Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಹೈ ಕೋರ್ಟ್ ತೀರ್ಪು ಪ್ರಕಟಿಸಿತ್ತು. ಈ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಪಾಲಿಟಿಕಲ್ ಜಡ್ಜ್ಮೆಂಟ್ ಆಗಿದ್ದು ಸಿಎಂ ಸಿದ್ಧರಾಮಯ್ಯ ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿಕೆ ನೀಡಿದರು. ಈ ವಿಚಾರವಾಗಿ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಇತರೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದಾಗ ಕೂಡಲೆ ಸುದ್ದಿಗೋಷ್ಠಿ ನಡೆಸಿ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದರು. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಜಮೀರ್ ಅಹ್ಮದ್ ಹೇಳಿಕೆಗೆ ಇತರೆ ಸಚಿವರು ಅಸಮಾಧಾನ ಹೊರಹಾಕಿದ್ದಾರೆ. ಅಸಮಾಧಾನ ಹೊರಹಾಕುತ್ತಿದ್ದಂತೆ ಜಮೀರ್ ಅಹ್ಮದ್ ಸುದ್ದಿಗೋಷ್ಠಿ ನಡೆಸಿದ್ದಾರೆ. ನ್ಯಾಯಾಲಯದ ಬಗ್ಗೆ ನನಗೆ ಗೌರವ ಇದೆ. ನಾನು ಬಾಯಿ ತಪ್ಪಿ ಅಂದಿರಬಹುದು ಅಷ್ಟೇ ಕೋರ್ಟ್ ತೀರ್ಪಿನ ಬಗ್ಗೆ ಜಮೀರ್ ಆಕ್ಷೇಪಾರ್ಹ ಹೇಳಿಕೆ ವಿಚಾರವಾಗಿ ಸ್ಪಷ್ಟನೆ ನೀಡಿದರು. ನಿನ್ನೆ ಹೈಕೋರ್ಟ್ ನಲ್ಲಿ ಜಡ್ಜ್ಮೆಂಟ್ ಬಂದಿತ್ತು. ನಮ್ಮ ಪ್ರಾಸಿಕ್ಯೂಷನ್ ಅನುಮತಿ ರದ್ದು ಮಾಡಿ ಅಂತ ಕೇಳಿದ್ವಿ. ಅದನ್ನ…
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ರಾಜನ ಮೇಲೆ ಭಂಗ ಬೀರಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದವರ ಬದಲಾವಣೆ ಆಗಲಿದೆ ಎಂದು ಅರಸೀಕೆರೆ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳು ನುಡಿದಿದ್ದರು. ಮುಡಾ ಕಾನೂನು ಹೋರಾಟದಲ್ಲಿ ಸಿದ್ದರಾಮಯ್ಯಗೆ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ ಶ್ರೀಗಳ ಭವಿಷ್ಯ ನಿಜವಾಗುತ್ತಾ ಎನ್ನುವ ಆತಂಕ ಎಲ್ಲರಲ್ಲಿದೆ. ಹೌದು ಕಳೆದ ಕೆಲವು ದಿನಗಳ ಹಿಂದೆ ರಾಜ್ಯದ ಪ್ರಾಕೃತಿಕ ಸ್ಥಿತಿಗತಿ ಮತ್ತು ಸರ್ಕಾರದ ಬಗ್ಗೆ ಅವರು ಭವಿಷ್ಯ ಹೇಳಿದ್ದಾರೆ. ಮಳೆಯಿಂದ ಜಾಸ್ತಿ ತೊಂದರೆ ಇದೆ. ಪ್ರಾಕೃತಿಕ ದೋಷ ಇದೆ. ಭೂಮಿ, ಅಗ್ನಿ, ವಾಯು, ಆಕಾಶ ಎಲ್ಲಾ ಕಡೆ ತೊಂದರೆ ಆಗುತ್ತದೆ. ಐದು ಕಡೆಯೂ ತೊಂದರೆ ಇದೆ. ಇನ್ನೂ ಒಂದು ವಿಚಾರ, ಆಕಾಶದಿಂದ ಕೂಡ ದೊಡ್ಡ ಸುದ್ದಿ ಬರಬಹುದು ಎಂದು ಅವರು ಹೇಳಿದ್ದರು. ಜನ ಇದ್ದಂಗೆ ಸಾಯುತ್ತಾರೆ. ಭೂಮಿ ಬಿರುಕು ಬಿಡುತ್ತದೆ ಎಂದಿದ್ದೆ. ಗುಡ್ಡ ಹೋಗುತ್ತದೆ ಎಂದು ಹೇಳಿದ್ದೆ. ಪ್ರವಾಹದಲ್ಲಿ ಜಗತ್ತಿನಾದ್ಯಂತ ಅನೇಕ ಪ್ರದೇಶಗಳು ಮುಳುಗುತ್ತವೆ…
BREAKING : ಹಾಸನ : ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು!
ಹಾಸನ : ಮಧ್ಯಾಹ್ನ ನೀಡುವ ಬಿಸಿಯೂಟದಲ್ಲಿ ಹಲ್ಲಿ ಬಿದ್ದ ಪರಿಣಾಮ ಸರ್ಕಾರಿ ಪ್ರೌಢಶಾಲೆಯ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಗಿಮರೂರು ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ರಾಗಿಮರೂರು ಸರ್ಕಾರಿ ಪ್ರೌಢ ಶಾಲೆಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದೀಗ ಅಸ್ವಸ್ಥರಾಗಿದ್ದಾರೆ. ತಾಲೂಕಿನ ಕೋಣನೂರಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಅರಕಲಗೂಡು ತಾಲೂಕು ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಅಸ್ವಸ್ಥಗೊಂಡ 8 ಮಕ್ಕಳನ್ನು ಹಾಸನ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಹಲ್ಲಿ ಬಿದ್ದು ಕಳುಹಿಸಿತಗೊಂಡ ಆಹಾರವನ್ನು ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ವಾಂತಿಯಿಂದ ಬಳಲುತ್ತಿದ್ದವರನ್ನು ಶಿಕ್ಷಕರು ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ.ಸುರಕ್ಷತಾ ಕ್ರಮ ವಹಿಸಿದ ಶಾಲಾ ಶಿಕ್ಷಕರ ವಿರುದ್ಧ ಇದೀಗ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಘಟನೆ ಕುರಿತಂತೆ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಿನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಇಂದು ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ಇನ್ನು ಇದೇ ವಿಚಾರವಾಗಿ ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಅವರು, ಭ್ರಷ್ಟಾಚಾರದಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ತಮಗೆ ಬೇಕಾದವರನ್ನು ಲೋಕಾಯುಕ್ತ ಎಡಿಜಿಪಿಯನ್ನಾಗಿ ನೇಪಿಸಿಕೊಂಡಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ಭಯಭೀತರಾಗಿದ್ದಾರೆ. ಭಯದಿಂದಲೇ ಕಾಂಗ್ರೆಸ್ ಪಕ್ಷ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ. ಬಿಜೆಪಿಯಲ್ಲಿ ಭ್ರಷ್ಟಾಚಾರ ಆರೋಪ ಇಲ್ಲದವರಿಗೆ ಸನ್ಮಾನಿಸುತ್ತೇವೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನೀವೇ ದೊಡ್ಡ ಭ್ರಷ್ಟಾಚಾರಿಗಳು ನೀವು ಏನು ಮಾತನಾಡುತ್ತೀರಿ ಅಂತ ಸಿಎಂಗೆ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯನವರೇ 70 ಲಕ್ಷ ರೂಪಾಯಿ ಮೌಲ್ಯದ ವಾಚ್ ಏನಾಯ್ತು? ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಏನಾಯ್ತು? ನೀವೇ ಮಾಡಿದ ರೀಡೂ ವಿಷಯದಲ್ಲಿ ಕೆಂಪಣ್ಣ ವರದಿ ಏನಾಯಿತು? ಈಗ…
ಪಂಜಾಬ್ : ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರ ಆರೋಗ್ಯದಲ್ಲಿ ಇದೀಗ ಏರುಪೇರು ಉಂಟಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ. ನಿನ್ನೆ ರಾತ್ರಿ ಅವರಿಗೆ ಅನಾರೋಗ್ಯ ಕಂಡುಬಂದಿದ್ದು, ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ಸದ್ಯ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ನೀಡಿತ್ತು. ಇದೀಗ ಈ ಒಂದು ಆದೇಶದ ಪ್ರತಿ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ಅವರ ಕೈಗೆ ತಲುಪಿದೆ. ಹಾಗಾಗಿ ಇಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ಐಆರ್ ದಾಖಲಾಗುತ್ತಾ ಎಂದು ಕಾದು ನೋಡಬೇಕಾಗಿದೆ. ಕೋರ್ಟ್ ನಿಂದ ಆದೇಶ ಪ್ರತಿಯನ್ನು ಲೋಕಾಯುಕ್ತ ಎಸ್ ಪಿ ಉದೇಶ ಇದೀಗ ಪಡೆದುಕೊಂಡಿದ್ದಾರೆ. ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಂದು ಆದೇಶದ ಪ್ರತಿ ಪಡೆದಿದ್ದಾರೆ.ಹಾಗಾಗಿ ಶೀಘ್ರವೇ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುತ್ತಾ ಎಂದು ಕಾದು ನೋಡಬೇಕು.
ದಾವಣಗೆರೆ : ಆಟವಾಡುತ್ತಾ ಆಯತಪ್ಪಿ ನೀರಿನ ತೊಟ್ಟಿಯಲ್ಲಿ ಬಿದ್ದು ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಕರೂರು ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ. ಮೃತ ಬಾಲಕನನ್ನು ದಾವಣಗೆರೆ ತಾಲೂಕಿನ ಕರೂರು ಗ್ರಾಮದ ಸೈಯದ್ ಆಜಾನ್ ಎಂದು ಹೇಳಲಾಗುತ್ತಿದ್ದು, ವಿನೋಬನಗರದ ನಿವಾಸಿ ಸೈಯದ್ ಶಹಬಾದ್ ಇಕ್ಬಾಲ್ ಅವರ ಪುತ್ರ ಎಂದು ತಿಳಿಬಂದಿದೆ. ನಿನ್ನೆ ಕುಟುಂಬದವರೊಂದಿಗೆ ಮದುವೆಗೆ ಸೈಯದ್ ಶಹಬಾದ್ ಇಕ್ಬಾಲ್ ಕರೂರು ಗ್ರಾಮಕ್ಕೆ ಬಂದಿದ್ದರು. ಈ ವೇಳೆ ರಾತ್ರಿ ಬಾಲಕ ಆಟವಡುತ್ತಾ ಹೋಗಿ ಕಾರ್ಖಾನೆ ಸಲುವಾಗಿ ನಿರ್ಮಾಣ ಮಾಡಿದ್ದ ನೀರಿನ ಸಣ್ಣ ತೊಟ್ಟಿಯಲ್ಲಿ ಆಕಸ್ಮಿಕವಾಗಿ ಬಿದ್ದಿದ್ದಾನೆ. ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಸಾವು ಕಂಡಿದ್ದಾನೆ. ಬಾಲಕನ ಸಾವಿನ ಸುದ್ದಿ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಗಾಂಧಿಗನರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಹಲವು ಬಿಜೆಪಿ ನಾಯಕರು ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಮತ್ತೊಂದೆಡೆ ಬಿಜೆಪಿ ಬಂಡಾಯ ನಾಯಕರು ಪ್ರತ್ಯೇಕ ಸಭೆ ನಡೆಸಿದ್ದಾರೆ.ಹೌದು ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ಅವರ ಸದಾಶಿವನಗರ ನಿವಾಸದಲ್ಲಿ ಬಿಜೆಪಿ ಅಸಮಾಧಾನಿತ ನಾಯಕರ ಸಭೆ ನಡೆದಿದೆ. ಈ ಒಂದು ಸಭೆಯಲ್ಲಿ ಪ್ರಮುಖವಾದಂತಹ ನಿರ್ಧಾರ ಕೈಗೊಂಡಿದ್ದು, ಮೈಸೂರು ದಸರಾ ಹಬ್ಬ ಮುಗಿದ ಬಳಿಕ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮದ ಕುರಿತಾಗಿ ಬಸವಕಲ್ಯಾಣದಿಂದ ಬಳ್ಳಾರಿಯ ವರೆಗೆ ಪಾದಯಾತ್ರೆ ನಡೆಸಲು ಬಿಜೆಪಿಯ ಅಸಮಾಧಾನಿತ ನಾಯಕರು ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಬಸವಕಲ್ಯಾಣದಿಂದ ಬಳ್ಳಾರಿಯವರಿಗೆ ಬಿಜೆಪಿ ಮತ್ತೊಂದು ಪಾದಯಾತ್ರೆಗೆ ಸಿದ್ಧತೆ ಮಾಡಿಕೊಂಡಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ತಂಡದಿಂದ ಈ ಒಂದು ನಿರ್ಧಾರ ಕೈಗೊಳ್ಳಲಾಗಿದೆ. ಪಾದಯಾತ್ರೆಯ ರೂಪುರೆಷೆಯ ಬಗ್ಗೆ ಪ್ಲಾನ್ ಮಾಡಲಾಗಿದ್ದು, ಈ ಕುರಿತು ಬಸನಗೌಡ ಪಾಟೀಲ ಯತ್ನಾಳ…
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ವೈಯಲಿಕಾವಲ್ ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ ಆರೋಪಿ ಆಗಿದ್ದ ಮುಕ್ತಿ ರಂಜನ್ ರಾಯ್ ಅವರ ತಾಯಿ ಮಹಾಲಕ್ಷ್ಮಿ ವಿರುದ್ಧ ಸ್ಪೋಟಕ ವಾದಂತಹ ಆರೋಪ ಮಾಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಪಿಯ ತಾಯಿ ಕುಂಜಲತಾ ರಾಯ್, ನನ್ನ ಮಗನ ವಿರುದ್ಧ ಕೊಲೆಯಾದ ಮಹಿಳೆ ಟ್ರ್ಯಾಪ್ ಮಾಡಿದ್ದಳು. ಅವಳು ಅವನಿಂದ ನಿರಂತರವಾಗಿ ಹಣ ಕೇಳುತ್ತಲೇ ಇದ್ದಳು. ಈ ವಿಚಾರವನ್ನು ಆತ ಹೇಳಿಕೊಂಡಿದ್ದ. ನಾನು ಅವನನ್ನು ಬೆಂಗಳೂರು ತೊರೆಯುವಂತೆ ಹೇಳಿದ್ದೆ ಎಂದು ಹೇಳಿಕೊಂಡಿದ್ದಾರೆ. ಮುಕ್ತಿ ರಂಜನ್ ರಾಯ್ ಹಾಗೂ ಮಹಾಲಕ್ಷ್ಮಿ ಬೆಂಗಳೂರಿನ ಅಂಗಡಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಮೊದಲ ಪರಿಚಯ ಸ್ನೇಹದಿಂದ ಆರಂಭವಾಗಿ ನಂತರ ಪ್ರೀತಿಗೆ ತಿರುಗಿತ್ತು. ಬಳಿಕ ಮಹಾಲಕ್ಷ್ಮಿ ಮುಕ್ತಿ ರಂಜನ್ ರಾಯ್ಗೆ ಮದುವೆಯಾಗು ಎಂದು ಪೀಡಿಸುತ್ತಿದ್ದಳು.ಇದಕ್ಕೆ ಬೇಸತ್ತು ಮುಕ್ತಿ ರಂಜನ್ ರಾಯ್ ಆಕೆಯನ್ನು ಭೀಕರವಾಗಿ ಕೊಲೆ ಮಾಡಿದ್ದ.ಬಳಿಕ ಒಡಿಶಾಕೆ ತೆರಳಿ ಪೊಲೀಸರು ಎಲ್ಲಿ ನನ್ನನ್ನು ಅರೆಸ್ಟ್ ಮಾಡುತ್ತಾರೆ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ವಿಪಕ್ಷ ನಾಯಕರು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಮಧ್ಯ ಮಾಜಿ ಸ್ಪೀಕರ್ ಆಗಿರುವಂತಹ ಕೆಬಿ ಕೋಳಿವಾಡ ಅವರು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಹೇಳಿಕೆ ನೀಡಿದ್ದಾರೆ.ಇದಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ನಾನು ಏನು ತಪ್ಪು ಮಾಡಿಲ್ಲ.ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆಗೆ ಕೆ.ಬಿ ಕೋಳಿವಾಡ ಆಗ್ರಹದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಕೆ ಬಿ ಕೋಳಿವಾಡ ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಯಾಕೆಂದರೆ ನಾನು ಈ ಒಂದು ಕೇಸ್ ನಲ್ಲಿ ಏನು ತಪ್ಪೇ ಮಾಡಿಲ್ಲ ಎಂದು ಅವರು ಮತ್ತೊಮ್ಮೆ ಸ್ಪಷ್ಟನೆ ನೀಡಿದರು. ಕೆಬಿ ಕೋಳಿವಾಡ ಹೇಳಿದ್ದೇನು? ಈ ಕುರಿತಾಗಿ ಕೆಬಿ ಕೋಳಿವಾಡ, ಸಿಎಂ ಸಿದ್ದರಾಮಯ್ಯ ಎಷ್ಟೇ ಕಳಂಕ ರಹಿತರಾದರೂ ಪಕ್ಷದ ದೃಷ್ಟಿಯಿಂದ ರಾಜೀನಾಮೆ ನೀಡಲಿ.…