Author: kannadanewsnow05

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಲೋಕಾಯುಕ್ತ ಎಸ್ ಪಿ ಅವರನ್ನು ಅಕ್ರಮ ಬಂಧನದಲ್ಲಿ ಇಟ್ಟಿರಬೇಕು, ಇಲ್ಲವಾದರೆ ಕಿಡ್ನಾಪ್ ಮಾಡಿರಬಹುದು ಎಂದು ಆರೋಪಿಸಿ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ ಕಾಣೆಯಾಗಿದ್ದಾರೆ ಎಂದು ಇದೀಗ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದಾರೆ.ಮೈಸೂರಿನ ದೇವರಾಜ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಏನಿದೆ? ಬೆಳಗ್ಗೆಯಿಂದಲೂ ಲೋಕಾಯುಕ್ತ ಎಸ್ ಪಿ ಉದೇಶ ಸಂಪರ್ಕಕ್ಕೆ ಸಿಗುತ್ತಿಲ್ಲ. ಎಸ್ ಪಿ ಉದೇಶ ಯಾವ ಕಾರಣಕ್ಕೆ ಹಾಗೂ ಎಲ್ಲಿಗೆ ಹೋಗಿದ್ದಾರೆ? ಎಂದು ಗೊತ್ತಿಲ್ಲ. ಲೋಕಾಯುಕ್ತ ಕಚೇರಿಯಲ್ಲಿ ಕೇಳಿದರು ನನಗೆ ಮಾಹಿತಿ ನೀಡುತ್ತಿಲ್ಲ. ದೂರವಾಣಿ ಕರೆ ಮಾಡಿದ್ದೇನೆ, ಮೆಸೇಜ್ ಮಾಡಿದರು ಸಹ ಎಸ್ ಪಿ ಉದೇಶ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಹಾಗಾಗಿ ಲೋಕಾಯುಕ್ತ ಎಸ್ಪಿ ಅವರನ್ನು ಅಕ್ರಮ ಬಂಧನದಲ್ಲಿ ಇಟ್ಟಿರಬೇಕು. ಇಲ್ಲದಿದ್ದರೆ ಅಪಹರಣ ಮಾಡಿರಬೇಕು ಎಂದು ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ಮಾಡಿ ಎಂದು ಮೈಸೂರು ನಗರದ ದೇವರಾಜ ಪೊಲೀಸ್…

Read More

ಶಿವಮೊಗ್ಗ : ಮುಡಾ ಹಗರಣದಲ್ಲಿ ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳಿಂದ ಪ್ರತಿಭಟನೆ ನಡೆಸಲಾಗುತ್ತಿದ್ದು, ಇಂದು ವಿಧಾನಸೌಧ ಮುಂಭಾಗದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.  ಸಿದ್ದರಾಮಯ್ಯ ರಾಜೀನಾಮೆ ಕುರಿತು ಕೇಂದ್ರ ಸಚಿವರಾದ ವಿ. ಸೋಮಣ್ಣ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಜೊತೆಗೆ ಶಾಸಕನಾಗಿ, ಸಚಿವನಾಗಿ ಕಾರ್ಯನಿರ್ವಹಿಸಿದ್ದೇನೆ. ಕಾನೂನನ್ನು ಸಿಎಂ ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು. ಸಿದ್ದರಾಮಯ್ಯ ಒಬ್ಬ ಸೂಕ್ಷ್ಮ ರಾಜಕಾರಣಿ ಎಂದು ಅವರು ತಿಳಿಸಿದರು. ಅವರು ರಾಜೀನಾಮೆ ಕೊಟ್ಟೆ ಕೊಡ್ತಾರೆ ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ತನಿಖೆ ಎದುರಿಸಲು ರಾಜೀನಾಮೆ ಕೊಡುತ್ತಾರೆ ಎಂಬುದು ನನ್ನ ಅಭಿಪ್ರಾಯ ಎಂದು ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಹೇಳಿಕೆ ನೀಡಿದರು.

Read More

ಬೆಳಗಾವಿ : ದೇವಸ್ಥಾನದಲ್ಲಿ ಕಳ್ಳತನ ಮಾಡಿರುವುದನ್ನು ನೋಡಿದ ಮಹಿಳೆಯನ್ನೇ ಕಳ್ಳರು ಬಾವಿಗೆ ನೂಕಿ ಅಮಾನವೀಯವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಶಿಂದೊಳಿ ಗ್ರಾಮದಲ್ಲಿ ನಡೆದಿದೆ. ಶಿಂದೊಳಿ ಗ್ರಾಮದ ಭಾರತಿ ಪೂಜಾರಿ (48)‌ ಮೃತ ಮಹಿಳೆ ಎಂದು ತಿಳಿದುಬಂದಿದೆ. ಬೆಳ್ಳಂಬೆಳಗ್ಗೆ ಶಿಂದೊಳಿ ಗ್ರಾಮದ ಮಸಣವ್ವ ದೇವಸ್ಥಾನಕ್ಕೆ ಕಳ್ಳರು ನುಗ್ಗಿದ್ದಾರೆ. ಇದನ್ನು ನೋಡಿದ ಮಹಿಳೆ ಗ್ರಾಮಸ್ಥರಿಗೆ ತಿಳಿಸಿ, ನಮ್ಮ ಕೃತ್ಯ ಬೆಳಕಿಗೆ ಬರುತ್ತದೆ ಎಂದು ಮಹಿಳೆಯನ್ನೇ ಹತ್ಯೆ ಮಾಡಿ ಬಳಿಕ ದೇಗುಲದಲ್ಲಿನ ಬೆಳ್ಳಿ ಆಭರಣ ಕದ್ದು ಕಳ್ಳರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಬೆಳಿಗ್ಗೆ ತನ್ನ ಮನೆಯ ದನಕರುಗಳ ಸಗಣಿ ಎತ್ತಿ ತಿಪ್ಪೆಗೆ ಎಸೆಯಲು ಇವರು ಬಂದಿದ್ದರು. ಆಗ ಮನೆ ಪಕ್ಕದಲ್ಲಿದ್ದ ಮಸಣವ್ವ ದೇಗುಲದಲ್ಲಿನ ಆಭರಣಗಳನ್ನು ಕಳ್ಳರು ಕದಿಯಲು ಮುಂದಾಗಿದ್ದರು‌. ಸಗಣಿ ಎಸೆದು ಮನೆಗೆ ಬರುವಾಗ ದೇಗುಲದಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ಭಾರತಿ ನೋಡಿದ್ದಾರೆ. ಆಗ ಭಾರತಿಯನ್ನು ಹೊತ್ತೊಯ್ದು ದೇಗಲದ ಹಿಂದಿದ್ದ ಬಾವಿಗೆ ಕಳ್ಳರು ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.ಘಟನೆ ಕುರಿತು ಮಾರಿಹಾಳ…

Read More

ಬೆಂಗಳೂರು : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ವಿಧಾನಸೌಧದ ಮುಂದೆ ಇರುವ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು ಈ ಒಂದು ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಒಂದು ವಿಚಾರವಾಗಿ ತಮ್ಮ ಟ್ವಿಟ್ಟರ್ ಖಾತೆಯ X ನಲ್ಲಿ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಕಳೆದ ಹನ್ನೊಂದು ವರ್ಷಗಳಲ್ಲಿ ಪ್ರಧಾನಿ @narendramodi ಅವರ @BJP4India ಸರ್ಕಾರದ ವಾಷಿಂಗ್ ಮೆಷಿನ್ ಒಳಹೋಗಿ ಹೊರಬಂದು ಪರಮ‌ಪವಿತ್ರರಾದ ಭ್ರಷ್ಟರ ಪಟ್ಟಿ ಬೇಕಾ? ಜಾಮೀನಿನ ಮೇಲಿರುವ ಕುಮಾರಸ್ವಾಮಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡು ಮುದ್ದಾಡುತ್ತಿರುವ ನಿಮ್ಮ ದ್ವಂದ್ವ ನೀತಿಗೆ ಮಿತಿಯಿಲ್ಲವೇ ಮೋದಿ ಅವರೇ? ಮುಖ್ಯಮಂತ್ರಿ ಹುದ್ದೆಯನ್ನೇ ಎರಡೂವರೆ ಸಾವಿರ ಕೋಟಿಗೆ ಮಾರಾಟ ಮಾಡಿದ್ದೀರೆಂಬ ಆರೋಪ ಹೊತ್ತಿರುವ ನಿಮ್ಮ ಬಾಯಿಯಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತು ಬರುವುದೇ ನಾಚಿಕೆಗೇಡು ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನ…

Read More

ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಎನ್ಐಎ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಪ್ರದೇಶದಲ್ಲಿ ಶಂಕಿತ ಉಗ್ರನೊಬ್ಬನನ್ನು ಬಂಧಿಸಿದ್ದಾರೆ. ಹೌದು ಜಿಗಣಿಯಲ್ಲಿ ಗಿರೀಶ್ ಬೋರಾ ಅಲಿಯಾಸ್ ಗೌತಮ್ ಎಂಬ ಶಂಕಿತ ಉಗ್ರನನ್ನು ಎನ್ ಐ ಎ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.ಖಚಿತ ಮಾಹಿತಿಯ ಮೇರೆಗೆ ಎನ್ಐಎ ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಪ್ರದೇಶಕ್ಕೆ ತೆರಳಿದ್ದಾರೆ. ಈ ವೇಳೆ ಗಿರೀಶ್ ಬೋರಾ ಅಲಿಯಾಸ್ ಗೌತಮನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Read More

ತುಮಕೂರು : ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ತಾಯಿ ಹಸೀನಾ (25) ಮಕ್ಕಳಾದ ಹಸಿಮಾ (8), ಹಾಗೂ 3 ವರ್ಷದ ಇನ್ನೊಂದು ಮಗುವಿನ ಜೊತೆಗೆ ತಾಯಿ ಹಸೀನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಇದೀಗ ವ್ಯಕ್ತವಾಗಿದೆ. ಘಟನೆ ಕುರಿತಂತೆ ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜಧಾನಿ ಬೆಂಗಳೂರು ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಮಿತಿ ಮೀರಿದ ಜನದಟ್ಟಣೆ, ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದೆ. ಇದರ ಮಧ್ಯ ಮೆಟ್ರೋ ಟ್ರೈನ್ ನಲ್ಲಿ ಎಲ್ಲಿಯೂ ಸಹ ನಿಂತುಕೊಳ್ಳುವುದಕ್ಕೂ ಜಾಗವಿಲ್ಲದಷ್ಟು ಜನಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಮೆಟ್ರೋ ಟ್ರೈನಿನಲ್ಲಿ ಯುವತಿ ಒಬ್ಬಳು ತಲೆ ತಿರುಗಿ ಬಿದ್ದಿರುವ ಘಟನೆ ನಡೆದಿದೆ. ಹೌದು ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ನೇರಳೆ ಮಾರ್ಗದಲ್ಲಿ ವೈಟ್‌ಫೀಲ್ಡ್‌-ಕೆಂಪೇಗೌಡ ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣಕ್ಕೆ ತೆರಳುತ್ತಿದ್ದ ಮೆಟ್ರೋ ರೈಲಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಯಾಣಿಸಿದ್ದು, ಈ ವೇಳೆ ಯುವತಿಯೊರ್ವಳು ತಲೆ ತಿರುಗಿ ಬಿದ್ದಿದ್ದಾರೆ.ಕೂಡಲೇ ಸಹ ಪ್ರಯಾಣಿಕರು ಅವರನ್ನು ರಕ್ಷಣೆ ಮಾಡಿ, ನೀರು ಕೊಟ್ಟಿದ್ದಾರೆ. ನಿನ್ನೆ ಸಂಜೆ ಆರು ಗಂಟೆಗೆ ಕೆ ಆರ್ ಪುರದಲ್ಲಿ ಯುವತಿ ಮೆಟ್ರೋ ಟ್ರೈನ್ ಹತ್ತಿದ್ದಾಳೆ. ಈ ವೇಳೆ ಟ್ರೈನ್ ಪ್ರಯಾಣಿಕರಿಂದ ತುಂಬಿ ತುಳುಕುತ್ತಿತ್ತು. ಕೂಡಲೇ ಯುವತಿಗೆ ನಿಂತಲ್ಲಿ ಕುಸಿದು ಬೀಳಲು ಆರಂಭಿಸಿದ್ದಾಳೆ ತಕ್ಷಣ ಸಹ ಪ್ರಯಾಣಿಕರರು ಆಕೆಯನ್ನು ಆಸನದಲ್ಲಿ ಕೂರಿಸಿ ಸ್ವಲ್ಪ ನೀರು ಕೊಟ್ಟು ಉಪಚರಿಸಿದ್ದಾರೆ. ಅಷ್ಟರಲ್ಲಿ…

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ನೀಡಿದೆ. ಡಿಸೆಂಬರ್ 24ರ ಒಳಗಾಗಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಿದೆ. ಇದರ ಬೆನ್ನಲ್ಲೇ ದೂರುದಾರ ಸ್ನೇಹಮಯಿ ಕೃಷ್ಣ ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಎಸ್ ಪಿ ಕಾಣಿಸುತ್ತಿಲ್ಲ ಬಹುಶಹ ಸಿಎಂ ಸಿದ್ದರಾಮಯ್ಯ ಅವರೇ ಕಿಡ್ನ್ಯಾಪ್ ಮಾಡಿಸಿರಬಹುದು ಎಂದು ಆರೋಪಿಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಎಸ್.ಪಿ ವಿರುದ್ಧವೇ ದೂರು ಕೊಡುತ್ತೇನೆ. ಸಿಎಂ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣ ಲೋಕಾಯುಕ್ತ ಎಸ್ಪಿ ನಾಪತ್ತೆಯಾಗಿದ್ದಾರೆ. ಫೋನ್ ತೆಗಿತಿಲ್ಲ ಎಸ್ ಪಿ ಕಾಣೆಯಾಗಿದ್ದಾರೆ ಎಂದು ದೂರು ಕೊಡುತ್ತೇನೆ. ಸಿದ್ದರಾಮಯ್ಯ ಕಿಡ್ನಾಪ್ ಮಾಡಿಸಿದ್ದರು ಮಾಡಿರಬಹುದು ಮೈಸೂರಿನಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಮಧ್ಯಾಹ್ನ 3 ಗಂಟೆ ಒಳಗೆ FIR ಹಾಕದಿದ್ದರೆ ಎಸ್ ಪಿ ವಿರುದ್ಧವೇ ದೂರು ನೀಡುತ್ತೇನೆ. ಲೋಕಾಯುಕ್ತ ಎಸ್ ಪಿ ಕಾಣೆಯಾಗಿದ್ದಾರೆ ಅಂತ ಅನಿಸುತ್ತಿದೆ. ಮಧ್ಯಾಹ್ನ 3 ಗಂಟೆ ವರೆಗೆ ಲೋಕಾಯುಕ್ತ ಕಚೇರಿಯಲ್ಲಿ…

Read More

ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ SIT ವಶದಲ್ಲಿ ಇದ್ದು, ಇಂದು ಸಂತ್ರಸ್ತ ಮಹಿಳೆ ಮುನಿರತ್ನ ವಿರುದ್ಧ ಮತ್ತೊಂದು ಸ್ಪೋಟಕ ವಾದಂತಹ ಆರೋಪ ಮಾಡಿದ್ದಾಳೆ. ಶಾಸಕ ಮುನಿರತ್ನ ನನ್ನ ಮೇಲೆ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಅತ್ಯಾಚಾರ ಆಗಿದ್ದಾರೆ ಎಂದು ಪೊಲೀಸರ ವಿಚಾರಣೆ ವೇಳೆ ಸಂತ್ರಸ್ತ ಮಹಿಳೆ ಸ್ಪೋಟಕವಾದ ಆರೋಪ ಮಾಡಿದ್ದಾಳೆ. ವಿಧಾನಸೌಧವನ್ನು ಹಿಂದಿನ ಹಿರಿಯ ರಾಜಕಾರಣಿಗಳು ದೇವಸ್ಥಾನಕ್ಕೆ ಹೋಲಿಸಿದ್ದಾರೆ. ಅಲ್ಲದೆ ನ್ಯಾಯ ದೇವತೆಗೆ ಹೋಲಿಸುತ್ತಾರೆ. ಆದರೆ ಇಂಥ ಒಂದು ಪವಿತ್ರವಾದಂತಹ ಸ್ಥಳದಲ್ಲಿ ಒಬ್ಬ ಶಾಸಕರು, ಒಬ್ಬ ಜನಪ್ರತಿನಿಧಿಗಳು ಮಹಿಳೆಯ ಮೇಲೆ ಇಂತಹ ನೀಚ ಕೃತ್ಯ ನಡೆದಿರುವುದು ಜನರ ಆಕ್ರೋಶಕ್ಕೆ ಇದೀಗ ಕಾರಣವಾಗಿದೆ. ಹೌದು ವಿಚಾರಣೆಯ ವೇಳೆ ಸ್ಪೋಟಕ ಹೇಳಿಕೆ ನೀಡಿರುವ ಸಂತ್ರಸ್ತೆ ಮಹಿಳೆ, ಪೊಲೀಸರ ಮುಂದೆ ಮಹಿಳೆ ಮಹತ್ವದ ಹೇಳಿಕೆ ನೀಡಿದ್ದಾಳೆ. ವಿಧಾನಸೌಧದ ಮೂರನೇ ಮಹಡಿ ಹಾಗೂ ವಿಕಾಸಸೌಧದ ಅವರ ಕಚೇರಿಯಲ್ಲೇ ಶಾಸಕ ಮುನಿರತ್ನ ಅತ್ಯಾಚಾರ ಮಾಡಿದ್ದಾರೆ ಎಂದು  ಮಹಿಳೆ…

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿ ನಾಯಕರು ವಿಧಾನಸೌಧ ಒಳ ನುಗ್ಗಲು ಯತ್ನಿಸಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ನಟ, ರಾಜ್ಯಸಭಾ ಸಂಸದ ಜಗ್ಗೇಶ್‌ ಸಿದ್ದರಾಮಯ್ಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದ ರಾಷ್ಟ್ರೀಯ ಮಟ್ಟದಲ್ಲಿ ಕುಖ್ಯಾತಿಗೆ ಒಳಗಾಗ್ತಿದೆ. ಮೋದಿ ಹತ್ತು ವರ್ಷ ರಾಷ್ಟ್ರವನ್ನು ಸ್ವಚ್ಛಗೊಳಿಸಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ರಾಷ್ಟ್ರದ ಗೌರವ ಹೆಚ್ಚಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರ ವಿರುದ್ಧ ಯಾವುದೇ ಕಪ್ಪು ಚುಕ್ಕೆ ಇರಲಿಲ್ಲ. ಬಹಳ ಕ್ಲೀನ್ ಹ್ಯಾಂಡ್ ಎಂದು ತಿಳಿದಿದ್ದೆ. ಆದರೆ, ಇವರು ಒಳಗೊಂದು ಹೊರಗೊಂದು ಎಂದು ಕಿಡಿ ಕಾರಿದರು. ನ್ಯಾಯಾಲಯ ನೀವು ಮಾಡಿದ್ದು ತಪ್ಪು ಎಂದಾದರೂ ಹೋರಾಟ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿರುವುದು ಅನುಮಾನ ಹುಟ್ಟಿಸಿದೆ.ಇವರ ಸಂಗಡಿಗರು ಒಂದಲ್ಲಾ ಒಂದು ಕೇಸ್ ನಲ್ಲಿ ತನಿಖೆಗೆ ಒಳಗಾದವರು. ಅವರಿಂದ ಕೇಜ್ರಿವಾಲ್ ಸಿದ್ದರಾಮಯ್ಯಗೆ ಫೋನ್ ಮಾಡಿ ಹೇಳಿರಬಹುದು. ಜೈಲಿನಲ್ಲಿ ಇದ್ದರೂ ಸರ್ಕಾರ ನಡೆಸಬಹುದು ಎಂದು ಹೇಳಿರಬಹುದು ಎಂದರು.

Read More