Author: kannadanewsnow05

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜಕೀಯ ನಾಯಕರ ಪರಸ್ಪರ ವಾಕ್ಸಮರ ತಾರಕಕ್ಕೆ ಏರಿದ್ದು, ಇಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ನನ್ನ ಬಳಿ ಇರುವ ದಾಖಲೆಗಳನ್ನು ಏನಾದರೂ ಬಿಡುಗಡೆ ಮಾಡಿದರೆ ಐದರಿಂದ ಆರು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇಂದು ಬೆಳಗ್ಗೆ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ,ನನ್ನನ್ನು ಜೈಲಿಗೆ ಕಳುಹಿಸಲು ಸರ್ಕಾರ ಹುನ್ನಾರ ನಡೆಸಿದೆ. 12 ವರ್ಷದ ಹಳೆಯ ಕೇಸಲ್ಲಿ ಜೈಲಲ್ಲಿ ಕಳುಹಿಸೋಕೆ ಸಾಧ್ಯವಿಲ್ಲ. ರಾಜೀನಾಮೆ ನೀಡುವ ಸ್ಥಿತಿ ಬಂದರೆ ನಾನೇ ಕೊಡುತ್ತೇನೆ.ಕಣ್ಣಲ್ಲಿ ನೀರು ಹಾಕಿಸಿದವರು ನಾಶ ಆಗ್ತಾರೆ. ಎಲ್ಲರೂ ನಾಶ ಆಗುತ್ತಾರೆ. ಈಗ ಅದೇ ಆಗುತ್ತಿದೆ ಎಂದು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಎಸ್‌ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಆರೋಪ ಮಾಡಿದ ಹೆಚ್‌ಡಿಕೆ ಮಾನ್ಯತಾ ಟೆಕ್ ಪಾರ್ಕ್ ಬಳಿ 38 ಫ್ಲೋರ್ ಮನೆ ಕಟ್ಟುತ್ತಿದ್ದಾರೆ. ಈ ಹಿಂದೆ ಚಂದ್ರಶೇಖರ್ ಮೇಲೆ ಎಫ್‌ಐಆರ್ ಆಗಿದೆ.…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿತ್ತು. ಈ ಒಂದು ತೀರ್ಪಿನ ಕುರಿತಾಗಿ ಸಚಿವ ಜಮೀರ್ ಅಹ್ಮದ್ ಹೈಕೋರ್ಟ್ ಆದೇಶ ರಾಜಕೀಯ ತೀರ್ಪು ಆಗಿದೆ ಎಂದು ಲಘುವಾಗಿ ಮಾತನಾಡಿದ್ದರು.ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಟಿಜೆ ಅಬ್ರಹಾಂ ಸಚಿವ ಜಮೀರ್ ಅಹ್ಮದ್ ವಿರುದ್ಧ ಹೈಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಹೌದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್​ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಸಚಿವ ಜಮೀರ್​ ಅಹ್ಮದ್​ ಖಾನ್​ ಲಘುವಾಗಿ ಮಾತನಾಡಿದ್ದರು. ಸಿದ್ದರಾಮಯ್ಯ ಅವರ ವಿರುದ್ಧ ​ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಈ ಒಂದು ತೀರ್ಪು ಕುರಿತು, ಕಾಂಗ್ರೆಸ್​ ಮುಖಂಡ ಜಮೀರ್ ಅಹ್ಮದ್​ ಖಾನ್ ಹೈಕೋರ್ಟ್​ ಆದೇಶ ರಾಜಕೀಯ ತೀರ್ಪು ಎಂದು ಹೇಳಿದ್ದರು. ಇದು ಜಮೀರ್ ಅಹ್ಮದ್​ ಖಾನ್ ಅವರಿ​ಗೆ ಸಂಕಷ್ಟ ತಂದೊಡ್ಡಿದೆ. ಈ…

Read More

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ಶಿರೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇರಳ ಮೂಲದ ಚಾಲಕ ಅರ್ಜುನ್ ನ ಮರಣೋತ್ತರ ಪರೀಕ್ಷೆ ಅಂತ್ಯವಾಗಿದೆ. 73 ದಿನದ ಬಳಿಕ ಅರ್ಜುನನ ಮೃತ ದೇಹವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಹೌದು, ಕಾರವಾರದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕೇರಳ ಮೂಲದ ಚಾಲಕ ಅರ್ಜುನ ಮೃತ ದೇಹದ ಮರಣೋತ್ತರ ಪರೀಕ್ಷೆ ಅಂತ್ಯವಾಗಿದ್ದು ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಎರಡು ದಿನಗಳ ಹಿಂದೆ ಗಂಗಾವಳಿ ನದಿಯಲ್ಲಿ ಚಾಲಕ ಅರ್ಜುನ್ ಹಾಗೂ ಆತನ ಲಾರಿ ಪತ್ತೆಯಾಗಿತ್ತು . ಇದೀಗ ಮೃತ ದೇಹವನ್ನು ವೈದ್ಯರು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದು, ಜಿಲ್ಲಾಡಳಿತದಿಂದ ಪ್ರಕೃತಿ ವಿಕೋಪದ ಅಡಿ 5 ಲಕ್ಷ ಪರಿಹಾರ ವಿತರಿಸಲಾಗಿದೆ

Read More

ತುಮಕೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸಲಾಯಿತು. ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಯಾವುದೇ ಅಭ್ಯಂತರ ಇಲ್ಲ ಎಂದು ತುಮಕೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮೇಲೆ ಎಫ್ಐಆರ್ ದಾಖಲು ವಿಚಾರವಾಗಿ ಸಚಿವ ಡಾ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ನಾವು ಮೊದಲಿನಿಂದ ಹೇಳುತ್ತಿದ್ದೇವೆ ಯಾವ ತನಿಖೆಗೂ ಸಿದ್ದ ಎಂದು. ಮುಖ್ಯಮಂತ್ರಿ ಕೂಡ ತನಿಖೆಗೆ ಸಿದ್ದ ಅಂತ ಹೇಳಿದ್ದಾರೆ. ಹಾಗಾಗಿ ತನಿಖೆಗೆ ಯಾವ ಅಭ್ಯಂತರವಿಲ್ಲ ತನಿಖಾ ವರದಿಯ ಆಧಾರದ ಮೇಲೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.

Read More

ಬೆಂಗಳೂರು : ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ಮೇಲೆ ಎಫ್ ಐ ಆರ್ ದಾಖಲಾಗಿತ್ತು. ಈ ಒಂದು FIR ಗೊಳಿಸುವಂತೆ ಕೋರಿ ಹೆಚ್ ಡಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಅಕ್ಟೋಬರ್ 30ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ರೇವಣ್ಣ ವಿರುದ್ಧ ದಾಖಲಾಗಿದ್ದ ಈ FIR ರದ್ದು ಸಂಬಂಧದ ಅರ್ಜಿ ವಿಚಾರಣೆ ಇಂದು ನಡೆಸಿರುವ ಹೈಕೋರ್ಟ್​​​​​​​​ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠವು, ಕಾಲಾವಕಾಶದ ಕೊರತೆಯ ಹಿನ್ನೆಲೆಯಲ್ಲಿ ಮುಂದಿನ ವಿಚಾರಣೆಯನ್ನು ಅ.30ಕ್ಕೆ ಮುಂದೂಡಿದೆ.

Read More

ಮಂಡ್ಯ : ಇತ್ತೀಚಿಗೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ, ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಗಣೇಶ ಮೂರ್ತಿಯ ಮೇಲೆ ಕಲ್ಲೇಸೆತ ಹಾಗೂ ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಈ ಒಂದು ಪ್ರಕರಣದಲ್ಲಿ ಬಂಧಿತರಾಗಿದ್ದ 55 ಆರೋಪಿಗಳಿಗೆ ಜಾಮೀನು ಮಂಜೂರು ನೀಡಲಾಗಿದೆ. ಹೌದು ನಾಗಮಂಗಲದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆಯ ಮೇಲೆ ಕಲ್ಲು ಎಸೆತ ಹಾಗೂ ಚಪ್ಪಲಿ ಎಸೆತ ಪ್ರಕರಣ ನಡೆದಿತ್ತು. ಸೆಪ್ಟೆಂಬರ್ 11ರಂದು ಆರೋಪಿಗಳು ಬಂಧನ ವಾಗಿದ್ದರು. ನಾಳೆ ನಾಡಿದ್ದು ರಜೆ ಹಿನ್ನೆಲೆಯಲ್ಲಿ ಆರೋಪಿಗಳನ್ನು ಸೋಮವಾರ ಬಿಡುಗಡೆಯಾಗಲಿದ್ದಾರೆ.ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ಗಲಾಟೆ ನಡೆದಿತ್ತು. ನಾಗಮಂಗಲ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಪ್ರತಿಭಟನೆ ಹೋರಾಟಗಳನ್ನು ನಡೆಸಿದ್ದರು.ಇದೀಗ ಬಂಧಿತ 55 ಆರೋಪಿಗಳಿಗೆ ಜಾಮೀನು ಮಂಜೂರು ನೀಡಲಾಗಿದೆ. ಮಂಡ್ಯದ 1ನೇ ಜಿಲ್ಲಾ ಮತ್ತು ಸಷೇನ್ಸ್ ನ್ಯಾಯಾಲಯ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ.

Read More

ಧಾರವಾಡ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದ ಕೋಡಿಮಠ ಸಂಸ್ಥಾನದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಇಂದು ಕೂಡ ಮತ್ತೊಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. ಭೂಮಿಯಿಂದ ಹೊರಬುರುವ ವಿಷಜಂತುಗಳು ಮನುಕುಲ ನಾಶ ಮಾಡಲಿವೆ ಎಂದು ಅರಸೀಕೆರೆ ಕೋಡಿಮಠ ಸಂಸ್ಥಾನದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭಯಾನಕ ಭವಿಷ್ಯವನ್ನು ನುಡಿದಿದ್ದಾರೆ. ಧಾರವಾಡದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಭೂಮಿಯಿಂದ ವಿಷ ಜತುಗಳು ಹೊರಗೆ ಬರುತ್ತವೆ. ಅವುಗಳಿಂದ ಮನುಷ್ಯ ಕುಲ ನಾಶವಾಗುತ್ತದೆ. ಈ ವಿಷ ಜಂತುಗಳು ಮನುಷ್ಯರನ್ನ ನಾಶ ಮಾಡುತ್ತವೆ. ಇದಕ್ಕೆ ಪೂರಕ ಎಂಬಂತೆ ಈಗಾಗಲೇ ಕಾಡಿನಿಂದ ಪ್ರಾಣಿಗಳು ಊರಿಗೆ ನುಗ್ಗುವುದು ನಡೆದಿದೆ. ಮುಂದಿನ ದಿನಗಳಲ್ಲಿ ಇದು ಇನ್ನೂ ಹೆಚ್ಚಾಗುತ್ತದೆ. ಜಾಗತಿಕ ಮಟ್ಟದಲ್ಲಿ ಯುದ್ಧ ಭೀತಿ ಇದೆ. ಜನರ ಶಾಂತಿ, ಸಹನೆ, ಆರೋಗ್ಯ ಕೆಡುತ್ತದೆ. ಜಾಗತಿಕ ಮಟ್ಟದಲ್ಲಿ ದೊಡ್ಡ ದೊಡ್ಡ ನಗರಗಳಿಗೆ ಆಪತ್ತು ಇದೆ ಎಂದು ಹೇಳಿದರು. ರಾಜ್ಯ ರಾಜಕಾರಣದಲ್ಲಿ ಸಿಎಂ ಸಿದ್ದರಾಮಯ್ಯ…

Read More

ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಬೇಲ್ ಮೇಲೆ ಇದ್ದಾರೆ ಅವರು ಯಾಕೆ ರಾಜೀನಾಮೆ ಕೊಟ್ಟಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದರು. ಇದೀಗ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು, ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಅಂತ ಹೇಳಿದ್ದೆ, ಈ ಪ್ರಕರಣದಲ್ಲಿ ನನಗೆ ಯಾವುದೇ ಗಂಡಾಂತರ ಬರುವುದಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ ನಾನ್ಯಾಕೆ ರಾಜೀನಾಮೆ ಕೊಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು. ಇಂದು ಬೆಂಗಳೂರಿನಲ್ಲಿ ಲೋಕಾಯುಕ್ತ ಕಚೇರಿಯಲ್ಲಿ ಗಂಗೆನಹಳ್ಳಿ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ವಿಚಾರಣೆಯನ್ನು ಎದುರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲ್ವರು ಸಚಿವರು ನನ್ನ ವಿರುದ್ಧ ಹರಿಹಾಯ್ದಿದ್ದರು. ಹಲವಾರು ರೀತಿ ಲಘುವಾಗಿ ಮಾತನಾಡಿರುವುದನ್ನು ಗಮನಿಸಿದ್ದೇನೆ. ನಾನು ಅಧಿಕಾರದಲ್ಲಿದ್ದಾಗ ಯಾವುದೇ ಗಂಡಾಂತರ ಬರುವಂತಹ ಹಾಗೂ ಕಾನೂನುಬಾಹಿರ ಕೆಲಸ ಮಾಡಿಲ್ಲ ಎಂದು ತಿಳಿಸಿದರು. 2015ರಲ್ಲಿ ಸಿದ್ದರಾಮಯ್ಯ ಸರ್ಕಾರ ನಡೆಯುತ್ತಿರುವಾಗ ಆ ಸರ್ಕಾರದ ವಿರುದ್ಧ ಅವತ್ತು ಸಹ ನಾನು…

Read More

ಬೆಂಗಳೂರು : ಬೆಂಗಳೂರಲ್ಲಿ ಮಹಿಳೆಯರಿಗೆ ಯುವತಿಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಾಮುಕರಿಂದ ಮಹಿಳೆಯರು ಮತ್ತು ಯುವತಿಯರು ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದೀಗ ಬ್ಯೂಟಿಷಿಯನ್ ಯುವತಿಗೆ ಆಟೋ ಚಾಲಕನೊಬ್ಬ ಖಾಸಗಿ ಅಂಗ ತೋರಿಸಿ ವಿಕೃತಿ ಮರಿದಿರುವ ಘಟನೆ ರಾಜಾಜಿನಗರದಲ್ಲಿ ನಡೆದಿದೆ. ಹೌದು ರಾಜಾಜಿನಗರದಲ್ಲಿ ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ಮಾಡುವ ಯುವತಿಗೆ ಆಟೋ ಚಾಲಕ ಒಬ್ಬ ಯುವತಿಯನ್ನು ಮಾತ್ರ ಗುರಿಯಾಗಿಸಿಕೊಂಡು, ಆಕೆಯ ಹಿಂದೆ ಬಿದ್ದು ಹೀಗೆ ಖಾಸಗಿ ಅಂಗಾಂಗ ತೋರಿಸಿರುವುದು ಬೆಳಕಿಗೆ ಬಂದಿದೆ. ಅದೂ ಕೂಡ ಹಾಡ ಹಗಲೇ ತೀರಾ ವಿಕೃತಿಯ ರೀತಿಯಲ್ಲಿ ಮಹಿಳೆ ಮುಂದೆ ಪ್ಯಾಂಟ್ ಬಿಚ್ಚಿ ಅಂಗಾಂಗ ತೋರಿಸಿದ್ದಾನೆ. ಯುವತಿ ಮಧ್ಯಾಹ್ನ ಊಟಕ್ಕೆಂದು ತಾನು ಕೆಲಸ ಮಾಡುತ್ತಿದ್ದ ಬ್ಯೂಟಿ ಪಾರ್ಲರ್ ನಿಂದ ಸಮೀಪದಲ್ಲಿರುವ ಮನೆಗೆ ಹೋಗಿ ಬರುತ್ತಾಳೆ. ಯುವತಿಯ ಎಲ್ಲ ಚಟುವಟಿಕೆಗಳನ್ನು ಗಮನಿಸಿದ ಆಟೋ ಚಾಲಕ ರಸ್ತೆಯಲ್ಲಿ ಯಾರು ಇಲ್ಲದ ವೇಳೆ ಆಕೆಯ ಬೆನ್ನು ಬಿದ್ದು ತನ್ನ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ. ಈ ವೇಳೆ ಯುವತಿ ಆಟೋ ಚಾಲಕನಿಗೆ…

Read More

ಬೆಂಗಳೂರು : ಬೆಂಗಳೂರಿನ ಗಂಗೇನಹಳ್ಳಿ ಸರ್ಕಾರಿ ಜಾಗ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಅತ್ತೆ ಹೆಸರಿಗೆ ಡಿನೋಟಿಫೈ ಆಗಿದ್ದು, ಭಾಮೈದನ ಹೆಸರಿಗೆ ರಿಜಿಸ್ಟರ್‌ ಆಗಿದೆ ಎಂದು ಕಾಂಗ್ರೆಸ್ ಇತ್ತೀಚಿಗೆ ದಾಖಲೆಗಳನ್ನು ಬಿಡುಗಡೆ ಮಾಡಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರ ಸಚಿವ HD ಕುಮಾರಸ್ವಾಮಿ ಲೋಕಾಯುಕ್ತ ಅಧಿಕಾರಿಗಳ ವಿಚಾರಣೆಗೆ ಇಂದು ದೆಹಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದಾರೆ. ಹೌದು ಇಂದು ಏರ್ಪೋರ್ಟ್ ನಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ HD ಕುಮಾರಸ್ವಾಮಿ ಆಗಮಿಸಿದ್ದಾರೆ. ಸಂಜೆ ಒಳಗೆ ಹಾಜರಾಗುವುದಾಗಿ ತಿಳಿಸಿದ್ದರು. ಹಾಗಾಗಿ ಇದೀಗ ಹೆಚ್ ಡಿ ಕುಮಾರಸ್ವಾಮಿ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಆಗಮಿಸಿದ್ದಾರೆ. ಈಗಾಗಲೇ ಬಿಎಸ್ ಯಡಿಯೂರಪ್ಪ ವಿಚಾರಣೆ ಎದುರಿಸಿದ್ದಾರೆ. ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ಇದೀಗ ಹೆಚ್ ಡಿ ಕುಮಾರಸ್ವಾಮಿ ವಿಚಾರಣೆ ಎದುರಿಸಲು ಆಗಮಿಸಿದ್ದಾರೆ. ಪ್ರಕರಣ ಹಿನ್ನೆಲೆ? 2007ರಲ್ಲಿ ಬೆಂಗಳೂರಿನ ಗಂಗೇನಹಳ್ಳಿಯ 1.11 ಎಕೆರ ಭೂಮಿಯನ್ನು ಸತ್ತವರ ಹೆಸರಲ್ಲಿ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಜಂಟಿಯಾಗಿ ಡಿನೋಟಿಫೈ ಮಾಡಿಸಿದ್ದರು ಎಂದು…

Read More