Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಮುಂಬೈ : ಇತ್ತೀಚಿಗೆ ತಾನೇ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವನಪ್ಪಿದ್ದರು. ಈ ಒಂದು ಘಟನೆ ಮಾಸುವ ಮುನ್ನವೇ ಸಚಿವೆ ಪಂಕಜಾ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಹೌದು ಮಹಾರಾಷ್ಟ್ರದ ಸಂಭಾಜಿ ನಗರದಲ್ಲಿ ಈ ಒಂದು ಘಟನೆಯ ಸಂಭವಿಸಿದ್ದು, ಹೆಲಿಕಾಪ್ಟರ್ ನಲ್ಲಿ ಸಚಿವೆ ಪಂಕಜ ಮುಂಡೆ ಲಾತೂರ್ ಗೆ ತೆರಳಬೇಕಿತ್ತು. ಜಿಲ್ಲಾ ಪರಿಷತ್ ಚುನಾವಣಾ ಪ್ರಚಾರಕ್ಕಾಗಿ ಪಂಕಜಾ ತೆರಳಬೇಕಿತ್ತು. ಆದರೆ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ಸಮಸ್ಯೆ ಬಗ್ಗೆ ಪೈಲಟ್ ವರದಿ ನೀಡಿದ್ದಾರೆ. ಹಾಗಾಗಿ ಲಾತೂರ್ ಪ್ರಯಾಣವನ್ನು ಬಿಜೆಪಿ ನಾಯಕಿ ಪಂಕಜಾ ಮುಂದೂಡಿದ್ದಾರೆ. ವಿಮಾನ ದುರಂತದಲ್ಲಿ ಡಿಸಿಎಂ ಅಜಿತ್ ಪವರ್ ಸಾವನಪ್ಪಿದ ಬಳಿಕ ವಿಮಾನದಲ್ಲಿ ತೆರಳಲು ನಾಯಕರು ಇದೀಗ ಎಚ್ಚರವಹಿಸುತ್ತಿದ್ದಾರೆ.

Read More

ಬೆಳಗಾವಿ : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು ವ್ಯಕ್ತಿಯನ್ನು ಕೊಂದು ಶವದ ಮೇಲೆ ಕಾಲಿಟ್ಟು ಪೋಸ್ ಕೊಟ್ಟಿದ್ದಾನೆ 16 ಬಾರಿ ಮಚ್ಚಿನಿಂದ ಕೊಚ್ಚಿ ಕ್ರೌರ್ಯ ಮೆರೆದಿದ್ದು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ಈ ಒಂದು ಭೀಕರ ಹತ್ಯೆ ನಡೆದಿದೆ. ಹೌದು ಸೌದತ್ತಿ ತಾಲೂಕಿನ ಬಸಡೋಣಿ ಗ್ರಾಮದ ಬಸಪ್ಪ (56) ಎಂಬಾತನನ್ನು ನಡುವಿನ ರಸ್ತೆಯಲ್ಲಿಯೇ ಈರಪ್ಪ ಎಂಬಾತ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಹತ್ಯೆಯ ಬಳಿಕ ಸಿನಿಮಾ ಸ್ಟೈಲ್ ನಲ್ಲಿ ಶವದ ಮೇಲೆ ಕಾಲಿಟ್ಟು ಪೋಸ್ ಕೊಟ್ಟಿದ್ದಾನೆ. ನಿನ್ನೆ ಸಂಜೆ ಬಸಪ್ಪನ ಬೈಕ್ ಅಡಗಟ್ಟಿ ಈರಯ್ಯ ಎಂಬಾತ ಕೊಲೆ ಮಾಡಿದ್ದಾನೆ. ಪೊಲೀಸರಿಗೆ ಕರೆ ಮಾಡಿ ಕೊಲೆ ಮಾಡಿದ್ದಾಗಿ ಮಾಹಿತಿ ನೀಡಿದ್ದಾನೆ. ಅಲ್ಲದೇ ಶವದ ಮೇಲೆ ಕಾಲಿಟ್ಟು ಪೋಸ್ ಕೊಟ್ಟಿದ್ದಾನೆ. 2015ರಲ್ಲಿ ಈರಯ್ಯ ಎಂಬಾತನ ತಾಯಿಯ ಕೊಲೆಯಾದ ವ್ಯಕ್ತಿ ಓಡಿ ಹೋಗಿದ್ದ ಎನ್ನುವಂತ ಮಾಹಿತಿ ತಿಳಿದು ಬಂದಿದೆ. 2015ರಲ್ಲಿ ಓಡಿ ಹೋದಂತವರು ವಾಪಸ್ ಊರಿಗೆ ಬಂದಿರಲಿಲ್ಲ ಇನ್ನೊಂದು ಕಡೆ ಆರೋಪಿ…

Read More

ಬೆಂಗಳೂರು: ಮಾಜಿ ಸ್ಪೀಕರ್, ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾಗರದ ಮಾರಿಕಾಂಬ ದೇವಿ ದರ್ಶನದ ವೇಳೆ ಕುಸಿದು ಬಿದ್ದ ಮಾಜಿ ಸ್ಪೀಕರ್ ಕಾಡೋಡು ತಿಮ್ಮಪ್ಪ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಅಂತ ತಿಳಿದು ಬಂದಿದೆ. ಕಾಗೋಡು ತಿಮ್ಮಪ್ಪ ಒಬ್ಬ ಭಾರತೀಯ ನಿವೃತ್ತ ರಾಜಕಾರಣಿ, ಅವರು ಕರ್ನಾಟಕ ವಿಧಾನಸಭೆಯ 21 ನೇ ಸ್ಪೀಕರ್ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರಾಗಿದ್ದರು ಮತ್ತು ಸಾಗರದಿಂದ ಆಯ್ಕೆಯಾದ ಕರ್ನಾಟಕ ವಿಧಾನಸಭೆಯ ಮಾಜಿ ಸದಸ್ಯರಾಗಿದ್ದರು. ಅವರು ಮೇ 2013 ರಲ್ಲಿ 14 ನೇ ವಿಧಾನಸಭೆಯ ಸ್ಪೀಕರ್ ಆಗಿ ಕೆಲಸ ಮಾಡಿದ್ದರು.

Read More

ರಾಯಚೂರು : ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ಶಾಕ್ ನಿಂದ ಬಾಲಗೆ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹೆಚ್ಚುವರಿ ಮುಖ್ಯ ಶಿಕ್ಷಕ ಪರಸಪ್ಪ ಮೈಲಾರಪ್ಪ ಚಲವಾದಿ ಅಮಾನತು ಮಾಡಲಾಗಿದೆ ಕರ್ತವ್ಯ ಲೋಪ ಹಾಗೂ ಬೇಜವಾಬ್ದಾರಿ ತೋರಿದ ಆರೋಪದ ಅಡಿ ಮುಖ್ಯ ಶಿಕ್ಷಕನನ್ನು ಸಸ್ಪೆಂಡ್ ಮಾಡಲಾಗಿದೆ. ಪರಸಪ್ಪ ಮೈಲಾರಪ್ಪನನ್ನು ಅಮಾನತುಗೊಳಿಸಿ ರಾಯಚೂರು ಡಿಡಿಪಿಐ ಕೇಡಿ ಬಡಿಗೇರ್ ಆದೇಶ ಹೊರಡಿಸಿದ್ದಾರೆ ಕುರಕುಂದ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಒಂದು ಘಟನೆ ನಡೆದಿತ್ತು ಅವರ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕುರಕುಂದ ಗ್ರಾಮದ ಶಾಲೆಯಲ್ಲಿ ವಿದ್ಯುತ್ ಶಾಕ್ ನಿಂದ 5 ನೇ ತರಗತಿಯ ತನುಶ್ರೀ ಮೃತಪಟ್ಟಿದ್ದಳು. ಘಟನೆ ಸಂಭಂದ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Read More

ಬೆಂಗಳೂರು : “ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳು ಸೇರಿ ಅಂದಾಜು 2 ಸಾವಿರ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವುದಾಗಿ” ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು. ವಿಟಿಯು ಘಟಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ – 186, ಪಾಲಿಟೆಕ್ನಿಕ್‍ನಲ್ಲಿ 941, ಕಾಲೇಜು ಶಿಕ್ಷಣ ಇಲಾಖೆಯಲ್ಲಿ 826, ಯುವಿಸಿಇನಲ್ಲಿ 79 ಸೇರಿದಂತೆ ಅಂದಾಜು 2 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುವುದು. ಆ ಮೂಲಕ ಉನ್ನತ ಶಿಕ್ಷಣ ಇಲಾಖೆಯಲ್ಲಿರುವ ನೌಕರರ ಕೊರತೆಯನ್ನು ನೀಗಿಸಲಾಗುವುದು ಎಂದರು. ವಿಟಿಯು ಉತ್ತಮ ಕೆಲಸಗಳನ್ನು ಮಾಡುತ್ತಿದೆ. ಇದಕ್ಕಾಗಿ ಏಷ್ಯನ್ ಡೆವಲೆಪ್‍ಮೆಂಟ್ ಬ್ಯಾಂಕ್‍ನಿಂದಾಗಿ ಸೆಂಟರ್ ಆಪ್ ಎಕ್ಸಲೆನ್ಸ್ ಆರಂಭಿಸುತ್ತಿದ್ದೇವೆ. ಇಂದು ಪದವಿ ಪಡೆದ ವಿದ್ಯಾರ್ಥಿಗಳ ಜೀವನ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಸ್. ವಿದ್ಯಾಶಂಕರ್ ಅವರು ಮಾತನಾಡಿ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ತಂತ್ರಜ್ಞಾನ ಅಳವಡಿಕೊಳ್ಳುವಲ್ಲಿ ಮುಂದಿದೆ. ಇದಕ್ಕಾಗಿ ಹಲವು ಕಂಪನಿಗಳ ಜತೆಗೆ ಒಪ್ಪಂದ ಮಾಡಿಕೊಂಡಿದೆ.…

Read More

ಬಾಗಲಕೋಟೆ : ಪತ್ನಿಯ ಜೊತೆಗೆ ಸಲುಗೆಯಿಂದ ಇದ್ದಿದ್ದಕ್ಕೆ ಸ್ನೇಹಿತನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಅನೈತಿಕ ಸಂಬಂಧ ಎಂದು ಅನುಮಾನ ಬಂದು ಮಹಿಳೆಯ ಪತಿ ತನ್ನ ಸ್ನೇಹಿತನನ್ನು ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಖಾನಾಪುರ ಎಸ್ ಕೆ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸೋಮಶೇಖರ ಎಂದು ತಿಳಿದುಬಂದಿದೆ. ಮಹಿಳೆಯ ಪತಿ ಹಾಗು ಸೋಮಶೇಖರ್ ಸ್ನೇಹಿತರಗಿದ್ದರು. ಇಂದು ಕಂಠಪೂರ್ತಿ ಕುಡಿಸಿ ಕಲ್ಲಿನಿಂದ ತಲೆ ಮತ್ತು ಮುಖ ಜಜ್ಜಿ ಕೊಲೆ ಮಾಡಿದ್ದಾನೆ. ಖಾನಾಪುರ ಎಸ್ಕೆ ಗ್ರಾಮದ ಮಾವಿನ ತೋಟದಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಈ ಕುರಿತು ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದ ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಒಂದೇ ಹುಡುಗಿಗಾಗಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಬೆಂಗಳೂರಿನ ದೇವಸಂದ್ರದಲ್ಲಿ ಒಂದೇ ಹುಡುಗಿಗೆ ಗಲಾಟೆ ನಡೆದಿದೆ. ಈ ವೇಳೆ ಓರ್ವ ಯುವಕನಿಗೆ ಚಾಕು ಇರಿಯಲಾಗಿದೆ. ನೇಪಾಳ ಮೂಲದ ಯುವತಿಯನ್ನು ಮಾಮು ಮತ್ತು ರೋಷನ್ ಇಬ್ಬರು ಪ್ರೀತಿಸುತ್ತಿದ್ದರು. ಫೆಬ್ರವರಿ 2ರಂದು ದೇವಸಂದ್ರದಲ್ಲಿ ಮಾತನಾಡೋಕೆ ಇಬ್ಬರು ಸೇರಿದ್ದಾರೆ ಎಂಟ್ರಿ ಕೊಟ್ಟಿದ್ದಾರೆ. ಮಾತಿಗೆ ಮಾತು ಬೆಳೆದು ಜಗಳ ನಡೆದು ಜಗಳ ವಿಕೋಪಕ್ಕೆ ತಿರುಗಿ ರೋಷನ್ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ರೋಷನಗೆ ಚಾಕು ಇರಿಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ರೋಷನಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ಚಿರತೆ ಓಡಾಟ ಕಂಡು ಬಂದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ ಬೆಂಗಳೂರಿನ ಅಂಜನಾಪುರದ 7ನೇ ಬ್ಲಾಕ್ ರಸ್ತೆಯಲ್ಲಿ ಚಿರತೆ ಓಡಾಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೌದು ಬೆಂಗಳೂರಿನಲ್ಲಿ ಮನೆಯ ಮುಂದೆ ಚಿರತೆ ಬಿಂದಾಸ್ ಆಗಿ ಓಡಾಡಿರುವ ದೃಶ್ಯ ಸೆರೆಯಾಗಿದೆ. ಚಿರತೆ ಹೆಜ್ಜೆ ಹಾಕುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಚಿರತೆ ಪ್ರತ್ಯಕ್ಷವಾಗಿದೆ. ತುರಹಳ್ಳಿ ಅರಣ್ಯ ಪ್ರದೇಶದಿಂದ ಚಿರತೆ ಬಂದಿರುವಂತಹ ಶಂಕೆ ವ್ಯಕ್ತವಾಗಿದ್ದು ಜನರು ಹೊರಗಡೆ ಬರಲು ಭಯ ಭೀತರಾಗಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನ ಐತಿಹಾಸಿಕ ದೇವಸ್ಥಾನದಲ್ಲಿ ಚಿನ್ನಾಭರಣ ಕಳ್ಳತನವಾಗಿದೆ. ಬೆಂಗಳೂರಿನ ಧರ್ಮರಾಯಸ್ವಾಮಿ ದೇಗುಲದಲ್ಲಿ ಚಿನ್ನಾಭರಣ ಕಳ್ಳತನವಾಗಿದೆ. ಸುಮಾರು 100ಕ್ಕೂ ಹೆಚ್ಚು ಗ್ರಾಮಗಳನ್ನು ಕದ್ದಿರುವ ಆರೋಪ ಕೇಳಿ ಬರುತ್ತಿದೆ. ಮುಜರಾಯಿ ಇಲಾಖೆ ಅಧಿಕಾರಿಗಳ ವಿರುದ್ಧವೇ ಈ ಒಂದು ಗಂಭೀರವಾದ ಆರೋಪ ಕೇಳಿ ಬರುತ್ತಿದೆ. ಬೆಂಗಳೂರು ಕರಗ ನಡೆಯುವಂತಹ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಈ ಕಳ್ಳತನ ನಡೆದಿದೆ. ಈ ಕುರಿತು ಕೆಲವೇ ಕ್ಷಣಗಳಲ್ಲಿ ದೇಗುಲದ ಆಡಳಿತ ಮಂಡಳಿ ಸುದ್ದಿಗೋಷ್ಠಿ ಕೂಡ ನಡೆಸಲಿದೆ.ಆಡಳಿತ ಮಂಡಳಿಯಿಂದ ಕಳ್ಳತನದ ಬಗ್ಗೆ ದಾಖಲೆ ಬಿಡುಗಡೆ ಮಾಡಲಿದೆ. ಕಾಣಿಕೆ ರೂಪದಲ್ಲಿ ಬಂದಿದ್ದ ನೆಕ್ಲೆಸ್ ಬದಲಾವಣೆ ಮಾಡಿದ ಆರೋಪ ಸಹ ಕೇಳಿ ಬಂದಿದೆ. ಧರ್ಮರಾಯಸ್ವಾಮಿ ದೇಗುಲಕ್ಕೆ ಕಾಣಿಕೆ ರೂಪದಲ್ಲಿ ನೆಕ್ಲೆಸ್ ಬಂದಿತ್ತು. ಆ ಒಂದು ನೆಕ್ಲೇಸ್ ತೂಕದಲ್ಲಿ ಬದಲಾವಣೆ ಕಂಡು ಬಂದಿದೆ ಎಂದು ಇಒ ನಾಗರಾಜ್ ಅವರ ಮೇಲೆ ಆರೋಪ ಹೊರಿಸಲಾಗಿದ್ದು, ಈ ಒಂದು ಆರೋಪವನ್ನು ಇದೀಗ ಮಜರಾಯಿ ಇಲಾಖೆ ಇಒ ನಾಗರಾಜ್ ತಳ್ಳಿ ಹಾಕಿದ್ದಾರೆ. ತೂಕದಲ್ಲಿ ಬದಲಾವಣೆ ಆಗಿದೆ ಅನ್ನೋ ಆರೋಪ ಸುಳ್ಳು…

Read More

ದಾವಣಗೆರೆ : ಆಸ್ತಿಗಾಗಿ ಕಲಹ ಉಂಟಾಗಿ ತಮ್ಮನೊಬ್ಬ ಅಣ್ಣನನ್ನೇ ಬೀಕರವಾಗಿ ಕೊಲೆ ಮಾಡಿದ್ದಾನೆ. ಮಾರಕಾಸ್ತ್ರಗಳಿಂದ ಕೊಚ್ಚಿ ಸಿ.ಕೆ ನೀಲಪ್ಪ (62) ಎಂಬುವವರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಗ್ರಾಮದಲ್ಲಿ ನಡೆದಿದೆ. ಜಮೀನು ಒತ್ತುವರಿ ವಿಚಾರವಾಗಿ ಸಹೋದರರ ನಡುವೆ ಗಲಾಟೆಯಾಗಿದೆ ಜಗಳ ವಿಕೋಪಕ್ಕೆ ತಿರುಗಿ ನೀಲಪ್ಪನನ್ನ ತಮ್ಮ ಚಂದ್ರಪ್ಪ ಕೊಲೆ ಮಾಡಿದ್ದಾನೆ. ಚಂದ್ರಪ್ಪ ಹಾಗೂ ಆತನ ಕುಟುಂಬ ಸದಸ್ಯರಿಂದ ಈ ಒಂದು ಕೊಲೆ ನಡೆದಿದೆ ಎಂದು ಆರೋಪ ಕೇಳಿ ಬಂದಿದೆ. ಕೇವಲ ಚಂದ್ರಪ್ಪನನ್ನು ಮಾತ್ರ ಪೊಲೀಸರು ಆರೋಪಿ ಮಾಡಿದ್ದು, ಚಂದ್ರಪ್ಪ ಕುಟುಂಬ ಸದಸ್ಯರನ್ನೆಲ್ಲಾ ಆರೋಪಿಗಳಾಗಿ ಮಾಡುವಂತೆ ಆಗ್ರಹಿಸಲಾಗಿದೆ ಮಾಯ

Read More