Author: kannadanewsnow05

ಬೆಂಗಳೂರು : ಬೇಲೆಕೇರಿ ಬಂದರಿನಿಂದ ಸುಮಾರು 44 ಕೋಟಿ ರು. ಮೌಲ್ಯದ ಕಬ್ಬಿಣದ ಅದಿರು ಅಕ್ರಮ ರಫ್ತು ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ, ಆರೋಪಿ ಕಾಂಗ್ರೆಸ್‌ ಶಾಸಕ ಸತೀಶ್‌ ಕೃಷ್ಣ ಸೈಲ್‌ ಮತ್ತು ಅವರ ಕಂಪನಿ ವಿರುದ್ಧ ಜಾರಿ ನಿರ್ದೇಶನಾಲಯವು(ಇ.ಡಿ.) ನಗರದ ಪಿಎಂಎಲ್‌ಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸತೀಶ್‌ ಕೃಷ್ಣ ಸೈಲ್‌ ಮತ್ತು ಅವರೇ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಲ್ಲಿಕಾರ್ಜುನ ಶಿಪ್ಪಿಂಗ್‌ ಪ್ರೈವೇಟ್‌ ಲಿಮಿಡೆಟ್‌ ಕಂಪನಿಯನ್ನು ಆರೋಪಿ ಎಂದು ಪರಿಗಣಿಸಲಾಗಿದೆ. ಈ ಪ್ರಕರಣ ಸಂಬಂಧ ಕಳೆದ ಸೆಪ್ಟೆಂಬರ್‌ನಲ್ಲಿ ಇ.ಡಿ.ಅಧಿಕಾರಿಗಳು ಸತೀಶ್‌ ಕೃಷ್ಣ ಸೇಲ್‌ ಅವರನ್ನು ಬಂಧಿಸಿದ್ದರು. ಕಬ್ಬಿಣದ ಅದಿರು ಅಕ್ರಮ ರಫ್ತು ಸಂಬಂಧ 2010ರಲ್ಲಿ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಮೇರೆಗೆ ಇ.ಡಿ. ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ಬಳ್ಳಾರಿಯಿಂದ ಬೇಲೆಕೇರಿ ಬಂದರಿಗೆ ಸುಮಾರು 8 ಲಕ್ಷ ಟನ್‌ ಕಬ್ಬಿಣದ ಅದಿರು ಅಕ್ರಮವಾಗಿ ಸಾಗಿಸಿರುವುದು…

Read More

ಬೆಂಗಳೂರು : ಮತದಾರರ ಪಟ್ಟಿಯಿಂದ ಕಿತ್ತು ಹಾಕಲ್ಪಟ್ಟ ಪ್ರತಿಯೊಬ್ಬ ಮತದಾರನ ಮತವೂ ಪ್ರಜಾಪ್ರಭುತ್ವದ ಮಟ್ಟಿಗೆ ಒಬ್ಬ ನಾಗರಿಕನ ಕೊಲೆಗೆ ಸಮಾನ ಎಂದು ಬಹುಭಾಷಾ ನಟ ಕಿಶೋ‌ರ್ ಕುಮಾ‌ರ್ ಹೇಳಿದ್ದಾರೆ. ಈ ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾ‌ರ್ ಅವರ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಅವರು, ಹುಟ್ಟಿನಿಂದಲೇ ಭ್ರಷ್ಟಾಚಾರದ ಬೀಜ ಹೊತ್ತು ಬಂದ ಚುನಾವಣಾ ಆಯುಕ್ತನ ಪದವಿಯಿಂದ ಬೇರಿನ್ನೇನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ ಈ ದೇಶದಲ್ಲಿ ಪ್ರಜಾಪ್ರಭುತ್ವ ಒಂದು ಜೋಕ್. ಇಂತಹ ಭ್ರಷ್ಟಬೀಜಾಸುರ ಜೋಕರ್‌ಗಳು, ಮತದಾನ ಎಂಬ ಪ್ರಜಾಪ್ರಭುತ್ವದ ಅತ್ಯಂತ ಶಕ್ತಿಶಾಲಿ ಪ್ರಕ್ರಿಯೆಯ ಅತ್ಯುನ್ನತ ಸ್ಥಾನದಲ್ಲಿದ್ದಾಗ, ಈ ವ್ಯಕ್ತಿ ಸಂಪೂರ್ಣವಾಗಿ ಭ್ರಷ್ಟ ಎಂದು ಸಾಬೀತುಪಡಿಸಲು ಮೇಲಿನ ಈ ಒಂದು ಹೇಳಿಕೆ ಸಾಕು ಎಂದು ಉಲ್ಲೇಖಿಸಿದ್ದಾರೆ. ಈ ವ್ಯಕ್ತಿಯ ಕಾರಣದಿಂದಾಗಿ, ಸರಕಾರಿ ಹಣವನ್ನು ಬಳಸಿಕೊಂಡು ಜನರಿಗೆ ಲಂಚ ನೀಡಿ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಗಾಗಿ ಚುನಾವಣೆಯಿಂದಲೇ ನಿಷೇಧಿಸಲ್ಪಡಬೇಕಾಗಿದ್ದ ಒಕ್ಕೂಟವೊಂದು ಮತ್ತೆ ಅಧಿಕಾರಕ್ಕೆ ಬಂದಿದೆ. ‘ಮಹಾಮಾನವ್ ಹೈ ತೋ ಸಬ್ ಕುಚ್…

Read More

ಬೆಂಗಳೂರು : ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ನಂದಿನಿ ಬ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿದ್ದ ನಂದಿನಿ ಪಾರ್ಲರ್ ಮಳಿಗೆ ಮಾಲಿಕ ಹಾಗೂ ಆತನ ಮಗ ಸೇರಿ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆ ಸಮೀಪದ ಅಜಾದ್ ನಗರದ ನಿವಾಸಿ ಮಹೇಂದ್ರ, ಆತನ ಮಗ ದೀಪಕ್, ವಾಹನ ಚಾಲಕ ಮುನಿರಾಜು ಹಾಗೂ ತಮಿಳುನಾಡಿನ ಅಭಿ ಅರಸ್ ಬಂಧಿತನಾಗಿದ್ದು, ಆರೋಪಿಗಳಿಂದ 8,350 ಲೀಟರ್‌ನಕಲಿ ತುಪ್ಪ ಹಾಗೂ ನಾಲ್ಕು ವಾಹನಗಳನ್ನು ಜಪ್ತಿ ಮಾಡಲಾಗಿದೆ. ದಾಳಿ ವೇಳೆ ತಪ್ಪಿಸಿಕೊಂಡಿರುವ ನಕಲಿ ತುಪ್ಪ ತಯಾರಿಕಾ ಘಟಕದ ಮಾಲಿಕ ಶಿವಕುಮಾರ್‌ ಸೇರಿ ಇತರರ ಪತ್ತೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಚಾಮರಾಜಪೇಟೆಯಲ್ಲಿ ಆರೋಪಿ ಮಹೇಂದ್ರ ಹೊಂದಿದ್ದ ನಂದಿನಿ ಪಾರ್ಲರ್ ನಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಶುಕ್ರವಾರ ಸಿಸಿಬಿ ಹಾಗೂ ಕೆಎಂಎಫ್ ಜಾಗೃತ ದಳ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ ವೇಳೆ ಜಾಲ ಬಯಲಾಯಿತು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್…

Read More

ಕಲಬುರ್ಗಿ : ದೇಶ ಹಾಗೂ ರಾಜ್ಯದಲ್ಲಿ ಭಾರಿ ಚರ್ಚಿತವಾಗಿ ಜಿದ್ದಾ ಜಿದ್ದಿಗೆ ಕಾರಣವಾಗಿದ್ದ ಅರ್‌ಎಸ್‌ಎಸ್‌ ಪಥಸಂಚಲನವು ಹೈಕೋರ್ಟ್ ಅನುಮತಿ ಯೊಂದಿಗೆ ನ.16ರಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಚಿತ್ತಾಪುರದಲ್ಲಿ ನಡೆಯಲಿದೆ. ಇದಕ್ಕಾಗಿ ತಾಲೂಕು ಆಡಳಿತ ಹಾಗೂ 1000 ಪೊಲೀಸರು ಭಾರೀ ಭದ್ರತೆ ಕಲ್ಪಿಸಲಿದ್ದಾರೆ. ಇದಕ್ಕಾಗಿ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿದೆ. ನಗರದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ಕಣಾವಲು ಆಯೋಜಿಸಲಾಗಿದೆ. ಹೆಚ್ಚು ಕಡಿಮೆ 1 ತಿಂಗಳ ವಾದ ಪ್ರತಿವಾದ, ಚರ್ಚೆ, ಶಾಂತಿ ಸಭೆ ನಡೆದು ಕೊನೆಗೂ ಹೈ ಕೋಲ್ಟ್ ನ.16ರಂದು ಪಥ ಸಂಚಲನಕ್ಕೆ 10 ಷರತ್ತುಗಳೊಂದಿಗೆ ಒಪ್ಪಿಗೆ ಸೂಚಿಸಿತ್ತು. ಅದರಂತೆ 50 ಬ್ಯಾಂಡ್‌ ಸೆಟ್‌ನವರು ಸೇರಿ ಸ್ಥಳೀಯ 350 ಗಣ ವೇಷಧಾರಿಗಳು ಪಥ ಸಂಚಲನ ನಡೆಸಲು ಒಪ್ಪಿಗೆ ನೀಡಲಾಗಿದೆ. ಭಾನುವಾರ ಮಧ್ಯಾಹ್ನ 3ರಿಂದ ಸಂಜೆ 5.30ರೊಳಗೆ ಪಥ ಸಂಚಲನ ನಡೆಸಲು ಸೂಚಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಲಬುರಗಿ ಉಪ ಪೊಲಿಸ್‌ ಅಧೀಕ್ಷಕ ಮೇಹೇಶ ಮೇಘಣ್ಣವರ ಹಾಗೂ ಡಿವೈಎಸ್‌ಪಿ ಶಂಕರಗೌಡ ಪಾಟೀಲ್‌ ಅವರ ನೇತೃತ್ವದಲ್ಲಿ…

Read More

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಹುಟ್ಟು ಹಬ್ಬದ ದಿನದಂದೇ ಕೇಕ್ ಕಟ್ ಮಾಡುವ ನೆಪದಲ್ಲಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೋಯ್ದು ಕಾಮಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಇದೀಗ ವರದಿಯಾಗಿದೆ. ಹೌದು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಹುಟ್ಟಿದ ಹಬ್ಬದ ಹಿನ್ನೆಲೆಯಲ್ಲಿ ಕೇಕ್ ಕಟ್ ಮಾಡುವ ನೆಪದಲ್ಲಿ ಬಾಲಕಿಯನ್ನು ಕರೆದೋಯ್ದು ಅತ್ಯಾಚಾರ ಎಸಗಿದ್ದಾನೆ ಯತೀಶ್ (26) ಎಂಬಾತನಿಂದ ಈ ಒಂದು ಕೃತ್ಯ ನಡೆದಿದೆ. ನಿನ್ನೆ ಸಂಜೆ 7:30 ಸಮಯದಲ್ಲಿ ಈ ಒಂದು ಘಟನೆ ನಡೆದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಸಾಮಾನ್ಯವಾಗಿ ಜನರಿಗೆ ಈ ಸರ್ಕಾರಿ ಅಧಿಕಾರಿಗಳ ಕರ್ತವ್ಯ ಜವಾಬ್ದಾರಿ ಏನಿರುತ್ತೆ ಅನ್ನೋದು ಗೊತ್ತಿರಲ್ಲ. ಹಾಗಾಗಿ ಇದೀಗ ತಹಸೀಲ್ದಾರ್ ಕರ್ತವ್ಯ ಏನು? ಅವರು ಹೇಗೆ ಕಾರ್ಯ ನಿರ್ವಹಿಸುತ್ತಾರೆ ಎನ್ನುವುದನ್ನು ಈ ಕೆಳಗಿನ ಅಂಶಗಳ ಮೂಲಕ ತಿಳಿದುಕೊಳ್ಳಬಹುದಾಗಿದೆ. 1. ಗ್ರಾಮಗಳ ಲೆಕ್ಕಗಳ ಪರಿಶೀಲನೆ: ತಾಲ್ಲೂಕಾ ಜಮಾಬಂದಿ ಅಧಿಕಾರಿಯಾಗಿರುವ ತಹಶೀಲ್ದಾರರು, ಅವರ ತಾಲ್ಲೂಕಾ ವ್ಯಾಪ್ತಿಯ ಶೇಕಡಾ 80 ರಷ್ಟು ಗ್ರಾಮಗಳ ಲೆಕ್ಕಗಳನ್ನು ಪರೀಕ್ಷಿಸಿ, ಸರಿಯಾದ ಲೆಕ್ಕ ಹೊಂದಾಣಿಕೆಗಳನ್ನು ತಯಾರಿಸಿ, ಬಾಕಿ ಮೊತ್ತವನ್ನು ಸರಿಯಾಗಿ, ನಮೂದಿಸತಕ್ಕದ್ದು. ಹಾಗೆಯೇ, ಹುಜೂರು ಜಮಾಬಂದಿ ಅಧಿಕಾರಿಗಳಿಂದ ಅಂತಿಮ ಅನುಮೋದನೆ ಪಡೆಯಲು ಲೆಕ್ಕ ವರದಿಯನ್ನು ಸಿದ್ಧಪಡಿಸಿಟ್ಟುಕೊಂಡಿರುವುದು. 2. ಪಹಣಿ ಪತ್ರಿಕೆಗಳ ಪರಿಶೀಲನೆ: ಪಹಣಿ ಪತ್ರಿಕೆಗಳನ್ನು ತೀವ್ರವಾಗಿ ಪರಿಶೀಲಿಸಬೇಕು. ಗ್ರಾಮಲೆಕ್ಕಾಧಿಕಾರಿಗಳು ಸರಿಯಾಗಿ ಪಹಣಿ ಬರೆದಿರುವುದನ್ನು ಕಂದಾಯ ನಿರೀಕ್ಷಕರು/ತಹಶೀಲ್ದಾರರು ಪರಿಶೀಲಿಸತಕ್ಕದ್ದು. ಹಾಗೂ ವಿವಿಧ ಬೆಳೆಗಳ ಬಗ್ಗೆ ನಿರ್ವಹಿಸಿದ ಬೆಳೆ ಪತ್ರಿಕೆ ಪರಿಶೀಲಿಸುವುದು (ನಮೂನೆ ನಂ 1 (0)) ರಲ್ಲಿ ಮಾಹಿತಿ ಪಡೆಯುವದು. 3. ಆಕಾರಬಂದ ಹಾಗೂ ಪಹಣಿ ಪತ್ರಿಕೆ: ಆಕಾರ ಬಂದದಲ್ಲಿ ನಮೂದಿಸಿದ…

Read More

ತುಮಕೂರು : ರಾಜ್ಯ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗಿದೆ. ಇದಕ್ಕೆ ಪ್ರಮುಖವಾದ ಕಾರಣ ಪಂಚ ಗ್ಯಾರಂಟಿಗಳು. ಈ ಒಂದು 5 ಗ್ಯಾರಂಟಿಗಳಲ್ಲಿ ಮಹಿಳೆಯರಿಗೆ ಬಸ್ ನಲ್ಲಿ ಉಚಿತವಾಗಿ ಓಡಾಡಲು ಶಕ್ತಿ ಯೋಜನೆ, ಜಾರಿ ಮಾಡಲಾಗಿದೆ ಆದರೆ ಮಹಿಳೆಯರು ಉಚಿತ ಬಸ್ ನಲ್ಲಿ ಓಡಾಡುತ್ತಾರೆ ಆದರೆ ಕಾಂಗ್ರೆಸ್ ಗೆ ಮತ ಹಾಕಿಲ್ಲ ಎಂದು ಶಾಸಕ ಕೆ ಎನ್ ರಾಜಣ್ಣ ಮತ್ತೊಂದು ಡ್ಯಾಮೇಜ್ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಶಾಸಕ ಕೆ ಎನ್ ರಾಜಣ್ಣ ಮಾತನಾಡಿದ್ದು, ಉಚಿತ ಬಸ್ ನಲ್ಲಿ ಪ್ರಯಾಣಿಸಿದ ಮಹಿಳೆಯರು ಮತ ಹಾಕಿಲ್ಲ ಅವರು ಮತ ಹಾಕಿದ್ದರೆ, ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಸಿಗುತ್ತಿತ್ತು. ಲಕ್ಷ ಲಕ್ಷ ಸಂಬಳದವರು ಉಚಿತ ಬಸ್ ನಲ್ಲಿ ಸಂಚರಿಸಿದ್ದಾರೆ ಪುಕ್ಕಟೆ ಬಸ್ ನಲ್ಲಿ ಹೆಣ್ಣು ಮಕ್ಕಳು ಓಡಾಡುತ್ತಾರೆ. ಆದರೆ ಮತ ಹಾಕಿಲ್ಲವೆಂದು ಕೆ ಎನ್ ರಾಜಣ್ಣ ಅಸಮಾಧಾನ ಹೊರಹಾಕಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಹುಟ್ಟು ಹಬ್ಬದ ದಿನದಂದೇ ಕೇಕ್ ಕಟ್ ಮಾಡುವ ನೆಪದಲ್ಲಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೋಯ್ದು ಕಾಮಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಇದೀಗ ವರದಿಯಾಗಿದೆ. ಹೌದು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಹುಟ್ಟಿದ ಹಬ್ಬದ ಹಿನ್ನೆಲೆಯಲ್ಲಿ ಕೇಕ್ ಕಟ್ ಮಾಡುವ ನೆಪದಲ್ಲಿ ಬಾಲಕಿಯನ್ನು ಕರೆದೋಯ್ದು ಅತ್ಯಾಚಾರ ಎಸಗಿದ್ದಾನೆ ಯತೀಶ್ (26) ಎಂಬಾತನಿಂದ ಈ ಒಂದು ಕೃತ್ಯ ನಡೆದಿದೆ. ನಿನ್ನೆ ಸಂಜೆ 7:30 ಸಮಯದಲ್ಲಿ ಈ ಒಂದು ಘಟನೆ ನಡೆದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಯಾದಗಿರಿ : ಯಾದಗಿರಿಯಲ್ಲಿ ಘೋರ ಘಟನೆ ಒಂದು ಸಂಭವಿಸಿದ್ದು, KSRTC ಬಸ್ ಹರಿದು ಎರಡು ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಮಂಗಳೂರು ಗ್ರಾಮದಲ್ಲಿಂದು ಮಧ್ಯಾಹ್ನ 11:40 ರ ಸುಮಾರಿಗೆ ಸಂಭವಿಸಿದೆ. ಮೃತ ಮಗುವನ್ನು ಪರಸಪ್ಪ ಹುಣಸ್ಯಾಳ ಎಂಬವರ ಪುತ್ರಿ ಲಕ್ಷ್ಮೀ ಎಂದು ಗುರುತಿಸಲಾಗಿದೆ. ಬಸ್ ನಿಲ್ದಾಣದ ಪಕ್ಕದಲ್ಲೇ ಪರಸಪ್ಪರ ಮನೆಯಿದ್ದು, ಅಜ್ಜಿ ಮನೆಯಂಗಳದಲ್ಲಿ ಮಗುವನ್ನು ಆಟವಾಡಿಸುತ್ತಾ ಕುಳಿತಿದ್ದರು. ಈ ಮಧ್ಯೆ ಅಜ್ಜಿ ಕಣ್ತಪ್ಪಿಸಿ ಮಗು ಬಸ್ ನಿಲ್ದಾಣ ಕಡೆಗೆ ಹೋಗಿದೆ. ಅದೇ ವೇಳೆ ನಿಲ್ದಾಣಕ್ಕೆ ಬಂದು ನಿಲುಗಡೆಯಾಗುತ್ತಿತ್ತು. ಬಸ್ಸಿನ ಚಕ್ರದಡಿಗೆ ಸಿಲುಕಿ, ಸ್ಥಳದಲ್ಲೇ ಕೊನೆಯುಸಿರೆಳೆದಿದೆ ಎಂದು ತಿಳಿದು ಬಂದಿದೆ ಈ ಕುರಿತು ಕೆಂಭಾವಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬಿಹಾರ್ ಚುನಾವಣೆ ಫಲಿತಾಂಶ ರಾಜ್ಯದ ಮೇಲೆ ಬಹಳಷ್ಟು ಪರಿಣಾಮ ಬೀರಿದೆ. ನವೆಂಬರ್ ನಲ್ಲಿ ಕ್ರಾಂತಿಯಾಗಲಿದೆ, ಸಂಪುಟ ಪುನಾರಚನೆ ಆಗಲಿದೆ ಎಂದು ಭಾರಿ ಚರ್ಚೆ ನಡೆಯುತ್ತಿತ್ತು. ಆದರೆ ಯಾವಾಗ ಬಿಹಾರ ಫಲಿತಾಂಶದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲಿತೋ, ಇದೀಗ ನವೆಂಬರ್ ಕ್ರಾಂತಿ ಸಂಪುಟ ಪುನಾರಚನೆ ಸೇರಿ ಎಲ್ಲದಕ್ಕೂ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದೆ. ಇನ್ನು ಬಿಜೆಪಿ ವಿಚಾರಕ್ಕೆ ಬಂದರೆ ನಾನು ರಾಜ್ಯ ಬಿಜೆಪಿ ಅಧ್ಯಕ್ಷನಾಗಿ ಮುಂದುವರೆಯುವ ವಿಶ್ವಾಸವಿದೆ ಎಂದು ಹಾಲಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮುಂದುವರೆಯುವ ವಿಶ್ವಾಸವಿದೆ ಬಿಜೆಪಿ ಹೈಕಮಾಂಡ್ ನಿಂದ ಈ ಕುರಿತು ಸ್ಪಷ್ಟತೆ ಸಿಗುತ್ತೆ ಎನ್ನುವ ವಿಶ್ವಾಸವಿದೆ. ನನಗಂತೂ ಈ ವಿಚಾರವಾಗಿ ಸ್ಪಷ್ಟತೆ ಸಿಕ್ಕಿದೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ ಪರೋಕ್ಷವಾಗಿ ನಾನೇ ರಾಜ್ಯ ಬಿಜೆಪಿ ಅಧ್ಯಕ್ಷನಾಗಿ ಮುಂದುವರೆಯುವ ಬಗ್ಗೆ ಬಿವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಹಾರ ಫಲಿತಾಂಶ ನಮಗೆ ಆನೆ ಬಲ…

Read More