Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆದಿತ್ತು. . ಈ ಒಂದು ಐತಿಹಾಸಿಕ ದಿನದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಗಾಂಧಿ ಭಾರತ ಸಮಾವೇಶ ಆಯೋಜನೆ ಮಾಡಲಾಗಿತ್ತು. ಇದೆ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮ ಗಾಂಧೀಜಿಯವರ ಬೃಹತ್ ಪುತ್ಥಳಿಯನ್ನು ಚರಕ ತಿರುಗಿಸುವುದರ ಮೂಲಕ ಅನಾವರಣಗೊಳಿಸಿದರು. ಈ ಒಂದು ಸಮಾವೇಶಕ್ಕೆ ಈಗಾಗಲೇ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ,ಸಂಸದೆ ಪ್ರಿಯಾಂಕಾ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಎಲ್ಲಾ ಸಚಿವರು ಶಾಸಕರುಗಳು ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡರು ಭಾಗಿಯಾಗಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿ ಡ್ಯೂಟಿ ಖಾದರ್ ಸಚಿವರಾದಂತಹ HK ಪಾಟೀಲ್, ಪ್ರಿಯಾಂಕ್ ಖರ್ಗೆ, ಚೆಲುವರಾಯಸ್ವಾಮಿ, ಸಿರಿಗಂತೆ ಇನ್ನು ಅನೇಕ ಕಾಂಗ್ರೆಸ್ ನಾಯಕರು ಈ ಒಂದು ಸಮಾವೇಶದಲ್ಲಿ ಭಾಗಿಯಾಗಿದ್ದರು
ರಾಮನಗರ : ಕಳೆದ ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ 10 ಲಕ್ಷ ತೆಗೆದುಕೊಂಡ ಸಾಲಕ್ಕೆ 65 ಲಕ್ಷ ಬಡ್ಡಿ ಕಟ್ಟಿದರು ಕೂಡ ಸಾಲ ಕೊಟ್ಟ ವ್ಯಕ್ತಿ ಕಿರುಕುಳ ನೀಡಿದ್ದರಿಂದ ವ್ಯಕ್ತಿ ಒಬ್ಬ ಲಾರಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದ. ಇದೀಗ ಮತ್ತೊಂದು ಘಟನೆ ನಡೆದಿದ್ದು ಫೈನಾನ್ಸಿನಲ್ಲಿ ಸಾಲ ಪಡೆದಿದ್ದ ಮಹಿಳೆಯೊಬ್ಬರು ಸಾಲಗಾರರ ಕಿರುಕುಳ ತಾಳಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ತಾಲೂಕಿನ ತಿಮ್ಮಯ್ಯನದೊಡ್ಡಿಯಲ್ಲಿ ನಡೆದಿದೆ. ಹೌದು ಸಾಲಗಾರರ ಕಾಟಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬರುತ್ತಿದ್ದು, ರಾಮನಗರದ ಯಶೋಧಮ್ಮ (60) ಎನ್ನುವ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಖಾಸಗಿ ಫೈನಾನ್ಸ್ ಕಂಪನಿಗಳಲ್ಲಿ ಯಶೋಧಮ್ಮ 5 ಲಕ್ಷ ರೂಪಾಯಿ ಸಾಲವನ್ನು ಪಡೆದಿದ್ದರು. ಸುಮಾರು 8ಕ್ಕೂ ಹೆಚ್ಚು ಫೈನಾನ್ಸ್ ಕಂಪನಿಗಳಲ್ಲಿ ಯಶೋಧಮ್ಮ ಸಾಲ ಪಡೆದಿದ್ದರು. ಆದರೆ ಸಾಲ ಮರುಪಾವತಿಸಿದ ಹಿನ್ನೆಲೆಯಲ್ಲಿ ಫೈನಾನ್ಸ್ ನವರು ಮನೆಯ ಬಳಿ ಬಂದು ಗಲಾಟೆ ಮಾಡುತ್ತಿದ್ದರು.ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಇದೀಗ ಆರೋಪ…
ಉತ್ತರಕನ್ನಡ : ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿ ಕೊಟ್ಟಿಗೆಯಲ್ಲಿದ್ದಂತಹ 7 ಹೋರಿಗಳು ಸಜೀವವಾಗಿ ದಹನ ಗೊಂಡಿರುವ ಹೃದಯವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇಮಗಾರದಲ್ಲಿ ನಡೆದಿದೆ. ಮನೆಯಲ್ಲಿದ್ದ ವೈರ್ಗೆ ಶಾರ್ಟ್ ಸರ್ಕ್ಯೂರ್ಟ್ನಿಂದಾಗಿ ಕಿಡಿ ಹೊತ್ತಿದ್ದು, ಕೊಟ್ಟಿಗೆಯ ಅಟ್ಟದ ಮೇಲಿರುವ ಹುಲ್ಲಿಗೆ ಈ ಕಿಡಿ ತಾಗಿ ಬೆಂಕಿ ಹತ್ತಿದೆ. ಹುಲ್ಲಿಗೆ ಬಿದ್ದ ಬೆಂಕಿ ಆವರಿಸಿ ಕೊಟ್ಟಿಗೆಯಲ್ಲಿದ್ದ 7 ಹೋರಿಗಳು ಸಜೀವ ದಹನವಾಗಿದೆ. ಹೇಮಗಾರದ ಮಹೇಶ್ ಹೆಗಡೆ ಎಂಬವರ ಮನೆಯಲ್ಲಿ ಬಾನುವಾರ ತಡರಾತ್ರಿ ಘಟನೆ ನಡೆದಿದ್ದು, ಸೋಮವಾರ ಸಂಜೆ ವೇಳೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ವಿಜಯಪುರ : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ 5 ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ವಿಪಕ್ಷಗಳು ಆರೋಪ ಮಾಡುತ್ತಲೇ ಬಂದವು. ಆದರೆ ಈ ಗ್ಯಾರಂಟಿ ಯೋಜನೆಗಳಿಂದ ಅದೆಷ್ಟೋ ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ನಡೆಸುತ್ತಿದ್ದಾರೆ. ಅದಕ್ಕೆ ಮತ್ತೊಂದು ಉದಾಹರಣೆ ಎಂಬಂತೆ ಇದೀಗ ಕರ್ನಾಟಕ ಮಹಾರಾಷ್ಟ್ರ ಗಡಿ ಭಾಗದಲ್ಲಿರುವ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಶಿರಾಡೋಣ ಗ್ರಾಮದಲ್ಲಿ ಮಹಿಳೆಯೊಬ್ಬರು ಪತ್ರಾಸ್ ಮನೆ ಕಟ್ಟಿಕೊಂಡಿದ್ದಾರೆ. ಹೌದು ಶಿರಾಡೋಣ ಗ್ರಾಮದ ಗೃಹಿಣಿ ನೀಲಾಬಾಯಿ ಗಂಗಣ್ಣ ಪಾಂಡ್ರೆ ತಮಗೆ ಬಂದ ಗೃಹಲಕ್ಷ್ಮಿ ಹಣ 30 ಸಾವಿರದೊಂದಿಗೆ ಇನ್ನಷ್ಟು ಹಣ ಹೊಂದಿಸಿಕೊಂಡು 1 ಲಕ್ಷ ವೆಚ್ಚದಲ್ಲಿ ಪತ್ರಾಸ್ ಮನೆ ನಿರ್ಮಿಸಿಕೊಂಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ನೀಲಾಬಾಯಿ ಅವರು ನಮಗೆ ಸ್ವಂತ ಮನೆ ಇರಬೇಕು ಎಂಬ ಆಸೆ ಬಹಳ ದಿನಗಳಿಂದ ಇತ್ತು, ಇದೀಗ ಗೃಹಲಕ್ಷ್ಮಿ ಹಣದಿಂದ ಕೂಡಿಟ್ಟ ಹಣದಲ್ಲಿ ಈ ಒಂದು ಮನೆ ನಿರ್ಮಿಸಿದ್ದೇವೆ ಎಂದು ಸಂತಸ ಹಂಚಿಕೊಂಡರು. ಮನೆಗೆ ‘ಗೃಹಲಕ್ಷ್ಮಿ ನಿಲಯ’ ಎಂದು ನಾಮಕರಣ ಮಾಡಿದ್ದೂ…
ಬೆಂಗಳೂರು : ಗುತ್ತಿಗೆದಾರನಿಗೆ ಕೊಲೆ ಬೆದರಿಕೆ ಆರೋಪ ಹಾಗೂ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬೆಂಗಳೂರಿನ ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರು ಈಗಾಗಲೇ ಜೈಲಿಗೆ ಹೋಗಿ ಬಿಡುಗಡೆಯಾಗಿದ್ದಾರೆ. ಇದೀಗ ಅವರ ವಿರುದ್ಧ ಮತ್ತೊಂದು fir ದಾಖಲಾಗಿದ್ದು ಸ್ಲಂ ಏರಿಯಾದಲ್ಲಿನ ದಿನಗೂಲಿ ಕೆಲಸಗಾರರ ಮೇಲೆ ದೌರ್ಜನ್ಯ ಎಸಗಿದ್ದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ RMC ಯಾಡ್ ಪೊಲೀಸ್ ಠಾಣೆಯಲ್ಲಿ ಜನಗೂಲಿ ನೌಕರರು ಮುನಿರತ್ನ ವಿರುದ್ಧ FIR ದಾಖಲಿಸಿದ್ದಾರೆ. ಹೌದು ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ದಿನಗೂಲಿ ಕೆಲಸ ಮಾಡುವವರ ಮೇಲೆ ದೌರ್ಜನ್ಯ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಅಕ್ಕಮಹಾದೇವಿ ನೌಕರರು ಬೆಂಗಳೂರು ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯ ಸ್ಲಂನಲ್ಲಿರುವ ದಿನಗೂಲಿ ನೌಕರರ ಮೇಲೆ ಮುನಿರತ್ನ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಮುನಿರತ್ನ ಮತ್ತು ಸಹಚರರಿಂದ ಮನೆಗಳ ನೆಲಸಮ ಆರೋಪ ಕೇಳಿ ಬಂದಿದೆ.ವಸಂತ್ ಕುಮಾರ್, ಚನ್ನಕೇಶವ, ನವೀನ್, ರಾಮ, ಕಿಟ್ಟಿ ಗಂಗಾ ಎಂಬುವವರು…
ಹಾಸನ : ಹಾಸನದಲ್ಲಿ ಪತಿ ಹಾಗೂ ಅತ್ತೆ ಮಾವ ಅವರ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿ ಒಬ್ಬಳು ನೇಣು ತೆಗೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸಕಲೇಶಪುರ ತಾಲೂಕಿನ ಧನ್ಯಶ್ರೀ (20) ಎಂದು ತಿಳಿದುಬಂದಿದೆ. ಕಳೆದ 2 ವರ್ಷದ ಹಿಂದೆ ಧನ್ಯಶ್ರೀ ಹಾಗೂ ಪ್ರೇಮ್ಕುಮಾರ್ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಒಂದು ವರ್ಷದಿಂದ ಪ್ರೇಮ್ಕುಮಾರ್ ಆಕೆಗೆ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ. ತವರು ಮನೆಗೆ ಹೋಗಿದ್ದ ಧನ್ಯಶ್ರೀ ಭಾನುವಾರ ಅತ್ತೆ ಮನೆಗೆ ವಾಪಸ್ ಬಂದಿದ್ದಳು. ಆ ವೇಳೆ ಯಾಕೆ ವರದಕ್ಷಿಣೆ ತಂದಿಲ್ಲ ಎಂದು ಜಗಳ ಮಾಡಿ ಆಕೆಯ ಮೇಲೆ ಹಲ್ಲೆ ಮಾಡಿದ್ದ.ಇದೇ ಸಮಯದಲ್ಲಿ ಪತಿಯೊಂದಿಗೆ ಅತ್ತೆ ಭವಾನಿ, ಮಾವ ಪ್ರದೀಪ್ ಕೂಡ ಆಕೆಯ ಮೇಲೆ ಹಲ್ಲೆ ನಡೆಸಿದ್ದರು. ಇದರಿಂದ ಮನನೊಂದ ಮಹಿಳೆ ಸೋಮವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಆಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING : ಬೆಂಗಳೂರಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್ : ಆರೋಪಿಗಳ ವಿರುದ್ಧ ಕಠಿಣ ಕ್ರಮ: CM ಸಿದ್ದರಾಮಯ್ಯ
ಬೆಳಗಾವಿ : ಬೆಂಗಳೂರಿನಲ್ಲಿ ಬಸ್ ಗೈಡ್ ಕಾಯುತ್ತಿದ್ದ ಮಹಿಳೆಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಸಮಾಜಘಾತಕ ವ್ಯಕ್ತಿಗಳಿಂದ ಇಂತಹ ಕೃತ್ಯ ನಡೆಯುತ್ತವೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಾಜಘಾತುಕ ಶಕ್ತಿಗಳಿಂದ ಇಂತಹ ಕೃತ್ಯಗಳು ನಡೆಯುತ್ತವೆ. ಆರೋಪಿಗಳನ್ನು ಶೀಘ್ರವೇ ಪತ್ತೆ ಹಚ್ಚಿ ಪೊಲೀಸರು ಬಂಧಿಸುತ್ತಾರೆ. ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಾಂಗ್ರೆಸ್ ಪಕ್ಷದಿಂದ ಗಾಂಧಿ ಭಾರತ ಸಮಾವೇಶ ಆಯೋಜನೆ ಕುರಿತು ಗಾಂಧಿ ತತ್ವಗಳನ್ನು ಪುನರ್ ಸ್ಥಾಪಿಸುವ ಉದ್ದೇಶದಿಂದ ಈ ಒಂದು ಸಮಾವೇಶ ಹಮ್ಮಿಕೊಳ್ಳಲಾಗಿದೆ. ಗಾಂಧಿ, ಬಸವಣ್ಣ, ಅಂಬೇಡ್ಕರ್ ಹಾಗೂ ಕನಕದಾಸರ ತತ್ವ ಪಾಲಿಸಬೇಕು. ಸಂವಿಧಾನವನ್ನು ವಿರೋಧಿಸುವ ಕೆಲಸಗಳು ನಡೆಯುತ್ತಿವೆ.ಹೀಗಾಗಿ ಗಾಂಧಿ ತತ್ವ ಆದರ್ಶಗಳನ್ನು ಪುನರ್ ಸ್ಥಾಪಿಸಬೇಕಿದೆ ಎಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ನಟ ದರ್ಶನ್ ಅವರ ಬಳಿ ಇರುವ ಎರಡು ಗನ್ ಲೈಸೆನ್ಸ್ ಅಮಾನತುಗೊಳಿಸಿ ಇದೀಗ ಪೊಲೀಸ್ ಆಡಳಿತ ವಿಭಾಗ ಸೂಚನೆ ಹೊರಡಿಸಿದ್ದು ಎರಡು ಕಣ್ಣುಗಳನ್ನು ವಶಕ ಪಡೆಯುವಂತೆ ಬೆಂಗಳೂರಿನ ನಗರ ಠಾಣೆಯ ಪೊಲೀಸರಿಗೆ ಸೂಚಿಸಲಾಗಿದೆ. ಹೌದು ಕೊಲೆ ಆರೋಪಿ ದರ್ಶನ್ ಗನ್ ಲೈಸೆನ್ಸ್ ಅಮಾನತು ಮಾಡಿ ಪೊಲೀಸ್ ಇಲಾಖೆ ಆಡಳಿತ ವಿಭಾಗದಿಂದ ಇದೀಗ ಸೂಚನೆ ನೀಡಲಾಗಿದೆ. ಆರ್ ಆರ್ ನಗರ ಠಾಣೆಯ ಪೊಲೀಸರಿಗೆ ಈ ಕುರಿತು ಸೂಚನೆ ನೀಡಿದ್ದು, ಎರಡು ಗನ್ ಗಳನ್ನು ವಶಕ್ಕೆ ಪಡೆದುಕೊಳ್ಳಲು ಸೂಚನೆ ಕೊಡಲಾಗಿದೆ. ಪ್ರಕರಣದ ಟ್ರಯಲ್ ಮುಗಿಯುವವರೆಗೂ ಲೈಸೆನ್ಸ್ ಅಮಾನತು ಮಾಡಿ ಎಂದು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು : ರಾಜ್ಯದಲ್ಲಿ ಸಾಲು ಸಾಲು ದರೋಡೆ ಪ್ರಕರಣಗಳು ನಡೆಯುತ್ತಿವೆ. ನಿನ್ನೆ ಮೈಸೂರಲ್ಲಿ ಕೇರಳ ಮೂಲದ ಉದ್ಯಮಿಯ ಹಣ ಹಾಗೂ ಕಾರಿನ ಸಮೇತ ದರೋಡೆ ಮಾಡಿದರೆ ಹುಬ್ಬಳ್ಳಿಯಲ್ಲಿ ಕೆನರಾ ಬ್ಯಾಂಕ್ ಅನ್ನು ಖದೀಮರು ದರೋಡೆಗೆ ಯತ್ನಿಸಿ ವಿಫಲರಾಗಿದ್ದಾರೆ.ಇದೀಗ ಬೆಂಗಳೂರಿನಲ್ಲಿ ಕೂಡ ಈ ಒಂದು ಮುಸುಕುಧಾರಿ ಗ್ಯಾಂಗ್ ಬೆಂಗಳೂರಿನ ಕೆಆರ್ ಪುರಂನಲ್ಲಿ ಪ್ರತ್ಯಕ್ಷವಾಗಿದೆ. ಹೌದು ಮೂರು ಜನ ಕಳ್ಳರ ಈ ಒಂದು ಗ್ಯಾಂಗ್ ಕೈಯಲ್ಲಿ ಮಾರಾಕಸ್ತ್ರ ಹಿಡಿದುಕೊಂಡು ರಾತ್ರಿ 2.30 ರ ಸುಮಾರಿಗೆ ಮನೆ ಕಳ್ಳತನಕ್ಕೆ ಸ್ಕೆಚ್ ಹಾಕಿದ್ದಾರೆ. ಕೆಆರ್ ಪುರಂ ನ ಕಿತ್ತಗನೂರಿನಲ್ಲಿ ಮೂವರು ಕಳ್ಳರು ರೌಂಡ್ಸ್ ಹಾಕಿದ್ದಾರೆ. ರಾಜಾರೋಷವಾಗಿ ಮನೆಗಳ ಬಳಿ ಓಡಾಡಿರುವ ಗ್ಯಾಂಗ್ ಮುಸುಕು ಧರಿಸಿ ಮೂವರು ಖದೀಮರು ಎಂಟ್ರಿ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸಹಜವಾಗಿ ಕೆಆರ್ ಪುರಂ ಸುತ್ತಮುತ್ತಲು ಏರಿಯಾಗಳಲ್ಲಿನ ಜನರಿಗೆ ಆತಂಕ ಸೃಷ್ಟಿಯಾಗಿದೆ.
ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬೆಳಗಾವಿಯಲ್ಲಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. 5ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು ಆರೋಪಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ನಡೆದಿದೆ. ಹೌದು ರಾಮದುರ್ಗ ತಾಲೂಕಿನ ಕೊಣ್ಣೂರು ಗ್ರಾಮದ ಈರಪ್ಪ ಕರಡಿ ಎಂಬಾತನೇ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು ಬಳಿಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೊಬೈಲ್ ಆಸೆ ತೋರಿಸಿ 5 ವರ್ಷದ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರ ಹೆಸರುವ ವಿಚಾರ ಬಾಲಕಿಯ ಮನೆಯಲ್ಲಿ ಗೊತ್ತಾದ ಬಳಿಕ ಭಾವ ಪ್ರಜ್ಞೆಯಿಂದ ಆರೋಪಿ ಈರಪ್ಪ ಕಡಾಡಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಕುರಿತು ಕಡಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.