Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಲೆ ಪ್ರಕರಣದ A1 ಆರೋಪಿಯಾಗಿರಿವ ಪವಿತ್ರ ಗೌಡ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಸೆಷನ್ಸ್ ಕೋರ್ಟ್,ಸೆಪ್ಟೆಂಬರ್ 30ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ವಿಚಾರಣೆ ವೇಳೆ ಜಾಮೀನು ಅರ್ಜಿಗೆ ಎಸ್ಪಿಪಿ ಪ್ರಸನ್ನ ಕುಮಾರ್ ಆಕ್ಷೇಪಣೆ ಸಲ್ಲಿಸಿದ್ದಾರೆ. ಈ ವೇಳೆ ಪವಿತ್ರಗೌಡ ಪರ ಹಿರಿಯ ವಕೀಲ ಟಾಮಿ ಸೇಬಾಸ್ಟಿಯನ್ ಇದೀಗ ವಾದಿಸುತ್ತಿದ್ದಾರೆ. ಆಕ್ಷೇಪಣೆಯಲ್ಲಿರುವ ಅಂಶವನ್ನು ಟಾಮಿ ಸೆಬಸ್ಟಿಯನ್ ಓದುತ್ತಿದ್ದಾರೆ.ಇತರೆ ಆರೋಪಿಗಳೊಂದಿಗೆ ಸಂಚು ರೂಪಿಸಿದ ಆರೋಪವಿದೆ. ಶಡ್ಡಿಗೆ ಕರೆದೊಯ್ದು ಇತರರೊಂದಿಗೆ ಸೇರಿ ಹಲ್ಲೆ ನಡೆಸಿದ ಆರೋಪವಿದೆ. ಹಲ್ಲೆಯಿಂದಾಗಿ ರೇಣುಕಾ ಸ್ವಾಮಿ ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ತುಂಬಾ ಕ್ರೂರವಾಗಿ ಹಲ್ಲೆ ನಡೆಸಿದರೆಂದು ಆರೋಪಿಸಲಾಗಿದೆ. ಅಲ್ಲದೆ ನಾಲ್ಕು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಗಳನ್ನು ಪಡೆಯಲಾಗಿದೆ. ಶೆಡ್ ಒಳಗೆ ಏನಾಯಿತು ಎಂಬುದನ್ನು ಇಬ್ಬರೂ ಸಾಕ್ಷಿಗಳು ಹೇಳಿದ್ದಾರೆ. ಶಡ್ ಒಳಗೆ ಏನಾಯಿತು ಎಂಬುದನ್ನು ಇಬ್ಬರೂ ಸಾಕ್ಷಿಗಳು ಹೇಳಿದ್ದಾರೆ ದರ್ಶನ್ ಜೊತೆ ಪವಿತ್ರ ಶೆಡ್ ಗೆ ಬಂದು…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸೇರಿದಂತೆ ಒಟ್ಟು ಐದು ಜನರ ವಿರುದ್ಧ FIR ದಾಖಲಾಗಿದೆ. ಇದರ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ಈ ಒಂದು ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸಿ ಎಂದು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಹೌದು ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆಯಲ್ಲಿ ನನಗೆ ನಂಬಿಕೆ ಇಲ್ಲ. ಹಾಗಾಗಿ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕೆಂದು ಆಗ್ರಹಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದೇನೆ ಎಂದು ಅವರು ತಿಳಿಸಿದರು. ಮೇಲಾಧಿಕಾರಿಗಳಿಂದ ಒತ್ತಡ ಬಂದಿದೆ ಹಾಗಾಗಿ ಇದೀಗ fir ಹಾಕಿದ್ದಾರೆ. ನಮ್ಮ ಪ್ರಾಮಾಣಿಕ ಹೋರಾಟಕ್ಕೆ ಈಗ ಮತ್ತೊಂದು ಜಯ ಸಿಕ್ಕಿದೆ. ಹೋರಾಟಕ್ಕೆ ಜಯ ಸಿಗುತ್ತೆ ಎಂಬುದಕ್ಕೆ ಇದೇ ಉದಾಹರಣೆಯಾಗಿದೆ. ಸಾಮಾನ್ಯ ಪ್ರಜೆಯಿಂದ ಸಿಎಂ ವಿರುದ್ಧ ಹೋರಾಟಕ್ಕೆ ಇದೊಂದು ನಿದರ್ಶನವಾಗಿದೆ. ಭ್ರಷ್ಟ ಮುಖ್ಯಮಂತ್ರಿ ಗೆ ಎಂಬುದಕ್ಕೆ ಇದೊಂದು ಉದಾಹರಣೆಯಾಗಿದೆ ಎಂದು ಸ್ನೇಹಮಯಿ ಕೃಷ್ಣ ಮೊದಲ ಪ್ರತಿಕ್ರಿಯೆ…
ಬೆಂಗಳೂರು : ಬೆಂಗಳೂರಿನ ಗಂಗೇನಹಳ್ಳಿ ಸರ್ಕಾರಿ ಜಾಗ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಅತ್ತೆ ಹೆಸರಿಗೆ ಡಿನೋಟಿಫೈ ಆಗಿದ್ದು, ಭಾಮೈದನ ಹೆಸರಿಗೆ ರಿಜಿಸ್ಟರ್ ಆಗಿದೆ ಎಂದು ಕಾಂಗ್ರೆಸ್ ಇತ್ತೀಚಿಗೆ ದಾಖಲೆಗಳನ್ನು ಬಿಡುಗಡೆ ಮಾಡಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರ ಸಚಿವ HD ಕುಮಾರಸ್ವಾಮಿ ಲೋಕಾಯುಕ್ತ ಅಧಿಕಾರಿಗಳ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಹೌದು ಇಂದು ಏರ್ಪೋರ್ಟ್ ನಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ HD ಕುಮಾರಸ್ವಾಮಿ ಆಗಮಿಸಿದ್ದಾರೆ. ಸಂಜೆ ಒಳಗೆ ಹಾಜರಾಗುವುದಾಗಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಈಗಾಗಲೇ ಬಿಎಸ್ ಯಡಿಯೂರಪ್ಪ ವಿಚಾರಣೆ ಎದುರಿಸಿದ್ದಾರೆ. ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ಇಂದು ಸಂಜೆ ಎಚ್ ಡಿ ಕುಮಾರಸ್ವಾಮಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. 2007ರಲ್ಲಿ ಬೆಂಗಳೂರಿನ ಗಂಗೇನಹಳ್ಳಿಯ 1.11 ಎಕೆರ ಭೂಮಿಯನ್ನು ಸತ್ತವರ ಹೆಸರಲ್ಲಿ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಜಂಟಿಯಾಗಿ ಡಿನೋಟಿಫೈ ಮಾಡಿಸಿದ್ದರು ಎಂದು ಆರೋಪಿಸಿದ್ದಾರೆ. ಆದರೆ, ಈ ಕುರಿತು ಲೋಕಾಯುಕ್ತದಲ್ಲಿ ಕೇಸ್…
ಮೈಸೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ಕೂಡ ಸಿಎಂ ಸಿದ್ಧರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಕೋರ್ಟ್ ಆದೇಶದಂತೆ ಸಿಎಎಂ ಸಿದ್ಧರಾಮಯ್ಯ ವಿರುದ್ಧ ಎ1 ಆರೋಪಿಯಾಗಿ ಮುಡಾ ಹಗರಣದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸಿದ್ಧರಾಮಯ್ಯ ಭಾಮೈದ ಮಲ್ಲಿಕಾರ್ಜನ ಸ್ವಾಮಿ ಎ3 ಆರೋಪಿಯಾದರೇ, ಎ.4 ಆರೋಪಿಯನ್ನಾಗಿ ಭೂ ಮಾಲೀಕ ದೇವರಾಜು ಹಾಗೂ ಇತರರು ಎ5 ಆರೋಪಿಯನ್ನಾಗಿ ಮಾಡಿ ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಹೀಗಾಗಿ ಸಿಎಂ ಸಿದ್ಧರಾಮಯ್ಯ ಅವರ ಕುಟುಂಬಕ್ಕೆ ಸಂಕಷ್ಟ ಎದುರಾದಂತೆ ಆಗಿದೆ.ಇದೀಗ ಯಾವ ಯಾವ ಸೆಕ್ಷನ್ ಗಳ ಅಡಿಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂಬುವುದರ ಕುರಿತು ಮಾಹಿತಿ ಇಲ್ಲಿದೆ. ಯಾವೆಲ್ಲಾ ಸೆಕ್ಷನ್ ದಾಖಲು? ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 166, 403, 420, 426, 465, 468, 340, 351…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನವರು ಇಂದು ಜೈಲಿನಿಂದ ಬಿಡುಗಡೆಯಾಗುತ್ತಾರೆ. ಅವರನ್ನು ಬಳ್ಳಾರಿಯಿಂದ ಬೆಂಗಳೂರಿಗೆ ಹೆಲಿಕ್ಯಾಪ್ಟರ್ ನಲ್ಲಿ ಕರೆತರಲಾಗುತ್ತದೆ ಹಾಗಾಗಿ ಹೆಲಿಕ್ಯಾಪ್ಟರ್ ಬುಕ್ ಮಾಡಲಾಗಿತ್ತು ಎಂದು ಊಹಾಪೋಹಗಳು ಎದ್ದಿದ್ದವು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಸೇಷನ್ಸ್ ನ್ಯಾಯಾಲಯವು ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.30ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಹೌದು ಬೆಂಗಳೂರಿನ ಸೇಷನ್ಸ್ ಕೋರ್ಟ್ ನಲ್ಲಿ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ವೇಳೆ, ಎಸ್ ಪಿ ಪಿ ಪ್ರಸನ್ನಕುಮಾರ ಅವರು ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದರು. ಈ ವೇಳೆ ವಾದ ಮಂಡನೆಗೆ ಕಾಲಾವಕಾಶ ಕೋರಿ ದರ್ಶನ್ ಪರ ವಕೀಲರಾದ ಸುನಿಲ್ ಮನವಿ ಮಾಡಿದರು. ಹಾಗಾಗಿ ಇವರ ಒಂದು ಮನವಿಯ ಮೇರೆಗೆ ಸೆಪ್ಟೆಂಬರ್ 30 ಕ್ಕೆ ವಿಚಾರಣೆ ಮುಂದೂಡಿ ಕೋರ್ಟ್ ಆದೇಶಿಸಿದೆ.
ಕಲಬುರಗಿ : ತೊಗರಿ ಬೆಳೆಯಲು ಬ್ಯಾಂಕ್ ಹಾಗೂ ಖಾಸಗಿಯಾಗಿ ಲಕ್ಷಾಂತರ ರೂ.ಸಾಲ ಮಾಡಿದ್ದ ರೈತನೊಬ್ಬ, ಬೆಳೆ ಕೈಕೊಟ್ಟಿದ್ದರಿಂದ ಬ್ಯಾಂಕ್ ನವರು ನೋಟಿಸ್ ನೀಡಿದ್ದಕ್ಕೆ ಹೆದರಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೊತಂಗಲ ಗ್ರಾಮದಲ್ಲಿ ನಡೆದಿದೆ. ಪಾಂಡಪ್ಪ ತಿಪ್ಪಣ್ಣ ಕೊರುವನ್ (45) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಹೇಳಲಾಗಿತ್ತಿದ್ದು, ತೊಗರಿ ಬೆಳೆಯಲು ಬ್ಯಾಂಕ್ ಹಾಗೂ ಖಾಸಗಿಯಾಗಿ ಲಕ್ಷಾಂತರ ರೂ.ಸಾಲ ಮಾಡಿದ್ದ. ಆದರೆ, ದುರಾದೃಷ್ಟವಶಾತ್ ನಿರಂತರವಾಗಿ ಸುರಿದ ಮಳೆಗೆ ಜಮೀನಿನಲ್ಲಿ ಬೆಳೆದಿದ್ದ ತೊಗರಿ ನಾಶವಾಗಿತ್ತು. ಇತ್ತ ಬ್ಯಾಂಕ್ ಅಧಿಕಾರಿಗಳ ಸಾಲದ ಕಿರುಕುಳಕ್ಕೆ ಹೆದರಿ ತಿಪ್ಪಣ್ಣ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಸುಲೇಪೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರು : ಇಡಿ ದೇಶವೇ ಬೆಚ್ಚಿಬೀಳಿಸುವಂತೆ ಬೆಂಗಳೂರಿನಲ್ಲಿ ವಯಾಲಿಕಾವಲ್ ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ಕೊಲೆಗೆ ಸಂಬಂಧಪಟ್ಟಂತೆ ಹಲವು ಮಾಹಿತಿಗಳನ್ನು ತಿಳಿಸಿದ್ದಾರೆ. ಈ ಕುರಿತಾಗಿ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯೊಂದಿಗೆ ಮಾತನಾಡಿದ ಅವರು, ಮಹಾಲಕ್ಷ್ಮೀಯನ್ನು ಕೊಲೆ ಮಾಡಿದ ಬಳಿಕ ಆರೋಪಿ ಮುಕ್ತಿ ರಂಜನ್ ರಾಯ್ ಬಜಾಜ್ ಪ್ಲಾಟಿನಂ ಬೈಕ್ನಲ್ಲಿ ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಮಾರ್ಗವಾಗಿ 1,550 ಕಿಮೀ ಸಾಗಿ ತನ್ನ ಊರಾದ ಒಡಿಶಾದ ಭದ್ರಕ್ ಬಳಿಯ ಬೋನಿಪುರಗೆ ತೆರಳಿದ್ದಾನೆ. ಪ್ರಕರಣ ತನಿಖೆ ಇನ್ನೂ ನಡೆಯುತ್ತಿದೆ. ಮಹಾಲಕ್ಷ್ಮೀ ಕೊಲೆ ಮದುವೆ ವಿಚಾರವಾಗಿ ನಡೆದಿದೆ ಎಂಬ ಅಂಶ ತಿಳಿದು ಬಂದಿದೆ.ಆದರೆ, ಇದರ ಬಗ್ಗೆ ಇನ್ನೂ ಸ್ಪಷ್ಟತೆ ಸಿಗಬೇಕಿದೆ. ತನಿಖೆ ಮುಂದುವರೆದಿದೆ. ಕೊಲೆ ಮಾಡಿದ ಆರೋಪಿ ಮುಕ್ತಿ ರಂಜನ್ ರಾಯ್ ಒರಿಸ್ಸಾದ ಭದ್ರಪ್ ಜಿಲ್ಲೆಯ ದುಸ್ತ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಳದಲ್ಲಿ ಡೆತ್ ನೋಡ್ ದೊರೆತಿದೆ.…
ಚಾಮರಾಜನಗರ : ಮುಡಾದಲ್ಲಿ ಹಗರಣ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ ಮೈಸೂರಿನ ಸ್ನೇಹಮಯಿ ಕೃಷ್ಣ ವಿರುದ್ಧ ಇದೀಗ ಆರ್‌ಟಿಐ ಕಾರ್ಯಕರ್ತರು ಒಬ್ಬರು ಲಕ್ಷಾಂತರ ರೂಪಾಯಿ ನನಗೆ ವಂಚಿಸಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ಹೌದು ಚಾಮರಾಜನಗರದ ಆರ್‌ಟಿಐ ಕಾರ್ಯಕರ್ತ ಕರುಣಾಕರ್ ಎನ್ನುವವರು, ಸ್ನೇಹಮಯಿ ಕೃಷ್ಣ ವಿರುದ್ಧ ವಂಚನೆ ದೂರು ನೀಡಿದ್ದಾರೆ. 3,ಲಕ್ಷ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.ಈ ಕುರಿತು ಚಾಮರಾಜನಗರದಲ್ಲಿ ದೂರುದಾರ ಕರುಣಾಕರ್ ಹೇಳಿಕೆ ನೀಡಿದ್ದು, ಹಣ ಕೊಡಿ ಅಂತ ಸಾಲದ ರೂಪದಲ್ಲಿ ಸ್ನೇಹ ಮಹಿ ಕೃಷ್ಣ ಕೇಳುತ್ತಾರೆ. ಬಳಿಕ ಬಡ್ಡಿ ಸಮೇತ ಹಣ ವಾಪಸ್ ಕೊಟ್ಟು ನಂಬಿಕೆಗಳಿಸುತ್ತಾರೆ. ನಂತರ ಮತ್ತೆ ನನ್ನ ಬಳಿ 3,00,000 ಹಣ ಪಡೆದಿದ್ದಾರೆ. ಹಣಕೊಡಲು ಸಾಧ್ಯವಿಲ್ಲದಿದ್ದಾಗ ರಿವರ್ಸ್ ಆಗುತ್ತಾರೆ. ಪತ್ನಿಗೆ ಹುಷಾರಿಲ್ಲ, ಮಕ್ಕಳ ಸ್ಕೂಲ್ ಫೀಸ್ ಕಟ್ಟಬೇಕು ಎಂದು ಸಾಲ ಪಡೆದಿದ್ದರು. ಯಾರ ಬಳಿಯೂ ಚೆಕ್ ಅಥವಾ ಆರ್ಟಿಜಿಎಸ್ ಮೂಲಕ ಹಣ ಪಡೆಯಲ್ಲ.ಎಲ್ಲಾ ಹಣ…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ ಅವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇಂದು ದರ್ಶನ್ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಸೇಷನ್ಸ್ ಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 30 ಕ್ಕೆ ಮುಂದೂಡಿ ಆದೇಶ ಹೊರಡಿಸಿತು. ಕೊಲೆ ಕೇಸಿನ A2 ಆರೋಪಿಯಾಗಿರುವ ದರ್ಶನ್ ಜಾಮೀನು ಅರ್ಜಿಗೆ ಸದ್ಯ ಅಕ್ಷೇಪಣೆ ಸಲ್ಲಿಸಲಾಗಿದೆ. ವಾದ ಮಂಡನೆಗೆ ಕಾಲಾವಕಾಶ ಕೋರಿ ದರ್ಶನ್ ಪರ ವಕೀಲರು ಮನವಿ ಮಾಡಿದ್ದಾರೆ. ಹಾಗಾಗಿ ವಕೀಲ ಸುನಿಲ್ ಮನವಿಯ ಮೇರೆಗೆ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಲಿದೆ. ಹಾಗಾಗಿ ಇಂದಿನಿಂದ ಮೂರು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ನನ್ನ ಮೇಲೆ ರಾಜಕೀಯ ಕೇಸ್ ಹಾಕಿರುವುದು ಇದೇ ಮೊದಲು ಎಂದು ತಿಳಿಸಿದರು. ಮೈಸೂರಿನ ಜಿಲ್ಲಾ ಪಂಚಾಯತ್ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಮೇಲೆ ರಾಜಕೀಯ ಕೇಸ್ ಹಾಕಿದ್ದು ಇದೇ ಮೊದಲು. ತಪ್ಪು ಮಾಡಿದ್ದರೆ ತಾನೇ ರಾಜೀನಾಮೆ ಕೊಡುವುದು. ತಪ್ಪು ಮಾಡಿಲ್ಲ ಅಂದರೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಕುಮಾರಸ್ವಾಮಿ ಯಾರ ಸರ್ಕಾರದಲ್ಲಿ ಇರುವುದು? ಅವರ ಮೇಲೆ ಎಫ್ ಐ ಆರ್ ಆಗಿದ್ದರೂ ಕೂಡ ಜಾಮೀನಿನ ಮೇಲೆ ಹೊರಗಡೆ ಇದ್ದಾರಲ್ಲ ಅವರ್ಯಾಕೆ ರಾಜೀನಾಮೆ ಕೊಟ್ಟಿಲ್ಲ? ಎಂದರು. ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಈ ರೀತಿ ರಾಜಕೀಯ ಮಾಡುತ್ತಿದ್ದಾರೆ. ಗೋದ್ರಾ ಗಲಭೆ ನಡೆದಾಗ ನರೇಂದ್ರ ಮೋದಿ ರಾಜೀನಾಮೆ ಕೊಟ್ಟಿದ್ದಾರ? ಬಿಜೆಪಿಯವರಿಗೆ ರಾಜೀನಾಮೆ…