Author: kannadanewsnow05

ಬೆಂಗಳೂರು : ಬೆಂಗಳೂರಲ್ಲಿ ನಡು ರಸ್ತೆಯಲ್ಲಿಯೇ ಗ್ರಾಹಕ ನಿಂದ ಕ್ಯಾಬ್ ಡ್ರೈವರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗ್ರಾಹಕ ಸಂತೋಷ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಸಾರ್ವಜನಿಕರು ಮತ್ತು ಪೊಲೀಸರ ಮೇಲು ಸಂತೋಷ್ ಎನ್ನುವವನಿಂದ ಹಲ್ಲೆ ನಡೆದಿದೆ ಮೈಸೂರು ನಿಂದ ಬೆಂಗಳೂರು ಏರ್ಪೋರ್ಟ್ಗೆ ಸಂತೋಷ್ ಕಾರ್ ಬುಕ್ ಮಾಡಿದ್ದ ಸಂತೋಷ್ ಕುಟುಂಬದ ಸದಸ್ಯರ ಜೊತೆಗೆ ಬದ್ರಿನಾಥ್ ಗೆ ತೆರಳುತ್ತಿದ್ದ. ಈ ವೇಳೆ ಕ್ಯಾಬ್ ಡ್ರೈವರ್ ಮೇಲೆ ಸಂತೋಷ ಹಲ್ಲೆ ಮಾಡಿದ್ದಾನೆ.

Read More

ಉತ್ತರಕನ್ನಡ : ಸಮುದ್ರದಲ್ಲಿ ಮುಳುಗುತ್ತಿದ್ದ ವಿದೇಶಿ ಪ್ರಜೆಯನ್ನು ರಕ್ಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೊಕಿನ ಕುಡ್ಲೆ ಬೀಚ್ನಲ್ಲಿ ಈ ಒಂದು ಘಟನೆ ನಡೆದಿದೆ. ಕುಡ್ಲೆ ಬೀಚ್ನಲ್ಲಿ ಕಜಕಿಸ್ತಾನ ಮೂಲದ ಐದಾಲಿ (25) ಎನ್ನುವ ವಿದೇಶಿ ಪ್ರಜೆಯನ್ನು ರಕ್ಷಿಸಲಾಗಿದೆ. ಐದಾಲಿ ಸಮುದ್ರದಲ್ಲಿ ಈಜಲು ತೆರಳಿದ್ದಾಗ ಅಲೆಗೆ ಸಿಲುಕಿದ್ದಾನೆ. ಮಂಜುನಾಥ ಹರಿಕನ್ತ್ರ, ಗಿರೀಶ್ ಗೌಡ ಹಾಗೂ ನಾಗೇಂದ್ರ ಎನ್ನುವವರು ವಿದೇಶ ಪ್ರಜೆಯನ್ನು ರಕ್ಷಿಸಿದ್ದಾರೆ. ಘಟನೆ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕಿಡಿಗೇಡಿಗಳು ಕಾರಾಗೃಹದ ಎಡಿಜಿಪಿ ಆಗಿರುವಂತಹ ಬಿ.ದಯಾನಂದ್ ಅವರ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ವರದಿಯಾಗಿದೆ. ಹೌದು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ದಯಾನಂದ್ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್‌ಬುಕ್ ಖಾತೆಯನ್ನು ತೆರೆದಿದ್ದಾರೆ. ಈ ಹಿಂದೆ ಮೂರು ಬಾರಿ ನಕಲಿ ಅಕೌಂಟ್ ಓಪನ್ ಆಗಿರುವ ಬಗ್ಗೆ ದಯಾನಂದ್‌ ಸೈಬರ್ ಪೊಲೀಸರ ಗಮನಕ್ಕೆ ತಂದಿದ್ದರು. ಆದರೂ ಸೈಬರ್ ಖದೀಮರು ಮುಂದುವರೆದು ಸೂಟ್ ಹಾಕಿರುವ ಹಾಗೂ ಮಕ್ಕಳ ಜೊತೆ ಇರುವ ಪೋಟೋ ಬಳಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಸದ್ಯ ಕಾರಾಗೃಹ ಎಡಿಜಿಪಿಯಾಗಿ ದಯಾನಂದ್ ಕರ್ತವ್ಯ ನಿರ್ವಹಿಸುತ್ತಿದ್ದು ಇತ್ತೀಚೆಗೆ ಜೈಲಿನ ಒಳಗಡೆ ಇರುವ ವಿಡಿಯೋ ವೈರಲ್‌ ಆಗಿತ್ತು. ದಯಾನಂದ್‌ ಅವರಿಗೆ ಕೆಟ್ಟ ಹೆಸರು ತರಲು ವಿಡಿಯೋ ವೈರಲ್ ಮಾಡಲಾಗುತ್ತಿದೆ ಎಂಬ ಮಾತು ಕೇಳಿ ಬಂದಿತ್ತು. ಈಗ ನಕಲಿ ಎಫ್‌ಬಿ ಖಾತೆ ತೆರೆದುಹಲವು ಮಂದಿಗೆ ಫ್ರೆಂಡ್‌ ರಿಕ್ವೆಸ್ಟ್‌ ಕಳಿಸಿದ ಬಗ್ಗೆ ದೂರು ದಾಖಲಿಸಿ…

Read More

ಹುಬ್ಬಳ್ಳಿ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಹೃದಯಾಘಾತವಾಗಿ ಸಾವನ್ನಪ್ಪಿದ ಎಎಸ್​ಐಯೋರ್ವರು ಸಾವನ್ನಪ್ಪಿದ್ದು, ಅವರು ತಮ್ಮ ಸಾವಿನಲ್ಲೂ ಕೂಡ ಸಾರ್ಥಕತೆ ಮೆರೆದಿದ್ದಾರೆ. ಕಲಘಟಗಿ ಪೊಲೀಸ್​​ ಠಾಣೆಯಲ್ಲಿ ಎಎಸ್​ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಕಾಂತ ಹುಟಗಿ (58) ಅವರು ಭಾನುವಾರ(ನ.16) ಬೆಳಗ್ಗೆ ಹೃದಯಾಘಾತದಿಂದ ಹುಬ್ಬಳ್ಳಿ ಸುಚರಾಯು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿ ಆಗದೆ ನಿಧನರಾದರು. ತಮ್ಮವರನ್ನು ಕಳೆದುಕೊಂಡ ನೋವಿನ ಸಂದರ್ಭದಲ್ಲೂ ಕೂಡ ಅವರ ಕುಟುಂಬ ಚಂದ್ರಕಾಂತ ಅವರ 2 ಕಣ್ಣುಗಳನ್ನು ದಾನ ಮಾಡಿದ್ದಾರೆ.

Read More

ದಾವಣಗೆರೆ : ದಾವಣಗೆರೆಯಲ್ಲಿ ಘೋರ ಘಟನೆ ನಡೆದಿದ್ದು, ಟ್ರ್ಯಾಕ್ಟರ್ ರೋಟವೇಟರ್ ಯಂತ್ರಕ್ಕೆ ಸಿಲುಕಿ ರೈತ ಸಾವನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದಿದ್ದಿಗಿ ಗ್ರಾಮದ ಜಮೀನೊಂದರಲ್ಲಿ ನಡೆದಿದೆ.‌ ದಿದ್ದಿಗಿ ಗ್ರಾಮದ ನಾರಪ್ಪ (30) ರೋಟವೇಟರ್ ಯಂತ್ರ ಸಿಲುಕಿ ಸಾವನಪ್ಪಿರುವ ರೈತ ಎಂದು ತಿಳಿದು ಬಂದಿದೆ. ಎಂದಿನಂತೆ ರೈತ ನಾರಪ್ಪ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ರೋಟವೇಟರ್ ಹೊಡೆಸುತ್ತಿದ್ದರು.‌ ಈ ವೇಳೆ ಚಾಲಕ‌ನ ಪಕ್ಕದಲ್ಲಿ ಕುಳಿತಿದ್ದ ರೈತ ನಾರಪ್ಪ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಆಗ ಏಕಾಏಕಿ ಆತನ ಮೇಲೆ ರೋಟವೇಟರ್ ಯಂತ್ರ ಹರಿದಿದೆ. ಪರಿಣಾಮ ರೋಟವೇಟರ್​ಗೆ ಸಿಕ್ಕ ರೈತನ ದೇಹ ಛಿದ್ರವಾಗಿದೆ. ತಕ್ಷಣವೇ ಟ್ರ್ಯಾಕ್ಟರ್ ನಿಲ್ಲಿಸಿ ನೋಡಿದಾಗ ಸ್ಥಳದಲ್ಲೇ ರೈತ ನಾರಪ್ಪ ಕೊನೆಯುಸಿರೆಳೆದಿದ್ದರು.‌ ಮನೆಗೆ ಆಧಾರವಾಗಿದ್ದ ರೈತ ನಾರಪ್ಪನನ್ನು ಕಳೆದುಕೊಂಡ ಕುಟುಂಸ್ಥರ ಆಕ್ರಂದನ ಮುಗಿಲುಮುಟ್ಟಿದೆ.‌ ಈ ಸಂಬಂಧ ಹತ್ತಿರದ ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಹುಟ್ಟು ಹಬ್ಬದ ದಿನವೇ ಒಂಬತ್ತನೇ ತರಗತಿ ವಿದ್ಯಾರ್ಥಿನಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಾದನಾಯಕನಹಳ್ಳಿ ಠಾಣೆ ಪೋಲೀಸರು ಆರೋಪಿಯನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಯುವಕ ಯತೀಶ್ 15 ವರ್ಷದ ಬಾಲಕಿಯನ್ನ ಕೇಕ್ ಕತ್ತರಿಸುವುದಾಗಿ ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ. ಕೇಕ್ ಕತ್ತರಿಸುವ ನೆಪದಲ್ಲಿ ರಾಶಿ ಲೇಔಟ್ಟೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಅತ್ಯಾಚಾರ ಬಳಿಕ ಕಾಮುಕ ಎಸ್ಕೆಪ್ ಆಗಿದ್ದಾನೆ. 9 ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಈ ಸಂಬಂಧ ಪೊಲೀಸರಿಗೆ ಪೋಷಕರು ದೂರು ನೀಡಿದ್ದು, ಆರೋಪಿಯನ್ನ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ತಡರಾತ್ರಿ ಭೀಕರವಾದ ಅಪಘಾತ ಸಂಭವಿಸಿದ್ದು ಈ ಒಂದು ಅಪಘಾತದಲ್ಲಿ ನವವಿವಾಹಿತ ಸಾವನಪ್ಪಿದ್ದಾನೆ. ಖಾಸಗಿ ಬಸ್ ಡಿಕ್ಕಿಯಾಗಿ ನವವಿವಾಹಿತ ಮೃತಪಟ್ಟಿರುವ ಘಟನೆ ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಲ್ಲಿ ರವಿವಾರ ರಾತ್ರಿ ನಡೆದಿದೆ. ಶಾಂತಿ ನಗರದ ನಿವಾಸಿ ಅಹ್ಮದ್ (31) ಮೃತ ಯುವಕ ಎಂದು ತಿಳಿದುಬಂದಿದೆ. ರಾಗಿಗುಡ್ಡ ಕಡೆಯಿಂದ ಬಂದ ಖಾಸಗಿ ಬಸ್ ಮಣ್ಣಿನ ದಿಬ್ಬ ಹಾರಿ ಅಡ್ಡಾದಿಡ್ಡಿ ಚಲಿಸಿದ್ದು, ಮೂರು ದ್ವಿಚಕ್ರ ವಾಹನಗಳು, ನಾಲ್ವರು ವ್ಯಕ್ತಿಗಳಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್‌ಗಳು ಜಖಂಗೊಂಡಿದ್ದರೆ, ಪೊಲೀಸ್ ಬ್ಯಾರಿಕೇಡ್ ತುಂಡಾಗಿದೆ. ಫುಟ್‌ಪಾತ್‌ಗೆ ಅಳವಡಿಸಿದ್ದ ರೇಲಿಂಗ್ ಕೂಡ ಹಾನಿಯಾಗಿದೆ. ಅಪಘಾತದಲ್ಲಿ, ಮೂವರು ಗಾಯಗೊಂಡಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತ ಸಂಭವಿಸುತ್ತಿದ್ದಂತೆ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಡೇಟಿಂಗ್ ನೆಪದಲ್ಲಿ ಕಳ್ಳತನ ಮಾಡುತ್ತಿದ್ದ ಪ್ರೇಮಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಬಂದಿದ್ದರನ್ನು ಕವಿಪ್ರಿಯ ಹಾಗೂ ಹರ್ಷವರ್ಧನ ಎಂದು ತಿಳಿದು ಬಂದಿದೆ. ಆಪ್ ಗಳ ಮೂಲಕ ಇಬ್ಬರು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು ಸಾಲ ತೀರಿಸಲು ಆಗದೆ ಪ್ಲಾನ್ ಮಾಡಿ ಡೇಟಿಂಗ್ ಆಪ್ ಮೂಲಕ ವಂಚನೆ ಎಸಗುತ್ತಿದ್ದರು. ಹ್ಯಾಪನ್ ಆಪ್ ನಲ್ಲಿ ಫೋಟೋ ಹಾಕಿ ಯುವಕರಿಗೆ ಬಲೆ ಬೀಸುತ್ತಿದ್ದರು ಪ್ರಿಯಕರ ಪ್ಲಾನ್ ಅಂತ ಕವಿಪ್ರಿಯಾಳಿಂದ ಯುವಕರಿಗೆ ಬಲೆ ಹಾಕಲಾಗುತ್ತಿತ್ತು. ಯುವಕರ ಭೇಟಿಯ ಬಳಿಕ ಚಿನ್ನ ನಗದು ದೋಚಿ ಪರಾರಿ ಆಗುತ್ತಿದ್ದರು. ನವೆಂಬರ್ ಒಂದರಂದು ಓರ್ವ ಯುವಕನನ್ನು ಲಾಡ್ಜ್ ಗೆ ಕರೆದು ಆತನಿಗೆ ಪ್ರಜ್ಞೆ ತಪ್ಪಿಸಿ ಆತನ ಬಳಿ ಇರುವ ಚಿನ್ನ ನಗದು ಹಣ ದೋಚಿ ಪರಾರಿಯಾಗಿದ್ದಳು. ನವೆಂಬರ್ 1 ರಂದು ಬೆಂಗಳೂರಿನ ಇಂದಿರಾನಗರದ ಲಾಡ್ಜ್ ಒಂದಕ್ಕೆ ಕವಿಪ್ರಿಯ ಯುವಕನನ್ನು ಕರೆಸಿದ್ದಾಳೆ. ಅಲ್ಲಿ ಇಬ್ಬರು ಕಂಟಪೂರ್ತಿ ಕುಡಿದಿದ್ದಾರೆ. ಬಳಿಕ ಆಕೆ ಆನ್ಲೈನ್ ನಲ್ಲಿ ಊಟ ತರಿಸಿದ್ದಾಳೆ. ನಂತರ ನೀರಿನಲ್ಲಿ ಪ್ರಜ್ಞೆ…

Read More

ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಸೂಳೆಮರ್ಕಿ ಕ್ರಾಸ್ ಬಳಿ ಬಸ್ ಪಲ್ಟಿಯಾಗಿ 29 ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮರ್ಕಿ ಗ್ರಾಮದಲ್ಲಿ ಈ ಒಂದು ಅಪಘಾತ ನಡೆದಿದೆ. ಬಾದಾಮಿಯಿಂದ ಕೆಎಸ್ಆರ್ಟಿಸಿ ಬಸ್ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಇವನು ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ತಕ್ಷಣ ಹೊನ್ನಾವರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು : ರಾಜ್ಯದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಡಬ ನಿವಾಸಿ ಉಮೇಶ್ ಗೌಡ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ನ.13ರಂದು ರಾತ್ರಿ ಸಂತ್ರಸ್ತ ಮಹಿಳೆ ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಆರೋಪಿಯು ಅಲ್ಲಿಗೆ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ ಈ ವೇಳೆ ಸಂತ್ರಸ್ತೆ ಸಹಾಯಕ್ಕಾಗಿ ಬೊಬ್ಬೆ ಹೊಡೆದಿದ್ದು, ಮನೆಯೊಳಗಿದ್ದ ಆಕೆಯ ಪತಿ, ಮಕ್ಕಳು ಬಂದು ಆರೋಪಿಯನ್ನು ಹಿಡಿಯಲು ಯತ್ನಿಸಿದಾಗ, ಆರೋಪಿಯು ಹಲ್ಲೆ ನಡೆಸಿ, ಮಹಿಳೆಗೆ ಜಾತಿ ನಿಂದನೆ ಮಾಡಿರುವುದಾಗಿ ದೂರಿನಲ್ಲಿ ತಿಳಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕಡಬ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Read More