬಾತ ಜೈಲು ಪಾಲಾಗಿದ್ದಾನೆ. ಪ್ರಿಯಕರಣಿಗಾಗಿ ಗಂಡನನ್ನು ಪತ್ನಿ ಜೈಲಿಗೆ ಕಳುಹಿಸಿದ್ದಾಳ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದ್ದು, ಅಣ್ಣನನ್ನೇ ಕೊಂದು ತಮ್ಮ ಆಂಥೋನಿ ಜೈಲು ಸೇರಿದ್ದಾನೆ. ಆಂತೋನಿ ಪತ್ನಿ ರೋಜಿಗೆ ರಾಜೇಶ್ ಎಂಬಾತನ ಜೊತೆ ಲವ್ ಆಗಿದ್ದು ಪ್ರಿಯಕರನ ಜೊತೆಗೆ ಇರಲು ಗಂಡ ಆಂಥೋನಿ ಅಡ್ಡಿಯಾಗಿದ್ದ. ಕುಡಿತದ ನೆಪ ಒಡ್ಡಿ ಪತಿಯನ್ನು ರಿಹಾಬ್ ಸೆಂಟರ್ಗೆ ಪತ್ನಿ ದಾಖಲು ಮಾಡಿದ್ದಳು. 18 ತಿಂಗಳು ಬಳಿಕ ಪತಿ ಆಂಥೋನಿ ವಾಪಸ್ ಆಗಿದ್ದ. ಆತನ ಜೊತೆ ಜೀವನ ನಡೆಸಲು ಶರತ್ತು ಹಾಕಿದ್ದಳು. ತಾಯಿ ಅಣ್ಣ ತಮ್ಮ ಕೊಲ್ಲುವಂತೆ ಒತ್ತಡ ಹಾಕಿದ್ದಳು.…
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಶಿಕ್ಷಕರಿಂದಲೇ ವಿದ್ಯಾರ್ಥಿಗೆ ಥಳಿಸಿರುವ ಘಟನೆ ವರದಿಯಾಗಿದ್ದು, ಈ ಹಿನ್ನೆಲೆ ಮಕ್ಕಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಶಾಲೆಗೆ ಭೇಟಿ ನೀಡಿ 5 ದಿನಗಳಲ್ಲಿ ವರದಿ ನೀಡುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ಮಕ್ಕಳ ರಕ್ಷಣಾ ಆಯೋಗ ಸೂಚನೆ ನೀಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ವಿದ್ಯಾನಿಧಿ ಖಾಸಗಿ ಶಾಲೆಯಲ್ಲಿ ಈ ಒಂದು ಘಟನೆ ನಡೆದಿತ್ತು. 8ನೇ ತರಗತಿ ವಿದ್ಯಾರ್ಥಿ ಸುಶಾಂತ್ ಗೆ ಶಿಕ್ಷಕರು ಥಳಿಸಿರುವ ಆರೋಪ ಕೇಳಿ ಬಂದಿದೆ. ಶಾಲೆಯ ಆಡಳಿತ ಮಂಡಳಿಯ ವಿರುದ್ಧ ಪೋಷಕರು ಇದೀಗ ಅಕ್ರೋಶ ಹೊರಹಾಕಿದ್ದಾರೆ.
ಕೊಡಗು : ಇತ್ತೀಚಿಗೆ ಐಟಿ ಅಧಿಕಾರಿಗಳ ದಾಳಿಯ ಭೀತಿ ಹಾಗು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕಾನ್ಫಿಡೆಂಟ್ ಚೇರ್ಮನ್ ಖ್ಯಾತ ಉದ್ಯಮಿ ಸಿಜೆ ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಕರ್ನಾಟಕದಲ್ಲಿ ಮತ್ತೊಬ್ಬ ಉದ್ಯಮಿ ತನ್ನ ಕುಟುಂಬದ ಜೊತೆಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಸಜೀರ್ ಎನ್ನುವ ವ್ಯಕ್ತಿ ಕಾರಿನಲ್ಲಿ ತನ್ನ ಕುಟುಂಬದ ಜೊತೆಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಘಟನೆಯಲ್ಲಿ ಸಜೀರ್ ಸಾವನ್ನಪ್ಪಿದ್ದು, ಸಜೀರ್ ಪತ್ನಿ ಹಾಗೂ ಅವರ ಇಬ್ಬರು ಮಕ್ಕಳನ್ನು ಸ್ಥಳೀಯರು ಕಾಪಾಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಡಗು ಮೂಲದ ಉದ್ಯಮಿ ಸಜೀರ್, ಕೇರಳದ ವಯನಾಡ್ ನಿವಾಸಿ ಬಾಪು ಎಂಬುವವರಿಗೆ ಸುಮಾರು 20 ಲಕ್ಷ ರೂಪಾಯಿ ಸಾಲ ನೀಡಿದ್ದರು ಎನ್ನಲಾಗಿದೆ. ಆದರೆ, ಸಾಲ ಪಡೆದಿದ್ದ ಬಾಪು ಹಣವನ್ನು ವಾಪಸ್ ನೀಡದೆ ಸಜೀರ್ ಅವರಿಗೆ ಹಲವು ತಿಂಗಳಿನಿಂದ ಸತಾಯಿಸುತ್ತಿದ್ದ ಎನ್ನಲಾಗಿದೆ. ಇದರಿಂದ ಕಂಗಾಲಾಗಿದ್ದ ಸಜೀರ್, ಹಣ ವಾಪಸ್ ಪಡೆಯಲು ಅಂತಿಮ ಪ್ರಯತ್ನವಾಗಿ ಕುಟುಂಬ…
ಬೆಂಗಳೂರು : ಸಾಮಾನ್ಯವಾಗಿ ದುಡ್ಡು ಬಂಗಾರ ಬೆಳ್ಳಿ ಅಥವಾ ಯಾವುದೇ ಬೆಲೆ ಬಾಳುವ ವಸ್ತು ಕಳೆದುಕೊಂಡರೆ ದೂರು ನೀಡುವುದನ್ನು ಕೇಳಿದ್ದೇವೆ ಆದರೆ ಬೆಂಗಳೂರಿನಲ್ಲಿ ವಿಚಿತ್ರ ಘಟನೆ ಒಂದು ನಡೆದಿದ್ದು, ಗರ್ಭಿಣಿ ಬೆಕ್ಕನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ವ್ಯಕ್ತಿ ಒಬ್ಬರು ದೂರು ನೀಡಿದ ಹಿನ್ನೆಲೆಯಲ್ಲಿ 9 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಗರ್ಭಿಣಿ ಬೆಕ್ಕು ಕಿಡ್ನಾಪ್ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ. ಬೆಂಗಳೂರಿನಲ್ಲಿ 9 ಜನರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ 9 ಜನರ ವಿರುದ್ಧ fir ದಾಖಲಾಗಿದೆ. ವ್ಯಾನ್ಶಿ ಸಾಲೆಟರ್ ಅಪಾರ್ಟ್ಮೆಂಟ್ನಲ್ಲಿದ್ದ ಬೆಕ್ಕನ್ನು ಕಿಡ್ನಾಪ್ ಮಾಡಿದ್ದಾರೆ. ಅಪಾರ್ಟ್ಮೆಂಟ್ ಸಿಬ್ಬಂದಿ ಸ್ಥಳಾಂತರ ಮಾಡಿದ್ದಾರೆ ಎಂದು ಹರೀಶ್ ದೂರು ನೀಡಿದ್ದಾರೆ. ಅಪಾರ್ಟ್ಮೆಂಟ್ ಅಧ್ಯಕ್ಷ ಶ್ರೀ ರಾಮ್ ಸೆಕ್ಯೂರಿಟಿ ಮ್ಯಾನೇಜರ್ ಸೇರಿದಂತೆ ಒಟ್ಟು ಒಂಬತ್ತು ಜನರ ವಿರುದ್ಧ ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು fir ದಾಖಲಿಸಿಕೊಂಡಿದ್ದಾರೆ.
ಁಅವಿನಾಶ್ ಆರ್ ಭೀಮಸಂದ್ರ ಬೆಂಗಳೂರು: ಕರ್ನಾಟಕ ಮೂಲದ ಒಂದೇ ಕುಟುಂಬದ ನಾಲ್ವರು ಬಿಹಾರದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಪುತ್ರನಿಗೆ ಆನ್‌ಲೈನ್ ಗೇಮ್ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಮೃತರನ್ನು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನವರು ಎನ್ನಲಾಗಿದೆ. ಗುಬ್ಬಿಯಿಂದ ಅವರು ಕೆಲ ದಿನಗಳ ಹಿಂದೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ವಾಸ ಮಾಡುತ್ತಿದ್ದಾರೆ. ಇಡೀ ಕುಟುಂಬ ನೇಪಾಳ ಹಾಗು ಬಿಹಾರಕ್ಕೆ ಪ್ರವಾಸಕ್ಕೆ ಹೋದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ಬಿಹಾರದ ನಳಂದ ಜಿಲ್ಲೆಯ ಧರ್ಮಶಾಲೆ ರೂಮ್ ಬುಕ್ ಮಾಡಿದ್ದರು ಎನ್ನಲಾಗಿದೆ. ಸದ್ಯ ಘಟನೆ ಬಗ್ಗೆ ಸ್ಥಳೀಯ ಬಿಹಾರದ ಪೊಲೀಸರು ಮೃತರ ಸಂಬಂಧಿಕರಿಗೆ ಮಾಹಿತಿಯನ್ನು ನೀಡಿದ್ದಾರೆ ಎನ್ನಲಾಗಿದೆ. ಮೃತರನ್ನು ಜಿ.ಆರ್. ಸುಮಂಗಲಾ (78 ) ಮಗ ಜಿ.ಆರ್. ನಾಗಪ್ರಸಾದ್, (50) ಸಹೋದರಿಯರಾದ ಜಿ.ಆರ್. ಶಿಲ್ಪಾ (48) –.ಆರ್. ಶ್ರುತಾ (43) ಎಂದು ಗುರುತಿಸಲಾಗಿದೆ. ಮೃತರನ್ನು ಜಿ.ಆರ್. ಸುಮಂಗಲ (78), ಅವರ ಪುತ್ರಿಯರಾದ ಶಿಲ್ಪಾ ಜಿ.ಆರ್. (48) ಮತ್ತು ಶ್ರುತಾ ಜಿ.ಬಿ. (43) ಮತ್ತು ಪುತ್ರ ಜಿ.ಆರ್. ನಾಗ…
ಹಾವೇರಿ : ಕಳೆದ ಡಿಸೆಂಬರ್ ನಲ್ಲಿ ಕರ್ನಾಟಕ ಗೋವಾ ಗಡಿ ಭಾಗದ ಚೋರ್ಲ ಘಾಟ್ ಸಮೀಪ 400 ಕೋಟಿ ರೂಪಾಯಿ ಇದ್ದ ಕಂಟೇನರ್ ನನ್ನ ಕಳ್ಳರು ದರೋಡೆ ಮಾಡಿದ್ದಾರೆ. ಈ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಕಳ್ಳರು ಹಾವೇರಿಯಲ್ಲಿ ಚಲಿಸುತ್ತಿದ್ದ ಲಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೊಬೈಲ್ ಕಳ್ಳತನ ಮಾಡಿದ್ದಾರೆ. ಹೌದು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಿನಿಮೀಯ ರೀತಿಯಲ್ಲಿ ಕಳ್ಳತನ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳಲ್ಲಿ ಬಹುಮೌಲ್ಯದ ವಸ್ತು ಸಾಗಿಸುವ ವಾಹನಗಳನ್ನೇ ಟಾರ್ಗೆಟ್ ಮಾಡುತ್ತಿರುವ ಖದೀಮರು, ವಾಹನ ಚಲಿಸುತ್ತಿದ್ದಂತೆಯೇ ಕಳ್ಳತನ ಮಾಡಿ ತಮ್ಮ ಕೈಚಳಕ ತೋರಿಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಕಾಕೋಳ ಮತ್ತು ಮೊಟೇಬೆನ್ನೂರು ಮಧ್ಯದಲ್ಲಿ ಈ ಕಳ್ಳತನ ನಡೆದಿದೆ. ಕಳೆದ ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿನ ಬಂದಿದೆ. ಇ-ಕಾಮರ್ಸ್ ಕಂಪನಿಯೊಂದಕ್ಕೆ ಸೇರಿದ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳು ಬೆಂಗಳೂರಿನಿಂದ ಧಾರವಾಡದ ಕೊಟೂರು ಗ್ರಾಮದ ವೇರಹೌಸ್ಗೆ ಹೋಗುತ್ತಿದ್ದ ವೇಳೆ ಕಳ್ಳತನವಾಗಿದೆ. ಗೂಡ್ಸ್ ಲಾರಿ KA-22…
ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ನಿನ್ನ ಸಹ ಬಿಎಂಟಿಸಿ ಬಸ್ ಯುವತಿಯ ಮೇಲೆ ಹರಿದು ಸ್ಥಳದಲ್ಲಿ ಯುವತಿ ಸಾವನಪ್ಪಿರುವ ಘಟನೆ ವರದಿಯಾಗಿದೆ. ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ ಈ ಒಂದು ಘಟನೆ ನಡೆದಿದೆ. ಹೌದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಗೆ ಮತ್ತೊಂದು ಮತ್ತೊಂದು ಬಲಿಯಾಗಿದೆ. ಬೈಕ್ ಮೇಲೆ ಹೋಗುತ್ತಿದ್ದವರಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಬ್ಯಾಲೆನ್ಸ್ ತಪ್ಪಿ ಬಸ್ ಚಕ್ರದ ಅಡಿ ಯುವತಿ ಬಿದ್ದಿದ್ದಾಳೆ. ಆಗ ಯುವತಿಯ ತಲೆಯ ಮೇಲೆ ಬಸ್ ಚಕ್ರ ಹರಿದು ಹೋಗಿದೆ. ನಿನ್ನೆ ಬೆಳಿಗ್ಗೆ 9:30 ಸುಮಾರಿಗೆ ಈ ಒಂದು ಘಟನೆ ನಡೆದಿದ್ದು ಮೃತ ಯುವತಿಯನ್ನ ಮಣಿಪುರದ ಹನ್ನಾ ಇನಕ (20) ಎಂದು ತಿಳಿದು ಬಂದಿದೆ
ಮೈಸೂರು : ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಲಾರಿ ಹರಿದು ಬೈಕ್ನಲ್ಲಿ ಇದ್ದ ಇಬ್ಬರೂ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಇದೀಗ ವರದಿಯಾಗಿದೆ. ನಂಜನಗೂಡಿನ ಹಣಮನ ಪುರ ಗೇಟುವಳಿ ಒಂದು ಅಪಘಾತ ಸಂಭವಿಸಿದ್ದು, ಚಂದ್ರು (38) ಶೀಲ (35) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಚುಂಚನಹಳ್ಳಿ ಕಡೆಗೆ ತೆರಳುವಾಗ ಗೊಬ್ಬರ ತುಂಬಿದ ಲಾರಿ ಡಿಕ್ಕಿ ಹೊಡೆದಾಗ ಲಾರಿ ಬೈಕ್ ಮೇಲೆ ಹರಿದು ಸ್ಥಳದಲ್ಲೇ ಇಬ್ಬರು ಸಾವನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ರಘು ಸಿಪಿಐ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಕೋಲಾರ : ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಭೂಸಾಲಕುಂಟೆ ಕೆರೆಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ನವಜಾತ ಗಂಡು ಮಗುವಿನ ಶವ ಪತ್ತೆಯಾಗಿದೆ. ಆಗತಾನೆ ಜನಿಸಿದ ನವಜಾತ ಮಗುವನ್ನು ಕೆರೆಯಲ್ಲಿ ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗುತ್ತಿದೆ. ಘಟನ ಸ್ಥಳಕ್ಕೆ ಮುಳಬಾಗಿಲು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಭಯೋತ್ಪಾದಕ ಸಾವನಪ್ಪಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಡರಾತ್ರಿ ಸಾಧಿಕ್ ಪಾಷಾ (47) ಇದೀಗ ಸಾವನಪ್ಪಿದ್ದಾನೆ. ಕಳೆದ ಆರು ತಿಂಗಳಿನಿಂದ ಲೋ ಬಿಪಿ ಮತ್ತು ಹೈ ಶುಗರ್ ಸೇರಿದಂತೆ ಕೆಲ ಅನಾರೋಗ್ಯ ಸಮಸ್ಯೆಯಿಂದ ಶಂಕಿತ ಭಯೋತ್ಪಾದಕ ಬಳಲುತ್ತಿದ್ದ. ಕಳೆದ 2020 ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಇದ್ದ. ಸುದ್ದಗುಂಟೆಪಾಳ್ಯ ಸ್ಪೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಜೈಲು ಸೇರಿದ್ದ. ಪ್ರಕರಣ ಸಂಬಂಧ NIA ಅಧಿಕಾರಿಗಳು ಸಾಧಿಕ್ ಪಾಶ ಸೇರಿದಂತೆ 6 ಶಂಕಿತರನ್ನು ಅರೆಸ್ಟ್ ಮಾಡಿದ್ದರು. ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.














