Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಇಂದಿನಿಂದ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆಯನ್ನು ನಡೆಸಲಿದ್ದು, ಬೆಂಗಳೂರಿನ ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಅಲ್ಲದೆ ದಾಖಲೆಯ 17ನೇ ಬಾರಿ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ, ಕಾನೂನು, ಕನ್ನಡ ಮತ್ತು ಸಂಸ್ಕೃತಿ, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ, ತೋಟಗಾರಿಕೆ, ಪ್ರವಾಸೋದ್ಯಮ, ಗಣಿ ಮತ್ತು ಭೂವಿಜ್ಞಾನ, ಕಾರ್ಮಿಕ, ಒಳಾಳಡಿತ, ಹಿಂದುಳಿದ ವರ್ಗಗಳ ಕಲ್ಯಾಣ, ಉನ್ನತ ಶಿಕ್ಷಣ ಇಲಾಖೆ ಜೊತೆ ಸಭೆ ನಡೆಸಲಿದ್ದಾರೆ. ಸಿಎಂ ಸಿದ್ದರಾಮಯ್ಯ 17ನೇ ಬಾರಿ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಶಕ್ತಿ ಭವನದಲ್ಲಿ ಎಲ್ಲ ಇಲಾಖೆ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಅಲ್ಲದೆ ಮಾರ್ಚ್ ಮೊದಲ ಅಥವಾ ಎರಡನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂದು ಈ ಹಿಂದೆಯೇ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಹಾಸನ : ಹಾಸನದಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು ಪತಿಗೆ ಅಕ್ರಮ ಸಂಬಂಧ ಇದ್ದಿದ್ದರಿಂದ ಪತ್ನಿ ಹಾಗೂ ಮಗುವನ್ನು ಮನೆಯಲ್ಲಿ ಕೂಡಿಹಾಕಿ ಪತಿ ಪರಾರಿಯಾಗಿರುವ ಘಟನೆ ಹಾಸನ ನಗರದ ಕೆ.ಆರ್.ಪುರಂ ಬಡಾವಣೆಯಲ್ಲಿ ನಡೆದಿದೆ. ನಿಧಾ ಮತ್ತು ಮೊಹಮ್ಮದ್ ಉಮೇರ್ಗೆ ಮದುವೆಯಾಗಿ 10 ವರ್ಷಗಳಾಗಿದ್ದು, ಒಂದು ಗಂಡು ಮಗುವಿದೆ. ಮೊಹಮ್ಮದ್ ಉಮೇರ್ ಮಟನ್ ಚಿಕನ್ ವ್ಯಾಪಾರ ಮಾಡಿ ಸ್ವಂತ ಬಿಲ್ಡಿಂಗ್ ಕಟ್ಟಿಸಿ, ಕೋಟಿ ಕೋಟಿ ಹಣ ಮಾಡಿದ್ದಾನೆ.ಮುದ್ದಾದ ಹೆಂಡತಿ, ಮಗು ಖುಷಿಯಾದ ಸಂಸಾರ ನಡೆಸುತ್ತಿದ್ದ, ಆದರೆ ಇದರ ಮಧ್ಯೆ ಮತ್ತೊಂದು ಮಹಿಳೆ ಎಂಟ್ರಿ ಆಗಿರುವ ಶಂಕೆ ವ್ಯಕ್ತವಾಗಿದೆ. ತನ್ನನ್ನು ರೂಮ್ನಲ್ಲಿ ಬಂಧನ ಮಾಡಿ, ಚಿತ್ರಹಿಂಸೆ ನೀಡಿದ್ದಾನೆ ಎಂದು ಪತ್ನಿಯ ಆರೋಪವಾಗಿದೆ. ಈ ಬಗ್ಗೆ ಮಹಿಳೆ ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ, ನನ್ನನ್ನೂ ಮೂರು ದಿನದಿಂದ ಬಂಧನದಲ್ಲಿ ಇಟ್ಟಿದ್ದಾರೆ ಎಂದು ಆರೋಪಿಸಿದ್ದಾಳೆ. ಪತಿ ಉಮೇರ್ ತನಗೆ ತಲಾಖ್ ನೀಡಲು ಮುಂದಾಗಿದ್ದಾನೆ ಮತ್ತು ಮತ್ತೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ. ಈ ಕಾರಣಕ್ಕಾಗಿ ತನ್ನನ್ನು ಮನೆಯೊಳಗೆ…
ಕಲಬುರ್ಗಿ : ಕಲಬುರ್ಗಿ : ಅಬಕಾರಿ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ನಡೆದಿದೆ ಎಂದು ವಿರೋಧ ಪಕ್ಷದ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದು ಅಲ್ಲದೆ ಸಚಿವ ಆರ್ ಬಿ ತಿಮ್ಮಾಪುರ್ ರಾಜೀನಾಮೆಗೂ ಕೂಡ ಆಗ್ರಹಿಸಿದ್ದರು. ಇದೀಗ ಸರ್ಕಾರದ ಮತ್ತೊಂದು ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ. ಹೌದು ಕಲ್ಬುರ್ಗಿ ಆರ್‌ಟಿಓ ಕಚೇರಿಯಲ್ಲಿ ಹೊರಗುತ್ತಿಗೆ ಸಿಬ್ಬಂದಿಗಳ ಭ್ರಷ್ಟಾಚಾರ ಬೆಳಕಿಗೆ ಬಂದಿದೆ. ಇಲ್ಲಿ ದುಡ್ಡು ಕೊಟ್ಟರೆ ಎಲ್ಲಾ ದಾಖಲೆಗಳು ಸಿಗುತ್ತವೆ. ದುಡ್ಡು ಕೊಟ್ಟರೆ ವಾಹನದ RC ಕಾರ್ಡ್ ಸೇರಿದಂತೆ ಎಲ್ಲ ದಾಖಲೆಗಳನ್ನು ಸಿಕ್ಕ ಸಿಕ್ಕವರಿಗೆ ಹಂಚಲಾಗುತ್ತದೆ. ಇದೀಗ ಈ ಒಂದು ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಸಿಬ್ಬಂದಿಗಳೊಂದಿಗೆ ಮಾತನಾಡಿದ್ದು, ಮೊಬೈಲಲ್ಲಿ ವಿಡಿಯೋ ಮಾಡುವಾಗ ಈಗ ಮಾತನಾಡಿ ನೋಡಣ, ನನ್ನ ಕೆಲಸ ಏನಿದೆ ನಾನು ಮಾಡುತ್ತೇನೆ. ನಿಮ್ಮದೇನಿದೆ ನೀವು ಮಾಡಿ ಅಂತ ಹೇಳಿದಾಗ, ಸಿಬ್ಬಂದಿಯೊಬ್ಬ ನಾನು ಯಾವಾಗ ತಿರುಗಿ ಬೀಳುತ್ತೇನೆ ಗೊತ್ತಿಲ್ಲ. ಸುಮ್ಮನೆ ಹೆದರಿಸುತ್ತಿದ್ದರೆ ಅಂತ ಎಷ್ಟು ಹೆದರಲು ಆಗುತ್ತದೆ?ಒಂದು ಲೆವೆಲ್…
ಮೈಸೂರು : ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದುತ್ತಾ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಫೋಟೋ ಶೂಟ್ ನಡೆಸಿದ್ದಾನೆ. ಮೈಸೂರಿನ ಹಳೆ ಡಿಸಿ ಕಚೇರಿ ಕಟ್ಟಡದ ಬಳಿ ರಜತ್ ಫೋಟೋ ಶೂಟ್ ನಡೆಸಿದ್ದು, ಇದೀಗ ರಜತ್ ಕಿಶನ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಎಡವಟ್ಟಿಗೆ ಕಾರಣ ಏನೆಂದರೆ, ಫೋಟೋಶೂಟ್ ಮಾಡಿಸಿ ರಜತ್ ಇನ್ಸ್ಟಾಗ್ರಾಮ್ ನಲ್ಲಿ ಹಾಕಿಕೊಂಡಿದ್ದಾನೆ. ಧೂಮಪಾನ ಅಪಾಯಕಾರಿ ಸಂದೇಶ ಹಾಕದೆ ವಿಡಿಯೋ ಅಪ್ಲೋಡ್ ಮಾಡಿದ್ದಾನೆ. ಈ ಹಿಂದೆ ಮಚ್ಚು ಹಿಡಿದು ಫೋಟೋಶೂಟ್ ಮಾಡಿಸಿದ್ದ. ಇದೀಗ ಮೈಸೂರಿನ ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಹಿಡಿದು ಪೋಸ್ ಕೊಟ್ಟು ಫೋಟೋ ಶೂಟ್ ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾನೆ.
ಗದಗ : ಗದಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕ್ರೂಜರ್ ವಾಹನ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಕ್ರೂಜರ್ ನಲ್ಲಿದ್ದ ಮೂವರು ಸವನ ಪೆದ್ದು ಹತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಕೂಲಿ ಕೆಲಸಕ್ಕಾಗಿ ಗಜೇಂದ್ರಗಡದಿಂದ ರೋಣ ಕಡೆಗೆ ಕಾರ್ಮಿಕರು ಕಾರ್ಮಿಕರು ಕೇಳುತ್ತಿದ್ದರು ಈ ವೇಳೆ ಎದುರುಗಡೆ ಬಂದ ಲಾರಿ ಹಾಗೂ ಕ್ರೂಜರ್ ವಾಹನ ನಡುವೆ ಅಪಘಾತ ಸಂಭವಿಸಿ ಮೂವರು ಸಾವನಪ್ಪಿದ್ದು, ಸದ್ಯ ಘಟನಾ ಸ್ಥಳಕ್ಕೆ ರೋಣ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
ಚಿತ್ರದುರ್ಗ : ಈಗಾಗಲೇ ಕನ್ನಡ ಮಾಧ್ಯಮದಲ್ಲಿ ಕಲಿತ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ಶೇ.5ರಷ್ಟು ಇರುವ ಮೀಸಲಾತಿಯನ್ನು ಶೇ. 10ಕ್ಕೆ ಏರಿಸಲು ರಾಜ್ಯ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ.ಮರುಷೋತ್ತಮ ಬಿಳಿಮಲೆ ತಿಳಿಸಿದರು. ಸರಕಾರಿ ಹಾಗೂ ಖಾಸಗಿ ವಲಯಗಳ ಉದ್ಯೋಗದಲ್ಲಿ ಕನ್ನಡಿಗರ ಪ್ರಾತಿನಿಧ್ಯ ಕಡಿಮೆಯಾಗಿದೆ. ಎಸ್ಎಸ್‌ಎಲ್‌ಸಿ ವರೆಗೆ ಕನ್ನಡ ಭಾಷೆಯಲ್ಲಿ ಓದಿದವರಿಗೆ ರಾಜ್ಯ ಸರಕಾರಿ ನೇಮಕಾತಿಗಳಲ್ಲಿ ಈಗಿರುವ ಶೇ.5ರಷ್ಟು ಮೀಸಲನ್ನು ಶೇ. 10ಕ್ಕೆ ಏರಿಸಿದರೆ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ. ಸರಕಾರ ನಾನಾ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನಡೆಯುವ ನೇಮಕಾತಿಯಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತ ಅಭ್ಯರ್ಥಿಗಳಿಗೆ ಆದ್ಯತೆ ನೀಡುವಂತೆ ಶಿಫಾರಸು ಮಾಡಲಾಗುವುದು ಸುದ್ದಿಗೋಷ್ಠಿಯಲ್ಲಿ ಹೇಳಿದರು. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2022ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಕಾಯಿದೆಗೆ ನಿಯಮಗಳ ರಚನೆ ಕುರಿತು ಫೆ.11ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ನಿಯಮಗಳು ರಚನೆಯಾದರೆ ಕನ್ನಡವನ್ನು ಸರಿಯಾಗಿ ಅನುಷ್ಠಾನಗೊಳಿಸದ ಅಧಿಕಾರಿಗಳ ವಿರುದ್ಧ ದಂಡ, ವರ್ಗಾವಣೆ ಸೇರಿದಂತೆ ಶಿಸ್ತು…
ಮೈಸೂರು : ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲಿಯೇ ವಕೀಲನ ಮೇಲೆ ಹಲ್ಲೆ ನಡೆಸಲಾಗಿದೆ ಮೈಸೂರು ಜಿಲ್ಲೆಯ ಟಿ ನರಸೀಪುರ ಕೋರ್ಟ್ ಮುಂಭಾಗ ಈ ಒಂದು ಘಟನೆ ನಡೆದಿದ್ದು, ಸಂತೋಷ ಎಂಬಾತನಿಂದ ತೊಟ್ಟಬಾಡಿ ಮಹದೇವಸ್ವಾಮಿ ಮೇಲೆ ಹಲ್ಲೆ ನಡೆದಿದೆ. ಮಹದೇವಸ್ವಾಮಿ ಟಿ ನರಸಿಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷನಾಗಿದ್ದು, ಹಲ್ಲೆಗೆ ಒಳಗಾದ ಮಹದೇವಸ್ವಾಮಿಗೆ ಟಿ ನರಸೀಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಸಂತೋಷವನ್ನು ಪೊಲೀಸರು ವರ್ಷಕ್ಕೆ ಪಡೆದಿದ್ದಾರೆ ಘಟನೆ ಸಂಭಂದ ಟಿ ನರಸಿಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವಕೀಲ ಮಹದೇವಸ್ವಾಮಿ ಮೇಲಿನ ಹಲ್ಲಿಗೆ ವಕೀಲರ ಸಂಘ ಇದೀಗ ಖಂಡನೆ ವ್ಯಕ್ತಪಡಿಸಿದೆ.
ಇಸ್ಲಾಮಾಬಾದ್ : ಟಿ20 ವಿಶ್ವಕಪ್ ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ಆಡುವುದಿಲ್ಲ ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ ಶಹಬಾಜ್ ಶರೀಫ್ ಮತ್ತೆ ಪುನರುಚ್ಚರಿಸಿದ್ದಾರೆ. ಭಾರತದ ವಿರುದ್ಧ ಪಂದ್ಯವನ್ನು ಪಾಕಿಸ್ತಾನ ತಂಡ ಆಡುವುದಿಲ್ಲ. ಬಾಂಗ್ಲಾದೇಶಕ್ಕೆ ಬೆಂಬಲ ನೀಡಲು ನಿರ್ಧಾರ ಮಾಡಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿಕೆ ನೀಡಿದ್ದಾರೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಮುಂಬರುವ ಐಸಿಸಿ ಪುರುಷರ ಟಿ20 ವಿಶ್ವಕಪ್ 2026 ರಲ್ಲಿ, ಗುಂಪು ಹಂತಗಳಲ್ಲಿ ತಮ್ಮ ಹಿರಿಯ ಪುರುಷರ ರಾಷ್ಟ್ರೀಯ ಕ್ರಿಕೆಟ್ ತಂಡವು ಭಾರತದೊಂದಿಗೆ ಆಡುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಮತ್ತೊಮ್ಮೆ ದೃಢಪಡಿಸಿದರು. ಇಸ್ಲಾಮಾಬಾದ್‌ನಲ್ಲಿ ಫೆಡರಲ್ ಕ್ಯಾಬಿನೆಟ್ ಅನ್ನುದ್ದೇಶಿಸಿ ಮಾತನಾಡಿದ ಅವರು, ಈ ವಿಷಯದ ಬಗ್ಗೆ ಅವರು ಸ್ಪಷ್ಟವಾದ ನಿಲುವನ್ನು ತೆಗೆದುಕೊಳ್ಳಲು ಬಯಸುತ್ತಾರೆ ಮತ್ತು ಭಾರತದೊಂದಿಗೆ ಆಟವಾಡುವುದಿಲ್ಲ ಎಂದು ಪುನರುಚ್ಚರಿಸಿದರು.ಫೆಬ್ರವರಿ 15 ರಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ನಿಗದಿಯಾಗಿತ್ತು. ಈ ಪಂದ್ಯ ಆಡುವುದಿಲ್ಲ ಎಂದು ಪ್ರಧಾನ ಶರೀಫ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರು : ವಿಚಿತ್ರ ಪ್ರಕರಣದ ಕುರಿತು ನಿನ್ನೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಕೇಸ್ ಏನೆಂದರೆ ಮಗುವಿಗೆ ಬಾಡಿ ಲೋಷನ್ ತರಲಿಲ್ಲವೆಂದು ಪತ್ನಿ ಪತಿಯ ವಿರುದ್ಧ ಹೂಡಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ತನ್ನ ವಿರುದ್ಧ ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ಮತ್ತು ಆ ಸಂಬಂಧ ನಗರದ 32ನೇ ಎಸಿಜೆಎಂ ಕೋರ್ಟ್‌ನಲ್ಲಿರುವ ನ್ಯಾಯಿಕ ಪ್ರಕ್ರಿಯೆ ರದ್ದು ಕೋರಿ 33 ವರ್ಷದ ವ್ಯಕ್ತಿಯೊಬ್ಬರು ದಾಖಲಿಸಿರುವ ಕ್ರಿಮಿನಲ್ ಅರ್ಜಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತು. ಅರ್ಜಿದಾರರ ಪರ ವಾದಿಸಿದ ವಕೀಲೆ ಕೆ.ರಾಮುಲಾ, ಅರ್ಜಿದಾರರು ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆಂಬ ಮಾಹಿತಿ ತಿಳಿದ ಕೂಡಲೇ ಪತ್ನಿ ಬೇಕೆಂದೇ ಈ ಸುಳ್ಳು ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಆಕೆ ಆರೋಪಿಸಿರುವ ಅಂಶಗಳೆಲ್ಲಾ ಅಸ್ಪಷ್ಟ ಹಾಗೂ ವಿರೋಧಾಭಾಸದಿಂದ ಕೂಡಿವೆ ಎಂದರು. ಪ್ರಕರಣದ ಸಾಕ್ಷಿಗಳೂ ಸುಳ್ಳು ಹೇಳಿಕೆ ದಾಖಲಿಸಿದ್ದು ಅರ್ಜಿದಾರರ ವಿರುದ್ಧ ಭಾರತೀಯ ದಂಡ ಸಂಹಿತೆ 1860ರ ಕಲಂ…
ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಲಿದೆ. ಹೀಗಾಗಿ ಇದೇ ಫೆಬ್ರವರಿ 5 ಮತ್ತು 6ರಂದು ಬೆಂಗಳೂರು ನಗರದ ವಿವಿಧೆಡೆ ಕಾವೇರಿ ನೀರು ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಮಾಹಿತಿ ನೀಡಿದ್ದು, ನಾಗರಿಕರು ಮುಂಜಾಗ್ರತೆಯಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಸೂಚಿಸಿದ್ದಾರೆ. ಬೆಂಗಳೂರು ನೀರು ಸರಬರಾಜು ಮತ್ತು ಮಂಡಳಿಯ ವತಿಯಿಂದ ಸರಬರಾಜು ವತಿಯಿಂದ ನಿರ್ಮಾಣ 1200ಎಂಎಂ, 900 ಎಂಎಂ ಹಾಗೂ 700ಎಂಎಂ ವ್ಯಾಸದ ನೀರು ಸರಬರಾಜು ಪೈಪ್ ಲೈನ್ ಅಳವಡಿಕೆ ಕಾಮಗಾರಿ ನಡೆಯಲಿದೆ. ಈ ಕಾರಣದಿಂದ ಕಾವೇರಿ ನೀರು ಸರಬರಾಜು ಯೋಜನೆಯ ಮೊದಲನೇ ಮತ್ತು ಎರಡನೇ ಹಂತಗಳ ಜಲರೇಚಕ ಯಂತ್ರಗಾರಗಳನ್ನು ಫೆಬ್ರವರಿ 5 ಗುರುವಾರದಂದು ಬೆಳಗ್ಗೆ 6ರಿಂದ ಫೆಬ್ರವರಿ 6 ಶುಕ್ರವಾರ ಬೆಳಗ್ಗೆ 6 ಗಂಟೆವರೆಗೆ ರವರೆಗೆ ಒಟ್ಟು 24 ಗಂಟೆ ಸ್ಥಗಿತಗೊಳಿಸಲಾಗುತ್ತಿದೆ. ಯಾವ ಪ್ರದೇಶದಲ್ಲಿ? ಬೆಂಗಳೂರು ನಗರದ ಎ.ಜಿ.ಎಸ್ ಬಡಾವಣೆ, ಸಾರ್ವಭೌಮನಗರ ಸುಬ್ರಮಣ್ಯಪುರ, ಬಿ.ಹೆಚ್.ಸಿ.ಎಸ್ ಬಡಾವಣೆ,…














