Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂಬ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಮಿಷನರ್ ರಿಂದ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ.ಇದೊಂದು ಸುಳ್ಳು ಸುದ್ದಿ ಆಗಿದ್ದು, ಈ ಒಂದು ವಿಡಿಯೋ ವೈರಲ್ ಮಾಡಿದ ಯುವಕನನ್ನು ಸದ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು. ಬೆಂಗಳೂರಲ್ಲಿ ಮಾಧ್ಯಮಗಳಲ್ಲಿ ಮಾತನಾಡಿದ ಅವರು ಜೊಂಬಿ ಡ್ರಗ್ಸ್ ಏನು ಇಲ್ಲ. ಅದು ಸತ್ಯಕ್ಕೆ ದೂರವಾದದ್ದು ಪಂಜಾಬ್ ಮೂಲದ ಲಾರಿ ಚಾಲಕನಿಗೆ ಕುಡಿತದ ಅಭ್ಯಾಸವಿತ್ತು. ಹಿಂದೆ ಪಂಜಾಬ್ ನಲ್ಲಿ ಡ್ರಗ್ಸ್ ತೆಗೆದುಕೊಂಡಿದ್ದೇನೆ ಎಂದು ಹೇಳಿದ್ದಾನೆ. ಯಾವುದೋ ಆರೋಗ್ಯ ಸಮಸ್ಯೆಗಳಿಗೂ ಔಷಧ ತೆಗೆದುಕೊಂಡಿದ್ದ. ಹಾಗಾಗಿ ಆತನಿಗೆ ಅದರಿಂದ ಪರಿಣಾಮ ಆಗಿತ್ತು. ಈ ಬಗ್ಗೆ ಜಾಲತಾಣದಲ್ಲಿ ಪೋಸ್ಟ್ ಮಾಡಿದವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿಸಿದರು. ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂದು ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಯುವಕ ಒಬ್ಬ ವೈರಲ್ ಮಾಡಿದ್ದ. ಈ ಕುರಿತಂತೆ ಬೆಂಗಳೂರಿನ ಬಾಗಲೂರು ಪೊಲೀಸರು ಹೇಮಂತ ಎಂಬತನನ್ನ…
ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 16 ವರ್ಷದ ಬಾಲಕಿಯ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಅಲ್ಲದೇ ಬಾಲಕಿ ಗರ್ಭಧಾರಣೆ ಮಾಡಿದ ಬಳಿಕ ಶಿಕ್ಷಕನೇ ಗರ್ಭಪಾತ ಮಾಡಿಸಿರುವ ಆರೋಪ ಸಹ ಕೇಳಿಬಂದಿದೆ. ಈ ಒಂದು ಬೆಚ್ಚಿಬಿಳಿಸುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗಣಿತ ಶಿಕ್ಷಕ ರಾಜಣ್ಣ ಮೇಲೆ ಈ ಒಂದು ಆರೋಪ ಬಂದಿದ್ದು, ಇದೀಗ ಶಿಕ್ಷಕ ಹಾಗು ಗರ್ಭಪಾತ ಮಾಡಿದ ವೈದ್ಯೆ ಶಂಕರ್ ಲಕ್ಷ್ಮಿ ವಿರುದ್ಧ ದೂರು ನೀಡಲಾಗಿದೆ. ಚಳ್ಳಕೆರೆಯ ಲಕ್ಷ್ಮಿ ಶ್ರೀನಿವಾಸ್ ನರ್ಸಿಂಗ್ ಆಸ್ಪತ್ರೆಯ ವೈದ್ಯೆ ಆಗಿದ್ದು, ಮಕ್ಕಳ ರಕ್ಷಣಾಧಿಕಾರಿ ರೇಖಾ ಚಳ್ಳಕೆರೆ ಠಾಣೆಗೆ ದೂರು ನೀಡಿದ್ದಾರೆ.
ಬೆಂಗಳೂರು : ನೌಕರರ ರಾಜ್ಯ ವಿಮಾ ನಿಗಮ (ESIC)ದ ಅಡಿಯ ವೈದ್ಯಕೀಯ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಒಂದು ವರ್ಷ ಕಡ್ಡಾಯವಾಗಿ ಇಎಸ್ಐಸಿಗಳಲ್ಲಿ ಸೇವೆ ಸಲ್ಲಿಸಬೇಕು. ಅಲ್ಲದೆ, 1 ವರ್ಷ ಕಡ್ಡಾಯ ಸೇವೆ ನೀಡುವುದಾಗಿ ವಿದ್ಯಾರ್ಥಿಗಳು ಬಾಂಡ್ ನೀಡಿದ್ದಾರೆ. ಕಡ್ಡಾಯ ಸೇವೆ ಮಾಡಲಾಗದವರು 5 ಲಕ್ಷ ರೂ. ಶುಲ್ಕ ನೀಡಲೂ ಅವಕಾಶವಿದೆ. ಬಾಂಡ್ ಪಡೆಯುವುದರಿಂದ ವಿದ್ಯಾರ್ಥಿಗಳ ಹಕ್ಕಿನ ಹರಣವಾಗಲಿದೆ ಎನ್ನಲಾಗುವುದಿಲ್ಲ ಎಂದು ಹೈಕೋರ್ಟ್ ಪೀಠ ತನ್ನ ಆದೇಶದಲ್ಲಿ ವಿವರಿಸಿದೆ. ಈ ಸಂಬಂಧ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಇಎಸ್ಐಸಿ ಸಲ್ಲಿಸಿದ್ದ ಮೇಲ್ಮನವಿ ಮಾನ್ಯ ಮಾಡಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದ್ದು, ಏಕಸದಸ್ಯ ಪೀಠದ ಆದೇಶವನ್ನು ರದ್ದುಪಡಿಸಿದೆ.ಮೊದಲು 5 ವರ್ಷಗಳ ಬಾಂಡ್ ಇತ್ತು, ನಂತರ 2020ರಿಂದ 1 ವರ್ಷಕ್ಕೆ ಪರಿವರ್ತಿಸಲಾಗಿದ್ದು, ಇದು ಸಂವಿಧಾನದ ಕಲಂ 19(1)(ಜಿ) ಅನ್ವಯ ವೃತ್ತಿ ಆಯ್ಕೆಯ ಹಕ್ಕು ಅಥವಾ ಕಲಂ 23 ಜೀತ…
ಬೆಂಗಳೂರು : ಕನ್ನಡ ಹಿರಿಯ ಸಾಹಿತಿ, ಖ್ಯಾತ ಪತ್ರಕರ್ತ ಹಾಗೂ ಸಮಾಜ ಸೇವಕ ನಾಡೋಜ ಡಾ. ಎಸ್.ಆರ್. ರಾಮಸ್ವಾಮಿ (89) ಅವರು ಶುಕ್ರವಾರ ಬೆಳಗ್ಗೆ ನಗರದಲ್ಲಿ ನಿಧನರಾದರು. ಕಳೆದ ಕೆಲವು ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ರಾಷ್ಟೋತ್ಥಾನ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾಗಿದ್ದ ರಾಮಸ್ವಾಮಿ ಅವರು ಸಾಹಿತ್ಯ ಪತ್ರಿಕೋದ್ಯಮ ಮತ್ತು ಪರಿಸರ ಹೋರಾಟಗಳಲ್ಲಿ ದಶಕಗಳ ಕಾಲ ತಮ್ಮನ್ನು ತೊಡಗಿಸಿಕೊಂಡಿದ್ದರು. 1937ರಲ್ಲಿ ಜನಿಸಿದ ಎಸ್.ಆರ್. ರಾಮಸ್ವಾಮಿ ಅವರು ಕೇವಲ ಸಾಹಿತಿಯಷ್ಟೇ ಅಲ್ಲದೆ, ಕಲಾ ವಿಮರ್ಶಕರು, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. 50ಕ್ಕೂ ಹೆಚ್ಚು ಕೃತಿಗಳನ್ನು ಹಾಗೂ 2,000ಕ್ಕೂ ಹೆಚ್ಚು ಲೇಖನಗಳನ್ನು ಬರೆದಿರುವ ಅವರು, ಸುಧಾ ವಾರಪತ್ರಿಕೆಯ ಮುಖ್ಯ ಉಪಸಂಪಾದಕರಾಗಿ (1972-79) ಮತ್ತು ದೀರ್ಘಕಾಲದವರೆಗೆ ಉತ್ಥಾನ ಮಾಸಪತ್ರಿಕೆಯ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು. ಬೆಂಗಳೂರಿನ ಪ್ರತಿಷ್ಠಿತ ಗೋಖಲೆ ಸಾರ್ವಜನಿಕ ಸಂಸ್ಥೆಯ ಗೌರವ ಕಾರ್ಯದರ್ಶಿಯಾಗಿ ದಶಕಗಳ ಕಾಲ ಸಂಸ್ಥೆಯನ್ನು ಮುನ್ನಡೆಸಿದ್ದರು. ನಾಡೋಜ ಡಾ. ಎಸ್.ಆರ್. ರಾಮಸ್ವಾಮಿ ಅವರ ಪಾರ್ಥಿವ ಶರೀರವನ್ನು…
ಬಳ್ಳಾರಿ : 2025-2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ನಿನ್ನೆ ಪ್ರಕಟವಾಗಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಕೂಡ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ ಆಗದೆ ಕಳೆದ ಬಾರಿ 72 ಪ್ರತಿಶತ ವಿದ್ಯಾರ್ಥಿಗಳು ತೆರ್ಗಡೆಯಾಗಿದ್ದು ಈ ಬಾರಿ ದಾಖಲೆಯ 86 ಪ್ರತಿಶತ ವಿದ್ಯಾರ್ಥಿಗಳು ಸೇರ್ಗಡೆ ಆಗಿದ್ದು ದಾಖಲೆ ಮಟ್ಟದಲ್ಲಿ ಫಲಿತಾಂಶ ಏರಿಕೆ ಆಗಿದೆ. ಇದೀಗ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ಕೈದಿಯೊಬ್ಬರು ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪ್ರಥಮ ದರ್ಜೆ(ಶೇಕಡಾ 80.1)ಯಲ್ಲಿ ಪಾಸ್ ಆಗುವ ಮೂಲಕ ಗಮನ ಸೆಳೆದಿದ್ದಾರೆ. ಹೌದು ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಕಾರಾಗೃಹದಲ್ಲಿರುವ ಕೈದಿಯೊಬ್ಬರು ದ್ವಿತೀಯ ಪಿಯುಸಿ ಪಾಸ್ ಆಗಿದ್ದಾರೆ. ಬೆಂಗಳೂರು ಮೂಲದ ಎಸ್.ಅಶೋಕ್ ಕುಮಾರ್ ಎಂಬಾತ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ, ಕಳೆದ 7 ವರ್ಷಗಳಿಂದ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದಾರೆ. ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದ ಅಶೋಕ್ ಕುಮಾರ್, ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ…
ಬೆಂಗಳೂರು : ಇಂದು ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು ದಾಖಲೆಯ ಶೇಕಡ 86% ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದ ನಂತರ ವಿದ್ಯಾರ್ಥಿಗಳ ಜೀವನದ ಅತ್ಯಂತ ಪ್ರಮುಖ ಘಟ್ಟ ಆರಂಭವಾಗುತ್ತದೆ. ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಅವರದೇ ಆದ ವಿಭಿನ್ನ ಅವಕಾಶಗಳು ಕಾಯುತ್ತಿವೆ. ಆ ಆಯ್ಕೆಗಳ ಬಗ್ಗೆ ಇಲ್ಲಿದೆ ಪೂರ್ಣ ಮಾಹಿತಿ. 1. ವಿಜ್ಞಾನ ವಿಭಾಗ (Science Stream) ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ತಾಂತ್ರಿಕ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಅವಕಾಶಗಳಿವೆ. ವೈದ್ಯಕೀಯ ಕ್ಷೇತ್ರ: ಎಂಬಿಬಿಎಸ್ (MBBS), ಬಿಡಿಎಸ್ (BDS), ಆಯುರ್ವೇದ (BAMS), ಮತ್ತು ಹೋಮಿಯೋಪತಿ (BHMS). ಇದಕ್ಕೆ ‘ನೀಟ್’ (NEET) ಪರೀಕ್ಷೆ ಕಡ್ಡಾಯ. ತಾಂತ್ರಿಕ ಕ್ಷೇತ್ರ (Engineering): ಬಿ.ಇ ಅಥವಾ ಬಿ.ಟೆಕ್. ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್, ಸಿವಿಲ್, ಮೆಕ್ಯಾನಿಕಲ್ ಸೇರಿದಂತೆ ಹಲವು ವಿಭಾಗಗಳಿವೆ. ಪ್ಯಾರಾ ಮೆಡಿಕಲ್: ನರ್ಸಿಂಗ್, ಫಾರ್ಮಸಿ (B.Pharma), ಫಿಸಿಯೋಥೆರಪಿ ಮತ್ತು ಲ್ಯಾಬ್ ಟೆಕ್ನಿಷಿಯನ್ ಕೋರ್ಸ್‌ಗಳು. ಶುದ್ಧ ವಿಜ್ಞಾನ (B.Sc): ಕೃಷಿ…
ಬೆಂಗಳೂರು : ನಿನ್ನೆ ತಾನೇ ಬಾಗಲಕೋಟೆ ಜಿಲ್ಲೆಯಲ್ಲಿ ಕೇವಲ ಮನಸ್ತಾಪಕ್ಕೆ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಿಗ ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ನ್ಯೂಟೌನ್‌ನಲ್ಲಿ ನಡೆದಿದೆ. ಅಭಿಷೇಕ್ (23) ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಸೂಸೈಡ್ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ನನ್ನ ಜೊತೆ ಇದ್ದವಳು, ಅವಳಿಗೀಗ ಏನಾಯಿತೆಂದು ನನಗೆ ತಿಳಿಯುತ್ತಿಲ್ಲ. ನನ್ನ ಜೀವನ ಪ್ರೀತಿಯಿಂದಲೇ ತುಂಬಿ ತುಳುಕುತ್ತಿತ್ತು. ಈಗ ಆ ಪ್ರೀತಿಯೇ ಅಂತ್ಯವಾಗಿದೆ. ಆದ್ದರಿಂದ ನಾನು ನನ್ನ ಜೀವನವನ್ನು ಕೊನೆಗೊಳಿಸುತ್ತಿದ್ದೇನೆ. ಎಲ್ಲರಿಗೂ ಹೇಳುತ್ತಿದ್ದೇನೆ ದಯವಿಟ್ಟು ಯಾರನ್ನೂ ಪ್ರೀತಿಸಬೇಡಿ. ಈಗಿನ ಕಾಲದಲ್ಲಿ ಎಲ್ಲರೂ ವಂಚಕರೇ. ನನ್ನ ಎಲ್ಲಾ ಸ್ನೇಹಿತರಿಗೆ ಗುಡ್ ಬೈ. ಆ ಪ್ರೀತಿಯ ಕಾರಣದಿಂದ ನಿಮಗೆಲ್ಲರಿಗೂ ಸಮಯ ನೀಡಲು ಸಾಧ್ಯವಾಗಲಿಲ್ಲ. ಎಲ್ಲರೂ ನನ್ನನ್ನು ಪ್ರೀತಿಸುವುದರ ಜೊತೆಗೆ ನನ್ನೊಂದಿಗೆ ಸಂತೋಷವಾಗಿದ್ದರು. ಆದರೆ ನಾನು ನಿಮಗ್ಯಾರಿಗೂ ಸಮಯ ನೀಡಲು ಸಾಧ್ಯವಾಗಲಿಲ್ಲ. ನನ್ನನ್ನು ಕ್ಷಮಿಸಿ…
ಬೆಂಗಳೂರು:* ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಬಾರಿ ರಾಜ್ಯದಲ್ಲಿ ಒಟ್ಟಾರೆ *ಶೇ. 84 ರಷ್ಟು* ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಉತ್ತಮ ಸಾಧನೆ ತೋರಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ತೇರ್ಗಡೆ ಪ್ರಮಾಣದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. *ವಿಭಾಗವಾರು ಫಲಿತಾಂಶ: ವಿಜ್ಞಾನದಲ್ಲಿ ದಾಖಲೆ ಸಾಧನೆ* ಪ್ರತಿ ವರ್ಷದಂತೆ ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ. * *ವಿಜ್ಞಾನ (Science):* ಶೇ. 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಅಗ್ರಸ್ಥಾನದಲ್ಲಿದೆ. * *ವಾಣಿಜ್ಯ (Commerce):* ಸರಾಸರಿ ಶೇ. 80 ರಷ್ಟು ಮಂದಿ ತೇರ್ಗಡೆಯಾಗಿದ್ದಾರೆ. * *ಕಲಾ (Arts):* ಶೇ. 75 ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ### *ಜಿಲ್ಲಾವಾರು ಸಾಧನೆ: ಮತ್ತೆ ಮುಂಚೂಣಿಯಲ್ಲಿ ಕರಾವಳಿ* ಶೈಕ್ಷಣಿಕವಾಗಿ ಸದಾ ಮುಂದಿರುವ ಕರಾವಳಿ ಜಿಲ್ಲೆಗಳಾದ *ಉಡುಪಿ ಮತ್ತು ದಕ್ಷಿಣ ಕನ್ನಡ* ಈ ಬಾರಿಯೂ ರಾಜ್ಯಕ್ಕೆ ಮೊದಲ ಎರಡು ಸ್ಥಾನಗಳನ್ನು ಹಂಚಿಕೊಂಡಿವೆ.…
ದಕ್ಷಿಣಕನ್ನಡ : ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು (ಏಪ್ರಿಲ್ 09) ಪ್ರಕಟವಾಗಿದೆ. ಈಗಾಗಲೇ ಆನ್‌ಲೈನ್‌ನಲ್ಲಿ ಫಲಿತಾಂಶ ಲಭ್ಯವಿದ್ದು, ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ವೀಕ್ಷಿಸಬಹುದಾಗಿದೆ. ದಿಗ ಫಲಿತಾಂಶ ಪತ್ರವಾಗಿದ್ದು ಈ ಬಾರಿಯೂ ಕೂಡ ಮತ್ತೊಮ್ಮೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 2025 26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇದೀಗ ಪ್ರಕಟವಾಗಿದ್ದು ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ದಿಶಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 600 ಅಂಕಗಳನ್ನು ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ ದಿಶಾ ರಾಜ್ಯಕ್ಕೆ ಟಾಪರ್ ಹೊರಹೊಮ್ಮಿದ್ದಾರೆ. ಇನ್ನು ಕಲಾ ವಿಭಾಗದಲ್ಲಿ ಸಂಗೀತ ಎನ್ನುವ ವಿದ್ಯಾರ್ಥಿನಿ 600 ಕ್ಕೆ 598 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಅದೇ ರೀತಿಯಾಗಿ ತುಮಕೂರು ವಿದ್ಯಾವಾಹಿನಿ ಕಾಲೇಜ್, ವಿದ್ಯಾರ್ಥಿಯಾಗಿರುವ ರೋಹನ್ ಎಂಬ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 597…
ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇದೀಗ ಪ್ರಕಟವಾಗಿದ್ದು, ದಾಖಲೆ ಮಟ್ಟದಲ್ಲಿ ಪಿಯುಸಿ ಫಲಿತಾಂಶ ಏರಿಕೆ ಕಂಡಿದೆ. ಪ್ರಸಕ್ತ ಸಾಲಿನಲ್ಲಿ ಈ ವರ್ಷ ಶೇ. 86 ರಷ್ಟು ಫಲಿತಾಂಶದ ದಾಖಲಾಗಿದ್ದು, ಕಳೆದ ವರ್ಷ 73.45 ರಷ್ಟು ಫಲಿತಾಂಶ ದಾಖಲಾಗಿತ್ತು. ಈ ವರ್ಷ ಶೇಕಡ 12.55ಕ್ಕಿಂತ ಹೆಚ್ಚು ಫಲಿತಾಂಶ ದಾಖಲು ಆಗಿದೆ. ಅಲ್ಲದೆ ಪರೀಕ್ಷೆಗೆ ಹಾಜರಾದವರ ವಿದ್ಯಾರ್ಥಿಗಳ ಪೈಕಿ ಶೇಕಡ 86 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಆಗಿದ್ದಾರೆ. ಪಿಯುಸಿ ಪರೀಕ್ಷೆಗೆ ಒಟ್ಟು 7, 10,363 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದು, ನೋಂದಣಿ ಆದವರ ಪೈಕಿ 6,10,000 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಮೂಲಕ ದಾಖಲೆಯ ಮಟ್ಟದಲ್ಲಿ ಪಿಯುಸಿ ಫಲಿತಾಂಶದಲ್ಲಿ ಏರಿಕೆ ಆಗಿದೆ. ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯಾದ್ಯಂತ ಒಟ್ಟು 1217 ಕೇಂದ್ರಗಳಲ್ಲಿ ನಡೆದಿದ್ದು, 5174 ಕಾಲೇಜುಗಳ ಒಟ್ಟು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಣಿ ಮಾಡಿಕೊಂಡಿದ್ದರು. ಈ ಪೈಕಿ ಸೈನ್ಸ್ ವಿಷಯದಲ್ಲಿ 2.92 ಲಕ್ಷ,…














