Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಯುವಕನೊಬ್ಬ ಯುವತಿಗೆ ಹಣ ಕೊಡುವಂತೆ ಹೆದರಿಸಿದ್ದು, ಒಂದು ವೇಳೆ ಕೊಡದಿದ್ದರೆ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಹೆದರಿಸಿದ್ದಲ್ಲದೆ, ಆಸಿಡ್ ಹಾಕಿ ಯಾರು ಮದುವೆಯಾಗದಂತೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಯುವತಿಗೆ ಹಣಕ್ಕೆ ಬೇಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದವನ ವಿರುದ್ಧ ಇದೀಗ ಕೇಸ್ ದಾಖಲಾಗಿದೆ. ಹಣ ಕೊಡದಿದ್ದರೆ ಫೋಟೋ ವಿಡಿಯೋ ವೈರಲ್ ಮಾಡುತ್ತೇನೆ ಎಂದು ಹೆದರಿಸಿರುವ ತಿರುಮಲ ಎಂಬ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ವಿಡಿಯೋ ಫೋಟೋ ವೈರಲ್ ಮಾಡುವುದಾಗಿ ಯುವಕ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಬೇರೆಯವರನ್ನು ಮದುವೆಯಾಗದಂತೆ ಆಸಿಡ್ ಹಾಕುತ್ತೇನೆ ಎಂದು ಯುವತಿಗೆ ಬೆದರಿಕೆ ಹಾಕಿದ್ದ ಯುವಕ ತಿರುಮಲ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ. ಯುವತಿಯ ದೂರಿನ ಅನ್ವಯ ತಿರುಮಲ ವಿರುದ್ಧ ಸೆಕ್ಷನ್ 78 (¡¡) 79,351(3) ಬಿಎನ್ಎಸ್ 2023ರ ಅಡಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಗವರ್ನರ್ ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟಾಗ ಕಾಂಗ್ರೆಸ್ ಕಾರ್ಯಕರ್ತರು ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಪ್ರತಿಭಟಿಸಿದ್ದರು. ಈ ವಿಚಾರವಾಗಿ ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ, ಅಂದು ಅನುಮತಿ ಕೊಟ್ಟ ರಾಜ್ಯಪಾಲರಿಗೆ ಆಗ ಚಪ್ಪಲಿ ಹಾರ ಹಾಕಿದ್ದೀರಿ. ಈಗ ಹೈಕೋರ್ಟ್ ಸಿಎಂ ಸಿದ್ದರಾಮಯ್ಯಗೆ ತನಿಖೆಗೆ ಆದೇಶ ನೀಡಿದೆ. ಈಗ ಅವರಿಗೂ ಚಪ್ಪಲಿ ಹಾರ ಹಾಕುತ್ತೀರಾ? ಎಂದು ಆಕ್ರೋಶ ಹೊರಹಾಕಿದ್ದಾರೆ. ಇಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ರಾಜೀನಾಮೆ ಕೊಟ್ಟರಾ? ಎಂದು ಕೇಳಿದ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ನನ್ನ ಮೇಲಿನ ಪ್ರಕರಣಗಳಿಗೂ ನಿಮ್ಮ ಹಗರಣಕ್ಕೂ ವ್ಯತ್ಯಾಸ ಇದೆ. ನನ್ನ ಮೇಲಿನ ಆರೋಪಗಳ ಮಾತು ಆಮೇಲೆ. ನಿಮ್ಮ ವಿರುದ್ಧ ಹೈಕೋರ್ಟ್, ಜನಪ್ರತಿನಿಧಿಗಳ ನ್ಯಾಯಾಲಯಗಳಿಂದ ಆದೇಶಗಳು ಬಂದಿವೆ. ಅದಕ್ಕೇನು ಹೇಳುತ್ತೀರಿ? ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು. ಹೈಕೋರ್ಟ್ ನಲ್ಲಿ ವಾದ ಮಾಡುವಾಗ ವಕೀಲರು ಮೂಡಾ…
ಕೇರಳ: ಶಿರೂರಿನ ಭೂ ಕುಸಿತದಲ್ಲಿ ಮೃತಪತ್ತಿದ್ದ ಕೇರಳದ ಅರ್ಜುನ್ ದೇಹ ಹಾಗೂ ಲಾರಿಯನ್ನು ಪತ್ತೆ ಹಚ್ಚುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೇರಳದ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಭೂಕುಸಿತದಲ್ಲಿ ಕೇರಳ ಮೂಲದ ಅರ್ಜುನ್ ಲಾರಿ ರಸ್ತೆ ಪಕ್ಕದಲ್ಲಿದ್ದ ನದಿಗೆ ಬಿದ್ದಿದ್ದು ನಾಪತ್ತೆಯಾಗಿತ್ತು. ಕರ್ನಾಟಕ ಉಸ್ತುವಾರಿ ವೇಣುಗೋಪಾಲ್ ಅವರು ಶೋಧಕಾರ್ಯವನ್ನು ಮುಂದುವರೆಸಲು ಸೂಚಿಸಿದ್ದರು ಎಂದು ತಿಳಿಸಿದರು. ಕಳೆದ 6 ದಿನಗಳಿಂದ ಸತತವಾಗಿ ಕಾರ್ಯಾಚರಣೆ ನಡೆಸಿದ ಬಳಿಕ ಇಂದು ಕೇರಳ ಮೂಲದ ಅರ್ಜುನ್ ಮೃತದೇಹ ಹಾಗೂ ಆತ ಚಲಾಯಿಸುತ್ತಿದ್ದ ಭಾರತ್ ಬೆಂಜ್ ಲಾರಿ ಪತ್ತೆಯಾಗಿದೆ. ಲಾರಿಯನ್ನು ಮೇಲೆತ್ತುವಾಗ ಚಾಲಕ ಅರ್ಜುನ ಮೃತದೇಹ ಎರಡು ತುಂಡಾಗಿದ್ದದ್ದು ಕಂಡು ಬಂದಿದೆ. ಅರ್ಜುನ್ ಮೃತದೇಹದ ಜೊತೆಗೆ ಇನ್ನೋರ್ವ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಅದು ಯಾರದು ಎನ್ನುವುದು ಇನ್ನೂ ಖಚಿತವಾಗಿಲ್ಲ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಭೀಕರವಾದಂತಹ ರಸ್ತೆ ಅಪಘಾತ ನಡೆದಿದ್ದು, ಟ್ರ್ಯಾಕ್ಟರ್ ಹಾಗೂ ಬೈಕ್ ಮಧ್ಯ ಅಪಘಾತ ಸಂಭವಿಸಿ ಮೂರು ವಿದ್ಯಾರ್ಥಿಗಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗೇರಹಳ್ಳಿ ಗೇಟ್ ಎಂಬ ಗ್ರಾಮದಲ್ಲಿ ನಡೆದಿದೆ. ಈ ಒಂದು ರಸ್ತೆ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ದುರ್ಮರಣ ಹೊಂದಿದ್ದಾರೆ. ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಮೂರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ನಿತೀಶ್ (17) ನಿತಿನ್ (17) ವೈಭವ್ (16) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಟ್ಯೂಷನ್ ಮುಗಿಸಿಕೊಂಡು ಬೈಕ್ನಲ್ಲಿ ಮನೆಗೆ ತಿಳುವಾಗ ಈ ಒಂದು ಅಪಘಾತ ಸಂಭವಿಸಿದೆ. ಬಿವಿಎಸ್ ಶಾಲೆಯಲ್ಲಿ ನಿತೀಶ್ ಮತ್ತು ನಿತಿನ್ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇನ್ನೂ ವೈಭವ್ ಗುಡ್ ಶೆಫರ್ಡ್ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದ ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ನಿವಾಸಿಗಳು ಎಂದು ತಿಳಿದುಬಂದಿದೆ.ಘಟನೆ ಕುರಿತಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ಇಡಿ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಕಳೆದ ಎರಡು ದಿನಗಳ ಹಿಂದೆ ನೇಪಾಳ ಮೂಲದ ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಂದು ಫ್ರಿಜ್ನಲ್ಲಿ ಮಹಾಲಕ್ಷ್ಮಿ ಮೃತ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ ಆರೋಪಿಯಾಗಿರುವಂತಹ ಮುಕ್ತಿ ರಂಜನ್ ರಾಯ್ ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೌದು ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಂದು ಮುಕ್ತಿ ರಂಜನ್ ರಾಯ್ ಬೆಂಗಳೂರು ಬಿಟ್ಟು ಪರಾರಿಯಾಗಿದ್ದ. ಆತ ಪಶ್ಚಿಮ ಬಂಗಾಳದಲ್ಲಿ ಇದ್ದಾನೆ ಎಂದು ಪೊಲೀಸರಿಗೆ ಮಾಹಿತಿ ದೊರಕಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಆತನನ್ನು ಬಂದಿಸಲು ಬೆಂಗಳೂರಿನಿಂದ ಒಂದು ತಂಡ ತೆರಳಿತ್ತು. ಇದೀಗ ಮಹಾಲಕ್ಷ್ಮಿ ಕೊಲೆ ಆರೋಪಿ ಆಗಿರುವಂತಹ ಮುಕ್ತಿ ರಂಜನ್ ರಾಯ್ ಒಡಿಶಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ತಿಳಿದು ಬಂದಿದೆ. ಪ್ರಕರಣದ ಹಿನ್ನೆಲೆ? ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ವೈಯ್ಯಾಲಿಕಾವಲ್ ನಲ್ಲಿ ನೇಪಾಳಿ ಮೂಲದ ಮಹಾಲಕ್ಷ್ಮಿ ಎನ್ನುವ ಮಹಿಳೆಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ…
ಹುಬ್ಬಳ್ಳಿ : ಇಂದು ಹುಬ್ಬಳ್ಳಿಯ ಲೋಹಿಯಾ ನಗರದಲ್ಲಿ ಹುಡುಗಿಗೆ ಚುಡಾಯಿಸಬೇಡ ಎಂದಿದ್ದಕ್ಕೆ ಯುವಕನೊಬ್ಬ ಮಹಿಳೆಗೆ ಚಾಕು ಇರಿತ ಪ್ರಕರಣಕ್ಕೆ ಸಬಂಧಿಸಿದಂತೆ ಆರೋಪಿಯನ್ನು ವಿಚಾರಿಸುವ ವೇಳೆ ಪೋಲೀಸರ ಮೇಲೆ ಆರೋಪಿ ಮಹೇಶ್ ಹಲ್ಲೆ ಮಾಡಿದ್ದಾನೆ.ಈ ವೇಳೆ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ್ದಾರೆ. ಇಂದು ಹುಬ್ಬಳ್ಳಿಯ ಲೋಹಿಯಾ ನಗರದಲ್ಲಿ ಹುಡುಗಿಗೆ ಚುಡಾಯಿಸಬೇಡ ಎಂದು ನೀಲಾ ಹಂಪಣ್ಣವರ ಮಹಿಳೆ ಮೇಲೆ ಮಹೇಶ್ ಎನ್ನುವ ವ್ಯಕ್ತಿ ಚಾಕು ಇರಿದಿದ್ದಾನೆ. ಈ ವೇಳೆ ಆರೋಪಿ ಮಹೇಶ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮಹೇಶ್ ಪೋಲೀಸರ ಮೇಲೆ ಹಲ್ಲೆ ಮಾಡಿದ್ದಾನೆ. ತಕ್ಷಣ ತಮ್ಮನ್ನು ರಕ್ಷಣೆ ಮಾಡಿಕೊಳ್ಳಲು ಆರೋಪಿ ಮಹೇಶ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಮದುವೆಯಾಗುವಂತೆ ನೀಲಾ ಮಗಳಿಗೆ ಪೀಡಿಸುತ್ತಿದ್ದ ಅದಕ್ಕೆ ನೀಲಾ ಮಹೇಶ್ ಗೆ ಬುದ್ಧಿ ಹೇಳಿದ್ದಾರೆ. ಸದ್ಯ ಮಹೇಶ್ ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಹಿನ್ನೆಲೆ? ಹುಬ್ಬಳ್ಳಿಯ ಲೋಹಿಯ ನಗರದಲ್ಲಿ ಮಹಿಳೆಗೆ ಚಾಕು ಹಿಡಿದಿರುವ ಘಟನೆ…
ಬೆಂಗಳೂರು : ರಾಜ್ಯದಲ್ಲಿ 14 ಜಿಲ್ಲಾಸ್ಪತ್ರೆಗಳಲ್ಲಿ ಸಿ.ಟಿ ಸ್ಕ್ಯಾನ್ ಹಾಗೂ ಎಂ.ಆರ್ ಐ ಸೇವೆಗಳು ಸ್ಥಗಿತಗೊಂಡಿವೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ. ಈ ಕುರಿತು ಮಾಧ್ಯಮಗಳಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ ತಕ್ಷಣ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಇಲಾಖೆ ಮಾಧ್ಯಮಗಳಲ್ಲಿ ಬಂದಿರುವ ವರದಿ ನಿರಾಧಾರ ಎಂದಿದೆ. ರಾಜ್ಯದಲ್ಲಿ CT ಮತ್ತು MRI ಸೇವೆಗಳಿಗೆ ಅನುದಾನದ ಕೊರತೆಯಿದೆ ಎಂಬ ಮಾಧ್ಯಮ ವರದಿಗಳು ಆಧಾರರಹಿತವಾಗಿದೆ. CT ಮತ್ತು MRI ಸೇವೆಗಳಿಗೆ ಅಗತ್ಯವಿರುವ 63.49ಕೋಟಿ ಅನುದಾನ ಆರೋಗ್ಯ ಇಲಾಖೆಯ ಬಳಿ ಲಭ್ಯವಿದ್ದು ಯಾವುದೇ ರೀತಿಯ ಅನುದಾನದ ಕೊರತೆಯಾಗಿಲ್ಲ ಎಂದು ಇಲಾಖೆ ಸ್ಪಷ್ಟನೆ ನೀಡಿದೆ. ರಾಜ್ಯದಲ್ಲಿ ಒಟ್ಟು 3 ಸಂಸ್ಥೆಗಳು CT ಮತ್ತು MRI ಸೇವೆಗಳನ್ನು ಒಗದಿಸುತ್ತಿವೆ. ಅದರಲ್ಲಿ ಕೃಷ್ಣ ಡಯಾಗ್ನೋಸ್ಟಿಕ್ ಸಂಸ್ಥೆಯು ಬಿಲ್ ಪಾವತಿಗಾಗಿ ನೀಡಿದ…
ಬೆಂಗಳೂರು : ಮಲ್ಲೇಶ್ವರಂನ ಆಟದ ಮೈದಾನದಲ್ಲಿ ಗೇಟ್ ಬಿದ್ದು ದುರಂತದಲ್ಲಿ ಸಾವಿಗಿಡಾದ ನಿರಂಜನ್ ಪೊಷಕರಿಗೆ ಇಂದು ಒಟ್ಟು 10 ಲಕ್ಷ ಪರಿಹಾರದ ಚೆಕ್ ವಿತರಿಸಲಾಯಿತು.. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಜೊತೆಗೂಡಿ ಬಾಲಕನ ಮನೆಗೆ ಭೇಟಿ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್ ನಿರಂಜನ್ ತಂದೆ ತಾಯಿಗೆ ಸಾಂತ್ವಾನ ಹೇಳಿ ಪರಿಹಾರದ ಚೆಕ್ ವಿತರಿಸಿದರು. ಬಿಬಿಎಂಪಿ ವತಿಯಿಂದ 5 ಲಕ್ಷ ಪರಿಹಾರ ಹಾಗೂ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ 5 ಲಕ್ಷ ಸೇರಿದಂತೆ ಒಟ್ಟು 10 ಲಕ್ಷ ಪರಿಹಾರದ ಚೆಕ್ ವಿತರಿಸಲಾಯಿತು.ಪೊಷಕರಿಗೆ ಸಾಂತ್ವಾನ ಹೇಳಿದ ಸಚಿವ ದಿನೇಶ್ ಗುಂಡೂರಾವ್ ಬಾಲಕನ ಸಹೋದರಿಯ ವಿದ್ಯಾಭ್ಯಾಸದ ಸಂಪೂರ್ಣ ಹೊಣೆಯನ್ನ ಆರ್. ಗುಂಡೂರಾವ್ ಫೌಂಡೇಶನ್ ವಹಿಸಿಕೊಳ್ಳಲಿದೆ ಎಂದು ಇದೇ ವೇಳೆ ತಿಳಿಸಿದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಕರಣ ಕುರಿತು ಈಗಾಗಲೇ ಎಂಜಿನಿಯರ್ ಶ್ರೀನಿವಾಸ್ ಅವರನ್ನ ಅಮಾನತ್ತು ಮಾಡಲಾಗಿದೆ. ಘಟನೆ ಆದ ತಕ್ಷಣ ಸ್ಥಳಕ್ಕೆ ಶಾಸಕರು ಭೇಟಿ ನೀಡಿ ಸ್ಪಂದಿಸಿದ್ದಾರೆ.ಇಂದು ನಾನು…
ಯಾದಗಿರಿ : ಇತ್ತೀಚಿಗೆ ಯಾದಗಿರಿಯಲ್ಲಿ ನಡೆದಂತಹ ಗಣೇಶ ವಿಸರ್ಜನೆಯ ಶೋಭಾಯಾತ್ರೆಯ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಪ್ರತಾಪ್ ಸಿಂಹ ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಗಣೇಶ ವಿಸರ್ಜನೆ ವೇಳೆ ಎಲ್ಲಾ ಕಡೆ ಕಲ್ಲು ತೂರುವ ಪ್ರವೃತ್ತಿ ಕಾಣಸ್ತಾ ಇದೆ. ಕಲ್ಲು ಹೊಡೆಯುವ ಪ್ರವೃತ್ತಿ ಮುಸ್ಲಿಮರಿಗೆ ಯಾಕೆ ಬರುತ್ತೆ? ಹಿಂದೂಗಳು ಕೈಯಲ್ಲಿ ಕಲ್ಲು ಹೀಡಿದುಕೊಂಡರೆ ನಿಮ್ಮ ಕಥೆ ಏನು ಆಗುತ್ತೆ? ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾ..ಟಾಂಗಾಗಳು, ಗುಜರಿಗಳು ಮಾಡುವ ಕೆಲಸವನ್ನು ಕ್ಷಣ ಮಾತ್ರದಲ್ಲಿ ಹಿಂದೂಗಳಿಗೆ ಮಾಡಲು ಬರುತ್ತದೆ ಎಂದು ಪ್ರತಾಪ್ ಸಿಂಹ ಮಾತನಾಡಿದ್ದರು ಎನ್ನಲಾಗಿದೆ. ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಅವರು ಈ ಒಂದು ಹೇಳಿಕೆ ನೀಡಿದ್ದರು. ಹಾಗಾಗಿ ಧಾರ್ಮಿಕ ನಂಬಿಕೆಗಳಿಗೆ ಅವಮಾನಗೊಳಿಸಿ ದ್ವೇಷ ಭಾವನೆಯಿಂದ ಮಾತನಾಡಿದ್ದಾರೆ ಎಂದು ಆರೋಪಿಸಿ ಶಹಾಪುರ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಶಹಾಪುರ ಪಿಎಸ್‌ಐ…
ಬೆಂಗಳೂರು : ಸರ್ಕಾರದ ವಿವಿಧ ಹುದ್ದೆಗಳಿಗೆ ಕರ್ನಾಟಕ ಲೋಕ ಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳಲ್ಲಿ ಚಾಲ್ತಿಯಲ್ಲಿರುವ ಹಾಗೂ ಮುಂಬರುವ ನೇಮಕಾತಿ ಪ್ರಕ್ರಿಯೆಗಳಲ್ಲಿ ಮಾರ್ಪಾಡುಗಳನ್ನು ತರುವ ಮೂಲಕ ನೇಮಕಾತಿ ಪ್ರಕ್ರಿಯೆಯನ್ನು ಸರಳಗೊಳಿಸಲು ಹಾಗೂ ಅಭ್ಯರ್ಥಿಗಳಲ್ಲಿ ಉಂಟಾಗುತ್ತಿರುವ ಗೊಂದಲಗಳನ್ನು ನಿವಾರಿಸಲು ನಿರ್ದೇಶನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅನುಚ್ಛೇದ-371-ಜೆ ಅನುಷ್ಟಾನ ಕುರಿತಾದ ಸಚಿವ ಸಂಪುಟದ ಉಪ ಸಮಿತಿಯ ಅಧ್ಯಕ್ಷರೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಕೋರಿದ್ದಾರೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸರ್ಕಾರದ ವತಿಯಿಂದ ವಿವಿಧ ನೇಮಕಾತಿಗಳ ಹಂತ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರು ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳ ಮೂಲಕ ಸರ್ಕಾರದ ವಿವಿಧ ಹುದ್ದೆಗಳಿಗೆ ನಡೆಯುತ್ತಿರುವ ಆಯ್ಕೆ ವಿಧಾನಗಳಲ್ಲಿ ಬಹಳಷ್ಟು ಸುಧಾರಣೆಗಳನ್ನು ತರುವ ಅವಶ್ಯಕತೆಯಿದೆ ಎಂಬ ಸಲಹೆಗಳನ್ನು ಒಳಗೊಂಡ ಪತ್ರವನ್ನು ಮುಖ್ಯಮಂತ್ರಿಗಳಿಗೆ ನೀಡಿದರು. ನೇಮಕಾತಿ ಪ್ರಾಧಿಕಾರಗಳು ನೇಮಕಾತಿ ಪ್ರಕ್ರಿಯೆಯನ್ನು ಒಂದು…